Tag: ಪಿಯು ಬೋರ್ಡ್

  • ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೊಪ್ಪಳ: ಮೌಲ್ಯಮಾಪನ(Valuation) ಸರಿಯಾಗಿ ಮಾಡದೇ ವಿದ್ಯಾರ್ಥಿಯ ಮನವಿಗೂ ಬೆಲೆ ನೀಡದ ಪಿಯು ಬೋರ್ಡ್‌(PU Board) ಈಗ ಕೋರ್ಟ್‌ ನೋಟಿಸ್‌ಗೆ ಎಚ್ಚೆತ್ತು ಹೆಚ್ಚುವರಿ ಅಂಕ ನೀಡಲು ಮುಂದಾಗಿದೆ.

    ಗಂಗಾವತಿ ತಾಲೂಕಿನ ಶ್ರೀರಾಮನಗರ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಚಂದ್ರಮ್ಮ ದ್ವಿತೀಯ ಪಿಯುಸಿ( Second PUC) ವಿಜ್ಞಾನ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ವಿದ್ಯಾರ್ಥಿನಿಗೆ ಶಾಕ್‌ ಆಗಿತ್ತು. ಜೀವಶಾಸ್ತ್ರ ವಿಷಯದಲ್ಲಿ ಕೇವಲ 29 ಅಂಕ ಹಾಗೂ ಇಂಗ್ಲಿಷ್‌ನಲ್ಲಿ 40 ಅಂಕಗಳನ್ನು ನೀಡಿದ್ದರಿಂದ ಒಟ್ಟು ಶೇ. 65 ರಷ್ಟು ಫಲಿತಾಂಶ ಮಾತ್ರ ಬಂದಿತ್ತು.

    ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಡಿ.ಸತ್ಯನಾರಾಯಣ ಅವರ ಪುತ್ರಿಯಾಗಿರುವ ಚಂದ್ರಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.86, ಪಿಯು ಪ್ರಥಮ ವರ್ಷದಲ್ಲಿ ಶೇ. 98 ರಷ್ಟು ಅಂಕ ಪಡೆದಿದ್ದಳು. ದ್ವಿತೀಯ ಪಿಯುಸಿಯಲ್ಲಿ ಇಷ್ಟು ಕಡಿಮೆ ಅಂಕ ಬರಲು ಸಾಧ್ಯವೇ ಇಲ್ಲ ಎಂದು ತಿಳಿದು ಕಾಲೇಜಿನ ಉಪನ್ಯಾಸಕರು, ಪಾಲಕರು ಪಿಯು ಬೋರ್ಡ್‌ಗೆ ಶುಲ್ಕವನ್ನು ಭರಿಸಿ, ಉತ್ತರ ಪರೀಕ್ಷೆಯ ಪೋಟೋ ಕಾಪಿಯನ್ನು ತರಿಸಿಕೊಂಡಿದ್ದಾರೆ. ಪೋಟೊ ಕಾಪಿಯಲ್ಲಿ ಉತ್ತರ ಸರಿ ಇದ್ದರೂ ಅಂಕ ಸರಿಯಾಗಿ ನೀಡದೇ ಇರುವ ವಿಚಾರ ಗೊತ್ತಾಗಿದೆ. ಕೂಡಲೇ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಾಳೆ.

    ಮರು ಮೌಲ್ಯಮಾಪನದಲ್ಲಿ ಜೀವಶಾಸ್ತ್ರ ವಿಷಯಕ್ಕೆ ಮಾತ್ರ 27 ಅಂಕಗಳನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಆದರೆ ಇಂಗ್ಲಿಷ್‌ವಿಷಯಕ್ಕೆ ಯಾವುದೇ ರೀತಿಯ ಅಂಕ ನೀಡಿರಲಿಲ್ಲ. ಪೋಟೋ ಕಾಪಿಯಲ್ಲಿ ಗಮನಿಸಿದಂತೆ ಇಂಗ್ಲಿಷ್‌ ವಿಷಯಕ್ಕೆ ಹೆಚ್ಚುವರಿಯಾಗಿ ಇನ್ನೂ 42 ಅಂಕಗಳನ್ನು ನೀಡಬೇಕಿತ್ತು. ಇದನ್ನೂ ಓದಿ: ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್‌ ಬೇಜವಾಬ್ದಾರಿಗೆ ಬೇಸತ್ತ ವಿದ್ಯಾರ್ಥಿನಿ ಸೆಪ್ಟೆಂಬರ್‌ನಲ್ಲಿ ಗಂಗಾವತಿ ಕೋರ್ಟ್‌(Gangavathi Court) ಮೊರೆ ಹೋಗಿದ್ದಳು. ಅರ್ಜಿ ಮಾನ್ಯವಾಗಿದ್ದು ಕೋರ್ಟ್ ಮೂಲಕ ನೋಟಿಸ್ ಹೋಗುತ್ತಿದ್ದಂತೆ ಪಿಯು ಬೋರ್ಡ್‌ ಸಿಬ್ಬಂದಿ ಈಗ ವಿದ್ಯಾರ್ಥಿನಿಯ ಪಾಲಕರಿಗೆ ಕರೆ ಮಾಡಿ ಹೆಚ್ಚುವರಿ 42 ಅಂಕಗಳನ್ನು ನೀಡುತ್ತೇವೆ. ಅರ್ಜಿಯನ್ನು ವಾಪಸ್‌ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

    ಮೌಲ್ಯಮಾಪನದ ವೇಳೆ ತಪ್ಪಾದರೆ ಮಾನವ ದೋಷ ಎಂದು ಸಣ್ಣ ಸಮರ್ಥನೆ ನೀಡಬಹುದು. ಆದರೆ ಫೋಟೋ ಕಾಪಿ ತರಿಸಿ ತಪ್ಪಾಗಿದೆ ಹೆಚ್ಚುವರಿ ಅಂಕ ನೀಡಿ ಎಂದು ದಾಖಲೆಯೊಂದಿಗೆ ವಿವರಿಸಿದರೂ ಪಿಯು ಬೋರ್ಡ್‌ ಸಿಬ್ಬಂದಿ ಬೇಜವಾಬ್ದಾರಿ ತೋರಿಸಿದ್ದು ಎಷ್ಟು ಸರಿ? ವಿದ್ಯಾರ್ಥಿನಿಯ ಪೋಷಕರಿಗೆ ಕಾನೂನು ಜ್ಞಾನ ಇದ್ದ ಕಾರಣ ಕೋರ್ಟ್‌ ಮೊರೆ ಹೋಗಿದ್ದಾರೆ. ಕಾನೂನಿನ ಜ್ಞಾನ ಇಲ್ಲದೇ ಇದ್ದರೆ ಪಿಯು ಬೋರ್ಡ್‌ ಹೇಳಿದ್ದನ್ನೇ ಕೇಳಬೇಕಿತ್ತು. ಇಂದು ಕಾಲೇಜಿನಲ್ಲಿ ಸೀಟ್‌ ಪಡೆಯಲು ಅಂಕವೇ ಮಾನದಂಡ ಆಗಿರುವ ಕಾರಣ ಇನ್ನಾದರೂ ಈ ತಪ್ಪಿನಿಂದ ಎಚ್ಚೆತ್ತು ಪಿಯು ಬೋರ್ಡ್‌ ಸಿಬ್ಬಂದಿ ಅಂಕ ಕುರಿತ ಸಮಸ್ಯೆಗೆ ಸರಿಯಾಗಿ ಸ್ಪಂದಿಸುವುದನ್ನು ಕಲಿಯಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಕೊಪ್ಪಳ: ಪರೀಕ್ಷೆ ಬರೆಯದೇ ಪಾಸ್ ಆಗುವ ಸರ್ಕಾರದ ಆಫರ್ ತಿರಸ್ಕರಿಸಿದ್ದ ವಿದ್ಯಾರ್ಥಿನಿಯ ಭವಿಷ್ಯವೇ ಈಗ ಅತಂತ್ರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಭೂಮಿಕಾ ಪಿಯು ಬೋರ್ಡ್ ಎಡವಟ್ಟಿನಿಂದ ಫೇಲ್ ಆಗಿದ್ದಾಳೆ.

    ವಿದ್ಯಾರ್ಥಿನಿ ಭೂಮಿಕಾ 40 ಅಂಕ ಪಡೆದಿದ್ದರೂ 4 ಅಂಕ ಕೊಟ್ಟು ಅನುತ್ತೀರ್ಣ ಮಾಡಿದ್ದಾರೆ. ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಸದೇ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಪಿಯು ಬೋರ್ಡ್ ತೀರ್ಮಾನಿಸಿತ್ತು. ಆದರೆ ಸರ್ಕಾರದ ಆಫರ್ ತಿರಸ್ಕರಿಸಿದ್ದ ಗಂಗಾವತಿಯ ವೆಂಕಟೇಶ್ವರ ಪಿಯು ಕಾಲೇಜಿನ ಭೂಮಿಕಾ ಪರೀಕ್ಷೆ ಬರೆದಿದ್ದಳು. ಇದನ್ನೂ ಓದಿ: ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ

    ರಾಸಾಯನ ಶಾಸ್ತ್ರದಲ್ಲಿ ಭೂಮಿಕಾ ಪಡೆದದ್ದು 40 ಅಂಕ ಪಿಯು ಬೋರ್ಡ್ ನ ಎಡವಟ್ಟಿನಿಂದ ವಿದ್ಯಾರ್ಥಿನಿಗೆ 4 ಅಂಕ ನೀಡಿ, ಅನುತ್ತೀರ್ಣ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಮನನೊಂದು ಕೆಲ ದಿನ ಊಟ ನಿದ್ದೆ ಸಹ ಮಾಡದೆ ಹತಾಶೆಗೊಂಡಿದ್ದಳು. ಬಳಿಕ ಪಾಲಕರು ಪರೀಕ್ಷೆ ಬರೆದ ಉತ್ತರ ಪತ್ರಿಕೆ ಜೆರಾಕ್ಸ್ ಕಾಪಿ ತರಿಸಿ ನೋಡಿದಾಗ ಆಕೆ 40 ಅಂಕ ಪಡೆದಿರೋದು ಗೊತ್ತಾಗಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

    ಪಿಯು ಬೋರ್ಡ್ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಭೂಮಿಕಾ ತಂದೆ ಚಂದ್ರಶೇಖರಗೌಡ ತಾವರಗೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪಿಯು ಬೋರ್ಡ್ ಮಾಡಿರುವ ತಪ್ಪನ್ನು ತಿದ್ದುಪಡಿ ಮಾಡಿ, ವಿದ್ಯಾರ್ಥಿನಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.

  • ಪ್ರಥಮ, ದ್ವಿತೀಯ ಪಿಯು ತರಗತಿಗಳು ಬಂದ್- ಪಿಯು ಬೋರ್ಡ್ ಆದೇಶ

    ಪ್ರಥಮ, ದ್ವಿತೀಯ ಪಿಯು ತರಗತಿಗಳು ಬಂದ್- ಪಿಯು ಬೋರ್ಡ್ ಆದೇಶ

    – ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ

    ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದ್ದು, ಹೀಗಾಗಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಬಂದ್ ಮಾಡಿ ಪಿಯು ಬೋರ್ಡ್ ಆದೇಶ ಹೊರಡಿಸಿದೆ.

    ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಪಿಯು ಬೋರ್ಡ್ ಸ್ಥಗಿತಗೊಳಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಸೂಚನೆ ನೀಡಲಾಗಿದೆ. ಆನ್‍ಲೈನ್ ಹಾಗೂ ಪ್ರೀ ರೆಕಾರ್ಡ್ ತರಗತಿಗಳನ್ನು ಮುಂದುವರೆಸಲು ತಿಳಿಸಲಾಗಿದೆ.

    ಏಪ್ರಿಲ್ 28 ರಿಂದ ಮೇ 5 ರವರೆಗೆ ನಿಗದಿಯಾಗಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪರೀಕ್ಷೆ ವೇಳೆ ಶೇ.50ರಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಪ್ರಾಂಶುಪಾಲರು ಸೂಕ್ತ ವೇಳಾಪಟ್ಟಿ ತಯಾರಿಸುವಂತೆ ಪಿಯು ಬೋರ್ಡ್ ಆದೇಶದಲ್ಲಿ ತಿಳಿಸಲಾಗಿದೆ.

  • ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ

    ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ

    ಬೆಂಗಳೂರು: 2020-21ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 24 ರಿಂದ ಜೂನ್ 16ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮ ಹೇಳಿಕೆ ಮೂಲಕ ವೇಳಾಪಟ್ಟಿ ಪ್ರಕಟ ಮಾಡಿದ್ದಾರೆ. ಇತ್ತೀಚೆಗೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಅವಕಾಶ ಕೊಡಲಾಗಿತ್ತು. ಆಕ್ಷೇಪಣೆ ಪರಿಶೀಲನೆ ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ವೇಳಾಪಟ್ಟಿ ರಚನೆ ಮಾಡಲಾಗಿದೆ. ಮೇ 24 ರಿಂದ ಜೂನ್ 16ರ ವರೆಗೆ ದ್ವೀತಿಯ ಪಿಯಸಿ ಪರೀಕ್ಷೆಗಳು ನಡೆಯಲಿವೆ.

    ವೇಳಾಪಟ್ಟಿ ಹೀಗಿದೆ
    ಮೇ 24- ಇತಿಹಾಸ
    ಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
    ಮೇ 26- ಭೂಗೋಳ ಶಾಸ್ತ್ರ
    ಮೇ 27- ಮನಃಶಾಸ್ತ್ರ, ಬೇಸಿಕ್ ಗಣಿತ
    ಮೇ 28- ತರ್ಕಶಾಸ್ತ್ರ
    ಮೇ 29- ಹಿಂದಿ
    ಮೇ 31- ಇಂಗ್ಲಿಷ್
    ಜೂನ್ 01- ಮಾಹಿತಿ ತಂತ್ರಜ್ಞಾನ, ಹೆಲ್ತ್‍ಕೇರ್, ವೆಲ್‍ನೆಸ್ ಬ್ಯೂಟಿ
    ಜೂನ್ 02- ರಾಜ್ಯಶಾಸ್ತ್ರ, ಗಣಕ ವಿಜ್ಞಾನ
    ಜೂನ್ 03- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
    ಜೂನ್ 04- ಅರ್ಥಶಾಸ್ತ್ರ
    ಜೂನ್ 05- ಗೃಹ ವಿಜ್ಞಾನ
    ಜೂನ್ 07- ವ್ಯವಹಾರ ಅಧ್ಯಯನ, ಭೌತಶಾಸ್ತ್ರ
    ಜೂನ್ 08- ಐಚ್ಛಿಕ ಕನ್ನಡ
    ಜೂನ್ 09- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
    ಜೂನ್ 10- ಸಮಾಜ ಶಾಸ್ತ್ರ, ರಸಾಯನಶಾಸ್ತ್ರ
    ಜೂನ್ 11- ಉರ್ದು, ಸಂಸ್ಕೃತ
    ಜೂನ್ 12- ಸಂಖ್ಯಾಶಾಸ್ತ್ರ
    ಜೂನ್ 14- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ
    ಜೂನ್ 15- ಭೂಗರ್ಭಶಾಸ್ತ್ರ
    ಜೂನ್ 16- ಕನ್ನಡ

  • ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಬೆಂಗಳೂರು: ಮಾರ್ಚ್ 1 ರಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

    ಈ ವರ್ಷ ಕಳೆದ ವರ್ಷಕ್ಕಿಂತ ಸುಮಾರು 12 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತೆ. ಪೊಲೀಸ್ ಭದ್ರತೆಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಯುತ್ತಿದೆ. ಇನ್ನೂ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಯಲು ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪರೀಕ್ಷೆಯನ್ನ ನಿರಾತಂಕವಾಗಿ ಬರೆಯಲು ಪಿಯುಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ಪಿಯುಸಿ ಪರೀಕ್ಷೆಯ ಡಿಟೇಲ್ಸ್ ಹೀಗಿದೆ.

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು:
    ಒಟ್ಟು ವಿದ್ಯಾರ್ಥಿಗಳು – 6,73,606
    ವಿದ್ಯಾರ್ಥಿಗಳು – 3,38,868
    ವಿದ್ಯಾರ್ಥಿನಿಯರು – 3,34,738
    ಪರೀಕ್ಷಾ ಕೇಂದ್ರ – 1013.

    ಭದ್ರತೆ:
    ಪರೀಕ್ಷಾ ಅಕ್ರಮ ತಡೆಯಲು 2026 ವಿಶೇಷ ಮೇಲ್ವಿಚಾರಕರ ನೇಮಕ ಮಾಡಲಾಗಿದ್ದು, ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ಕ್ವಾಡ್ ನೇಮಕ ಮಾಡಲಾಗಿದೆ. ಇನ್ನೂ 54 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡಿದ ಅಂಕ ಕೇಂದ್ರದಿಂದಲೇ ನೇರವಾಗಿ ಅಪ್ಲೋಡ್ ಆಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳಡಿಕೆ ಮಾಡಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರವೇಶ ಪತ್ರ ತೋರಿಸಿದರೆ ಪ್ರವೇಶ ಉಚಿತವಾಗಿರುತ್ತದೆ.

    ಅರ್ಥಶಾಸ್ತ್ರ, ವ್ಯವಹಾರ ಅಧ್ಯಾಯನ, ಲೆಕ್ಕಶಾಸ್ತ್ರ ವಿಷಯಗಳ ಪರೀಕ್ಷೆ ಎನ್‍ಸಿಇಆರ್ ಟಿ ಪಠ್ಯ ಅಳವಡಿಕೆ ಮಾಡಿಕೊಳ್ಳಲಾಗಿದ್ದು, ಈ ವರ್ಷ ಈ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧತೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದ್ದು, ಉತ್ತರ ಪತ್ರಿಕೆ ಕೊಠಡಿಗೆ 24*7 ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿ ಕ್ಲೋಸ್ ಮಾಡುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಪ್ರದೇಶ ಮಾಡಲಾಗಿದೆ.

    ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ನಿಷೇಧಿಸಿದ್ದು, ಗೃಹ ಇಲಾಖೆಯ ಜೊತೆ ಭದ್ರತೆ ಸಂಬಂಧ ಸೂಕ್ತ ಕ್ರಮವಹಿಸಲಾಗಿದೆ. ಹಿಂದಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕಂಡು ಬಂದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ. ಅವಶ್ಯಕತೆ ಬಿದ್ದರೆ ಅಂತಹ ವ್ಯಕ್ತಿ ಮೇಲೆ ಕೋಕಾ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ, ವಾಟ್ಸಪ್ ಮೆಸೇಜ್ ನಲ್ಲಿ ಪ್ರಶ್ನೆಗಳು ಸಿಕ್ಕಿದರೆ ತಕ್ಷಣ ಅವರು ದೂರು ಕೊಡಬೇಕು. ಒಂದು ವೇಳೆ ಇದನ್ನ ವಿದ್ಯಾರ್ಥಿಗಳು ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪ್ರಾಥಮಿಕ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭದ್ರತೆಯ ಬಗ್ಗೆ ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಶಿಖಾಗೆ ಸಿಎಂ ಬುದ್ಧಿವಾದ

    ಐಎಎಸ್ ಅಧಿಕಾರಿಗಳಾದ ಶಾಲಿನಿ ರಜನೀಶ್, ಶಿಖಾಗೆ ಸಿಎಂ ಬುದ್ಧಿವಾದ

    ಬೆಂಗಳೂರು: ಐಎಎಸ್ ಅಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶಿಖಾ ಅವರಿಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ.

    ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವ ವಿಚಾರವಾಗಿ ಮಂಗಳವಾರ ಶಿಕ್ಷಣ ಸಚಿವ ಮಹೇಶ್ ಅವರ ಮುಂದೆಯೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ಈ ವಿಚಾರ ಸುದ್ದಿಯಾದ ಹಿನ್ನೆಲೆಯಲ್ಲಿ ಇಂದು ಸಿಎಂ ಕಚೇರಿಯಲ್ಲಿ ನೂತನ ಕಾಲೇಜು ಪ್ರಾರಂಭ ಕುರಿತು ಸಭೆ ನಡೆಯಿತು. ಈ ಸಭೆಗೆ ಶಾಲಿನಿ ರಜನೀಶ್ ಹಾಗೂ ನಿರ್ದೇಶಕಿ ಶಿಖಾ ಅವರು ಆಗಮಿಸಿದರು. ಸಭೆ ಬಳಿಕ ಇಬ್ಬರಿಗೂ ಸಿಎಂ ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.

    ಮಾಧ್ಯಮಗಳ ಮುಂದೆ ಮುಂದೆ ಹೀಗೆ ಅಸಮಾಧಾನ ತೋರಿಸಿಕೊಳ್ಳಬೇಡಿ. ಏನೇ ಇದ್ದರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಅಧಿಕಾರಿಗಳು ಹೀಗೆ ಮಾಡಿದರೆ ಸರ್ಕಾರಕ್ಕೂ ಕೆಟ್ಟ ಹೆಸರು ಬರುತ್ತದೆ. ನಿಯಮದ ಪ್ರಕಾರ ಅಧಿಕಾರಿಗಳು ನಡೆದುಕೊಳ್ಳಿ ಅಂತ ಸೂಚನೆ ನೀಡಿದರು. ಇದನ್ನು ಓದಿ: ಪ್ರಾಥಮಿಕ ಶಿಕ್ಷಣ ಸಚಿವರ ಸಮ್ಮುಖದಲ್ಲೇ ಐಎಎಸ್ ಅಧಿಕಾರಿಗಳ ಕಿತ್ತಾಟ!- ವಿಡಿಯೋ ನೋಡಿ

    ಖಾಸಗಿ ಕಾಲೇಜುಗಳಿಗೆ ನಿಯಮ ಮೀರಿ ಅನುಮತಿ ನೀಡಿರುವ ಶಾಲಿನಿ ರಜನೀಶ್ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ, ನಿಯಮ ಮೀರಿ ಯಾವುದೇ ಕೆಲಸ ಮಾಡಬೇಡಿ. ಪಿಯು ಬೋರ್ಡ್ ನಿರ್ದೇಶಕರು ತಿರಸ್ಕರಿಸಿದ ಕಾಲೇಜುಗಳಿಗೆ ಹೇಗೆ ಅನುಮತಿ ನೀಡಿದ್ರಿ. ಇದು ಸರಿಯಲ್ಲ ಅಂತ ಸಿಎಂ ಶಾಲಿನಿ ರಜನೀಶ್ ಅವರಿಗೆ ಕ್ಲಾಸ್ ತಗೊಂಡಿದ್ದಾರೆ ಎಂದು ತಿಳಿದುಬಂದಿದೆ.

  • ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

    ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

    ಬೆಂಗಳೂರು: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನಕ್ಕೆ ನಿಗದಿಪಡಿಸಿದ್ದ ದಿನಾಂಕವನ್ನು ಮೇ 29ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯನ್ನು ಸ್ಕ್ಯಾನ್ ಕಾಫಿ ಪಡೆಯಲು ಮೇ27 ರವರೆಗೆ ಮಾಡಿಕೊಡಲಾಗಿದೆ ಎಂದು ಪಿಯು ಬೋರ್ಡ್ ತಿಳಿಸಿದೆ.

    ಇನ್ನೂ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಅಂಕಗಳ ಮರು ಮೌಲ್ಯಮಾಪನಕ್ಕೆ ಮೇ 29 ರವರೆಗೆ ಸಮಯಾವಕಾಶ ನೀಡಿದೆ. ಮೇ 11 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

    ಇದನ್ನೂ ಓದಿ: ಕೋಚಿಂಗ್ ಇಲ್ದೇ, ಟ್ಯೂಷನ್‍ಗೆ ಹೋಗದೆ ಉಡುಪಿಯ ರಾಧಿಕಾ ಪೈ ರಾಜ್ಯಕ್ಕೆ ಫಸ್ಟ್ 

    ಈ ಮೊದಲು ಉತ್ತರ ಪತ್ರಿಕೆ ಸ್ವೀಕರಿಸಲು (ಸ್ಕ್ಯಾನಿಂಗ್ ಪ್ರತಿಗೆ) ಅರ್ಜಿ ಸಲ್ಲಿಸಲು ಮೇ 19, ಮರು ಮೌಲ್ಯಮಾಪನ ಅರ್ಜಿ ಸಲ್ಲಿಸಲು ಮತ್ತು ಮರು ಏಣಿಕೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 24 ಆಗಿತ್ತು. ಪೂರಕ ಪರೀಕ್ಷೆ ಜೂನ್ 28ರಿಂದ ಜುಲೈ 8ರವರೆಗೆ ನಡೆಯಲಿದೆ. ಸಪ್ಲಿಮೆಂಟರಿ ಪರೀಕ್ಷೆಗೆ ಶುಲ್ಕ ಕಟ್ಟಲು ಜೂನ್ 23 ಕೊನೆ ದಿನಾಂಕವಾಗಿದೆ.

    ಇದನ್ನೂ ಓದಿ: ಪಿಯು ಫಲಿತಾಂಶ: ಮೂರು ವಿಭಾಗದ ಟಾಪ್ 10 ಟಾಪರ್ ಲಿಸ್ಟ್ ಇಲ್ಲಿದೆ

     

  • ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

    ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

    ಬೆಂಗಳೂರು: ಮುಂಜಾಗ್ರತೆ, ಭಾರೀ ಭದ್ರತೆಯಿಂದ ಯಾವುದೇ ಅವಾಂತರವಿಲ್ಲದೆ ಅಂತ್ಯವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಇಂದಿನಿಂದ ಆರಂಭವಾಗಲಿದೆ.

    ಮೌಲ್ಯಮಾಪನಕ್ಕೆ ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯಾದ್ಯಂತ 48 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಮಂಗಳೂರು, ದಾವಣಗೆರೆ ಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನ ಮಾಡಲಾಗಿದೆ.

    ಈ ಬಾರಿ 21 ಸಾವಿರ ಉಪನ್ಯಾಸಕರು ಮೌಲ್ಯಮಾಪನದಲ್ಲಿ ಭಾಗವಹಿಸಲಿದ್ದಾರೆ. 15 ದಿನಗಳ ಕಾಲ ಮೌಲ್ಯಮಾಪನ ನಡೆಯಲಿದೆ. ಅಂದುಕೊಂಡಂತೆ ಎಲ್ಲವೂ ನಡೆದ್ರೆ ಮೌಲ್ಯಮಾಪನ ಪ್ರಕ್ರಿಯೆ ಮುಗಿಸಿ ಮೇ 10 ಕ್ಕೆ ಫಲಿತಾಂಶ ನೀಡಲು ಪಿಯುಸಿ ಬೋರ್ಡ್ ನಿರ್ಧರಿಸಿದೆ.