Tag: ಪಿ.ಟಿ.ಉಷಾ

  • ಸರಯೂ ನದಿ ತಟದಲ್ಲಿ ವಿಶೇಷ ದೈವಿಕ ಅನುಭವ ಹಂಚಿಕೊಂಡ ಪಿ.ಟಿ ಉಷಾ

    ಸರಯೂ ನದಿ ತಟದಲ್ಲಿ ವಿಶೇಷ ದೈವಿಕ ಅನುಭವ ಹಂಚಿಕೊಂಡ ಪಿ.ಟಿ ಉಷಾ

    ಅಯೋಧ್ಯೆ: ಸರಯೂ ನದಿ ತಟದಲ್ಲಿ ವಿಶೇಷವಾದ ದೈವಿಕ ಶಕ್ತಿಯ ಅನುಭವವನ್ನು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ (ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಹಂಚಿಕೊಂಡಿದ್ದಾರೆ.

    ಅಯೋಧ್ಯೆಯ ರಾಮಮಂದಿರಕ್ಕೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಗಮಿಸಿರುವ ಅವರು, ಸರಯೂ ನದಿ ತೀರಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸರಯೂ ನದಿಯ ದಡದಲ್ಲಿ ವಿಶೇಷವಾದ ಶಾಂತಿಯನ್ನು ಅನುಭವಿಸಿದೆ. ದೈವಿಕ ಶಕ್ತಿಯ ಅನುಭವವಾಗಿದೆ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮತ್ತೊಂದು ರಾಮನ ಮೂರ್ತಿ ಪ್ರತಿಷ್ಠಾಪನೆ

    &

    nbsp;

    ಸರಯೂ ತಟದಲ್ಲಿ ದೈವಿಕ ಶಾಂತಿಯನ್ನು ಅನುಭವಿಸಿದೆ. ನದಿಯು ಅಯೋಧ್ಯೆ ಮತ್ತು ಭಗವಾನ್ ರಾಮನ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಇಂದಿಗೂ ತನ್ನ ದೈವಿಕ ಶಕ್ತಿಯಿಂದ ಜನರನ್ನು ಆಶೀರ್ವದಿಸುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.

    ಸರಯೂ ನದಿಯ ದಡದಲ್ಲಿ ನೆರೆದಿದ್ದ ಸ್ಥಳೀಯರು ಮತ್ತು ಭಕ್ತರೊಂದಿಗೆ ಅವರು ಸಂವಾದ ನಡೆಸಿದ್ದಾರೆ ಈ ವೀಡಿಯೋವನ್ನು ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

    ರಾಮನ ಪ್ರಾಣಪ್ರತಿಷ್ಠಾಪನೆ ಇನ್ನೇನು ಕೆಲವೇ ಕ್ಷಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಕ್ರೀಡಾ ದಿಗ್ಗಜರಾದ ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಮಿಥಾಲಿ ರಾಜ್, ಹರ್ಮನ್‍ಪ್ರೀತ್ ಕೌರ್ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವ-LIVE Updates | Ayodhya Ram Mandir Updates

  • ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

    ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

    ನವದೆಹಲಿ: ಕುಸ್ತಿಪಟುಗಳಿಂದ (Wrestlers) ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಭಾವುಕ ಹೇಳಿಕೆಯೊಂದನ್ನ ನೀಡಿದ್ದಾರೆ.

    ಕಳೆದ 4 ತಿಂಗಳಿನಿಂದ ಕುಸ್ತಿ ಕ್ರೀಡೆ ಸ್ಥಗಿತಗೊಂಡಿದೆ. ನನ್ನನ್ನ ಗಲ್ಲಿಗೇರಿಸಿದರೂ ಏರಲು ಸಿದ್ಧನಿದ್ದೇನೆ. ನನ್ನ ನೇಣಿಗೆ ಬೇಕಾದರೂ ಹಾಕಿ ಆದ್ರೆ ಕುಸ್ತಿ ಚಟುವಟಿಕೆ ಮಾತ್ರ ನಿಲ್ಲಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

    ಟಾಪ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಭಜರಂಗ್ ಪೂನಿಯಾ (Bajrang Punia) ಸೇರಿದಂತೆ ಹಲವು ಮಂದಿ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ, ಫೆಡರೇಶನ್‌ನಿಂದ ಹೊರಹಾಕುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದಿದ್ದಾರೆ. ಅಧ್ಯಕ್ಷರು ಮಹಿಳಾ ಗ್ರಾಫ್ಲರ್‌ಗಳನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹಲವು ದಿನಗಳಿಂದ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಂಪಿಯನ್‌ಶಿಪ್‌ ಸೇರಿದಂತೆ ಇನ್ನಿತರ ಶಿಬಿರಗಳು ಬಂದ್‌ ಆಗಿವೆ.

    ಈ ಕುರಿತು ಸೋಮವಾರ ಮಾತನಾಡಿರುವ ಬ್ರಿಜ್‌ ಭೂಷಣ್‌, ಕುಸ್ತಿ ಚಟುವಟಿಕೆಯನ್ನು ನಿಲ್ಲಿಸುವುದು ಕೆಡೆಟ್ ಮತ್ತು ಜೂನಿಯರ್ ಕುಸ್ತಿಪಟುಗಳ ಭವಿಷ್ಯಕ್ಕೆ ಹಾನಿಕಾರಕವಾಗಿದೆ. ಮಕ್ಕಳ ಭವಿಷ್ಯದ ಜೊತೆ ಆಟವಾಡಬೇಡಿ. ಹೊಸ ಕೆಡೆಟ್‌ಗಳಿಗೆ ಅವಕಾಶ ನೀಡಿ. ಸರ್ಕಾರ ಅಥವಾ ಡಬ್ಲ್ಯೂಎಫ್‌ಐ ನಿಂದ ಯಾರೇ ಕುಸ್ತಿ ಚಟುವಟಿಕೆಗಳನ್ನು ಆಯೋಜಿಸಿದರೂ ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ

    ಈ ಮೊದಲು ಯಾವುದೇ ಕಾರಣಕ್ಕೂ ತಮ್ಮ ಸ್ಥಾನವನ್ನು ತೊರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಭೂಷಣ್‌, ಇದೀಗ ಪ್ರತಿಭಟನಾಕಾರರು ಶಾಂತಿಯುತವಾಗಿ ಮನೆಗೆ ಹಿಂದಿರುಗಿದರೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದಾರೆ. ಆದ್ರೆ ಕುಸ್ತಿಪಟುಗಳು ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ವಿರಾಟ್‌ ಕೊಹ್ಲಿ ನನ್ನ ಫೇವ್ರೆಟ್‌ – ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ

    ಏನಿದು ಕೇಸ್?
    ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿವಿಧ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನ ಕೆಲಸದಿಂದ ವಜಾಗೊಳಿಸುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ ಎಂದೂ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋದ ಬಳಿಕ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ 7 ಮಹಿಳೆಯರಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಿದ್ದಾರೆ. ತನಿಖೆ ಮುಂದುವರಿದಿದೆ.

  • ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಭಾರತದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಬೆಂಬಲ ನೀಡಿದ್ದಾರೆ. ಅವರು ಇನ್ಸ್ಟಾಗ್ರಾಮ್‍ನಲ್ಲಿ ಪ್ರತಿಭಟನಾ ನಿರತರ ಫೋಟೋ ಹಂಚಿಕೊಂಡು ನ್ಯಾಯ ಸಿಗುತ್ತದೆಯೇ? ಎಂದು ಬರೆದುಕೊಂಡಿದ್ದಾರೆ.

     

    ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪುನಿಯಾ (Bajrang Punia), ಸಾಕ್ಷಿ ಮಲಿಕ್ (Sakshi Malik) ಸೇರಿ ಹಲವಾರು ಕುಸ್ತಿ ಪಟುಗಳು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ದೇವ್ ಅವರಿಗೆ ಬೆಂಬಲ ನೀಡಿದ್ದು ಹೊಸ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    ಇದಕ್ಕೂ ಮುನ್ನ ಒಲಿಂಪಿಕ್ಸ್ (Olympic) ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಪ್ರತಿಭಟನಾ ನಿರತ ಕುಸ್ತಿ ಪಟುಗಳಿಗೆ ಬೆಂಬಲ ಸೂಚಿಸಿದ್ದರು. ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸುವಂತೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ ಕುಸ್ತಿಪಟುಗಳು ಬೀದಿಗಿಳಿದಿರುವುದು ದುಃಖದ ಸಂಗತಿ ಎಂದು ಹೇಳಿಕೊಂಡಿದ್ದರು.

    ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (Indian Olympic Association) ಅಧ್ಯಕ್ಷೆ ಪಿ.ಟಿ ಉಷಾ (PT Usha) ಕುಸ್ತಿ ಪಟುಗಳ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ದೇಶದ ಘನತೆಗೆ ಧಕ್ಕೆ ತರಲು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸೋಸಿಯೇಷನ್ ಬಳಿ ಬರುವುದು ಬಿಟ್ಟು ರಸ್ತೆಗಿಳಿದಿರುವುದ ಸರಿಯಲ್ಲ ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

  • ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

    ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

    ನವದೆಹಲಿ: ಬಿಜೆಪಿ (BJP) ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ (IOA) ಅಧ್ಯಕ್ಷೆ ಪಿ.ಟಿ ಉಷಾ (PT Usha) ಅಸಮಾಧಾನ ಹೊರಹಾಕಿದ್ದಾರೆ.

    ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಕ್ರೀಡಾಪಟುಗಳ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳಿಗೆ ನಮ್ಮ ಬಳಿ ಬರಬೇಕಿತ್ತು. ಐಒಎನಲ್ಲಿ ಇದಕ್ಕಾಗಿಯೇ ಸಮಿತಿ ಮಾಡಲಾಗಿದೆ. ಸ್ವಲ್ಪವಾದರೂ ಶಿಸ್ತು ಇರಬೇಕು. ನಮ್ಮ ಬಳಿಗೆ ಬರುವುದನ್ನ ಬಿಟ್ಟು ರಸ್ತೆಗಿಳಿದಿದ್ದಾರೆ. ಇದು ಕ್ರೀಡಾಪಟುಗಳ ಬೆಳವಣಿಗೆಗೆ ಶೋಭೆ ತರುವುದಿಲ್ಲ. ಇಂತಹ ಪ್ರತಿಭಟನೆಗಳಿಂದ ದೇಶದ ಘನತೆಗೆ ಧಕ್ಕೆಯಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು

    ಉಷಾ ಅವರ ಹೇಳಿಕೆಗೆ ಕುಸ್ತಿಪಟುಗಳಾದ ಭಜರಂಗ್‌ ಪೂನಿಯಾ (Bajrang Punia), ವಿನೇಶ್‌ ಫೋಗಾಟ್‌ (Vinesh Phogat) ಬೇಸರ ವ್ಯಕ್ತಪಡಿಸಿದ್ದಾರೆ. ಉಷಾ ಅವರಿಂದ ಇಂತಹ ಕಠಿಣ ಪ್ರತಿಕ್ರಿಯೆ ನಿರೀಕ್ಷಿಸಿರಲಿಲ್ಲ. ಅವರು ನಮಗೆ ನೆರವು ನೀಡುತ್ತಾರೆ ಅಂದುಕೊಂಡಿದ್ದೆವು ಎಂದು ಪೂನಿಯಾ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ

    ಏನಿದು ಕೇಸ್?
    ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿವಿಧ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನ ಕೆಲಸದಿಂದ ವಜಾಗೊಳಿಸುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ ಎಂದೂ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

  • ಪ್ರಹ್ಲಾದ್ ಜೋಶಿಯವರನ್ನು ಭೇಟಿಯಾಗಿ ಕೃತಜ್ಞತೆ ಅರ್ಪಿಸಿದ ನೂತನ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ

    ಪ್ರಹ್ಲಾದ್ ಜೋಶಿಯವರನ್ನು ಭೇಟಿಯಾಗಿ ಕೃತಜ್ಞತೆ ಅರ್ಪಿಸಿದ ನೂತನ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ

    ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ನಾಮನಿರ್ದೇಶನಗೊಂಡ “ಒಲಿಂಪಿಕ್ಸ್ ರಾಣಿ” ಪಿ.ಟಿ. ಉಷಾ ಇಂದು ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

    ಸಂಸತ್ ಭವನದ ಕೇಂದ್ರ ಸಚಿವರ ಕಚೇರಿಯಲ್ಲಿ ನಡೆದ ಈ ಸೌಜನ್ಯದ ಭೇಟಿ ವೇಳೆ ಪಿ.ಟಿ. ಉಷಾ ಅವರು ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದರು. ಈ ವೇಳೆ ಪ್ರಹ್ಲಾದ್ ಜೋಶಿಯವರು ಪಿ.ಟಿ. ಉಷಾ ಅವರನ್ನು ಅಭಿನಂದಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್

    ಪಿ.ಟಿ. ಉಷಾ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನ್ಯಾಯ ಸಲ್ಲಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯಗಳನ್ನು ಹೃದಯಪೂರ್ವಕವಾಗಿ ಹಾಗೂ ಅಷ್ಟೇ ಸರಾಗವಾಗಿ ನೆರವೇರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿಯವರು ಆಶಾಭಾವ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಳೆ ಮೈಸೂರು ಜೀವನಾಡಿ KRS ಭರ್ತಿ- ನಾಳೆ ಸಿಎಂ ಬಾಗಿನ ಅರ್ಪಣೆ

    Live Tv
    [brid partner=56869869 player=32851 video=960834 autoplay=true]

  • ಎರಡು ವರ್ಷಗಳ ನಂತರ ಪಿ.ಟಿ.ಉಷಾ ಪಾತ್ರಕ್ಕೆ ರೆಡಿಯಾದ್ರು ಈ ನಟಿ

    ಎರಡು ವರ್ಷಗಳ ನಂತರ ಪಿ.ಟಿ.ಉಷಾ ಪಾತ್ರಕ್ಕೆ ರೆಡಿಯಾದ್ರು ಈ ನಟಿ

    ಮುಂಬೈ: ಚಿನ್ನದ ಹುಡುಗಿ, ಅಥ್ಲೆಟಿಕ್ಸ್ ಪ್ರತಿಭೆ ಪಿ.ಟಿ.ಉಷಾ ಜೀವನಾಧರಿತ ಸಿನಿಮಾ ಬಾಲಿವುಡ್ ಬರಲು ರೆಡಿಯಾಗುತ್ತಿದೆ. ಎರಡು ವರ್ಷಗಳ ಬಳಿಕ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ.

    ಪ್ರಿಯಾಂಕಾ ಸಿನಿಮಾದಲ್ಲಿ ನಟಿಸಲು ಈ ಹಿಂದೆಯೇ ಒಪ್ಪಿಕೊಂಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಹಾಲಿವುಡ್ ನಲ್ಲಿ ಬ್ಯೂಸಿ ಆಗಿದ್ದರು. ಸದ್ಯ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ. ಉಷಾರ ಪಾತ್ರ ನಿರ್ವಹಿಸಲು ಪ್ರಿಯಾಂಕಾ ತರಬೇತಿ ಮತ್ತು ವಿಶೇಷ ತಯಾರಿಗಳನ್ನು ನಡೆಸಬೇಕಾಗಿದ್ದು, ಅದಕ್ಕಾಗಿ ಒಂದು ವರ್ಷ ಸಮಯ ಬೇಕಾಗುತ್ತದೆ ಎಂದು ಸಿನಿಮಾದ ನಿರ್ದೇಶಕಿ ರೇವತಿ ಹೇಳಿದ್ದಾರೆ.

    ಸಿನಿಮಾ ಒಟ್ಟು ಮೂರು ಹಂತಗಳಲ್ಲಿ ಮೂಡಿ ಬರಲಿದೆ. ಒಂದು ಉಷಾರ ಬಾಲ್ಯ, ಕ್ರೀಡಾಪಟು ಮತ್ತು ತಾಯಿಯಾಗಿ ಕೋಚ್ ಆಗಿರುವುದನ್ನು ತೋರಿಸಲಿದೆ. ಹಳೆಯದನ್ನು ಮತ್ತೊಮ್ಮೆ ತೆರೆಯ ಮೇಲೆ ತರಬೇಕಾಗಿರುವುದರಿಂದ ಸಿನಿಮಾದಲ್ಲಿ ಸಾಕಷ್ಟು ಗ್ರಾಫಿಕ್ಸ್ ಬಳಕೆಯಾಗಲಿದೆ. ಸಿನಿಮಾ ಅಂದಾಜು 100 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗಲಿದೆ.

    ಇನ್ನೂ ಸಿನಿಮಾದಲ್ಲಿ ಮೂರು ವಿಶೇಷ ಪಾತ್ರಗಳು ಸಹ ಬರಲಿದೆ. ಮೊದಲನೇಯದು ಉಷಾರ ತಂದೆ, ಎರಡನೇಯದು ಕೋಚ್ ಮತ್ತು ಮೂರನೇಯ ಪಾತ್ರದಲ್ಲಿ ಪತಿಯನ್ನು ಸಿನಿಮಾದಲ್ಲಿ ನೋಡಬಹುದಾಗಿದೆ. ಆದರೆ ಈ ವಿಶೇಷ ಪಾತ್ರಗಳನ್ನು ಯಾವ ನಟರೂ ನಟಿಸಲಿದ್ದಾರೆ ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ.

    ಪಿ.ಟಿ.ಉಷಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾರಣ ಮಲೆಯಾಳಂ, ಹಿಂದಿ, ಇಂಗ್ಲಿಷ್, ರಷ್ಯೀಯನ್ ಚೈನೀಸ್ ಭಾಷೆಗಳಲ್ಲಿ ಮೂಡಿಬರಲಿದೆ. ಈ ಮೊದಲು ಬಾಕ್ಸರ್ ಮೇರಿಕೋಮ್ ಜೀವನಾಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಎಲ್ಲರಿಂದಲೂ ಭೇಷ್ ಅಂತಾ ಅನ್ನಿಸಿಕೊಂಡಿದ್ದರು. ಉಷಾರ ಪಾತ್ರವನ್ನು ಮಾಡಲು ನಟಿ ಸೋನಂ ಕಪೂರ್ ಕೂಡ ಒಲವು ತೋರಿಸಿದ್ದರು.

    ಇತ್ತೀಚಿಗೆ ಬಾಲಿವುಡ್‍ನಲ್ಲಿ ಜೀವನಾಧರಿತ ಕಥೆ ಆಧಾರಿತ ಸಿನಿಮಾಗಳು ಸೆಟ್ಟೇರುತ್ತಿವೆ. ಕೆಲವು ಸಿನಿಮಾಗಳು ಬಿಡುಗಡೆಗೊಂಡು ಅಭೂತಪೂರ್ವ ಯಶಸ್ಸನ್ನು ಪಡೆದುಕೊಂಡಿವೆ. ಹೀಗಾಗಿ ಒಂದರ ನಂತರ ಜೀವನಾಧರಿತ ಸಿನಿಮಾಗಳು ಬಾಲಿವುಡ್ ನಲ್ಲಿ ಬರುತ್ತಿವೆ.