Tag: ಪಾಕ್ ಪರ ಘೋಷಣೆ

  • ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ – ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

    ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ – ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಚುನಾವಣಾ ಫಲಿತಾಂಶದ ದಿನ ಪಾಕ್ ಪರ ಘೋಷಣೆ (Pro Pakistan Slogans) ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ (Tilakwadi Police Station) ಸ್ವಯಂಪ್ರೇರಿತ ದೂರು ದಾಖಲಾಗಿದೆ.

    ಬೆಳಗಾವಿ ನಗರದ ಟಿಳಕವಾಡಿ ಠಾಣೆ ಸಿಪಿಐ ದಯಾನಂದ ಶೇಗುಣಸಿಯಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಮುಸ್ಲಿಂ ಹುಡುಗರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರಿಂದ ಘೋಷಣೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರ ಅಡಿ ಪ್ರಕರಣ ದಾಖಲಾಗಿದೆ.

    ಮೇ 13ರ ಮಧ್ಯಾಹ್ನ 2:30ರ ಸುಮಾರಿಗೆ ಆರ್‌ಪಿಡಿ ವೃತ್ತದಲ್ಲಿ ಘಟನೆ ನಡೆದಿತ್ತು. ಬೆಳಗಾವಿ ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತಎಣಿಕೆ ಪ್ರಕ್ರಿಯೆ ನಡೆದಿತ್ತು. ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ವೇಳೆ ಸಂಭ್ರಮಾಚರಣೆಯಲ್ಲಿ ಬೆಂಬಲಿಗರು ತೊಡಗಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆರೋಪಿಸಲಾಗಿದೆ. ಇದನ್ನೂ ಓದಿ: ಸರ್ಕಾರ ರಚಿಸುವ ಮೊದಲೇ ಕಾಂಗ್ರೆಸ್ಸಿನಿಂದ ಹತ್ಯೆಯ ಗ್ಯಾರಂಟಿ – ಬಿಜೆಪಿ ಕಾರ್ಯಕರ್ತನ ಕೊಲೆಗೆ ಅಶ್ವಥ್ ನಾರಾಯಣ ಆಕ್ರೋಶ

    ಪಾಕ್ ಪರ ಘೋಷಣೆ ಕೂಗಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೈರಲ್ ಆದ ವೀಡಿಯೋ ಫೇಕ್ ಎಂದು ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮಾತ್ರವಲ್ಲದೇ ಬಿಜೆಪಿಯವರು ಈ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ನನ್ನ ಶ್ರಮಕ್ಕೆ ಫಲ ಕೇಳುತ್ತಿದ್ದೇನೆ ಅಷ್ಟೇ: ಸಿಎಂ ಹುದ್ದೆಗೆ ಡಿಕೆಶಿ ಪಟ್ಟು

  • ಪಾಕ್ ಪರ ಘೋಷಣೆ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಲು ಆಗಮಿಸಿದ ನ್ಯಾಯವಾದಿಗಳ ತಂಡ

    ಪಾಕ್ ಪರ ಘೋಷಣೆ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಲು ಆಗಮಿಸಿದ ನ್ಯಾಯವಾದಿಗಳ ತಂಡ

    ಹುಬ್ಬಳ್ಳಿ: ಜಿಲ್ಲೆಯ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ಜಾಮೀನು ಅರ್ಜಿ ಸಲ್ಲಿಸಲು ಇಂದು ಬೆಂಗಳೂರಿನ ವಕೀಲರ ತಂಡ ಹುಬ್ಬಳ್ಳಿಗೆ ಆಗಮಿಸಿದೆ.

    ಜಾಮೀನು ಅರ್ಜಿ ಸಲ್ಲಿಸಲು 7 ಜನ ವಕೀಲರ ತಂಡ ಆಗಮಿಸಿದ್ದು, ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಬೆಂಗಳೂರಿನ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಮಾರ್ಚ್ 5ರೊಳಗೆ ಜಾಮೀನು ಅರ್ಜಿ ಸಲ್ಲಿಕೆ ಕುರಿತು ತಕರಾರು ಅರ್ಜಿ ಸಲ್ಲಿಸಲು ಸಹಾಯಕ ಸರ್ಕಾರಿ ಅಭಿಯೋಜಕರಿಗೆ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆ ಇಂದು ಜಾಮೀನು ಅರ್ಜಿ ಸಲ್ಲಿಸಲು ನ್ಯಾಯಾವಾದಿಗಳು ಆಗಮಿಸಿದ್ದಾರೆ. ಇಂದು ಜಾಮೀನು ಅರ್ಜಿ ಸಲ್ಲಿಕೆಯಾದರೆ ಇಂದೇ ವಿಚಾರಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

    ಬೆಂಗಳೂರಿನಿಂದ ಆಗಮಿಸಿದ ವಕೀಲರು ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಖಾಸಗಿ ಹೊಟೇಲ್‍ನಲ್ಲಿ ಉಳಿದುಕೊಂಡಿದ್ದು, ಇಂದು ಕೋರ್ಟಿಗೆ ಭೇಟಿ ನೀಡಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನ ಮಾರ್ಚ್ 7ರಂದು ಮುಕ್ತಾಯಗೊಳ್ಳಲಿದ್ದು, ಇಂದು ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

    ಬೆಂಗಳೂರಿನ ವಕೀಲರ ತಂಡ ಇಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿರುವುದರಿಂದ ಬುಧವಾರದಿಂದಲೇ ಹುಬ್ಬಳ್ಳಿ ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್‍ನ ಶ್ವಾನದಳದಿಂದ ಬುಧವಾರ ಸಂಜೆಯಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ.

  • ಪಾಕ್ ಪರ ಘೋಷಣೆ ಕೂಗಿದ ರಾಘವೇಂದ್ರ ಗಾಣಿಗ ಮೇಲೆ ದೇಶದ್ರೋಹದ ಕೇಸ್

    ಪಾಕ್ ಪರ ಘೋಷಣೆ ಕೂಗಿದ ರಾಘವೇಂದ್ರ ಗಾಣಿಗ ಮೇಲೆ ದೇಶದ್ರೋಹದ ಕೇಸ್

    ಉಡುಪಿ: ಜಿಲ್ಲೆಯ ಕುಂದಾಪುರದಲ್ಲಿ ಪಾಕ್ ಪರ ಘೋಷಣೆ ಕೂಗಿದ ರಾಘವೇಂದ್ರ ಗಾಣಿಗನ ಮೇಲೆ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

    ಕುಂದಾಪುರ ಮಿನಿ ವಿಧಾನಸೌಧದೊಳಗೆ ಇಂದು ಬೆಳಗ್ಗೆ ರಾಘವೇಂದ್ರ ಪಾಕ್ ಪರ ಘೋಷಣೆ ಕೂಗಿದ್ದನು. ಈ ಸಂಬಂಧ ರಾಘವೇಂದ್ರನ ಮೇಲೆ ಕುಂದಾಪುರ ತಹಶಿಲ್ದಾರರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ರಾಘವೇಂದ್ರ ಗಾಣಿಗನನ್ನು ದಸ್ತಗಿರಿ ಮಾಡಿದ್ದರು.

    ಈ ಕುರಿತು ಉಡುಪಿ ಪೊಲೀಸ್ ಉಪಾಧ್ಯಕ್ಷ ಕುಮಾರಚಂದ್ರ ಮಾತನಾಡಿ, ಆತ ಕುಂದಾಪುರದ ಕೋಡಿ ನಿವಾಸಿ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ರಾಘವೇಂದ್ರ ಮೇಲೆ ದೇಶದ್ರೋಹದ ಪ್ರಕರಣ ಹಾಕಲಾಗಿದೆ. ಘಟನೆ ಬಗ್ಗೆ ಇನ್ನೂ ತನಿಖೆ ಮಾಡಬೇಕು. ರಾಘವೇಂದ್ರನ ಮಾತಿನಲ್ಲಿ ಸ್ಥಿರತೆ ಇಲ್ಲ. ಆತನ ಹಿನ್ನೆಲೆ ಬಗ್ಗೆ ಪರಾಮರ್ಶೆ ನಡೆಸುತ್ತೇವೆ. ಆತನ ಮಾನಸಿಕ ಸ್ಥಿತಿ ಬಗ್ಗೆ ನಾವೇನು ಹೇಳಲ್ಲ. ವೈದ್ಯಕೀಯ ವರದಿ ಬಂದ ಮೇಲೆ ಮಾಹಿತಿ ನೀಡುತ್ತೇವೆ ಎಂದರು.

    ಇಂದು ರಾಘವೇಂದ್ರ ಪಾಕ್ ಪರ ಘೋಷಣೆ ಕೂಗಿದ ಕೂಡಲೇ ಪೊಲೀಸ್ ಠಾಣೆಗೆ ಸ್ಥಳೀಯರು ಫೋನ್ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಕುಂದಾಪುರ ಎಸ್‍ಐ ಹರೀಶ್ ವ್ಯಕ್ತಿಯನ್ನು ವಶಕ್ಕೆ ಪಡಕೊಂಡಿದ್ದಾರೆ. ಪೊಲೀಸರು ದಸ್ತಗಿರಿ ಮಾಡುವಾಗಲೂ ವ್ಯಕ್ತಿ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾನೆ. ರಾಘವೇಂದ್ರ ಗಾಣಿಗ ಕುಂದಾಪುರದ ಖಾಸಗಿ ಶ್ರೀಮಾತಾ ಆಸ್ಪತ್ರೆಗೆ ತನ್ನ ತಾಯಿಯ ಜೊತೆ ಬಂದಿದ್ದ.

    ಕಳೆದ ಹತ್ತು ವರ್ಷದಿಂದ ಮಾನಸಿಕ ತೊಂದರೆಯಿಂದ ಬಳಲುತ್ತಿರುವ ರಾಘವೇಂದ್ರ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಂದಾಪುರದ ಖಾಸಗಿ ಸಂಸ್ಥೆಯಲ್ಲಿ ಶಿಕ್ಷಕನಾಗಿದ್ದ ರಾಘವೇಂದ್ರ ಎಂಟು ವರ್ಷಗಳ ಹಿಂದೆ ಮಾನಸಿಕ ಸಮಸ್ಯೆಯಿಂದ ಕೆಲಸದಿಂದ ವಜಾಗೊಂಡಿದ್ದ. ಪೊಲೀಸರು ರಾಘವೇಂದ್ರನನ್ನು ದಸ್ತಗಿರಿ ಮಾಡುತ್ತಿದ್ದಂತೆ ಆಸ್ಪತ್ರೆಯಿಂದ ತಾಯಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ತಾನು ತನ್ನ ಮಗನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದೆ. ಆತನಿಗೆ ಮಾನಸಿಕ ಸಮಸ್ಯೆ ಇದೆ. ಸಾಲಿನಲ್ಲಿ ನಿಂತಿದ್ದಾಗ ತಪ್ಪಿಸಿಕೊಂಡು ಓಡಿದ್ದಾನೆ ಎಂದು ಪೊಲೀಸರಿಗೆ ಹೇಳಿದ್ದಾರೆ.

    ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ಆತನ ಮಾನಸಿಕ ಸ್ಥಿತಿಯ ಬಗ್ಗೆ ಅವಲೋಕನ ಮಾಡುತ್ತಿದ್ದಾರೆ. ಮಾನಸಿಕ ತಜ್ಞರನ್ನು ಪೊಲೀಸರು ಸಂಪರ್ಕ ಮಾಡಿದ್ದು ರಾಘವೇಂದ್ರನನ್ನು ಚಿಕಿತ್ಸೆಗೆ ಒಳಪಡಿಸುವ ಸಾಧ್ಯತೆ ಇದೆ. ಪೊಲೀಸ್ ವಶದಲ್ಲಿರುವ ರಾಘವೇಂದ್ರ ನಿರಂತರವಾಗಿ ಮನೆಯಲ್ಲಿ ಸುದ್ದಿವಾಹಿನಿಗಳನ್ನು ನೋಡುತ್ತಿದ್ದ ಎಂದು ತಾಯಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಸುದ್ದಿ ವಾಹಿನಿಗಳಲ್ಲಿ ಸಿಎಎ ಹೋರಾಟ, ಅಮೂಲ್ಯಾ ರಂಪಾಟ, ಆರ್ದ್ರಾ ಚೀರಾಟವನ್ನು ಕಂಡ ರಾಘವೇಂದ್ರ ಅದೇ ಮನೋಸ್ಥಿತಿಗೆ ಹೊರಳಿದ್ದ ಎನ್ನಲಾಗಿದೆ.

  • ಅಮೂಲ್ಯ, ಆರ್ದ್ರಾ ವಾಟ್ಸಪ್ ಗ್ರೂಪ್‍ನಲ್ಲಿ ಗೌಪ್ಯ ಚರ್ಚೆ – ಎಸ್‍ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

    ಅಮೂಲ್ಯ, ಆರ್ದ್ರಾ ವಾಟ್ಸಪ್ ಗ್ರೂಪ್‍ನಲ್ಲಿ ಗೌಪ್ಯ ಚರ್ಚೆ – ಎಸ್‍ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

    ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‍ಐಟಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

    ಪಾಕ್ ಪ್ರೇಮಿ ಅಮೂಲ್ಯ ಸೇರಿದಂತೆ ಕೆಲ ವಿದ್ಯಾರ್ಥಿಗಳು ಬೆಂಗಳೂರು ಸ್ಟೂಡೆಂಟ್ ಫೆಡರೇಶನ್(ಬಿಎಸ್‍ಎಫ್) ಹೆಸರಿನಲ್ಲಿ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದರು. ಸಿಎಎ, ಎನ್‌ಆರ್‌ಸಿ ಸೇರಿದಂತೆ ಕೆಲ ಹಿಂದೂ ವಿರೋಧಿ ವಿಚಾರಗಳಿಗೆ ಹೇಗೆ ಪ್ರತಿಭಟನೆಯ ರೂಪುರೇಷಗಳು ಇರಬೇಕು ಅನ್ನೋದನ್ನ ಈ ಗ್ರೂಪ್‍ನಲ್ಲಿ ಚರ್ಚೆ ಮಾಡುತ್ತಿದ್ದರು. ನೂರಾರು ಎಡಪಂಥೀಯ ವ್ಯಕ್ತಿಗಳು, ವಿದ್ಯಾರ್ಥಿಗಳು ಈ ಗ್ರೂಪ್‍ನಲ್ಲಿದ್ದರು.

    ಈ ಗ್ರೂಪ್ ಹೊರತುಪಡಿಸಿ ಅಮೂಲ್ಯ, ಆರ್ದ್ರಾ ಸೇರಿದಂತೆ ಕೆಲವೇ ಸಮಾನ ಮನಸ್ಕರು ಸೇರಿಕೊಂಡು ಯಂಗ್ ಇಂಡಿಯಾ ಅನ್ನೋ ಮತ್ತೊಂದು ವಾಟ್ಸಪ್ ಗ್ರೂಪ್ ಮಾಡ್ಕೊಂಡಿದ್ದರು. ಯಂಗ್ ಇಂಡಿಯಾ ಗ್ರೂಪ್‍ನಲ್ಲಿ ಆಯ್ದ ಕೆಲವರಿಗಷ್ಟೇ ಅವಕಾಶವಿದ್ದು, ಪ್ರತಿಭಟನೆಗಳು, ಸಭೆ ಸಮಾರಂಭಗಳ ಬಗ್ಗೆ ಗೌಪ್ಯ ಮಾಹಿತಿಗಳನ್ನು ಇದರಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

    ಸದ್ಯ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ತಂಡ ಆರೋಪಿಗಳ ಬಳಿ ಸೋಷಿಯಲ್ ಮೀಡಿಯಾದ ಪೋಸ್ಟ್ ಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಯಂಗ್ ಇಂಡಿಯಾ ವಾಟ್ಸಪ್ ಗ್ರೂಪ್‍ನಲ್ಲಿ ಯಾರೆಲ್ಲಾ ಸದಸ್ಯರು ಇದ್ದಾರೋ, ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ತಿರ್ಮಾನ ಮಾಡಿದ್ದಾರೆ.

    ಅಷ್ಟೇ ಅಲ್ಲದೇ ವಿಚಾರಣೆ ವೇಳೆ ಕಾರ್ಪೋರೇಟರ್ ಇಮ್ರಾನ್ ಪಾಷ ಆಯೋಜನೆ ಮಾಡಿದ್ದ ಎರಡು ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗವಹಿಸರೋದಾಗಿ ಅಮೂಲ್ಯ ಹೇಳಿಕೊಂಡಿದ್ದಾಳೆ. ಸದ್ಯ ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದ್ದು, ಹಂತ ಹಂತವಾಗಿ ವಿವಿಧ ಪೊಲೀಸರ ತಂಡಗಳು ಅಮೂಲ್ಯ, ಆರ್ದ್ರಾಳನ್ನು ವಿಚಾರಣೆ ನಡೆಸಲಿದ್ದಾರೆ.

  • ಪಾಕ್ ಪರ ಘೋಷಣೆ – ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಐದು ಪ್ರಕರಣ ದಾಖಲು

    ಪಾಕ್ ಪರ ಘೋಷಣೆ – ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಐದು ಪ್ರಕರಣ ದಾಖಲು

    ಹುಬ್ಬಳ್ಳಿ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಜೈಕಾರ ಹಾಕಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಚಟುವಟಿಕೆ ಹಿನ್ನೆಲೆ ಐದು ಪ್ರಕರಣ ದಾಖಲಿಸಲಾಗಿದೆ.

    ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ಅನಾಮಿಯವರು ನೀಡಿದ ದೂರಿನ ಆಧಾರದ ಮೇಲೆ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಅಮಾನತು

    ಐಪಿಸಿ ಸಿಕ್ಷನ್ ಸಿಆರ್ ನಂ. 10/202ಯು/ಎಸ್124ಎ, 153ಎ(ಬಿ), 153ಬಿ(ಸಿ), 505(2), ಆರ್/ಡಬ್ಲು34ರ ಅಡಿಯಲ್ಲಿ ದೇಶದ್ರೋಹ, ಪ್ರಾದೇಶಿಕ ಗುಂಪುಗಳ ನಡುವೇ ದ್ವೇಷ ಭಾವನೆ ಹೆಚ್ಚಿಸುವುದು ಸೇರಿದಂತೆ ಐದು ಪ್ರಕರಣವನ್ನು ಯುವಕರ ವಿರುದ್ಧ ದಾಖಲಿಸಲಾಗಿದೆ. ಇದನ್ನೂ ಓದಿ: ಕೆಎಲ್‍ಇ ಕಾಲೇಜು ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ

    ಏನಿದು ಘಟನೆ?
    ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂವರು ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಶನಿವಾರ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ, ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

    ಬಂಧಿತ ಅಮೀರ್ ಸಿವಿಲ್ ಇಂಜಿನಿಯರಿಂಗ್‍ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿದೆ.

    ಅತ್ತ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಂತೆ, ಇತ್ತ ಕಾಲೇಜು ಆಡಳಿತ ಮಂಡಳಿ ಮೂವರು ಕಾಶ್ಮೀರ ಮೂಲದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಿತ್ತು.