Tag: ಪಿಎಂ ಮೋದಿ

  • ನಾಳೆಯೇ ಯುದ್ಧಕ್ಕೆ ಒಪ್ಪಿಗೆ ಪಡೀತಾರಾ ಮೋದಿ? – ನಾಳೆ ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಮೀಟಿಂಗ್

    ನಾಳೆಯೇ ಯುದ್ಧಕ್ಕೆ ಒಪ್ಪಿಗೆ ಪಡೀತಾರಾ ಮೋದಿ? – ನಾಳೆ ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಮೀಟಿಂಗ್

    ನವದೆಹಲಿ: ನಾಳೆ ಮಾಕ್ ಡ್ರಿಲ್ ಸಿದ್ಧತೆ ಒಂದ್ಕಡೆಯಾದರೆ, ಮತ್ತೊಂದು ಕಡೆ ಪ್ರಧಾನಿ ನರೇಂದ್ರ ಮೋದಿ (PM Modi) ಬೆಳಗ್ಗೆ 11 ಗಂಟೆಗೆ ಮಹತ್ವದ ಸಂಪುಟ ಸಭೆ ಕರೆದಿದ್ದಾರೆ.

    ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಸರಣಿ ಸಭೆ ನಡೆಸಿರುವ ಪ್ರಧಾನಿ, ನಾಳಿನ ಸಂಪುಟ ಸಭೆಯಲ್ಲಿ (Cabinet Meeting) ಯುದ್ಧಕ್ಕೆ ಒಪ್ಪಿಗೆ ಪಡೆಯೋ ಸಾಧ್ಯತೆಗಳಿವೆ. ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ನಾಳೆ ಹಾಗೂ ನಾಡಿದ್ದು ವಾಯುಪಡೆ ಹೈ ಅಲರ್ಟ್ ಘೋಷಣೆ ಮಾಡಿದೆ. ಪಾಕ್ ಗಡಿಭಾಗದಲ್ಲಿ ವಾಯುಪಡೆ ತಾಲೀಮು ನಡೆಸಲಿದೆ. ಹೀಗಾಗಿ, ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು, ಅದಕ್ಕೆ ಕಾಶ್ಮೀರ ಭೇಟಿ ರದ್ದು ಮಾಡಿದ್ದರು: ಖರ್ಗೆ ಆರೋಪ

    ಯುದ್ಧದ ಉದ್ವಿಗ್ನತೆ ಇರುವ ಹಿನ್ನೆಲೆ ದೇಶದ ಪ್ರಮುಖ ದೇವಸ್ಥಾನಗಳ ಭದ್ರತೆ ಹೇಗಿದೆ ಎಂದು ಎನ್‌ಎಸ್‌ಜಿ ಕಮಾಂಡೋಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇವತ್ತು ಪುರಿ ಜಗನ್ನಾಥ ದೇವಸ್ಥಾನದ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಎಲ್‌ಒಸಿ ಉದ್ದಕ್ಕೂ ಬಂಕರ್‌ಗಳನ್ನ ಸಿದ್ಧಗೊಳಿಸಲಾಗ್ತಿದೆ. ಉರಿಯಿಂದ ನೌಶೇರಾ ವಲಯವರೆಗೂ ಬಂಕರ್ ಸಿದ್ಧಗೊಳಿಸಲಾಗಿದೆ. ತುರ್ತು ಸಂದರ್ಭದಲ್ಲಿ ನಿವಾಸಿಗಳು ಬಂಕರ್ ಆಶ್ರಯ ಪಡೆಯಲು ಬಂಕರ್ ವ್ಯವಸ್ಥೆ ಮಾಡಲಾಗಿದೆ.

    ಪಂಜಾಬ್‌ನ ಅಮೃತಸರ ಬಳಿ ಭಯೋತ್ಪಾದಕ ಕೃತ್ಯಕ್ಕೆ ಬಳಸುತ್ತಿದ್ದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ರಾಕೆಟ್ ಚಾಲಿತ ಗ್ರೆನೇಡ್, ವೈಯರ್ ಲೆಸ್ ಟೆಲಿ ಕಮ್ಯೂನಿಕೇಷನ್ ಸೆಟ್, ಹ್ಯಾಂಡ್ ಗ್ರೆನೇಡ್ ವಶಕ್ಕೆ ಪಡೆಯಲಾಗಿದೆ. ಇನ್ನು ಕಾಶ್ಮೀರದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪಾಕ್ ನಾಗರಿಕನನ್ನ ಬಂಧಿಸಲಾಗಿದೆ. ಇದನ್ನೂ ಓದಿ: ನಗದು, ಟಾರ್ಚ್, ವೈದ್ಯಕೀಯ ಕಿಟ್ ಕೈಲ್ಲಿಟ್ಟುಕೊಳ್ಳಿ – ನಾಳೆ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಹೇಗಿರಲಿದೆ?

    ಶಂಕಿತ ಉಗ್ರರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಸ್ತಾನದಲ್ಲಿ ಪಾಕ್ ಗೂಢಚಾರನನ್ನು ಬಂಧಿಸಲಾಗಿದೆ. ಯುದ್ಧದ ಕಾರ್ಮೋಡ ತೀವ್ರಗೊಳ್ಳುತ್ತಿದ್ದಂತೆ ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ ಜೊತೆಗೆ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ. ಈ ನಡುವೆ ಭಾರತದ ಬೆನ್ನಿಗೆ ಅಮೆರಿಕ ನಿಂತಿದೆ. ಅಮೆರಿಕ ಸಂಸತ್‌ನ ಸ್ಪೀಕರ್ ಜಾನ್ಸನ್, ಉಗ್ರರ ವಿರುದ್ಧ ಹೋರಾಡಲು ಟ್ರಂಪ್ ಸರ್ಕಾರ ಭಾರತಕ್ಕೆ ಶಕ್ತಿ ಮತ್ತು ಸಂಪನ್ಮೂಲಗಳೊಂದಿಗೆ ಸಹಾಯ ಮಾಡುತ್ತೆ ಎಂದಿದ್ದಾರೆ.

  • ಉಗ್ರರ ದಾಳಿ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು, ಅದಕ್ಕೆ ಕಾಶ್ಮೀರ ಭೇಟಿ ರದ್ದು ಮಾಡಿದ್ದರು: ಖರ್ಗೆ ಆರೋಪ

    ಉಗ್ರರ ದಾಳಿ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು, ಅದಕ್ಕೆ ಕಾಶ್ಮೀರ ಭೇಟಿ ರದ್ದು ಮಾಡಿದ್ದರು: ಖರ್ಗೆ ಆರೋಪ

    ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭಯೋತ್ಪಾದಕ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಮಾಹಿತಿ ಇತ್ತು. ಹೀಗಾಗಿ, ಕಾಶ್ಮೀರಕ್ಕೆ ತಮ್ಮ ಭೇಟಿಯನ್ನು ಮೋದಿ ರದ್ದುಗೊಳಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.

    ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಸಂವಿಧಾನ್ ಬಚಾವೋ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭಾವ್ಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ವರದಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಬಂದಿತ್ತು. ನಂತರ ಅವರು ಕೇಂದ್ರಾಡಳಿತ ಪ್ರದೇಶಕ್ಕೆ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲು ಪ್ರಧಾನಿಗೆ ಗುಪ್ತಚರ ವರದಿಯನ್ನು ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಸಲಕ್ಕೆ ಪಾಕ್‌ಗೆ ಹರಿದ 28,000 ಕ್ಯುಸೆಕ್ ನೀರು – ಹಠಾತ್ ಪ್ರವಾಹ ಭೀತಿ

    ಅವರಿಗೆ ಇದು ತಿಳಿದಿದ್ದರೆ, ಅವರು ಏಕೆ ಏನನ್ನೂ ಮಾಡಲಿಲ್ಲ? ದಾಳಿಗೆ ಮೂರು ದಿನಗಳ ಮೊದಲು ಪ್ರಧಾನಿ ಮೋದಿಗೆ ಗುಪ್ತಚರ ವರದಿಯನ್ನು ಕಳುಹಿಸಲಾಗಿತ್ತು. ಆದ್ದರಿಂದ ಅವರು ಕಾಶ್ಮೀರಕ್ಕೆ ಭೇಟಿ ನೀಡುವ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ನಾನು ಇದನ್ನು ಪತ್ರಿಕೆಯಲ್ಲಿ ಓದಿದ್ದೇನೆ ಎಂದು ಖರ್ಗೆ ಟೀಕಿಸಿದ್ದಾರೆ.

    ಪಹಲ್ಗಾಮ್‌ನಲ್ಲಿ ರಜೆಯನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಬಲಿ ತೆಗೆದುಕೊಂಡ ದಾಳಿಯಲ್ಲಿ ಗುಪ್ತಚರ ವೈಫಲ್ಯವಿತ್ತು ಎಂದು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

  • ಭಾರತ-ಪಾಕ್‌ ಉದ್ವಿಗ್ನತೆ ಮಧ್ಯೆ ವಾಯುಪಡೆ ಮುಖ್ಯಸ್ಥರ ಭೇಟಿಯಾದ ಪಿಎಂ ಮೋದಿ

    ಭಾರತ-ಪಾಕ್‌ ಉದ್ವಿಗ್ನತೆ ಮಧ್ಯೆ ವಾಯುಪಡೆ ಮುಖ್ಯಸ್ಥರ ಭೇಟಿಯಾದ ಪಿಎಂ ಮೋದಿ

    ನವದೆಹಲಿ: ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.

    ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ನಡುವಿನ ಪ್ರತ್ಯೇಕ ಸಭೆಯ ನಂತರ ವಾಯುಪಡೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಳೆದ ವಾರ ಪ್ರಧಾನಿಯವರು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನೂ ಭೇಟಿ ಮಾಡಿದ್ದರು. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

    ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಭೆಯಲ್ಲಿ ಮೋದಿ ತಿಳಿಸಿದ್ದಾರೆ. ಇದರ ಜೊತೆಗೆ ರಕ್ಷಣಾ ನಾಯಕತ್ವಕ್ಕೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.

    ಹಿಂದಿನ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ: ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್‌

  • ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ

    ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶಿಸಿದ್ದಾರೆ.

    ಪ್ರಧಾನ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರನ್ನು ಭೇಟಿ ಈ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್‌ ಸಚಿವ

    ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಮೋದಿ ತಿಳಿಸಿದ್ದಾರೆ.

    ಸಭೆಯ ಸ್ವಲ್ಪ ಸಮಯದ ನಂತರ, ಗೃಹ ಸಚಿವ ಅಮಿತ್ ಶಾ ಮತ್ತು ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನ ಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ: ಉಗ್ರರು ದಾಳಿ ನಡೆಸಿದ ಬೈಸರನ್‌ ಕಣಿವೆಯನ್ನು ಮಿನಿ ಸ್ವಿಟ್ಜರ್ಲೆಂಡ್ ಎನ್ನುವುದ್ಯಾಕೆ?

    2019 ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಹಲ್ಗಾಮ್‌ನಲ್ಲಿ 26 ಜನರನ್ನು ಕೊಂದ ಭಯೋತ್ಪಾದಕರ ವಿರುದ್ಧ ಮಿಲಿಟರಿ ಕ್ರಮಕ್ಕೆ ಪ್ರಧಾನಿಯವರ ಸಂದೇಶವು ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು ವಿವರಿಸಿವೆ.

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ವಾಯುದಾಳಿಗಳನ್ನು ನಡೆಸಿತು. ಈ ಶಿಬಿರಗಳನ್ನು ಪಾಕ್‌ ಸೇನೆಯ ಸಹಾಯದಿಂದ ನಿಷೇಧಿತ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ನಡೆಸುತ್ತಿತ್ತು.

  • ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ನವದೆಹಲಿ: ಭಾರತಕ್ಕೆ ನಾಲ್ಕು ದಿನ ಪ್ರವಾಸ ಕೈಗೊಂಡಿರುವ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್‌ (JD Vance) ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಸೋಮವಾರ ಭೇಟಿಯಾದರು.

    ಅಮೆರಿಕ-ಚೀನಾ ವ್ಯಾಪಾರ ಯುದ್ಧದ ಬಗ್ಗೆ ಜಗತ್ತು ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಉಭಯ ನಾಯಕರು ಭೇಟಿಯಾಗಿ ಸಭೆ ನಡೆಸಿದರು. ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳಿಗೆ ಪ್ರಯೋಜನಕಾರಿಯಾದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವ ಮಾತುಕತೆಗಳು ನಡೆದವು.

    ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತಾದ ಮಾತುಕತೆಗಳಲ್ಲಿ ಆಗಿರುವ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸ್ವಾಗತಿಸಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

    ಟ್ರಂಪ್ ಆಡಳಿತವು ಭಾರತದೊಂದಿಗಿನ ತನ್ನ ಸಂಬಂಧವನ್ನು ಪ್ರಮುಖ ಆದ್ಯತೆಯಾಗಿ ಇರಿಸಿದೆ. ವಿಶ್ವದ ಅತಿದೊಡ್ಡ ಸರಕು ಉತ್ಪಾದಕ ರಾಷ್ಟ್ರವಾದ ಚೀನಾದೊಂದಿಗಿನ ವ್ಯಾಪಾರ ಯುದ್ಧದ ಹೊಡೆತವನ್ನು ಸ್ವಲ್ಪಮಟ್ಟಿಗೆ ತಗ್ಗಿಸಬಹುದಾದ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರಲು ಉತ್ಸುಕವಾಗಿದೆ ಎಂದು ಶ್ವೇತಭವನ ಹೇಳಿದೆ. ಶರತ್ಕಾಲದ ವೇಳೆಗೆ ವ್ಯಾಪಾರ ಒಪ್ಪಂದವನ್ನು ನಿರೀಕ್ಷಿಸಲಾಗಿತ್ತು. ಆದರೆ ಜುಲೈ ಅಂತ್ಯದ ವೇಳೆಗೆ ಪೂರ್ಣಗೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಭಾರತದ ನಾಯಕರು ಹೇಳಿದ್ದಾರೆ.

  • ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?

    ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?

    – ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ

    ನವದೆಹಲಿ: ಈ ವಾರಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ (Modi Cabinet Expansion) ಸಾಧ್ಯತೆ ಇದೆ.

    ಏ.19 ಕ್ಕೆ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿಯಾಗಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

    ಮೋದಿ ಭೇಟಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದರು. ರಾಷ್ಟ್ರಪತಿಗಳನ್ನು ಕೇಂದ್ರ ಸಚಿವರು ಭೇಟಿಯಾಗಿದ್ದಾರೆ.

    ಬಿಹಾರ ಚುನಾವಣೆ ಹೊತ್ತಲ್ಲೇ ಸಂಪುಟದಲ್ಲಿ ಬದಲಾವಣೆ ಸುದ್ದಿ ಕೇಳಿಬಂದಿದೆ. ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ. ಇದನ್ನೂ ಓದಿ: ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

  • 2008ರ ಮುಂಬೈ ದಾಳಿ ಆರೋಪಿ ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಯುಎಸ್‌ ಸುಪ್ರೀಂ ಕೋರ್ಟ್

    2008ರ ಮುಂಬೈ ದಾಳಿ ಆರೋಪಿ ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಯುಎಸ್‌ ಸುಪ್ರೀಂ ಕೋರ್ಟ್

    ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Terror Attack) ಆರೋಪಿ ತಹವ್ವೂರ್‌ ರಾಣಾಗೆ ದೊಡ್ಡ ಹಿನ್ನಡೆಯಾಗಿದೆ. ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

    ಪಾಕಿಸಾನ ಮೂಲದ ಕೆನಡಾ ಪ್ರಜೆಯಾದ ರಾಣಾನನ್ನ ಸದ್ಯ ಅಮೆರಿಕದ ಲಾಸ್‌ ಏಂಜಲೀಸ್‌ನ ಮೆಟ್ರೋಪಾಲಿಟನ್‌ ಡಿಟೆನ್ಶನ್‌ ಸೆಂಟರ್‌ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: Black Monday| ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ – ಕರಗಿತು ಹೂಡಿಕೆದಾರರ 19 ಲಕ್ಷ ಕೋಟಿ 

    PM Modi Mumbai Attack

    2009ರಿಂದಲೂ ರಾಣಾನನ್ನ ಭಾರತಕ್ಕೆ ಕರೆತರಲು ಭಾರತ ಹೋರಾಡುತ್ತಿದೆ. ಇತ್ತೀಚೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡಿದಾಗ ಟ್ರಂಪ್‌ ಮೋದಿ ಎದುರಲ್ಲೇ ಭಾರತಕ್ಕೆ ರಾಣಾನನ್ನ ಹಸ್ತಾಂತರಿಸುವುದಾಗಿ ಘೋಷಣೆ ಮಾಡಿದ್ದರು. ಇದೀಗ ಯುಎಸ್‌ ಸುಪ್ರೀಂ ಕೋರ್ಟ್‌ ನಡೆ ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ. ಇದನ್ನೂ ಓದಿ: ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗುತ್ತಾ?

    ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು. ಕಳೆದ ಫೆಬ್ರವರಿ 27ರಂದು ರಾಣಾ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಕಳೆದ ತಿಂಗಳ ಆರಂಭದಲ್ಲಿ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿ ರಾಬರ್ಟ್ಸ್‌ ಅವರಿಗೆ ಮೇಲ್ಮನವಿ ಸಲ್ಲಿಸಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್‌ ರಾಣಾ ಅರ್ಜಿಯನ್ನು ತಿರಸ್ಕರಿಸಿತು.

    ನೆನಪಿದೆಯಾ ಆ ಕರಾಳ ದಿನ..?
    2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ರಾಣಾ ಪಾತ್ರವಿದೆ ಎಂದು ಭಾರತ ಆರೋಪಿಸಿತ್ತು.

    pm modi donald trump

    ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಅಮೆರಿಕದ ಸುಪ್ರೀಂ ಕೋರ್ಟ್, ತಹವ್ವೂರ್ ರಾಣಾನ ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿ, ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ದಾರಿ ಮಾಡಿಕೊಟ್ಟಿತು. ಇದನ್ನೂ ಓದಿ: ಸಮುದ್ರದಲ್ಲಿ ಪಾಕ್‌ ವ್ಯಕ್ತಿಗೆ ಎದುರಾದ ಸಂಕಷ್ಟ – 3 ಗಂಟೆ ಕಾಲ ಶಸ್ತ್ರಚಿಕಿತ್ಸೆ ನೀಡಿ ಜೀವ ಉಳಿಸಿದ ಭಾರತೀಯ ನೌಕಾಪಡೆ ಸಿಬ್ಬಂದಿ

  • ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಮೋದಿ – ಈ ಸೇತುವೆ ವಿಶೇಷತೆ ಏನು?

    ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಮೋದಿ – ಈ ಸೇತುವೆ ವಿಶೇಷತೆ ಏನು?

    – ಭಾರತದಲ್ಲಿ ಹಿಂದೆಂದೂ ನೋಡದ ಬ್ರಿಡ್ಜ್‌ ನಿರ್ಮಾಣ

    ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ (PM Modi) ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂಗೆ ತೆರಳುವ ಭಕ್ತರಿಗೆ ಹಾಗೂ ಧನುಷ್ಕೋಡಿ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ.

    ತಮಿಳುನಾಡಿನ (Tamil Nadu) ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ (Vertical Lift Sea Bridge) ಪ್ರಧಾನಿ ಮೋದಿ ಭಾನುವಾರ ಉದ್ಘಾಟಿಸಿದರು. ಮಧ್ಯಾಹ್ನ 12:30 ರ ಸಮಯಕ್ಕೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಲೋಕಾರ್ಪಣೆ ಮಾಡಿದರು‌. ಇದೇ ವೇಳೆ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ಈ ಹಳೇ ಪಂಬನ್ ರೈಲು ಸೇತುವೆಯನ್ನ 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದು, ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ.

    ಸುಮಾರು 2.5 ಕಿಲೋ ಮೀಟರ್​ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ ಇದಾಗಿದ್ದು, ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣಿಸಬಹುದಾಗಿದೆ. ಒಟ್ಟು 535 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರ್ಟಿಕಲ್‌ ಲಿಫ್ಟ್‌ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಏನಿದರ ವಿಶೇಷತೆ?
    * ಇದು ಭಾರತದಲ್ಲಿ ಮೊದಲ ಬಾರಿಗೆ ನಿರ್ಮಾಣವಾದ ವರ್ಟಿಕಲ್ ಲಿಫ್ಟ್ ರೈಲ್ವೆ ಸೇತುವೆಯಾಗಿದೆ. ಈ ಸೇತುವೆ ರಾಮೇಶ್ವರಂ (ಪಾಂಬನ್ ದ್ವೀಪ) ಮತ್ತು ತಮಿಳುನಾಡಿನ ಮುಖ್ಯ ಭೂಭಾಗವಾದ ಮಂಡಪಂ ಅನ್ನು ಸಂಪರ್ಕಿಸುತ್ತದೆ.
    * ಈ ಸೇತುವೆಯ ಮಧ್ಯ ಭಾಗವು 17 ಮೀಟರ್ ಎತ್ತರಕ್ಕೆ ಲಂಬವಾಗಿ ಮೇಲೇರಬಲ್ಲದು. ಇದರಿಂದಾಗಿ ದೊಡ್ಡ ಜಹಾಜುಗಳು ಮತ್ತು ಹಡಗುಗಳು ಸೇತುವೆಯ ಕೆಳಗಿನಿಂದ ಸುಲಭವಾಗಿ ದಾಟಬಹುದು.
    * ಹಳೆಯ ಪಾಂಬನ್ ಸೇತುವೆ ತೆರೆಯಲು 45 ನಿಮಿಷಗಳಷ್ಟು ಸಮಯ ತೆಗೆದುಕೊಳ್ಳುತ್ತಿತ್ತು ಮತ್ತು ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿದ್ದವು. ಆದರೆ ಈ ಹೊಸ ಸೇತುವೆಯನ್ನು ತೆರೆಯಲು ಕೇವಲ 5 ನಿಮಿಷಗಳಷ್ಟೇ ಸಮಯ ಬೇಕಾಗುತ್ತದೆ. ಇದು ಸಮಯ ಉಳಿತಾಯ ಮತ್ತು ಸಮರ್ಥ ಕಾರ್ಯನಿರ್ವಹಣೆಯನ್ನು ಖಾತ್ರಿಪಡಿಸುತ್ತದೆ.
    * ಈ ಸೇತುವೆಯನ್ನು ಡಬಲ್ ಟ್ರ್ಯಾಕ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ, ಇದರಿಂದ ಎರಡು ರೈಲುಗಳು ಏಕಕಾಲದಲ್ಲಿ ಸಂಚರಿಸಬಹುದು. ಇದು ಭವಿಷ್ಯದಲ್ಲಿ ರೈಲು ಸಂಚಾರದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
    * ಈ ಸೇತುವೆಯನ್ನು ಹೆಚ್ಚಿನ ವೇಗದ ರೈಲುಗಳಿಗೆ ಸಹ ಸೂಕ್ತವಾಗುವಂತೆ ನಿರ್ಮಿಸಲಾಗಿದೆ. ಇದು ಆಧುನಿಕ ರೈಲ್ವೆ ಸಾರಿಗೆಗೆ ದೀರ್ಘಕಾಲೀನ ಪರಿಹಾರವನ್ನು ಒದಗಿಸುತ್ತದೆ.
    * ಸೇತುವೆಯ ಒಟ್ಟು ಉದ್ದ 2.08 ಕಿಲೋಮೀಟರ್ ಆಗಿದ್ದು, ಇದು ಮನ್ನಾರ್ ಕೊಲ್ಲಿಯಲ್ಲಿ ಸಮುದ್ರದ ಮೇಲೆ ನಿರ್ಮಾಣವಾಗಿದೆ. ಇದು ರಾಮೇಶ್ವರಂ ದ್ವೀಪವನ್ನು ಮುಖ್ಯ ಭೂಭಾಗದೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
    * ಇದರ ವಿನ್ಯಾಸ ಮತ್ತು ನಿರ್ಮಾಣವು ಆಧುನಿಕ ಎಂಜಿನಿಯರಿಂಗ್‌ನ ಉತ್ತಮ ಉದಾಹರಣೆಯಾಗಿದೆ. ಇದನ್ನು ವಿಶ್ವದ ಅತ್ಯುತ್ತಮ ಆರ್ಕಿಟೆಕ್ಚರ್‌ಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದೆ.
    * ಹೊಸ ತಂತ್ರಜ್ಞಾನದ ಬಳಕೆಯಿಂದ ಈ ಸೇತುವೆಯನ್ನು ಸಮುದ್ರದ ತೀವ್ರ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ಮತ್ತು ಸುರಕ್ಷಿತವಾಗಿ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ.

  • ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ನವದೆಹಲಿ: ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನವಮಿಯಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಪಂಬನ್ ಎಂದು ಕರೆಯಲ್ಪಡುವ ಈ ರೈಲು ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.‌

    ಮಧ್ಯಾಹ್ನ 12 ಗಂಟೆಗೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು (Vertical Lift Sea Bridge) ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ಪುರಾಣಗಳಲ್ಲಿ ಬೇರೂರಿರುವ ಈ ಸೇತುವೆಯು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ರಾಮೇಶ್ವರಂ ಬಳಿಯ ಧನುಷ್ಕೋಡಿಯಿಂದ ರಾಮಸೇತು ನಿರ್ಮಾಣ ಕಾರ್ಯ ಪ್ರಾರಂಭವಾಯಿತು ಎಂದು ರಾಮಾಯಣದಲ್ಲಿ ಉಲ್ಲೇಖವಾಗಿದೆ.

    ವರ್ಟಿಕಲ್‌ ಲಿಫ್ಟ್‌ ಸಮುದ್ರ ಸೇತುವೆಯನ್ನು 550 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಉದ್ದ 2.08 ಕಿಲೋಮೀಟರ್. ಇದು 99 ಸ್ಪ್ಯಾನ್‌ಗಳನ್ನು ಮತ್ತು 72.5 ಮೀಟರ್‌ಗಳ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ ಅನ್ನು ಹೊಂದಿದೆ ಮತ್ತು 17 ಮೀಟರ್ ಎತ್ತರಕ್ಕೆ ಏರುತ್ತದೆ. ಇದು ಹಡಗುಗಳ ಸುಗಮ ಚಲನೆಗೆ ಅನುಕೂಲವಾಗುತ್ತದೆ ಮತ್ತು ರೈಲು ಕಾರ್ಯಾಚರಣೆಯನ್ನು ಅಡೆತಡೆಯಿಲ್ಲದೆ ಖಚಿತಪಡಿಸುತ್ತದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಿಯವರು ರಾಮೇಶ್ವರದ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ರಾಮೇಶ್ವರಂನಲ್ಲಿ 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

  • ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    – ಪ್ರಭು ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲಿರಲಿ: ಪ್ರಧಾನಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೇಶದ ಜನತೆಗೆ ಶ್ರೀರಾಮನವಮಿ (Ram Navami) ಶುಭಾಶಯ ತಿಳಿಸಿದ್ದಾರೆ. ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಪ್ರಾರ್ಥಿಸಿದ್ದಾರೆ.

    ಶ್ರೀರಾಮನವಮಿ ಹಿನ್ನೆಲೆಯಲ್ಲಿ ಎಕ್ಸ್‌ ಪೋಸ್ಟ್‌ ಹಾಕಿದ ಮೋದಿ, ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು. ಪ್ರಭು ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಮತ್ತು ನಮ್ಮ ಎಲ್ಲಾ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡಲಿ. ಇಂದು ತಡವಾಗಿ ರಾಮೇಶ್ವರಂನಲ್ಲಿ ಇರಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

    ಪ್ರಧಾನಿಯವರು ಇಂದು ಮಧ್ಯಾಹ್ನ ತಮಿಳುನಾಡಿನ ರಾಮೇಶ್ವರಂಗೆ ಭೇಟಿ ನೀಡಲಿದ್ದು, ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

    ರಾಮೇಶ್ವರಂನಲ್ಲಿ ಮೋದಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು (ಹೊಸ ಪಂಬನ್ ರೈಲು ಸೇತುವೆ) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12:45 ರ ಸುಮಾರಿಗೆ ಅವರು ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ.

    ಮಧ್ಯಾಹ್ನ 1:30 ರ ಸುಮಾರಿಗೆ ರಾಮೇಶ್ವರಂನಲ್ಲಿ ಅವರು ತಮಿಳುನಾಡಿನಲ್ಲಿ 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!