Tag: ಪಾಸ್

  • ಸಂಸತ್‌ ಮೇಲೆ ದಾಳಿ – ಅಂದು ಬೀದರ್‌, ಇಂದು ಮೈಸೂರು ಸಂಸದರಿಂದ ಪಾಸ್‌

    ಸಂಸತ್‌ ಮೇಲೆ ದಾಳಿ – ಅಂದು ಬೀದರ್‌, ಇಂದು ಮೈಸೂರು ಸಂಸದರಿಂದ ಪಾಸ್‌

    ಬೀದರ್ : ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಕಚೇರಿಯಿಂದ ಪಾಸ್ ಪಡೆದಿದ್ದ ರೀತಿಯಲ್ಲಿಯೇ 22 ವರ್ಷದ ಹಿಂದೆ ಅಂದು ಬೀದರ್‌ ಬಿಜೆಪಿ ಸಂಸದ (Bidar BJP MP) ರಾಮಚಂದ್ರ ವೀರಪ್ಪ (Ramachandrappa Veerappa) ಕಚೇರಿಯಿಂದ ಉಗ್ರರು ಪಾಸ್ ಪಡೆದು ಸಂಸತ್‌ ಮೇಲೆ ದಾಳಿ (Parliament Attack) ಮಾಡಿದ್ದರು.

    ರಾಮಚಂದ್ರ ವೀರಪ್ಪ ಅವರ ಲೆಟರ್ ಹೆಡ್ ಮತ್ತು ನಕಲಿ ಸಹಿ ಬಳಸಿದ್ದ ಉಗ್ರರು ದೆಹಲಿಯಲ್ಲಿದ್ದ ಸಂಸದರ ಸಹಾಯಕರಿಗೆ ಪತ್ರ ತೋರಿಸಿದ್ದರು. ಈ ಪತ್ರದ ಆಧಾರದ ಮೇಲೆ ರಾಮಚಂದ್ರಪ್ಪ ವೀರಪ್ಪ ಅವರ ಕಚೇರಿಯಿಂದ ಸಂಸತ್‌ ಪ್ರವೇಶಕ್ಕೆ ಪಾಸ್‌ ನೀಡಲಾಗಿತ್ತು. ಈ ಕಾರ್‌ ಪಾಸ್‌ ಮೂಲಕ ಉಗ್ರರು ಸಂಸತ್‌ ಆವರಣ ಪ್ರವೇಶಿಸಿದ್ದರು. ಇದನ್ನೂ ಓದಿ: ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

     

    2001ರಲ್ಲಿ ಏನಾಯ್ತು?
    ಡಿಸೆಂಬರ್ 13ರ ಬೆಳಗ್ಗೆ ಐವರು ಭಯೋತ್ಪಾದಕರು ಗೃಹ ಸಚಿವಾಲಯದ ಸ್ಟಿಕ್ಕರ್‌ ಅಂಟಿಸಿರುವ ಕೆಂಪು ದೀಪ ಇರುವ ಅಂಬಾಸಿಡರ್‌ ಕಾರಿನಲ್ಲಿ ಆಗಮಿಸಿದ್ದರು. ಬೆಳಗ್ಗೆ 11:40ಕ್ಕೆ ಸಂಸತ್‌ ಭವನದ ಸಂಕೀರ್ಣವನ್ನು ಪ್ರವೇಶಿಸಿದರು.

    ಉಗ್ರರಿದ್ದ ಕಾರು ಸಂಸತ್‌ ಭವನದ ಗೇಟ್‌ ಸಂಖ್ಯೆ 12ರ ಕಡೆಗೆ ಸಾಗುತ್ತಿದ್ದಂತೆ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಾರ್ಡ್‌ ಸಿಬ್ಬಂದಿಗೆ ಅನುಮಾನ ಬಂದಿತ್ತು. ವಾಹನವನ್ನು ಹಿಂದಕ್ಕೆ ತಿರುಗಿಸಲು ಸಿಬ್ಬಂದಿ ಸೂಚಿಸಿದರು. ಈ ವೇಳೆ ಕಾರು ಕ್ರಿಶನ್‌ ಕಾಂತ್‌ ಅವರ ವಾಹನಕ್ಕೆ ಅಪ್ಪಳಿಸಿತ್ತು. ಹೊರಬಂದ ಉಗ್ರರು ಗುಂಡಿನ ದಾಳಿ ಆರಂಭಿಸಿದರು.

    ದಾಳಿ ನಡೆಯುತ್ತಿದ್ದಂತೆ ಸೈರನ್‌ ಮೊಳಗಿಸಲಾಯಿತು. ಸುಮಾರು 30 ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿ ಎಂಟು ಭದ್ರತಾ ಸಿಬ್ಬಂದಿ ಹುತಾತ್ಮರಾದರು. ದಾಳಿಗೈದ ಐವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದಾಳಿಯ ವೇಳೆ ಸಂಸತ್‌ನಲ್ಲಿ ನೂರಕ್ಕೂ ಹೆಚ್ಚು ಸಂಸದರು ಇದ್ದರು.

     

  • ಯಾವಾಗ ಏನಾಗಬಹುದು ಊಹೆ ಮಾಡಲು ಸಾಧ್ಯವಿಲ್ಲ, ನಮಗೆ ಎಚ್ಚರಿಕೆ ಗಂಟೆ: ಯುಟಿ ಖಾದರ್‌

    ಯಾವಾಗ ಏನಾಗಬಹುದು ಊಹೆ ಮಾಡಲು ಸಾಧ್ಯವಿಲ್ಲ, ನಮಗೆ ಎಚ್ಚರಿಕೆ ಗಂಟೆ: ಯುಟಿ ಖಾದರ್‌

    ಬೆಳಗಾವಿ: ಸಂಸತ್ ಸ್ಮೋಕ್‌ ಬಾಂಬ್ (Smoke Bomb) ಪ್ರಕರಣ ನಮಗೆ ಎಚ್ಚರಿಕೆ ಗಂಟೆ ಎಂದು ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ (UT Khader) ಹೇಳಿದ್ದಾರೆ.

    ಯಾವಾಗ ಏನಾಗಬಹುದು ಎಂದು ಊಹೆ ಮಾಡಲು ಸಾಧ್ಯವಿಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು. ಜನರಿಗೆ ಪಾಸ್ (Pass) ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು‌ ಸೂಚಿಸಲಾಗಿದೆ ಎಂದರು.  ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

    ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಣೆಗೆ ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮೂಲಕ ಸುವರ್ಣಸೌಧಕ್ಕೆ (Suvarna Soudha) ಪ್ರವೇಶ ನೀಡಲಾಗಿದೆ. ಜನ ಸಾಮಾನ್ಯರು ಸಹಕರಿಸಬೇಕು ಎಂದು ಹೇಳಿದರು.  ಇದನ್ನೂ ಓದಿ: 45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

    ಸಂಸತ್‌ ಮೇಲೆ ದಾಳಿ ನಡೆದ ಬೆನ್ನಲ್ಲೇ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದ್ದು ಪಾಸ್ ವಿತರಣೆ ವ್ಯವಸ್ಥೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.

  • ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಯತ್ನ

    ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಯತ್ನ

    ಮೈಸೂರು: ಲೋಕಸಭೆಯ (Smoke Bomb in Loksabha) ಒಳಗೆ ಹೋಗಲು ಪಾಸ್ ಕೊಟ್ಟ ಕಾರಣಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ (Pratap Simha) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

    ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿರುವ ಕಚೇರಿ ಮುಂಭಾಗ ಕಾಂಗ್ರೆಸ್ (Congress) ಪ್ರತಿಭಟನೆ ನಡೆಸಿದೆ. ಪ್ರತಾಪ್ ಸಿಂಹ ಪಾಸ್ ಕೊಟ್ಟಿರುದನ್ನು ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಂಸದರ ಕಚೇರಿಯ ಕಾಂಪೌಡ್ ಗೋಡೆ ಏರಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.

    ನಡೆದಿದ್ದೇನು..?: ಸಂಸತ್ (Parliament) ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಬಳಿಕ ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಮೈಸೂರು ಸಂಸದರ ಕಚೇರಿಯಿಂದ ಪಾಸ್ ವಿತರಣೆಯಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ – ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ

    ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸಂಸದರು `ಪಬ್ಲಿಕ್ ಟಿವಿ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಾಪ ವೀಕ್ಷಿಸುತ್ತೇವೆ ಎಂದು ಹೇಳಿ ಯುವಕರು ಪಾಸ್ ಪಡೆದುಕೊಂಡು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ. ಮೈಸೂರು ಮೂಲದ ಮನೋರಂಜನ್ ಎಂಬ ಯುವಕ ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಆತನನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

  • BMTCಯಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ – ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ ನೀಡಲು ಚಿಂತನೆ

    BMTCಯಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ – ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್ ನೀಡಲು ಚಿಂತನೆ

    ಬೆಂಗಳೂರು: ಬಿಎಂಟಿಸಿಯಿಂದ (BMTC) ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಕಾರ್ಮಿಕರಿಗೆ ಬಸ್ ಪಾಸ್ ವಿತರಣೆ ಮಾಡಲು ಚಿಂತನೆ ನಡೆಸಿದೆ.

    ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್‍ನಿಂದ ಸ್ಮಾರ್ಟ್ ಕಾರ್ಡ್‍ಗೆ ಅಪ್ ಗ್ರೇಡ್ ಮಾಡಲಾಗಿದ್ದು, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಬಿಎಂಟಿಸಿ ಸಂಸ್ಥೆಯ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ಸಿಗುತ್ತದೆ.

    ಸೇವಾ ಸಿಂಧು ಪೋರ್ಟಲ್‍ನ ಮೂಲಕ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯ ಪಾಸ್‍ಗಳನ್ನು ವಿತರಣೆ ಮಾಡಲು ಬಿಎಂಟಿಸಿ ಚಿಂತನೆ ನಡೆಸುತ್ತಿದೆ. ಇದನ್ನೂ ಓದಿ: ಸ್ನೇಹಿತರಿಗೆ ಚಿಕನ್ ನೀಡದ್ದಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ

    ಬೇಕಾದ ದಾಖಲೆಗಳು?: ಕರ್ನಾಟಕ ಕಟ್ಟಡ ಮತ್ತು ಇತರೆ ನೋಂದಣಿಯಾಗಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಜೊತೆಗೆ ಆಧಾರ್ ಕಾರ್ಡ್‍ನ ಪ್ರತಿಯಿರಬೇಕು. ಇದನ್ನೂ ಓದಿ: ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

    Live Tv
    [brid partner=56869869 player=32851 video=960834 autoplay=true]

  • ಮಗಳ ಜೊತೆಗೆ ತಂದೆಯೂ SSLC ಪರೀಕ್ಷೆ ಬರೆದು ಪಾಸ್

    ಮಗಳ ಜೊತೆಗೆ ತಂದೆಯೂ SSLC ಪರೀಕ್ಷೆ ಬರೆದು ಪಾಸ್

    ಹಾವೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದರೆ ಸಾಕು ತಮ್ಮ ಮಕ್ಕಳ ಫಲಿತಾಂಶ ಯಾವ ರೀತಿ ಬರುತ್ತದೆ ಎಂದು ಎಷ್ಟೋ ತಂದೆ, ತಾಯಂದಿರು ಕಾಯುತ್ತಿರುತ್ತಾರೆ. ಅದರೆ ಸತತ ಪ್ರಯತ್ನದಿಂದ ತನ್ನ ಮಗಳ ಜೊತೆಗೆ ತಂದೆಯೂ ಪರೀಕ್ಷೆ ಬರೆದು ಒಂದೇ ಬಾರಿಗೆ ತಂದೆ ಮತ್ತು ಮಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಪರೂಪದ ಘಟನೆ ನಡೆದಿದೆ.

    ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ನಾಗರಾಜ ಹರಿಜನ ಅವರು ಕುಡುಪಲಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಹಲವು ವರ್ಷಗಳಿಂದ ಸ್ವಚ್ಛತಾಗಾರನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. 1995ರಲ್ಲಿ ನಾಗರಾಜ, ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಶಾಲೆಯಲ್ಲಿ ಓದಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸಿದ್ದರು. ಅಂದು ಎಲ್ಲ ವಿಷಯಗಳು ಫೇಲ್ ಆಗಿದ್ದವು. ಅಂದಿನಿಂದ ನಾಗರಾಜ ಮರಳಿ ಯತ್ನವ ಮಾಡು ಎಂಬಂತೆ ಆರು ಬಾರಿ ಪರೀಕ್ಷಾ ಅರ್ಜಿ ತುಂಬಿ ಪರೀಕ್ಷೆಗೆ ಕುಳಿತಿದ್ದರು. ಆದರೆ ಎಷ್ಟೇ ಪ್ರಯತ್ನಿಸಿದರೂ ಕನ್ನಡ, ಹಿಂದಿ, ಸಮಾಜ ವಿಜ್ಞಾನ ಮೂರು ವಿಷಯದಲ್ಲಿ ಪಾಸಾಗಿ ಗಣಿತ, ಇಂಗ್ಲೀಷ್, ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರು. ಅದಾದ ನಂತರ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ವೀರಮಹೇಶ್ವರ ಪ್ರೌಢ ಶಾಲೆಯಿಂದ ಪರೀಕ್ಷಾ ಅರ್ಜಿ ತುಂಬಿ ಪರೀಕ್ಷೆ ಎದುರಿಸಿದ್ದರು. ಆದರೂ ನಾಗರಾಜ ಉತ್ತೀರ್ಣರಾಗಿರಲಿಲ್ಲ. ನಂತರ ಪರೀಕ್ಷೆಗೆ ಹಾಜರಾಗುವುದನ್ನೇ ಬಿಟ್ಟಿದ್ದರು.

    ಕುಡುಪಲಿ ಗ್ರಾಮದ ವೀರಮಹೇಶ್ವರ ಪ್ರೌಢ ಶಾಲೆಯಲ್ಲಿ ನಾಗರಾಜರ ಮಗಳು ಚಂದ್ರಮ್ಮ ಹರಿಜನ ಎಸ್‍ಎಸ್‍ಎಲ್‍ಸಿ ಓದುತ್ತಿದ್ದಳು. ಕೊರೊನಾ ಹಿನ್ನೆಲೆಯಲ್ಲಿ ಶಾಲೆ ಇಲ್ಲದೆ ಮಗಳು ಮನೆಯಲ್ಲಿಯೇ ಅಭ್ಯಾಸ ಮಾಡುತ್ತಿರುವುದು ನಾಗರಾಜ ಅವರಿಗೆ ಪರೀಕ್ಷೆಗೆ ಮತ್ತೆ ಕೂರಬೇಕು ಎಂಬ ಆಸೆ ಹುಟ್ಟಿಸಿತು. ಇದೊಂದು ಬಾರಿ ಪರೀಕ್ಷೆ ಎದುರಿಸುವ ಸಂಕಲ್ಪ ಮಾಡಿದ ನಾಗರಾಜ, ತಮ್ಮ ಮಗಳ ಅಭ್ಯಾಸದೊಂದಿಗೆ ತಾನೂ ಸಹ ಅಭ್ಯಾಸ ಮಾಡುತ್ತಾ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಈ ಬಾರಿ ಮಗಳೊಂದಿಗೆ ಎಸ್‍ಎಸ್‍ಎಲ್ಸಿ ಪರೀಕ್ಷೆ ಎದುರಿಸಿ ಉಳಿದುಕೊಂಡಿದ್ದ ಗಣಿತ, ಇಂಗ್ಲೀಷ್ ಮತ್ತು ವಿಜ್ಞಾನ ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲ ವಿಷಯಗಳು ಸೇರಿ ನಾಗರಾಜ ಅವರಿಗೆ ಶೇ.57ರಷ್ಟು ಫಲಿತಾಂಶ ಬಂದಿದೆ.

    ಎಸ್‍ಎಸ್‍ಎಲ್‍ಸಿ ಮಗಳು ಇದ್ದರೂ ಅಪ್ಪ ಉತ್ತೀರ್ಣರಾಗಿ ಶೇ.57ರಷ್ಟು ಫಲಿತಾಂಶ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಒಂದೆಡೆ ತಂದೆ ಪಾಸಾಗಿದ್ದರೆ, ಮತ್ತೊಂದೆಡೆ ನಾಗರಾಜರ ಮಗಳು ವೀರಮಹೇಶ್ವರ ಪ್ರೌಢ ಶಾಲೆಯಲ್ಲಿ ಓದುತ್ತಿದ್ದ ಚಂದ್ರಮ್ಮ ಹರಿಜನ ಎಸ್‍ಎಸ್‍ಎಲ್ಸಿ ಪರೀಕ್ಷೆಯಲ್ಲಿ 519 ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ. ಅಪ್ಪ ಮತ್ತು ಮಗಳು ಒಂದೇ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಕುಳಿತು ಇಬ್ಬರೂ ಪಾಸಾಗಿರುವುದು ನಾಗರಾಜ ಹರಿಜನರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

  • ತಾಯಿ, ಮಗ SSLC ಪರೀಕ್ಷೆಯಲ್ಲಿ ಉತ್ತೀರ್ಣ

    ತಾಯಿ, ಮಗ SSLC ಪರೀಕ್ಷೆಯಲ್ಲಿ ಉತ್ತೀರ್ಣ

    ಮಡಿಕೇರಿ: ಒಂದೇ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ತಾಯಿ, ಮಗ ಇಬ್ಬರು ಪಾಸ್ ಆಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕೈಕೇರಿ ನಿವಾಸಿಯಾಗಿರುವ ಸಮಾಜ ಸೇವಕಿ ಪಡಿಕಲ್ ಕುಸುಮಾವತಿ ಚಂದ್ರಶೇಖರ್ ಹಾಗೂ ಪುತ್ರ ಗೌತಮ್ ಇಬ್ಬರು ಒಟ್ಟಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು.

    ಗೌತಮ್ ಗೋಣಿಕೊಪ್ಪಲು ಪ್ರೌಢಶಾಲೆಯಲ್ಲಿ ಈ ಹಿಂದೆ ಪರೀಕ್ಷೆ ಬರೆದು ಗಣಿತದಲ್ಲಿ ಅನುತ್ತೀರ್ಣರಾಗಿದ್ದರು. ಆದರೆ ಈ ಬಾರಿ ತನ್ನ ತಾಯಿಯೊಂದಿಗೆ ಪರೀಕ್ಷೆ ಕೂರುವ ಅವಕಾಶ ಸಿಕ್ಕಿತು. ಮಡಿಕೇರಿಯಲ್ಲಿ ಕುಸುಮಾರವರು 6 ವಿಷಯಗಳ ಪರೀಕ್ಷೆಗೆ ಹಾಜರಾಗಿದ್ದರೆ, ಪುತ್ರ ಗೌತಮ್ ಗೋಣಿಕೊಪ್ಪಲು ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದು ವಿಶೇಷ.

    ಕುಸುಮಾವತಿ 18 ವರ್ಷಗಳ ಹಿಂದೆ ಟಿ.ಶೆಟ್ಟಿಗೇರಿ ಮಾಯಣಮಾಡ ಮಂದಣ್ಣ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರಬೇಕಾದರೆ ವಿವಾಹವಾದ್ದರಿಂದ ವಿದ್ಯಾಭ್ಯಾಸಕ್ಕೆ ಕಡಿವಾಣ ಬಿತ್ತು. ಇದೀಗ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. ವಿಶೇಷವೆಂದರೆ ತಾಯಿ, ಮಗ ಇಬ್ಬರೂ ಒಂದೇ ಸಮಯದಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಿರುವುದು ಕೊಡಗು ಜಿಲ್ಲೆಯ ಮಟ್ಟಿಗೆ ವಿಭಿನ್ನ ಸಾಧನೆಯಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ:ಮಕ್ಕಳ ಮೊದಲ ಲಸಿಕೆಗೆ ಕೇಂದ್ರ ಗ್ರೀನ್ ಸಿಗ್ನಲ್?

  • ಸೋಮವಾರದಿಂದ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರಿಗೆ ಪಾಸ್ ವಿತರಣೆ

    ಸೋಮವಾರದಿಂದ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರಿಗೆ ಪಾಸ್ ವಿತರಣೆ

    – ವಾಹನ ನಿಲುಗಡೆ ಸಾಮಥ್ಯಕ್ಕನುಗುಣವಾಗಿ ಪ್ರವಾಸಿಗರಿಗೆ ಅವಕಾಶ

    ಚಿಕ್ಕಬಳ್ಳಾಪುರ: ಪರಿಸರ ಸಂರಕ್ಷಣೆ, ವಾಹನ ದಟ್ಟಣೆ ಹಾಗೂ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಜುಲೈ 19 ರಿಂದ ನಂದಿಬೆಟ್ಟದ ವಾಹನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಸಾಮಥ್ಯಕ್ಕನುಗುಣವಾಗಿ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಡಿಸಿ ಆರ್.ಲತಾ ತಿಳಿಸಿದರು.

    ಸಪ್ತಗಿರಿಗಳ ಧಾಮ, ಸಪ್ತ ನದಿಗಳ ಉಗಮ ಸ್ಥಾನವಾದ ನಂದಿಬೆಟ್ಟವನ್ನು ವೀಕ್ಷಿಸಲು ಜಿಲ್ಲಾಡಳಿತ ರೂಪಿಸಲಿರುವ ಈ ನೂತನ ನಿಯಮಗಳನ್ನು ಪ್ರವಾಸಿಗರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ -19 ಲಾಕ್ ಡೌನ್ ಪ್ರಯುಕ್ತ ಏಪ್ರಿಲ್ 27 ರಿಂದ ಜಾರಿಯಲ್ಲಿದ್ದ ನಿಬರ್ಂಧವನ್ನು ತೆರೆವುಗೊಳಿಸಿ ಜೂನ್ 21 ರಿಂದ ನಂದಿಬೆಟ್ಟಕ್ಕೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಜುಲೈ 10 ರಂದು 2,858 ಮತ್ತು ಜುಲೈ 11 ರಂದು 4,895 ಪ್ರವಾಸಿಗರು ನಂದಿಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ಹಿನ್ನಲೆಯಲ್ಲಿ ಜನಸಂದಣಿ ದಿನೇ ದಿನೇ ಹೆಚ್ಚಾಗುತ್ತಿರುವುದನ್ನು ಮನಗಂಡ ಜಿಲ್ಲಾಡಳಿತ ಜುಲೈ 7 ರಂದು ವಾರಾಂತ್ಯದ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿತ್ತು.

    ಬಡವರ ಊಟಿ ಎಂದೇ ಹೆಸರುವಾಸಿಯಾದ ನಂದಿಬೆಟ್ಟವೂ ಬೆಂಗಳೂರು ರಾಜ್ಯಧಾನಿಗೆ ತುಂಬಾ ಹತ್ತಿರವಿರುದರಿಂದ ಹೆಚ್ಚೆಚ್ಚು ಪ್ರವಾಸಿಗರು ನಂದಿಬೆಟ್ಟಕ್ಕೆ ಭೇಟಿ ನೀಡುವುದನ್ನು ಮನಗಂಡ ಜಿಲ್ಲಾಡಳಿತ ನಂದಿಬೆಟ್ಟದ ಮೇಲೆ ಮುಂದಾಗಬಹುದಾದ ಜನಸಂದಣಿಯನ್ನು ತಡೆಗಟ್ಟಿ ಸುರಕ್ಷಿತವಾಗಿ ಪ್ರವಾಸಿಗರು ಬಂದು ಹೋಗಲು ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆಯನ್ನು ರೂಪಿಸುವ ಉದ್ದೇಶ ಹೊಂದಿದೆ. ಈ ಹಿನ್ನಲೆಯಲ್ಲಿ ಜುಲೈ 19 ರಿಂದ ವಾಹನ ನಿಲುಗಡೆಗೆ ಅವಕಾಶವಿರುವಷ್ಟು ಮಂದಿಯನ್ನು ಮಾತ್ರ ಪ್ರವೇಶ ಪಾಸ್ ಅನ್ನು ನೀಡಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಲಾಗಿದೆ. ಅದಕ್ಕೆ ಪ್ರವಾಸಿಗರು ಸಹಕರಿಸಬೇಕು. ಆರಂಭದಲ್ಲಿ ಈ ಪ್ರಕ್ರಿಯೆಯು ಒಂದೆರಡು ವಾರ ಭೌತಿಕವಾಗಿ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಆನ್ ಲೈನ್ ಮೂಲಕ ನಿರ್ವಹಿಸಲಾಗುವುದು ಎಂದರು.

    ಶೇಕಡಾ 50% ರಷ್ಟು ಪಾಸ್ ಗಳನ್ನು ಆನ್ ಲೈನ್ ನಲ್ಲಿ ಶೇ.50 ಪಾಸ್ ಗಳನ್ನು ಬೆಟ್ಟಕ್ಕೆ ಪ್ರವೇಶಿಸುವ ಮುಖ್ಯದ್ವಾರದಲ್ಲಿ ನೀಡಲಾಗುತ್ತದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ ಪಾಸ್ ಪಡೆಯಬೇಕು. ಆರಂಭದಲ್ಲಿ ತುಸು ಗೊಂದಲವಾದರೂ ಸಹ ಮುಂದಿನ ದಿನಗಳಲ್ಲಿ ಈ ರೀತಿಯ ವ್ಯವಸ್ಥಿತ ವೀಕ್ಷಣೆಯಿಂದ ಪ್ರವಾಸಿತಾಣವನ್ನು ವೈಜ್ಞಾನಿಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದು ನುಡಿದರು.

    ಪ್ರಸ್ತುತ ನಂದಿಗಿರಿಧಾಮದ ಮೇಲಿರುವ ವಾಹನ ನಿಲ್ದಾಣದಲ್ಲಿ ಪ್ರಸ್ತುತ 310 ಕಾರು, 550 ದ್ವಿಚಕ್ರ ವಾಹನಗಳ ಪಾಕಿರ್ಂಗ್ ವ್ಯವಸ್ಥೆಯಿದ್ದು, ಬೆಟ್ಟದ ಕೆಳಭಾಗದಲ್ಲಿ 350 ಕಾರು ಹಾಗೂ 200 ದ್ವಿಚಕ್ರ ವಾಹನ ಪಾಕಿರ್ಂಗ್ ಮಾಡಬಹುದಾಗಿದೆ. ಈ ನಿಲುಗಡೆಯಲ್ಲಿ ಪಾರ್ಕ್ ಮಾಡಲು ವ್ಯವಸ್ಥೆ ಇರುವ ವಾಹನಗಳಲ್ಲಿನ ಪ್ರವಾಸಿಗರಿಗೆ ಮಾತ್ರ ಪಾಸ್ ವಿತರಿಸಿ ನಂದಿಬೆಟ್ಟ ವೀಕ್ಷಿಸಲು ಅನುಮತಿ ನೀಡಲಾಗುವುದು. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅವರ ನಿರ್ದೇಶನದಂತೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

    ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರುವ ಮೂಲಕ ನಂದಿ ಪ್ರವಾಸ ತಾಣವನ್ನು ಸಂರಕ್ಷಿಸುವ ಜೊತೆಗೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಹಯೋಗದೊಂದಿಗೆ 7 ಎಕರೆ ಜಮೀನು ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡಿ ಅಲ್ಲಿಂದ ಬಸ್‌ಗಳ ಮೂಲಕ ಪ್ರವಾಸಿರನ್ನು ನಂದಿಗಿರಿಧಾಮಕ್ಕೆ ಕರೆದೊಯ್ಯಲು ನೂತನ ವ್ಯವಸ್ಥೆಯನ್ನು ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಮಾಡುವುದರೊಂದಿಗೆ ವಾಹನ ದಟ್ಟಣೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಶಾಶ್ವತ ಪರಿಹಾರವಾಗಲಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜುಲೈ 14 ರಿಂದಲೇ ಹಲವು ನೂತನ ಕ್ರಮಗಳನ್ನು ಕೈಗೊಂಡಿದೆ ಎಂದರು.

    ರೋಪ್ ವೇ ನಿರ್ಮಾಣಕ್ಕೆ ಅಗತ್ಯಕ್ರಮ
    ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಸಂಬಂಧ ಸರ್ಕಾರಿ ಸಂಸ್ಥೆಯಾದ ಮೇ 11 ಐಡೆಕ್ ಸಂಸ್ಥೆ ಹಾಗೂ ಖಾಸಗಿ ಸಂಸ್ಥೆಯಾದ ಬಾಂಬೆ ರೋಪ್ ವೇ ಸಂಸ್ಥೆಯಿಂದ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಈಗಾಗಲೇ ಮಣ್ಣಿನ ಗುಣಮಟ್ಟ ಪರೀಕ್ಷೆ, ಸ್ಥಳೀಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಹಾಗೂ ಡ್ರೋಣ್ ಸರ್ವೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರೋಪ್ ವೇ ಆದಂತಹ ಸಂದರ್ಭದಲ್ಲಿಯೂ ಸಹ ಈಗ ನಿರ್ಮಿಸುತ್ತಿರುವ ಪಾರ್ಕಿಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

    ಸ್ವಲ್ಪದಿನ ಮುಂದೂಡಿ
    ಜುಲೈ 19 ರಿಂದ ಹೊಸ ನಿಯಮಗಳನ್ನು ಜಾರಿಗೆ ತರುತ್ತಿರುವ ಹಿನ್ನಲೆಯಲ್ಲಿ ಹೊಸ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗುವವರೆಗೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರು ನಂದಿಬೆಟ್ಟ ಪ್ರವೇಶವನ್ನು ಸ್ವಲ್ಪದಿನಗಳ ಮಟ್ಟಿಗೆ ಮುಂದೂಡಿ, ಬೆಳಗಿನ ಜಾವ ಕಾಯುವಂತದ್ದು, ಜನಸಂದಣಿ, ವಾಹನದಟ್ಟಣೆ ಮಾಡುವಂತದ್ದನ್ನು ಮಾಡಬೇಡಿ. ಪಾಸ್ ಸಿಕ್ಕಿದವರು ಮಾತ್ರವೇ ನಂದಿಬೆಟ್ಟ ಪ್ರವೇಶ ಮಾಡಿ ಇನ್ಮೇಲೆ ವಾಹನಗಳಿಗೂ ಮತ್ತು ಪ್ರವಾಸಿಗರಿಗೂ ಪ್ರತ್ಯೇಕವಾಗಿ ಪಾಸ್ ನೀಡಲಾಗುವುದು. ಭೇಟಿ ನೀಡಿದ ಪ್ರವಾಸಿಗರು ಪಾಸ್ ಗಳನ್ನು ಹಿಂತಿರುಗಿಸಬೇಕು. ಈ ಪ್ರಕ್ರಿಯೇ ಚಕ್ರದ ರೀತಿಯಲ್ಲಿ ನಿರಂತರವಾಗಿ ನಡೆಯಲಿದೆ. ಈ ವ್ಯವಸ್ಥೆಯು ಸ್ವಲ್ಪ ದಿನದ ಮಟ್ಟಿಗೆ ಭೌತಿಕವಾಗಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಿ ಆನ್ ಲೈನ್ ನಲ್ಲಿ ಶೇ.50 ಮತ್ತು ಭೌತಿಕವಾಗಿ ಶೇ.50 ರಷ್ಟು ಪಾಸ್ ಗಳನ್ನು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.

    ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ವಿಶೇಷ ಅಧಿಕಾರಿ ಗೋಪಾಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ – ಕೇಂದ್ರಕ್ಕೆ ತ.ನಾಡು ಸರ್ವಪಕ್ಷ ನಿಯೋಗದಿಂದ ಒತ್ತಡ

  • ಪರೀಕ್ಷೆ ಇಲ್ಲದೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪಾಸ್

    ಪರೀಕ್ಷೆ ಇಲ್ಲದೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪಾಸ್

    ಪುದುಚೇರಿ: ಪುದುಚೇರಿಯಲ್ಲಿ 1 ರಿಂದ 9ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್ ಎಂದು ರಾಜ್ಯಪಾಲರು ಘೋಷಣೆ ಮಾಡಿದ್ದಾರೆ.

    1ನೇ ತರಗತಿಯಿಂದ 9ನೆ ತರಗತಿಯ ವೆರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸುವ ಪ್ರಸ್ತಾವನೆಗೆ ಕೇಂದ್ರಾಡಳಿತ ಪ್ರದೇಶದ ಪುದುಚೇರಿಯ ನೂತನ ರಾಜ್ಯಪಾಲರಾದ ತಮಿಳಿಸಾಯಿ ಸೌಂದರ್‍ರಾಜನ್ ಒಪ್ಪಿಗೆ ನೀಡಿದ್ದಾರೆ.

    ಪುದುಚೇರಿ ಮತ್ತು ಕಾರೈಕಲ್ ಪ್ರಾಂತ್ಯದಲ್ಲಿ 10 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ತಮಿಳುನಾಡು ಸ್ಟೇಟ್ ಬೋರ್ಡ್ ಆಫ್ ಎಜುಕೇಷನ್ ಬೋರ್ಡ್ ಎಲ್ಲರೂ ಪಾಸ್ ಎಂದು ಆದೇಶವನ್ನು ಹೊರಡಿಸಿದೆ. ಮಾಹೆ ಮತ್ತು ಯಮನ್ ಪ್ರಾಂತ್ಯದಲ್ಲೂ ಸಹ ಬೋಡ್ರ್ಸ್ ಆಫ್ ಎಜುಕೇಷನ್ ಕೇರಳ ಮತ್ತು ಆಂಧ್ರಪ್ರದೇಶ ಕೂಡ ವಿದ್ಯಾರ್ಥಿಗಳು ಪಾಸ್ ಎಂದು ಅದೇಶವನ್ನು ಹೊರಡಿಸಿವೆ.

    ಎಲ್ಲಾ ಶಾಲೆಗಳು ಮಾರ್ಚ್ 31 ರವರೆಗೆ ಮಾತ್ರ ಕಾರ್ಯ ನಿರ್ವಹಿಸಲಿವೆ. 1 ರಿಂದ 9ನೇ ತರಗತಿಗಳಿಗೆ ವಾರದಲ್ಲಿ ಐದು ದಿನಗಳವರೆಗೆ ಕ್ಲಾಸ್ ನಡೆಸಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ರಜಾ ದಿನವಾಗಿದೆ. ಏಪ್ರಿಲ್ 1 ರಿಂದ ಶಾಲೆಗಳಿಗೆ ಬೇಸಿಗೆ ರಜೆ ಪ್ರಾರಂಭವಾಗಲಿದೆ. ಆಯಾ ರಾಜ್ಯ ಶಿಕ್ಷಣ ಮಂಡಳಿಗಳ ಪರೀಕ್ಷೆಗಳ ವೇಳಾಪಟ್ಟಿಯ ಪ್ರಕಾರ 10, 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

  • ಮೈಸೂರು ವಿವಿಯ 2, 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

    ಮೈಸೂರು ವಿವಿಯ 2, 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

    ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡುವ ಮೂಲಕ ಮೈಸೂರು ವಿವಿಯೂ ಸ್ಟೂಡೆಂಟ್‍ಗಳ ಆತಂಕ ದೂರ ಮಾಡಿದೆ.

    2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಮೈಸೂರು ವಿವಿ ಈ ನಿರ್ಧಾರ ಪ್ರಕಟಿಸಿದೆ. ಕಳೆದ ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಪಾಸ್ ಮಾಡಲಾಗಿದ್ದು, ಸದ್ಯ ಫೇಲ್ ಆಗಿರುವ ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಡೆ ನೀಡಲಾಗಿದೆ. ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನಲ್ಲಿನ ವಿಷಯಗಳು ಬಾಕಿಯಿದ್ದರೂ ಸಮಸ್ಯೆ ಇಲ್ಲ. 1ನೇ ಮತ್ತು 3ನೇ ಸೆಮಿಸ್ಟರ್ ನಲ್ಲಿ ಪಾಸ್ ಆದರೆ ಬಾಕಿ ವಿಷಯಗಳು ಪಾಸ್ ಎಂದು ಘೋಷಿಸಲಾಗಿದೆ.

    ಅಂತಿಮ ವರ್ಷದ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಮಾಡಲಾಗಿದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ. ಮಹದೇವನ್ ತಿಳಿಸಿದ್ದಾರೆ. ಸರ್ಕಾರದ ಅನುಮತಿಯಂತೆ ವಿವಿ ತಜ್ಞರ ಸಲಹೆ ಸೂಚನೆಗಳಂತೆ ಮೊದಲು ಮತ್ತು ಮೂರನೇ ಸೆಮಿಸ್ಟರ್ ನಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ 2 ಮತ್ತು 4ನೇ ಸೆಮಿಸ್ಟರ್ ಪಾಸ್ ಮಾಡಲಾಗಿದೆ. ಅಂಕಪಟ್ಟಿಯನ್ನು ನೀಡಲಾಗಿದೆ. ಈ ಅಂಕಪಟ್ಟಿಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಪರೀಕ್ಷೆ ಬರೆದು ಪಾಸ್ ಆದ ರೀತಿಯಲ್ಲೇ ಅಂಕ ಪಟ್ಟಿ ಇರಲಿದೆ.

  • ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ವಿಸ್ತರಣೆ

    ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ವಿಸ್ತರಣೆ

    – ಡಿಸೆಂಬರ್ 10ರ ವರೆಗೆ ಸಂಚರಿಸಬಹುದು

    ಬೆಂಗಳೂರು: ವಿದ್ಯಾರ್ಥಿಗಳು ಕಾಲೇಜಿಗೆ ಸಂಚರಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್ ಬಳಸಿ ಡಿಸೆಂಬರ್ 10ರ ವರೆಗೆ ಸಂಚರಿಸಲು ಅವಕಾಶ ನೀಡಿದೆ.

    ಈ ಕುರಿತು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 17ರಿಂದ ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಪದವಿ, ವೂದ್ಯಕೀಯ, ತಾಂತ್ರಿಕ, ಡಿಪ್ಲೋಮಾ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷದ ಬಸ್ ಪಾಸ್ ಬಳಸಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2019-20ನೇ ಸಾಲಿನಲ್ಲಿ ವಿತರಿಸಿರುವ ಪಾಸ್‍ಗಳನ್ನು ಬಳಸಿ ಡಿಸೆಂಬರ್ 10ರ ವರೆಗೆ ಬಸ್‍ಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ.

    ವಿದ್ಯಾರ್ಥಿಗಳು ಈ ವರ್ಷ ಕಾಲೇಜಿಗೆ ದಾಖಲಾಗಿರುವ ಕುರಿತು ಪ್ರಸಕ್ತ ಸಾಲಿನ ಶುಲ್ಕ ಪಾವತಿ ರಶೀದಿ ಹಾಗೂ ಪಾಸ್ ತೋರಿಸಿ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಸಂಚರಿಸಬಹುದಾಗಿದೆ. ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಸಹ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ.