Tag: ಪಾರ್ಲಿಮೆಂಟ್

  • 2030ರಲ್ಲೂ ನಾವಿಲ್ಲೇ ಇರುತ್ತೇವೆ; ನೀವಲ್ಲೇ.. ಇರುತ್ತೀರಿ: ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್‌

    2030ರಲ್ಲೂ ನಾವಿಲ್ಲೇ ಇರುತ್ತೇವೆ; ನೀವಲ್ಲೇ.. ಇರುತ್ತೀರಿ: ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್‌

    ನವದೆಹಲಿ: 2030 ರಲ್ಲೂ ನಾವು ಇಲ್ಲೇ ಇರುತ್ತೇವೆ. ನೀವು ಅಲ್ಲೇ ಇರುತ್ತೀರಿ ಎಂದು ಸಂಸತ್ ಅಧಿವೇಶನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರತಿಪಕ್ಷಗಳಿಗೆ ಟಾಂಗ್ ಕೊಟ್ಟರು.

    ಸದನದಲ್ಲಿ ಇಲಾಖೆ ಕಾರ್ಯ ಯೋಜನೆ ಸಾಧನೆ ಬಗ್ಗೆ ಪ್ರಸ್ತಾಪಿಸುತ್ತಿದ್ದ ವೇಳೆ ಪ್ರತಿಪಕ್ಷ ಸದಸ್ಯರ ಮಾತಿಗೆ ಹೀಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಆ.9 ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ‌ 2 ಲಕ್ಷ‌ ಜನ ಸೇರಿಸುವ ಗುರಿ

    ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030 ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೇ ಇರುತ್ತೇವೆ. ನೀವು ಅಲ್ಲಿ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.

    ನಮಗೆ ಹೆಮ್ಮೆಯಿದೆ: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 500GW ಸಾಮರ್ಥ್ಯವನ್ನು ಸಾಧಿಸಿದ ವಿಚಾರವನ್ನು ಹಂಚಿಕೊಳ್ಳಲು ನಮಗೆ ಹೆಮ್ಮೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಡಾ.ಕೆ.ಸುಧಾಕರ್‌

    ಯುಪಿಎ ಅವಧಿಯಲ್ಲಿ ಹಗರಣದ್ದೇ ಸಾಧನೆ: ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಯೋಜನೆಗಳ ಒಟ್ಟು ಮೊತ್ತ 1,60,000 ಕೋಟಿ ರೂ. ಆಗಿದೆ. ಆದರೆ, ಯುಪಿಎ ಆಡಳಿತದ ಅವಧಿಯಲ್ಲಿ ಇಷ್ಟು ಮೊತ್ತದ ಹಗರಣಗಳೇ ನಡೆದಿವೆ ಎಂದು ಜೋಶಿ ತಿರುಗೇಟು ಕೊಟ್ಟರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತೀಯರ ಕಲ್ಯಾಣಕ್ಕಾಗಿ ಪ್ರತಿ ಯೋಜನೆಯೂ ಹೀಗೆ ಬೃಹತ್ ಮೊತ್ತದ್ದಾಗಿದೆ ಎಂದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸ್ಥಾಪಿಸಲಾದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ಶೇ.165ರಷ್ಟು ಏರಿಕೆ ಕಂಡಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯಪಾಲರು ಎರಡನೇ ಶೋಕಾಸ್ ನೋಟಿಸ್‌ ಕೊಟ್ಟಿಲ್ಲ: ಟಿಜೆ ಅಬ್ರಹಾಂ

    2014ರಲ್ಲಿ ಕೇವಲ 76.38 GW ಉತ್ಪಾದನಾ ಸಾಮರ್ಥ್ಯ ಇತ್ತು. ಕಳೆದ 10 ವರ್ಷಗಳಲ್ಲಿ ಶೇ.165 ರಷ್ಟು ವೃದ್ಧಿಸಿದ್ದು, ಪ್ರಸ್ತುತ 2003.1 GW ತಲುಪಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ಮಾಹಿತಿ ನೀಡಿದರು.

  • ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ

    ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ

    ನವದೆಹಲಿ: ಆಡಳಿತಾರೂಢ ಎನ್‌ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ (Budget Session) ಇಂದಿನಿಂದ ಆರಂಭವಾಗಲಿದೆ.

    ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ನಾಳೆ ತಮ್ಮ ದಾಖಲೆಯ 7ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಓರ್ವ ಯೋಧನಿಗೆ ಗಾಯ

    19 ದಿನಗಳ ಕಾಲ ನಡೆಯಲಿರುವ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನೀಟ್‌, ನೆಟ್‌ ಪರೀಕ್ಷಾ ಅಕ್ರಮ, ಐಎಎಸ್‌ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್‌ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಮೈತ್ರಿಕೂಟ ಸಜ್ಜಾಗಿದೆ.

    ಈ ಅಧಿವೇಶನದಲ್ಲಿ 5 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಹಣಕಾಸು ಮಸೂದೆ, 2024. ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 PRS ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ ಸ್ಪಷ್ಟತೆ ಮತ್ತು ಒಮ್ಮುಖವನ್ನು ತರಲು ಪ್ರಯತ್ನಿಸುತ್ತದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ

    ಭಾರತೀಯ ವಾಯುಯಾನ ವಿಧೇಯಕ- 2024 ಏರ್‌ಕ್ರಾಫ್ಟ್ ಆಕ್ಟ್, 1934 ಅನ್ನು ಬದಲಿಸುತ್ತದೆ. ಅಸ್ಪಷ್ಟತೆಗಳು ಮತ್ತು ಪುನರಾವರ್ತನೆಗಳನ್ನು ಪರಿಹರಿಸಲು, ಉತ್ಪಾದನೆ ಮತ್ತು ವ್ಯವಹಾರವನ್ನು ಸುಲಭಗೊಳಿಸಲು, ಅಂತರರಾಷ್ಟ್ರೀಯ ಸಂಪ್ರದಾಯಗಳ ನಿಬಂಧನೆಗಳನ್ನು ಜಾರಿಗೆ ತರಲು ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಜಾರಿಗೆ ತರಲು ಅನುವು ಮಾಡಿಕೊಡುತ್ತದೆ.

  • ಡಿಕೆ ಸುರೇಶ್‌ನ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್‌ರನ್ನು ತಂದಿದ್ದೇವೆ: ಸಿ.ಪಿ.ಯೋಗೇಶ್ವರ್

    ಡಿಕೆ ಸುರೇಶ್‌ನ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್‌ರನ್ನು ತಂದಿದ್ದೇವೆ: ಸಿ.ಪಿ.ಯೋಗೇಶ್ವರ್

    – 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ
    – ನಾನು ಪಾರ್ಲಿಮೆಂಟ್‌ಗೆ ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ ಎಂದ ಮಾಜಿ ಸಚಿವ

    ರಾಮನಗರ: ನಾನು ಪಾರ್ಲಿಮೆಂಟ್‌ಗೆ (Parliament) ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿ ಇರಬೇಕೆಂಬುದು ನನ್ನ ನಿಲುವು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ (Channapatna) ಎ.ಮಂಜುನಾಥ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಗೇಶ್ವರ್ ಮಾತನಾಡಿದರು. ಸಿಪಿವೈ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆಂಬ ಡಿ.ಕೆ.ಸುರೇಶ್ (DK Suresh) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಮಂಜುನಾಥ್ (Dr Manjunath) ಅವರನ್ನು ತಂದಿದ್ದೇವೆ. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಂಜುನಾಥ್ ಅವರ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ. ಡಾ.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡುತ್ತಿದ್ದರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್‌ ರಾವತ್‌

    ಕಳೆದ ಬಾರಿ ಮುನಿರತ್ನ ಕಾಂಗ್ರೆಸ್ (Congress) ಪರವಾಗಿದ್ದರು. ಆದರೂ ಬಿಜೆಪಿಗೆ ಅಲ್ಲಿ 30,000 ಲೀಡ್ ಇತ್ತು. ಇವತ್ತು ಮುನಿರತ್ನ ಬಿಜೆಪಿಯಲ್ಲಿದ್ದಾರೆ. ನಮ್ಮ ದೌರ್ಭಾಗ್ಯ ಬಿಜೆಪಿ-ಜೆಡಿಎಸ್ ಕಿತ್ತಾಡಿ ಅವರಿಗೆ ಲಾಭ ಆಗಿತ್ತು. ಈಗ ನಾವು, ಜೆಡಿಎಸ್‌ನವರು ಒಂದಾಗಿದ್ದೇವೆ. ದೇವೇಗೌಡರು ಬಿಜೆಪಿ ಜೊತೆಗೆ ಒಂದಾಗಿದ್ದಾರೆ. ಹಾಗಾಗಿ ನಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಂಡಲೋತ್ಸವ ನಡೆಸಿ ಮರಳಿದ ಪೇಜಾವರ ಶ್ರೀಗೆ ಮಂಗಳೂರಿನಲ್ಲಿ‌ ಅದ್ದೂರಿ ಸ್ವಾಗತ

    ಮಂಗಳವಾರ ಚನ್ಮಪಟ್ಟಣದಲ್ಲಿ ತಾಲೂಕು ಮಟ್ಟದ ಮೈತ್ರಿ ಕಾರ್ಯಕರ್ತರ ಸಭೆ ನಡೆಯಲಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ನಡೆಯಲಿದ್ದು, ತಾಲೂಕು ಮಟ್ಟದಲ್ಲಿ ಬೃಹತ್ ಮೈತ್ರಿ ಸಮಾವೇಶ ನಡೆಯಲಿದೆ. ಪಟ್ಟಣದ ಬಾಲಕರ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11ಕ್ಕೆ ಸಮಾವೇಶ ಆರಂಭವಾಗಲಿದ್ದು, ಮಾಜಿ ಸಿಎಂ ಹೆಚ್‌ಡಿಕೆ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಭಾಗಿಯಾಗಲಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಲು ಕರೆ ನೀಡಲಾಗಿದೆ. ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಮೈತ್ರಿ ಪಕ್ಷಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲು ಒಗ್ಗಟ್ಟಾಗುವಂತೆ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ: ಪಟ್ಟು ಬಿಡದ ಈಶ್ವರಪ್ಪ

  • ನನ್ನ ಮಗ ಯಾವತ್ತಿಗೂ ಸಮಾಜದ ಒಳಿತಿನ ಬಗ್ಗೆ ಚಿಂತನೆ ಮಾಡ್ತಿದ್ದ: ಮನೋರಂಜನ್ ತಂದೆ ಮಾತು

    ನನ್ನ ಮಗ ಯಾವತ್ತಿಗೂ ಸಮಾಜದ ಒಳಿತಿನ ಬಗ್ಗೆ ಚಿಂತನೆ ಮಾಡ್ತಿದ್ದ: ಮನೋರಂಜನ್ ತಂದೆ ಮಾತು

    ಮೈಸೂರು: ಪಾರ್ಲಿಮೆಂಟ್‌ನಲ್ಲಿ (Parliament) ಸ್ಮೋಕ್ ಬಾಂಬ್ (Smoke Bomb) ಹಾಕಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಮನೋರಂಜನ್ ಅವರ ತಂದೆ ದೇವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ಯಾವತ್ತಿಗೂ ಸಮಾಜದ ಒಳಿತಿನ ಬಗ್ಗೆ ಚಿಂತನೆ ಮಾಡುತ್ತಿದ್ದ ಎಂದು ಹೇಳಿಕೆ ನೀಡಿದ್ದಾರೆ.

    ಸಂಸತ್ ಭವನದಲ್ಲಿ ಕಲಾಪದ ವೇಳೆ ಇಬ್ಬರು ಯುವಕರು ಏಕಾಏಕಿ ವೀಕ್ಷಕರ ಗ್ಯಾಲರಿಯಿಂದ ಹಾರಿ ಸ್ಮೋಕ್ ಬಾಂಬ್ ಹಾಕಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಮನೋರಂಜನ್ ಹಾಗೂ ಸಾಗರ್ ಶರ್ಮಾನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಆರೋಪಿ ಮನೋರಂಜನ್ ತಂದೆ ತಮ್ಮ ಮಗನ ಕುರಿತು ಮಾಧ್ಯಮದವರಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಲಾಪದ ವೇಳೆ ನುಗ್ಗಿದ ಯುವಕನನ್ನು ಹಿಡಿದು ಥಳಿಸಿದ ಸಂಸದರು

    ನನ್ನ ಮಗ ಸ್ವಾಮಿ ವಿವೇಕಾನಂದರ ಪುಸ್ತಕ ಸೇರಿದಂತೆ ಸಮಾಜ ಸುಧಾರಕರ ಪುಸ್ತಕ ಓದುತ್ತಿದ್ದ. ಅಲ್ಲದೇ ಐಟಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮದುವೆ ಆಗಿಲ್ಲ. ನನ್ನ ಮಗನಿಗೆ ಯಾರಾದರೂ ಪ್ರಚೋದನೆ ಕೊಟ್ಟಿರಬೇಕು. ರೈತಾಪಿ ಮಗನಾಗಿ ನನ್ನ ಮಗ ಈ ರೀತಿ ಮಾಡಿರುವುದು ಖಂಡನೀಯ. ಯಾರ ಮಕ್ಕಳಾದರೂ ಈ ರೀತಿ ಮಾಡಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಯತ್ನ

    ನಾವೂ ಅಲ್ಪಸ್ವಲ್ಪ ರಾಜಕೀಯದಲ್ಲಿದ್ದೇವೆ. ಸಂಘಟನೆ ಎಲ್ಲ ಆಗಲ್ಲ. ನಾವೇನಿದ್ದರೂ ದುಡಿದು ತಿನ್ನಬೇಕು ಎಂದು ಹೇಳಿದ್ದೆ. ಆದರೆ ಅವನು ಅತಿಯಾದ ವಿದ್ಯಾಭ್ಯಾಸವೇ ಅವನಿಗೆ ಮುಳುವಾಯಿತಾ ಎಂಬುದು ನನಗೆ ಗೊತ್ತಿಲ್ಲ. ಸಂಘಟನೆ ಕಟ್ಟುವ ಕೆಲಸ ಬಿಟ್ಟರೇ ಬೇರೆ ಯಾವುದೇ ಸಮಾಜಘಾತುಕ ಕೆಲಸದಲ್ಲಿ ನನ್ನ ಮಗ ತೊಡಗಿಸಿಕೊಂಡಿಲ್ಲ. ಇವತ್ತು ಅವನು ಏನು ಮಾಡಿದ್ದಾನೋ ಅದು ಖಂಡನೀಯ, ನಾನು ಅದನ್ನ ಒಪ್ಪಲ್ಲ. ನನ್ನ ಮಗ ಆಗಿರಲಿ ಅಥವಾ ಯಾವನೇ ಆಗರಿಲಿ ಅವರನ್ನ ಗಲ್ಲಿಗೇರಿಸಿ ಎಂದರು. ಇದನ್ನೂ ಓದಿ: ಸಂಸತ್ ದಾಳಿ ಘಟನೆಯನ್ನು ಎಲ್ಲರೂ ಖಂಡಿಸಬೇಕು: ಸಿದ್ದರಾಮಯ್ಯ

    ಪ್ರಧಾನಿ ನಮ್ಮ ದೇವರು. ಅವರ ಬಗ್ಗೆ ನನ್ನ ಮಗನಿಗೆ ಭಾರೀ ಅಭಿಮಾನವಿತ್ತು. ಚಿಕ್ಕಮಕ್ಕಳನ್ನು ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಬಹುದು. ಆದರೆ ದೊಡ್ಡವರನ್ನು ಹಾಗೆ ಕೇಳಲು ಆಗುವುದಿಲ್ಲ. ಪಾಸ್ ಕೊಡುವುದು ಒಳ್ಳೆಯದಕ್ಕೆ. ಅದನ್ನು ಒಳ್ಳೆಯದಕ್ಕೆ ಉಪಯೋಗಿಸಿಕೊಳ್ಳಬೇಕು. ಪ್ರತಾಪ್ ಸಿಂಹ ಅವರು ಒಳ್ಳೆಯ ಮನುಷ್ಯ. ಅವರನ್ನು ಕೆಟ್ಟವರು ಎಂದು ಹೇಳಲಾಗುವುದಿಲ್ಲ. ನಾವು ನಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸವನ್ನೇ ಕೊಡಿಸಿದ್ದೇವೆ. ಅದರೂ ಈ ರೀತಿಯ ಕೃತ್ಯ ಮಾಡಿರುವುದು ಖಂಡನೀಯ ಎಂದು ಹೇಳಿದರು. ಇದನ್ನೂ ಓದಿ: ಪ್ರತಾಪ್ ಸಿಂಹ ಬಹಳ ಬುದ್ಧಿವಂತ, ಅವರ‍್ಯಾಕೆ ಇಂಥವರಿಗೆ ಪಾಸ್ ಕೊಟ್ರೋ?: ಡಿಕೆಶಿ ಕಿಡಿ

  • ಪಾರ್ಲಿಮೆಂಟ್ ಎನೆಕ್ಷ್ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಅವಘಡ

    ಪಾರ್ಲಿಮೆಂಟ್ ಎನೆಕ್ಷ್ ಕಟ್ಟಡದ 6ನೇ ಮಹಡಿಯಲ್ಲಿ ಬೆಂಕಿ ಅವಘಡ

    ನವದೆಹಲಿ: ಇಂದು ಬೆಳಗ್ಗೆ ಪಾರ್ಲಿಮೆಂಟ್ ನ ಎನೆಕ್ಸ್ ಕಟ್ಟಡದ ಆರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಸದ್ಯ ಬೆಂಕಿಯನ್ನು ನಂದಿಸಲಾಗಿದೆ.

    ಕಟ್ಟಡದ ಆರನೇ ಮಹಡಿಯ ಎಲೆಕ್ಟ್ರಿಕ್ ಬೋರ್ಡ್ ಬಳಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳಕ್ಕೆ ಪಾರ್ಲಿಮೆಂಟ್ ಸಿಬ್ಬಂದಿ ವಿಷಯ ತಿಳಿಸಿದ್ದಾರೆ. ಐದು ವಾಹನಗಳಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ತಂಡ ಬೆಂಕಿ ನಂದಿಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ.

    ಅಧಿಕಾರಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಅಧಿಕಾರಿಗಳು ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಪ್ರಮಾಣ ವಚನ ಸ್ವೀಕಾರ ಬಳಿಕ ಸಹಿ ಮಾಡೋದನ್ನ ಮರೆತ ರಾಹುಲ್

    ಪ್ರಮಾಣ ವಚನ ಸ್ವೀಕಾರ ಬಳಿಕ ಸಹಿ ಮಾಡೋದನ್ನ ಮರೆತ ರಾಹುಲ್

    ನವದೆಹಲಿ: 4ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಸದನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಈ ವೇಳೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಹಿ ಮಾಡದೆ ಮುಂದೆ ಸಾಗಿದ ಘಟನೆ ನಡೆಯಿತು.

    17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ ಇಂದು ಆರಂಭವಾಯಿತು. ಸಂಸತ್‍ಗೆ ರಾಹುಲ್ ತಡವಾಗಿ ಆಗಮಿಸಿದ್ದರು. ಇದಕ್ಕೂ ಮುನ್ನ ಹಲವು ನಾಯಕರು ರಾಹುಲ್ ಸಂಸತ್‍ಗೆ ಆಗಮಿಸದೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದರು.

    ಸಂಸತ್ ಆಗಮಿಸಿದ ರಾಹುಲ್ ಪ್ರಮಾಣ ವಚನ ಸ್ವೀಕರಿಸಿ ಮುಂದೇ ಸಾಗಿದರು. ಈ ಹಂತದಲ್ಲಿ ರಾಜ್‍ನಾಥ್ ಸಿಂಗ್ ಅವರು ರಾಹುಲ್‍ಗೆ ಸಹಿ ಮಾಡುವಂತೆ ತಿಳಿಸಿದರು. ಪುನಃ ಮರಳಿದ ರಾಹುಲ್ ಸಹಿ ಮಾಡಿ ಸ್ಪೀಕರ್ ಬಳಿ ತೆರಳಿ ಶುಭ ಕೋರಿದರು. ಬಳಿಕ ಪಕ್ಷದ ಮುಖಂಡ ಬಳಿ ತೆರಳಿ ಶುಭ ಕೋರಿದರು. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ಕೂಡ ಸಂಸತ್ ನಲ್ಲಿ ಹಾಜರಿದ್ದರು.

    ಪ್ರಮಾಣ ವಚನ ಸ್ವೀಕರಿಸುವ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, 4ನೇ ಬಾರಿಗೆ ಲೋಕಸಭಾ ಸಂಸತ್ ಸದಸ್ಯರಾಗಿ ಇಂದಿನಿಂದ ಕಾರ್ಯಾರಂಭ ಮಾಡುತ್ತಿದ್ದು, ಕೇರಳ ವಯಾನಾಡು ಜನತೆಗೆ ಧನ್ಯವಾದ. ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇನ್ನಿಂಗ್ಸ್ ಶುರು ಮಾಡುತ್ತಿದ್ದೇನೆ. ಭಾರತದ ಸಂವಿಧಾನದಲ್ಲಿ ನಿಷ್ಠೆ ಮತ್ತು ನಂಬಿಕೆಯನ್ನು ಹೊಂದಿರುತ್ತೇನೆ ಎಂದು ತಿಳಿಸಿದ್ದರು.

    ರಾಹುಲ್ ಗಾಂಧಿ ಅವರು ಈ ಬಾರಿ 2 ಕ್ಷೇತ್ರಗಳಿಂದ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲುಂಡು, ಕೇರಳ ವಯನಾಡಿಯಲ್ಲಿ ಗೆಲುವು ಪಡೆದಿದ್ದರು.

  • ಕಾಂಗ್ರೆಸ್‍ಗಾಗಿ ಹಗಲು ರಾತ್ರಿ ಶ್ರಮಿಸಿದ ರಾಹುಲ್ ಭಯವಿಲ್ಲದ ನಾಯಕ: ಸೋನಿಯಾ ಗಾಂಧಿ

    ಕಾಂಗ್ರೆಸ್‍ಗಾಗಿ ಹಗಲು ರಾತ್ರಿ ಶ್ರಮಿಸಿದ ರಾಹುಲ್ ಭಯವಿಲ್ಲದ ನಾಯಕ: ಸೋನಿಯಾ ಗಾಂಧಿ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷಕ್ಕಾಗಿ ಹಗಲು ರಾತ್ರಿ ಶ್ರಮಿಸದ್ದಾರೆ. ಈ ಮೂಲಕ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್‍ನ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರು ಮೆಚ್ಚುಗೆ ವ್ಯಕ್ತಸಿಪಡಿದ್ದಾರೆ.

    ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಆಯ್ಕೆಯಾದ ಸೋನಿಯ ಗಾಂಧಿ ಅವರು, ದೆಹಲಿಯಲ್ಲಿ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿ, ತಮ್ಮ ಮಗ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೋರಿದ ಭಯವಿಲ್ಲದ ನಾಯಕತ್ವಕ್ಕೆ ಅಭಿನಂದನೆಯನ್ನು ಸಲ್ಲಿಸಿದರು.

    ಇಂದು ನಡೆದ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ತೋರಿದ ಬಲಿಷ್ಠ ಮತ್ತು ಭಯವಿಲ್ಲದ ನಾಯಕತ್ವಕ್ಕಕೆ ಹೃದಯಪೂರ್ವಕ ಧನ್ಯವಾದಗಳು. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ರಾತ್ರಿ ಹಗಲು ಎನ್ನದೇ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಭಯವಿಲ್ಲದ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿದ್ದಾರೆ.

    ರಾಹುಲ್ ಗಾಂಧಿ ಅವರು ಛತ್ತಿಸ್‍ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷನಾಗಿ ಭಾರತದ ಎಲ್ಲಾ ಕಡೆಯಲ್ಲೂ ಪಕ್ಷದ ಕಾರ್ಯಕರ್ತರ ಮತ್ತು ಕೋಟಿ ಮತದಾರರ ಗೌರವ ಮತ್ತು ಪ್ರೀತಿಯನ್ನು ಗಳಿಸಿದ್ದಾರೆ ಎಂದು ಸಂತೋಷ ವ್ಯಕ್ತಪಡಿದರು.

    ರಾಹುಲ್ ಗಾಂಧಿ ಅವರು ರೈತರು, ಕಾರ್ಮಿಕರು, ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ಯುವಜನತೆ ಮತ್ತು ಮಹಿಳೆಯರಿಗೆ ಆದ ಅನ್ಯಾಯಗಳ ವಿರುದ್ಧ ಹೋರಾಡಿ ಅವರಿಗೆ ಸಮಾಜದಲ್ಲಿ ನ್ಯಾಯ ಕೊಡಿಸಿದ್ದಾರೆ. ಅವರ ನಾಯಕತ್ವ ಅವರ ಪ್ರಾಮಾಣಿಕತೆ, ಶ್ರಮ ಎಲ್ಲಾವುದಕ್ಕೂ ನಾವು ಕೃತಜ್ಞತೆ ಹೇಳುತ್ತೇವೆ ಎಂದು ಹೇಳಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನಗಳನ್ನೂ ಗೆದ್ದಿದ್ದೇವು ಮತ್ತು 55 ರಾಜ್ಯಸಭಾ ಸ್ಥಾನಗಳನ್ನೂ ಪಡೆದುಕೊಂಡಿದ್ದವು. ಈ ಬಾರಿ ರಾಹುಲ್ ಅವರ ನಾಯಕತ್ವದಲ್ಲಿ ಸರ್ಕಾರದ ದುಷ್ಪರಿಣಾಮಗಳನ್ನು ಬಹಿರಂಗಪಡಿಸುವಲ್ಲಿ ಕಾಂಗ್ರೆಸ್ ಪಕ್ಷ ಧೈರ್ಯದಿಂದ ಹೋರಾಡಿದೆ. ಈ ಕಾರಣಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.