Tag: ಪಿಎಸ್‌ಐ ಅಕ್ರಮ

  • ಆರ್.ಡಿ ಪಾಟೀಲ್ ಕಂಡು ಬಂದರೆ ಮಾಹಿತಿ ನೀಡುವಂತೆ ಪ್ರಕಟಣೆ ಹೊರಡಿಸಿದ CID

    ಆರ್.ಡಿ ಪಾಟೀಲ್ ಕಂಡು ಬಂದರೆ ಮಾಹಿತಿ ನೀಡುವಂತೆ ಪ್ರಕಟಣೆ ಹೊರಡಿಸಿದ CID

    ಬೆಂಗಳೂರು: ಪಿಎಸ್‍ಐ ಅಕ್ರಮದ (PSI Recruitment Scam) ಕಿಂಗ್ ಪಿನ್ ಆರ್.ಡಿ ಪಾಟೀಲ್ (R.D Patil) ಕಂಡು ಬಂದರೆ ಮಾಹಿತಿ ನೀಡುವಂತೆ ಸಿಐಡಿ (CID) ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

    ಆರ್.ಡಿ ಪಾಟೀಲ್ ಪಿಎಸ್‍ಐ ಅಕ್ರಮದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾನೆ. ಆರ್.ಡಿ ಪಾಟೀಲ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಹಾಗೂ ರಾಮೂರ್ತಿ ನಗರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸದ್ಯ ಆರೋಪಿಯಾಗಿದ್ದಾನೆ. ಸಿಐಡಿ ಪೊಲೀಸರು ಬಂಧಿಸಲು ಹೋದಾಗ ಪೊಲೀಸರ ಕಣ್ತಪ್ಪಿಸಿ ಆರ್.ಡಿ ಪಾಟೀಲ್ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಅಫಜಲಪುರ ಕ್ಷೇತ್ರದ ಜನರು ಮನಸ್ಸು ಮಾಡಿದ್ರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಪಿಎಸ್‌ಐ ಹಗರಣದ ಕಿಂಗ್ ಪಿನ್

    ಎರಡು ಪ್ರಕರಣದಲ್ಲೂ ಆರ್.ಡಿ ಪಾಟೀಲ್‍ಗಾಗಿ ದಸ್ತಗಿರಿ ವಾರೆಂಟ್ ನ್ಯಾಯಾಲಯ ಹೊರಡಿಸಿದೆ. ಪೊಲೀಸರು (Police) ಆರೋಪಿ ಆರ್.ಡಿ ಪಾಟೀಲ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಹೀಗಾಗಿ ಆರ್.ಡಿ ಪಾಟೀಲ್ ಕಂಡ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕ ಪ್ರಕಟಣೆಯನ್ನು ಸಿಐಡಿ ಹೊರಡಿಸಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಹಣ ಹಂಚುತ್ತಿದ್ದ ಫೋಟೋ ಬಿಡುಗಡೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಎಸ್‍ಐ ಅಕ್ರಮ ಪ್ರಕರಣ – ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಆರೋಪಿಗಳಿಗೆ ಜಾಮೀನು

    ಪಿಎಸ್‍ಐ ಅಕ್ರಮ ಪ್ರಕರಣ – ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಆರೋಪಿಗಳಿಗೆ ಜಾಮೀನು

    ಕಲಬುರಗಿ: ಪಿಎಸ್‍ಐ ಪರೀಕ್ಷಾ ಅಕ್ರಮದಲ್ಲಿ (PSI Recruitment Scam) ಭಾಗಿಯಾಗಿ ಜೈಲು ಪಾಲಾದ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ (Divya Hagaragi) ಸೇರಿ 26 ಜನ ಆರೋಪಿಗಳಿಗೆ (Accused) ಜಾಮೀನು ಮಂಜೂರಾಗಿದೆ. ಇಂದು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು (Bail) ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

    ಪಿಎಸ್‍ಐ ಅಕ್ರಮ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್‍ಪಿ ಮಲ್ಲಿಕಾರ್ಜುನ್ ಸಾಲಿ ಸೇರಿ 26 ಜನರಿಗೆ ಜಾಮೀನು ಮಂಜೂರಾಗಿದೆ. ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ. ಬಿ. ಪಾಟೀಲ್ 26 ಮಂದಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ -ADGP ಅಮೃತ್‌ ಪೌಲ್ ಅರೆಸ್ಟ್‌

    ಏನಿದು ಪ್ರಕರಣ?
    2021ರ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಪಿಎಸ್‍ಐ ಪರೀಕ್ಷೆ ನಡೆದಿತ್ತು. ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ತಂಡ ಹಣ ಬಲ ಹೊಂದಿರುವ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿತ್ತು. ಲಕ್ಷಾಂತರ ರೂ. ನೀಡಿದವರ ಪರವಾಗಿ ಪರೀಕ್ಷೆಯಲ್ಲಿ ಅಕ್ರಮ ಮಾಡಲು ಸಹಕಾರ ನೀಡಿತ್ತು. ಪರೀಕ್ಷೆ ಮುಗಿದ ಬಳಿಕ ಕ್ಯಾಮೆರಾವನ್ನು ಬಂದ್ ಮಾಡಿ ಬಳಿಕ ಅಭ್ಯರ್ಥಿಗಳ ಒಎಂಆರ್ ಶೀಟ್‍ಗೆ ಸರಿ ಉತ್ತರವನ್ನು ಭರ್ತಿ ಮಾಡಲಾಗಿತ್ತು. ಆ ಬಳಿಕ ಈ ಪ್ರಕರಣ ಬೆಳಕಿಗೆ ಬಂದು ಎಡಿಜಿಪಿ ಅಮೃತ್ ಪೌಲ್, ದಿವ್ಯಾ ಹಾಗರಗಿ ಸೇರಿದಂತೆ ಹಲವು ಮಂದಿ ಬಂಧನಕ್ಕೊಳಗಾಗಿದ್ದರು. ಇದನ್ನೂ ಓದಿ: ಬಾಲಕನ ಕಿಡ್ನಾಪ್ – ಸಿಂಗಂ ಸ್ಟೈಲ್‌ನಲ್ಲಿ ಬಾಲಕನನ್ನು ರಕ್ಷಿಸಿದ ಸಿಪಿಐ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಚಿವರಾಗಿರುವ ಪುಣ್ಯಾತ್ಮರು ಸರಿಯಾಗಿ ಕೆಲಸ ಮಾಡಲಿ: ಯತ್ನಾಳ್ ಟಾಂಗ್

    ಸಚಿವರಾಗಿರುವ ಪುಣ್ಯಾತ್ಮರು ಸರಿಯಾಗಿ ಕೆಲಸ ಮಾಡಲಿ: ಯತ್ನಾಳ್ ಟಾಂಗ್

    ವಿಜಯಪುರ: ಸಿಎಂ ಬೊಮ್ಮಾಯಿ ಇರುವವರೆಗೂ ಮಂತ್ರಿ ಮಂಡಳ ರಚನೆ ಬೇಡ. ಇದೀಗ ಸಚಿವ ಸ್ಥಾನದಲ್ಲಿರುವ ಪುಣ್ಯಾತ್ಮರು ಸರಿಯಾಗಿ ಕೆಲಸ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‍ಐ ಅಕ್ರಮದಲ್ಲಿ ತುಂಬಾ ಜನರಿಗೆ ಪಾಲು ಇದೆ. ಮಾಜಿ ಮುಖ್ಯಮಂತ್ರಿ ಮಗ ಸೇರಿದಂತೆ ಇನ್ನೂ ಹಲವು ದೊಡ್ಡ ದೊಡ್ಡವರು ಬಲೆಗೆ ಬೀಳುತ್ತಾರೆ. ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಸ್ಪಷ್ಟಪಡಿಸಬೇಕು. ಇದು ಒಂದು ದೊಡ್ಡ ಹಗರಣ. ಇದನ್ನು ಮುಚ್ಚಿ ಹಾಕುವ ಯತ್ನ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು ಸ್ಟ್ರಾಂಗ್ ಇದ್ದಾರೆ. ಹಾಗಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಬಾರದು. ಪಿಎಸ್‍ಐ ಅಕ್ರಮ ದಲ್ಲಿ ದೊಡ್ಡ ದೊಡ್ಡವರು ಇದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ನೀರಿಗಾಗಿ ಶಾಲಾ ಮಕ್ಕಳಿಂದ ಗ್ರಾಪಂ ಕಚೇರಿಗೆ ತಟ್ಟೆ, ಲೋಟ ಹಿಡಿದು ಮುತ್ತಿಗೆ

    ಅಗ್ನಿಪಥ್ ಯೋಜನೆಯ ಕುರಿತಾಗಿ ಮಾತನಾಡಿ, ಅಗ್ನಿಪಥ್ ಯೋಜನೆ ಒಳ್ಳೆಯದು. ದೇಶ ಉಳಿಯಬೇಕಾದರೆ ಅಗ್ನಿಪಥ್ ಯೋಜನೆ ಬೇಕು. ದೇಶ ದ್ರೋಹಿಗಳಿಗೆ ಬುದ್ಧಿ ಕಲಿಸಬೇಕಾದ ಅನಿವಾರ್ಯತೆ ಇದೆ. ದೇಶದ್ರೋಹಿ ಕೆಲಸ, ದೇಶದ ಅನ್ನ ತಿಂದು ಮೋಸ ಮಾಡುವವರನ್ನು ಹದ್ದುಬಸ್ತಿಗೆ ತರಬೇಕು ಎಂದರು. ಇದನ್ನೂ ಓದಿ: ಕೆಆರ್‌ಎಸ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳಗಡೆ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಸರ್ಕಾರ ಇದ್ದರೆ, ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು: ಸಿಎಂ ಬೊಮ್ಮಾಯಿ

    ಕಾಂಗ್ರೆಸ್ ಸರ್ಕಾರ ಇದ್ದರೆ, ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು: ಸಿಎಂ ಬೊಮ್ಮಾಯಿ

    ಬೆಂಗಳೂರು: ಪಿಎಸ್‌ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು. ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಇದರಿಂದಲೇ ಹಲವರ ಬಂಧನ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರಗ ಜ್ಞಾನೇಂದ್ರ ಅವರ ಪರ ಬ್ಯಾಟಿಂಗ್ ಮಾಡಿದರು.

    ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂಬ ಡಿ.ಕೆ ಶಿವಕುಮಾರ್ ಆಗ್ರಹಕ್ಕೆ ಟಾಂಗ್ ನೀಡಿದ ಬೊಮ್ಮಾಯಿ, ಅವರ ಕಾಲದಲ್ಲೂ ಪಿಎಸ್‌ಐ ಹಗರಣ ಆಗಿತ್ತು. ಪಿಎಸ್‌ಐ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಹಿರಿಯ ಅಧಿಕಾರಿಯೇ ಆರೋಪಿಯಾಗಿದ್ದರು. ಆದರೆ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: 68 ಸಾವಿರ ಒತ್ತುವರಿ ತೆರವು, 844 ಕೋಟಿ ಮೌಲ್ಯ ಆಸ್ತಿ ಜಪ್ತಿ, 1.2 ಲಕ್ಷ ಲೌಡ್‌ ಸ್ಪೀಕರ್‌ ತೆರವು – 100 ದಿನದ ಸಾಧನೆ ಎಂದ ಯೋಗಿ

    ನಾವು ನಮ್ಮ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಅಧಿಕಾರಿಗಳು ಫ್ರೀ ಹ್ಯಾಂಡ್ ಆಗಿದ್ದಾರೆ. ನಮ್ಮದು ಝೀರೋ ಟಾಲರೆನ್ಸ್. ಇದೇ ಪ್ರಕರಣ ಕಾಂಗ್ರೆಸ್ ಇದ್ದಾಗ ನಡೆದಿದ್ರೆ, ಅವರು ಸಿಸ್ಟಮ್ಯಾಟಿಕ್ ಆಗಿ ಪ್ರಕರಣ ಮುಚ್ಚಿ ಹಾಕುತ್ತಿದ್ದರು ಎಂದರು.

    ಗೃಹ ಸಚಿವರ ರಾಜೀನಾಮೆ ಕೇಳೋಕೆ ಕಾಂಗ್ರೆಸ್‌ಗೆ ಅಧಿಕಾರ ಇಲ್ಲ. ಪ್ರಕರಣದ ಬಗ್ಗೆ ಅನುಮಾನ ಬಂದ ಕೂಡಲೇ ಗೃಹ ಸಚಿವರು ಎಫ್‌ಎಸ್‌ಎಲ್ ವರದಿ ತರಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿದರು. ಬಳಿಕ ಸಿಐಡಿಗೆ ಕೊಡಿ ಎಂದು ನಾನು ಆದೇಶಿಸಿದ್ದೆ. ನಮ್ಮ ಗೃಹ ಸಚಿವರು ದಕ್ಷತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಬಂಧನವಾಗಿರುವ 50 ಆರೋಪಿಗಳಲ್ಲಿ 20 ಜನ ಪೋಲಿಸ್ ಅಧಿಕಾರಿಗಳೇ ಇದ್ದಾರೆ. ಜ್ಞಾನೇಂದ್ರ ಅವರ ರಾಜೀನಾಮೆ ಬಗ್ಗೆ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಿನ್ನ ಹೆಂಡತಿಯನ್ನು ಕಂಟ್ರೋಲ್ ಮಾಡೋಕೆ ಆಗೋಲ್ಲ ಅಂದ್ರೆ ಓಡಿ ಹೋಗ್ತಾಳೆ – ಠಾಕ್ರೆಗೆ ಈಶ್ವರಪ್ಪ ಟಾಂಗ್

    Live Tv
    [brid partner=56869869 player=32851 video=960834 autoplay=true]

  • ಪಿಎಸ್‍ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಪಿಎಸ್‍ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್.ಡಿ. ಪಾಟೀಲ್, ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಲು ಮತ್ತೆ ನಿರಾಕರಿಸಿದೆ. ಇದರೊಂದಿಗೆ ನಾಲ್ವರಿಗೂ ಜೈಲೇ ಗತಿಯಾಗಿದೆ.

    ಕಲಬುರಗಿ ಜಿಲ್ಲಾ 3ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ನ್ಯಾಯಾಲಯ ತೀರಸ್ಕರಿಸಿದೆ. ಬ್ಲೂಟೂತ್ ಡಿವೈಸ್ ಮೂಲಕ ಅಕ್ರಮದ ಮೂಲಕ ಅಭ್ಯರ್ಥಿಗಳು ತೇರ್ಗಡೆ ಆಗಲು ಸಹಕರಿಸುತ್ತಿದ್ದ ಆರೋಪಿ ಆರ್.ಡಿ ಪಾಟೀಲ್, ಎನ್.ವಿ. ಸುನೀಲ್, ತಮ್ಮ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಅಕ್ರಮ ನಡೆಸಲು ಸಹಕರಿಸಿದ ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ ಮತ್ತು ಇದೆ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ಜಾಮೀನು ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಧೀಶ ಬಸವರಾಜ ನೇಸರಗಿ ಅವರ ನೇತೃತ್ವದ ಪೀಠ ತೀರಸ್ಕರಿಸಿದೆ. ಈ ಹಿಂದೆಯೂ ಆರೋಪಿಗಳು ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಆರೋಪಿಗಳಿಗೆ ಜಾಮೀನು ನೀಡದಂತೆ ಸಿಐಡಿ ತಕರಾರು ಅರ್ಜಿ ಈ ಹಿಂದೆ ಸಲ್ಲಿಸಿತ್ತು. ಇದನ್ನೂ ಓದಿ: ಬಾಂಗ್ಲಾ ಯುವತಿಯ ಮೇಲೆ ಬೆಂಗ್ಳೂರಿನಲ್ಲಿ ಗ್ಯಾಂಗ್‌ ರೇಪ್‌ – 7 ಮಂದಿಗೆ ಜೀವಾವಧಿ ಶಿಕ್ಷೆ

     

  • ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

    ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

    VIDHAN SHOUDHA

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್‌ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

    ಜಾಮರ್ ಜೊತೆಗೆ ವಿಚಕ್ಷಣಾ ದಳವನ್ನೂ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಾಲು ಸಾಲು ಅಕ್ರಮಗಳಿಂದ ಬಿಜೆಪಿ ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದು, ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಕೂಡ ಕೆಂಡಕಾರಿತ್ತು. ಪರೀಕ್ಷಾ ವ್ಯವಸ್ಥೆ ಸುಧಾರಿಸಲು ಮುಂದಾಗುವಂತೆ ಆರ್‌ಎಸ್‌ಎಸ್ ಕೂಡ ತಾಕೀತು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ

  • ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ಶಾಂತಕುಮಾರ್‌ ಅವರನ್ನು ಬಂಧಿಸಲಾಗಿದೆ.

    ನೇಮಕಾತಿ ವಿಭಾಗದಲ್ಲಿ ಡಿವೈಎಸ್‌ಪಿಯಾಗಿದ್ದ ಶಾಂತ್‌ಕುಮಾರ್‌ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ನೇಮಕಾತಿ ವಿಭಾಗದಲ್ಲಿ ನಾಲ್ವರು ಅಧಿಕಾರಿಗಳನ್ನು ಸಿಐಡಿ ಬಂಧಿಸಿತ್ತು. ಇದನ್ನೂ ಓದಿ: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

    ಒಒಡಿ ಮೇಲೆ ನೇಮಕಾತಿ ವಿಭಾಗದಲ್ಲಿ ಶಾಂತಕುಮಾರ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಪಿಐಎಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿಕೊಂಡಿದ್ದ ಸಿಐಡಿ, ಶಾಂತಕುಮಾರ್‌ರನ್ನು ಬಂಧಿಸಿದೆ.

    ಶಾಂತಕುಮಾರ್ 1996 ರ ಬ್ಯಾಚ್‌ನ CAR ಕಾನ್ಸ್‌ಟೇಬಲ್ ಆಗಿದ್ದರು. ಆಗಲೇ ತಾಂತ್ರಿಕವಾಗಿ ತುಂಬಾ ಚುರುಕಾಗಿದ್ದರು. ಹೀಗಿದ್ದ ಶಾಂತಕುಮಾರ್ 2006 ರಲ್ಲಿ ಆರ್‌ಎಸ್‌ಐ ಎಕ್ಸಾಂ ಬರೆದು ನೇಮಕಗೊಂಡಿದ್ದರು. ಗುಲ್ಬರ್ಗದಲ್ಲಿ ಒಂದು ವರ್ಷ ಆರ್‌ಎಸ್‌ಐ ತರಬೇತಿ ಮುಗಿಸಿ ಬಳಿಕ ಪ್ರೊಬೆಷನರಿ ಅವಧಿಯಲ್ಲಿ ತುಮಕೂರಿನಲ್ಲಿ ಇದ್ದರು. ಇದನ್ನೂ ಓದಿ: ಹಣ ಮಾಡಲು ಸರ್ಕಾರ ನಾಲ್ಕನೇ ಅಲೆ ಬರುತ್ತದೆ ಎನ್ನುತ್ತಿದೆ: ನಲಪಾಡ್

    KARNATAKA PSI EXAM

    ಅಷ್ಟರಲ್ಲಾಗಲೇ ಪಿಎಸ್‌ಐ ನೇಮಕಾತಿ ವಿಭಾಗಕ್ಕೆ ಹಿರಿಯ ಅಧಿಕಾರಿಗಳು ಈ ಶಾಂತಕುಮಾರ್‌ರನ್ನು ಸೇರಿಸಿಕೊಳ್ಳುತ್ತಾರೆ. 2007-08 ರಿಂದ ನೇಮಕಾತಿ ವಿಭಾಗದಲ್ಲೇ ಶಾಂತಕುಮಾರ್‌ ಠಿಕಾಣಿ ಹೊಡೆದಿದ್ದರು. ನೇಮಕಾತಿಯಲ್ಲಿ ಏನೇನಾಗುತ್ತೆ ಅನ್ನೋದನ್ನು ತಿಳಿದುಕೊಂಡಿದ್ದರು. ಕಳೆದ 2 ವರ್ಷದ ಹಿಂದೆ ಇನ್ಸ್‌ಪೆಕ್ಟರ್‌ನಿಂದ ಡಿವೈಎಸ್ಪಿ ಆಗಿ ಪ್ರಮೋಷನ್ ಪಡೆದಿದ್ದರು. ಇಡೀ ನೇಮಕಾತಿ ವಿಭಾಗ ಶಾಂತಕುಮಾರ್‌ ಹಿಡಿತದಲ್ಲಿತ್ತು.

    ಒಎಂಆರ್ ತಿದ್ದಲು ಶಾಂತಕುಮಾರ್‌ ನೆರವಾಗಿದ್ದರು. ಶಾಂತಕುಮಾರ್ ಅಕ್ರಮಕ್ಕೆ ಕೈಜೋಡಿಸಿ ಒಎಂಆರ್ ತಿದ್ದಿಸಿದ್ದಾರೆ. ಈ ಬಗ್ಗೆ ಪುರಾವೆ ಸಂಗ್ರಹಿಸಿದ್ದ ಸಿಐಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

  • PSI Scam – ತಪ್ಪಿತಸ್ಥರು ಮುಟ್ಟಿನೋಡ್ಕೋಬೇಕು ಹಾಗೆ ಮಾಡ್ತಿವಿ: ಆರಗ ಜ್ಞಾನೇಂದ್ರ

    PSI Scam – ತಪ್ಪಿತಸ್ಥರು ಮುಟ್ಟಿನೋಡ್ಕೋಬೇಕು ಹಾಗೆ ಮಾಡ್ತಿವಿ: ಆರಗ ಜ್ಞಾನೇಂದ್ರ

    ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

    ಕಾಂಗ್ರೆಸ್‍ನವರು ಆರೋಪ ಮಾಡುತ್ತಿದ್ದಾರೆ. ದಾಖಲಾತಿ ಕೇಳಿದರೆ ಓಡಿಹೋಗುತ್ತಾರೆ. ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ, ತನಿಖೆಯ ದಿಕ್ಕೂ ತಪ್ಪಿಸುವುದೊಂದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 70 ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆಯನ್ನು ಅಪಹರಿಸಿ ಅತ್ಯಾಚಾರ

    priyank kharge

    ಕಲಬುರಗಿಯಲ್ಲಿ ಮಾತನಾಡಿದ ಅವರು, ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ಅಕ್ರಮ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ, ಸಿದ್ದರಾಮಯ್ಯ 300 ಕೋಟಿ ಅಲ್ಲ 3,000 ಕೋಟಿ ಆರೋಪ ಮಾಡಲಿ, ಮಾತನಾಡುವುದಕ್ಕೆ ಅವರಿಗೆ ವಾಕ್ ಸ್ವಾತಂತ್ರವಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೇ.19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ

    Siddaramaiah

    ನಿರಾಧಾರವಾಗಿ ಆರೋಪ ಮಾಡುವುದು, ದಾಖಲಾತಿ ಕೇಳಿದರೆ ಓಡಿಹೋಗುವುದು ಕಾಂಗ್ರೆಸ್ ಕೆಲಸವಾಗಿದೆ. ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್‍ನವರು. ತನಿಖೆ ಸರಿಯಾಗಿ ನಡೆದರೆ ತಮ್ಮ ಬುಡಕ್ಕೆ ಬರುತ್ತದೆ ಎನ್ನುವುದು ಗೊತ್ತಾಗಿ ತನಿಖೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸದ್ಯ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದಿದ್ದಾರೆ.

  • ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ: ಕುಮಾರಸ್ವಾಮಿ

    ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ: ಕುಮಾರಸ್ವಾಮಿ

    ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ನರ್ಸ್ ಸರ್ಟಿಫಿಕೇಟ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ ರಾಜಕೀಯಕ್ಕೆ ಬರುವುದಕ್ಕೂ ಮೊದಲು ನರ್ಸ್ ಸರ್ಟಿಫಿಕೇಟ್ ದಂಧೆ ಮಾಡುತ್ತಿದ್ದರು ಎಂದು ನೇರ ಆರೋಪ ಮಾಡಿದರು.

    ಪಿಎಸ್‌ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನು ಅಶ್ವಥ್ ನಾರಾಯಣ ಪರ ಮಾತನಾಡಿಲ್ಲ. ಕಾಂಗ್ರೆಸ್ ದಾಖಲೆ ಇಟ್ಟು ಮಾತನಾಡಬೇಕು ಎಂದು ಹೇಳಿದ್ದೇನೆ ಅಷ್ಟೇ. ದಾಖಲೆ ಇದ್ದರೆ ಕಾಂಗ್ರೆಸ್ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.

    ಅಶ್ವಥ್ ನಾರಾಯಣ ಪರೀಕ್ಷೆಗಳನ್ನು ಮಾಡಿಸುವುದರಲ್ಲಿ ದೊಡ್ಡ ಅನುಭವ ಇರುವ ವ್ಯಕ್ತಿ. ಅದನ್ನು ಕಾಂಗ್ರೆಸ್‌ನವರು ಮಾತನಾಡಲಿ. ನರ್ಸ್ಗಳಿಗೆ ಸರ್ಟಿಫಿಕೇಟ್ ನೀಡುವುದಕ್ಕೆ ಒಂದು ಟೀಂ ಇತ್ತು. ಇದಕ್ಕಾಗಿಯೇ ಅಶ್ವಥ್ ನಾರಾಯಣ ಅವರಿಗೆ ಒಂದು ಹೆಸರು ಇತ್ತು ಎಂದು ಆರೋಪಿಸಿದರು. ಇದನ್ನೂ ಓದಿ: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ಧಿಗೆ ಸಂಪೂರ್ಣ ಸಹಕಾರ: ಬೊಮ್ಮಾಯಿ

    ಅಶ್ವಥ್ ನಾರಾಯಣ ಅವರು ನಾನು ವಿಶ್ವ ಒಕ್ಕಲಿಗ ಎಂದು ಹೇಳುತ್ತಾರೆ. ಯಾವ ವಿಶ್ವ ಒಕ್ಕಲಿಗ ಎಂಬುದೇ ಗೊತ್ತಿಲ್ಲ. ರಾಜಕಾರಣಕ್ಕೆ ಬರುವುದಕ್ಕೂ ಮೊದಲು ಎಂತಹವರಿಗೆ ನರ್ಸ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಲ್ಲಾ ತಿಳಿದಿದೆ ಎಂದು ಬಾಂಬ್ ಹಾಕಿದರು. ಇದನ್ನೂ ಓದಿ: ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಎಕ್ಸಾಂ ಬರೆಯದವರಿಗೆ, ಎಕ್ಸಾಂಗೆ ಬಾರದೇ ಇರುವವರಿಗೂ ಸರ್ಟಿಫಿಕೇಟ್ ಕೊಟ್ಟಿರುವ ಇತಿಹಾಸ ಇದೆ. ಇಂತಹ ಸರ್ಕಾರ ಇದು. ಇಂತಹ ಮಂತ್ರಿಗಳು ಈ ಸರ್ಕಾರದಲ್ಲಿ ಇದ್ದಾರೆ. ಪಿಎಸ್‌ಐ ಅಕ್ರಮದಲ್ಲಿ ರಾಜ್ಯ ಸರ್ಕಾರ ಮೌನವಾಗಿದೆ. ಸರ್ಕಾರದ ಈ ವರ್ತನೆ ನೋಡಿದರೆ, ಆರೋಪವನ್ನು ಸರ್ಕಾರ ಒಪ್ಪಿಕೊಂಡಂತಿದೆ. ಮೌನಂ ಸಮ್ಮತಿ ಲಕ್ಷಣಂ ರೀತಿ ಸರ್ಕಾರ ವರ್ತಿಸುತ್ತಿದೆ ಎಂದು ಟೀಕಿಸಿದರು.

  • ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಸರ್ಕಾರಕ್ಕೆ ತಾಕತ್ತಿದ್ದರೆ ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ನನ್ನನ್ನು ಬಂಧಿಸಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನಗೆ ಸಿಐಡಿಯಿಂದ ಮೂರನೆ ನೋಟಿಸ್ ಬಂದಿದೆ. ಇದು ಹಾಸ್ಯಾಸ್ಪದವಾಗಿದೆ. ಮೂರಲ್ಲ ನೂರು ನೋಟಿಸ್ ಕೊಟ್ಟರೂ ನಾನು ಹೆದರಲ್ಲ. ಸರ್ಕಾರಕ್ಕೆ ನನ್ನ ಬಗ್ಗೆ ಇರುವ ಆಸಕ್ತಿಯನ್ನು ತನಿಖೆ ಬಗ್ಗೆ ತೋರಿಸಿದರೆ ಇನ್ನಷ್ಟು ಸತ್ಯ ಹೊರ ಬರಲಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಲಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗೌರವ್‌ ಗುಪ್ತ ಎತ್ತಂಗಡಿ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ವರ್ಗ

    ನಿಯಮ 91 ರ ಅಡಿಯಲ್ಲಿ ನನಗೆ ನೋಟಿಸ್ ಕೊಟ್ಟಿದ್ದರು. ಅದಕ್ಕೆ ಸೂಕ್ತವಾದ ದಾಖಲೆಯನ್ನು ನಾನು ಕೊಟ್ಟಿದ್ದೇನೆ. ಬಿಜೆಪಿ ನಾಯಕರು ಮೊದಲು ಸೆಕ್ಷನ್ 91 ಅಂದರೆ ಏನು ಅಂತ ತಿಳಿದುಕೊಳ್ಳುವುದು ಒಳ್ಳೆಯದು. ಈಗ ಏನು ಮಾಡಬೇಕು ಅನ್ನೋದನ್ನು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ‌. ಸರ್ಕಾರದ ಈ ನೋಟಿಸ್‌ಗೆಲ್ಲ ಹೆದರಲ್ಲ. ಅವರ ಪಕ್ಷದ ಸಚಿವರು ಹಾಗೂ ಪರಿಷತ್ ಸದಸ್ಯರು ಮೊದಲೇ ಪತ್ರ ಬರೆದಿದ್ದರು. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಬಳಿಕ ಕೆಪಿಸಿಸಿ‌ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಶಾಸಕ ಪ್ರಿಯಾಂಕ್ ಖರ್ಗೆ‌, ಸಿಐಡಿ ಮೂರನೆ ನೋಟಿಸ್ ನೀಡಿದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿಐಡಿ ನೋಟಿಸ್‌ಗೆ ಖುದ್ದು ಹಾಜರಾಗಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಈಗ ಒಡೆದ ಮನೆ ಒಂದಷ್ಟು ಬಣ ವಲಸೆರಾಮಯ್ಯರಿಗೆ ಜೈಕಾರ ಹಾಕುತ್ತಿದೆ: ಬಿಜೆಪಿ ವ್ಯಂಗ್ಯ

    ಆನಂತರ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರ ಜೊತೆ ನೋಟಿಸ್ ಬಗ್ಗೆ ಮಾತನಾಡಿದ್ದೇನೆ. ಸಿಎಲ್‌ಪಿ ನಾಯಕರ ಜೊತೆಯೂ ಮಾತನಾಡುತ್ತೇನೆ. ಕಾನೂನು ಪ್ರಕಾರ ಹೇಗೆ ನಡೆದುಕೊಳ್ಳಬೇಕೋ ಹಾಗೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.