ಶ್ರೀಶೈಲ ಯಾತ್ರಿಗಳು ಹೋಗುವ ರಸ್ತೆಯುದ್ದಕ್ಕೂ ಭಕ್ತರು ಉಚಿತ ಊಟ, ಉಪಹಾರ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ.
ಬೆಳಿಗ್ಗೆಯಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತ ಗಣಕ್ಕೆ ಜನರು ಹಾಲು, ಹಣ್ಣು, ಜ್ಯೂಸ್, ಸಿಹಿ ತಿಸಿಸು, ಮಜ್ಜಿಗೆ ನೀರು, ಕಲ್ಲಂಗಡಿ, ಈ ರೀತಿಯ ವ್ಯವಸ್ಥೆ ಕಲ್ಪಿಸಿ, ಶ್ರೀಶೈಲ ಮಲ್ಲಿಕಾರ್ಜುನನಿಗೆ ತಮ್ಮ ಭಕ್ತಿ ಪ್ರದರ್ಶಿಸುತ್ತಿದ್ದಾರೆ.
ಮಡಿಕೇರಿ: ಕೊಡವರ ಸಂಸ್ಕೃತಿ (Kodava Culture) ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆ.7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಕುಟ್ಟದಿಂದ ಮಡಿಕೇರಿವರೆಗೆ (Madikeri) ಆರಂಭವಾಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆ.7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳು ರಜೆ (Holiday) ಘೋಷಣೆ ಮಾಡಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ, ಟಿ. ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ, ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ, ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ, ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: Delhi Exit Poll | 27 ವರ್ಷದ ಬಳಿಕ ಬಿಜೆಪಿಗೆ ಅಧಿಕಾರ
ಕೊಡವ ಆಡಳಿತ ಮಂಡಳಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಗಳ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್ ಮ್ಯಾಚ್
ಬೆಂಗಳೂರು: ಮುಡಾ ಹಗರಣದ (MUDA Scam) ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ. ಪ್ರತಿಯೊಂದು ಕಡೆ 8 ರಿಂದ 10 ಸಾವಿರ ಜನ ಸೇರುತ್ತಾರೆಂಬ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆ ಅವಕಾಶ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜೀನಾಮೆ ಅವರಾಗಿಯೇ ಕೊಟ್ಟರೆ ಅವರಿಗೆ ಅದು ಶೋಭೆ ತರುತ್ತದೆ, ಪಕ್ಷಕ್ಕೆ ಗೌರವ ಸಿಗುತ್ತದೆ. ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು. ಇದಕ್ಕೆ ಅವಕಾಶ ಕೊಡದೇ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಸಲಹೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದ ಪಿಎಸ್‌ಐ ಸಾವು: ಇದು ಲೂಟಿ ಸರ್ಕಾರ ಎಂದ ಅಶೋಕ್
ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಗತ್ತಿಗೆ ವಾಸ್ತವ ಸ್ಥಿತಿ ತಿಳಿದಿದೆ. ಹೀಗಾಗಿ ಅವರು ಯಾವುದೇ ಆರೋಪಗಳಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ. ರಾಜ್ಯಪಾಲ ಕಚೇರಿ ದುರ್ಬಳಕೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ವಾಸ್ತವಿಕ ಸತ್ಯ ಸಂಗತಿ ದೇಶದ ಜನರಿಗೆ ಗೊತ್ತಿದೆ. ಈ ರೀತಿಯ ಆರೋಪ ಮಾಡುವುದರಿಂದ ಅವರು ಆರೋಪದಿಂದ ಮುಕ್ತ ಆಗಲು ಆಗುವುದಿಲ್ಲ. ಈ ರೀತಿಯ ಮಾತುಗಳಿಂದ ಅವರು ಬಚಾವ್ ಆಗಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ
ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಷರತ್ತು ಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ (Preetham Gowda) ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಹೆಚ್‌ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್ (JDS) ಬೆಂಬಲ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ (JP Nadda) ಅವರು ದೂರವಾಣಿ ಮೂಲಕ ಹೆಚ್‌ಡಿಕೆ ಜೊತೆ ಮಾತನಾಡಿ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರೀತಂಗೌಡ ಪಾದಯಾತ್ರೆಗೆ ಬಾರದೇ ಇದ್ದರೆ ನಾನು ಭಾಗಿಯಾಗುತ್ತೇನೆ ಎಂದು ಷರತ್ತು ವಿಧಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ
ಮಂಗಳವಾರ ಹೆಚ್‌ಡಿಕೆ ಹೇಳಿದ್ದೇನು?
ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ದೇವೇಗೌಡರ (Devegowda) ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.
ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವ್‌ಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
– ಯಾರ್ರೀ ಪ್ರೀತಂ ಗೌಡ? – ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಪಾದಯಾತ್ರೆಗೆ ಬೆಂಬಲವಿಲ್ಲ
ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು (Preetham Gowda) ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಅವರು, ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.
ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ ಇದು ಸೂಕ್ತ ಸಂದರ್ಭವಲ್ಲ ಎನ್ನುವ ಕಾರಣಕ್ಕೆ ನಾವು ಈ ಪದಯತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ ಮಾಡುವುದು ಮುಖ್ಯ. ಕೇವಲ ರಾಜಕೀಯವೇ ನಮಗೆ ಇಲ್ಲಿ ಮುಖ್ಯವಲ್ಲ. ಹೀಗಾಗಿ ನಾವು ಪಾದಯಾತ್ರೆಗೆ ನೈತಿಕ ಬೆಂಬಲವನ್ನೂ ನೀಡುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಪಕ್ಷಕ್ಕೆ ಶಕ್ತಿ ಇದೆ. ನಮ್ಮನ್ನೇ ಪರಿಗಣಿಸಿದಿದ್ದರೆ ಹೇಗೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಈ ವಿಜಯದಲ್ಲಿ ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಪಾದಯಾತ್ರೆಗೆ ಬೆಂಬಲ ಕೊಡಬೇಕು ಎನ್ನುವುದು ಪ್ರಶ್ನೆ. ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವುಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ನಮ್ಮ ನಾಯಕರು ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲರ ಅಭಿಪ್ರಾಯವೂ ಪಾದಯಾತ್ರೆ ಸದ್ಯಕ್ಕೆ ಬೇಡ, ಸ್ವಲ್ಪ ದಿನದ ನಂತರ ಮಾಡೋಣ ಎನ್ನುವುದೇ ಆಗಿದೆ. ಕೊಡಗು ಜಿಲ್ಲೆಯ ಪಕ್ಕದಲ್ಲಿಯೇ ಇರುವ ಕೇರಳದ ವೈನಾಡಿನಲ್ಲಿ ಭಾರೀ ಭೂ ಕುಸಿತ ಉಂಟಾಗಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಕಣ್ಮರೆಯಾಗಿದ್ದಾರೆ. ನಮ್ಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೆಡ್ ಅರ್ಲಟ್ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ನೆರೆ, ಭೂ ಕುಸಿತ ನಿರಂತರವಾಗಿದೆ. ಹೀಗಾಗಿ ಇಂಥ ಪರಿಸ್ಥಿತಿಯಲ್ಲಿ ಪಾದಯಾತ್ರೆ ಬೇಡ ಎನ್ನುವುದು ನಮ್ಮ ಪಕ್ಷದ ಅಭಿಪ್ರಾಯವಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಬಿಡದಿಯಿಂದ ಮೈಸೂರುವರೆಗೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಭತ್ತದ ನಾಟಿ ಶುರುವಾಗಿದೆ. ಬಿಜೆಪಿ ನಾಯಕರು ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ಎಲ್ಲವನ್ನೂ ಅಂತಿಮಗೊಳಿಸಿದ ನಂತರ ನಮಗೂ ಮಾಹಿತಿ ಇರಲಿ ಎಂದು ಸಭೆಗೆ ಕರೆದು ಹೇಳಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ. ಜನಸಮಾನ್ಯರ ಭಾವನೆ ಮುಖ್ಯ. ಇದಕ್ಕೆ ನಮ್ಮ ನೈತಿಕ ಬೆಂಬಲವೂ ಇಲ್ಲ ಎಂದು ಅವರು ಹೇಳಿದರು.
ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸೋಮವಾರ ನಡೆದ ಮೈಸೂರು (Mysuru) ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‌ಡಿಎ (NDA) ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿವರಿಸಿದರು. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ
ವಿವಿಧ ಹಗರಣಗಳ ಕುರಿತು ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು. ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲಾ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ
ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ (ಶನಿವಾರ) ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.
ಮೈಸೂರಿನಲ್ಲಿ (Mysuru) ಪಾದಯಾತ್ರೆ ಸಮಾರೋಪಕ್ಕೆ ಜೆ.ಪಿ ನಡ್ಡಾ ಅವರನ್ನು ಕರೆಸಲು ದೋಸ್ತಿ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಪಾದಯಾತ್ರೆಯ ಮಾರ್ಗ ಮಧ್ಯೆ ಕೆಲವು ಕಡೆ ಜನ ಸೇರಿಸಿ ಮೈತ್ರಿ ಪಕ್ಷಗಳು ಸಮಾವೇಶ ನಡೆಸಲಿವೆ. ಶನಿವಾರದಿಂದ ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ದಿನಕ್ಕೆ 20 ಕಿಮೀ ವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಸಭೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: Women’s Asia Cup 2024: ಲಂಕಾ ಚಾಂಪಿಯನ್ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು
ಸಭೆ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮಾಧ್ಯಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇದೆ. ಮುಡಾ, ವಾಲ್ಮೀಕಿ ನಿಗಮಗಳಲ್ಲಿ ಹಗರಣ, ಎಸ್ಸಿ-ಎಸ್ಟಿ ಹಣ ದುರ್ಬಳಕೆ ವಿಚಾರ ಇಟ್ಟುಕೊಂಡು ಪಾದಯಾತ್ರೆ ಬಗ್ಗೆ ಚರ್ಚೆ ಮಾಡಿದ್ದೇವೆ. ಮುಂದಿನ ಶನಿವಾರ ನಮ್ಮ ಪಾದಯಾತ್ರೆ ಆರಂಭವಾಗಲಿದೆ. ಆಗಸ್ಟ್ 3ರ ಶನಿವಾರದಿಂದ 7 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಆಗಸ್ಟ್ 10ರಂದು ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ಇರಲಿದೆ. ಅಂದು ರಾಷ್ಟ್ರೀಯ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ದಿಢೀರ್ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ
ನಟ ದುನಿಯಾ ವಿಜಯ್ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದಾರೆ. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದಾರೆ. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದಾರೆ ವಿಜಯ್.
ಸದ್ಯ ಭೀಮ ಸಿನಿಮಾದ ಶೂಟಿಂಗ್ ಮುಗಿಸಿರುವ ವಿಜಯ್, ಹೊಸ ಸಿನಿಮಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದ ಕೆಲಸದಲ್ಲೂ ಅವರು ತೊಡಗಿಸಿಕೊಂಡಿದ್ದಾರೆ. ಈ ಹೊಸ ಚಿತ್ರಕ್ಕೆ ಮೊನ್ನೆಯಷ್ಟೇ ರಾಜ್ ಬಿ ಶೆಟ್ರಿ (Raj B Shetty) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಲಿದ್ದಾರೆ. ಆ ಪಾತ್ರ ಏನು ಅನ್ನುವುದನ್ನು ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಲಿದೆ.
ದುನಿಯಾ ವಿಜಯ್ ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಬೆಂಗಳೂರಿನ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ಮುಹೂರ್ತವಾಗಿದೆ (Muhurta). ಇನ್ನೂ ಚಿತ್ರಕ್ಕೆ ಹೆಸರು ಇಟ್ಟಿಲ್ಲವಾದರೂ, ಈ ಕಾಂಬಿನೇಷನ್ ನ 2ನೇ ಚಿತ್ರ ಇದಾಗಿದೆ. ಹಾಗಾಗಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ದುನಿಯಾ ವಿಜಯ್ (Duniya Vijay) ಪುತ್ರಿ ಮೋನಿಕಾ (Monica Vijay) ಈ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮೋನಿಕಾ ಚಿತ್ರೋದ್ಯಮಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡಿತ್ತು. ಇದೀಗ ಅಂತೆ ಕಂತೆ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಅಪ್ಪನ ನಟನೆಯ 29ನೇ ಸಿನಿಮಾದಲ್ಲಿ ಮಗಳು ಮೋನಿಕಾ ಕೂಡ ನಟಿಸಲಿದ್ದಾರೆ.
ಈ ಸಿನಿಮಾವನ್ನು ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿದ್ದರೆ, ಜಡೇಶ್ ಕೆ.ಹಂಪಿ ಅವರ ನಿರ್ದೇಶನವಿದೆ. ಈ ಹಿಂದೆ ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಎಂಬ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟಿಸಿದ್ದರು. ಈಗ ಹಲವು ವರ್ಷಗಳ ನಂತರ ಈ ಜೋಡಿ ಒಂದಾಗುತ್ತಿದೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಧಾರವಾಡ: ಶಬರಿಮಲೆಗೆ(Sabarimala) ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ ಮೂವರು ಭಕ್ತರ(Devotees) ಜೊತೆ ಒಂದು ಶ್ವಾನ ಕೂಡಾ ಸೇರಿಕೊಂಡಿದೆ.
ನವೆಂಬರ್ 20 ರಂದು ಗ್ರಾಮದಿಂದ ಹೊರಟ ಮಂಜು ಕಮ್ಮಾರ, ರವಿ ಹಾಗೂ ನಾಗನಗೌಡ ಅವರಿಗೆ ಶ್ವಾನ ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಿಕ್ಕಿದೆ. ಈ ಮೂವರು ಊಟಕ್ಕೆ ಕುಳಿತಾಗ ಶ್ವಾನಕ್ಕೂ ಆಹಾರ ಹಾಕಿದ್ದಾರೆ. ನಂತರ ಇವರು ಅಲ್ಲಿಂದ ಪಾದಯಾತ್ರೆ(Padayatra) ಮುಂದುವರಿಸಿದಾಗ ಅವರ ಹಿಂದೆಯೇ ಶ್ವಾನ ಹೆಜ್ಜೆ ಹಾಕಿದೆ. ಇದನ್ನೂ ಓದಿ: ತನ್ನ ಕೂದಲನ್ನೇ ತಿಂದ ಬಾಲಕಿ – ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ದಂಗಾದ ವೈದ್ಯರು
ಮೂವರು ಭಕ್ತರು ಉತ್ತರ ಕನ್ನಡ ಜಿಲ್ಲೆ ದಾಟಿ ಮುಂದಕ್ಕೆ ಹೊರಟಿದ್ದಾರೆ. ಶ್ವಾನವನ್ನು ವಾಪಸ್ ಒಡಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು ನಾಯಿ ಇವರ ಜೊತೆ ಹೆಜ್ಜೆ ಹಾಕುವುದನ್ನು ಮಾತ್ರ ಬಿಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಇವರೆಲ್ಲರೂ ಶ್ವಾನವನ್ನು ಶಬರಿಮಲೆಯವರೆಗೆ ಕರೆದುಕೊಂಡು ಹೋಗುವ ನಿರ್ಧಾರ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 500 ಕಿಲೋ ಮೀಟರ್ ಪಾದಯಾತ್ರೆ ಪೂರ್ಣಗೊಂಡಿದ್ದು, ಕರ್ನಾಟಕ ದಾಟಿದ ಮೇಲೆ ಕೇರಳಕ್ಕೆ ಹೋಗಬೇಕಿದೆ. ಅಲ್ಲಿಯವರೆಗೆ ಹೋಗಲು ಇನ್ನು 500 ಕಿಲೋ ಮೀಟರ್ ಯಾತ್ರೆ ಮಾಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಕಾರವಾರ: ಲಕ್ಷಾಂತರ ಭಕ್ತರು ಮಾಲಾಧಾರಿಯಾಗಿ ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಆದರೆ ಬೀದಿ ಶ್ವಾನವೊಂದು (Dog) ಶಬರಿಮಲೆಯ (Sabarimala) ಅಯ್ಯಪ್ಪನ ದರ್ಶನಕ್ಕೆ 200 ಕಿ.ಮೀ ದೂರದಿಂದ ಗುರುಸ್ವಾಮಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಅಯ್ಯಪ್ಪನ (Ayyappa Swamy Temple) ದರ್ಶನಕ್ಕೆ ಹೊರಟಿದೆ.
ಹೌದು.. ಧಾರವಾಡ (Dharwad) ಜಿಲ್ಲೆಯ ಮಂಗಳಗಟ್ಟಿ ಗ್ರಾಮದಲ್ಲಿ ಇದ್ದ ಈ ಶ್ವಾನ ಶಬರಿಮಲೆಗೆ ಪಾದಯಾತ್ರೆ ಮೂಲಕ ತೆರಳುತ್ತಿದೆ. ಆದರೆ ಅಚ್ಚರಿಯ ವಿಷಯವೆಂದರೆ ಈ ಶ್ವಾನವನ್ನು ಯಾರೂ ಸಾಕಿಲ್ಲ. ಬೀದಿಯಲ್ಲಿ ಬಿದ್ದ ಆಹಾರ ಸೇವಿಸಿಕೊಂಡು ಕಂಡಲ್ಲಿ ಇರುವ ಈ ನಾಯಿ ಇದೀಗ ಶಬರಿಮಲೆಗೆ ಹೊರಟು ನಿಂತಿದೆ.
ಇದೇ ಗ್ರಾಮದ ಗುರುಸ್ವಾಮಿ, ನಾಗನಗೌಡ ಪಾಟೀಲ್, ಮಂಜುಸ್ವಾಮಿ ಎಂಬುವವರು ತಮ್ಮ ಮೂರು ಜನರ ತಂಡದೊಂದಿಗೆ ಮಾಲೆ ಧರಿಸಿ ಕೇರಳದ ಶಬರಿಮಲೆಗೆ ಪಾದಯಾತ್ರೆ ಮೂಲಕ ದರ್ಶನಕ್ಕೆ ಹೊರಟಿದ್ದರು. ಇವರೊಂದಿಗೆ ಈ ಬೀದಿ ನಾಯಿಯು ಸಹ ಹಿಂಬಾಲಿಸಿದೆ. ಒಂದಷ್ಟು ದೂರ ಬಂದು ಮರಳುತ್ತೆ ಎಂದು ಅಂದುಕೊಂಡಿದ್ದ ಗುರುಸ್ವಾಮಿಗಳು ತಮ್ಮಷ್ಟಕ್ಕೆ ಪಾದಯಾತ್ರೆ ಪ್ರಾರಂಭಿಸಿದರು. ಆದರೆ ಇವರನ್ನೇ ಹಿಂಬಾಲಿಸಿದ ಈ ಶ್ವಾನ ನೂರಾರು ಕಿ.ಮೀ ಕ್ರಮಿಸಿದರೂ ಇವರ ಸಂಘ ಬಿಡಲಿಲ್ಲ. ದೇವರ ಪೂಜೆ, ವಿಶ್ರಾಂತಿ ಹೀಗೆ ಎಲ್ಲೆಂದರಲ್ಲಿ ಸಾಥ್ ನೀಡಿದ ಈ ಶ್ವಾನ ಇವರಿಗೆ ತೊಂದರೆಯಾಗದಂತೆ ರಕ್ಷಣೆ ಮಾಡುತ್ತಾ ಇವರೊಂದಿಗೆ ಸಾಗಿದೆ. ಇದನ್ನೂ ಓದಿ:ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ಮಾಯ
ಇನ್ನು ಇವರೊಂದಿಗೆ ಹಿಂಬಾಲಿಸಿ ಇವರ ರಕ್ಷಣೆ ಮಾಡುತ್ತಾ ಬರುತ್ತಿದ್ದ ಈ ಶ್ವಾನದ ಬಗ್ಗೆ ಇವರಿಗೂ ಪ್ರೀತಿ ಹುಟ್ಟಿದೆ. ತಾವು ಪಡೆಯುವ ಪ್ರಸಾದವನ್ನು ಇದಕ್ಕೂ ನೀಡಿ ಅಯ್ಯಪ್ಪನ ಮಾಲೆ ಹಾಕಿ ಶಬರಿಮಲೆಗೆ ಈ ಶ್ವಾನದೊಂದಿಗೆ ಪ್ರಯಾಣ ಮುಂದುವರಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಾವರದ ಮೂಲಕ ಶಬರಿಮಲೆಗೆ ಹೊರಟಿದ್ದಾರೆ. ಈ ಶ್ವಾನ ತಮ್ಮೊಂದಿಗೆ ಪ್ರಯಾಣ ಬೆಳಸಿದಾಗಿನಿಂದ ನಮಗೆ ತೊಂದರೆಗಳು ಬರಲಿಲ್ಲ, ಎಲ್ಲವೂ ಒಳಿತಾಗಿದೆ. ಈ ಶ್ವಾನಕ್ಕೆ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಮಾಡಿಸಿ ಅಲ್ಲಿಂದ ವಾಹನದ ಮೂಲಕ ಮರಳಿ ಧಾರವಾಡಕ್ಕೆ ಬಿಡುತ್ತೇವೆ ಎಂದು ಶ್ವಾನದ ಜೊತೆಯಾದ ಗುರುಸ್ವಾಮಿನಾಗನಗೌಡ ಹಾಗೂ ಮಂಜುಸ್ವಾಮಿ ತಿಳಿಸಿದರು. ಇದನ್ನೂ ಓದಿ:ಸಿದ್ದು ಆಪ್ತರಿಂದ ಸಿದ್ದರಾಮಯ್ಯ ಮುಂದಿನ ಸಿಎಂ ಜಪ
Live Tv
[brid partner=56869869 player=32851 video=960834 autoplay=true]