Tag: ಪಾರ್ಟಿ

  • ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

    ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

    ಮಂಡ್ಯ: ಗಂಡಸ್ತನದ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಸಾಗರ್ ಕೊಲೆಗೀಡಾದ ಯುವಕ. ಸಾಗರ್ ತನ್ನ ಸ್ನೇಹಿತ ಕುಂಟನಹಳ್ಳಿ ಪ್ರಸಾದ್‍ನ ಬರ್ತಡೇ ಪಾರ್ಟಿಗೆ ಕೊಪ್ಪದ ಸಿಂಚನ ಡಾಬಾಗೆ ಕಳೆದ ವಾರ ಹೋಗಿದ್ದನು. ಕೇಕ್ ಕಟ್ ಮಾಡಿಸಿ ನಂತರ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿದ ಮೇಲೆ ಜೊತೆಯಲ್ಲಿದ್ದ ಸ್ನೇಹಿತರೇ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಂದ ಚುಚ್ಚಿ ಪರಾರಿಯಾಗಿದ್ದಾರೆ.

    ಸಾಗರ್‌ನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಆತನ ಸ್ನೇಹಿತರಾದ ಹುರುಗಲವಾಡಿ ಗಿರಿ, ಪುನೀತ್, ರಾಕೇಶ್. ಈ ಹಿಂದೆ ಗಿರಿ ಸಣ್ಣ ಜಗಳದಲ್ಲಿ ಕೊಪ್ಪದವರು ಗಂಡಸರಲ್ಲಾ ಎಂದು ಬೈದಿದ್ದನು. ಇದೇ ವಿಚಾರ ಪಾರ್ಟಿಯಲ್ಲಿ ಪ್ರಸ್ತಾಪವಾದ ವೇಳೆ ಸಾಗರ್ ಗಂಡಸ್ತನದ ಬಗ್ಗೆ ಹೇಳ್ತೀಯಾ ಎಂದು ಗಿರಿ ಜೊತೆ ಏರು ಧ್ವನಿಯಲ್ಲಿ ಗದರುತ್ತಾನೆ.

    ಈ ವೇಳೆ ಪಾರ್ಟಿಯ ಮತ್ತಿನಲಿದ್ದ ಗಿರಿ ಮತ್ತು ಸಾಗರ್ ನಡುವೆ ಜೋರಾಗಿ ಜಗಳವಾಗುತ್ತದೆ. ಕೊನೆಗೆ ಗಿರಿ ಜೊತೆ ಇದ್ದ ಪುನೀತ್ ಮತ್ತು ರಾಕೇಶ್ ಆತನನ್ನು ಹಿಡಿದುಕೊಳ್ಳುತ್ತಾರೆ.   ಈ ವೇಳೆ ಚಾಕು ತೆಗೆದುಕೊಂಡು ಗಿರಿ ಸಾಗರ್‍ನ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದರು.

    ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸಾಗರ್‍ನನ್ನು ಆಸ್ಪತ್ರಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಇದೀಗ ತಲೆ ಮರಿಸಿಕೊಂಡಿದ್ದ ಆರೋಪಿಗಳನ್ನು ಮದ್ದೂರು ಇನ್ಸ್‍ಪೆಕ್ಟರ್ ಹರೀಶ್ ಅವರ ನೇತೃತ್ವದಲ್ಲಿ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಇನ್ನೊರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

  • ಮದ್ಯ ಬಾಟಲಿಯಿಂದ ಕೊಲೆ ಮಾಡಿ, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಕೊಲೆಗಾರರು

    ಮದ್ಯ ಬಾಟಲಿಯಿಂದ ಕೊಲೆ ಮಾಡಿ, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಕೊಲೆಗಾರರು

    ಚೆನ್ನೈ: ವ್ಯಕ್ತಿಯೊಬ್ಬನನ್ನು ಕೊಂದು, ಆತನ ಶವದೊಂದಿಗೆ ಸೆಲ್ಫಿ ತೆಗೆದುಕೊಂಡ ಘಟನೆ ಚೆನ್ನೈನ ನ್ಯೂ ಮನಾಲಿ ಪಟ್ಟಣದ ಸಮೀಪ ನಡೆದಿದೆ.

    ರಿಕ್ಷಾ ಚಾಲಕ ರವಿಚಂದ್ರನ್(32) ಮೃತ ದುರ್ದೈವಿ. ಮದನ್ ಕುಮಾರ್(31), ಧನುಷ್(19), ಜಯಪ್ರಕಾಶ(18), ಭರತ್(19) ಬಂಧಿತ ಆರೋಪಿಗಳು. ಈ ನಾಲ್ವರು ಸೇರಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರವಿಚಂದ್ರನ್ ಅವರನ್ನು ಕೊಲೆ ಮಾಡಿದ್ದಾರೆ. ನಂತರ ತಾವು ಕೊಲೆ ಮಾಡಿರುವುದಾಗಿ ಸ್ನೇಹಿತರಿಗೆ ಸಾಬೀತಪಡಿಸಲು ರವಿಚಂದ್ರನ್ ಶವದೊಂದಿಗೆ ಸೆಲ್ಫಿ ತೆಗೆದುಕೊಂಡಿದುಕೊಂಡು ವಾಟ್ಸ್‌ಪ್‌ ಗ್ರೂಪ್‌ಗೆ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.

    KILLING CRIME

    ರವಿಚಂದ್ರನ್ ಕೆಲ ದಿನಗಳ ಹಿಂದೆ ಮದನ್ ಜೊತೆಗೆ ಜಗಳ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮದನ್ ಹಾಗೂ ಆತನ ಸ್ನೇಹಿತರು ಸೇರಿ ರವಿಚಂದ್ರನ್ ಅವರನ್ನು ಕೊಲೆ ಮಾಡಬೇಕು ಎಂದು ಪ್ಲ್ಯಾನ್ ಮಾಡಿಕೊಂಡಿದ್ದರು.

    ಪ್ಲ್ಯಾನ್ ಪ್ರಕಾರವಾಗಿ ರವಿಚಂದ್ರನ್ ಅವರಿಗೆ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ನ್ಯೂ ಮನಾಲಿ ಪಟ್ಟಣದ ಆಟದ ಮೈದಾನದಲ್ಲಿ ಮದ್ಯದ ಪಾರ್ಟಿಗಾಗಿ ಮದನ್ ಆಹ್ವಾನಿಸಿದ್ದ. ಇದಕ್ಕೆ ಒಪ್ಪಿದ್ದ ರವಿಚಂದ್ರನ್ ಪಾರ್ಟಿಗೆ ಹೋಗಿದ್ದ. ನಂತರ ಮದನ್ ಹಾಗೂ ಸ್ನೇಹಿತರು ಸೇರಿ ಮದ್ಯದ ಬಾಟಲಿಯಿಂದ ರವಿಚಂದ್ರನ್ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

    CRIME 2

    ರಾತ್ರಿಯಾದರೂ ಬರದಿದ್ದರಿಂದ ರವಿಚಂದ್ರನ್ ಪತ್ನಿ ಕೀರ್ತನಾ, ರವಿಚಂದ್ರನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಸ್ವಿಚ್ ಆಫ್ ಆಗಿತ್ತು. ಇದರಿಂದ ಗಾಬರಿಗೊಂಡ ಅವಳು ರವಿಚಂದ್ರನ್ ಅವರನ್ನು ಹುಡುಕಲು ಸಂಬಂಧಿಕರಿಗೆ ತಿಳಿಸಿದರು. ನಂತರ ವೆಟ್ರಿ ನಗರದ ಎಂಆರ್‍ಎಫ್ ಆಟದ ಮೈದಾನದ ಮೂಲೆಯಲ್ಲಿ ಆತ ಶವವಾಗಿ ಬಿದ್ದಿರುವುದು ಕಂಡಿದೆ. ಇದನ್ನೂ ಓದಿ: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ ರವಿಚಂದ್ರನ್ ಪತ್ನಿ ಕೀರ್ತನಾ ಆವಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

    POLICE JEEP

    ಕೀರ್ತನಾ ಅವರ ದೂರಿನ ಆಧಾರದ ಮೇಲೆ, ಆವಡಿಯ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ವಿಶೇಷ ತಂಡಗಳನ್ನು ರಚಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯೊಬ್ಬರ ಪ್ರಕಾರ, ಸೆಲ್ಫಿ ಕೊಲೆಗಾರರನ್ನು ಗುರುತಿಸಲು ಸಹಾಯ ಮಾಡಿದೆ. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

  • ಪಾರ್ಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಬಾರ್ ಬೌನ್ಸರ್

    ಪಾರ್ಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಬಾರ್ ಬೌನ್ಸರ್

    ಲಕ್ನೋ: ಸ್ನೇಹಿತರೊಂದಿಗೆ ಪಾರ್ಟಿಗೆ ಬಂದಿದ್ದ 30 ವರ್ಷದ ವ್ಯಕ್ತಿ ಮೇಲೆ ಬಾರ್ ಸಿಬ್ಬಂದಿ(ಬೌನ್ಸರ್) ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ನೋಯ್ಡಾದ ಗಾರ್ಡನ್ ಗ್ಯಾಲೇರಿಯಾ ಮಾಲ್‍ನಲ್ಲಿ ನಡೆದಿದೆ.

    ಬಿಹಾರದ ಛಾಪ್ರಾ ಜಿಲ್ಲೆಯ ಹಸನ್‍ಪುರ ಗ್ರಾಮದ ಬ್ರಿಜೇಶ್ ರೈ ಎಂಬ ವ್ಯಕ್ತಿ ತನ್ನ ಸಹೋದ್ಯೋಗಿಗಳೊಂದಿಗೆ ಪಾರ್ಟಿ ಮಾಡಲು ಮಾಲ್‍ನಲ್ಲಿರುವ ಬಾರ್‌ಗೆ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಹೋಗಿದ್ದರು. ಈ ವೇಳೆ ಬೌನ್ಸರ್ ಹಾಗೂ ಪಾರ್ಟಿಗೆ ಬಂದಿದ್ದವರ ನಡುವೆ ಜಗಳವಾಗಿದೆ. ಗಲಾಟೆಯಲ್ಲಿ ಬ್ರಿಜೇಶ್ ರೈ ಗಂಭೀರವಾಗಿ ಗಾಯಗೊಂಡಿದ್ದರು. ಹಾಗಾಗಿ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ರು ಸಮನ್ಸ್ ನೀಡಿದ್ದಕ್ಕೆ ಪ್ರಿಯಕರನೊಂದಿಗೆ ಬಾಲಕಿ ಆತ್ಮಹತ್ಯೆ

    ಸದ್ಯ ಬಾರ್ ಸಿಬ್ಬಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ರಣವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್

  • ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಭೋಪಾಲ್: ಸೆಕ್ಷನ್ 144 ರ ಅಡಿಯಲ್ಲಿ ಮದುವೆ ಕಾರ್ಯಕ್ರಮಗಳು, ಪಾರ್ಟಿಗಳಲ್ಲಿ ಗನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ಘೋಷಣೆ ಮಾಡಲಾಗಿದೆ.

    ಇತ್ತೀಚಿನ ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಈ ದೃಷ್ಟಿಯಿಂದ, ಮೊರೆನಾದ ಸೆಕ್ಷನ್ 144 ರ ಅಡಿಯಲ್ಲಿ ಮದುವೆಗಳು, ಪಾರ್ಟಿಗಳು ಇತ್ಯಾದಿ ಸಮಾರಂಭಗಳಿಗೆ ಬಂದೂಕು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನಾಲ್ಕೆನೇ ಅಲೆ ತಡೆಯೋದು ನಮ್ಮ ಕೈಯಲ್ಲಿಯೇ ಇದೆ: ತಜ್ಞ ವೈದ್ಯರು 

    ಮೊರೆನಾ ಎಸ್‍ಪಿ ಅಶುತೋಷ್ ಬಗ್ರಿ ಅವರು ಈ ಕುರಿತು ಮಾತನಾಡಿದ್ದು, ಮೊರೆನಾ ಸೇರಿದಂತೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯಕಾರಣ ಸಮಾರಂಭಗಳಿಗೂ ಜನರು ಗನ್ ಮತ್ತು ಮಾರಣಾಂತಿಕ ಆಯುಧಗಳನ್ನು ತೆಗೆದುಕೊಂಡು ಹೋಗುತ್ತಿರುವುದು. ಈ ಹಿನ್ನೆಲೆ ಇದನ್ನು ತಡೆಯಬೇಕು ಎಂದು, ಯಾವುದೇ ರೀತಿಯ ಸಮಾರಂಭಗಳಿಗೆ ಗನ್ ತೆಗೆದುಕೊಂಡು ಹೋಗದಂತೆ ನಿಷೇಧ ಏರಲಾಗಿದೆ ಎಂದು ವಿವರಿಸಿದರು.

    ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆದ್ರೆ, ಗನ್ ಪರವಾನಗಿ ರದ್ದಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ:  ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

  • ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಕೆಜಿಎಫ್ 2 ಭರ್ಜರಿ ಯಶಸ್ಸು ಕಂಡಿದೆ. ಹೀಗಾಗಿ ಇಡೀ ಸಿನಿಮಾ ತಂದ ರಿಲ್ಯಾಕ್ಸ್ ಮೂಡ್ ನಲ್ಲಿದೆ. ವಾರದ ಹಿಂದೆಯಷ್ಟೇ ಕುಟುಂಬ ಸಮೇತ ಯಶ್ ಗೋವಾದಲ್ಲಿ ಬೀಡು ಬಿಟ್ಟಿದ್ದರು. ಗೋವಾದಲ್ಲಿ ಪತ್ನಿ ರಾಧಿಕಾ ಪಂಡಿತ್ ಅಜ್ಜಿಯ ಮನೆ ಇರುವ ಕಾರಣಕ್ಕಾಗಿ ಆಗಾಗ್ಗೆ  ಅವರು ಗೋವಾಗೆ ಭೇಟಿ ಕೊಡುತ್ತಾರೆ. ಈ ಬಾರಿ ಗೋವಾದಲ್ಲಿ ಇಡೀ ತಂಡವನ್ನು ಕರೆದುಕೊಂಡು ಹೋಗಿ ಸಕ್ಸಸ್ ಪಾರ್ಟಿ ಮಾಡಿದ್ದಾರೆ ಯಶ್.  ಇದನ್ನೂ ಓದಿ : ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

    ಗೋವಾದಲ್ಲಿ ನಡೆದ ಸಕ್ಸಸ್ ಪಾರ್ಟಿಯಲ್ಲಿ ಬಹುತೇಕ ಕೆಜಿಎಫ್ 2 ತಂಡ ಭಾಗಿಯಾಗಿದೆ. ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಪತ್ನಿ, ನಿರ್ಮಾಪಕ ವಿಜಯ ಕಿರಗಂದೂರು ಮತ್ತು ಪತ್ನಿ, ಸಿನಿಮಾಟೋಗ್ರಾಫರ್ ಭುವನ್,  ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ನಿರ್ದೇಶಕ ಸೂರಿ, ಕಾಸ್ಟ್ಯೂಮ್ ಡಿಸೈನರ್ ಹೀಗೆ ಬಹುತೇಕರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ : ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಯಶ್ ಮೇನಿಯಾ: 300 ಕೋಟಿ ಬಾಚಿದ `ಕೆಜಿಎಫ್ 2′

    ಗೋವಾದ ಸಮುದ್ರ ತೀರದಲ್ಲಿರುವ ಪ್ರತಿಷ್ಠಿತ ಹೋಟೆಲ್ ನಲ್ಲಿ ಈ ಪಾರ್ಟಿಯನ್ನು ಆಯೋಜನೆ ಮಾಡಿತ್ತು ಚಿತ್ರತಂಡ. ಈ ಹೋಟೆಲ್ ನಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಅಲ್ಲದೇ ಯಶ್ ಅವರ ಕೆನ್ನೆಗೆ ಒಂದು ಕಡೆ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತೊಂದು ಕೆನ್ನೆಗೆ ನಿರ್ದೇಶಕ ಪ್ರಶಾಂತ್ ನೀಲ್ ಮುತ್ತು ಕೊಡುವ ಮೂಲಕ ಪಾರ್ಟಿಯ ಕಳೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಇದನ್ನೂ ಓದಿ:ಸೀಮಂತದ ಸಂಭ್ರಮದಲ್ಲಿ ನಟಿ ಸಂಜನಾ ಗಲ್ರಾನಿ

    ಬಾಲಿವುಡ್ ಸೇರಿದಂತೆ ನಾನಾ ಕಡೆ ಕೆಜಿಎಫ್ 2 ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೇ ದಿನಗಳಲ್ಲೇ ಈ ಸಿನಿಮಾ ಸಾವಿರ ಕೋಟಿ ಕ್ಲಬ್‍ ಗೆ ಸೇರ್ಪಡೆಯಾಗಲಿದೆ. ಅದರಲ್ಲೂ ಬಾಲಿವುಡ್ ನಲ್ಲಿ ಅತೀ ಹೆಚ್ಚು ಹಣ ಗಳಿಸುವುದರ ಮೂಲಕ ಬಾಲಿವುಡ್ ಸಿನಿಮಾಗಳ ಬಹುತೇಕ ದಾಖಲೆಗಳನ್ನು ಈ ಚಿತ್ರ ಮುರಿದಿದೆ.

  • ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ- 64 ಯುವಕರು, 24 ಯುವತಿಯರು ಪತ್ತೆ

    ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ- 64 ಯುವಕರು, 24 ಯುವತಿಯರು ಪತ್ತೆ

    ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ.

    ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿ ಆರ್ಗನೈಸ್ ಮಾಡಿದ್ದ. ಅವಧಿಗೂ ಮೀರಿ ಪಾರ್ಟಿ ನಡೆಯುತ್ತಿತ್ತು. ಬೆಳಗ್ಗಿನಜಾವ 3.30 ತನಕ ನಡೆಯುತ್ತಿದ್ದ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸೌತ್ ಪಾರ್ಟಿಯಲ್ಲಿ ಯುವಕ, ಯುವತಿಯರು ಮತ್ತಿನಲ್ಲಿ ಕುಣಿದು ಕುಪ್ಪಳಿಸ್ತಿದ್ರು. ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ- ಪವರ್ ಕಟ್ ಮಾಡಿ ಕಿಡಿಗೇಡಿಗಳ ದುಷ್ಕೃತ್ಯ

    ಪಾರ್ಟಿಯಲ್ಲಿ ಉತ್ತರ ಭಾರತ ಮೂಲದ ಯುವತಿಯರೇ ಹೆಚ್ಚು ಮಂದಿ ಇದ್ದರು. ಆರ್ಗನೈಸರ್ ಯುವಕರಿಗೆ 400, ಯುವತಿಯರಿಗೆ 300 ರೂಪಾಯಿ ಎಂಟ್ರಿ ಫೀಸ್ ಇಟ್ಟಿದ್ದ. ಪಾರ್ಟಿಯಲ್ಲಿ ಡ್ರಗ್ಸ್ ಇರುವ ಅನುಮಾನ ಇತ್ತ. ಆದರೆ ಹೋಟೆಲ್ ನಲ್ಲಿ ಡ್ರಗ್ಸ್ ದೊರೆತಿಲ್ಲ ಬದಲಾಗಿ ಪಾರ್ಟಿಯಲ್ಲಿದ್ದವರು ನಶೆಯಲ್ಲಿರೋ ಮಾಹಿತಿ ದೊರೆತಿದೆ.

    ಸದ್ಯ ಪಾರ್ಟಿಯಲ್ಲಿದ್ದವರನ್ನ ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸ್ರು ಮುಂದಾಗಿದ್ದಾರೆ. ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿ

  • ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಬಲಿ

    ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಬಲಿ

    ಬೀದರ್: ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ನಗರದ ಹೊರ ವಲಯದ ದೇವ ಉದ್ಯಾನವನದ ಬಳಿ ನಡೆದಿದೆ.

    ಕುಡಿದ ಅಮಲಿನಲ್ಲಿ ಚಾಲಕನೊಬ್ಬನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಬ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

    ನಗರದ ಬುತ್ತಿ ಬಸವಣ್ಣ ಕಾಲೋನಿಯ ನಿವಾಸಿಗಳಾದ ವಿದ್ಯಾಧರ್ (28) ಹಾಗೂ ಶಾಮ್ ರಾವ್ (30) ಸಾವನ್ನಪ್ಪಿದ ದುರ್ವೈವಿಗಳು. ಇಬ್ಬರು ಯುವಕರು ಪಾರ್ಟಿ ಮಾಡಿ ತೆಲಂಗಾಣದಿಂದ ಬೀದರ್‌ಗೆ ಬರುತ್ತಿದ್ದರು. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಂಟೈನ್ಮೆಂಟ್ ಝೋನ್ ಹೋಮ್‍ನಲ್ಲಿ ಸ್ನೇಹಿತರೊಂದಿಗೆ ಸೋಂಕಿತ ಪಾರ್ಟಿ

    ಕಂಟೈನ್ಮೆಂಟ್ ಝೋನ್ ಹೋಮ್‍ನಲ್ಲಿ ಸ್ನೇಹಿತರೊಂದಿಗೆ ಸೋಂಕಿತ ಪಾರ್ಟಿ

    ಭೋಪಾಲ್: ಕೋವಿಡ್ ರೋಗಿಯೊಬ್ಬರು ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಘಟನೆ ರತ್ಲಾಮ್ ನಗರದ ನಿರಾಲ್ ಕಾಲನಿಯ ಕಂಟೈನ್ಮೆಂಟ್ ಝೋನ್‍ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.

    ಕೋವಿಡ್-19 ಪಾಸಿಟಿವ್ ವ್ಯಕ್ತಿ ಮತ್ತು ಅವರ ಸ್ನೇಹಿತರು ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದರು. (ಎಮ್‍ಸಿಆರ್) ನಗರ ಪಾಲಿಕಾ ನಿಗಮ ಸಿಬ್ಬಂದಿಗೆ ಭಾನುವಾರ ಇದರ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅಲ್ಲಿಗೆ ತಪಾಸಣಾ ತಂಡವನ್ನು ಕಳುಹಿಸಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ ಗೆ ದಾಖಲಿಸಲಾಗಿದೆ ಎಂದು ತಹಶೀಲ್ದಾರ್ ಗೋಪಾಲ್ ಸೋನಿ ತಿಳಿಸಿದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಘಟನೆ ಕುರಿತು ಇಂಡಸ್ಟ್ರಿಯಲ್ ಏರಿಯಾ ಪೊಲೀಸ್ ಠಾಣೆಯಿಂದ ಕೋವಿಡ್ ತಡೆಗಟ್ಟುವ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

  • ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ಚಿಕ್ಕಬಳ್ಳಾಪುರ: ನೈಟ್ ಕರ್ಪ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿಯ ವೈಟ್ ನಿರ್ವಾಣ ಬೈ ಜಡೆ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಈ ರೆಸಾರ್ಟ್ ನಲ್ಲಿ ತಡರಾತ್ರಿ ಡಿಜೆ ಹಾಕಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್ ಹಾಗೂ ಮೂವರು ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಗೇಟ್ ಗೆ ಬೀಗ ಹಾಕಿದ್ದ ರೆಸಾರ್ಟ್ ಮಾಲೀಕರು ಸಾಕಷ್ಟು ಸಮಯ ಬೀಗ ತೆಗೆದಿಲ್ಲ. ನಂತರ ಗೇಟ್ ಬೀಗ ತೆಗೆದಾಗ ಕೆಲ ಪಾನಮತ್ತ ಯುವಕರು ಹೊರ ಬಂದು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಗೇಟ್ ಬಳಿಯೇ ಪೊಲೀಸರು ಹಾಗೂ ಯುವಕರ ನಡುವೆ ತಳ್ಳಾಟ, ನೂಕಾಟ ಆಗಿದೆ. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

    ಈ ವೇಳೆ ಪೊಲೀಸರ ಮೇಲೆಯೇ ಪಾನಮತ್ತ ಯುವಕರ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ಚಿಕ್ಕಬಳ್ಳಾಪುರ ಇನ್ಸ್ಪೆಕ್ಟರ್ ಅವರೊಂದಿಗೆ ಗಲಾಟೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ ಹಾಗೂ ಡಿವೈಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಪಾನಮತ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 3 ಕೋಟಿ ವೆಚ್ಚದ ರಸ್ತೆ ನಿರ್ಮಾಣ, 1 ಕೋಟಿಯ ಯುಜಿಡಿ ಕಾಮಗಾರಿಗೆ ಶೀಘ್ರ ಚಾಲನೆ: ಜಗದೀಶ್ ಶೆಟ್ಟರ್

  • ನಿಷೇಧವಿದ್ದರೂ ಎಣ್ಣೆ ಪಾರ್ಟಿ ಮಾಡಿದ ವೈದ್ಯ ಅರೆಸ್ಟ್‌!

    ನಿಷೇಧವಿದ್ದರೂ ಎಣ್ಣೆ ಪಾರ್ಟಿ ಮಾಡಿದ ವೈದ್ಯ ಅರೆಸ್ಟ್‌!

    ಪಟ್ನಾ: ಮದ್ಯ ನಿಷೇಧಿಸಿದ್ದರೂ ಲೆಕ್ಕಿಸದೇ ಎಣ್ಣೆ ಪಾರ್ಟಿ ಮಾಡಿದ ವೈದ್ಯನನ್ನು ಪೊಲೀಸರು ಬಂಧಿಸಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಜಾರ್ಖಂಡ್‌ನ ಜಮ್ಷದ್‌ಪುರದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿಷೇಕ್‌ ಮುಂಡು ಬಂಧಿತ ವೈದ್ಯ.

    ನಿಷೇಧ ವಿಧಿಸಿದ್ದರೂ ನಿಯಮ ಉಲ್ಲಂಘಿಸಿ ಮದ್ಯ ಸೇವನೆ ಮಾಡಿರುವವರು ನಮ್ಮ ಕಸ್ಟಡಿಯಲ್ಲಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ಚರ್ಚ್‌ ಕಾಂಪೌಂಡ್‌ನಲ್ಲಿ ವೈದ್ಯ ಮದ್ಯ ಸೇವಿಸುತ್ತಿದ್ದಾರೆ ಎಂದು ಮಾಹಿತಿ ದೊರೆಯಿತು. ಸ್ಥಳಕ್ಕೆ ಧಾವಿಸಿ ಬಾಟಲಿ ಸಮೇತ ಆತನನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಂಕಲ್ ಅಂದಿದ್ದೇ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಜಮ್ಷದ್‌ ಇಎಸ್‌ಐ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ಬಿಹಾರ್‌ಗೆ ಬಂದಿದ್ದ. ಈಗ ವೈದ್ಯ ಜೈಲು ಪಾಲಾಗಿದ್ದಾನೆ.

    POLICE JEEP

    ಈತ ಮದ್ಯದ ಬಾಟಲಿಯನ್ನು ಎಲ್ಲಿ ಖರೀದಿಸಿದ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

    ಬಿಹಾರ್‌ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಪೊಲೀಸರು ನ.26 ರಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದರು. ಮದ್ಯ ನಿಷೇಧದ ನಂತರ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.