Tag: ಪಾರ್ಸಲ್

  • ಪಾರ್ಸೆಲ್ ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆ- ಸಸ್ಯಾಹಾರಿ ರೆಸ್ಟೋರೆಂಟ್‍ಗೆ ಬೀಗ

    ಪಾರ್ಸೆಲ್ ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆ- ಸಸ್ಯಾಹಾರಿ ರೆಸ್ಟೋರೆಂಟ್‍ಗೆ ಬೀಗ

    ಚೆನ್ನೈ: ಪಾರ್ಸೆಲ್(Parcel) ತೆಗೆದುಕೊಂಡಿದ್ದ ಆಹಾರದಲ್ಲಿ ಇಲಿಯ(Rat) ತಲೆಬುರುಡೆ ಪತ್ತೆಯಾದ ಹಿನ್ನೆಲೆಯಲ್ಲಿ ಸಸ್ಯಾಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ(Tamil Nadu) ನಡೆದಿದೆ.

    ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಾಹಾರಿ ರೆಸ್ಟೋರೆಂಟ್‍ನಲ್ಲಿ(Vegetarian Restaurant) ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು(License) ರದ್ದುಗೊಳಿಸಲಾಗಿದೆ.

    ಆರ್. ಮುರುಳಿ ಎಂಬುವರು ಸಸ್ಯಾಹಾರಿ ರೆಸ್ಟೋರೆಂಟ್‍ನಿಂದ 100ಕ್ಕೂ ಹೆಚ್ಚು ಜನರಿಗೆ ಆಹಾರವನ್ನು(Food) ಆರ್ಡರ್ ಮಾಡಿದ್ದರು. ಇದನ್ನು ಆ ರೆಸ್ಟೋರೆಂಟ್ ಅವರ ಮನೆಗೆ ತಲುಪಿಸಿತ್ತು. ಇದಾದ ನಂತರ ಅಲ್ಲಿದ್ದ ಅತಿಥಿಗಳಲ್ಲಿ ಒಬ್ಬಾತನಿಗೆ, ಬೀಟ್‍ರೂಟ್‍ನಿಂದ ಮಾಡಿದ್ದ ತಿಂಡಿಯಲ್ಲಿ ಇಲಿಯ ತಲೆ ಬುರುಡೆ ಸಿಕ್ಕಿದೆ.

    ಇದರಿಂದಾಗಿ ಆ ಅಡುಗೆಯನ್ನು ಹೋಟೆಲ್‍ಗೆ ತೆಗೆದುಕೊಂಡು ಬಂದು ದೂರು ನೀಡಿದ್ದಾರೆ. ಆದರೆ ಆಡಳಿತ ಮಂಡಳಿ ಈ ದೂರನ್ನು ಸ್ವೀಕರಿಸಲು ನಿರಾಕರಿಸಿದೆ. ಅಷ್ಟೇ ಅಲ್ಲದೇ ಕೆಲಕಾಲ ವಾಗ್ವಾದ ನಡೆದಿದೆ. ಈ ಹಿನ್ನೆಲೆಯಲ್ಲಿ ಮುರುಳಿ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ- ಸದನದಲ್ಲಿ ಮಾಧುಸ್ವಾಮಿ ಗರಂ

    ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಅಧಿಕಾರಿಯು ದೂರಿನ ಮೇರೆಗೆ ಪರಿಶೀಲನೆ ನಡೆಸಲು ಹೋಟೆಲ್‍ಗೆ ತೆರಳಿದ್ದಾರೆ. ಆದರೆ ಅಲ್ಲಿ ಇಲಿಗಳು ಓಡಾಡುತ್ತಿರುವುದು ಕಂಡುಬಂದಿದೆ. ಹೋಟೆಲ್‍ನವರು ಅಡುಗೆ ಮಾಡುವ ಮುನ್ನ ಯಾವುದೇ ಸುರಕ್ಷತಾ ಕ್ರಮವನ್ನು ಮುಂಜಾಗ್ರತೆಯಾಗಿ ತೆಗೆದುಕೊಂಡಿಲ್ಲ ಎಂಬ ವಿಷಯ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪರವಾನಗಿಯನ್ನು ರದ್ದು ಮಾಡಲಾಗಿದೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವೈದ್ಯೆ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಪಾರ್ಸಲ್ ಕೊಡೋದು ತಡವಾಗಿದ್ದಕ್ಕೆ ಹೋಟೆಲ್‍ಗೆ ನುಗ್ಗಿ ದಾಂಧಲೆ

    ಪಾರ್ಸಲ್ ಕೊಡೋದು ತಡವಾಗಿದ್ದಕ್ಕೆ ಹೋಟೆಲ್‍ಗೆ ನುಗ್ಗಿ ದಾಂಧಲೆ

    ಬೆಂಗಳೂರು: ಹೋಟೆಲ್ ನಲ್ಲಿ ಊಟ ಪಾರ್ಸಲ್ ಕೊಡೋದು ತಡವಾಯಿತೆಂದು ಸಿಬ್ಬಂದಿ ಜೊತೆ ಗಲಾಟೆ ಮಾಡಿ, ದಾಂಧಲೆ ನಡೆಸಿರುವ ಘಟನೆ ನಗರದ ಅಮೃತಹಳ್ಳಿಯ ಭುವನೇಶ್ವರಿ ನಗರದಲ್ಲಿರುವ ಸೆವೆನ್ ಸ್ಟಾರ್ ಹೋಟೆಲ್ ನಲ್ಲಿ ನಡೆದಿದೆ.

    ದಾಂಧಲೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜುಲೈ 4ರಂದು ಸ್ಥಳೀಯ ಯುವಕನೊಬ್ಬ ಹೋಟೆಲ್‍ಗೆ ಬಂದು ಊಟ ಪಾರ್ಸಲ್ ಹೇಳಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ಪಾರ್ಸಲ್ ಕೊಡುವುದು ತಡವಾಗಿದೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಗಲಾಟೆ ವೇಳೆ ಸ್ಥಳೀಯ ಯುವಕ ನಾನು ಲೋಕಲ್, ನಮಗೇ ಅವಾಜ್ ಹಾಕ್ತೀಯಾ ಎಂದು ಸಿಬ್ಬಂದಿಗೆ ಬೈದಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ನೀನು ಯಾರಾದ್ರೆ ನಂಗೇನು ಎಂದು ಬೆದರಿಸಿ ಕಳುಹಿಸಿದ್ದ.

    ಇದರಿಂದ ಕೋಪಗೊಂಡ ಯುವಕ, ಇದೀಗ ಹತ್ತಕ್ಕೂ ಹೆಚ್ಚು ತನ್ನ ಸ್ನೇಹಿತರನ್ನು ಕರೆಸಿ ಹೋಟೆಲ್‍ಗೆ ನುಗ್ಗಿಸಿ ದಾಂಧಲೆ ಮಾಡಿದ್ದಾರೆ. ಹೋಟೆಲ್ ಮಾಲೀಕ ಅಂಜನೇಯ ಅವರು ತಡೆಯಲು ಹೋದ ವೇಳೆ ಅವರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಒಳಗೆ ನುಗ್ಗಿ ಚೇರ್, ಗ್ಲಾಸ್, ಸೇರಿದಂತೆ ಹೊಟೇಲ್‍ನಲ್ಲಿದ್ದ ಎಲ್ಲ ವಸ್ತುಗಳನ್ನು ಪೀಸ್ ಪೀಸ್ ಮಾಡಿ ದರ್ಪ ಮರೆದಿದ್ದಾರೆ.

    ತೀವ್ರವಾಗಿ ಗಾಯಗೊಂಡ ಮಾಲೀಕ, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು, ಐದಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.