ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ.ಇದನ್ನೂ ಓದಿ: 6.5 ಲಕ್ಷ ಕೊಡದೇ ವಂಚಿಸಿದ ಆರೋಪ- ನವನಿರ್ದೇಶಕಿ ವಿರುದ್ಧ ದೂರು
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ.
ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣ ಪಾಟೀಲ್‌ಳನ್ನು ಬಂಧಿಸಿದ್ದಾರೆ.ಇದನ್ನೂ ಓದಿ:ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್
ಚಾಮರಾಜನಗರ: ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ದಿನಾಂಕದ ವಿಚಾರದಲ್ಲಿ ಒಂದು ದಿನವೂ ಹೆಚ್ಚು ಕಡಿಮೆ ಆಗುವುದಿಲ್ಲ. ಕೊರೊನಾ ಮೂರನೇ ಅಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ದೇವರ ಆಶೀರ್ವಾದಿಂದ ರಾಜ್ಯದಲ್ಲಿ ಅಂತಹ ಸಂದರ್ಭ ಬರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿದ್ದು, ಸಿಧು ಸಾಕು: ಬಿಜೆಪಿ ವ್ಯಂಗ್ಯ
ಶೇಕಡಾ 99ರಷ್ಟು ಶಾಲೆಗಳು ತೆರೆದಿದ್ದವು. ಮಕ್ಕಳ ಹಾಜರಾತಿಯೂ ಚೆನ್ನಾಗಿದೆ. ಹಾಗಾಗಿ ನಿಗದಿತ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.
ಈ ವರ್ಷದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಸರ್ಕಾರಿ ಶಾಲೆಯ ಕಂಪ್ಯೂಟರ್ ಕದ್ದ ಕಳ್ಳರು
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಬಿಎಂಟಿಸಿ ವತಿಯಿಂದ ಪರೀಕ್ಷೆ ದಿನ ಉಚಿತ ಓಡಾಟಕ್ಕೆ ಅವಕಾಶ ಮಾಡಿದೆ.
ಪೂರಕ ಪರೀಕ್ಷೆ ದಿನಾಂಕ 19-08-2021 ರಿಂದ 03-09-2021ರವರೆಗೆ ನಿಗದಿಯಾಗಿದ್ದು. ಈ ಪರೀಕ್ಷೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರ ತೋರಿಸುವ ಮೂಲಕ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ತೆರಳೋದಕ್ಕೆ ಅವಕಾಶ ಮಾಡಿ ಕೊಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಿಎಂಟಿಸಿಯು ವಿದ್ಯಾರ್ಥಿ ಸಮುದಾಯ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ಇದನ್ನೂ ಓದಿ:ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಭವಿಷ್ಯ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ಕರೆದಿದ್ದು, ನಾಳೆ ಮಹತ್ವದ ತೀರ್ಮಾನ ಘೋಷಿಸಲಿದ್ದಾರೆ.
ಪರೀಕ್ಷೆ ರದ್ದು ಮಾಡಬೇಕಾ? ರದ್ದು ಮಾಡದಿದ್ದರೆ ಪರೀಕ್ಷಾ ಪದ್ಧತಿ ಹೇಗೆ? ಯಾವ ಮಾನದಂಡ ಆಧರಿಸಿ ಪರೀಕ್ಷೆ ನಡೆಸಬೇಕು? ಅನ್ನೋದರ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಜ್ಞರು, ಸಚಿವರ ಅಭಿಪ್ರಾಯ ಪಡೆದಿದ್ದಾರೆ. ಪರೀಕ್ಷಾ ಗೊಂದಲದ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ಹೇಳಿಕೆ ನೀಡಿದ್ದು, ಪರೀಕ್ಷೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಸದ್ಯದಲ್ಲೇ ನಿರ್ಧಾರ ಹೇಳುತ್ತೇವೆ ಅಂದಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆ ಅಗತ್ಯವಾಗಿದೆ. 1 ತಿಂಗಳ ಬಳಿಕವಾದರೂ ಎಕ್ಸಾಂ ನಡೆಸೋ ಚಿಂತನೆ ನಡೆದಿದೆ ಅಂತ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಇನ್ನೊಂದೆಡೆ, ಸಚಿವ ಸೋಮಣ್ಣ ಕೂಡ ಸಿಬಿಎಸ್‍ಇ ಮಾದರಿ ರಾಜ್ಯದಲ್ಲಿ ಪರೀಕ್ಷೆ ರದ್ದು ಸರಿಯಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಣ್ಣ ಪರೀಕ್ಷೆಯಾದ್ರೂ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸೋಂಕು ಇಳಿದ ಮೇಲೆ ಪರೀಕ್ಷೆ ನಡೆಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಕೂಡ ಸರ್ಕಾರಕ್ಕೆ ಮನವಿ ಮಾಡಿದೆ.
ಪರೀಕ್ಷೆ ನಡೆಸೋ ಬಗ್ಗೆ ಬಹುತೇಕ ಒಲವು ಹೊಂದಿರುವ ಸರ್ಕಾರ 2 ಆಯ್ಕೆಗಳನ್ನು ಮುಂದಿಟ್ಟುಕೊಂಡಿದೆ. ಪರೀಕ್ಷೆ ರದ್ದು ಮಾಡೋದಾ? ಅಥವಾ ಪರೀಕ್ಷೆ ವಿಧಾನವನ್ನೇ ಬದಲಿಸೋದಾ? ಅನ್ನೋದರ ಬಗ್ಗೆ ಚಿಂತನೆ ನಡೆಸಿದೆ. ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳೋ ಸಾಧ್ಯತೆ ಇದೆ.
* ಸರ್ಕಾರದ ಮುಂದಿರುವ ಆಯ್ಕೆ 1
1. ಪ್ರಧಾನಿ ಮೋದಿ ಆದೇಶದಂತೆ 10, 12ನೇ ಕ್ಲಾಸ್ ಪರೀಕ್ಷೆ ರದ್ದು ಮಾಡೋದು.
2. ಪರೀಕ್ಷೆ ಬದಲಾಗಿ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ವರದಿ ಆಧರಿಸಿ ಮೌಲ್ಯಮಾಪನ.
3. ಎ, ಬಿ, ಸಿ, ಡಿ ಗ್ರೇಡ್ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಅಳೆಯೋದು.
* ಸರ್ಕಾರದ ಮುಂದಿರುವ ಆಯ್ಕೆ 2
1. ಸೋಂಕು ನಿಯಂತ್ರಣಕ್ಕೆ ಬಂದ್ಮೇಲೆ ಪರೀಕ್ಷೆ ನಡೆಸೋದು.
2. ಪರೀಕ್ಷಾ ವಿಧಾನ, ಪರೀಕ್ಷಾ ಸಮಯ ಬದಲಾವಣೆ.
3. 1 ಅಥವಾ 2 ದಿನದಲ್ಲಿ ಎಲ್ಲಾ ಪರೀಕ್ಷೆ ಮುಗಿಸೋದು.
4. ಸಿಇಟಿ ಮಾದರಿಯಲ್ಲಿ ಅಂಕ ಕಡಿತ ಮಾಡಿ ಪರೀಕ್ಷೆ.
5. 6 ವಿಷಯಗಳಿಗೆ ಬದಲಾಗಿ ಒಂದೇ ಪ್ರಶ್ನೆ ಪತ್ರಿಕೆ.
6. ಪಬ್ಲಿಕ್ ಪರೀಕ್ಷೆ ಬದಲಾಗಿ ಶಾಲಾ-ಕಾಲೇಜು ಹಂತದಲ್ಲೇ ಪರೀಕ್ಷೆ.
ಚಿಕ್ಕಬಳ್ಳಾಪುರ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಜಿಲ್ಲಾ ಪಂಚಾಯತಿ ಕ್ಷೇತ್ರ ಜಿಲ್ಲಾ ಪಂಚಾಯತಿ ಸದಸ್ಯೆ ತನುಜಾ ರಘು ಉತ್ತೀರ್ಣರಾಗಿದ್ದಾರೆ.
ಖಾಸಗಿ ಅಭ್ಯರ್ಥಿಯಾಗಿ ದ್ವಿತೀಯ ಪಿಯು ಎಚ್.ಇ.ಪಿ.ಎಸ್ ಪರೀಕ್ಷೆ ಎದುರಿಸಿದ್ದ ತನುಜಾ ರಘು 368 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. 2004 ರಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದ ತನುಜಾ ರಘುರವರು, ಈ ಬಾರಿ ಪಿಯುಸಿ ಪರೀಕ್ಷೆ ಎದುರಿಸಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ರಾಜಕಾರಣ ಹಾಗೂ ಜನಸಾಮಾನ್ಯರ ಸೇವೆಯೂ ಜೊತೆ ಜೊತೆಗೆ ತಮ್ಮ ವೈಯುಕ್ತಿಕ ಬದುಕಿಗೆ ವಿದ್ಯಾಭ್ಯಾಸವನ್ನ ಮುಂದುವರೆಸಿ ಪರೀಕ್ಷೆ ಪಾಸಾದ ಜಿಲ್ಲಾ ಪಂಚಾಯತಿ ಸದಸ್ಯೆಗೆ ಹಲವರು ಅಭಿನಂದನೆಗಳನ್ನ ಸಲ್ಲಿಸಿದ್ದಾರೆ.