Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Join our Whatsapp group by clicking the below link
https://chat.whatsapp.com/E6YVEDajTzH06LOh77r25k

ಗದಗ: ಬೃಹತ್ ರೈಲ್ವೇ ಪಿಲ್ಲರ್ ಮನೆಗಪ್ಪಳಿಸಿದ್ದು, ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ಅಚ್ಚರಿಯ ರೀತಿಯಲ್ಲಿ ತಪ್ಪಿರುವಂತಹ ಘಟನೆ ಜಿಲ್ಲೆಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಅಂಬೇಡ್ಕರ್ ನಗರದ ಬಳಿ ಕಳೆದ ಒಂದೂವರೆ ವರ್ಷದಿಂದ ರೈಲ್ವೇ ಫ್ಲೈ ಓವರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದೆ. ಬೃಹತ್ ಪಿಲ್ಲರ್ ಅಳವಡಿಸುವಾಗ ಹೈಡ್ರೋ ಮಶಿನ್ ಪೈಪ್ ಕಟ್ ಆಗಿದೆ. ಆ ಪಿಲ್ಲರ್ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂ ಆಗಿದೆ. ಜಖಂ ಆದ ಕೋಣೆಯ ಜೋಳಿಗೆಯಲ್ಲಿ ಮಲಗಿದ್ದ 8 ತಿಂಗಳ ಮಗು ಮಹಮ್ಮದ್, ಬಾಣಂತಿ ರೇಶ್ಮಾ ಹಾಗೂ ಮತೋರ್ವ ಗರ್ಭಿಣಿ ಕೂದಲೆಳೆಯ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಆಂಧ್ರ ಪ್ರದೇಶ ಮೂಲದ ಎಂ.ವಿ ಕನ್‍ಸ್ಟ್ರಕ್ಷನ್ ಮಾಲಿಕತ್ವದ ಮುನಿ ವೆಂಕಟೇಶ್ ಈ ಕಾಮಗಾರಿ ಗುತ್ತಿಗೆದಾರರು. ಈ ಸೇತುವೆ ಕಾಮಗಾರಿಗೆ ಗದಗನ ಅಂಬೇಡ್ಕರ್, ಜನತಾ ಕಾಲೋನಿ ಜನರು ಬೇಸತ್ತು ಹೋಗಿದ್ದಾರೆ. ಈ ಕಾಮಗಾರಿಯಿಂದ ಈ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ಇಂಥ ಅಪಾಯಕಾರಿ ಕಾಮಗಾರಿ ನಡೆದರೂ ಯಾವುದೇ ಮುಂಜಾಗ್ರತಾ ಕೈಗೊಂಡಿಲ್ಲ. ಕಾಮಗಾರಿ ಪ್ರತಿಯಲ್ಲಿದೆ ಅಂತ ಸೂಚನಾ ಫಲಕ ಕೂಡ ಅಳವಡಿಸಿಲ್ಲ ಎಂದು ಮನೆಯಲ್ಲಿದ್ದ ಗರ್ಭಿಣಿ ಹೇಳಿದ್ದಾರೆ.

ಪಿಲ್ಲರ್ ಬಿದ್ದ ಸದ್ದು ಕೇಳಿ ಹೌಹಾರಿ ಬಾಣಂತಿ ಮಗು ಎತ್ತಿಕೊಂಡು ಓಡಿ ಬಂದಿದ್ದಾರೆ. ಬೃಹತ್ ಪಿಲ್ಲರ್ ಅಳವಡಿಸುವ ಗುತ್ತಿಗೆದಾರರು ರಸ್ತೆ ಬಂದ ಮಾಡಿಲ್ಲ. ಇದೇ ವೇಳೆ ಟ್ರ್ಯಾಕ್ಟರ್ ನಲ್ಲಿ 15ಕ್ಕೂ ಹೆಚ್ಚು ಜನರು ಇದೇ ಕಾಮಗಾರಿ ನಡೆಯುವ ರಸ್ತೆಯಲ್ಲೇ ಜಮೀನು ಕೆಲಸಕ್ಕೆ ಹೊರಟಿದ್ದರು. ಅವರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂ.ವಿ ಕನ್‍ಸ್ಟ್ರಕ್ಷನ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಘಟನೆ ನಡೆಯತ್ತಿದ್ದಂತೆ ಸ್ಥಳದಲ್ಲೇ ಬೃಹತ್ ಯಂತ್ರೋಪಕರಣಗಳು ಬಿಟ್ಟು ಕೆಲಸಗಾರರು ಪರಾರಿಯಾಗಿದ್ದಾರೆ. ಬೃಹತ್ ಪಿಲ್ಲರ್ ಬಿಳುತ್ತಿದ್ದಂತೆ ಕಾರ್ಮಿಕ ಮೇಲಿನಿಂದ ಬಿದ್ದು, ಕೈ, ಕಾಲು ಮುರಿತವಾಗಿದೆ. ಈ ಅವಘಡ ನಡೆದರೂ ರೈಲ್ವೇ ಇಲಾಖೆಯ ಯಾವೊಬ್ಬ ಅಧಿಕಾರಗಳು ಸ್ಥಳಕ್ಕೆ ಬಂದಿಲ್ಲ.


ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿಕ ಇದೀಗ ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್ನಲ್ಲಿ ಬಿರುಕು ಕಾಣಿಸಿಕೊಂಡಿದೆ.
ಬಿಎಂಆರ್‌ಸಿಎಲ್ ಕಳಪೆ ಕಾಮಗಾರಿಯಿಂದ ಪಿಲ್ಲರ್ ಬೇರಿಂಗ್ನಲ್ಲಿ ಬಿರುಕು ಮೂಡಿದೆ. ಆದರೆ ಪ್ರಯಾಣಿಕರನ್ನು ಕಣ್ಣತಪ್ಪಿಸಿ bmrcl ದುರಸ್ತಿ ಮಾಡುವುದಕ್ಕೆ ಹೊರಟಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಬಿಎಂಆರ್‌ಸಿಎಲ್ ನಿರ್ಲಕ್ಷ್ಯದಿಂದ ಪಿಲ್ಲರ್ ಬೇರಿಂಗ್ನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಆರು ತಿಂಗಳ ಹಿಂದೆಯಷ್ಟೇ ಇದೇ ಮಾರ್ಗದಲ್ಲಿ ಮೆಟ್ರೋ ಸಮಸ್ಯೆ ಶುರುವಾಗಿತ್ತು. ಕಳೆದ ಬಾರಿ ಟ್ರಿನಿಟಿ ಸ್ಟೇಷನ್‍ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಮೆಟ್ರೋ ಮೊದಲ ಹಂತದ ಮೊದಲ ಫೇಸ್‍ನಲ್ಲಿ ಉದ್ಘಾಟನೆಯಾದ ಭಾಗ ಇದಾಗಿದೆ. ಆದರೆ ಇದೇ ಮಾರ್ಗದಲ್ಲಿ ಎರಡನೇ ಬಾರಿ ಸಮಸ್ಯೆ ಎದುರಾಗಿದೆ.

ಜುಲೈ 30 ರಂದು ಮೆಟ್ರೋ ಪ್ರತಿಕಾ ಪ್ರಕಟಣೆಯೊಂದನ್ನು ಹೊರಡಿಸಿತ್ತು. ನೆರಳೆ ಮಾರ್ಗದ ಎಂಜಿ ರೋಡ್‍ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿರ್ವಹಣೆ ಎಂದು ಮಾಹಿತಿ ನೀಡಿತ್ತು. ಪತ್ರಿಕಾ ಪ್ರಕಟಣೆಯಲ್ಲಿ ನಿರ್ವಹಣೆ ಅಂತಷ್ಟೇ ಮಾಹಿತಿ ನೀಡಲಾಗಿತ್ತು. ಆದರೆ ಈಗ ಪಿಲ್ಲರ್ ಬೇರಿಂಗ್ ಸಮಸ್ಯೆ ಬಯಲಾಗಿದೆ.
ಪತ್ರಿಕಾ ಪ್ರಕಟಣೆಯಲ್ಲೇನಿತ್ತು..?
ನಿರ್ವಹಣೆ ಕೆಲಸಕ್ಕಾಗಿ ನೇರಳೆ ಮಾರ್ಗದಲ್ಲಿನ, ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಆಗಸ್ಟ್ 3ರ ರಾತ್ರಿ 9:30ರಿಂದ ಆ. 4ರ ಬೆಳಗ್ಗೆ 11:00 ಗಂಟೆವರೆಗೆ ಮೆಟ್ರೋ ರೈಲಿನ ಸೇವೆಗಳು ಲಭ್ಯವಿರುವುದಿಲ್ಲ.
ಆಗಸ್ಟ್ 3ರಂದು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆವರೆಗಿನ ಸೇವೆಯ ಕೊನೆ ರೈಲು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ರಾತ್ರಿ 9:30 ಗಂಟೆಗೆ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದ ಕಡೆಗಿನ ಕೊನೆಯ ರೈಲು ರಾತ್ರಿ 9:00 ಗಂಟೆಗೆ ಹೊರಡಲಿದೆ.

ಅದಾಗ್ಯೂ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣದಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಆಗಸ್ಟ್ 3ರ ರಾತ್ರಿಯ ಸೇವೆ ಮುಕ್ತಾಯದವರೆಗೂ ಹಾಗೂ ಆ.4ರಂದು ಬೆಳಗ್ಗೆ 7:00 ಗಂಟೆಯಿಂದ 11:00 ಗಂಟೆಯವರೆಗೆ ಮೆಟ್ರೋ ರೈಲಿನ ಸೇವೆಗಳು ಲಭ್ಯವಿರುತ್ತವೆ.
ಆ. 4 ರಂದು ಬೆಳಗ್ಗೆ 11:00 ಗಂಟೆಯ ನಂತರ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣದ ಮೆಟ್ರೋ ರೈಲಿನ ಸೇವೆಗಳು ದಿನನಿತ್ಯದಂತಿರುತ್ತವೆ. ಹಸಿರು ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನ ಸೇವೆಗಳು ನಿಗದಿಯಂತೆ ನಡೆಯುತ್ತವೆ.

ಬೆಂಗಳೂರು: ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಶನಿವಾರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿ ಪರಿಶೀಲನೆ ನಡೆಸಿದರು.
ಡಾ. ಅಂಬೇಡ್ಕರ್ ಮೆಟ್ರೋ ನಿಲ್ದಾಣದಿಂದ ಹಲಸೂರು ನಿಲ್ದಾಣದವರೆಗೆ ಪ್ರಯಾಣ ಬೆಳೆಸಿ ಡಿಸಿಎಂ ದೋಷ ಕಾಣಿಸಿಕೊಂಡ ಸ್ಥಳವನ್ನು ಪರಿಶೀಲನೆ ನಡೆಸಿದರು.

ತಮ್ಮ ಪ್ರಯಾಣದ ವೇಳೆ ಮೆಟ್ರೋ ಪ್ರಯಾಣಿಕರೊಂದಿಗೆ ಮಾತನಾಡಿ ಮಾಹಿತಿ ಪಡೆದರು. ಅಲ್ಲದೇ ಮೆಟ್ರೋದಲ್ಲಿ ಯಾವುದೇ ದೋಷ ಇಲ್ಲ. ಅದ್ದರಿಂದಲೇ ನಾನು ಮೆಟ್ರೋದಲ್ಲೇ ಪ್ರಯಾಣಿಸುತ್ತಿದ್ದೇನೆ ಎಂದು ತಿಳಿಸಿದರು.
ಟ್ರಿನಿಟಿ ಬಳಿಯ ಮೆಟ್ರೋ ಸೇತುವೆಯ ವಯಾಡಕ್ಟ್ ವೀಕ್ಷಿಸಿ ಬೆಂಗಳೂರು ಮೆಟ್ರೋ ಯೋಜನೆಯ ನಿರ್ದೇಶಕ ವಿಜಯ್ ಕುಮಾರ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮೆಟ್ರೋ ಪಿಲ್ಲರ್ ನಲ್ಲಿ ಯಾವುದೇ ದೋಷವಿಲ್ಲ. ಕಾಂಕ್ರೀಟ್ ಹಾಕುವಾಗ ಹನಿಕಾಂಬ್ (ಕಾಂಕ್ರೀಟ್ ಪದರ ಟೊಳ್ಳಾಗುವುದನ್ನು ಸಿವಿಲ್ ಎಂಜಿನಿಯರಿಂಗ್ ಭಾಷೆಯಲ್ಲಿ ಹನಿಕಾಂಬ್ ಎಂದು ಕರೆಯಲಾಗುತ್ತದೆ) ಆಗಿದೆ. ಅದ್ದರಿಂದ ಯಾವುದೇ ಆತಂಕ ಬೇಡ. ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ದೆಹಲಿಯಿಂದ ಎಂಜಿನಿಯರ್ ಬಂದು ಸಲಹೆ ನೀಡಿದ್ದಾರೆ. ಇಂದು ಸಂಜೆಯಿಂದ ದುರಸ್ತಿ ಕಾರ್ಯ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

ಬೆಳಗಾವಿ: ಪಾಯ ಅಗೆದ ಮೇಲೆ ಬಿಲ್ಡಿಂಗ್ ಸರಿಯಾಗಿ ನಿಲ್ಲಬೇಕು ಅಂದರೆ ಮೊದಲು ಫಿಲ್ಲರ್ ಹಾಕಿ ನಂತರ ಕಟ್ಟಡ ಕಟ್ಟೋಕೆ ಆರಂಭಿಸುತ್ತಾರೆ. ಆದರೆ ಇಲ್ಲೊಂದು ಸರ್ಕಾರಿ ಕಟ್ಟಡಕ್ಕೆ ಕಟ್ಟಡ ಕಟ್ಟಿ ಒಂದು ವರ್ಷದ ಬಳಿಕ ಪಿಲ್ಲರ್ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದ ಶಾಲೆಯ ಕಟ್ಟಡ ಕಟ್ಟಿದ ವರ್ಷದ ಬಳಿಕ ಪಿಲ್ಲರ್ ಅಳವಡಿಕೆಗೆ ಅಧಿಕಾರಿಗಳು ಮುಂದಾಗಿದ್ದಾರೆ. 2016ರಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಕೆರೂರು ಗ್ರಾಮಕ್ಕೆ ಹೊಸ ಸರ್ಕಾರಿ ಫ್ರೌಡ ಶಾಲಾ ಕಟ್ಟಡ ಮಂಜೂರಾಗಿತ್ತು. ಕಟ್ಟಡ ಕಾಮಗಾರಿಯನ್ನು ಗುತ್ತಿಗೆ ಪಡೆದ ಕಂಪನಿ ತರಾತುರಿಯಲ್ಲಿ ಪ್ರಾರಂಭಮಾಡಿ ಕೆಲಸ ಮುಗಿಸಿತ್ತು. ಹೀಗಾಗಿ ಶಾಲೆಯ ಕಟ್ಟಡ ವಾಲಿದ್ದು ಬೀಳುವ ಸ್ಥಿತಿಗೆ ತಲುಪಿದೆ.

ಈ ಶಾಲೆಯಲ್ಲಿ 438 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನಿತ್ಯ ಜೀವ ಭಯದಲ್ಲೇ ಪಾಠ ಕಲಿಯುತ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನ ಕೇಳಿದರೆ ಬಿಲ್ಡಿಂಗ್ ಕಾಮಗಾರಿಗೆ ವೆಚ್ಚವಾದ ಮೊತ್ತ ಮತ್ತು ಯಾರಿಗೆ ಟೆಂಡರ್ ಕೊಡಲಾಗಿತ್ತು ಎಂಬುದು ನಮಗೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಸದ್ಯ ಕಟ್ಟಡ ಬೀಳದಂತೆ ಸೈಡಿಗೆ ಪಿಲ್ಲರ್ ಅಳವಡಿಸಲಾಗಿದೆ. ಆದರೂ ವಿದ್ಯಾರ್ಥಿಗಳಲ್ಲಿ ಆತಂಕ. ಇನ್ನಾದ್ರೂ ಕಳಪೆ ಕಾಮಗಾರಿ ಮಾಡಿ ಕೈ ತೊಳೆದುಕೊಂಡ ಗುತ್ತಿಗೆದಾರರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿ ಎಂಬುದು ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಬೀಜಿಂಗ್: ಬದಲಾಗುತ್ತಿರುವ ಹವಾಮಾನದ ಪರಿಣಾಮ ಚೀನಾದಲ್ಲೀಗ ಸಾಕಷ್ಟು ಅವಘಡಗಳು ಸಂಭವಿಸುತ್ತಿವೆ. ಪ್ರಕೃತಿಯ ಈ ವೈಪರಿತ್ಯದಿಂದ ನಗರದಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಕಟ್ಟಡದ ಪಿಲ್ಲರ್ ಬಿದ್ದು, ಬಸ್ ನಜ್ಜುಗುಜ್ಜಾದ ಘಟನೆ ಸೋಮವಾರ ನಡೆದಿದೆ.
ಭಾನುವಾರದಂದು ಚೀನಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದು ಸಿಬ್ಬಂದಿಗಳನ್ನು ಮುಜುಗರಕ್ಕೀಡು ಮಾಡಿತ್ತು. ಇದಾದ ಬಳಿಕ ಶಾಂಘೈನ ರಸ್ತೆಯೊಂದರಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಕಟ್ಟಡದ ಪಿಲ್ಲರ್ ಬಿದ್ದು, ಬಸ್ ನಜ್ಜುಗುಜ್ಜಾಗಿದೆ. ಸಿಸಿಟಿವಿಯಲ್ಲಿ ಇದರ ದೃಶ್ಯ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ವಿಡಿಯೋದಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಇದ್ದಕ್ಕಿದ್ದಂತೆ ಕಟ್ಟಡದ ಅಲಂಕಾರಿಕ ಪಿಲ್ಲರ್ ಬಿದ್ದ ಪರಿಣಾಮ ಬಸ್‍ನ ಅರ್ಧ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ ಒಳಗಡೆ ಕುಳಿತ್ತಿದ್ದ ಯಾವ ಪ್ರಯಾಣಿಕರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಒಳಗಡೆ ಇದ್ದ ಸಿಸಿಟಿವಿಯಲ್ಲಿ ಕೂಡ ಘಟನೆಯ ದೃಶ್ಯ ಸೆರೆಯಾಗಿದ್ದು, ಪಿಲ್ಲರ್ ಎಷ್ಟು ರಭಸವಾಗಿ ಬಿದ್ದಿದೆ ಎಂಬುದನ್ನ ಕಾಣಬಹುದು. ಈ ವಿಡಿಯೋವನ್ನ ಇಲ್ಲಿನ ಮಾಧ್ಯಮವೊಂದು ಫೇಸ್‍ಬುಕ್ ಪೇಜ್‍ನಲ್ಲಿ ಶೇರ್ ಮಾಡಿದ್ದು, ನೋಡುಗರನ್ನ ಆಶ್ಚರ್ಯಚಕಿತರನ್ನಾಗಿಸಿದೆ.