Tag: ಪಾರ್ಥಿವ ಶರೀರ

  • ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತ!

    ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತ!

    ಚೆನ್ನೈ: ವಾಯುಪಡೆ ಹೆಲಿಕಾಪ್ಟರ್‌ ಪತನ ದುರಂತದಿಂದ ಮೃತಪಟ್ಟವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳಯಂನಲ್ಲಿ ನಡೆದಿದೆ.

    ಕೂನೂರು ವಿಲ್ಲಿಂಗ್‌ಟನ್‌ನ ಎಂಆರ್‌ಸಿಯಿಂದ ಪಾರ್ಥಿವ ಶರೀರಗಳನ್ನು ಅಂಬುಲೆನ್ಸ್‌ನಲ್ಲಿ ಸೂಳೂರು ಏರ್‌ಬೇಸ್‌ಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬೆಂಗಾವಲು ವಾಹನ ಅಪಘಾತದಕ್ಕೀಡಾಗಿದೆ. ಇದರಿಂದಾಗಿ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ಗೂ ಅಪಘಾತವಾಗಿದೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

    ಅಂಬುಲೆನ್ಸ್‌ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದ್ದು, ಅದರ ಮುಭಾಂಗ ಜಖಂಗೊಂಡಿದೆ. ಇದರಿಂದ ಸಂಚಾರ ವಿಳಂಬವಾಯಿತು. ಅಂಬುಲೆನ್ಸ್‌ನಲ್ಲಿದ್ದ ಪಾರ್ಥಿವ ಶರೀರಗಳನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರಿಸಿ ರವಾನೆ ಮಾಡಲಾಯಿತು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

    ಅಪಘಾತದಿಂದಾಗಿ ಏಳು ಮಂದಿ ಪೊಲೀಸ್‌ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೀಡಾದ ಅಂಬುಲೆನ್ಸ್‌ನಿಂದ ಮತ್ತೊಂದು ವಾಹನಕ್ಕೆ ಪಾರ್ಥಿವ ಶರೀರಗಳನ್ನು ಸ್ಥಳಾಂತರಿಸಲು ಸ್ಥಳೀಯರು ಸಹಾಯ ಮಾಡಿದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಸೇರಿದಂತೆ ಉಳಿದ ಸೇನಾ ಸಿಬ್ಬಂದಿ ಪಾರ್ಥಿವ ಶರೀರಗಳನ್ನು ಇಂದು ದೆಹಲಿಗೆ ರವಾನಿಸಲಾಗುತ್ತದೆ. ಅಂತಿಮ ದರ್ಶನದ ಬಳಿಕ ಸೇನಾ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.

  • ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

    ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

    ಬೆಳಗಾವಿ: ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಪಾರ್ಥಿವ ಶರೀರ ಇಂದು ಅವರ ಸ್ವಗ್ರಾಮ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂಧಿಹಾಳ ಗ್ರಾಮಕ್ಕೆ ತಲುಪಲಿದೆ.

    ಯೋಧ ಪ್ರಕಾಶ್ ಜಾಧವ್ ಜಮ್ಮುವಿನಲ್ಲಿ ಉಗ್ರರ ಜತೆ ಸೆಣಸಾಡಿ ವೀರಮರಣ ಹೊಂದಿದ್ದರು. ಇಂದು ಪ್ರಕಾಶ್ ಪಾರ್ಥಿವ ಶರೀರ ದೆಹಲಿ, ಪುಣೆ, ಬೆಳಗಾವಿ ಮಾರ್ಗವಾಗಿ ಸ್ವಗ್ರಾಮ ಬೂಧಿಹಾಳಕ್ಕೆ ಸೇನಾ ಸಿಬ್ಬಂದಿ ತರಲಿದ್ದಾರೆ. ವೀರ ಮರಣ ಹೊಂದಿರುವ ಪ್ರಕಾಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನಡೆಯಲಿದೆ.

    ಪ್ರಕಾಶ್ ಅವರಿಗೆ ಕಳೆದ ವರ್ಷ ಮದುವೆಯಾಗಿತ್ತು. ಮೂರು ತಿಂಗಳ ಮಗು ಕೂಡ ಇತ್ತು. ಇದೀಗ ಯೋಧ ತನ್ನ ಮಡದಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವೀರಯೋಧನ ಸಾವಿನಿಂದ ಅವರ ಸ್ವಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಪಾರ್ಥಿವ ಶರೀರ ರವಾನೆಗೆ ಮತ್ತೊಮ್ಮೆ ಕಾಲದ ಮೊರೆ ಹೋದ ಸಮ್ಮಿಶ್ರ ಸರ್ಕಾರ!

    ಅಂಬಿ ಪಾರ್ಥಿವ ಶರೀರ ರವಾನೆಗೆ ಮತ್ತೊಮ್ಮೆ ಕಾಲದ ಮೊರೆ ಹೋದ ಸಮ್ಮಿಶ್ರ ಸರ್ಕಾರ!

    ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯದಿಂದ ಬೆಂಗಳೂರಿಗೆ ರವಾನಿಸಲು ಸಮ್ಮಿಶ್ರ ಸರ್ಕಾರ ಮತ್ತೊಮ್ಮೆ ಕಾಲದ ಮೊರೆ ಹೋಗಿದೆ.

    ಅಂಬಿ ಪಾರ್ಥಿವ ಶರೀರ ಬೆಂಗಳೂರಿಗೆ ರವಾನಿಸಲು ರಾಹುಕಾಲ ತಟ್ಟಿದೆ. ರಾಹುಕಾಲದ ಹಿನ್ನಲೆಯಲ್ಲಿ 9 ಗಂಟೆ ನಂತರ ವಿಶ್ವೇಶ್ವರಯ್ಯ ಸ್ಟೇಡಿಯಂನಿಂದ ಪಾರ್ಥಿವ ಶರೀರ ಬೆಂಗಳೂರಿಗೆ ಹೊರಡಲಿದೆ. ಇದನ್ನೂ ಓದಿ:ಬೆಂಗ್ಳೂರಿಗರೇ ಗಮನಿಸಿ, ಅಂಬಿ ಅಂತಿಮ ಯಾನ – ಯಾವ ಸಮಯಕ್ಕೆ ಏನು ನಿಗದಿಯಾಗಿದೆ?

    ಈ ಹಿಂದೆ ಬೆಳಗ್ಗೆ 6 ಗಂಟೆಗೆ ಪಾರ್ಥಿವ ಶರೀರ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 7.30 ರಿಂದ 9 ಗಂಟೆ ವರೆಗೂ ರಾಹುಕಾಲ ಇರುವುದರಿಂದ 9 ಗಂಟೆ ನಂತರ ಪಾರ್ಥಿವ ಶರೀರ ಬೆಂಗಳೂರಿಗೆ ರವಾನೆಯಾಗಲಿದೆ. ಇದನ್ನೂ ಓದಿ: ಕರ್ಮಭೂಮಿಯಲ್ಲಿ ಕರ್ಣನಿಗೆ ನಮನ – ಅಭಿಮಾನಿಗಳನ್ನು ನಿಯಂತ್ರಿಸಲು ವೇದಿಕೆ ಏರಿದ ಯಶ್

    ಕಳೆದ ಕೆಲವು ದಿನಗಳಿಂದ ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ಮಂಡ್ಯ ಬಸ್ ದುರಂತ ಘಟನೆಯ ಬಳಿಕ ಸುಸ್ತಾಗಿದ್ದ ಅಂಬರೀಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂಬರೀಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ ಏರ್ ಲಿಫ್ಟ್

    ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ ಏರ್ ಲಿಫ್ಟ್

    ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಅವರ ಮೃತದೇಹವನ್ನು ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ.

    ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಪಾರ್ಥಿವ ಶರೀರದ ದರ್ಶನಗೈದು ಪ್ರತಿಕ್ರಿಯಿಸಿದ ಸಿಎಂ, ಮಂಡ್ಯ ಜಿಲ್ಲೆಯ ಅಭಿಮಾನಿಗಳು ತವರಿಗೆ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದಾರೆ. ಹೀಗಾಗಿ ಸೇನೆಯ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು.

    ನನ್ನ ಮನವಿಗೆ ಸ್ಪಂದಿಸಿದ ಸಚಿವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅರ್ಧಗಂಟೆಯಲ್ಲಿ ತಿಳಿಸುತ್ತೇನೆ ಎಂದಿದ್ದಾರೆ. ದಯವಿಟ್ಟು ಮಂಡ್ಯ ಜನರು ಆಕ್ರೋಶ ಮಾಡಬೇಡಿ ಎಂದು ಸಿಎಂ ಮನವಿ ಮಾಡಿದ್ದರು.

    ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ತದನಂತರ ಕಂಠೀರವ ಸ್ಟೇಡಿಯಂಗೆ ತಂದು ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv