Tag: ಪಾರಿವಾಳ

  • ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

    ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

    ನವದೆಹಲಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಭದ್ರತಾ ಪಡೆಗಳು ಸೆರೆಹಿಡಿದಿದ್ದಾರೆ.

    ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಚೀಟಿಯನ್ನು ಪಾರಿವಾಳ ಉಗುರುಗಳಿಗೆ ಕಟ್ಟಲಾಗಿತ್ತು. ಪತ್ರದಲ್ಲಿ ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶವಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

    ಪಾಕಿಸ್ತಾನವು ಭಾರತ ಗಡಿಭಾಗಕ್ಕೆ ವಿವಿಧ ಸಂದೇಶಗಳನ್ನು ಹೊತ್ತ ಬಲೂನ್, ಧ್ವಜಗಳು ಮತ್ತು ಪಾರಿವಾಳಗಳನ್ನು ಕಳುಹಿಸುತ್ತಿದೆ. ಆದರೆ ಬೆದರಿಕೆ ಪತ್ರವನ್ನು ಹೊತ್ತ ಪಾರಿವಾಳವನ್ನು ಸೆರೆಹಿಡಿಯುತ್ತಿರುವುದು ಇದೇ ಮೊದಲು ಎಂದಿದ್ದಾರೆ. ಹೀಗಾಗಿ ಭದ್ರತಾ ಸಂಸ್ಥೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿವೆ.

    ಆ.18ರಂದು ಪಾಕಿಸ್ತಾನದಿಂದ ಬರುತ್ತಿದ್ದ ಪಾರಿವಾಳವನ್ನು ಅಂತಾರಾಷ್ಟ್ರೀಯ ಗಡಿಯ ಕಟ್ಮರಿಯಾ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ ಎನ್ನಲಾಗಿದೆ.ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

  • ಮಾಲೀಕನನ್ನ ಅರಸಿ 1,790 ಕಿಮೀ ಪ್ರಯಾಣ – ಚಿಕ್ಕ ವಯಸ್ಸಲ್ಲೇ ಮಂಡ್ಯದ ಪಾರಿವಾಳ ದಾಖಲೆ

    ಮಾಲೀಕನನ್ನ ಅರಸಿ 1,790 ಕಿಮೀ ಪ್ರಯಾಣ – ಚಿಕ್ಕ ವಯಸ್ಸಲ್ಲೇ ಮಂಡ್ಯದ ಪಾರಿವಾಳ ದಾಖಲೆ

    ಮಂಡ್ಯ: ಪಾರಿವಾಳ ರೇಸ್ ಎಂಬುದು ಹಲವರಿಗೆ ದೊಡ್ಡ ಕ್ರೇಜ್. ಕೆಲವರು ಈ ಪಾರಿವಾಳ ರೇಸ್‌ಗೆಂದೇ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಕೋಟಿ ಕೋಟಿ ಹಣ ಕೊಟ್ಟು ಸಾಮರ್ಥ್ಯವುಳ್ಳ ಪಾರಿವಾಳಗಳನ್ನೂ ಖರೀದಿ ಮಾಡ್ತಾರೆ. ಇಂತಹ ರೇಸ್‌ನಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಪಾರಿವಾಳವೊಂದು ಅತಿ ಚಿಕ್ಕ ವಯಸ್ಸಿನಲ್ಲೇ ದಾಖಲೆ ಬರೆದಿದೆ.

    ಹೌದು. ದೆಹಲಿಯಿಂದ (Dehli) ಮಂಡ್ಯಕ್ಕೆ (Mandya) 1,790 ಕಿ.ಮೀ ಪ್ರಯಾಣ ಮಾಡಿದ ಒಂದು ವರ್ಷದ ಪಾರಿವಾಳವೊಂದು ಮಾಲೀಕನ ಬಳಿ ವಾಪಸ್ಸಾಗಿ ದಾಖಲೆ ನಿರ್ಮಿಸಿದೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

    ಕರ್ನಾಟಕ (Karnataka) ಹೋಮಿಂಗ್ ಪಿಜನ್ ಫೆಡರೇಷನ್ ಅವರು ದೆಹಲಿಯಲ್ಲಿ ಪಾರಿವಾಳಗಳ ರೇಸ್‌ನ್ನು ಆಯೋಜಿಸಿದ್ದರು. ಇದರಲ್ಲಿ ಮಂಡ್ಯದ ವಿ.ಸಿ ಫಾರಂನ ಶ್ರೀಧರ್ ಅವರಿಗೆ ಸೇರಿದ ಅಭಿಮನ್ಯು ಹೆಸರಿನ ಪಾರಿವಾಳವೊಂದು ಸತತ 52 ದಿನಗಳ ಹಾರಾಟ ನಡೆಸಿದ ಪಾರಿವಾಳ ದೆಹಲಿಯಿಂದ ಮಂಡ್ಯಕ್ಕೆ ಬಂದಿದೆ.

    ಈ ಸ್ಪರ್ಧೆಯಲ್ಲಿ ಕರ್ನಾಟಕ, ತಮಿಳುನಾಡಿನ ಮೂಲದ ಒಟ್ಟು 22 ಪಾರಿವಾಳ ಭಾಗವಹಿಸಿದ್ದವು. ಪಾರಿವಾಳಗಳಿಗೆ ರೇಸ್‌ಗೂ ಮುನ್ನ ರಿಂಗ್ ಅಳವಡಿಕೆ ಮಾಡಲಾಗಿತ್ತು. ಏ.5ರಂದು ಎಲ್ಲಾ ಪಾರಿವಾಳಗಳನ್ನು ಹಾರಿಬಿಡಲಾಗಿತ್ತು. ಅಂದಿನಿಂದ ಒಟ್ಟು 1790 ಕಿ.ಮೀ ಹಾರಾಟ ನಡೆಸಿ ಮೇ.28ರಂದು ಅಭಿಮನ್ಯು ಮಾಲೀಕನ ಬಳಿಗೆ ಬಂದಿದೆ.

    ಒಟ್ಟು 22 ಪಾರಿವಾಳಗಳ ಪೈಕಿ 14 ಪಾರಿವಾಳಗಳು ತಮ್ಮ ನೆಲೆಗೆ ವಾಪಸ್ಸಾಗಿದ್ದು, ಅದರಲ್ಲಿ ಅತಿ ಚಿಕ್ಕ ವಯಸ್ಸಿನ ಮಂಡ್ಯದ ಅಭಿಮನ್ಯು ದಾಖಲೆ ನಿರ್ಮಿಸಿದೆ. ಮೊದಲ ರೇಸ್‌ನಲ್ಲಿ ಯಶಸ್ಸು ಕಂಡ ಅತಿ ಚಿಕ್ಕ ಪಾರಿವಾಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ – ಇಂದೇ ತೀರ್ಪು?

  • ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

    ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

    ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ (Electric Pole) ಸಿಲುಕಿದ್ದ ಪಾರಿವಾಳವನ್ನು (Pigeon) ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ (Boy) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.

    ರಾಮಚಂದ್ರ (12) ಮೃತ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

    ವಿದ್ಯುತ್ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

  • ಮಾಲೀಕನ ಮೇಲೆ ಹಳೆ ದ್ವೇಷ – ತಲೆ ಕತ್ತರಿಸಿ 23 ಪಾರಿವಾಳಗಳ ಕೊಂದ ಕಿಡಿಗೇಡಿಗಳು

    ಮಾಲೀಕನ ಮೇಲೆ ಹಳೆ ದ್ವೇಷ – ತಲೆ ಕತ್ತರಿಸಿ 23 ಪಾರಿವಾಳಗಳ ಕೊಂದ ಕಿಡಿಗೇಡಿಗಳು

    ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರು ಸಾಕಿದ್ದ 23 ಪಾರಿವಾಳಗಳ (Pigeon) ತಲೆ ಕತ್ತರಿಸಿ ಕೊಂದಿರುವ ಅಮಾನುಷ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನಗರದ ಗೋಕುಲ ರಸ್ತೆಯಲ್ಲಿರೋ ಯಾವಗಲ್ ಪ್ಲಾಟ್‌ನಲ್ಲಿ ಘಟನೆ ನಡೆದಿದೆ. ಪಕ್ಷಿ ಪ್ರೇಮಿ ರಾಹುಲ್ ದಾಂಡೇಲಿ ಅವರು ಮನೆಯಲ್ಲಿ ಹಲವಾರು ಪಾರಿವಾಳಗಳನ್ನು ಸಾಕಿದ್ದರು. ಆದರೆ ಕಿಡಿಗೇಡಿಗಳು 23 ಪಾರಿವಾಳಗಳ ಕತ್ತು ಸೀಳಿ ಸಾಯಿಸಿದ್ದಾರೆ. ಇದನ್ನೂ ಓದಿ: ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಪಾರಿವಾಳಗಳ ಕತ್ತನ್ನು ಸೀಳಿ ಕೊಂದಿದ್ದಾರೆ. ಇದೀಗ ಪಾರಿವಾಳಗಳನ್ನು ನಿರ್ದಯವಾಗಿ ಕೊಂದಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಮಾಲೀಕರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: 40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ

    ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ

    ಭುವನೇಶ್ವರ್: ಒಡಿಶಾದ (Odisha) ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು (Pigeon) ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ (Spy) ಬಳಸಿರುವುದಾಗಿ ಎಂದು ಪೊಲೀಸರು ಶಂಕಿಸಿದ್ದಾರೆ.

    ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು ದಿನಗಳ ಹಿಂದೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಈ ವೇಳೆ ಆ ಮೀನುಗಾರರ ದೋಣಿಯ ಮೇಲೆ ಒಂದು ಪಾರಿವಾಳ ಕುಳಿತಿರುವುದನ್ನು ಮೀನುಗಾರರು ಗಮನಿಸಿದ್ದಾರೆ. ಅಷ್ಟೇ ಅಲ್ಲದೇ ಆ ಪಾರಿವಾಳದ ಕಾಲಿಗೆ ಮೈಕ್ರೊ ಕ್ಯಾಮೆರಾವನ್ನು (Camera) ಬಳಸಿರುವುದನ್ನು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತುಕೊಂಡ ಮೀನುಗಾರರು ತಮ್ಮ ಟ್ರಾಲರ್‌ನಲ್ಲಿ ಪಾರಿವಾಳವನ್ನು ಸೆರೆ ಹಿಡಿದರು. ನಂತರ ಅದನ್ನು ಮೆರೈನ್ ಪೊಲೀಸರಿಗೆ ಒಪ್ಪಿಸಿದರು.

    ಇದಾದ ಬಳಿಕ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಬಗ್ಗೆ ಜಗತ್‍ಸಿಂಗ್‍ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಮಾತನಾಡಿ, ಪಶುವೈದ್ಯರು ಪಾರಿವಾಳವನ್ನು ಪರೀಕ್ಷಿಸುತ್ತಿದ್ದಾರೆ. ಅದರ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿವಿಜ್ಞಾನ ಪ್ರಯೋಗಾಯಲಯದ ಸಹಾಯವನ್ನು ಪಡೆಯುತ್ತೇವೆ ಎಂದು ತಿಳಿಸಿದರು.

    ಪಾರಿವಾಳದ ರೆಕ್ಕೆಗೆಳ ಮೇಲೆ ಏನೋ ಬರೆಯಲಾಗಿದ್ದು, ಬೇರೆ ಭಾಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ತಜ್ಞರ ಸಹಾಯವನ್ನು ಪಡೆಯಲಾಗುವುದು ಎಂದು ಎಸ್ಪಿ ತಿಳಿಸಿದರು. ಇದನ್ನೂ ಓದಿ: ಪೋಷಕರೇ ಎಚ್ಚರ- ಮಕ್ಕಳಲ್ಲಿ ಹೆಚ್ಚಾಗ್ತಿದೆ ಆಡಿನೋ ವೈರಸ್..!

    ಈ ಪಾರಿವಾಳವನ್ನು ಹಿಡಿದ ಮೀನುಗಾರ ಸಾರಥಿ ಎಂಬಾತ ಮಾತನಾಡಿ, ಪಾರಿವಾಳ ದೋಣಿಯ ಮೇಲೆ ಕುಳಿತಿರುವುದನ್ನು ನೋಡಿದೆ. ಈ ವೇಳೆ ಆ ಪಾರಿವಾಳದ ಕಾಲುಗಳಿಗೆ ಕೆಲವು ಸಾಧನಗಳನ್ನು ಕಟ್ಟಿರುವುದನ್ನು ಗಮನಿಸಿದೆ. ಅಷ್ಟೇ ಅಲ್ಲದೇ ಅದರ ರೆಕ್ಕೆ ಮೇಲೆ ಏನೋ ಬರೆಯಲಾಗಿತ್ತು. ಆದರೆ ಅದು ಓಡಿಶಾ ಅಲ್ಲದ್ದರಿಂದ ಅರ್ಥವಾಗಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

  • ತನ್ನ ಬೆಕ್ಕು ಕದ್ದಿದ್ದಾರೆಂದು ಶಂಕಿಸಿ ನೆರೆಮನೆಯವರ ಪಾರಿವಾಳಗಳಿಗೆ ವಿಷ ಉಣಿಸಿದ

    ತನ್ನ ಬೆಕ್ಕು ಕದ್ದಿದ್ದಾರೆಂದು ಶಂಕಿಸಿ ನೆರೆಮನೆಯವರ ಪಾರಿವಾಳಗಳಿಗೆ ವಿಷ ಉಣಿಸಿದ

    ಲಕ್ನೋ: ತನ್ನ ಬೆಕ್ಕನ್ನು (Cat) ಕದ್ದೊಯ್ದಿದ್ದಾರೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಕೋಪದಿಂದ ನೆರೆಮನೆಯವರ (Neighbor) ಪಾರಿವಾಳಗಳಿಗೆ (Pigeon) ವಿಷ (Poison) ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಷಹಜಹಾನ್‌ಪುರದಲ್ಲಿ ನಡೆದಿದೆ.

    ಘಟನೆ ಠಾಣಾ ಸದರ್ ಬಜಾರ್‌ನ ಮೊಹಲ್ಲಾ ಅಮಾಂಜೈ ಎಂಬಲ್ಲಿ ಮಂಗಳವಾರ ನಡೆದಿದೆ. ಆರೋಪಿ ಅಬಿದ್‌ನ ಬೆಕ್ಕು ಇತ್ತೀಚೆಗೆ ಕಣ್ಮರೆಯಾಗಿತ್ತು. ತನ್ನ ಬೆಕ್ಕನ್ನು ನೆರೆ ಮನೆಯ ಅಲಿ ಕಳ್ಳತನ ಮಾಡಿದ್ದಾನೆ ಎಂದು ಭಾವಿಸಿ ಆತ ಈ ಕೃತ್ಯ ನಡೆಸಿದ್ದಾನೆ.

    ಆರೋಪಿ ಅಬಿದ್ ತನ್ನ ಬೆಕ್ಕು ಕಾಣೆಯಾಗಿದೆ, ಅದನ್ನು ನೆರೆಮನೆಯವರು ಕಳ್ಳತನ ಮಾಡಿದ್ದಾರೆ ಎಂದು ಭಾವಿಸಿ ವರ್ಷಗಳಿಂದ ಸಾಕಿದ್ದ ಪಾರಿವಾಳಗಳಿಗೆ ವಿಷ ಉಣಿಸಿದ್ದಾನೆ. ನೆರೆಮನೆಯವ ಸಾಕಿದ್ದ 78 ಪಾರಿವಾಳಗಳಲ್ಲಿ ವಿಷ ತಿಂದು ಸುಮಾರು 30 ಪಾರಿವಾಳಗಳು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗರ್ಭಿಣಿಯಾಗಲು ಮಹಿಳೆಗೆ ಮಾನವನ ಮೂಳೆ ತಿನ್ನುವಂತೆ ಒತ್ತಾಯಿಸಿದ ಪಾಪಿ ಪತಿ

    ಘಟನೆಗೆ ಸಂಬಂಧಿಸಿದಂತೆ ಅಬಿದ್ ಸೇರಿದಂತೆ ಮೂವರ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನೆ 428 (ಪ್ರಾಣಿಗಳನ್ನು ಕೊಲ್ಲುವ ಮೂಲಕ ದುಷ್ಕೃತ್ಯ ಎಸಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾವನ್ನಪ್ಪಿರುವ ಪಾರಿವಾಳಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

    ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

    ಬೆಂಗಳೂರು: 3 ದಿನಗಳ ಹಿಂದೆ ಕರೆಂಟ್ ಶಾಕ್ (Electric Shock) ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ (Boys) ಒಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

    ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ (Mahalakshmi Layout) ಈ ದುರ್ಘಟನೆ ನಡೆದಿದೆ. ಡಿಸೆಂಬರ್ 1 ರಂದು ಶಾಲೆಯಿಂದ ಮನೆಗೆ ಬಂದಿದ್ದ ಬಾಲಕರಿಬ್ಬರು ಮನೆಯ ಮಹಡಿ ಮೇಲಿದ್ದ ಪಾರಿವಾಳವನ್ನು (Pigeon) ಹಿಡಿಯಲು ಹೋಗಿದ್ದರು. ಈ ವೇಳೆ ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವಯರ್ ಅನ್ನು ಬಾಲಕರು ಮುಟ್ಟಿದ್ದರು. ಘಟನೆಯ ತೀವ್ರತೆ ಎಷ್ಟಿತ್ತು ಎಂದರೆ ಮನೆಯಲ್ಲಿದ್ದ ಎಲೆಕ್ಟ್ರಿಕ್ ಉಪಕರಣಗಳೆಲ್ಲವೂ ಸ್ಫೋಟಗೊಂಡಿತ್ತು.

    ಘಟನೆಯಿಂದ ಬಾಲಕ ಸುಪ್ರೀತ್ ದೇಹದಲ್ಲಿ ಸುಮಾರು ಶೇ.90 ರಷ್ಟು ಸುಟ್ಟ ಗಾಯಗಳಾಗಿತ್ತು. ಇನ್ನೊಬ್ಬ ಬಾಲಕ ಚಂದ್ರು ಕೂಡಾ ಸುಮಾರು ಶೇ.70 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ. ದುರ್ಘಟನೆ ನಡೆದ ತಕ್ಷಣವೇ ಬಾಲಕರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಬೆಳಗ್ಗೆ 7:30ರ ವೇಳೆಗೆ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ಬಾಲಕ ಸುಪ್ರೀತ್ ತಂದೆ ಮಂಜುನಾಥ್ ಹಾಗೂ ತಾಯಿ ಪ್ರೇಮ ಅವರ ಒಬ್ಬನೇ ಮಗನಾಗಿದ್ದ. ಬಾಲಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕನ ಮೃತದೇಹವನ್ನು ಕುಟುಂಬದವರಿಗೆ ರವಾನೆ ಮಾಡಲಾಗುತ್ತದೆ. ಘಟನೆಯಲ್ಲಿ ಗಾಯಗೊಂಡಿರುವ ಇನ್ನೊಬ್ಬ ಬಾಲಕ ಚಂದ್ರುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದನ್ನೂ ಓದಿ: ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    Live Tv
    [brid partner=56869869 player=32851 video=960834 autoplay=true]

  • ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಬೆಂಗಳೂರು: ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು (Pigeon) ಹಿಡಿಯಲು ಹೋಗಿ ಇಬ್ಬರು ಮಕ್ಕಳಿಗೆ (Children) ಕರೆಂಟ್ ಶಾಕ್ (Electric Shock) ತಗುಲಿ ಸಾವು ಬದುಕಿನ ನಡುವೆ ಮಕ್ಕಳು ಹೋರಾಡುತ್ತಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

    ವಿಜಯನಾಂದನಗರದ ಚಂದ್ರು ಹಾಗೂ ಸುಪ್ರೀತ್ ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಮನೆ ಮಾಲೀಕರು ಮಹಡಿಯನ್ನು ಹತ್ತಬೇಡಿ ಎಂಬ ಎಚ್ಚರಿಕೆಯನ್ನು ನೀಡಿದ್ದರೂ ಕೂಡಾ ಮಕ್ಕಳು ಪಾರಿವಾಳದ ಆಸೆಗೆ ಮನೆ ಮೇಲೆ ಹತ್ತಿದ್ದಾರೆ. ಈ ವೇಳೆ ಮಕ್ಕಳು ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವೈರ್ ಅನ್ನು ಮುಟ್ಟಿದ್ದಾರೆ. ಈ ವೇಳೆ ಮಕ್ಕಳಿಗೆ ಕರೆಂಟ್ ಶಾಕ್ ತಗುಲಿದೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

    ಮಕ್ಕಳಿಗೆ ಕರೆಂಟ್ ಶಾಕ್ ತಗುಲುವ ವೇಳೆ ಅದರ ತೀವ್ರತೆ ಎಷ್ಟಿತ್ತು ಎಂದರೆ, ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳೆಲ್ಲವೂ ಬ್ಲಾಸ್ಟ್ ಆಗಿವೆ. ಇಬ್ಬರು ಬಾಲಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಬ್ಬರ ಸ್ಥಿತಿ ಗಂಭೀರವಾಗಿದೆ. ಸುಪ್ರೀತ್‌ಗೆ ಕರೆಂಟ್ ಶಾಕ್‌ನಿಂದಾಗಿ ದೇಹದಲ್ಲಿ ಶೇ.70 ರಷ್ಟು ಸುಟ್ಟ ಗಾಯಗಳಾಗಿವೆ. ಚಂದ್ರುಗೆ ಶೇ.90 ರಷ್ಟು ಗಾಯಗಳಾಗಿವೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    ಬಾಲಕರಿಬ್ಬರಿಗೂ ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಬಾಲಕರ ಪೋಷಕರು ತಾವು ಕೂಲಿ ಕೆಲಸಗಾರರು, ನಾವು ಬಡವರು. ನಮ್ಮ ಮಕ್ಕಳು ಉಳಿದರೆ ಸಾಕು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾರಿವಾಳ ವಾಪಸ್ ಕೇಳಿದ್ದಕ್ಕೆ ಗಲಾಟೆ – ವ್ಯಕ್ತಿಯಿಂದ 7 ಜನರ ಮೇಲೆ ಹಲ್ಲೆ

    ಪಾರಿವಾಳ ವಾಪಸ್ ಕೇಳಿದ್ದಕ್ಕೆ ಗಲಾಟೆ – ವ್ಯಕ್ತಿಯಿಂದ 7 ಜನರ ಮೇಲೆ ಹಲ್ಲೆ

    ಕೋಲಾರ: ಕೊಟ್ಟಿದ್ದ ಪಾರಿವಾಳ (Pigeon) ವಾಪಸ್ ಕೇಳಿದ್ದಕ್ಕೆ ಚಾಕುವಿನಿಂದ ಮನಬಂದಂತೆ 7 ಜನರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮಾಲೂರು (Maluru) ಪಟ್ಟಣದ ಗಾಂಧಿ ಸರ್ಕಲ್‍ನಲ್ಲಿ ಈ ಘಟನೆ ನಡೆದಿದ್ದು, ಗಾಂಜಾ ಮತ್ತಿನಲ್ಲಿದ್ದ ಇಮ್ರಾನ್ ಖಾನ್ ಎಂಬಾತ 7 ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ರಾಮು ಮತ್ತು ಅವರ ಕುಟುಂಬಸ್ಥರ ಹಲ್ಲೆಗೊಳಗಾದವರಾಗಿದ್ದಾರೆ.

    POLICE JEEP

    ಪಾರಿವಾಳ ವ್ಯಾಪಾರ ಮಾಡುತ್ತಿದ್ದ ರಾಮು ಬಳಿ ಇಮ್ರಾನ್ ಖಾನ್‌ ಪಾರಿವಾಳ ತೆಗೆದುಕೊಂಡಿದ್ದ. ಪಾರಿವಾಳ ವಾಪಸ್ ನೀಡುವಂತೆ ರಾಮು ಕೇಳಿದ್ದಾನೆ. ಇದರಿಂದಾಗಿ ರೊಚ್ಚಿಗೆದ್ದ ಇಮ್ರಾನ್ ಗಾಂಜಾ ಮತ್ತಿನಲ್ಲಿ ಕಳೆದ ರಾತ್ರಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಈ ವೇಳೆ ಜಗಳ ಬಿಡಿಸಲು ಹೋದ ರಾಮು ಸಹೋದರ ನಾಗರಾಜ್, 3 ಜನ ಮಹಿಳೆಯರಿಗೆ ಚಾಕು ಹಾಕಲಾಗಿದೆ. ಸದ್ಯ ಇಮ್ರಾನ್ ಪೊಲೀಸರು ಬಂಧಿಸಿದ್ದು, ಗಾಯಾಳುಗಳು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆಯಲ್ಲಿ ರಾಮು ಸಹೋದರ ನಾಗರಾಜ್‍ಗೆ ಗಂಭೀರ ಗಾಯಗಳಾಗಿದ್ದು, ಮುಖ, ಕೈ-ಕಾಲು ಹಾಗೂ ಎದೆ ಭಾಗಕ್ಕೆ ಚಾಕು ಇರಿತವಾಗಿದೆ. ಘಟನೆಯಲ್ಲಿ ರಾಮು ಅಣ್ಣ ನಾಗರಾಜ್ ಸೇರಿದಂತೆ ಮೂವರು ಮಹಿಳೆಯರಾದ ರಾಜೇಶ್ವರಿ, ನಾಗವೇಣಿ ಹಾಗೂ ಚಂದ್ರಕಲಾ ಎಂಬುವವರಿಗೆ ಗಾಯಗಳಾಗಿವೆ. ಇದನ್ನೂ ಓದಿ: ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬರುತ್ತಲೇ ಮಗ ಹೃದಯಾಘಾತದಿಂದ ಸಾವು

    ಸರ್ಕಾರಿ ಆಸ್ಪತ್ರೆಗೆ ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಭೇಟಿ ನೀಡಿ ಹಲ್ಲೆಗೊಳಗಾದ ಕುಟುಂಬದ ಆರೋಗ ವಿಚಾರಿಸಿದ್ದಾರೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ. ಇನ್ನೂ ಮಾಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಜಿ20 ಲೋಗೋದಲ್ಲಿ ಉದ್ದೇಶಪೂರ್ವಕವಾಗಿ ಬಿಜೆಪಿ ತನ್ನ ಲೋಗೋ ತುರುಕಿದೆ: ಕಾಂಗ್ರೆಸ್‌ ಕಿಡಿ

    Live Tv
    [brid partner=56869869 player=32851 video=960834 autoplay=true]

  • ನಟಿ ಮೀನಾ ಪತಿ ವಿದ್ಯಾಸಾಗರ್ ಸಾವಿಗೆ ಪಾರಿವಾಳದ ಹಿಕ್ಕೆ ಕಾರಣವಾಯ್ತಾ?

    ನಟಿ ಮೀನಾ ಪತಿ ವಿದ್ಯಾಸಾಗರ್ ಸಾವಿಗೆ ಪಾರಿವಾಳದ ಹಿಕ್ಕೆ ಕಾರಣವಾಯ್ತಾ?

    ದೀರ್ಘಕಾಲದಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ದಕ್ಷಿಣದ ಹೆಸರಾಂತ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿನ್ನೆಯಷ್ಟೇ ನಿಧನರಾಗಿದ್ದಾರೆ. ಹಲವು ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವಿದ್ಯಾಸಾಗರ್ ನಿಧನದ ನಂತರ  ಆ ಸಾವಿನ ಕುರಿತು ಹಲವು ರೀತಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಅವರ ಸಾವಿಗೆ ಪಾರಿವಾಳ ಕೂಡ ಕಾರಣ ಎನ್ನಲಾಗುತ್ತಿದೆ.

    ವಿದ್ಯಾ ಸಾಗರ್ ಅವರಿಗೆ ಕೋವಿಡ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೂಡ ಪಡೆದಿದ್ದರಂತೆ. ಹುಷಾರಾದ ನಂತರ ಮತ್ತೆ ಅವರಿಗೆ ಜ್ವರ ಮತ್ತಿತರ ಸಮಸ್ಯೆಗಳು ಕಾಣಿಸಿಕೊಂಡಿವೆ. ಆನಂತರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೂ ಚಿಕಿತ್ಸೆ ಪಡೆಯುತ್ತಿದ್ದರಂತೆ. ಅಂಗಾಂಗ ದಾನಿಗಳು ಸಿಕ್ಕರೆ, ಈ ಸಮಸ್ಯೆಗೆ ಪರಿಹಾರ ಸಿಗುತ್ತಿತ್ತಂತೆ. ಅದಕ್ಕಾಗಿ ಅವರು ಕಾಯುತ್ತಿದ್ದರಂತೆ. ಅಷ್ಟರಲ್ಲಿ ಅವರಿಗೆ ತೀವ್ರ ಶ್ವಾಸಕೋಶದ ತೊಂದರೆ ಆಯಿತಂತೆ. ಅದಕ್ಕೆ ಕಾರಣ ಪಾರಿವಾಳದ ಹಿಕ್ಕೆ ಎನ್ನಲಾಗುತ್ತಿದೆ. ಅವರ ಮನೆ ಸುತ್ತಮುತ್ತಲೂ ಪಾರಿವಾಳಗಳು ಜಾಸ್ತಿ. ಆಹಿಕ್ಕೆ ಯ ವಾಸನೆಯು ಅವರ ಅಲರ್ಜಿಗೆ ಕಾರಣವಾಗಿತ್ತಂತೆ. ಈ ರೀತಿಯ ಸುದ್ದಿಗಳು ಹರಡುತ್ತಿವೆ. ಇದನ್ನೂ ಓದಿ:ಸಾವರ್ಕರ್ ಅವಹೇಳನ : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಹತ್ಯೆ ಮಾಡುವುದಾಗಿ ಪತ್ರ

    ಪಾರಿವಾಳದ ಹಿಕ್ಕೆ ಯಿಂದ ಬರುತ್ತಿದ್ದ ದುರ್ವಾಸನೆಯನ್ನು ಅವರಿಂದ ತಡೆದುಕೊಳ್ಳಲು ಆಗುತ್ತಿರಲಿಲ್ಲವಂತೆ. ಅದನ್ನು ತುಂಬಾ ಸಲ ಹೇಳಿದ್ದೂ ಉಂಟಂತೆ. ಈ ಹಿಕ್ಕೆಯಿಂದಾಗಿಯೇ ಅವರಿಗೆ ಅಲರ್ಜಿ ಜಾಸ್ತಿ ಆಯಿತಂತೆ. ವಿದ್ಯಾಸಾಗರ್ ಅವರ ಸಾವಿಗೂ ಇದೂ ಒಂದು ಕಾರಣ ಇರಬಹುದು ಎಂದು ವರದಿ ಆಗುತ್ತಿದೆ.

    Live Tv