Tag: ಪಿಎಂ ಮೋದಿ

  • Union Budget 2025: ಯಾವುದು ಅಗ್ಗ, ಯಾವುದು ದುಬಾರಿ?

    Union Budget 2025: ಯಾವುದು ಅಗ್ಗ, ಯಾವುದು ದುಬಾರಿ?

    ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ತಮ್ಮ 8ನೇ ಬಜೆಟ್‌ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಯುವಜನತೆ, ಬಡವರನ್ನು ಕೇಂದ್ರವಾಗಿಟ್ಟುಕೊಂಡು ಬಜೆಟ್‌ನಲ್ಲಿ ಕೊಡುಗೆ ನೀಡಿದ್ದಾರೆ. ಮಧ್ಯಮ ವರ್ಗದ ಆರ್ಥಿಕ ಸಬಲೀಕರಣಕ್ಕೆ ತೆರಿಗೆ ವಿನಾಯಿತಿ ಗಿಫ್ಟ್‌ ಕೊಟ್ಟಿದ್ದಾರೆ.

    ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಬಾರಿ ಯಾವ್ಯಾವ ವಸ್ತುಗಳು ಅಗ್ಗ ಮತ್ತು ಯಾವ್ಯಾವುವು ದುಬಾರಿ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

    ಬೆಲೆ ಇಳಿಕೆ
    * ಮೊಬೈಲ್‌
    * ಎಲ್‌ಇಡಿ/ಎಲ್‌ಸಿಡಿ ಟಿವಿ
    * ಸುಗಂದ ದ್ರವ್ಯ
    * ಲಿಥಿಯಂ ಅಯಾನ್ ಬ್ಯಾಟರಿ
    * ಲೆದರ್‌ ಬೆಲ್ಟ್‌, ಶೂ, ಜಾಕೆಟ್‌
    * ಸಾಗರ ಉತ್ಪನ್ನ
    * ಹಡಗುಗಳ ತಯಾರಿಕೆಗೆ ಬಳಸುವ ಕಚ್ಚಾ ವಸ್ತು
    * ಕ್ಯಾನ್ಸರ್‌ ಔಷಧಿ, ಜೀವರಕ್ಷಕ ಔಷಧಿ
    * ಸ್ವದೇಶಿ ಬಟ್ಟೆ

    ಬೆಲೆ ಏರಿಕೆ
    * ಹೆಣೆದ ಬಟ್ಟೆಗಳು
    * ಪ್ಯಾನೆಲ್‌ ಡಿಸ್‌ಪ್ಲೇ ಮೇಲಿನ ಕಸ್ಟಮ್ಸ್‌ ಸುಂಕ ಹೆಚ್ಚಳ (10%-20%)
    * ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕ ಹೆಚ್ಚಳ (10%-15%)

  • Budget 2025: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ?

    Budget 2025: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ?

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ 8ನೇ ಬಜೆಟ್‌ ಮಂಡಿಸಿದ್ದಾರೆ. 2025-26ನೇ ಹಣಕಾಸು ವರ್ಷದಲ್ಲಿ ವಿವಿಧ ವಲಯಗಳಿಗೆ ಅನುದಾನದ ಕೊಡುಗೆ ನೀಡಿದ್ದಾರೆ. ಯಾವ್ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಹಣ ಸಿಕ್ಕಿದೆ ಎಂಬ ವಿವರ ಇಲ್ಲಿದೆ.

    ಯಾವ ವಲಯಕ್ಕೆ ಎಷ್ಟು
    ರಕ್ಷಣಾ ವಲಯ – 4,91,732 ಕೋಟಿ ರೂ.
    ಗ್ರಾಮೀಣಾಭಿವೃದ್ಧಿ – 2,66,817
    ಗೃಹ ವ್ಯವಹಾರಗಳು – 2,33,211
    ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು – 1,71,437
    ಶಿಕ್ಷಣ – 1,28,650
    ಆರೋಗ್ಯ – 98,311
    ನಗರಾಭಿವೃದ್ಧಿ – 96,777
    ಐಟಿ ಮತ್ತು ದೂರಸಂಪರ್ಕ – 95,298
    ಇಂಧನ – 81,174
    ವಾಣಿಜ್ಯ ಮತ್ತು ಕೈಗಾರಿಕೆ – 65,553
    ಸಮಾಜ ಕಲ್ಯಾಣ ಇಲಾಖೆ – 60,052
    ವಿಜ್ಞಾನ – 55,679

  • Budget 2025: ಒಂದು ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ?

    Budget 2025: ಒಂದು ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ?

    ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್‌ (Union Budget 2025) ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಶನಿವಾರ ಮಂಡಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಕೇಂದ್ರದ ಬೊಕ್ಕಸದಿಂದ ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಹಣ ಜಮೆಯಾಗಲಿದೆ. ಯಾವ್ಯಾವ ವಲಯದಿಂದ ಎಷ್ಟೆಷ್ಟು ಹಣ ವೆಚ್ಚವಾಗಲಿದೆ ಎಂಬ ವಿವರ ಇಲ್ಲಿದೆ.

    ಜಮೆ ಪೈಸೆಗಳಲ್ಲಿ
    ಆದಾಯ ತೆರಿಗೆ – 22
    ಸಾಲ ಮತ್ತು ಇತರೆ ಹೊಣಗಾರಿಕೆ – 24
    ತೆರಿಗೆಯೇತರ ರಾಜಸ್ವ – 9
    ಸಾಲ-ರಹಿತ ಬಂಡವಾಳ – 1
    ಕಸ್ಟಮ್ಸ್‌ – 4
    ಕಾರ್ಪೊರೇಷನ್ ತೆರಿಗೆ – 17
    ಜಿಎಸ್‌ಟಿ ಮತ್ತು ಇತರ ತೆರಿಗೆಗಳು – 18
    ಕೇಂದ್ರ ಅಬಕಾರಿ ಸುಂಕಗಳು – 5

    ಯಾವ ವಲಯಕ್ಕೆ ಎಷ್ಟು ವೆಚ್ಚ (ಪೈಸೆಗಳಲ್ಲಿ)
    ಬಡ್ಡಿ ಪಾವತಿಗಳು – 20
    ಕೇಂದ್ರ ವಲಯ ಯೋಜನೆ (ರಕ್ಷಣಾ ಮತ್ತು ಸಬ್ಸಿಡಿಯ ಮೇಲಿನ ಬಂಡವಾಳ ವೆಚ್ಚವನ್ನು ಹೊರತುಪಡಿಸಿ) – 16
    ಪ್ರಮುಖ ಸಬ್ಸಿಡಿಗಳು – 6
    ರಕ್ಷಣಾ – 8
    ತೆರಿಗೆಗಳು ಮತ್ತು ಸುಂಕಗಳಲ್ಲಿ ರಾಜ್ಯಗಳ ಪಾಲು – 22
    ಹಣಕಾಸು ಆಯೋಗ ಮತ್ತು ಇತರ ವರ್ಗಾವಣೆಗಳು – 8
    ಕೇಂದ್ರ ಪ್ರಾಯೋಜಿತ ಯೋಜನೆ – 8
    ಇತರ ವೆಚ್ಚಗಳು – 8
    ಪಿಂಚಣಿ – 4

  • Budget 2025: 12 ಲಕ್ಷದವರೆಗೆ ತೆರಿಗೆ ವಿನಾಯಿತಿ – ಒಟ್ಟು ಎಷ್ಟು ಉಳಿತಾಯ ಆಗುತ್ತೆ?

    Budget 2025: 12 ಲಕ್ಷದವರೆಗೆ ತೆರಿಗೆ ವಿನಾಯಿತಿ – ಒಟ್ಟು ಎಷ್ಟು ಉಳಿತಾಯ ಆಗುತ್ತೆ?

    ನವದೆಹಲಿ: ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಘೋಷಿಸಿದ್ದಾರೆ.

    ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ (Income Tax) ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್‌ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Budget 2025: ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್‌

     

     

    ಮುಂದಿನ ವಾರ ಸೀತಾರಾಮನ್‌ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮಸೂದೆಯಲ್ಲಿ ಈ ವಿಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.

    ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವಾರ್ಷಿಕ 12 ಲಕ್ಷ ರೂ.ವರೆಗೆ ಆದಾಯ ಗಳಿಸುವವರು ಯಾವುದೇ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಇದಕ್ಕೆ 75,000 ರೂ.ಗಳ ಪ್ರಮಾಣಿತ ಕಡಿತವನ್ನು ಸೇರಿಸಿದರೆ, ವಾರ್ಷಿಕ 12.75 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ತೆರಿಗೆದಾರರು ತೆರಿಗೆ ಕಟ್ಟುವಂತಿಲ್ಲ. ಇದನ್ನೂ ಓದಿ: Union Budget 2025: ಬಡವರು, ಯುವಜನತೆ, ರೈತರು, ಮಹಿಳೆಯರ ಕೇಂದ್ರೀಕರಿಸಿದ ಬಜೆಟ್‌: ಸೀತಾರಾಮನ್‌

  • Budget 2025: ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್‌

    Budget 2025: ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್‌

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

    ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.

    ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

    ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಿದ್ದಾರೆ.

    ಕೃಷಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ವಲಸೆ ತಡೆಯಬಹುದು. ಯುವಕರನ್ನು ಕೃಷಿಯತ್ತ ಸೆಳೆಯುವ ಉದ್ದೇಶ ಹೊಂದಿದೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ ಮಾಡಲಾಗುವುದು. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಹತ್ತಿ ಬೆಳೆಗೆ ಈ ಐದು ವರ್ಷದಲ್ಲಿ ಆದ್ಯತೆ. ತಂತ್ರಜ್ಞಾನದ ಸಹಕಾರ ನೀಡುವುದು. ಇದು ಟೆಕ್ಸ್‌ಟೈಲ್ಸ್‌ ವಲಯದಲ್ಲಿ ಹೆಚ್ಚು ಆದಾಯ ತಂದು ಕೊಡಲಿದೆ ಎಂದು ತಿಳಿಸಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ ಹೆಚ್ಚಳ ಮಾಡಲಾಗಿದೆ. ಐದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಅಕ್ರಮ ವಲಸಿಗರ ವಿಚಾರದಲ್ಲಿ ಪ್ರಧಾನಿ ಮೋದಿ ಸರಿಯಾಗಿದ್ದನ್ನು ಮಾಡುತ್ತಾರೆ: ಟ್ರಂಪ್

    ಅಕ್ರಮ ವಲಸಿಗರ ವಿಚಾರದಲ್ಲಿ ಪ್ರಧಾನಿ ಮೋದಿ ಸರಿಯಾಗಿದ್ದನ್ನು ಮಾಡುತ್ತಾರೆ: ಟ್ರಂಪ್

    ನವದೆಹಲಿ/ವಾಷಿಂಗ್ಟನ್: ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ವಾಪಸ್ ಕರೆತರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿದ್ದನ್ನು ಮಾಡುತ್ತಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

    ಫ್ಲೋರಿಡಾದಿಂದ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ಗೆ ಟ್ರಂಪ್ ಹಿಂದಿರುಗುತ್ತಿದ್ದಾಗ ಏರ್‌ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರು ಟ್ರಂಪ್ ಅವರನ್ನು ಅಕ್ರಮ ವಲಸಿಗರನ್ನು ತೆಗೆದುಕೊಳ್ಳಲು ಮೋದಿ ಒಪ್ಪಿಕೊಂಡಿದ್ದಾರೆಯೇ ಎಂದು ಕೇಳಿದಾಗ ಅವರು ಇದಕ್ಕೆ ಉತ್ತರಿಸಿದ್ದಾರೆ.

    ದೂರವಾಣಿ ಸಂಭಾಷಣೆಯಲ್ಲಿ ನಾವು ಚರ್ಚಿಸುತ್ತಿದ್ದೇವೆ. ಬೆಳಗ್ಗೆ ಮೋದಿಯವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು ಶ್ವೇತಭವನಕ್ಕೆ ಬರಲಿದ್ದಾರೆ. ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಮೋದಿ ಅವರೊಂದಿಗಿನ ದೂರವಾಣಿ ಕರೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಟ್ರಂಪ್ ಹೇಳಿದರು.

    ಇದಲ್ಲದೇ ಉಭಯ ನಾಯಕರು ಇಂಡೋ-ಪೆಸಿಫಿಕ್, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿ ಭದ್ರತೆ ಸೇರಿದಂತೆ ಹಲವಾರು ಪ್ರಾದೇಶಿಕ ವಿಷಯಗಳ ಕುರಿತು ಚರ್ಚಿಸಿದರು. ಯುಎಸ್ ನಿರ್ಮಿತ ಭದ್ರತಾ ಉಪಕರಣಗಳ ಭಾರತದ ಖರೀದಿಯನ್ನು ಹೆಚ್ಚಿಸುವ ಮತ್ತು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಅಧ್ಯಕ್ಷ ಟ್ರಂಪ್ ಒತ್ತಿ ಹೇಳಿದರು. ಈ ವರ್ಷದ ಕೊನೆಯಲ್ಲಿ ಭಾರತವು ಮೊದಲ ಬಾರಿಗೆ ಕ್ವಾಡ್ ನಾಯಕರಿಗೆ ಆತಿಥ್ಯ ನೀಡಲಿದೆ ಎಂದು ಶ್ವೇತಭವನವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಬಗ್ಗೆ ಮಾತನಾಡಿದ್ದು, ಭಾರತ-ಅಮೆರಿಕ ಸಂಬಂಧಗಳು ಬಹಳ ಬಲವಾದವು. ಬಹು ಆಯಾಮದವು ಎಂದು ಹೇಳಿದ್ದರು. ಅದೇ ಸಮಯದಲ್ಲಿ ಎರಡು ದೇಶಗಳ ಆರ್ಥಿಕ ಸಂಬಂಧಗಳು ಬಹಳ ವಿಶೇಷವಾಗಿವೆ. ಯಾವುದೇ ವ್ಯಾಪಾರ ಸಂಬಂಧಿತ ವಿಷಯಗಳನ್ನು ಚರ್ಚಿಸಲು ನಾವು ಅಮೆರಿಕ ಮತ್ತು ಭಾರತದ ನಡುವೆ ಕಾರ್ಯವಿಧಾನಗಳನ್ನು ಸ್ಥಾಪಿಸಿದ್ದೇವೆ. ಈ ವಿಚಾರದ ಬಗ್ಗೆಯೂ ನಿಗಾ ಇಡುತ್ತಿದ್ದೇವೆ ಎಂದು ಹೇಳಿದರು.

    ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಅಕ್ರಮ ವಲಸೆಯನ್ನು ನಾವು ವಿರೋಧಿಸುತ್ತೇವೆ. ಯಾವುದೇ ಕಾನೂನುಬಾಹಿರ ಕೆಲಸ ಮಾಡಿದಾಗ, ಅದರೊಂದಿಗೆ ಇತರ ಅನೇಕ ಕಾನೂನುಬಾಹಿರ ಚಟುವಟಿಕೆಗಳು ಸಹ ಸೇರಿಕೊಂಡಿರುತ್ತವೆ. ಇದು ಖಂಡಿತವಾಗಿಯೂ ಒಳ್ಳೆಯದಲ್ಲ. ನಮ್ಮ ನಾಗರಿಕರಲ್ಲಿ ಯಾರಾದರೂ ಅಕ್ರಮವಾಗಿ ಇದ್ದರೆ ಮತ್ತು ಅವರು ನಮ್ಮ ಪ್ರಜೆಗಳು ಎಂದು ನಮಗೆ ಖಚಿತವಾಗಿದ್ದರೆ, ಅವರು ಭಾರತಕ್ಕೆ ಕಾನೂನುಬದ್ಧವಾಗಿ ಮರಳಲು ನಾವು ಯಾವಾಗಲೂ ಸಿದ್ಧರಿದ್ದೇವೆ. ಭಾರತಕ್ಕೆ ಯಾರನ್ನು ಕಳುಹಿಸಬಹುದು ಎಂದು ಹೇಳಿದರು‌.

    1.80 ಲಕ್ಷ ಭಾರತೀಯರನ್ನು ಭಾರತದಿಂದ ಗಡಿಪಾರು ಮಾಡಲು ಅಮೆರಿಕ ಮುಂದಾಗಿದೆ. ಅಲ್ಲಿ ಅಕ್ರಮವಾಗಿ ಅಥವಾ ವೀಸಾ ಅವಧಿ ಮುಗಿದ ನಂತರವೂ ಅನೇಕ ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯು 2022 ರಲ್ಲಿ ಅಮೆರಿಕದಲ್ಲಿ ಸುಮಾರು 11 ಮಿಲಿಯನ್ ಅಕ್ರಮ ವಲಸಿಗರು ಎಂದು ಹೇಳಿತು. 4.81 ಮಿಲಿಯನ್ ಅಕ್ರಮ ವಲಸಿಗರೊಂದಿಗೆ ಮೆಕ್ಸಿಕೋ ಅಗ್ರಸ್ಥಾನದಲ್ಲಿದೆ. ಗ್ವಾಟೆಮಾಲಾದಿಂದ 7.5 ಲಕ್ಷ, ಎಲ್ ಸಾಲ್ವಡಾರ್‌ನಿಂದ 7.1 ಲಕ್ಷ, ಹೊಂಡುರಾಸ್‌ನಿಂದ 5.6 ಲಕ್ಷ, ಫಿಲಿಪೈನ್ಸ್‌ನಿಂದ 3.5 ಲಕ್ಷ, ವೆನೆಜುವೆಲಾದಿಂದ 3.2 ಲಕ್ಷ, ಕೊಲಂಬಿಯಾ ಮತ್ತು ಬ್ರೆಜಿಲ್‌ನಿಂದ 2.3 ಲಕ್ಷ ವಲಸಿಗರು ಸೇರಿದ್ದಾರೆ. 2018 ಮತ್ತು 2022 ರ ನಡುವೆ ಭಾರತದಿಂದ ಅಕ್ರಮ ವಲಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಹೋಮ್ಲ್ಯಾಂಡ್ ಹೇಳಿದೆ.

  • ಫೆಬ್ರವರಿಗೆ ಪ್ರಧಾನಿ ಮೋದಿ ಅಮೆರಿಕಗೆ ಭೇಟಿ ಕೊಡ್ತಾರೆ: ಟ್ರಂಪ್‌

    ಫೆಬ್ರವರಿಗೆ ಪ್ರಧಾನಿ ಮೋದಿ ಅಮೆರಿಕಗೆ ಭೇಟಿ ಕೊಡ್ತಾರೆ: ಟ್ರಂಪ್‌

    ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ತಮ್ಮೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ.

    ಫ್ಲೋರಿಡಾದಿಂದ ಜಾಯಿಂಟ್‌ ಬೇಸ್ ಆಂಡ್ರ್ಯೂಸ್‌ಗೆ ಹಿಂತಿರುಗುವಾಗ ಏರ್ ಫೋರ್ಸ್ ಒನ್‌ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸುದ್ದಿಗಾರರೊಂದಿಗೆ ಈ ವಿಚಾರ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಡಾಲರ್‌ಗೆ ಗುದ್ದು ಕೊಡಲು ʻಬ್ರಿಕ್ಸ್‌ʼ ಕರೆನ್ಸಿ – ಭಾರತಕ್ಕೆ ಏನು ಲಾಭ?

    ನಾನು ಅವರೊಂದಿಗೆ ದೀರ್ಘ ಮಾತುಕತೆ ನಡೆಸಿದೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ. ಭಾರತದೊಂದಿಗೆ ನಮಗೆ ಉತ್ತಮ ಸಂಬಂಧವಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಭಾರತಕ್ಕೆ ಕೊನೆಯ ವಿದೇಶ ಪ್ರವಾಸ ಕೈಗೊಂಡಿದ್ದರು. ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರೂ 2019ರ ಸೆಪ್ಟೆಂಬರ್‌ನಲ್ಲಿ ಹೂಸ್ಟನ್‌ನಲ್ಲಿ ಮತ್ತು 2020ರ ಫೆಬ್ರವರಿಯಲ್ಲಿ ಅಹಮದಾಬಾದ್‌ನಲ್ಲಿ ಎರಡು ರ‍್ಯಾಲಿಗಳಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಇದನ್ನೂ ಓದಿ: My Dear Friend – ಟ್ರಂಪ್‌ ಜೊತೆಗೆ ಮೋದಿ ದೂರವಾಣಿ ಸಂಭಾಷಣೆ

    2024ರ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ ಅವರು ಐತಿಹಾಸಿಕ ಗೆಲುವು ದಾಖಲಿಸಿದರು. ಟ್ರಂಪ್‌ಗೆ ಪ್ರಧಾನಿ ಮೋದಿ ವಿಶ್‌ ಮಾಡಿದ್ದರು.

  • ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು (8th Pay Commission) ರಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 8 ನೇ ವೇತನ ಆಯೋಗವನ್ನು ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

    ಆಯೋಗಕ್ಕೆ ಶೀಘ್ರದಲ್ಲೇ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಕೇಂದ್ರ ಸರ್ಕಾರವು ಪ್ರತಿ 10 ವರ್ಷಕ್ಕೊಮ್ಮೆ ತನ್ನ ಉದ್ಯೋಗಿಗಳ ವೇತನವನ್ನು ಪರಿಷ್ಕರಿಸಲು ವೇತನ ಆಯೋಗವನ್ನು ರಚಿಸುತ್ತದೆ. ವೇತನ ಪರಿಷ್ಕರಿಸುವುದರ ಜೊತೆಗೆ, ಪ್ರತಿ ವೇತನ ಆಯೋಗವು ಒಂದು ಉಲ್ಲೇಖ ಅವಧಿಯನ್ನು (ToR) ಹೊಂದಿದೆ. ವೇತನ ಆಯೋಗಗಳು ಪಿಂಚಣಿ ಪಾವತಿಗಳನ್ನು ಸಹ ನಿರ್ಧರಿಸುತ್ತವೆ.

    7ನೇ ವೇತನ ಆಯೋಗವನ್ನು 2016 ರಲ್ಲಿ ರಚಿಸಲಾಗಿತ್ತು. ಅದರ ಅವಧಿ 2026 ರಲ್ಲಿ ಕೊನೆಗೊಳ್ಳಲಿದೆ.

  • ಒಂದು ದೇಶ, ಒಂದು ಚುನಾವಣೆ; ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯ 11 ಶಿಫಾರಸುಗಳೇನು?

    ಒಂದು ದೇಶ, ಒಂದು ಚುನಾವಣೆ; ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯ 11 ಶಿಫಾರಸುಗಳೇನು?

    ನವದೆಹಲಿ: ಒಂದು ದೇಶ, ಒಂದು ಚುನಾವಣೆ ಜಾರಿಗೆ (One Nation, One Election) ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಸಮಿತಿಯು 11 ಶಿಫಾರಸುಗಳನ್ನು ಮಾಡಿದೆ.

    ಏನದು 11 ಶಿಫಾರಸುಗಳು?
    1. ಪ್ರತಿ ವರ್ಷ ಆಗಾಗ್ಗೆ ಚುನಾವಣೆಗಳನ್ನು ನಡೆಸುವುದು ಆರ್ಥಿಕತೆ, ರಾಜಕೀಯ ಮತ್ತು ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಸಮಿತಿಯು ತೀರ್ಮಾನಿಸಿದೆ. ಈ ಹೊರೆಯನ್ನು ತಗ್ಗಿಸಲು ಏಕಕಾಲಿಕ ಚುನಾವಣೆಗಳನ್ನು ಮರುಸ್ಥಾಪಿಸಲು ಶಿಫಾರಸು ಮಾಡಿದೆ.

    2. ಮೊದಲ ಹಂತವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸುವುದನ್ನು ಒಳಗೊಂಡಿರುತ್ತದೆ. ಇದಾದ 100 ದಿನದೊಳಗೆ ಪುರಸಭೆ ಮತ್ತು ಪಂಚಾಯತ್ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು.

    3. ಸಾರ್ವತ್ರಿಕ ಚುನಾವಣೆಯ ನಂತರ, ರಾಷ್ಟ್ರಪತಿ ಲೋಕಸಭೆಯು ಸೇರುವ ದಿನಾಂಕವನ್ನು ‘ನೇಮಿತ ದಿನಾಂಕ’ ಎಂದು ಘೋಷಿಸುವ ಅಧಿಸೂಚನೆಯನ್ನು ಹೊರಡಿಸಬಹುದು.

    4. ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಹೊಂದಿಕೆಯಾಗುವಂತೆ ಹೊಸದಾಗಿ ರಚನೆಯಾದ ರಾಜ್ಯ ವಿಧಾನಸಭೆಗಳು ಕಡಿಮೆ ಅವಧಿಯನ್ನು ಹೊಂದಿರುತ್ತವೆ.

    5. ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಮಿತಿ ರಚಿಸಬೇಕು.

    6. ಪಂಚಾಯಿತಿಗಳು ಮತ್ತು ಪುರಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಸುಗಮಗೊಳಿಸಲು ಅನುಚ್ಛೇದ 324A ಅನ್ನು ಪರಿಚಯಿಸುವುದು. ಎಲ್ಲಾ ಚುನಾವಣೆಗಳಿಗೆ ಏಕೀಕೃತ ಮತದಾರರ ಪಟ್ಟಿ ಮತ್ತು ಫೋಟೋ ಗುರುತಿನ ಚೀಟಿಯನ್ನು ರಚಿಸಲು 325 ನೇ ವಿಧಿಗೆ ತಿದ್ದುಪಡಿ ತರಬೇಕಿದೆ.

    7. ಅತಂತ್ರ ಲೋಕಸಭೆ ನಿರ್ಮಾಣವಾದರೆ ಅಥವಾ ಸರ್ಕಾರ ಬಹುಮತ ಕಳೆದುಕೊಂಡರೆ ಹೊಸದಾಗಿ ಚುನಾವಣೆ ನಡೆಸಬೇಕು. ಹೊಸದಾಗಿ ಚುನಾವಣೆ ನಡೆದ ಬಳಿಕ ಅಧಿಕಾರಕ್ಕೇರುವ ಸರ್ಕಾರದ ಅವಧಿಯು ಲೋಕಸಭೆಯ ಇನ್ನುಳಿದ ಅವಧಿಗೆ ಮಾತ್ರ ಇರಲಿದೆ.

    8. ಮೊದಲ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು. ಎರಡನೇ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆದ 100 ದಿನಗಳ ಒಳಗಾಗಿ ಪುರಸಭೆ ಮತ್ತು ಪಂಚಾಯತ್ ಚುನಾವಣೆ ನಡೆಸುವುದು.

    9. ಅತಂತ್ರ ಲೋಕಸಭೆ ಅಥವಾ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಸಮಿತಿಯು ಹೊಸ ಚುನಾವಣೆಗಳನ್ನು ಪ್ರತಿಪಾದಿಸುತ್ತದೆ. ಹೊಸದಾಗಿ ಚುನಾಯಿತವಾದ ಲೋಕಸಭೆಯು ಹಿಂದಿನ ಉಳಿದ ಅವಧಿಯನ್ನು ಪೂರೈಸುತ್ತದೆ. ಆದರೆ ಲೋಕಸಭೆಯ ಅವಧಿ ಮುಗಿಯುವ ವರೆಗೆ ರಾಜ್ಯ ವಿಧಾನಸಭೆಗಳು ಮುಂದುವರಿಯುತ್ತವೆ, ಹೊರತು ಮೊದಲೇ ವಿಸರ್ಜನೆಯಾಗುವುದಿಲ್ಲ.

    10. ಸಮರ್ಥ ಚುನಾವಣಾ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಇವಿಎಂಗಳು ಮತ್ತು ವಿವಿಪ್ಯಾಟ್‌ಗಳಂತಹ ಅಗತ್ಯ ಉಪಕರಣಗಳ ಖರೀದಿಗೆ ಪೂರ್ವಭಾವಿಯಾಗಿ ಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚಿಸುವುದು.

    11. ಸಮಿತಿಯು ಎಲ್ಲಾ ಚುನಾವಣೆಗಳಿಗೆ ಏಕೀಕೃತ ಮತದಾರರ ಪಟ್ಟಿ ಮತ್ತು ಗುರುತಿನ ಚೀಟಿ ವ್ಯವಸ್ಥೆಯನ್ನು ಪ್ರಸ್ತಾಪಿಸುತ್ತದೆ. ಇದು ರಾಜ್ಯಗಳ ಅನುಮೋದನೆಗೆ ಒಳಪಟ್ಟು ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿರುತ್ತದೆ.

  • ಪ್ರಧಾನಿ ಮೋದಿಗೆ 74ರ ಸಂಭ್ರಮ – ಪಿಎಂ ಆವಾಸ್‌ ಯೋಜನೆಯ 26 ಲಕ್ಷ ಮನೆಗಳ ಉದ್ಘಾಟನೆ ಇಂದು

    ಪ್ರಧಾನಿ ಮೋದಿಗೆ 74ರ ಸಂಭ್ರಮ – ಪಿಎಂ ಆವಾಸ್‌ ಯೋಜನೆಯ 26 ಲಕ್ಷ ಮನೆಗಳ ಉದ್ಘಾಟನೆ ಇಂದು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) 74ರ ಸಂಭ್ರಮದಲ್ಲಿದ್ದಾರೆ. ಜನ್ಮದಿನದ ಅಂಗವಾಗಿ ಮಂಗಳವಾರ ಹಲವಾರು ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

    ಭುವನೇಶ್ವರದ ಗಡಕಾನಾದಲ್ಲಿ 26 ಲಕ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆಗಳನ್ನು ಅನಾವರಣಗೊಳಿಸಲಿದ್ದಾರೆ. ಭುವನೇಶ್ವರಕ್ಕೆ ಆಗಮಿಸಿದ ನಂತರ, ಮೋದಿ ಅವರು ಗಡಕಾನಾ ಕೊಳಚೆ ಪ್ರದೇಶಕ್ಕೆ ತೆರಳಲಿದ್ದಾರೆ. ಅಲ್ಲಿ ಅವರು ವಸತಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಾರ್ವಜನಿಕ ಕಲ್ಯಾಣಕ್ಕಾಗಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ ದೆಹಲಿಗೆ ನೂತನ ಮುಖ್ಯಮಂತ್ರಿ ಘೋಷಣೆ

    ಇದರ ಬೆನ್ನಲ್ಲೇ ಜನತಾ ಮೈದಾನದಲ್ಲಿ ಪ್ರಧಾನಮಂತ್ರಿ ಸುಭದ್ರಾ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಐದು ವರ್ಷಗಳ ಕಾಲ 1 ಕೋಟಿಗೂ ಅಧಿಕ ಬಡ ಮಹಿಳೆಯರಿಗೆ ಎರಡು ಸಮಾನ ಕಂತುಗಳಲ್ಲಿ ವಾರ್ಷಿಕ 10,000 ರೂ. ನೀಡಲಾಗುವುದು.

    ಈ ಕಲ್ಯಾಣ ಯೋಜನೆಗಳ ಜೊತೆಗೆ, ಮೋದಿ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. 2,871 ಕೋಟಿ ರೂ. ಮೌಲ್ಯದ ರೈಲ್ವೆ ಮತ್ತು 1,000 ಕೋಟಿ ರೂ. ಮೌಲ್ಯದ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದು ಪ್ರದೇಶದ ಸಂಪರ್ಕ ಮತ್ತು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್‌- ಇಂದು ಸುಪ್ರೀಂನಲ್ಲಿ ವಿಚಾರಣೆ

    ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿಗೆ ಭಾರತದಾದ್ಯಂತದ ರಾಜಕೀಯ ನಾಯಕರು ಶುಭಾಶಯ ತಿಳಿಸಿದ್ದಾರೆ. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾರತದ ಬೆಳವಣಿಗೆಗೆ ಮೋದಿ ಅವರ ದೂರದೃಷ್ಟಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.