Tag: ಪಿಡಿಒ ಪರೀಕ್ಷೆ

  • ನಿಯಮ ಗಮನಿಸದೆ ಪಿಡಿಒ ಪರೀಕ್ಷೆಗೆ ಹಾಜರು – ಅಭ್ಯರ್ಥಿಗಳ ಶರ್ಟ್‍ಗೆ ಅಧಿಕಾರಿಗಳಿಂದ ಕತ್ತರಿ!

    ನಿಯಮ ಗಮನಿಸದೆ ಪಿಡಿಒ ಪರೀಕ್ಷೆಗೆ ಹಾಜರು – ಅಭ್ಯರ್ಥಿಗಳ ಶರ್ಟ್‍ಗೆ ಅಧಿಕಾರಿಗಳಿಂದ ಕತ್ತರಿ!

    ಹಾಸನ: ಪಿಡಿಒ (PDO) ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ತೊಟ್ಟು ಹಾಜರಾದ ಅಭ್ಯರ್ಥಿಗಳ ಅಂಗಿಯ ತೋಳುಗಳನ್ನು ಹಾಸನದ (Hassan) ಪರೀಕ್ಷಾ ಕೇಂದ್ರದ ಸಿಬ್ಬಂದಿ ಅರ್ಧ ತೋಳಿನವರೆಗೆ ಕತ್ತರಿಸಿದ್ದಾರೆ.

    ನಗರದ ಎಲ್‍ವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ನೂರಾರು ಯುವಕ-ಯುವತಿಯರು ಆಗಮಿಸಿದ್ದರು. ಕೆಲ ಯುವತಿಯರು ತುಂಬುತೋಳು ಬಟ್ಟೆ ಧರಿಸಿ ಬಂದಿದ್ದರು. ಇದರಿಂದ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳನ್ನು ಬಿಡಲು ಅಧಿಕಾರಿಗಳು ನಿರಾಕರಿಸಿದರು. ಪರೀಕ್ಷೆಗೆ ಸಮಯವಾಗುತ್ತಿದೆ ಒಳಗೆ ಬಿಡಿ ಎಂದು ಮನವಿ ಮಾಡಿದರು ಅವಕಾಶ ನೀಡಲಿಲ್ಲ.

    ಕೊನೆಗೆ ಅರ್ಧ ತೋಳಿನವರೆಗೆ ಬಟ್ಟೆ ಕತ್ತರಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಈ ವೇಳೆ ಅಧಿಕಾರಿಗಳು ಹಾಗೂ ಪರೀಕ್ಷಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಈ ವೇಳೆ, ವಸ್ತ್ರಸಂಹಿತೆ ನಿಯಮವಿದೆ, ಹಾಲ್ ಟಿಕೆಟ್‍ನಲ್ಲಿ ನಿಯಮಗಳನ್ನು ಹಾಕಲಾಗಿದೆ. ಆದರೆ ನೀವು ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿ ಪರೀಕ್ಷೆ ಬರೆಯಲು ಬಂದಿದ್ದೀರಾ? ನಮ್ಮ ಕರ್ತವ್ಯ ನಾವು ಮಾಡಲೇಬೇಕು ಎಂದು ಅಧಿಕಾರಿ ಉತ್ತರ ನೀಡಿದ್ದಾರೆ.

    ಕಡೆಗೆ ಕರ್ತವ್ಯನಿರತ ಸಿಬ್ಬಂದಿ ಕತ್ತರಿಯಿಂದ ಅರ್ಧತೋಳಿನವರೆಗೆ ಬಟ್ಟೆ ಕತ್ತರಿಸಿ ನಂತರ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.

  • ಗಮನಿಸಿ, ಭಾನುವಾರ ಪಿಡಿಒ ಪರೀಕ್ಷೆ – ಬೆಳಗ್ಗೆ 5:30 ರಿಂದ ಮೆಟ್ರೋ ಸಂಚಾರ ಆರಂಭ

    ಗಮನಿಸಿ, ಭಾನುವಾರ ಪಿಡಿಒ ಪರೀಕ್ಷೆ – ಬೆಳಗ್ಗೆ 5:30 ರಿಂದ ಮೆಟ್ರೋ ಸಂಚಾರ ಆರಂಭ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಂಚಾಯತ್ ಅಭಿವೃದ್ಧಿ ಆಧಿಕಾರಿ (PDO) ಪರೀಕ್ಷೆ ಡಿ.8 ಭಾನುವಾರ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5:30 ರಿಂದಲೇ ಮೆಟ್ರೋ ಸಂಚಾರ (Metro Service) ಆರಂಭವಾಗಲಿದೆ.

    ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯ ಬದಲಾಗಿ ಬೆಳಗ್ಗೆ 5:30ಕ್ಕೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣದಿಂದ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ (BMRCL) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಇದರ ಜೊತೆ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ. ಈ ಅವಧಿಯಲ್ಲಿ ಅಂದರೆ ಬೆಳಗ್ಗೆ 5:30 ರಿಂದ 7 ಗಂಟೆಯವರೆಗೆ ರೈಲುಗಳು 30 ನಿಮಿಷಗಳಿಗೊಮ್ಮೆ ಸಂಚರಿಸಲಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕರ ಭರ್ಜರಿ ಆಫರ್‌ – ಮದ್ವೆಯಾಗಲು ಅಪ್ರಾಪ್ತರಿಂದಲೂ ಅರ್ಜಿ!

    ಸಾರ್ವಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ. ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ.