ಮಂಡ್ಯ: ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ಬೆಂಗಳೂರಿನ ಕೆಲ ಶ್ರೀಮಂತ ವ್ಯಕ್ತಿಗಲು ರೇವ್ ಪಾರ್ಟಿ ನಡೆಸಿದ್ದಾರೆ.
ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದ್ದು, ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ತಡರಾತ್ರಿಯಲ್ಲಿ ಕೇಳಲು ಹೋದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾರೆ.
ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳು ರಾತ್ರಿ ಕಾರಿನಲ್ಲಿ ಆಗಮಿಸಿದ್ದರು. ಅವರಿಗಾಗಿ ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಮತ್ತು ಪೆಂಡಾಲ್ ಹಾಕಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಠಾಣೆ ಸಮೀಪದಲ್ಲೇ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಆಪ್ತ ಹಾಗೂ ಬಗರ ಹುಕುಂ ಸಮಿತಿ ಸದಸ್ಯ ನರಸು ತುಳಸಿಗೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸಂಜೆ 7 ನಂತರ ನಿಷೇಧಾಜ್ಞೆ ಇದ್ದರೂ ತಡರಾತ್ರಿವರೆಗೂ ಲಾಕ್‍ಡೌನ್ ನಿಯಮಗಳನ್ನ ಗಾಳಿಗೆ ತೂರಿ ಕೊರೊನಾ ನಡುವೆಯೂ ಡಿಜೆ ಹಾಕಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಮಾಸ್ಕ್ ಧರಿಸದೇ, ಸಾಮಾಜಿಕ ಅಂತವಿಲ್ಲದೇ ತಮ್ಮ ಸ್ನೇಹಿತರೊಂದಿಗೆ ಸೇರಿಕೊಂಡು ಗುಂಪು ಗುಂಪಾಗಿ ಪಾರ್ಟಿ ಮಾಡಿದ್ದಾರೆ. ಶಾಸಕರ ಆಪ್ತ ಅನ್ನುವ ಕಾರಣಕ್ಕೆ ಪೊಲೀಸರು ಇತನನ್ನ ಪ್ರಶ್ನೆ ಮಾಡಿಲ್ಲ. ಪೊಲೀಸ್ ಠಾಣೆಯಿಂದ 5 ಕಿಲೋಮೀಟರ್ ದೂರದಲ್ಲಿರುವ ನಿಲಜಿ ಗ್ರಾಮದಲ್ಲಿ ಶಾಸಕನ ಆಪ್ತನ ಬಗ್ಗೆ ಪೊಲೀಸರ ಗಮನಕ್ಕೂ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಜನರಿಗೆ ಕೊರೊನಾ ಮಹಾಮಾರಿಯಿಂದ ರಕ್ಷಣೆ ಮಾಡಬೇಕಿರುವ ಶಾಸಕರು ತಮ್ಮ ಆಪ್ತರು ಹೀಗೆಲ್ಲ ದರ್ಬಾರ ಮಾಡುತ್ತಿದ್ದರೂ ಸುಮ್ಮನಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಮುಂಬೈ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಡಮ್ಮಿ ಗನ್ ಎಂದು ಭಾವಿಸಿ ತಲೆಗೆ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಸಿಧೇಶ್ ಜಂಗಮ್ ಎಂದು ಗುರುತಿಸಲಾಗಿದೆ. ಸಿಧೇಶ್ ತಂದೆ ಪ್ರಕಾಶ್ ಜಂಗಮ್ ಜೊತೆ ನೆರೆ ಮನೆಯ ಭಾರತ್ ಶೇರ್ ಅವರ ಹೆಂಡತಿಯ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದರು. ಪಾರ್ಟಿಯಲ್ಲಿ ಮದ್ಯಪಾನ ಮಾಡಿದ ನಂತರ ಇಸ್ಪೀಟ್ ಆಡಿಕೊಂಡು ಸಮಯ ಕಳೆಯುತ್ತಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಪಾರ್ಟಿಗೆ ಬಂದಿದ್ದ ಸಿಧೇಶ್ ಜಂಗಮ್ ತಂದೆ ಪ್ರಕಾಶ್ ಜಂಗಮ್ ಸಂಜೆಯ ವೇಳೆಗೆ ಮನೆಗೆ ಹೋಗಿದ್ದರು. ಈ ವೇಳೆ ಸಿಧೇಶ್ ಜೊತೆ ಇಸ್ಪೀಟ್ ಆಡುತ್ತಿದ್ದ ಭಾರತ್ ತನ್ನ ಬೆಡ್ ರೊಂಗೆ ಹೋಗಿದ್ದಾನೆ. ಇತ್ತ ಮನೆಯಲ್ಲಿ ಗನ್ ಇರುವುದು ಸಿಧೇಶ್ ಕಣ್ಣಿಗೆ ಬಿದ್ದಿದೆ. ಮೊದಲೇ ಕುಡಿದ ಅಮಲಿನಲ್ಲಿ ಇದ್ದ ಸಿಧೇಶ್ ಡಮ್ಮಿ ಗನ್ ಅನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ತೆಗೆದುಕೊಂಡು ತಲೆಗೆ ಶೂಟ್ ಮಾಡಿಕೊಂಡಿದ್ದಾನೆ.
ಈ ಘಟನೆ ನಡೆದಾಗ ಸಿಧೇಶ್ ಐವರು ಸ್ನೇಹಿತರು ಜೊತೆಯಲ್ಲೇ ಇದ್ದು, ತಂದೆ ಪ್ರಕಾಶ್ ಜಂಗಮ್‍ನನ್ನು ಕರೆಸಿದ್ದಾರೆ. ಅಷ್ಟರಲ್ಲಿ ಸಿಧೇಶ್ ತಲೆಗೆ ಗುಂಡು ಬಿದ್ದು, ತಲೆ, ಮೂಗಿನಲ್ಲಿ ರಕ್ತ ಬಂದಿದೆ. ಇದನ್ನು ಕಂಡು ಭಯಗೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳದಲ್ಲಿ ಇದ್ದ ಐವರು ಸ್ನೇಹಿತರನ್ನು ವಿಚಾರಣೆ ಮಾಡಿದ್ದಾರೆ. ಜೊತೆಗೆ ಲೈಸನ್ಸ್ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ಮನೆಯಲ್ಲಿ ಇಟ್ಟುಕೊಂಡ ಕಾರಣ ಭಾರತ್ ಶೇರ್ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿಗೆ ಕೋಲಾರದ ಕೊರೊನಾ ನಂಟು ಅಂಟಿದೆ. ಕೋಲಾರದ ಮಾಲೂರಿನಲ್ಲಿ ವಾಸವಾಗಿದ್ದ ಶಿಡ್ಲಘಟ್ಟ ತಾಲೂಕು ಮಳ್ಳೂರು ಗ್ರಾಮದ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಮೂಲತಃ ಚಾಲಕನಾಗಿದ್ದ ಸೋಂಕಿತ ಕಳೆದ ಶನಿವಾರ ಸ್ವಗ್ರಾಮ ಮಳ್ಳೂರಿಗೆ ಆಗಮಿಸಿ ವಾಪಾಸ್ಸಾಗಿದ್ದರು. ಸ್ವಗ್ರಾಮಕ್ಕೆ ಬಂದಿದ್ದ ಸೋಂಕಿತ ಸ್ನೇಹಿತರ ಜೊತೆ ಸೇರಿ ಮದ್ಯದ ಪಾರ್ಟಿ ಸಹ ನಡೆಸಿದ್ದರು. ಹೀಗಾಗಿ ಅವರ ಜೊತೆ ಮದ್ಯದ ಪಾರ್ಟಿಯಲ್ಲಿ ಭಾಗಿಯಾಗಿದ್ದ 07 ಮಂದಿ ಸ್ನೇಹಿತರು ಹಾಗೂ 09 ಮಂದಿ ಕುಟುಂಬಸ್ಥರು ಸೇರಿ ಒಟ್ಟು 16 ಮಂದಿಯನ್ನ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ.
16 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಇಷ್ಟು ದಿನ ಶಿಡ್ಲಘಟ್ಟ ತಾಲೂಕಿನಲ್ಲಿ ಯಾವುದೇ ಸೋಂಕಿತ ಪ್ರಕರಣ ಪತ್ತೆಯಾಗಿರಲಿಲ್ಲ. ಈಗ ಈ ಸೋಂಕಿತ ಯುವಕ ಸ್ವಗ್ರಾಮಕ್ಕೆ ಬಂದು ಹೋಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಶಿಡ್ಲಘಟ್ಟಕ್ಕೂ ಕೊರೊನಾ ಸೋಂಕಿನ ನಂಟು ಅಂಟಿದೆ.
ಚಿತ್ರದುರ್ಗ: ಪೊಲೀಸ್ ಪೇದೆ ಕರ್ತವ್ಯ ಮರೆತು ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಪಲ್ಲವಗೆರೆ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ರಾಜು ಚವ್ಹಾಣ್ ಅವರನ್ನು ಭರಮಸಾಗರದ ಚೆಕ್ ಪೋಸ್ಟ್ ಗೆ ಪರಿಶೀಲನೆಗಾಗಿ ಹಾಕಲಾಗಿತ್ತು. ಕೊರೊನಾ ಭೀತಿ ಹಿನ್ನೆಲೆ 40 ದಿನಗಳ ಕಾಲ ಲಾಕ್‍ಡೌನ್ ಮಾಡಲಾಗಿತ್ತು. ಇದೀಗ ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಎಲ್ಲಡೆ ಮದ್ಯ ಮಾರಟಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ಫುಲ್ ಖುಷಿಯಾದ ಪೇದೆ ರಾಜು ಚವ್ಹಾಣ್ ಕರ್ತವ್ಯ ಮರೆತು ತಮ್ಮ ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದಾರೆ.
ಲಾಕ್‍ಡೌನ್ ಸಡಲಿಕೆಯಿಂದಾಗಿ ನಿನ್ನೆ ಪಲ್ಲವಗೆರೆ ಗ್ರಾಮದ ಸುತ್ತ ಬೀಟ್‍ಗೆ ಹಾಕಲಾಗಿತ್ತು. ಅದರಂತೆ ಕರ್ತವ್ಯ ನಿರ್ವಹಿಸಲು ಹೋಗಿದ್ದ ರಾಜು ಈರುಳ್ಳಿ ಜಮೀನಿನ ಮರದ ಕೆಳಗೆ ಕುಳಿತು ಗ್ರಾಮದ ಸ್ನೇಹಿತರ ಜೊತೆ ಪೋಲಿಸ್ ಸಮವಸ್ತ್ರದಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಾರ್ಟಿಯಲ್ಲಿ ಕುಡಿದು ಅಲ್ಲಿನ ಯುವಕರಿಗೆ ಕಾನೂನಿನ ಪಾಠ ಮಾಡಿದ್ದಾರೆ. ನಿವೃತ್ತ ಯೋಧರಾಗಿರುವ ರಾಜು, 2017ರಲ್ಲಿ ಸೇನೆಯಿಂದ ಬಂದು ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ಹೇಳಲಾಗುತ್ತಿದೆ. ಇವರ ಕೃತ್ಯದಿಂದಾಗಿ ಖಡಕ್ ಪೊಲೀಸರಿಗೆ ಇರಿಸುಮುರಿಸು ಉಂಟಾಗಿದ್ದು, ರಾಜು ಅವರ ನಿರ್ಲಕ್ಷ್ಯ ಹಾಗೂ ಬೇಜಾವಬ್ದಾರಿತನಕ್ಕೆ ಸಿಬ್ಬಂದಿ ತಲೆತಗ್ಗಿಸುವಂತಾಗಿದೆ. ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಚಿತ್ರದುರ್ಗ ಎಸ್ಪಿ ರಾಧಿಕಾ.ಜಿ ಪೇದೆ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲಾತಾಣಗಳಲ್ಲಿ ನಡೆದಿದೆ.
ಮೈಸೂರು: ಎಣ್ಣೆ ಪಾರ್ಟಿಯಲ್ಲಿ ಲವ್ ವಿಚಾರದಿಂದ ಮೂವರು ಸ್ನೇಹಿತರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಜಿಲ್ಲೆಯ ಕ್ಯಾತಮಾರನಹಳ್ಳಿಯಲ್ಲಿ ಕೊಲೆ ನಡೆದಿದೆ.
ಸೋಮವಾರ ಮದ್ಯ ಸಿಕ್ಕ ಖುಷಿಯಲ್ಲಿ ಯುವಕರು ಪಾರ್ಟಿ ಮಾಡಿದ್ದರು. ಕ್ಯಾರಮಾರನಹಳ್ಳಿಯ ಮಧು, ಕಿರಣ್ ಮತ್ತು ಸತೀಶ್ ಮೂವರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಪಾರ್ಟಿ ವೇಳೆ ಗೆಳೆಯರ ಮಧ್ಯೆ ಪ್ರೇಮ ವಿಷಯಗಳು ಪ್ರಸ್ತಾಪವಾಗಿ ಜಗಳ ಉಂಟಾಗಿದೆ. ನಶೆಯಲ್ಲಿದ್ದ ಮಧು ಮತ್ತು ಕಿರಣ್ ಇಬ್ಬರು ಚಾಕುವಿನಿಂದ ಇರಿದು ಸತೀಶ್ ನನ್ನು ಕೊಲೆಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಲೆಯ ಬಳಿಕ ಮಧು ಮತ್ತು ಕಿರಣ್ ಪರಾರಿಯಾಗಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಮ್: ಕೆಲವರು ಬಾಲ್ಕನಿಯಲ್ಲಿಯೇ ನಿಂತು ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಕೊರೊನಾದಿಂದ ಮನೆಯಲ್ಲಿ ಕುಳಿತಿರುವ ಜನರು ಟೈಂಪಾಸ್ ಗಾಗಿ ಹೊಸ ಮಾರ್ಗಗಳನ್ನು ಕಂಡು ಹಿಡಿದಿಕೊಳ್ಳುತ್ತಿದ್ದಾರೆ. ಕೊರೊನಾದಿಂದ ಒಟ್ಟಾಗಿ ಸೇರಿ ಪಾರ್ಟಿ ಮಾಡೋದು ಅಪಾಯ. ಹಾಗಾಗಿ ಇಟಲಿಯ ಕೆಲ ಜನರು ತಮ್ಮ ಮನೆಯ ಬಾಲ್ಕನಿಗಳಲ್ಲಿ ನಿಂತು ನೆರೆಹೊರೆಯವರು ಸಖತ್ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ.
ವೈರಲ್ ವಿಡಿಯೋ: ಪಾರ್ಟಿ ಎಂದ್ರೆ ಎಲ್ಲರೂ ಗ್ಲಾಸ್ ಹಿಡಿದು ಚೀಯರ್ಸ್ ಅಂದಾಗಲೇ ಒಂದು ರೀತಿಯ ಖುಷಿ ಇರುತ್ತೆ. ಅಕ್ಕಪಕ್ಕದ ಕಟ್ಟಡಗಳಲ್ಲಿ ಇವರು ಇರೋದರಿಂದ ವೈನ್ ತುಂಬಿದ ಗ್ಲಾಸ್ ಗಳಿಗೆ ಉದ್ದನೆಯ ಬಂಬೂ ಕಟ್ಟಿದ್ದಾರೆ. ಈ ಬಂಬೂಗಳ ಮೂಲಕ ಗ್ಲಾಸ್ ಮುಂದೆ ತಂದು ಎಲ್ಲರೂ ಚೀಯರ್ಸ್ ಮಾಡಿ ಪಾರ್ಟಿ ಎಂಜಾಯ್ ಮಾಡಿರೋದನ್ನು ವಿಡಿಯೋದಲ್ಲಿ ಕಾಣಬಹುದು.
ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್‍ಡೌನ್ ಅಸ್ತ್ರವನ್ನು ಬಳಸಿವೆ. ಕೊರೊನಾ ತಡೆಯಲು ಜನರು ಮನೆಯಿಂದ ಹೊರ ಬರದಂತೆ ಸರ್ಕಾರಗಳು ಮನವಿ ಮಾಡಿಕೊಂಡಿವೆ. ಅಗತ್ಯ ವಸ್ತುಗಳಿಗೆ ಮನೆಯಿಂದ ಹೊರ ಬಂದ್ರು ಮಾಸ್ಕ್ ಕಡ್ಡಾಯ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿವೆ. ಕೊರೊನಾ ಆತಂಕದಿಂದ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ.
ಚಿಕ್ಕಮಗಳೂರು: ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮಹಾಮಾರಿ ಕೊರೊನ ಸೋಂಕಿತರ ಸಂಖ್ಯೆ ಹಾಗೂ ಶಂಕಿತರ ಸಂಖ್ಯೆ ಬೆಳೆಯುತ್ತಲೇ ಇದೆ. ಸರ್ಕಾರ ಮನೆಯಿಂದ ಹೊರಬರಬೇಡಿ ಎಂದು ಮನವಿ ಮಾಡುತ್ತಲೇ ಇದೆ. ಆದರೆ ಜನರಿಗೆ ಬುದ್ಧಿ ಬರುತ್ತಿಲ್ಲ. ಮಾಡಬೇಡಿ ಅಂದಿದ್ದನ್ನೇ ಜಾಸ್ತಿ ಮಾಡುತ್ತಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಗುಂಪು ಸೇರಬೇಡಿ ಎಂದು ಜಿಲ್ಲಾಡಳಿತ, ಪೊಲೀಸರು ಹಾಗೂ ಆರೋಗ್ಯ ಇಲಾಖೆ ಎಷ್ಟೇ ಮನವಿ ಮಾಡಿದರು ಜನ ಮತ್ತದ್ದನ್ನೇ ಮಾಡುತ್ತಿದ್ದಾರೆ. ಇಂದು ಕೂಡ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ತೋಟದ ಮನೆಯಲ್ಲಿ ಪೂಜೆ ಮಾಡಿ ನಾನ್‍ವೆಜ್ ಅಡುಗೆ ಮಾಡಿ ಪಾರ್ಟಿ ಮಾಡುತ್ತಿದ್ದವರನ್ನು ಎನ್.ಆರ್.ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದಾಗ, 14 ಹೆಂಗಸರು ಹಾಗೂ ಇಬ್ಬರು ಗಂಡಸರು ತೋಟದ ಮನೆಯಲ್ಲಿ ಪೂಜೆ ಮಾಡಿ ಅಡುಗೆ ಮಾಡಿದ್ದಾರೆ. ಕರ್ಫ್ಯೂ ಮಾದರಿಯ 144 ಸೆಕ್ಷನ್ ಲಾಕ್‍ಡೌನ್ ಜಾರಿ ಇದ್ದರೂ ಗುಂಪು ಸೇರಿದ ಆರೋಪದಡಿ 16 ಜನರನ್ನೂ ಬಂಧಿಸಿರೋ ಪೊಲೀಸರು ಎಲ್ಲರ ವಿರುದ್ಧ ದೂರು ದಾಖಲಿಸಿ, ವೈದ್ಯರ ಬಳಿ ಪರೀಕ್ಷೆಗೊಳಪಡಿಸಿದ್ದಾರೆ. ಬಳಿಕ ಎನ್.ಆರ್.ಪುರದ ಸರ್ಕಾರಿ ಆಸ್ಪತ್ರೆಯ ಆವರಣದ ಕೊರೊನ ವಿಶೇಷ ಚಿಕಿತ್ಸಾ ಘಟಕಕ್ಕೆ ಬಿಟ್ಟಿದ್ದು ಊಟ-ವಸತಿ ಸೌಲಭ್ಯ ಕಲ್ಪಿಸಿದ್ದಾರೆ.
ನವದೆಹಲಿ: ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ವಿರುದ್ಧ ಲಕ್ನೋ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಮಾರ್ಚ್ ಆರಂಭದಲ್ಲಿ ಲಂಡನ್‍ನಿಂದ ಭಾರತಕ್ಕೆ ವಾಸಪ್ ಆಗಿದ್ದ ಕನ್ನಿಕಾ ಅವರಿಗೆ ಡೆಡ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಸೋಂಕು ಇತರರಿಗೆ ಹರಡದಂತೆ ಅಗತ್ಯವಾದ ನಿರ್ದೇಶನಗಳನ್ನು ಪಾಲಿಸದ ಹಿನ್ನೆಲೆ ಲಕ್ನೋ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಶುಕ್ರವಾರ ಕನ್ನಿಕಾ ಅವರ ಕೋವಿಡ್-19 ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಇದಕ್ಕೂ ಮೊದಲು ಹಲವು ವಿಐಪಿಗಳನ್ನು ಕನ್ನಿಕಾ ಪಾರ್ಟಿಯಲ್ಲಿ ಭೇಟಿಯಾಗಿದ್ದರು. ಹೀಗಾಗಿ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಕನ್ನಿಕಾ ಅವರಿ ಸೋಂಕು ತಗುಲಿರುವುದು ದೃಢಪಟ್ಟ ಬಳಿಕ ಅವರಿಗೆ ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ (ಕೆಜಿಎಂಯು)ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಆದರೆ ಲಕ್ನೋ ಮುಖ್ಯ ವೈದ್ಯಕೀಯ ಅಧಿಕಾರಿಯೊಬ್ಬರು ಕನ್ನಿಕಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ದೂರಿದ್ದು, ಈ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 188, 269, 270ರ ಅಡಿಯಲ್ಲಿ ಲಕ್ನೋನ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಕನ್ನಿಕಾ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ಹಜರತ್‍ಗಂಜ್ ಮತ್ತು ಗೋಮ್ಟಿನಗರ ಪೊಲೀಸ್ ಠಾಣೆಗಳಲ್ಲಿಯೂ ಕನ್ನಿಕಾ ವಿರುದ್ಧ ಇನ್ನೂ ಎರಡು ಎಫ್‍ಐಆರ್ ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಪ್ರದೇಶದ ಮೂರು ವಿಭಿನ್ನ ಪಾರ್ಟಿಗಳಲ್ಲಿ ಕನ್ನಿಕಾ ಮಾರ್ಚ್ 11ರಂದು ಲಂಡನ್‍ನಿಂದ ವಾಪಸ್ ಬಂದ ಬಳಿಕ ಭಾಗಿಯಾಗಿದ್ದರು. ಈ ಹಿನ್ನೆಲೆ ಇನ್ನೂ ಅವರ ಮೇಲೆ ಇನ್ನೂ ಎರಡು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Vasundhara Raje, son Dushyant Singh self-quarantine after attending party with Kanika Kapoor
ಕಾನಿಕಾ ಕಪೂರ್ ಬೇರೆ ಬೇರೆ ದಿನಗಳಲ್ಲಿ ಒಟ್ಟು ಮೂರು ಪಾರ್ಟಿಗಳಲ್ಲಿ ಭಾಗಿಯಾಗಿದ್ದರು. ಉನ್ನತ ರಾಜಕಾರಣಿಗಳು ಸೇರಿದಂತೆ ಹಲವಾರು ವಿಐಪಿಗಳನ್ನು ಭೇಟಿ ಮಾಡಿದ್ದರು. ಪಾರ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ ಅವರು ಕನ್ನಿಕಾರ ಸಂಪರ್ಕಕ್ಕೆ ಬಂದಿದ್ದರು. ಈ ಹಿನ್ನೆಲೆ ಈ ನಾಯಕರು ತಮ್ಮನ್ನು ತಾವು ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.
Correction – Singer Kanika Kapoor (in file pic), who tested positive for #COVID19, stayed at Taj Hotel in Lucknow and attended several functions in the city, booked for negligence by Uttar Pradesh police. pic.twitter.com/WsUUzBP6KL
ಲಂಡನ್‍ನಿಂದ ಬಂದ ಬಳಿಕ ಕನ್ನಿಕಾ ಐಷಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದರು, ಅಲ್ಲದೇ ಕಾನ್ಪುರದ ಸಂಬಂಧಿಕರ ಮನೆಗೆ ಕನ್ನಿಕಾ ಭೇಟಿ ಕೊಟ್ಟಿದ್ದರು ಎಂದು ಲಕ್ನೋನ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಕೊರೊನಾ ಹಬ್ಬಿದ್ದು ಹೇಗೆ?
ಭಾರತದಲ್ಲಿ ಇದುವರೆಗೆ ಸೋಂಕಿತ ಪ್ರಕರಣ 246 (ಅಧಿಕೃತ ಪಟ್ಟಿ, ನಿನ್ನೆ ರಾತ್ರಿ 12 ಗಂಟೆಯವರೆಗೆ) ವರದಿಯಾಗಿದೆ. ಇದರಲ್ಲಿ ವಿದೇಶದಿಂದ ಬಂದ 136 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿದೇಶದಿಂದ ಬಂದವರ ಜೊತೆ ಸಂಪರ್ಕದಿಂದ 105 ಮಂದಿಗೆ ಸೋಂಕು ತಗುಲಿದೆ.
The total number of positive cases of #COVID19 in India now stands at 258 (including 39 foreigners), 4 deaths (1 each) in Delhi, Karnataka, Punjab and Maharashtra: Ministry of Health and Family Welfare pic.twitter.com/oJhLdpl5oA
ಜನವರಿ 30 ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತ ಮೊದಲ ಕೇಸ್ ವರದಿಯಾಗಿತ್ತು. ಆದರೆ ಮಾರ್ಚ್ 10ರಂದು ದೇಶದಲ್ಲಿ ಸೋಂಕಿತರ ಸಂಖ್ಯೆ 50ಕ್ಕೆ ಮುಟ್ಟಿತ್ತು. ಸದ್ಯ ಮಾರ್ಚ್ 20ರವರೆಗೆ ಸೋಂಕಿತರ ಸಂಖ್ಯೆ 249ಕ್ಕೆ ತಲುಪಿದೆ.
24 ಗಂಟೆಗಳಲ್ಲಿ ಪತ್ತೆಯಾದ ಹೊಸ ಪ್ರಕರಣಗಳು:
ಭಾರತದಲ್ಲಿ 55 ಹೊಸ ಪ್ರಕರಣ ದಾಖಲಾಗಿದೆ. ಇತ್ತ ಇಟಲಿಯಲ್ಲಿ 5986, ಸ್ಪೇನ್‍ನಲ್ಲಿ 3494, ಜರ್ಮನಿಯಲ್ಲಿ 4528, ಅಮೆರಿಕದಕಲ್ಲಿ 5861, ಇರಾನ್‍ನಲ್ಲಿ 1237, ಫ್ರಾನ್ಸ್ ನಲ್ಲಿ 1617 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.
ಮೈಸೂರು: ಪಾರ್ಟಿ ಮಾಡಲೆಂದು ಸ್ನೇಹಿತನ ಜೊತೆ ಮನೆ ಬಿಟ್ಟು ಹೋದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನೋಜ್ ಕುಮಾರ್ ಮೃತ ದುರ್ದೈವಿ. ತಗಡೂರು ಗ್ರಾಮದ ನಿವಾಸಿ ಮನೋಜ್ ಕುಮಾರ್, ಗುರುವಾರ ಸಂಜೆ ಸ್ನೇಹಿತ ವಿಜಯ್ ಕುಮಾರ್ ಜೊತೆ ಬೈಕಿನಲ್ಲಿ ತೆರಳಿದ್ದ. ಇದೀಗ ನಾಲೆಯ ತೂಬಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಸೋನಹಳ್ಳಿ ಗ್ರಾಮದ ತಗಡೂರು ರಾಮಚಂದ್ರರಾವ್ ನಾಲೆ ಬಳಿ ಇಬ್ಬರೂ ಬಿಯರ್ ಕುಡಿಯುತ್ತಿದ್ದರು. ಬಿಯರ್ ಪಾರ್ಟಿಗೆ ಇಬ್ಬರು ಅಪರಿಚಿತರು ಸೇರಿಕೊಂಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿ ವಿಜಯ್ ಕುಮಾರ್ ಬೈಕನ್ನು ನಾಲೆಗೆ ತಳ್ಳಿದ್ದು, ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.
ಸ್ವಲ್ಪ ಸಮಯದ ನಂತರ ಹಿಂದಿರುಗಿ ಬಂದಾಗ ಮನೋಜ್ ಕುಮಾರ್ ಕೂಡ ಅಲ್ಲಿ ಇರಲಿಲ್ಲ. ಆಗ ವಿಜಯಕುಮಾರ್, ಮನೋಜ್ ಕುಮಾರ್ ಪೋಷಕರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಾಲೆ ಬಳಿ ಹುಡುಕಾಡಿದಾಗ ಮನೋಜ್ ಶವ ಪತ್ತೆಯಾಗಿದೆ. ಮನೋಜ್‍ನ ಕಿವಿ, ಮರ್ಮಾಂಗ ಹಾಗೂ ಹುಬ್ಬುಗಳ ಮೇಲೆ ಗಾಯವಾಗಿದ್ದು, ಪೋಷಕರು ಕೊಲೆ ಆರೋಪದ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.