ತುಮಕೂರು: ರಾಜ್ಯದ್ಯಂತ ಕರ್ನಾಟಕದ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus Rides Across Karnataka) ಪರಿಣಾಮ ಬಸ್ಸಿನಲ್ಲಿ ಹಿಂದೆ ಸೀಟ್‌ಗಾಗಿ ಜಗಳ ನಡೆದಿತ್ತು. ಆದರೆ ಈಗ ಪಾವಗಡದಲ್ಲಿ (Pavagada) ಬಸ್ಸು ಹತ್ತಲು ಮಹಿಳೆಯರು ಜಗಳ ಮಾಡಿದ್ದಾರೆ.
ದೇವಸ್ಥಾನದಲ್ಲಿ ಪೂಜೆ ಮುಗಿಸಿದ ನಂತರ ಬಸ್ಸು ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಬಹುತೇಕ ಬಸ್ಸುಗಳು ರಶ್ ಇದ್ದ ಕಾರಣ ಮಹಿಳೆಯರು ಸಿಕ್ಕಿದ ಬಸ್ಸು ಹತ್ತಲು ಮುಂದಾಗಿದ್ದಾರೆ. ಈ ವೇಳೆ ಒಬ್ಬರನ್ನು ತಳ್ಳಿ ಮತ್ತೊಬ್ಬರು ಹತ್ತಲು ಪೈಪೋಟಿ ನಡೆಸಿದ್ದಾರೆ.
ಬಸ್ ಬಂದ ಕೂಡಲೇ ಸೀಟ್ ಹಿಡಿಯಲು ನಾನು ಮುಂದು ತಾ ಮುಂದು ಮಹಿಳೆ ಬಸ್ಸು ಹತ್ತಿದ್ದಾರೆ. ಈ ವೇಳೆ ಮಹಿಳೆಯೊಬ್ಬಳು ಮತ್ತೊಬ್ಬ ಮಹಿಳೆಗೆ ಹೊಡೆದಿದ್ದಾರೆ. ಮಹಿಳೆಯರು ಬಸ್ಸು ಹತ್ತಲು ಜಗಳ ಮಾಡುತ್ತಿರುವ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೋಲಾರ: ಮೊಬೈಲ್‌ನಲ್ಲಿ ರೀಲ್ಸ್ (Reels) ನೋಡುತ್ತಲೇ ಚಾಲಕ (Bus Driver) ಸರ್ಕಾರಿ ಬಸ್ ಚಲಾಯಿಸಿದ ಘಟನೆ ಕೋಲಾರದಲ್ಲಿ (Kolar) ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
ಸರ್ಕಾರಿ ಬಸ್ ಚಾಲಕ ಹತ್ತಾರು ಪ್ರಯಾಣಿಕರ ಜೀವ ಕೈಯಲ್ಲಿಟ್ಟುಕೊಂಡು ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಬಸ್ ಚಲಾಯಿಸಿದ್ದಾನೆ. ತನ್ನ ಕೈಯಲ್ಲಿ ಪ್ರಯಾಣಿಕರ ಜೀವವಿದೆ ಎಂಬುದನ್ನು ಮರೆತು ಮೊಬೈಲ್‌ನಲ್ಲಿ ಮುಳುಗಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರು ರೋಸಿ ಹೋಗಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರೊಬ್ಬರು ಚಾಲಕನ ನಿರ್ಲಕ್ಷ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: 40 ಅಡಿಗಿಂತ ಕಿರಿದಾದ ರಸ್ತೆಗಳಲ್ಲಿ ವ್ಯಾಪಾರ ಮಾಡಿದರೆ ಅಂಗಡಿ ಬಂದ್: ಬಿಬಿಎಂಪಿ ಮಾರ್ಗಸೂಚಿಯಲ್ಲಿ ಏನಿದೆ?
ತುಮಕೂರು: ಚಲಿಸುತಿದ್ದ ಕಾರು (Car) ಪಲ್ಟಿಯಾಗಿ ಇಬ್ಬರು ಶಿಕ್ಷಕರು (Teachers) ಸಾವನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಪಾವಗಡ (Pavagada) ತಾಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.
ಧನಂಜಯ (58) ಹಾಗೂ ಶ್ರೀಕೃಷ್ಣ (49) ಘಟನೆಯಲ್ಲಿ ಮೃತಪಟ್ಟಿದ್ದಾರೆ. ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯವಾಗಿದೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ
ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ (Semi Final) ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ (Tumakuru) ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ ಬಂಧುಗಳಿಗಾಗಿ ಇಂಡೋ-ಕಿವೀಸ್ ಸೆಮಿ ಫೈನಲ್ ಮ್ಯಾಚ್ ಹಾಕಿಸಿ ಸುದ್ದಿಯಾಗಿದ್ದಾರೆ.
ಪಾವಗಡದ (Pavagada) ಎಸ್‌ಎಸ್‌ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೆಟ್ ಪ್ರೇಮಿಗಳಾದ ಸೌಂದರ್ಯ ಹಾಗೂ ಕಾರ್ತಿಕ್ ಸೆಮಿ ಫೈನಲ್ ದಿನವೇ ತಮ್ಮ ಮದುವೆ ಮಾಡಿಕೊಂಡಿದ್ದು, ಮದುವೆ ಮಂಟಪದಲ್ಲೇ ಇಂಡಿಯಾ ಮತ್ತು ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯ ವೀಕ್ಷಿಸಿದ್ದಾರೆ. ವಧು ಹಾಗೂ ವರ ಮದುವೆ ಮಂಟಪದಲ್ಲಿ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ ಮಾಡಿದ್ದು, ಆರತಕ್ಷತೆಗೆ ಬಂದಿದ್ದ ಸಂಬಂಧಿಕರು, ಸ್ನೇಹಿತರಿಗಾಗಿ ಎಲ್‌ಇಡಿ (LED) ಮೂಲಕ ಪಂದ್ಯವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: World Cup Semifinal: 7 ವಿಕೆಟ್ ಕಿತ್ತು ಗ್ಲೆನ್ ಮ್ಯಾಕ್‌ಗ್ರಾತ್ ದಾಖಲೆ ಸರಿಗಟ್ಟಿದ ಶಮಿ
ತುಮಕೂರು: ನಿಧಿ (Treasure) ನಿಕ್ಷೇಪ ತೋರಿಸುವುದಾಗಿ ಜ್ಯೋತಿಷಿಯೊಬ್ಬರು (Astrologer) 16 ಲಕ್ಷ ರೂ. ಪಡೆದು ನಾಮ ಹಾಕಿದ್ದು, ನಿಧಿ ಸಿಗದ ಹಿನ್ನೆಲೆ ಬೆಂಗಳೂರಿನ ಕಮಲಾ ನಗರ ನಿವಾಸಿಗಳು ಜ್ಯೋತಿಷಿಯನ್ನು ಕಿಡ್ನಾಪ್ (Kidnap) ಮಾಡಿದ ಘಟನೆ ಪಾವಗಡ (Pavagada) ತಾಲೂಕಿನ ರಾಜವಂತಿ ಗ್ರಾಮದಲ್ಲಿ ನಡೆದಿದೆ.
ರಾಜವಂತಿ ಗ್ರಾಮದ ಜ್ಯೋತಿಷಿ ರಾಮಣ್ಣ ಸ್ವಾಮಿ ಎನ್ನುವವರನ್ನು ಬೆಂಗಳೂರಿನ ಕಮಲಾನಗರದ ನಿವಾಸಿಗಳು ಕಿಡ್ನಾಪ್ ಮಾಡಿದ್ದು, ಪಾವಗಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವರಾಜು (32), ಮೇದರಹಳ್ಳಿ ಚಿಕ್ಕಬಾಣಾವರದ ಅನಂತಕೃಷ್ಣ (21), ಆಂಧ್ರದ ಮಡಕಶಿರಾ ತಾಲೂಕಿನ ಕೊತಾಲಗುಟ್ಟದ ನರೇಶ್ (25) ಬಂಧಿತ ಆರೋಪಿಗಳು. ಅತಿಯಾಸೆಗೆ ಬಿದ್ದು ಹಣ ಕೊಟ್ಟವರು ಹಣ ವಸೂಲಿಗಾಗಿ ಜ್ಯೋತಿಷಿಯ ಕಿಡ್ನಾಪ್ ಪ್ಲಾನ್ ಮಾಡಿದ್ದು, ಪೊಲೀಸರು ಕಿಡ್ನಾಪ್ ಮಾಡಿದ ಟೀಂ ಅನ್ನು ಕೇವಲ 12 ಗಂಟೆಯೊಳಗೆ ಬಂಧಿಸಿದ್ದಾರೆ. ಇದನ್ನೂ ಓದಿ: ಕೆಪಿಎಸ್‍ಸಿ ಪರೀಕ್ಷೆಗೆ ತಾಳಿ, ಕಾಲುಂಗುರ ತೆಗೆಸಿ ಸಿಬ್ಬಂದಿ ಯಡವಟ್ಟು – ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು
ರಾತ್ರಿ 9 ಗಂಟೆಗೆ ಜ್ಯೋತಿಷಿಯನ್ನು ರಕ್ಷಿಸಿ ಕಿಡ್ನಾಪರ್ಸ್‌ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಹರೀಶ್ ಎಸ್ಕೇಪ್ ಆಗಿದ್ದಾನೆ. ಬೈಕ್‌ನಲ್ಲಿ ಹೊರಟಿದ್ದ ಜ್ಯೋತಿಷಿ ರಾಮಣ್ಣನವರನ್ನು ಎರಡು ಕಾರುಗಳಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಪಾವಗಡದ ಅರಣ್ಯ ಇಲಾಖೆ ಕಚೇರಿ ಎದುರು ಆರೋಪಿಗಳು ರಾಮಣ್ಣನವರನ್ನು ಕಿಡ್ನಾಪ್ ಮಾಡಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ
ರಾಮಣ್ಣನವರ ಮೊಬೈಲ್‌ನಿಂದಲೇ ಆರೋಪಿಗಳು ರಾಮಣ್ಣರ ಮಗನಿಗೆ ಕರೆ ಮಾಡಿದ್ದರು. ನಿಮ್ಮ ತಂದೆ 16 ಲಕ್ಷ ರೂ. ಸಾಲ ಪಡೆದಿದ್ದಾರೆ. ಆ ಹಣ ಕೊಟ್ಟು ನಿಮ್ಮ ತಂದೆಯನ್ನು ಬಿಡಿಸಿಕೊಂಡು ಹೋಗಿ ಎಂದು ಹೇಳಿದ್ದರು. ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ಬೆಂಗಳೂರಿನ ಉಳ್ಳಾಲ ಬಳಿ ರಾಮಣ್ಣನವರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ
ತುಮಕೂರು: ಮೊಬೈಲ್ ಚಾರ್ಜರ್ (Mobile Charger) ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು (Tumakuru) ಜಿಲ್ಲೆಯ ಪಾವಗಡ (Pavagada) ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.
ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇದನ್ನೂ ಓದಿ: ಬೀದರ್‌ನಲ್ಲಿ ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ
ವಾಪಸ್ ಮನೆಗೆ ಬಂದು ಬಾಗಿಲು ಬಡಿದಾಗ ನಿಖಿಲ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ
ತುಮಕೂರು: ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಠಾಣೆಯಲ್ಲಿನ ವಿಸಿಟರ್ ಪುಸ್ತಕವನ್ನು ತೆರೆದು ದೂರುದಾರನೊಬ್ಬನಿಗೆ ಕರೆ ಮಾಡಿದ್ದಾರೆ. ಆತ ನೀಡಿದ ದೂರಿಗೆ ಪೊಲೀಸರ ಸ್ಪಂದನೆಯ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯ ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ
ಪೊಲೀಸರು ಸಾರ್ವಜನಿಕರ ಸಮಸ್ಯೆಗೆ ಉತ್ತಮವಾಗಿ ಸ್ಪಂದಿಸಬೇಕು. ದೂರುದಾರರು ನೀಡಿದ ದೂರುಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿ ತೆರಳಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಮತ್ತಷ್ಟು ಸಂಕಷ್ಟ- ರಾಜ್ಯಗಳು ಹೇಳಿದ್ದೇನು?
ತುಮಕೂರು: ವಿದ್ಯುತ್ ಪ್ರಸರಣದಲ್ಲಿ ಏರುಪೇರಿನಿಂದ ಶಾರ್ಟ್ ಸರ್ಕ್ಯೂಟ್ (Short Circuit) ಉಂಟಾಗಿ ಗ್ರಾಮ ಪಂಚಾಯಿತಿ (Gram Panchayat) ಕಚೇರಿಯ ಕಂಪ್ಯೂಟರ್ ಸೇರಿದಂತೆ ಕಡತಗಳಿಗೆ ಬೆಂಕಿ ತಗಲಿ ಸುಟ್ಟು ಭಸ್ಮವಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿಯನ್ನು ಆರಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ತುಮಕೂರು: ಸುಮಾರು 42 ವರ್ಷಗಳ ಬಳಿಕ ಕೆರೆ(Lake) ತುಂಬಿದಕ್ಕೆ ಹರ್ಷಗೊಂಡ ಜನರು ಕುಣಿದು ಕುಪ್ಪಳಿಸಿದ ಘಟನೆ ಪಾವಗಡ(Pavagada) ಸಮೀಪದ ಆಂಧ್ರದ ಮಡಕಶಿರಾ(Madakasira) ತಾಲೂಕಿನ ಗೌಡನಕುಂಟಾ ಗ್ರಾಮದಲ್ಲಿ ನಡೆದಿದೆ.
Gowdankunta near Pavagada at Karnataka – Andhra Pradesh border.
The entire village came out to dance and celebrate, after the village lake overflowed for the first time in 42 years! This is one of the driest places of India. Yes, people celebrate floods too. {Video: @sreedharag} pic.twitter.com/9qRXTEqKuV
ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ರವಿಚಂದ್ರನ್ ಅಭಿನಯದ ʼನಾನು ನನ್ನ ಹೆಂಡ್ತಿʼ ಸಿನಿಮಾದ “ಯಾರೇ ನೀನು ರೋಜಾ ಹೂವೆ ಯಾರೆ ನೀನು ಮಲ್ಲಿಗೆ ಹೂವೆ” ಕನ್ನಡದ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ವೃದ್ಧರು ಮಹಿಳೆಯರು ಮಕ್ಕಳು ಯುವಕರು ಹೀಗೆ ಎಲ್ಲಾ ಜನರು ಈ ಒಂದು ಸಂತಸದಲ್ಲಿ ಭಾಗಿಯಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದೆ. ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ಈ ವಿಚ್ಛಿದ್ರಕಾರಿ ಶಕ್ತಿಗಳು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಡೇಜರಸ್ ಫ್ಲೈ ಓವರ್‌ಗಳು
ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಉಚ್ಛನ್ಯಾಯಾಲಯದ ಬಾರ್ ಕೌನ್ಸಿಲ್ ಅವರೂ ಸಹ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಕೂಡಲೇ ತನಿಖೆ ನಡೆಸಲು ಸೂಚಿಸಲಾಗಿದೆ. ತಮಿಳುನಾಡಿನಿಂದ ರಾಜ್ಯದ ವಶಕ್ಕೆ ಆರೋಪಿಗಳನ್ನು ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ. ಮೂರು ನ್ಯಾಯಾಧೀಶರಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ’ ಕೆಟಗರಿಯ ಭದ್ರತೆಯನ್ನು ನೀಡುವ ತೀರ್ಮಾವನ್ನು ಸರ್ಕಾರ ಕೈಗೊಂಡಿದೆ ಎಂದರು.
ಡೋಂಗಿ ಜಾತ್ಯತೀತರು ಮೌನವಹಿಸಿದ್ದಾರೆ
ಇದೇ ವೇಳೆ ನ್ಯಾಯಮೂರ್ತಿಗಳು ನೀಡುವ ತೀರ್ಪಿಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣದ ಮೇಲೆ ಡೋಂಗಿ ಜಾತ್ಯತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಾಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕವನ್ನು ಒಡ್ಡುತ್ತವೆ. ಸರ್ಕಾರದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕವಾಗಿ ಈ ಪ್ರಕರಣವನ್ನು ಖಂಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ
ತುಮಕೂರಿನ ಪಾವಗಡ ಬಸ್ ಅಪಘಾತ
ಶಾಲಾ ಕಾಲೇಜುಗಳು ಇರುವ ಸಂದರ್ಭದಲ್ಲಿ ಬಸ್‍ಗಳಲ್ಲಿ ಅದರ ಮಿತಿಗಿಂತ ಹೆಚ್ಚಿನ ಜನರನ್ನು ಒಯ್ಯುವ ಬಸ್‌ಗಳನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಆ ರೀತಿಯ ಬಸ್‍ಗಳ ಲೈಸೆನ್ಸ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಇಂತಹ ಬಸ್‍ಗಳು ಸಂಚರಿಸುವ ಮಾರ್ಗದಲ್ಲಿ ನಿರಂತರ ತಪಾಸಣೆ ಮಾಡಲೂ ಸಹ ಸೂಚಿಸಲಾಗಿದೆ. ಗಾಯಾಳುಗಳಿಗೆ ಅವಶ್ಯಕತೆ ಇದ್ದಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.