– ಬರ್ತ್ ಡೇ ದಿನವೇ ಪಾರ್ಟಿಯಲ್ಲಿ ಹೆಣವಾದ ರೌಡಿ ಶೀಟರ್
– ಕೊಲೆಗೈದ ಸ್ನೇಹಿತರು ಪರಾರಿ
ಮೈಸೂರು: ಬಿಯರ್ ಬಾಟಲಿನಿಂದ ಚುಚ್ಚಿ ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನನ್ನು ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಎಂದು ಗುರುತಿಸಲಾಗಿದೆ. ಗುರುವಾರ ಆನಂದ್ ಹುಟ್ಟುಹಬ್ಬವಿದ್ದು, ಕುವೆಂಪು ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನಲ್ಲಿ ರೂಮ್ ಮಾಡಿಕೊಂಡು ಪಾರ್ಟಿ ಮಾಡುತ್ತಿದ್ದಾಗ ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾನೆ.
ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಆನಂದ್, ನಂತರ ವಾಪಸ್ ಬಂದು ಸರ್ವಿಸ್ ಅಪಾರ್ಟ್‍ಮೆಂಟ್ ನಲ್ಲಿ ರೂಮ್ ಫಿಕ್ಸ್ ಮಾಡಿ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ. ಪಾರ್ಟಿ ನಡೆಯುವಾಗಲೇ ಸ್ನೇಹಿತರೊಂದಿಗೆ ಮಾತಿನ ಚಕಮಕಿಯಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಬಿಯರ್ ಬಾಟಲಿಯಿಂದ ಸ್ನೇಹಿತರೇ ಆನಂದನಿಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆ ಮಾಡಿದ್ದ ಆನಂದ್
ಬಿಜೆಪಿ ಮುಖಂಡ ರಾಜೀವ್ ಬೆಂಬಲಿಗನಾಗಿದ್ದ ಆನಂದ್, ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ. ಕಳೆದ 13 ವರ್ಷಗಳ ಹಿಂದೆ ಜನತಾನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನನ್ನು ಮರ್ಡರ್ ಮಾಡಿದ್ದ. ನಂತರ ಜೈಲು ಶಿಕ್ಷೆ ಅನುಭವಿಸಿ ವಾಪಸ್ ಆಗಿದ್ದ. ಆತನ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಓಪನ್ ಮಾಡಲಾಗಿತ್ತು. ಆದ್ದರಿಂದ ಹಳೇ ವೈಷಮ್ಯದ ಮೇಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುವೆಂಪುನಗರ ಪೊಲೀಸರು, ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಓರ್ವ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಸ್ಪರ್ಧಿ ದೀಪಿಕಾ ದಾಸ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಿಗ್‍ಬಾಸ್ ಸ್ಪರ್ಧಿಗಳು ಭಾಗಿಯಾಗಿ ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ದೀಪಿಕಾ ದಾಸ್ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದರು. ಇದೀಗ ಮತ್ತೆ ಬಿಗ್‍ಬಾಸ್ ಸ್ಪರ್ಧಿಗಳ ಜೊತೆ ತಮ್ಮ ಬರ್ತ್ ಡೇ ಪಾರ್ಟಿಯನ್ನು ಮಾಡಿಕೊಂಡಿದ್ದಾರೆ. ಈ ಬಾರಿ ದೀಪಿಕಾ ಹುಟ್ಟುಹಬ್ಬ ತುಂಬಾ ವಿಶೇಷವಾಗಿತ್ತು. ಯಾಕೆಂದರೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ‘ಬಿಗ್‍ಬಾಸ್-7’ ನ ಸ್ಪರ್ಧಿಗಳೆಲ್ಲರೂ ಭಾಗಿಯಾಗಿ ಸಂಭ್ರಮಿಸಿದ್ದಾರೆ.
https://www.instagram.com/p/B9JC2TkFPg1/
ಪಾರ್ಟಿಯಲ್ಲಿ ಜೈ ಜಗದೀಶ್, ಅವರ ಪತ್ನಿ ವಿಜಯಲಕ್ಷ್ಮಿ, ಸುಜಾತ, ಶೈನ್ ಶೆಟ್ಟಿ, ಚಂದನ್ ಆಚಾರ್, ಕಿಶನ್, ವಾಸುಕಿ, ಚಂದನಾ, ಹರೀಶ್ ರಾಜ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಬಿಗ್‍ಬಾಸ್ ನಂತರ ದೀಪಿಕಾ ಹುಟ್ಟುಹಬ್ಬದ ಪಾರ್ಟಿಯಲ್ಲಿ ಎಲ್ಲರೂ ಮತ್ತೆ ಒಟ್ಟಾಗಿ ಸೇರಿ ಸಖತ್ ಆಗಿ ಎಂಜಾಯ್ ಮಾಡಿದ್ದಾರೆ.
https://www.instagram.com/p/B9JCrOCFxZA/
ದೀಪಿಕಾ ದಾಸ್ ಪಾರ್ಟಿಯಲ್ಲಿ ಕ್ಲಿಕ್ಕಿಸಿಕೊಂಡಿದ್ದ ಕೆಲವು ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಕೇಕ್ ಮಾಡಿ ಎಲ್ಲರಿಗೂ ತಿನ್ನಿಸಿದ ವಿಡಿಯೋವನ್ನು ಅಪ್ಲೋಡ್ ಮಾಡಿಕೊಂಡಿದ್ದು, ಎಲ್ಲರೀಗೂ ಧನ್ಯವಾದ ತಿಳಿಸಿದ್ದಾರೆ. ದೀಪಿಕಾ ದಾಸ್ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದರು. ಅಲ್ಲಿಂದ ಬಿಗ್‍ಬಾಸ್ ಮನೆಗೆ ಹೋಗಿ ಮತ್ತಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.
ನವದೆಹಲಿ: ದೊಡ್ಡ ಹೋಟೆಲ್‍ಗಳು, ರೆಸ್ಟೋರೆಂಟ್‍ಗಳಲ್ಲಿ ಪಾರ್ಟಿ ಮಾಡಿ ಬೋರ್ ಆಗಿದ್ರೆ, ಇನ್ಮುಂದೆ ನೀವೂ ಮೆಟ್ರೋ ರೈಲು ಬೋಗಿಗಳಲ್ಲೂ ಶುಭ ಸಮಾರಂಭಗಳು, ಸಣ್ಣಪುಟ್ಟ ಪಾರ್ಟಿಗಳನ್ನು ಮಾಡಬಹುದು. ಅಚ್ಚರಿ ಎನಿಸಿದರೂ ಇಂತಹದೊಂದು ವಿನೂತನ ಪ್ರಯತ್ನಕ್ಕೆ ನೊಯ್ಡಾ ಮೆಟ್ರೋ ರೈಲು ನಿಗಮ ಮುಂದಾಗಿದೆ.
ನೊಯ್ಡಾ ಮೆಟ್ರೋ ರೈಲು ನಿಗಮ (ಎನ್‌ಎಂಆರ್‌ಸಿ) ಬರ್ತ್ ಡೇ ಪಾರ್ಟಿ, ಪ್ರೀ ವೆಡ್ಡಿಂಗ್ ಪಾರ್ಟಿ ಇತರೆ ಚಿಕ್ಕಪುಟ್ಟ ಶುಭ ಕಾರ್ಯಕ್ರಮಗಳನ್ನು ರೈಲು ಬೋಗಿಯಲ್ಲಿ ಆಯೋಜಿಸಲು ಮುಂದಾಗಿದೆ. ಗಂಟೆಗಳ ಲೆಕ್ಕದಲ್ಲಿ ಸಾರ್ವಜನಿಕರಿಗೆ ಬಾಡಿಗೆ ಕೊಡಲು ಎನ್‌ಎಂಆರ್‌ಸಿ ನಿರ್ಧರಿಸಿದೆ.
ಹೊಸ ಆದಾಯದ ಮೂಲ ಹುಡುಕಲು ಪ್ರಯತ್ನಿಸಿರುವ ಎನ್‌ಎಂಆರ್‌ಸಿ ಪ್ರತಿ ಗಂಟೆಗೆ 5 ರಿಂದ 10 ಸಾವಿರಕ್ಕೆ ಮೆಟ್ರೋ ಬೋಗಿಗಳನ್ನು ಬಾಡಿಗೆ ನೀಡಲು ನಿರ್ಧರಿಸಿದೆ. ಸಂಚಾರಿ ಮೆಟ್ರೋ ಅಥವಾ ನಿಗದಿತ ಸ್ಥಳದಲ್ಲಿ ನಿಂತ ಮೆಟ್ರೋ ಬೋಗಿಗಳನ್ನು ಬಾಡಿಗೆ ನೀಡಲು ಸಿದ್ಧವಾಗಿದ್ದು ಪಾರ್ಟಿಯಲ್ಲಿ ಗರಿಷ್ಠ 50 ಮಂದಿಗೆ ಮಾತ್ರ ಭಾಗವಹಿಸಲು ಷರತ್ತು ವಿಧಿಸಿದೆ.
ನಿಗದಿತ ಸ್ಥಳದಲ್ಲಿ ನಿಂತ ಮೆಟ್ರೋದಲ್ಲಿ ಪಾರ್ಟಿ ಮಾಡಲು 5,000, ಸಂಚಾರಿ ಮೆಟ್ರೋ ಬೋಗಿ ಬಳಕೆಗೆ 8,000, ಅಲಂಕೃತ ಸಂಚಾರಿ ಮೆಟ್ರೋಗಾಗಿ 10,000 ಹಾಗೂ ಅಲಂಕೃತ ಸಂಚಾರ ರಹಿತ ಮೆಟ್ರೋ ಬೋಗಿಗಾಗಿ 7,000 ಬಾಡಿಗೆ ನಿಗದಿ ಮಾಡಿದೆ. ಮೆಟ್ರೋ ಬೋಗಿ ಬಾಡಿಗೆ ಪಡೆಯಲು ಇಚ್ಛಿಸುವವರು 15 ದಿನಗಳ ಮೊದಲು ಕಾರ್ಯಕ್ರಮದ ವಿವರಗಳೊಂದಿಗೆ ಬುಕ್ ಮಾಡಬೇಕಿದೆ.
ಸಂಚಾರಿ ಮೆಟ್ರೋ ಬೋಗಿಗಾಗಿ ಯಾವುದೇ ಸಮಯವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಸ್ಥಿರ ಮೆಟ್ರೋ ಬೋಗಿಗಾಗಿ ರಾತ್ರಿ 11 ರಿಂದ 2 ಗಂಟೆಯ ನಡುವೆ ಬುಕ್ಕಿಂಗ್ ಮಾಡಿಕೊಳ್ಳಬಹುದು. ಮೆಟ್ರೋ ಬೋಗಿ ಕಾಯ್ದಿರಿಸಲು 20,000 ರೂಪಾಯಿ ಮುಂಗಡ ಹಣ ಪಾವತಿಸಬೇಕಿದ್ದು ಕಾರ್ಯಕ್ರಮದ ಬಳಿಕ ಎನ್‌ಎಂಆರ್‌ಸಿ ವಾಪಸ್ ನೀಡಲಿದೆ.
ಕೊಡಗು ವಿರಾಜಪೇಟೆ ಮೂಲದ ಸಚಿನ್ ಕಣ್ಮರೆಯಾಗಿರುವ ಟೆಕ್ಕಿ. ಸಚಿನ್ ಮತ್ತು ಆರ್‌ಟಿ ನಗರದ ಉಲ್ಲಾಸ್ ಇಬ್ಬರೂ ಟೆಕ್ಕಿಗಳಾಗಿದ್ದು, ಶುಕ್ರವಾರ ರಾತ್ರಿ ಕಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದರು. ಮುಂಜಾನೆ ಸುಮಾರು 3 ಗಂಟೆಗೆ ಇಬ್ಬರು ಕೆಲ್ಕೆರೆ ಕೆರೆ ಏರಿ ಮೇಲೆ ಬಂದಿದ್ದರು. ಈ ವೇಳೆ ಕೆರೆ ಏರಿ ಮೇಲೆ ತೆಪ್ಪ ಕಂಡು ತೆಪ್ಪದಲ್ಲಿ ವಿಹಾರಕ್ಕೆ ಹೊರಟ್ಟಿದ್ದರು.
ತೆಪ್ಪದಲ್ಲಿ ಹೋಗುವಾಗ ಹುಟ್ಟು ಜಾರಿ ನೀರಿಗೆ ಬಿದ್ದಿದೆ. ಈ ವೇಳೆ ಕೈಯಲ್ಲಿ ತೆಪ್ಪ ನಡೆಸುವಾಗ ತೆಪ್ಪ ಮಗುಚಿ ಇಬ್ಬರು ಟೆಕ್ಕಿಗಳು ಕೆರೆಗೆ ಬಿದ್ದಿದ್ದಾರೆ. ಟೆಕ್ಕಿ ಉಲ್ಲಾಸ ಈಜಿ ದಡ ಸೇರಿದ ಬದುಕುಳಿದ್ದಾರೆ. ಆದರೆ ಸಚಿನ್ ಮಾತ್ರ ಎಲ್ಲೂ ಪತ್ತೆಯಾಗಿಲ್ಲ. ತಕ್ಷಣ ಉಲ್ಲಾಸ್ ತನ್ನ ಅಣ್ಣನಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬಂದು ಕಲ್ಕೆರೆ ಕೆರೆಯಲ್ಲಿ ಟೆಕ್ಕಿ ಸಚಿನ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಮಧ್ಯಾಹ್ನನವಾದರೂ ಸಚಿನ್ ಪತ್ತೆಯಾಗಿಲ್ಲ.
ಉಲ್ಲಾಸ್ ಬ್ಯಾಗ್ ಹಾಕಿಕೊಂಡಿದ್ದರು. ಹೀಗಾಗಿ ಬ್ಯಾಗ್ ಹಾಕಿದ್ದರಿಂದ ಸೇಫ್ ಆಗಿ ಉಲ್ಲಾಸ್ ದಡ ಸೇರಿದ್ದಾರೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ನಡೆದ ಘಟನೆ ನಡೆದಿದೆ. ಸಚಿನ್ ಮಾನ್ಯತಾ ಟೆಕ್ ಪಾರ್ಕ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅಲ್ಲದೇ ಸಚಿನ್‍ಗೆ ಈಜು ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಆದರೆ ತೆಪ್ಪ ಮಗುಚಿದಾಗ ಈಜಿ ದಡ ತಲುಪಲು ವಿಫಲರಾಗಿದ್ದಾರೆ.
ರಾತ್ರಿ ಸುಮಾರು 12 ಗಂಟೆಗೆ ಬೀಟ್ ಬಂದಿದ್ದೆ. ಬಳಿಕ ಮತ್ತೆ 3 ಗಂಟೆಗೆ ಬೀಟ್‍ಗೆ ಬಂದೆ. ಆದರೆ ಈ ವೇಳೆ ರಸ್ತೆ ಪಕ್ಕ ಕುಳಿತುಕೊಂಡು ಓರ್ವ ಅಳುತಿದ್ದರು. ಏನಾಯ್ತು ಅಂತ ಕೇಳಿದಾಗ ಕೆರೆಯಲ್ಲಿ ಮುಳುಗಿರುವ ಬಗ್ಗೆ ಹೇಳಿದರು. ರಾತ್ರಿ ಪಾರ್ಟಿ ಮಾಡೊಕೆ ಬಂದಿದ್ದಾರೆ. ಕುಡಿದು ಹೋದಾಗ ಈ ಘಟನೆ ಆಗಿದೆ. ಶುಕ್ರವಾರ ನಾನೊಬ್ಬನೇ ಇದ್ದೆ. ನಾನು ಬರುವ ವೇಳೆಗಾಗಲೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು. ಯಾರನ್ನೂ ಕೂಡ ಕೆರೆ ಒಳಗೆ ಬಿಡೋದಿಲ್ಲ. ಇವರು ಕುಡಿದು ಬಂದು ತೆಪ್ಪ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆರೆಯ ಸೆಕ್ಯೂರಿಟಿ ರಾಜೇಶ್ ಹೇಳಿದ್ದಾನೆ.
ಅಪರೂಪಕ್ಕೆ ಗೆಳೆಯರು ಭೇಟಿ:
ಸಚಿನ್ ಮತ್ತು ಉಲ್ಲಾಸ್ ಇಬ್ಬರ ಅಪರೂಪಕ್ಕೆ ಭೇಟಿಯಾಗಿದ್ದರು. ಈ ಹಿಂದೆ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಇಬ್ಬರು ಬೇರೆ ಕಂಪನಿಗೆ ಕೆಲಸ ಬದಲಾಯಿಸಿದ್ದರು. ಅದರಂತೆ ಸಚಿನ್ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಉದ್ಯೋಗದಲ್ಲಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಶುಕ್ರವಾರ ಇಬ್ಬರು ಭೇಟಿಯಾಗಿದ್ದರು. ಈ ವೇಳೆ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿಕೊಂಡು ಕೆರೆಯಲ್ಲಿ ವಿಹಾರ ಮಾಡುವುದಕ್ಕೆ ಇಬ್ಬರು ಬಂದಿದ್ದರು. ಆಗ ಸಚಿನ್ ಬಲವಂತ ಮಾಡಿ ಉಲ್ಲಾಸ್ ಕರೆತಂದಿದ್ದರು. ಈ ಹಿಂದೆ ಒಂದು ಬಾರಿ ಇದೇ ರೀತಿ ತೆಪ್ಪದಲ್ಲಿ ವಿಹಾರ ಹೋಗಿ ಬಂದಿದ್ದರು. ಅದೇ ರೀತಿ ರಾತ್ರಿ ತೆಪ್ಪದಲ್ಲಿ ವಿಹಾರ ಮಾಡಲು ಬಂದಿದ್ದರು. ಇಬ್ಬರು ಬಂದ ವೇಳೆ ಈ ಅವಘಡ ಸಂಭವಿದೆ.
ಉಲ್ಲಾಸ್ ಹಾಗೂ ಸಚಿನ್ ಕೆರೆ ಮಧ್ಯದ ಐಲ್ಯಾಂಡ್‍ಗೆ ತೆರಳಲು ಮುಂದಾಗಿದ್ದರು. ಆದರೆ ಸಚಿನ್ ಹೆಚ್ಚು ಭಾರವಿದ್ದ, ಹೀಗಾಗಿ ಒಂದೇ ಕಡೆ ತೆಪ್ಪ ವಾಲಿತ್ತು. ಆದ್ದರಿಂದ ಕೆರೆ ಏರಿಯಿಂದ 100 ಮೀಟರ್ ತೆರಳುತ್ತಿದ್ದಂತೆ ತೆಪ್ಪ ಆಯ ತಪ್ಪಿದೆ. ಈ ವೇಳೆ ನೀರಿನಲ್ಲೇ ಹುಟ್ಟನ್ನು ಬಿಟ್ಟಿದ್ದಾರು. ಆಗ ತೆಪ್ಪದೊಳಗೆ ನೀರು ತುಂಬಿ ಮುಗುಚಿ ಬಿದ್ದಿತ್ತು. ಇಬ್ಬರು ನುರಿತ ಈಜಿಗಾರರಲ್ಲ, ಸಾಧಾರಣ ಈಜು ಕಲಿತಿದ್ದರು. ಸಚಿನ್ ಹೆಚ್ಚು ಭಾರ ಹಾಗೂ ಮದ್ಯಪಾನ ಮಾಡಿದ್ದರಿಂದ ಈಜಲಾಗದೇ ನೀರಿನಲ್ಲಿ ಮುಳುಗಿರೋ ಸಾಧ್ಯತೆ ಇದೆ ಎಂದು ಶಂಕಿಸಲಾಗುತ್ತಿದೆ.
ವರ್ಷದ ಹಿಂದೆ ಮದುವೆ:
ಉಲ್ಲಾಸ್ ಹಾಗೂ ಸಚಿನ್ ಇಬ್ಬರೂ ವರ್ಷದ ಹಿಂದೆ ಮದುವೆಯಾಗಿದ್ದರು. ಕಲ್ಕೆರೆಯ ಯುವತಿಯನ್ನು ಉಲ್ಲಾಸ್ ಮದುವೆಯಾಗಿದ್ದರು. ಅಲ್ಲದೇ ಉಲ್ಲಾಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿಯ ಸಹೋದರ ಕೃಷ್ಣಪ್ಪರ ಅಳಿಯರಾಗಿದ್ದಾರೆ. ಉಲ್ಲಾಸ್ ಹೆಂಡತಿ, ಉಲ್ಲಾಸ್ ಮತ್ತು ಅವರ ಸ್ನೇಹಿತ ಕೆರೆ ಬಳಿ ಹೋಗಿದ್ದರಂತೆ. ಆದರೆ ತೆಪ್ಪ ಮಗುಚಿ ಸಚಿನ್ ಕಾಣಿಸುತ್ತಿಲ್ಲ ಎಂದು ಅಪ್ಪನ ಬಳಿ ವಿಚಾರ ಹೇಳಿದ್ದಾರೆ. ಕೂಡಲೇ ಉಲ್ಲಾಸ್ ಮಾವ ಕೃಷ್ಣಪ್ಪ ಮೀನುಗಾರರಿಗೆ ಫೋನ್ ಮಾಡಿ ಕೆರೆ ಬಳಿ ಬಂದಿದ್ದಾರೆ. ಕಾರಿನಲ್ಲಿ ಇಡೀ ಪ್ರದೇಶವನ್ನು ಒಂದು ರೌಂಡ್ ಬಂದಿದ್ದಾರೆ. ಸಚಿನ್ ಕಾಣದಾದಾಗ ಅವರ ಪತ್ನಿ ಮತ್ತು ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಈ ಘಟನೆಯ ಹಿನ್ನೆಲೆಯನ್ನು ಉಲ್ಲಾಸ್ ಮಾವ ಕೃಷ್ಣಪ್ಪ ಸಂಪೂರ್ಣವಾಗಿ ವಿವರಿಸಿದ್ದಾರೆ.
ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಮುಕ್ತಾಯವಾಗಿದ್ದು, ಈ ಬಾರಿ ಬಿಗ್‍ಬಾಸ್ ಮನೆಯಲ್ಲಿದ್ದ ಅನೇಕರಿಗೆ ಕಿಚ್ಚ ಸುದೀಪ್ ಸ್ಪೆಷಲ್ ಉಡುಗೊರೆಯನ್ನು ಕೊಟ್ಟಿದ್ದಾರೆ. ಇದೀಗ ಬಿಗ್‍ಬಾಸ್ ಮುಗಿಯುತ್ತಿದ್ದಂತೆ ಹರೀಶ್ ರಾಜ್‍ಗೆ ಸುದೀಪ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ.
ಸುದೀಪ್ ಅವರು ಹರೀಶ್ ರಾಜ್ಗೆ ತಮ್ಮ ದುಬಾರಿ ವಾಚನ್ನು ಉಡುಗೊಡೆಯಾಗಿ ಕೊಟ್ಟಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿದ್ದಾಗ ಹರೀಶ್ ಫಿನಾಲೆ ವಾರದಲ್ಲಿ ಮಿಡ್‍ವೀಕ್ ಎಲಿಮಿನೇಟ್ ಆಗುವ ಮೂಲಕ ರಾತ್ರೋರಾತ್ರಿ ಮನೆಯಿಂದ ಹೊರ ಬಂದಿದ್ದರು. ಅಂದು ಮನೆಯಿಂದ ಹೊರ ಬಂದವರು ಬಿಗ್‍ಬಾಸ್ ಫಿನಾಲೆಯಲ್ಲಿ ಸುದೀಪ್ ಜೊತೆ ವೇದಿಕೆ ಹಂಚಿಕೊಡಿದ್ದರು.
ಬಿಗ್‍ಬಾಸ್ ಮನೆಯಲ್ಲಿದ್ದಾಗ ಹರೀಶ್ ಅವರು ಯುವಕರಿಗೆ ಪೈಪೋಟಿ ಕೊಟ್ಟು ಟಾಸ್ಕ್ ಗಳಲ್ಲಿ ಅದ್ಭುತವಾಗಿ ಆಟವಾಡಿದ್ದರು. ಅಲ್ಲದೇ ಮನೆಯಲ್ಲಿದ್ದಷ್ಟು ದಿನ ವೀಕ್ಷಕರಿಗೆ ತಮ್ಮ ನಟನೆ, ಮಿಮಿಕ್ರಿ ಮೂಲಕ ಮನರಂಜನೆ ನೀಡಿದ್ದರು. ಇದು ಸುದೀಪ್‍ಗೆ ತುಂಬಾ ಇಷ್ಟವಾಗಿತ್ತು. ಹೀಗಾಗಿ ಹರೀಶ್‍ಗೆ ತಾವು ಹಾಕಿಕೊಂಡಿದ್ದ ವಾಚನ್ನು ಉಡುಗೊರೆಯಾಗಿ ನೀಡಿದ್ದಾರೆ…
ಈ ಬಗ್ಗೆ ಮಾತನಾಡಿದ ಹರೀಶ್ ರಾಜ್, ಸುದೀಪ್ ಸರ್ ಹೇಳಿದ್ದಂತೆ ಬಿಗ್‍ಬಾಸ್ ಮುಗಿಯುತ್ತಿದ್ದಂತೆ ಎಲ್ಲಾ ಸ್ಪರ್ಧಿಗಳು ಪಾರ್ಟಿ ಮಾಡಿದ್ವಿ. ಈ ವೇಳೆ ಮಾತನಾಡಿದ ಸುದೀಪ್ ಸರ್, ಹರೀಶ್ ರಾಜ್ ಎಲ್ಲರನ್ನು ಮನರಂಜನೆ ನೀಡಿದ್ದಾರೆ. ಅವರಿಗೆ ನಾನು ಏನಾದರು ಕೊಡಬೇಕು ಎಂದು ಎಲ್ಲರ ಮುಂದೆ ಹೇಳಿದರು. ಅಲ್ಲದೇ ಮಾತು ಮುಗಿಯುವ ಮುನ್ನವೇ ತಮ್ಮ ಕೈಯಲ್ಲಿದ್ದ ದುಬಾರಿ ವಾಚನ್ನು ತೆಗೆದು ನನಗೆ ಹಾಕಿದರು ಎಂದರು.
ಸುದೀಪ್ ಸರ್ ನನಗೆ ವಾಚ್ ಹಾಕಿದ ತಕ್ಷಣ ಎಮೋಷನಲ್ ಆದೆ. ಆ ಸಂದರ್ಭದಲ್ಲಿ ನಾನು ಏನು ಮಾತನಾಡಲು ಸಾಧ್ಯವಾಗಿಲ್ಲ. ಆಗ ಸುದೀಪ್ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದೆ ಎಂದು ಹರೀಶ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ರಲ್ಲಿ ಶೈನ್ ಶೆಟ್ಟಿ ವಿನ್ನರ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸಪ್ಲೈಯರ್ ಮೇಲೆ ಹಲ್ಲೆ ಮಾಡಿ ಚಾಕು ಇರಿದಿದ್ದ ಎಂಟು ಜನ ಆರೋಪಿಗಳನ್ನು ಬೆಂಗಳೂರಿನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್‍ಪುರಂ ನಿವಾಸಿಗಳಾದ ಹರಿ (19), ಪ್ರಕಾಶ್ (19), ರಂಜೀತ್ ಕುಮಾರ್ (22), ಸಂತೋಷ್ (19), ಕರಣ್ (20), ವಿಜಯ್ (19) ಸೇರಿದಂತೆ ಎಂಟು ಜನ ಬಂಧಿತ ಆರೋಪಿಗಳು. ಬಾಣಸವಾಡಿಯ ಓಲಿವ್ ರೆಸಿಡೆನ್ಸಿ ಹೋಟೆಲ್‍ನಲ್ಲಿ ಹೊಸ ವರ್ಷಕ್ಕೆಂದು ಎಂಟು ಜನ ಯುವಕರು ಹೋಗಿದ್ದರು. ಪಾರ್ಟಿ ವೇಳೆ ಕುಡಿದು ಜೋರಾಗಿ ಕೂಗಾಡುತ್ತಿದ್ದರು. ಇದನ್ನು ನೋಡಿದ ಸಪ್ಲೈಯರ್ ಇಶಾಂತ್ ಜೋರಾಗಿ ಕೂಗಾಡಬೇಡಿ, ಇತರರಿಗೆ ತೊಂದರೆ ಆಗುತ್ತೆ ಎಂದು ಬುದ್ಧಿವಾದ ಹೇಳಿದ್ದ. ಇದರಿಂದ ಕೋಪಗೊಂಡ ಯುವಕರು ಸಪ್ಲೈಯರ್ ಇಶಾಂತ್‍ಗೆ ಹಿಗ್ಗಾಮುಗ್ಗಾ ಥಳಿಸಿ, ಚಾಕು ಇರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ನ್ಯೂ ಇಯರ್ ಸಂಭ್ರಮದಲ್ಲಿ ಕೀಟಲೆ ಮಾಡಿದ್ದ ನಾಲ್ವರ ಬಂಧನ
ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ ದೃಶ್ಯವು ಹೋಟೆಲ್‍ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಣಸವಾಡಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಆದರೆ ಆರೋಪಿಗಳು ಪತ್ತೆ ಸಾಧ್ಯವಾಗಿರಲಿಲ್ಲ. ಬಳಿಕ ತೀವ್ರ ಕಾರ್ಯಾಚರಣೆ ನಡೆಸಿ, ಭಾನುವಾರ ಎಲ್ಲ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಅತಿಯಾಗಿ ಮದ್ಯ ಸೇವಿಸಿ ಮೈಸೂರಿನಲ್ಲಿ ಕಾನೂನು ವಿಧ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ.
ಮೈಸೂರಿನ ಎರಡನೇ ಈದ್ಗಾ ನಿವಾಸಿ ಕಾರ್ತಿಕ್(22) ಮೃತ ದುರ್ದೈವಿ. ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಕಾರ್ತಿಕ್ ಅಂತಿಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಯಾಗಿದ್ದನು. ಹೊಸ ವರ್ಷಾಚರಣೆ ಹಿನ್ನಲೆ ಮೂವರು ಸ್ನೇಹಿತರ ಜೊತೆ ಕಾರ್ತಿಕ್ ಪಾರ್ಟಿ ಮಾಡಿದ್ದನು. ಈ ವೇಳೆ ಪಾರ್ಟಿ ಜೋಶ್‍ನಲ್ಲಿ ಗೆಳೆಯರೊಂದಿಗೆ ಸೇರಿ ಮಿತಿ ಮೀರಿ ಮದ್ಯ ಸೇವಿಸಿದ್ದಾನೆ.
ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಮಿತಿಮೀರಿ ಮದ್ಯ ಸೇವಿಸಿದ ಪರಿಣಾಮ ಕಾರ್ತಿಕ್ ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲಿಯೇ ಕಾರ್ತಿಕ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಹೊಸ ವರ್ಷಾಚರಣೆಗೆ ಎಲ್ಲೆಡೆ ಭರದ ಸಿದ್ಧತೆ ನಡೆಯುತ್ತಿದ್ದು, ಕಡಲನಗರಿ ಮಂಗಳೂರಿನಲ್ಲಿಯೂ ನ್ಯೂ ಇಯರ್ ಸೆಲಬ್ರೇಷನ್‍ಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್‍ಗಳು ಸಿದ್ಧತೆ ಮಾಡಿಕೊಂಡಿದೆ.
ಆದರೆ ಮಂಗಳೂರು ನಗರ ಪೊಲೀಸರು ಒಂದಿಷ್ಟು ಕಠಿಣ ಸೂಚನೆಯನ್ನು ಆಯೋಜಕರಿಗೆ ನೀಡಿದ್ದಾರೆ. ಸಂಜೆ ಆರು ಗಂಟೆಯಿಂದ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಆರಂಭಿಸಬಹುದಾಗಿದ್ದು, ರಾತ್ರಿ 12 ಗಂಟೆ 5 ನಿಮಿಷಕ್ಕೆ ಮಾತ್ರ ವರ್ಷಾಚರಣೆ ಮಾಡಲು ಅವಕಾಶ. ಆ ನಂತರ ಕಾರ್ಯಕ್ರಮವನ್ನು ಬಂದ್ ಮಾಡಬೇಕು. ಬಳಿಕ 15 ನಿಮಿಷದಲ್ಲಿ ಅಂದರೆ 12:20ಕ್ಕೆ ಕಾರ್ಯಕ್ರಮ ಆಯೋಜಕರು ಸಂಪೂರ್ಣವಾಗಿ ತೆರವು ಮಾಡಬೇಕೆಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷ ಖಡಕ್ ಸೂಚನೆ ನೀಡಿದ್ದಾರೆ.
ಪೊಲೀಸರು ಸೂಚಿಸಿರುವ ನಿಯಮ ತಪ್ಪಿದರೆ ಮುಲಾಜಿಲ್ಲದೆ ಪೊಲೀಸ್ ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ಪಾರ್ಟಿ ನೆಪದಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಹುಷಾರ್ ಎಂದಿರುವ ಕಮಿಷನರ್, ಮಂಗಳೂರಿನ ಎಲ್ಲಾ ಪಾರ್ಟಿಗಳಿಗೆ ಮಹಿಳಾ ಸುರಕ್ಷಾ ಸಿಬ್ಬಂದಿಯನ್ನು ನೇಮಿಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ.
ಮಫ್ತಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸರು ಭದ್ರತೆ ನೀಡಲಿದ್ದಾರೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ.
ಹಾಗೆಯೇ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿರುವುದರಿಂದ ಪೊಲೀಸ್ ಇಲಾಖೆ ಈ ಬಾರಿಯ ಹೊಸ ವರ್ಷ ಆಚರಣೆಗೆ ಹದ್ದಿನ ಕಣ್ಣು ಇಟ್ಟಿದ್ದಾರೆ.
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ತುದಿಗಾಲಲ್ಲಿ ನಿಂತಿರುವ ಸಿಲಿಕಾನ್ ಸಿಟಿ ಮಂದಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಗುಡ್ ನ್ಯೂಸ್ ನೀಡಿದ್ದಾರೆ.
ಪಾರ್ಟಿ ಪ್ರಿಯರಿಗೆ ಪೊಲೀಸ್ ಆಯುಕ್ತರು ಗುಡ್ ನ್ಯೂಸ್ ನೀಡಿದ್ದು, ಹೊಸ ವರ್ಷದ ದಿನ ಮಧ್ಯರಾತ್ರಿ ಎರಡು ಗಂಟೆಯವರೆಗೆ ನೈಟ್ ಲೈಫ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ದಿನದಂದು ಬಾರ್, ಪಬ್ ರೆಸ್ಟೊರೆಂಟ್, ಹೋಟೆಲುಗಳ ವ್ಯಾಪಾರದ ಸಮಯವನ್ನು ಮಧ್ಯರಾತ್ರಿ ಎರಡು ಗಂಟೆಯವರೆಗೆ ವಿಸ್ತರಿಸಿದ್ದಾರೆ.
ಪ್ರತಿ ದಿನ ರಾತ್ರಿ ಒಂದು ಗಂಟೆಗೆ ಮುಚ್ಚುತ್ತಿದ್ದ ನೈಟ್ ಲೈಫ್ ಅವಧಿ, 31ರ ರಾತ್ರಿ ಒಂದು ಗಂಟೆ ವಿಸ್ತರಣೆಯಾಗಿದ್ದು, ರಾತ್ರಿ 2 ಗಂಟೆಯವರೆಗೆ ಎಂಜಾಯ್ ಮಾಡಬಹುದಾಗಿದೆ. ಪಾರ್ಟಿ ಪ್ರಿಯರು ಯಾವುದೇ ಭಯ ಆತಂಕವಿಲ್ಲದೆ, ಎರಡು ಗಂಟೆಯವರೆಗೆ ಪಾರ್ಟಿ ನಡೆಸಬಹುದಾಗಿದೆ.
ಮೆಟ್ರೋ ಅವಧಿ ವಿಸ್ತರಣೆ
ಹೊಸ ವರ್ಷ ಆಚರಣೆ ಹಿನ್ನೆಲೆ ಡಿ.31ರಂದು ಮಧ್ಯರಾತ್ರಿ 2ಗಂಟೆಯವರೆಗೂ ಮೆಟ್ರೋ ಸೇವೆ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದ್ದು, ಪಾರ್ಟಿ ಮುಗಿಸಿ ಮೆಟ್ರೋದಲ್ಲಿ ಮನೆಗೆ ತೆರಳಬಹುದಾಗಿದೆ.
ಡಿಸೆಂಬರ್ 31ರಂದು ಮಧ್ಯರಾತ್ರಿ 2ಗಂಟೆ ವರೆಗೂ ಮೆಟ್ರೋ ಸಂಚರಿಸಲಿದೆ. ಇದರ ಜೊತೆಗೆ ಬಂಪರ್ ಕೊಡುಗೆಯನ್ನು ಸಹ ನೀಡಿದ್ದು, 50 ರೂ. ಮೇಲ್ಪಟ್ಟು ಟಿಕೆಟ್ ಖರೀದಿಸಿದರೆ ಯಾವುದೇ ನಿಲ್ದಾಣದಲ್ಲಿ ಹತ್ತಿ ಯಾವುದೇ ನಿಲ್ದಾಣದಲ್ಲಿ ಇಳಿಯಬಹುದಾಗಿದೆ. ಇದರ ಜೊತೆಗೆ ಷರತ್ತನ್ನು ಸಹ ವಿಧಿಸಿದ್ದು, ಕುಡಿದು ಪ್ರಯಾಣಿಸುವವರಿಗೆ ಎಚ್ಚರಿಕೆ ನೀಡಿದೆ. ಕುಡಿದು ಅಸಭ್ಯವಾಗಿ ವರ್ತಿಸಿದರೆ ಮೆಟ್ರೋದಿಂದ ಕಿಕ್ ಔಟ್ ಮಾಡುವುದಾಗಿ ಬಿಎಂಆರ್‍ಸಿಎಲ್ ತಿಳಿಸಿದೆ.
ಬೆಂಗಳೂರು: ಹೊಂಬಾಳೆ ಫಿಲಂಸ್ ಬ್ಯಾನರ್‌ಗೆ ಆರನೇ 6ನೇ ವಸಂತ ಸಂಭ್ರಮ. ಹೀಗಾಗಿ ನಗರದಲ್ಲಿ ಭರ್ಜರಿಯಾಗಿ ಔತಣ ಕೂಟ ನಡೆದಿದೆ. ಈ ಸಮಾರಂಭದಲ್ಲಿ ಸೂಪರ್ ಸ್ಟಾರ್‌ಗಳ ಸಮಾಗಮವಾಗಿದೆ.
ಹೊಂಬಾಳೆ ಫಿಲಂಸ್ ಶನಿವಾರ ಆರನೇ ವಸಂತದ ಸಂಭ್ರಮದಲ್ಲಿತ್ತು. ಹೀಗಾಗಿ ಖಾಸಗಿ ಹೋಟೆಲಿನಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರ್ ಔತಣ ಕೂಟವನ್ನು ಏರ್ಪಡಿಸಿದ್ದರು. ಈ ಅದ್ಧೂರಿ ಪಾರ್ಟಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಸೇರಿದಂತೆ ‘ರಾಜಕುಮಾರ’ ಹಾಗೂ ‘ಕೆಜಿಎಫ್’ ಚಿತ್ರತಂಡ ಭಾಗಿಯಾಗಿತ್ತು.
ಹೊಂಬಾಳೆ ಸ್ಯಾಂಡಲ್‍ವುಡ್‍ನ ಜನಪ್ರಿಯ ಬ್ಯಾನರ್ ಆಗಿದ್ದು, ‘ನಿನ್ನಿಂದಲೇ’, ‘ಮಾಸ್ಟರ್ ಪೀಸ್’, ‘ರಾಜಕುಮಾರ’, ‘ಕೆಜಿಎಫ್’ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ಕೀರ್ತಿ ಈ ಬ್ಯಾನರ್‌ಗೆ ಸಲ್ಲುತ್ತದೆ. ಇಡೀ ಭಾರತೀಯ ಚಿತ್ರರಂಗ ತಿರುಗಿ ನೋಡುವಂತಹ ಸಿನಿಮಾವನ್ನು ಬ್ಯಾನರ್ ಹೊಂಬಾಳೆ ಕೊಟ್ಟಿದೆ.
ಸದ್ಯಕ್ಕೆ ಹೊಂಬಾಳೆ ಬ್ಯಾನರ್ ಅಡಿಯಲ್ಲಿ ‘ಕೆಜಿಎಫ್ ಚಾಪ್ಟರ್ 2’ ಹಾಗೂ ‘ಯುವರತ್ನ’ ಸಿನಿಮಾ ನಿರ್ಮಾಣಗೊಳ್ಳುತ್ತಿವೆ. ಕಳೆದ ದಿನವೇ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕಳೆದ ವರ್ಷ ಇದೇ ದಿನದಂದು ‘ಕೆಜಿಎಫ್’ ಸಿನಿಮಾ ರಿಲೀಸ್ ಆಗಿತ್ತು. ಈ ಸಿನಿಮಾ ಇಡೀ ದೇಶ ಚಂದನವನದತ್ತ ತಿರುಗಿ ನೋಡುವಂತೆ ಮಾಡಿತ್ತು. ಈಗ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಫಸ್ಟ್ ಲುಕ್ ನೋಡಿ ಮತ್ತೆ ದಂಗಾಗುವಂತೆ ಮಾಡಿದೆ.
ಡಿಸೆಂಬರ್ 21 ‘ಕೆಜಿಎಫ್’ ರಿಲೀಸ್ ಆದ ದಿನ. ‘ಕೆಜಿಎಫ್ ಚಾಪ್ಟರ್ 2’ ಫಸ್ಟ್ ಲುಕ್ ಬಿಡುಗಡೆಯಾಗಿರುವ ದಿನ. ಎಲ್ಲದಕ್ಕಿಂತ ಹೆಚ್ಚಾಗಿ ಹೊಂಬಾಳೆ ಎಂಬ ಬ್ಯಾನರ್ ಲಾಂಚ್ ಆದ ದಿನ. ಇದೇ ಖುಷಿಯಲ್ಲಿ ಎಲ್ಲಾ ಒಟ್ಟಾಗಿ ಸೇರಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಕರುನಾಡ ಮಂದಿಗೆ, ಸಿನಿಮಾ ಪ್ರೇಮಿಗಳಿಗೆ, ಸಪೋರ್ಟ್ ಮಾಡಿದ ಎಲ್ಲರಿಗೂ ನಿರ್ಮಾಪಕ ವಿಜಯ್ ಕಿರಗಂದೂರ್ ಧನ್ಯವಾದ ತಿಳಿಸಿದ್ದಾರೆ. ತಮ್ಮ ಬ್ಯಾನರ್ ನಲ್ಲಿ ಕೆಲಸ ಮಾಡಿದ ಸುಮಾರು 400 ಮಂದಿಗೆ ಭರ್ಜರಿ ಔತಣ ಕೂಟ ಏರ್ಪಡಿಸಿದ್ದರು.