Tag: ಪಿಎಂ ಕಿಸಾನ್ ಸಮ್ಮಾನ್

  • ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    – ಧಾರವಾಡದ 1.15 ಲಕ್ಷ ರೈತರ ಖಾತೆಗೆ 23.09 ಕೋಟಿ ರೂ. ಜಮೆ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Yojana) ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಕೇಂದ್ರ ಸರ್ಕಾರ (Union Government) ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

    ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ (Agriculture) ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಅಲ್ಲದೇ ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯು ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

    ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20,000 ಕೋಟಿ ರೂ. ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು 942 ಕೋಟಿ ರೂ. ಪಡೆದಿದ್ದಾರೆ ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

    ಧಾರವಾಡದ 1.15 ಲಕ್ಷ ರೈತರಿಗೆ ಸಮ್ಮಾನ್ ನಿಧಿ:
    ಧಾರವಾಡ ಲೋಕಸಭಾ ಕ್ಷೇತ್ರದ 1.15 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. 23.09 ಕೋಟಿ ರೂ. ಧಾರವಾಡ ರೈತರ ಖಾತೆಗೆ ಜಮೆಯಾಗಿದ್ದು, ದಸರಾ ಹಬ್ಬದ ವೇಳೆ ರೈತರಲ್ಲಿ ಖುಷಿ ತಂದಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

  • ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    ನವದೆಹಲಿ: ದೀಪಾವಳಿಗೂ (Diwali) ಮುನ್ನವೇ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ರೈತರಿಗೆ (Farmers) ಸಿಹಿ ಸುದ್ದಿ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ (PM KISAN) ಪ್ರಧಾನಿ ನರೇಂದ್ರಮೋದಿ ಅವರು ಸೋಮವಾರ ಒಟ್ಟು 16 ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗೆ ವರ್ಗಾಯಿಸುವ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.

    ಇದರಿಂದ ಅರ್ಹ ರೈತರ ಖಾತೆಗೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂ.ಗಳಂತೆ ವರ್ಷಕ್ಕೆ 6 ಸಾವಿರ ಹಣ ಸಂದಾಯವಾಗಲಿದೆ. ಒಟ್ಟಾರೆಯಾಗಿ ಅರ್ಹ ರೈತ ಕುಟುಂಬಗಳು (Farmers Family) ಈ ಯೋಜನೆಯಿಂದ ಸುಮಾರು 2 ಲಕ್ಷ ಕೋಟಿ ಪ್ರಯೋಜನ ಪಡೆಯಲಿವೆ. ಇದನ್ನೂ ಓದಿ: ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ

    ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ?:
    ಪಿಎಂ ಕಿಸಾನ್ ಸಮ್ಮಾನ್ (PM KISASN Samman) ನಿಧಿಯನ್ನು 2019ರ ಫೆಬ್ರವರಿ 24 ರಂದು ಜಾರಿಗೊಳಿಸಲಾಯಿತು. ಈ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ 6,000 ರೂ. ಪ್ರೋತ್ಸಾಹ ಧನ ನೀಡಿ ಕೃಷಿ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ನಂತೆ ವರ್ಷಕ್ಕೆ ಮೂರು ಕಂತಿನಲ್ಲಿ 6 ಸಾವಿರ ರೂ. ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ 11 ಕಂತುಗಳಲ್ಲಿ ರೈತರ ಖಾತೆಗೆ ಹಣ ಬಿಡುಗಡೆಗೊಳಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಕೊನೆಯ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನೂ ಓದಿ: ಬೇರೆಯವರೊಂದಿಗೆ ಲೈಂಗಿಕತೆಗೆ ಒಪ್ಪದ ಪತ್ನಿ ಮೇಲೆ ಪತಿಯಿಂದ ಹಲ್ಲೆ

    ಫಲಾನುಭವಿ ಪರಿಶೀಲಿಸೋದು ಹೇಗೆ?
    * ಮೊದಲು ಪಿಎಂ ಕಿಸಾನ್ https://pmkisan.gov.in/ ವೆಬ್‌ಸೈಟ್ ಪ್ರವೇಶಿಸಬೇಕು.
    * ನಂತರ ಪಾವತಿ ಯಶಸ್ಸು ಎಂದು ತೋರಿಸುವ ಟ್ಯಾಬ್ ಕೆಳಗೆ ನಕ್ಷೆ ನೋಡುತ್ತೀರಿ.
    * ಅದಾದ ಬಳಿಕ ಬಲ ಭಾಗದಲ್ಲಿ ಹಳದಿ ಬಣ್ಣದಲ್ಲಿ ಕಾಣುವ ಡ್ಯಾಶ್‌ಬೋರ್ಡ್ ಅನ್ನು ಕ್ಲಿಕ್ ಮಾಡಬೇಕು.
    * ನಂತರ ಹೊಸ ಪುಟಕ್ಕೆ ತೆರೆದುಕೊಳ್ಳುತ್ತದೆ.
    * ನಂತರ ವಿಲೇಜ್ (ಗ್ರಾಮ) ಡ್ಯಾಶ್‌ಬೋರ್ಡ್‌ಗೆ ತೆರಳಿ ಆ ಪುಟದಲ್ಲಿ ಕೇಳುವ ಮಾಹಿತಿ ಭರ್ತಿ ಮಾಡಬೇಕು.
    * ನಂತರ ರಾಜ್ಯ, ಜಿಲ್ಲೆ ಹಾಗೂ ನಿಮ್ಮೂರಿನ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ, ವೀಕ್ಷಣೆ ಬಟನ್ ಕ್ಲಿಕ್ ಮಾಡಬೇಕು.
    * ಆಮೇಲೆ ನೀವು ಫಲಾನುಭವಿಗಳಾಗಿದ್ದೇರೋ ಇಲ್ಲವೋ ಎಂದು ಪರಿಶೀಲಿಸಬಹದು.

    Live Tv
    [brid partner=56869869 player=32851 video=960834 autoplay=true]