Tag: ಪಿಎಂ ಮೋದಿ

  • Gandhi Jayanti: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ

    Gandhi Jayanti: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ

    ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Mahatma Gandhi) ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.

    ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ (Gandhi Jayanti) ಬಂದಿದೆ. ಇಂದು (ಅ.2) ಮಹಾತ್ಮ ಗಾಂಧೀಜಿ ಅವರ 156ನೇ ವರ್ಷದ ಜನ್ಮ ದಿನ. ಇದನ್ನೂ ಓದಿ: ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

    ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ಪ್ರದರ್ಶಿಸಿದರು ಎಂದು ಸ್ಮರಿಸಿದ್ದಾರೆ.

    ಜನರನ್ನು ಸಬಲೀಕರಣಗೊಳಿಸುವ ಅಗತ್ಯ ಸಾಧನವಾಗಿ ಸೇವೆ ಮತ್ತು ಕರುಣೆಯ ಶಕ್ತಿಯನ್ನು ಅವರು ನಂಬಿದ್ದರು. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಅನ್ವೇಷಣೆಯಲ್ಲಿ ನಾವು ಅವರ ಮಾರ್ಗವನ್ನು ಅನುಸರಿಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

    ಇದೇ ದಿನ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನ ಕೂಡ. ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಘಾಟ್‌ನಲ್ಲಿ ಶಾಸ್ತ್ರಿ ಅವರಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

    ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಿಯೆಯ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು. ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಮೋದಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

  • ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

    ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

    – ಆರ್‌ಎಸ್‌ಎಸ್‌ಗೆ ಶತಮಾನೋತ್ಸವ ಸಂಭ್ರಮ; ಸ್ಮರಣಾರ್ಥ ನಾಣ್ಯ & ಅಂಚೆ ಚೀಟಿ ಬಿಡುಗಡೆ

    ನವದೆಹಲಿ: ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

    ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳ ಅದ್ಭುತ ಪಯಣವು ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ. ಆರ್‌ಎಸ್‌ಎಸ್ ಶತಮಾನೋತ್ಸವದ ಭಾಗವಾಗಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ. ನಾಳೆ ವಿಜಯದಶಮಿ, ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ. ಅನ್ಯಾಯದ ಮೇಲೆ ನ್ಯಾಯದ ವಿಜಯ, ಸುಳ್ಳಿನ ಮೇಲೆ ಸತ್ಯದ ವಿಜಯ. ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಂಕೇತಿಸುವ ಹಬ್ಬವಾಗಿದೆ. 100 ವರ್ಷಗಳ ಹಿಂದೆ ಈ ಮಹಾನ್ ದಿನದಂದು ಆರ್‌ಎಸ್‌ಎಸ್ ಅನ್ನು ಒಂದು ಸಂಘಟನೆಯಾಗಿ ಸ್ಥಾಪಿಸುವುದು ಕಾಕತಾಳೀಯವಲ್ಲ ಎಂದು ಬಣ್ಣಿಸಿದ್ದಾರೆ.

    ಈ 100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವಿದೆ ಮತ್ತು ಇನ್ನೊಂದು ಬದಿಯಲ್ಲಿ, ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ. ಸ್ವಯಂಸೇವಕರು ಅವಳ ಮುಂದೆ ಸಮರ್ಪಣೆಯಿಂದ ನಮಸ್ಕರಿಸುತ್ತಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಮ್ಮ ಕರೆನ್ಸಿಯಲ್ಲಿ ತೋರಿಸಲಾಗಿದೆ. ಇಂದು ಬಿಡುಗಡೆಯಾದ ವಿಶೇಷ ಅಂಚೆ ಚೀಟಿಯೂ ಸಹ ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 1963 ರಲ್ಲಿ, RSS ಸ್ವಯಂಸೇವಕರು ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಹೆಮ್ಮೆಯಿಂದ ಭಾಗವಹಿಸಿದ್ದರು. ಈ ಅಂಚೆ ಚೀಟಿಯು ಆ ಐತಿಹಾಸಿಕ ಕ್ಷಣದ ಚಿತ್ರವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    ಸ್ವಾತಂತ್ರ‍್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದವು. ಆರ್‌ಎಸ್‌ಎಸ್ ಮುಖ್ಯವಾಹಿನಿಗೆ ಬರದಂತೆ ತಡೆಯಲು ಅನಂತ ಪಿತೂರಿಗಳು ನಡೆದವು. ನಾವು ಆಕಸ್ಮಿಕವಾಗಿ ನಮ್ಮ ನಾಲಿಗೆಯನ್ನು ಹಲ್ಲುಗಳಿಂದ ಕಚ್ಚುತ್ತೇವೆ. ಆದರೆ, ಅದರರ್ಥ ನಾವು ನಮ್ಮ ಹಲ್ಲುಗಳನ್ನು ಮುರಿಯುತ್ತೇವೆ ಎಂದಲ್ಲ. ಸಂಘಟನೆಯ ವಿರುದ್ಧ ಎಲ್ಲಾ ನಿಷೇಧಗಳು ಮತ್ತು ಪಿತೂರಿಗಳ ಹೊರತಾಗಿಯೂ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ. ಏಕೆಂದರೆ ನಾವು ಸಮಾಜದಿಂದ ಭಿನ್ನವಾಗಿಲ್ಲ, ಅದರ ಭಾಗವಾಗಿದ್ದೇವೆ ಎಂದು ನಮಗೆ ತಿಳಿದಿದೆ. ಆರ್‌ಎಸ್‌ಎಸ್ ಸ್ವಯಂಸೇವಕರು ದೇಶದ ಸಾಂವಿಧಾನಿಕ ಸಂಸ್ಥೆಗಳಲ್ಲಿ ಅಚಲ ನಂಬಿಕೆಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

    ಇದಕ್ಕೂ ಮೊದಲು ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಮೋದಿ ಬಿಡುಗಡೆ ಮಾಡಿದರು. ಆರ್‌ಎಸ್‌ಎಸ್‌ನ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಬಿಡುಗಡೆ ಮಾಡಿದರು. ಆರ್‌ಎಸ್‌ಎಸ್ ಅನ್ನು 1925 ರಲ್ಲಿ ನಾಗ್ಪುರದಲ್ಲಿ ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಥಾಪಿಸಿದ್ದರು.

  • ಕನ್ನಡದ ‘ಕಮಲದ ಮೊಗದೋಳೆ..’ ಹಾಡನ್ನು ಹಂಚಿಕೊಂಡು ನವರಾತ್ರಿ ಶುಭಾಶಯ ತಿಳಿಸಿದ ಮೋದಿ

    ಕನ್ನಡದ ‘ಕಮಲದ ಮೊಗದೋಳೆ..’ ಹಾಡನ್ನು ಹಂಚಿಕೊಂಡು ನವರಾತ್ರಿ ಶುಭಾಶಯ ತಿಳಿಸಿದ ಮೋದಿ

    ನವದೆಹಲಿ: ಲಕ್ಷ್ಮಿಯನ್ನು ಆರಾಧಿಸುವ ‘ಕಮಲದ ಮೊಗದೋಳೆ ಕಮಲದ ಕಣ್ಣೋಳೆ ಕಮಲವ ಕೈಯಲ್ಲಿ ಹಿಡಿದೋಳೆ..’ ಹಾಡು ಕನ್ನಡದ ಜನಪ್ರಿಯ ಭಕ್ತಿಗೀತೆ. ನವರಾತ್ರಿಯ (Navratri Festival) ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಹಾಡನ್ನು ಹಂಚಿಕೊಂಡಿದ್ದಾರೆ.

    1984ರಲ್ಲಿ ಬಿಡುಗಡೆಯಾದ ಹೊಸ ಇತಿಹಾಸ ಚಿತ್ರದ ಈ ಗೀತೆಯನ್ನು ಚಿ.ಉದಯಶಂಕರ್ ರಚಿಸಿ, ಎಸ್.ಜಾನಕಿ ಹಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಹಾಡು ಹಂಚಿಕೊಂಡಿರುವ ಮೋದಿ, ‘ದೇವಿಯು ಭಕ್ತರಿಗೆ ಸುಖ, ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಕರುಣಿಸಲಿ’ ಎಂದು ಪ್ರಾರ್ಥಿಸಿದ್ದಾರೆ. ಖ್ಯಾತ ಆಡಿಯೋ ಕಂಪನಿ ಲಹರಿಯ ಸಹೋದರ ಸಂಸ್ಥೆಯಾದ ಎಂಆರ್‌ಟಿ ಮ್ಯೂಸಿಕ್‌ನಲ್ಲಿ ಈ ಹಾಡು ಮೂಡಿ ಬಂದಿದೆ. ಇದೀಗ, ಈ ಹಾಡು ಮತ್ತೆ ಎಲ್ಲೆಡೆ ವೈರಲ್ ಆಗುತ್ತಿದೆ. ಇದನ್ನೂ ಓದಿ: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    ಮೋದಿ ಎಕ್ಸ್‌ ಖಾತೆಯಲ್ಲೇನಿದೆ?
    ನವರಾತ್ರಿಯ ಸಮಯದಲ್ಲಿ, ದೇವಿಯು ಎಲ್ಲಾ ಭಕ್ತರಿಗೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಆಕೆಯ ಪ್ರೀತಿಯ ವಾತ್ಸಲ್ಯವು ಪ್ರತಿಯೊಬ್ಬರ ಜೀವನದಲ್ಲೂ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಮೋದಿ ಅವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನವರಾತ್ರಿ ಸಂದರ್ಭದಲ್ಲಿ ಈ ಹಾಡು ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಅವರಿಗೆ ಅನೇಕರು ಕಾಮೆಂಟ್ಸ್‌ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಂಗೀತಕ್ಕೆ ನಮ್ಮನ್ನು ಆವರಿಸುವ ಶಕ್ತಿಯಿದೆ: ಹೆಚ್‌ಆರ್‌ ರಂಗನಾಥ್‌

  • ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿದೆ: ಮೋದಿ

    ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿದೆ: ಮೋದಿ

    – ಟ್ಯಾರಿಫ್‌, ಹೆಚ್‌-1ಬಿ ವೀಸಾ ಹೊಸ ನಿಯಮಗಳ ಮೂಲಕ ಅಮೆರಿಕ ಟಾರ್ಗೆಟ್‌ಗೆ ಮೋದಿ ಟಾಂಗ್‌

    ನವದೆಹಲಿ: ಜಾಗತಿಕ ಅಡೆತಡೆಗಳು ಮತ್ತು ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿ ಉಳಿದಿದೆ. ಸರ್ಕಾರವು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಸಾಕಷ್ಟು ಒತ್ತು ನೀಡಿದ್ದು, ದೇಶದೊಳಗೆ ಚಿಪ್‌ನಿಂದ ಹಡಗು ಉತ್ಪಾದಿಸಲು ಯೋಜಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ.

    ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿದ್ದ ಉತ್ತರ ಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

    ಈ ಎಕ್ಸ್‌ಪೋದಲ್ಲಿ 2,250 ಕ್ಕೂ ಹೆಚ್ಚು ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸುತ್ತಿದ್ದಾರೆ. ರಷ್ಯಾ ಈ ವ್ಯಾಪಾರ ಪ್ರದರ್ಶನದ ದೇಶದ ಪಾಲುದಾರ ಎಂದು ಮೋದಿ ಹೇಳಿದರು. ಇದು ಸಮಯ-ಪರೀಕ್ಷಿತ ಪಾಲುದಾರಿಕೆಯ ಮತ್ತಷ್ಟು ಬಲವರ್ಧನೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

    ಜಾಗತಿಕ ಅಡೆತಡೆಗಳು ನಮಗೆ ಅಡ್ಡಿಯಾಗುವುದಿಲ್ಲ. ನಾವು ಆ ಸಂದರ್ಭಗಳಲ್ಲಿಯೂ ಹೊಸ ದಿಕ್ಕುಗಳನ್ನು ಹುಡುಕುತ್ತಿದ್ದೇವೆ. ಈ ಎಲ್ಲಾ ಅಡೆತಡೆಗಳ ನಡುವೆ, ಭಾರತವು ಮುಂಬರುವ ದಶಕಗಳಿಗೆ ಅಡಿಪಾಯವನ್ನು ಬಲಪಡಿಸುತ್ತಿದೆ. ಆತ್ಮನಿರ್ಭರ ಭಾರತ ಮಂತ್ರ ನಮ್ಮ ಸಂಕಲ್ಪ. ಒಂದು ದೇಶವು ಇತರರ ಮೇಲೆ ಹೆಚ್ಚು ಅವಲಂಬಿತವಾಗಿದ್ದರೆ, ಅದರ ಬೆಳವಣಿಗೆಯಲ್ಲಿ ಹೆಚ್ಚು ರಾಜಿಯಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಸೆಮಿಕಂಡಕ್ಟರ್ ವಲಯದಲ್ಲಿ ದೇಶದ ಸ್ವಾವಲಂಬನೆಯನ್ನು ಬಲಪಡಿಸುವಲ್ಲಿ ಉತ್ತರ ಪ್ರದೇಶ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಭಾರತದಲ್ಲಿ ತಯಾರಾಗುವ ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ಉತ್ತರ ಪ್ರದೇಶವು ಪಾಲು ಶೇ.55 ರಷ್ಟಿದೆ. ನಮ್ಮ ಸಶಸ್ತ್ರ ಪಡೆಗಳು ಇತರ ರಾಷ್ಟ್ರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ ಎಂದು ತಿಳಿಸಿದ್ದಾರೆ.

  • ನವರಾತ್ರಿಯಿಂದ ಹೊಸ GST ಸ್ಲ್ಯಾಬ್‌ ಜಾರಿ – ದೇಶವನ್ನುದ್ದೇಶಿಸಿ ಇಂದು ಸಂಜೆ 5ಕ್ಕೆ ಮೋದಿ ಭಾಷಣ

    ನವರಾತ್ರಿಯಿಂದ ಹೊಸ GST ಸ್ಲ್ಯಾಬ್‌ ಜಾರಿ – ದೇಶವನ್ನುದ್ದೇಶಿಸಿ ಇಂದು ಸಂಜೆ 5ಕ್ಕೆ ಮೋದಿ ಭಾಷಣ

    ನವದೆಹಲಿ: ನವರಾತ್ರಿಯಿಂದಲೇ (ಸೆ.22) ಹೊಸ ಜಿಎಸ್‌ಟಿ ಸ್ಲ್ಯಾಬ್‌ (GST Rate Cut) ಅನುಷ್ಠಾನಗೊಳ್ಳಲಿದ್ದು, ದೇಶದ ಜನತೆಯನ್ನುದ್ದೇಶಿಸಿ ಇಂದು (ಭಾನುವಾರ) ಸಂಜೆ ಪ್ರಧಾನಿ ಮೋದಿ (PM Modi) ಅವರು ಭಾಷಣ ಮಾಡಲಿದ್ದಾರೆ.

    ಹೊಸ ಜಿಎಸ್‌ಟಿ ಜಾರಿಗೂ ಮೊದಲು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಈ ಹಿಂದೆ ತೆರಿಗೆ ಭಾರ ಇಳಿಸುವ ಭರವಸೆ ನೀಡಿದ್ದರು. ಅಂತೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಜಿಎಸ್‌ಟಿ ಸಭೆಯಲ್ಲಿ ಸ್ಲ್ಯಾನ್ ಪರಿಷ್ಕರಣೆ ಮಾಡಲಾಗಿದೆ. ಇದನ್ನೂ ಓದಿ: GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

    ನಾಳೆಯಿಂದ ಹೊಸ ನಿಯಮ ಜಾರಿ ಹಿನ್ನೆಲೆ ಇಂದು ಮೋದಿ ದೇಶದ ಜನರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಹೊಸ ಜಿಎಸ್‌ಟಿ ದರ ಹಿನ್ನೆಲೆ ಹಲವಾರು ಗ್ರಾಹಕ ಉತ್ಪನ್ನಗಳ ಬೆಲೆಗಳು ಕಡಿಮೆಯಾಗಲಿವೆ.

    ದಸರಾ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಹಬ್ಬದ ಉತ್ಸಾಹದಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಸೆಪ್ಟೆಂಬರ್‌ 22ರಿಂದಲೇ ಹೊಸ ಜಿಎಸ್‌ಟಿ ದರ (GST Rate) ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ನಾವು ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆಗೆ ಅಗ್ಗದಲ್ಲಿ ಸಿಗಲಿದೆ. ಇದನ್ನೂ ಓದಿ: ನವರಾತ್ರಿಯಿಂದಲೇ ಹೊಸ GST ದರ ಜಾರಿ; ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ? – ಇಲ್ಲಿದೆ ಪೂರ್ಣ ಪಟ್ಟಿ

  • ಪ್ರಧಾನಿ ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್‌ ಟರ್ಮಿನಲ್‌ ಉದ್ಘಾಟನೆ ಇಂದು

    ಪ್ರಧಾನಿ ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್‌ ಟರ್ಮಿನಲ್‌ ಉದ್ಘಾಟನೆ ಇಂದು

    ಗಾಂಧೀನಗರ: ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ (Cruise Terminal) ಅನ್ನು ಪ್ರಧಾನಿ ಮೋದಿ (PM Modi) ಅವರು ಶನಿವಾರ ಉದ್ಘಾಟಿಸಲಿದ್ದಾರೆ.

    ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ ಆಗಮಿಸಲಿದ್ದು, ಬಹು ವಲಯಗಳಲ್ಲಿ ಹಲವಾರು ಪರಿವರ್ತನಾ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ನವರಾತ್ರಿಯಿಂದಲೇ ಹೊಸ GST ದರ ಜಾರಿ; ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ? – ಇಲ್ಲಿದೆ ಪೂರ್ಣ ಪಟ್ಟಿ

    ಪ್ರಧಾನಮಂತ್ರಿಗಳು ‘ಸಮುದ್ರದಿಂದ ಸಮೃದ್ಧಿ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ಮೋದಿ 7,870 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಉಪಕ್ರಮಗಳು ಭಾರತದ ಪ್ರಮುಖ ಬಂದರುಗಳಲ್ಲಿ ನಿರ್ಣಾಯಕ ಮೂಲಸೌಕರ್ಯ ನವೀಕರಣಗಳನ್ನು ಒಳಗೊಂಡಿವೆ. ಇಂದಿರಾ ಡಾಕ್‌ನಲ್ಲಿ ಮುಂಬೈ ಅಂತರರಾಷ್ಟ್ರೀಯ ಕ್ರೂಸ್ ಟರ್ಮಿನಲ್ ಉದ್ಘಾಟನೆ ಮತ್ತು ಕೋಲ್ಕತ್ತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ಹೊಸ ಕಂಟೇನರ್ ಟರ್ಮಿನಲ್‌ಗೆ ಅಡಿಪಾಯ ಹಾಕುವುದು ಪ್ರಮುಖ ಅಂಶಗಳಲ್ಲಿ ಸೇರಿವೆ. ಇದನ್ನೂ ಓದಿ: ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ

    ಪಾರಾದೀಪ್ ಬಂದರಿನಲ್ಲಿ (ಒಡಿಶಾ) ಹೊಸ ಸರಕು ನಿಲ್ದಾಣ ಮತ್ತು ಕಂಟೇನರ್ ನಿರ್ವಹಣಾ ಸೌಲಭ್ಯಗಳು, ಗುಜರಾತ್‌ನ ಟ್ಯೂನ ಟೆಕ್ರಾ ಮಲ್ಟಿ-ಕಾರ್ಗೋ ಟರ್ಮಿನಲ್, ಮತ್ತು ಕಾಮರಾಜರ್ ಬಂದರು (ಎನ್ನೋರ್, ತಮಿಳುನಾಡು), ಚೆನ್ನೈ ಬಂದರು, ಕಾರ್ ನಿಕೋಬಾರ್ ದ್ವೀಪ, ದೀನದಯಾಳ್ ಬಂದರಿನಲ್ಲಿ (ಕಾಂಡ್ಲಾ) ಆಧುನೀಕರಣ ಯೋಜನೆಗಳು ಮತ್ತು ಪಾಟ್ನಾ ಮತ್ತು ವಾರಣಾಸಿಯಲ್ಲಿ ಒಳನಾಡಿನ ಜಲಮಾರ್ಗ ಸೌಲಭ್ಯಗಳು ಮೊದಲಾದವು ಕಡಲ ಅಭಿವೃದ್ಧಿ ಯೋಜನೆಗಳಾಗಿವೆ.

  • ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

    ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

    ಬೆಂಗಳೂರು: ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ.

    ವೋಟ್ ಚೋರಿ ಬಗ್ಗೆ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ವೋಟ್ ಕಳ್ಳತನ ಆಗಿದೆ ಅಂತ ಪ್ರೂವ್ ಮಾಡಿದ್ದಾರೆ. ಇಡೀ ದೇಶದಲ್ಲಿ ಅಕ್ರಮ ನಡೆದಿದೆ. ಇದಕ್ಕೆ ಬಿಜೆಪಿ ಅವರು ಉತ್ತರ ಕೊಡಬೇಕು ಒತ್ತಾಯಿಸಿದ್ದಾರೆ.

    ಬಿಜೆಪಿ ಅವರು ಮೌನವಾಗಿ ಇದ್ದಾರೆ ಅಂದರೆ ಕಳ್ಳತನ ಆಗಿದೆ ಅಂತ ಅರ್ಥ. ಮೋದಿ, ಅಮಿತ್ ಶಾ ಯಾಕೆ ಹೇಳಿಕೆ ಕೊಡ್ತಿಲ್ಲ? ಚುನಾವಣೆ ಆಯೋಗ ಯಾಕೆ ಉತ್ತರ ಕೊಡಬೇಕು? ದೇಶ ಆಳೋರು ಉತ್ತರ ಕೊಡಬೇಕು. ಇವರ ವರ್ತನೆ ನೋಡಿದ್ರೆ ಮತ ಚೋರಿ ಆಗಿರೋದು ಸತ್ಯ ಆಗಿದೆ. ಬಿಜೆಪಿ ಅವರು ಕಳ್ಳತನ ಮಾಡಿನೇ ಹಿಂದೆಲ್ಲಾ ಸರ್ಕಾರ ಮಾಡಿರೋದು ಅಂತ ಗೊತ್ತಾಗುತ್ತದೆ ಎಂದು ಆರೋಪಿಸಿದ್ದಾರೆ.

    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ
    ಸಮೀಕ್ಷೆಯಲ್ಲಿ ‌ಮತಾಂತರ ವಿಚಾರದಲ್ಲಿ ಗೊಂದಲ ಆಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಸರ್ಕಾರ ಮಾಡುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಬಿಜೆಪಿ ನಾಯಕರಿಗೆ ಮಾತ್ರ ಗೊಂದಲ ಇರೋದು ಅಂತ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಸಮೀಕ್ಷೆ ಬಗ್ಗೆ ಜನರು ಗೊಂದಲದಲ್ಲಿ ಇಲ್ಲ. ಬಿಜೆಪಿ, ಬಿಜೆಪಿ ನಾಯಕರು ಗೊಂದಲದಲ್ಲಿ ಇದ್ದಾರೆ. ಜನರು 22 ರಂದು ಮಾಹಿತಿ ಬರೆಸೋಕೆ ಕಾಯುತ್ತಿದ್ದಾರೆ. ಈ ಸಮೀಕ್ಷೆ ಅದ್ರೆ ಬಡವರಿಗೆ ಸಿದ್ದರಾಮಯ್ಯ ಯೋಜನೆ ಮಾಡ್ತಾರೆ ಅಂತ ಬಿಜೆಪಿ ಅವರಿಗೆ ಭಯ. ನಾವು ಯೋಜನೆ ಕೊಟ್ಟರೆ ಬಿಜೆಪಿ ಅಸ್ಥಿತ್ವ ಹೋಗುತ್ತದೆ ಅಂತ ಭಯ ಇದೆ. ಹೀಗಾಗಿ, ಇಂತಹ ಆರೋಪ ಅಂತ ಕಿಡಿಕಾರಿದ್ದಾರೆ.

    ಈಗಾಗಲೇ ಬಿಜೆಪಿ ಅವರು ಮತ ಕಳ್ಳತನ ಮಾಡಿದ್ದಾರೆ. ಕೇಂದ್ರ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿಲ್ಲ. ಹೀಗಾಗಿ ಬಿಜೆಪಿ ಜಿರೋ ಆಗುತ್ತೆ. ಮುಂದೆ ಏನ್ ಮಾಡೋದು ಅಂತ ಅವರಿಗೆ ಭಯ. ಹೀಗಾಗಿ, ಇಂತಹ ವಿರೋಧ ಮಾಡ್ತಿದ್ದಾರೆ ಅಷ್ಟೆ ಎಂದಿದ್ದಾರೆ.

  • ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

    ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

    ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ಕುರಿತಾದ ಎಐ ಆಧಾರಿತ ವೀಡಿಯೊವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಪಾಟ್ನಾ ಹೈಕೋರ್ಟ್ ಕಾಂಗ್ರೆಸ್‌ಗೆ ಸೂಚಿಸಿದೆ.

    ಬಿಹಾರ ಕಾಂಗ್ರೆಸ್ ಪೋಸ್ಟ್ ಮಾಡಿದ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಕಾಂಗ್ರೆಸ್‌ಗೆ ಸೂಚನೆ ನೀಡಿದೆ.

    ವಿರೋಧ ಪಕ್ಷವು ಪ್ರಧಾನಿಯವರ ದಿವಂಗತ ತಾಯಿಗೆ ಅಗೌರವ ತೋರಿದೆ ಎಂದು ಬಿಜೆಪಿ ಆರೋಪಿಸಿತ್ತು. ವೀಡಿಯೊದಲ್ಲಿ ಎಲ್ಲಿಯೂ ಹೀರಾಬೆನ್ ಮೋದಿಗೆ ಅಗೌರವ ತೋರಿಲ್ಲ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿತ್ತು.

  • ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಫೋನ್‌ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

    ಟ್ರಂಪ್‌ ಶುಭಾಶಯಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ಉತ್ತಮಗೊಳಿಸುವ ಬದ್ಧತೆ ಮತ್ತು ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಮೆರಿಕದ ನಿಲುವಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಧಾನಿ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ನಿಮ್ಮಂತೆಯೇ ನಾನು ಕೂಡ ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದತ್ತ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆಯಾಗಿ ಟ್ರಂಪ್ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿಯವರೊಂದಿಗೆ ಸಂಭಾಷಣೆ ಅದ್ಭುತವಾಗಿತ್ತು. ಉಕ್ರೇನ್-ರಷ್ಯಾ ಯುದ್ಧವನ್ನು ಪರಿಹರಿಸುವಲ್ಲಿ ಅಮೆರಿಕದ ಉಪಕ್ರಮಗಳಿಗೆ ಭಾರತದ ಬೆಂಬಲಕ್ಕಾಗಿ ಮೋದಿ ಅವರನ್ನು ಶ್ಲಾಘಿಸುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ಭಾರತದ ಮೇಲೆ ಅಮೆರಿಕವು ಭಾರೀ ವ್ಯಾಪಾರ ಸುಂಕಗಳನ್ನು ವಿಧಿಸಿರುವ ಹೊತ್ತಿನಲ್ಲೇ ಪ್ರಧಾನಿ ಮೋದಿ ಅವರಿಂದ ಈ ಸಂದೇಶ ಬಂದಿದೆ. ಭಾರತದ ಆಮದುಗಳ ಮೇಲೆ ಶೇ.50 ರಷ್ಟು ಸುಂಕವನ್ನು ವಿಧಿಸಲಾಗಿದೆ. ರಷ್ಯಾದ ತೈಲ ಖರೀದಿ ಹಿನ್ನೆಲೆ ಶೇ.25 ರಷ್ಟು ಸುಂಕವನ್ನು ಭಾರತಕ್ಕೆ ಅಮೆರಿಕ ವಿಧಿಸಿದೆ. ಇದು ವಿಶ್ವದ ಯಾವುದೇ ದೇಶದ ಮೇಲೆ ವಿಧಿಸಲಾದ ಅತ್ಯಧಿಕ ಸುಂಕಗಳಲ್ಲಿ ಒಂದಾಗಿದೆ. ಅಷ್ಟೇ ಅಲ್ಲದೇ, ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಅವರು, ಅಮೆರಿಕದಲ್ಲಿ ಬೆಳೆದ ಜೋಳವನ್ನು ಖರೀದಿಸಲು ನಿರಾಕರಿಸಿದರೆ ಭಾರತವು ಅಮೆರಿಕ ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಕಳೆದುಕೊಳ್ಳಬಹುದು ಎಂದು ಎಚ್ಚರಿಸಿದ್ದಾರೆ.

    ಮುಂಬರುವ ದಿನಗಳಲ್ಲಿ ಮೋದಿಯವರೊಂದಿಗೆ ಮಾತನಾಡಲು ಎದುರು ನೋಡುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ತಿಳಿಸಿದ್ದಾರೆ. ಎರಡೂ ಕಡೆಯವರು ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    – ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಒಟ್ಟಿಗೆ ಇರುವ ಫೋಟೊ ಶೇರ್‌ ಮಾಡಿ ಬಣ್ಣನೆ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ (C.P.Radhakrishnan), ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಒಟ್ಟಿಗೆ ಕುಳಿತಿರುವ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ (B.L.Santhosh) ಹಂಚಿಕೊಂಡಿದ್ದಾರೆ. ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು ಎಂದು ಬಣ್ಣಿಸಿದ್ದಾರೆ.

    ಇವರಿಗೆ ತಮ್ಮ ಹಕ್ಕುಗಳ ಪ್ರಜ್ಞೆಯೂ ಇಲ್ಲ. ಮೂವರೂ ಸ್ವಂತ ಪರಿಶ್ರಮದಿಂದ ಮೇಲೆ ಬಂದವರು. ಹಿಂದುಳಿದ ಸಮುದಾಯದಿಂದ ಬಂದವರು. ಜೀವನದ ಪ್ರತಿಯೊಂದು ಹಂತದಲ್ಲೂ ಮೆಟ್ಟಿಲುಗಳನ್ನು ಏರಿ ಬಂದಿದ್ದಾರೆ. ಅದು ಭಾರತದ ಪ್ರಜಾಪ್ರಭುತ್ವ ಮತ್ತು ನಾಗರಿಕತೆಯ ಶಕ್ತಿ ಎಂದು ಬಿಎಲ್‌ ಸಂತೋಷ್‌ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಚಿಕ್ಕ ವಯಸ್ಸಿನಲ್ಲಿ ಟೀ ಮಾರುತ್ತಿದ್ದ ವ್ಯಕ್ತಿ ಈಗ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿ, ರಾಜಕೀಯ ನಾಯಕನಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದವರು. ತುರ್ತು ಪರಿಸ್ಥಿತಿ ಸೇರಿ ಆಗಿನ ಕೇಂದ್ರ ಸರ್ಕಾರದ ಹಲವಾರು ಕ್ರಮಗಳ ವಿರುದ್ಧದ ಹೋರಾಟಗಳಲ್ಲೂ ಭಾಗಿಯಾಗಿದ್ದರು. ಸತತ ಮೂರು ಅವಧಿಗೆ ಪ್ರಧಾನಿಯಾಗಿ ದಾಖಲೆ ಕೂಡ ಬರೆದಿದ್ದಾರೆ.

    ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಈಗ ರಾಷ್ಟ್ರಪತಿಯಾಗಿದ್ದಾರೆ. ಇವರು ಸಹ ಬಿಜೆಪಿಯ ಹಲವಾರು ಹುದ್ದೆಗಳನ್ನು ಕಾರ್ಯನಿರ್ವಹಿಸಿದ್ದಾರೆ.

    ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್‌ ಅವರು ದೊಡ್ಡ ಕೌಟುಂಬಿಕ ಹಿನ್ನೆಲೆಯಿಂದ ಬಂದವರಲ್ಲ. ಚಿಕ್ಕ ವಯಸ್ಸಿನಲ್ಲೇ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡರು. ನಂತರ ಬಿಜೆಪಿ ಸೇರಿ ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ