Tag: ಪಿಯುಸಿ ಪರೀಕ್ಷೆ ಫಲಿತಾಂಶ

  • ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

    ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

    ಬೆಂಗಳೂರು: ಕಳೆದ ಮಾರ್ಚ್‌ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (PUC Examination Results) ಏಪ್ರಿಲ್‌ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

    ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

    ಕಳೆದ ಮಾರ್ಚ್‌ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದನ್ನೂ ಓದಿ: 50 ವರ್ಷಗಳಿಂದ ಕಾಂಗ್ರೆಸ್ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿಲ್ಲ: ಬೊಮ್ಮಾಯಿ

    ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.

  • ಮುಂದೆ ಸಿಎ ಮಾಡ್ತೀನಿ, ಜಾಸ್ತಿ ತಲೆಕೆಡಿಸಿಕೊಂಡಿಲ್ಲ: ವಾಣಿಜ್ಯ ಟಾಪರ್ ವರ್ಷಿಣಿ

    ಮುಂದೆ ಸಿಎ ಮಾಡ್ತೀನಿ, ಜಾಸ್ತಿ ತಲೆಕೆಡಿಸಿಕೊಂಡಿಲ್ಲ: ವಾಣಿಜ್ಯ ಟಾಪರ್ ವರ್ಷಿಣಿ

    ಬೆಂಗಳೂರು: ಪಿಯು ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಟಾಪರ್ ಆಗಿದ್ದಾರೆ. ಮಲ್ಲೇಶ್ವರಂ ವಿದ್ಯಾಮಂದಿರ ಕಾಲೇಜಿನ ವರ್ಷಿಣಿ. ಎಂ ಭಟ್ ಮತ್ತು ರಾಜಾಜಿನಗರ ಎಎಸ್‍ಸಿ ಪಿಯು ಕಾಲೇಜಿನ ಅಮೃತಾ ಎಸ್‍ಆರ್ 595 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ವಾಣಿಜ್ಯ ವಿಭಾಗದ ಟಾಪರ್ ವರ್ಷಿಣಿ ಪಬ್ಲಿಕ್ ಟಿವಿಯಂದಿಗೆ ಮಾತನಾಡಿ, ನನಗೆ ತುಂಬಾ ಖುಷಿಯಾಗುತ್ತಿದೆ. ಪ್ರತಿ ವರ್ಷ ಪರೀಕ್ಷೆ ಫಲಿತಾಂಶ ಬಂದಾಗ ನಾನು ಸುದ್ದಿ ವಾಹಿನಿಗಳಲ್ಲಿ ಯಾರೂ ಟಾಪ್ ಬರುತ್ತಾರೆಂದು ನೋಡುತ್ತಿದೆ. ಆದರೆ ಈಗ ನಾನು ಆ ಸ್ಥಾನದಲ್ಲಿರುವುದು ನನಗೆ ತುಂಬಾ ಖುಷಿಯಾಗಿದೆ ಎಂದು ಹೇಳಿದ್ದಾರೆ.

    ದ್ವಿತೀಯ ಪಿಯುಸಿ ಶುರುವಾದ ಬಳಿಕ ದಿನ 4ರಿಂದ 5 ಗಂಟೆಗಳವರೆಗೂ ಓದುತ್ತಿದೆ. ನಾನು ತುಂಬಾ ತಲೆ ಕೆಡಿಸಿಕೊಳ್ಳಲಿಲ್ಲ. ನನ್ನ ಪರಿಶ್ರಮ, ಶಿಕ್ಷಕರ, ಪ್ರಿನ್ಸಿಪಲ್ ಹಾಗೂ ನನ್ನ ಪೋಷಕರ ಸಪೋರ್ಟ್ ಮಾಡಿದ್ದಾರೆ.

    ನಾನು ಈಗ ಸಿಎ ಮಾಡಬೇಕೆಂದುಕೊಂಡಿದ್ದೇನೆ. ಈಗಾಗಲೇ ಸಿಎ ಕೋಚಿಂಗ್ ಕ್ಲಾಸ್‍ಗೆ ಸೇರಿಕೊಂಡಿದ್ದೀನಿ. ನನ್ನ ಫಲಿತಾಂಶ ಬಂದಾಗ ನನ್ನ ತಾಯಿ ನಂಬಲೇ ಇಲ್ಲ, ಅವರಿಗೆ ತುಂಬಾ ಖುಷಿಯಾಗಿದೆ. ನನ್ನ ತಂದೆ ಊರಿನಿಂದ ಹೊರ ಹೋಗಿದ್ದು, ಕರೆ ಮಾಡಿ ತಿಳಿಸಬೇಕೆಂದು ವಾಣಿಜ್ಯ ವಿಭಾಗದ ಟಾಪರ್ ವರ್ಷಿಣಿ ತಿಳಿಸಿದ್ದಾರೆ.

    ವರ್ಷಿಣಿ ಒಟ್ಟು 595 ಅಂಕಗಳನ್ನು ಪಡೆದಿದ್ದು, ಸಂಸ್ಕೃತ, ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ಇನ್ನೂ ಅಕೌಂಟ್ಸ್‍ನಲ್ಲಿ 99, ಆಂಗ್ಲ ಭಾಷೆಯಲ್ಲಿ 100ಕ್ಕೆ 96 ಅಂಕಗಳನ್ನು ಪಡೆದು ವಾಣಿಜ್ಯ ಭಾಗದ ಟಾಪರ್ ಆಗಿದ್ದಾರೆ.