ಬೆಂಗಳೂರು: ಪ್ರತಿಯೊಬ್ಬ ಹೆಣ್ಣು ಕೂಡ ತಾನೂ ತಾಯಿ ಆಗಬೇಕೆಂದು ಬಯಸುತ್ತಾಳೆ. ಆದರೆ ಸ್ಯಾಂಡಲ್‍ವುಡ್ ನಟಿ ಪಾರುಲ್ ಯಾದವ್ ‘ನಾನು ತಾಯಿಯಾಗಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ
ಹೌದು, ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರಪ್ರದೇಶ ಹತ್ರಾಸ್ ಗ್ರಾಮದ ಯುವತಿಯ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಅಲ್ಲದೇ ಪೋಷಕರಿಗೂ ಮಗಳ ಮುಖವನ್ನು ತೋರಿಸಿದ ರಾತ್ರೋರಾತ್ರಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ಕುರಿತು ನಟ-ನಟಿಯರು ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

ಇದೀಗ ಗ್ಯಾಂಗ್‍ರೇಪ್ ಸಂತ್ರಸ್ತೆಯ ಸಾವಿನಿಂದ ನೊಂದ ನಟಿ ಪಾರುಲ್ ಯಾದವ್ ತಾಯಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ, “ತಾಯಿಯಾಗುವುದು ಹೆಣ್ತನದ ಸಾರಾಂಶ. ಆದರೆ ಇಂದು ನಾನು ಅಮ್ಮನಾಗಲು ಬಯಸುವುದಿಲ್ಲ. ಒಬ್ಬ ಹೆಣ್ಣಾಗಿ ಈ ರೀತಿ ಹೇಳುವುದು ತುಂಬಾ ಕಷ್ಟವಾಗಿದೆ. ಆದರೆ ನನ್ನ ಮಾತೃತ್ವವನ್ನು ತ್ಯಜಿಸುತ್ತಿದ್ದೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದಿದ್ದಾರೆ.
ಅಲ್ಲದೇ, “ಒಂದು ವೇಳೆ ನನ್ನ ಮಗು ಹೆಣ್ಣಾದರೆ ಏನು ಮಾಡುವುದು? ಈ ದೇಶ ಎಲ್ಲ ಕಡೆಯಲ್ಲೂ ಹೆಣ್ಣಿಗೆ ಕೆಟ್ಟದಾಗಿಯೇ ಇದೆ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.
“ಹತ್ರಾಸ್‍ನಲ್ಲಿ ನಡೆದ ಭಯಾನಕ ಘಟನೆಯೇ ಇದಕ್ಕೆ ಇತ್ತೀಚಿನ ಉದಾಹರಣೆಯಾಗಿದೆ. ಕಾರಣಗಳು ಬೇರೆಯಾಗಿರಬಹುದು. ಆದರೆ ಯಾವಾಗಲೂ ಮಹಿಳೆಯರಿಗೆ ತೊಂದರೆ ಆಗುತ್ತದೆ. ಅದರಿಂದ ಆಕೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ನಟಿ ಪಾರುಲ್ ಯಾದವ್ ಹೇಳಿದ್ದಾರೆ.
ಹತ್ರಾಸ್ ಪ್ರಕರಣ?
ಇದೇ ತಿಂಗಳ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮ ಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಮೃತಪಟ್ಟಿದ್ದಳು.

ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದಾರೆ. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು.
