ನವದೆಹಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ (One Nation, One Election) ಬಿಲ್ ಅನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿಯನ್ನು ನೀಡಿತ್ತು. ಯಾವಗಿಂದ ಆರಂಭಿಸಬೇಕು ಎಂದು ತಿಳಿಸದೇ ಈ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು ವರದಿಯಲ್ಲಿ ವಿವರಿಸಿತ್ತು. ಸದ್ಯ ವರದಿಯನ್ನು ಅಧ್ಯಯನ ಮಾಡಿರುವ ಸರ್ಕಾರ ಇದನ್ನು ಬಿಲ್ ಮೂಲಕ ಸಂಸತ್‌ನಲ್ಲಿ ಮಂಡಿಸಲು ಸಿದ್ಧತೆ ಆರಂಭಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ
ಕಳೆದ ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಭಾಷಣ ಮಾಡಬೇಕಿದ್ದಾಗಲೂ ಪ್ರಧಾನಿ ಮೋದಿ, ಒಂದು ದೇಶ ಒಂದು ಚುನಾವಣೆಯ ಅಗತ್ಯವನ್ನು ಒತ್ತಿ ಹೇಳಿದ್ದರು. ಒಂದು ದೇಶ ಒಂದು ಚುನಾವಣೆಯ ಜೊತೆಗೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಬಿಲ್ ಕೂಡಾ ಮಂಡನೆಯಾಗಲಿದೆ ಎನ್ನಲಾಗಿದೆ.
ನವದೆಹಲಿ: ಅಕ್ಟೋಬರ್‌ನಲ್ಲಿ ನಡೆಯಲಿರುವ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ವೈಯಕ್ತಿಕ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಆಹ್ವಾನಿಸಿದೆ.
ಮೋದಿ ಮತ್ತು ಇತರ ಶಾಂಘೈ ಸಹಕಾರ ಸಂಸ್ಥೆ (SCO) ನಾಯಕರನ್ನು ಆಹ್ವಾನಿಸಲಾಗಿದೆ. ಮೋದಿ ಇಸ್ಲಾಮಾಬಾದ್‌ಗೆ ಪ್ರಯಾಣಿಸುವ ಪ್ರಶ್ನೆಯೇ ಇಲ್ಲವಾದರೂ, ಅವರು ಈ ಹಿಂದೆ ಮಾಡಿದಂತೆ ಈ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನಿಯೋಜಿಸುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ.
CHG ಯಲ್ಲಿ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನಾಮನಿರ್ದೇಶನ ಮಾಡುವುದು ಸಾಮಾನ್ಯವಾಗಿದೆ. ಕಳೆದ ವರ್ಷ ಬಿಷ್ಕೆಕ್‌ನಲ್ಲಿ ನಡೆದ ಸಿಎಚ್‌ಜಿ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಿದ್ದರು.
ಭಾರತ ಮತ್ತು ಪಾಕಿಸ್ತಾನಗಳೆರಡೂ ರಷ್ಯಾ ಮತ್ತು ಚೀನಾ ನೇತೃತ್ವದ ಗುಂಪಿನ ಪೂರ್ಣ ಸದಸ್ಯರಾಗಿದ್ದಾರೆ. ಇದು ಪ್ರಾದೇಶಿಕ ಭದ್ರತೆ ಮತ್ತು ಮಧ್ಯ ಏಷ್ಯಾದ ರಾಷ್ಟ್ರಗಳೊಂದಿಗೆ ಸಹಕಾರಕ್ಕೆ ನಿರ್ಣಾಯಕವಾಗಿದೆ.
ಭಯೋತ್ಪಾದನಾ ದಾಳಿಗಳಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಅಷ್ಟಾಗಿ ಚೆನ್ನಾಗಿಲ್ಲ. ಆದರೂ ಈ ಎರಡೂ ದೇಶಗಳು ಒಟ್ಟಿಗೆ ಕೆಲಸ ಮಾಡಲು SCO ಬಹುಪಕ್ಷೀಯ ವೇದಿಕೆಯಾಗಿದೆ. ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಕಳೆದ ವರ್ಷ SCO ವಿದೇಶಾಂಗ ಮಂತ್ರಿಗಳ ಸಭೆಗಾಗಿ ಭಾರತಕ್ಕೆ ಭೇಟಿ ನೀಡಿದ್ದರು.
ಕಿವ್: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದು, ಪೋಲೆಂಡ್‌ನಲ್ಲಿ (Poland) ಲ್ಯಾಂಡ್ ಆಗಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದಾರೆ. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ರೈಲಿನ ವಿಶೇಷತೆಗಳು:
ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ (Ukraine) ರಾಜಧಾನಿ ಕೀವ್‌ಗೆ (Kyiv) ‘ಟ್ರೇನ್ ಫೋರ್ಸ್ ಒನ್’ (Train Force One) ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಇದಕ್ಕೂ ಮುನ್ನ ಅಮೆರಿಕಾ ಅಧ್ಯಕ್ಷ ಜೋ ಬೈಡನ್ (Joe Biden) ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ (Emmanuel Macron) ಅವರು ಕೀವ್ ಭೇಟಿ ವೇಳೆ ಈ ರೈಲಿನಲ್ಲಿ ಪ್ರಯಾಣಿಸಿದ್ದರು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರು ತಮ್ಮ ಅಂತರರಾಷ್ಟ್ರೀಯ ಪ್ರವಾಸಗಳಿಗಾಗಿ ಈ ರೈಲಿನಲ್ಲಿ ಪ್ರಯಾಣಿಸುತ್ತಾರೆ.
ಈ ರೈಲು ಮರದ ಫಲಕದಿಂದ ಸಿದ್ಧಪಡಿಸಿದ ಕ್ಯಾಬಿನ್‌ಗಳನ್ನು ಹೊಂದಿದೆ. ಅತಿಥಿಗಳೊಂದಿಗೆ ಸಭೆ ಕೈಗೊಳ್ಳಲು ಟೇಬಲ್, ಸೋಫಾ, ಟಿವಿ ಹಾಗೂ ಅಚ್ಚುಕಟ್ಟಾದ ಮಲಗುವ ವ್ಯವಸ್ಥೆಯನ್ನು ಈ ರೈಲು ಒಳಗೊಂಡಿದೆ.
2014ರಲ್ಲಿ ಮೂಲತಃ ಕ್ರೈಮಿಯಾದಲ್ಲಿ ಪ್ರವಾಸಿಗರಿಗಾಗಿ ಈ ರೈಲನ್ನು ನಿರ್ಮಿಸಲಾಯಿತು. ಯುದ್ಧದ ಸಂದರ್ಭದಲ್ಲಿ ರಷ್ಯಾದ ವಿದ್ಯುತ್ ಜಾಲಗಳು ಮತ್ತು ವಿದ್ಯುತ್ ಉತ್ಪಾದನಾ ಸೌಲಭ್ಯಗಳ ಮೇಲೆ ಗಮನಾರ್ಹ ಸಮಸ್ಯೆಯಿಂದಾಗಿ ಉಕ್ರೇನ್ ರೈಲುಗಳನ್ನು ವಿದ್ಯುತ್ ಇಂಜಿನ್‌ನಿಂದ ಡೀಸೆಲ್ ಇಂಜಿನ್‌ಗಳಾಗಿ ಪರಿವರ್ತನೆ ಮಾಡಲಾಗಿದೆ. ಈ ಪರಿವರ್ತನೆಯಿಂದಾಗಿ ಪೋಲೆಂಡ್ ಗಡಿಯಿಂದ ಕೀವ್‌ಗೆ ರೈಲು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ.ಇದನ್ನೂ ಓದಿ: ಪ್ರಧಾನಿ ಮೋದಿ ವಿದೇಶಿ ಪ್ರವಾಸ – ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ
ಯುದ್ಧದ ಸಂದರ್ಭದಲ್ಲಿ ಹಾನಿಗೊಳಗಾದ ದೇಶದ ಮೂಲಕ ವಿಶ್ವ ನಾಯಕರು ಮತ್ತು ವಿಐಪಿಗಳನ್ನು ಸಾಗಿಸಲು ಈ ಐಷಾರಾಮಿ ರೈಲನ್ನು ಮರು ರೂಪಿಸಲಾಯಿತು. ರಷ್ಯಾ ಆಕ್ರಮಣದ ಸಮಯದಲ್ಲಿಯೂ ಲಕ್ಷಾಂತರ ಜನರನ್ನು, ಅನೇಕ ನಾಯಕರನ್ನು ಈ ರೈಲಿನ ಮೂಲಕ ಸ್ಥಳಾಂತರಿಸಲಾಗಿದೆ. ರಷ್ಯಾ ಆಕ್ರಮಣದ ಹೊರತಾಗಿಯೂ ದೇಶದ ಸಾರಿಗೆ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಈಗಲೂ ಈ ರೈಲು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.
ಜೂನ್‌ನಲ್ಲಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ (G7 Summit) ಸಂದರ್ಭದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದರು. ಅದಾದ ಬಳಿಕ ಆಗಸ್ಟ್ 23 ರಂದು ಉಕ್ರೇನ್ ಭೇಟಿ ನೀಡುವ ಮೂಲಕ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
– 40 ವರ್ಷಗಳ ಬಳಿಕ ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಮೊದಲು ಅವರು ಪೋಲೆಂಡ್‌ಗೆ ತೆರಳಲಿದ್ದಾರೆ. 45 ವರ್ಷಗಳ ಬಳಿಕ ಪೋಲೆಂಡ್‌ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿದ್ದಾರೆ. ಪ್ರವಾಸದಲ್ಲಿ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ದುಡಾ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ.
ತಮ್ಮ ನಿರ್ಗಮನಕ್ಕೂ ಪ್ರಧಾನಿ ಕಚೇರಿಯಿಂದ ಹೇಳಿಕೆ ಬಿಡುಗಡೆಯಾಗಿದ್ದು ಹೇಳಿಕೆಯಲ್ಲಿ, ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳಿಗೆ 70 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪೋಲೆಂಡ್‌ಗೆ ಭೇಟಿ ನೀಡುತ್ತಿದ್ದೇನೆ. ಮಧ್ಯ ಯೂರೋಪಿನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಜಪಾನ್‌ಗೆ ಭಾರತದಿಂದ ಹಸಿರು ಅಮೋನಿಯಾ ರಫ್ತು
ರೈಲಿನಲ್ಲಿ ಉಕ್ರೇನ್ ಭೇಟಿ
ಪೋಲೆಂಡ್‌ನಿಂದ (Poland) ಪ್ರಧಾನಿ ಮೋದಿ ಆಗಸ್ಟ್ 23 ರಂದು ಐಷಾರಾಮಿ ‘ಟ್ರೇನ್ ಫೋರ್ಸ್ ಒನ್’ ನಲ್ಲಿ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಉಕ್ರೇನ್ ಯುದ್ಧದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಪೋಲೆಂಡ್‌ನಿಂದ ನಾನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿಯವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡಲಿದ್ದೇನೆ. ಇದು ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಅಧ್ಯಕ್ಷ ಝೆಲೆನ್ಸ್‌ಕಿ ಅವರೊಂದಿಗೆ ಮಾತುಕತೆ ಅವಕಾಶವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಅವರು ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಕ್ಷ್ಯ ನೀಡಿದ್ರೆ ಝಾಕೀರ್ ನಾಯ್ಕ್ ಭಾರತಕ್ಕೆ ಹಸ್ತಾಂತರ – ಮಲೇಷ್ಯಾ ಪ್ರಧಾನಿ ಇಬ್ರಾಹಿಂ
ಉಕ್ರೇನ್ ಅನ್ನು ‘ಸ್ನೇಹಿತ’ ಮತ್ತು ‘ಪಾಲುದಾರ’ ಎಂದು ಕರೆದಿರುವ ಮೋದಿ ಶಾಂತಿ ಮತ್ತು ಸ್ಥಿರತೆ ಶೀಘ್ರದಲ್ಲೇ ಮರಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಭಾರತ ಉಕ್ರೇನ್ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವ ಸಂಪುಟದ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿ ಪಡಿಸಿದ ಘಟನೆ ಅತ್ಯಂತ ದುರದೃಷ್ಟಕರ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು, ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಆಗಸ್ಟ್ 16ರಿಂದ ‘ಜನಾಶೀರ್ವಾದ ಯಾತ್ರೆ’ ನಡೆಸಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಜನಾಶೀರ್ವಾದ ಯಾತ್ರೆ ತೆರಳಲಿದೆ. ರಾಜ್ಯದಲ್ಲಿ ನಾಲ್ಕು ತಂಡಗಳು ಸಂಚರಿಸಲಿದ್ದು, ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತ್ವದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ಇದಕ್ಕಾಗಿ ಸಂಚಾಲಕರು, ಸಹ ಸಂಚಾಲಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ. ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿ 161 ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕೇಂದ್ರ ಸರ್ಕಾರವು ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನ ದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ದೀಪಾವಳಿವರೆಗೆ ಬಡವರಿಗೆ ಉಚಿತ ಪಡಿತರ ನೀಡುತ್ತಿದ್ದು, ಲಸಿಕಾ ಕೇಂದ್ರ, ರೇಶನ್ ಅಂಗಡಿಗಳಿಗೆ ಈ ಯಾತ್ರೆ ಭೇಟಿ ಕೊಡಲಿದೆ ಎಂದು ವಿವರಿಸಿದರು.
ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿ ಗೊಬ್ಬರ ಸರಿಯಾಗಿ ಸಿಗುತ್ತಿದೆಯೇ ಎಂದು ಮಾಹಿತಿ ಪಡೆಯಲಾಗುವುದು. ಸಾಹಿತಿಗಳು, ಗಡಿ ಕಾಯುವ ಯೋಧರ ಮನೆ, ಗಣ್ಯ ವ್ಯಕ್ತಿಗಳ ಮನೆ, ಜನಸಂಘ ಮತ್ತು ಬಿಜೆಪಿಯ ಹಿರಿಯ ನಾಯಕರ ಮನೆಗಳಿಗೆ ಭೇಟಿ ಕೊಟ್ಟು ಅವರ ಆಶೀರ್ವಾದ ಪಡೆಯಲಾಗುವುದು ಎಂದರು. ಬಳಿಕ ಯಾತ್ರೆಯ ರೂಟ್ ಮ್ಯಾಪ್ ಬಿಡುಗಡೆಗೊಳಿಸಿದರು. ಕೋವಿಡ್ ನಿಯಮಾವಳಿ ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ – ಸಿಎಂ ಸಂಧಾನ ಸಭೆ ಸಕ್ಸಸ್
ನವದೆಹಲಿ: ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಭಾವುಕರಾದರು.
ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ನಾರಾಯಣಸ್ವಾಮಿ ಆಗಮಿಸಿದ್ದರು. ನಿವಾಸದಿಂದ ಹೊರ ಬರುತ್ತಲೇ ಕೇಂದ್ರದ ಸಚಿವನಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಸ್ವಾಮಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಪಕ್ಷ ಅವಕಾಶ ನೀಡಿದೆ. ಸಿಕ್ಕ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ಸಂಸದ ನಾರಾಯಣಸ್ವಾಮಿಗೆ ಏಕೆ ಸ್ಥಾನ?
ಎಸ್‍ಸಿ ಎಡಗೈ ಸಮುದಾಯದ ಕೋಟಾ ಇತ್ತು. ಮೊದಲ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ ಸ್ಥಾನ ಕೊಡಲಾಗಿತ್ತು. ಆದರೆ ಎರಡನೇ ಅವಧಿಯಲ್ಲಿ ಸ್ಥಾನವನ್ನ ಕೊಟ್ಟಿರಲಿಲ್ಲ. ಹಾಗಾಗಿ ಆ ಕೋಟಾದಲ್ಲಿ ನಾರಾಯಣಸ್ವಾಮಿಗೆ ಸ್ಥಾನ ನೀಡಲಾಗಿದೆ. ಇನ್ನೂ ನಾರಾಯಣಸ್ವಾಮಿ ಅವರು ಬಿ.ಎಲ್.ಸಂತೋಷ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.
ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರ್ಪಡೆಯಾದ ರಾಜ್ಯದ ಐದನೇ ಸಂಸದೆಯಾಗಲಿದ್ದಾರೆ. ಈ ಹಿಂದೆ ಸರೋಜಿನಿ ಮಹಿಷಿ, ಬಳ್ಳಾರಿ ಸಂಸದೆಯಾಗಿದ್ದ ಬಸವರಾಜೇಶ್ಚರಿ, ಚಿಕ್ಕಮಗಳೂರು ಸಂಸದೆಯಾಗಿದ್ದ ಡಿ.ಕೆ.ತಾರದೇವಿ, ಕೆನರಾ ಸಂಸದೆಯಾಗಿದ್ದ ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು. ಈಗ ಮತ್ತೆ ಉಡುಪಿ-ಚಿಕ್ಕಮಗಳೂರಿಗೆ ಅದೃಷ್ಟ ಒಲಿದು ಬಂದಿದೆ.
ನವದೆಹಲಿ: ಸರ್ಕಾರ ರೈತರ ಪರವಾಗಿದ್ದು, ಅವರ ಅಭಿವೃದ್ಧಿಗೆ ಪ್ರತಿಬದ್ಧವಾಗಿದೆ ಎಂದ ವಿತ್ತ ಸಚಿವರು ಅನ್ನದಾತರ ಆದಾಯ ಹೆಚ್ಚಳಕ್ಕೆ ಕೆಲವು ಸೂತ್ರಗಳನ್ನ ಘೋಷಣೆ ಮಾಡಿದರು.
ಸರ್ಕಾರ 2022ರೊಳಗೆ ರೈತರ ಆದಾಯವನ್ನ ದ್ವಿಗುಣಗೊಳಿಸುವ ಕಾರ್ಯದಲ್ಲಿ ಯಶಸ್ಸಿನ ಹೆಜ್ಜೆ ಇರಿಸಿದೆ. ಪ್ರಧಾನಿಗಳು 8 ಕೋಟಿಗೂ ಅಧಿಕ ಕುಟುಂಬಗಳಿಗೆ ಉಚಿತ ಗ್ಯಾಸ್ ನೀಡಿದ್ದಾರೆ. 4 ಕೋಟಿಗೂ ಅಧಿಕ ರೈತ, ಮಹಿಳೆಯರು ಮತ್ತು ಬಡವರ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
2013-14ರಲ್ಲಿ ಸರ್ಕಾರ ಗೋಧಿ ಖರೀದಿಗಾಗಿ 33 ಸಾವಿರ ಕೋಟಿ ರೂ. ಖರ್ಚು ಮಾಡಿತ್ತು. 2019ರಲ್ಲಿ 63 ಸಾವಿರ ಕೋಟಿ ರೂ. ಖರೀದಿಸಿದ್ರೂ ಅದು 75 ಸಾವಿರ ಕೋಟಿಗೆ ಏರಿಕೆಯಾಯ್ತು. 2020-21ರಲ್ಲಿ 43 ಲಕ್ಷ ರೈತರಿಗೆ ಇದರ ಲಾಭ ಪಡೆದಿದ್ದಾರೆ.
ಧಾನ್ಯಗಳ ಖರೀದಿಗೆ ಸರ್ಕಾರ 2013-14ರಲ್ಲಿ 63 ಸಾವಿರ ಕೋಟಿ ಖರ್ಚು ಮಾಡಿತ್ತು. ಆದ್ರೆ 1 ಲಕ್ಷ 45 ಸಾವಿರ ಕೋಟಿಗೆ ಏರಿಕೆ ಆಯ್ತು. ಈ ವರ್ಷ ಧಾನ್ಯ ಖರೀದಿಯ ಮೊತ್ತ 1.72 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ. ಕಳೆದ ಬಾರಿ 1.2 ಕೋಟಿ ರೈತರಿಗೆ ಧಾನ್ಯ ಖರೀದಿಯಿಂದ ಲಾಭವಾಗಿತ್ತು. ಈ ವರ್ಷ ಸುಮಾರು 1.5 ಕೋಟಿ ರೈತರು ಲಾಭ ಪಡೆಯಲಿದ್ದಾರೆ. ಇದನ್ನೂ ಓದಿ: ಕೋವಿಡ್ ಲಸಿಕೆಗೆ 35 ಸಾವಿರ ಕೋಟಿ
2014ರಲ್ಲಿ ಬೇಳೆ ಖರೀದಿಗಾಗಿ 236 ಕೋಟಿ ರೂ. ವ್ಯಯಿಸಲಾಗಿತ್ತು. ಈ ವರ್ಷ ಸರ್ಕಾರ 10 ಸಾವಿರ 500 ಕೋಟಿಯಷ್ಟು ಬೇಳೆ ಖರೀದಿಸಲಿದೆ. ಈ ಖರೀದಿ ಶೇ.40 ರಷ್ಟು ಏರಿಕೆ. ಎಂಎಸ್‍ಪಿ ಒಂದೂವರೆ ಪಟ್ಟು ಹೆಚ್ಚಿಸಲಾಗುವುದು ಹಾಗೂ ಸರ್ಕಾರ ಅನ್ನದಾತರ ಅಭಿವೃದ್ಧಿಗೆ ಬದ್ಧವಾಗಿದೆ. ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 6,500 ಕಿ.ಮೀ ಹೆದ್ದಾರಿ ನಿರ್ಮಾಣ
ಈ ವರ್ಷ ಸ್ವಾಮಿತ್ವ ಸ್ಕೀಂ ಆರಂಭಿಸಲಾಗಿದ್ದು, ಇದುವರೆಗೂ 1.8 ಲಕ್ಷ ಜನಕ್ಕೆ ಕಾರ್ಡ್ ಲಭ್ಯವಾಗಿದೆ. 2021ರೊಳಗೆ ಪ್ರತಿ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗಾಗಿ ಒಂದು ಪೋರ್ಟಲ್ ರಚನೆ ಮಾಡಲಾಗವುದು. ಕಟ್ಟಡ ನಿರ್ಮಾಣದಲ್ಲಿ ತೊಡಗುವ ಕಾರ್ಮಿಕರಿಗೆ ಆರೋಗ್ಯ, ವಸತಿ ಮತ್ತು ಆಹಾರ ಸ್ಕೀಂ ಆರಂಭಿಸಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ:ಚುನಾವಣೆ ನಡೆಯುಲಿರುವ ರಾಜ್ಯಗಳಿಗೆ ಬಂಪರ್ ಯೋಜನೆಗಳು