Tag: ಪಾವನ ಗೌಡ

  • ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ ‘ಪ್ರಭುತ್ವ’ (Prabhutva) ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ (Chetan Chandra) ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೈಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು. ಈ ಚಿತ್ರದ ಟ್ರೈಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

    ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವ ಸಾರುವ ಈ ಸಿನಿಮಾಗೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮೇಘಡಹಳ್ಳಿ ಶಿವಕುಮಾರ್. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಚುನಾವಣೆ ಮುಂಚೆಯೇ ಚಿತ್ರವನ್ನು ಬಿಡುಗಡೆ ‌ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರವಿರಾಜ್ ಎಸ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    ಚಿತ್ರದ ಕಥಾಹಂದರದ ಬಗ್ಗೆ ಪರಿಚಯ ನೀಡಿದ್ದ, ನಿರ್ದೇಶಕ ಆರ್ ರಂಗನಾಥ್, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ಧನ್ಯವಾದ ಹೇಳಿದರು. ಇದು ನನ್ನ ಹನ್ನೆರಡನೇ ಸಿನಿಮಾ. ಮೇಘಡಹಳ್ಳಿ ಶಿವಕುಮಾರ್ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಾಯಕ ಚೇತನ್ ಚಂದ್ರ.

    ಅನು ಎಂಬ ಪಾತ್ರದಲ್ಲಿ ನಟಿಸಿರುವುದಾಗಿ ನಾಯಕಿ ಪಾವನ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ವಿಜಯ್ ಚೆಂಡೂರ್, ವೀಣಾ ಸುಂದರ್, ಅನಿತಾ‌ ಭಟ್ ಮುಂತಾದ ಕಲಾವಿದರು ಹಾಗೂ ಸಂಭಾಷಣೆ ಬರೆದಿರುವ ವಿನಯ್ ‘ಪ್ರಭುತ್ವ’  ಚಿತ್ರದ ಕುರಿತು ‌ಮಾತನಾಡಿದರು.  ಎಮಿಲ್ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಚೇತನ್ ಚಂದ್ರ, ಪಾವನ, ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರಿದ್ದಾರೆ.

  • ‘ಬಿಗ್ ಬಾಸ್’ ಶಶಿ ನಟನೆಯ ಮೆಹಬೂಬ ಸಿನಿಮಾದ ಉಸಿರೇ ಉಸಿರೇ ಸಾಂಗ್ ರಿಲೀಸ್

    ‘ಬಿಗ್ ಬಾಸ್’ ಶಶಿ ನಟನೆಯ ಮೆಹಬೂಬ ಸಿನಿಮಾದ ಉಸಿರೇ ಉಸಿರೇ ಸಾಂಗ್ ರಿಲೀಸ್

    ಬಿಗ್ ಬಾಸ್’ ಖ್ಯಾತಿಯ ಶಶಿ (Shashi) ನಾಯಕನಾಗಿ ನಟಿಸಿರುವ “ಮೆಹಬೂಬ” (Mehbooba) ಚಿತ್ರದ ಮತ್ತೊಂದು ಸುಮಧುರ ಹಾಡು (Song)  ಬಿಡುಗಡೆಯಾಗಿದೆ. ವಿ.ರಘುಶಾಸ್ತ್ರಿ ಅವರು ಈ ಹಾಡನ್ನು “ಎದೆ ತುಂಬಿ ಹಾಡುವೆನು” ಖ್ಯಾತಿಯ ನದಿರಾ ಭಾನು ಇಂಪಾಗಿ ಹಾಡಿದ್ದಾರೆ.  ಮ್ಯಾಥ್ಯೂಸ್‌ ಮನು ಸಂಗೀತ ನೀಡಿದ್ದಾರೆ. ಶಶಿ ಹಾಗೂ ಪಾವನ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಸ್ಕಂದ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೇರಳದ ನಡೆದ ನೈಜಘಟನೆ ಆಧರಿಸಿರುವ ಈ ಚಿತ್ರವನ್ನು ಅನೂಪ್ ಆಂಟೋನಿ (Anoop Antony) ನಿರ್ದೇಶಿಸಿದ್ದಾರೆ. “ಮೆಹಬೂಬ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಮ್ಯಾಥ್ಯೂಸ್‌ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಹಾಗೂ ಸಂಭಾಷಣೆ ಯನ್ನು ರಘುಶಾಸ್ತ್ರಿ ಅವರೆ ಬರೆದಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಶಶಿ, ಪಾವನ ಗೌಡ (Pavana Gowda), ಕಬೀರ್ ದುಹಾನ್ ಸಿಂಗ್, ಸಲ್ಮಾನ್(ಕಿರಿಕ್ ಪಾರ್ಟಿ), ಬುಲೆಟ್ ಪ್ರಕಾಶ್, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಕಲ್ಯಾಣಿರಾಜು, ಸಂದೀಪ್, ಧನರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]