ಚಾಮರಾಜನಗರ: ಸಿಎಂ ಮನಸ್ಸಿನಲ್ಲಿ ನಾನಿದ್ದೇನೆ, ಈ ಬಾರಿ ಸಚಿವ ಸ್ಥಾನ ಕೊಟ್ಟೆ ಕೊಡ್ತಾರೆಂದು ಚಾಮರಾಜನಗರದಲ್ಲಿ ಶಾಸಕ ಹಾಗೂ ಎಂಎಸ್ಐಎಲ್ ನಿಗಮದ ಅಧ್ಯಕ್ಷ ಪುಟ್ಟರಂಗಶೆಟ್ಟಿ ಹೇಳಿದರು.
136 ಸೀಟು ಗೆದ್ದು ಸಂಪುಟ ರಚನೆ ವೇಳೆ ನನ್ನ ಹೆಸರಿತ್ತು. ನಂಗೆ ಕಳೆದ ಬಾರಿಯೇ ಸಚಿವ ಸ್ಥಾನ ಕೊಡಬೇಕು ಅಂತಾ ತೀರ್ಮಾನವಾಗಿತ್ತು. ಕಾರಣಾಂತರದಿಂದ ಸಚಿವ ಸ್ಥಾನ ಕೈತಪ್ಪಿ ಹೋಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಒಂದು ವರ್ಷ ಉಪ ಸಭಾಪತಿ ಆಗಲೂ ಹೇಳಿದ್ದರು. ಆ ವೇಳೆ ನಾನು ಉಪ ಸಭಾಪತಿ ಸ್ಥಾನ ನಿರಾಕರಿಸಿದ್ದೆ. ಒಂದು ವರ್ಷ ಕಾಲ ಸುಮ್ಮನಿರಲೂ ಸಿಎಂ ಹೇಳಿದ್ದರು ಎಂದು ತಿಳಿಸಿದರು.
ಈ ಬಾರಿ ಸಂಪುಟ ಪುನಾರಚನೆ ಆದ್ರೆ ಸಚಿವ ಸ್ಥಾನ ಕೊಡ್ತಾರೆ. ಜಾತಿವಾರು, ಜಿಲ್ಲಾವಾರು ನೋಡಿದರು ಕೂಡ ನಂಗೆ ಸಚಿವ ಸ್ಥಾನ ಕೊಡಬೇಕು. ನಾನು ಕೂಡ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯನಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ, ಸಿಎಂ ಎಲ್ಲರ ಮೇಲೆ ನಂಬಿಕೆಯಿದೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.
ಚಾಮರಾಜನಗರ: ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ಕೊಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ (Puttarangashetty) ಮಾತಾನಾಡಿದ್ದಾರೆ.
ಜೂನ್‌ಗೆ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟವಾಗಿ ಹೇಳಿದ್ದಾರೆ. ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರವಾಗಿದೆ. ನನಗೆ ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಅದರೆ ನಾನೇ ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನವೇನು ಕೋಳಿ ಮೊಟ್ಟೆನಾ.. ಒಡೆದು ಆಮ್ಲೆಟ್ ಮಾಡೋಕೆ: ಸಿಎಂ ಇಬ್ರಾಹಿಂ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗೆ, ಉಪಮುಖ್ಯಮಂತ್ರಿಗೆ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಸಚಿವ ಸ್ಥಾನ ಕೊಡೋದು ಬಿಡೋದು ಅವರಿಗೆ ಸೇರಿದ್ದು. ಬಲವಂತ ಮಾಡಲು ನಾನ್ಯಾರು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಾಗಿಯೇ ಹೋಗುತ್ತಿದ್ದಾರೆ. ಎಲ್ಲ ಕಾರ್ಯಕ್ರಮಗಳಲ್ಲಿ ಒಟ್ಟಾಗಿಯೇ ಭಾಗವಹಿಸುತ್ತಿದ್ದಾರೆ. ಭಿನ್ನಾಭಿಪ್ರಾಯ ಎಂಬುದು ವಿರೋಧ ಪಕ್ಷಗಳ ಆರೋಪವಷ್ಟೇ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ಚಾಮರಾಜನಗರ: ಉಪ ಸಭಾಪತಿಯಾಗಲು (Deputy Speaker) ಶಾಸಕ ಪುಟ್ಟರಂಗಶೆಟ್ಟಿ (Puttarangashetty) ಕೊನೆಗೂ ಒಪ್ಪಿಗೆ ನೀಡಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ (Chamarajanagar) ಶಾಸಕ ಪುಟ್ಟರಂಗಶೆಟ್ಟಿಗೆ ಉಪ ಸಭಾಪತಿ ಸ್ಥಾನ ನೀಡಲಾಗಿತ್ತು. ಈ ವೇಳೆ ನನಗೆ ನಿಭಾಯಿಸಲು ಕಷ್ಟವಾಗುತ್ತೆ, ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಎಂದು ಪುಟ್ಟರಂಗಶೆಟ್ಟಿ ತಿಳಿಸಿದ್ದರು. ಆದರೆ ಇದೀಗ ಅವರು ಯೂ ಟರ್ನ್ ಹೊಡೆದಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ನಾನು ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ. ಒಂದು ವರ್ಷದ ನಂತರ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಸರಣಿ ಸಭೆ- ಸೋಲಿನ ಪರಾಮರ್ಶೆ ಮಾಡಲಿರುವ ನಾಯಕರು
ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು, ವರಿಷ್ಠರು ಹೇಳಿದ್ದನ್ನು ಒಪ್ಪಿಕೊಳ್ಳಲೇ ಬೇಕು. ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರವಾದರೂ ಹೇಳಿಕೊಳ್ಳಲು ಆಗಲ್ಲ. ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ. ಒಂದು ವರ್ಷ ಕೆಲಸ ಮಾಡು ನಂತರ ಸಚಿವ ಸ್ಥಾನ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ ಎಂದು ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸೋದು ಡೌಟ್? – ರಾಜಕಾರಣ ಬೇಕೋ ಬೇಡ್ವೋ ಎನಿಸಿದೆ ಎಂದ ಡಿಕೆ ಸುರೇಶ್
ಚಾಮರಾಜನಗರ: ಕಾಂಗ್ರೆಸ್ (Congress) ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಸ್ಪೀಕರ್ ಹುದ್ದೆಯನ್ನು ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ತಿರಸ್ಕರಿಸಿದ್ದಾರೆ.
ಸಚಿವ ಸ್ಥಾನ ವಂಚಿತ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ (Deputy Speaker) ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿತ್ತು. ಇದೀಗ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ, ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆಂದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಉಪ್ಪಿನ ಮೋಳೆಯ ನಿವಾಸದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸುವುದು ಕಷ್ಟವಾಗಲಿದೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತೆ. ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಕೈಗೆಟುಕುವುದಿಲ್ಲ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರ ಒತ್ತಾಯವಾಗಿದೆ ಎಂದರು.
ನಾನು ಉಪ್ಪಾರ ಸಮಾಜದ ಏಕೈಕ ಶಾಸಕನಾಗಿದ್ದೇನೆ. ಯಾವಾಗಲೂ ಜನರ ಜೊತೆ ಬೆರೆತು ಕೆಲಸ ಮಾಡುವವನು. ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್ ಒತ್ತಾಯಿಸಿದ್ದರು. ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಕಾರಣ ಏನೆಂದು ಗೊತ್ತಿಲ್ಲವೆಂದು ಶಾಸಕ ಪುಟ್ಟರಂಗಶೆಟ್ಟಿ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnata Election 2023) ಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ (Congress) ಗೆಲುವಿನ ನಗೆ ಬೀರಿದೆ. ಇದೀಗ ನನ್ನ ನಿಲುವನ್ನು ಬಹಿರಂಗವಾಗಿ ತಿಳಿಸೋಕೆ ಆಗಲ್ಲ ಎಂದು ಶಾಸಕ ಪುಟ್ಟರಂಗಶೆಟ್ಟಿ (Puttarangashetty) ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭೇಟಿ ನಂತರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರ ಈ ಬಾರಿ ಸಾಕಷ್ಟು ಕುತೂಹಲ ಮೂಡಿಸಿತ್ತು. 2008 ರಿಂದಲೂ ಕೂಡ ನಾನು ಶಾಸಕನಾಗಿದ್ದೇನೆ. ಸೋಮಣ್ಣ (V Somanna) ನವರು ಬಂದು ಸ್ಪರ್ಧೆ ಮಾಡಿದ್ರು ಸೋತಿದ್ದಾರೆ. ನಾನು ಅವತ್ತಿಂದ ಹೇಳಿದ್ದೆ ಈ ಚುನಾವಣಾ ಹಣದ ಬಲವಾ ಅಥವಾ ಜನರ ಬಲವಾ ಎಂದು ಅಂದ್ರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?
ಜನ ನನಗೆ ಬೆಂಬಲ ನೀಡಿ ಗೆಲ್ಲಿಸಿದ್ದಾರೆ. ನಾನು ಸಚಿವ ಸ್ಥಾನದ ಬಗ್ಗೆ ಏನು ಮಾತನಾಡಿಲ್ಲ. ಖರ್ಗೆ ನಮ್ಮ ಸಾಹೇಬ್ರು. ಸಾಮಾನ್ಯವಾಗಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕರಾಗಿರುವುದು ಎಂದರು. ಇದನ್ನೂ ಓದಿ: ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ
ಉಪ್ಪಾರ ಸಮುದಾಯ ಪ್ರತಿನಿಧಿಸುತ್ತೇನೆ, ಸಮ್ಮಿಶ್ರ ಸರ್ಕಾರ ಬಂದಾಗಲೂ ಸಚಿವನಾಗಿದ್ದೆ. 4 ಬಾರಿ ಶಾಸಕನಾಗಿದ್ದೆ. ಸಚಿವ ಸ್ಥಾನ ಕೊಡೋದು ಬಿಡೋದು ಹೈಕಮಾಂಡ್‍ಗೆ ಬಿಟ್ಟಿದ್ದು. ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್‍ಗೆ ಬಿಟ್ಟಿದ್ದು. ಹೈಕಮಾಂಡ್ ನಿಲುವಿಗೆ ನಾವೆಲ್ಲ ಬದ್ಧ ಎಂದು ಹೇಳಿದರು.
ಚಾಮರಾಜನಗರ: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ (Chamarajanagara) ಹೈವೋಲ್ಟೇಜ್ ಕ್ಷೇತ್ರವಾಗಿ ಕಾಣಿಸಿಕೊಂಡಿದೆ. ಬಿಜೆಪಿ (BJP) ಅಭ್ಯರ್ಥಿ ವಿ.ಸೋಮಣ್ಣ (Somanna) ವರುಣಾ, ಚಾಮರಾಜನಗರ ಎರಡು ಕಡೆಯೂ ಸ್ಪರ್ಧೆ ಮಾಡಿರುವುದರಿಂದ ರಣಕಣವಾಗಿ ಚಾಮರಾಜನಗರ ಕ್ಷೇತ್ರ ಬದಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಿಂದ (Congress) ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯ ಪುಟ್ಟರಂಗಶೆಟ್ಟಿ (Puttarangashetty) ಅಖಾಡದಲ್ಲಿದ್ದು, ಸತತ ನಾಲ್ಕನೇ ಬಾರಿಯೂ ಗೆಲುವಿನ ಪತಾಕೆ ಹಾರಿಸಲು ಕೆಲಸ ಮಾಡುತ್ತಿದ್ದಾರೆ.
ಕಳೆದ ಚುನಾವಣೆಯಲ್ಲಿ ಯಾರಿಗೆ ಎಷ್ಟು ಮತ?
ಕಾಂಗ್ರೆಸ್ ಸಿ.ಪುಟ್ಟರಂಗಶೆಟ್ಟಿ: ಪಡೆದ ಮತ 75,963
ಬಿಜೆಪಿ ಮಲ್ಲಿಕಾರ್ಜುನಪ್ಪ: ಪಡೆದ ಮತ 71,050
ಜಾತಿ ಲೆಕ್ಕಾಚಾರ ಏನು?
ಕ್ಷೇತ್ರದಲ್ಲಿ ಒಟ್ಟು 2,09,494 ಜನಸಂಖ್ಯೆ ಇದೆ. ಅವರ ಪೈಕಿ 1,02,588 ಪುರುಷರು ಹಾಗೂ 1,06,891 ಮಹಿಳೆಯರಿದ್ದಾರೆ.
ವೀರಶೈವ- 49,000
ದಲಿತ- 40,500
ನಾಯಕ- 24,250
ಉಪ್ಪಾರ- 28,350
ಕುರುಬ- 18,000
ಮುಸ್ಲಿಂ- 15,000
ಕ್ರಿಶ್ಚಿಯನ್- 6,000
ಇತರೆ- 25,000
ಅಭ್ಯರ್ಥಿಗಳ ಪ್ಲಸ್, ಮೈನಸ್ ಏನು? ಪುಟ್ಟರಂಗಶೆಟ್ಟಿ: ಚುನಾವಣೆಯಲ್ಲಿ ಬಿಜೆಪಿ ಕೊಡುವ ಒಳೇಟಿನಿಂದಾಗಿ ಕಾಂಗ್ರೆಸ್‌ಗೆ ಹೆಚ್ಚು ವರವಾಗುತ್ತಿದೆ. ಈಗಾಗಲೇ ಹ್ಯಾಟ್ರಿಕ್ ಜಯಭೇರಿ ಗಳಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಕ್ಷೇತ್ರದಲ್ಲಿನ ಮತ ಬ್ಯಾಂಕ್ ಮೇಲೆ ಹಿಡಿತ ಹೊಂದಿದ್ದಾರೆ. ಉಪ್ಪಾರ ಸಮುದಾಯ, ದಲಿತ, ಅಲ್ಪಸಂಖ್ಯಾತ, ಮುಸ್ಲಿಂ, ಹಿಂದುಳಿದ ಮತ ಕಾಂಗ್ರೆಸ್ ಕೈ ಹಿಡಿದಿದ್ದು, ಈ ಬಾರಿಯೂ ಮತ ಸಿಗುವ ಭರವಸೆ ಇದೆ. ಮೈನಸ್ ಅಂಶ ಹೇಳುವುದಾದರೆ, ಮೂರು ಬಾರಿ ಆಯ್ಕೆಯಾದರೂ ಮೂಲ ಸೌಕರ್ಯ ಕೊರತೆ. ಅಭಿವೃದ್ಧಿ ದೃಷ್ಟಿಕೋನ ಇಲ್ಲದಿರುವ ಶಾಸಕ ಎಂಬ ಮೂದಲಿಕೆ. ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಎಂಬ ಅರೋಪವಿದೆ.
ವಿ.ಸೋಮಣ್ಣ: ಬಿಜೆಪಿಯ ಲಿಂಗಾಯತ ಪ್ರಬಲ ನಾಯಕ ಸ್ಪರ್ಧೆ ಮಾಡಿರುವುದು. ಲಿಂಗಾಯತ ಸಮುದಾಯದ ಹಿರಿಯ ಮುಖಂಡ. ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿ ಮಾಡುವ ಭರವಸೆ. ಸಾವಿರಾರು ಕೋಟಿ ಅನುದಾನ ತರುವ ಚಾಕಚಕ್ಯತೆ. ಕ್ಷೇತ್ರದ ಎಲ್ಲಾ ಸಮುದಾಯದ ಮುಖಂಡರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಮೈನಸ್ ಪಾಯಿಂಟ್, ಹೊರಗಿನ ಅಭ್ಯರ್ಥಿ ಅರ್ಥಾತ್ ದೂರದ ಬೆಂಗಳೂರಿನಿಂದ ಬಂದಿದ್ದು, ಕೈಗೆ ಸಿಗಲಾರರು ಎಂಬ ಆರೋಪ. ಪಕ್ಷದ ಒಳಗಿನ ಗುದ್ದಾಟ, ಇಷ್ಟು ಚುನಾವಣೆಯಲ್ಲೂ ಒಳೇಟು ಕೊಡುತ್ತಿರುವುದು ಈ ಬಾರಿಯೂ ಮುಂದುವರೆಯುವ ಸಾಧ್ಯತೆ. ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ವರುಣದಲ್ಲಿ ಹೆಚ್ಚು ಗಮನ ಕೊಟ್ಟು ಚಾಮರಾಜನಗರದತ್ತ ಕಡಿಮೆ ಸಮಯ ಕೊಟ್ಟಿದ್ದಾರೆ. ಇದನ್ನೂ ಓದಿ: ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಶೋಕಾಸ್ ನೋಟಿಸ್ ಜಾರಿ
ಇಲ್ಲಿಯವರೆಗೂ ಕೂಡ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. 9 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಅಲ್ಲದೇ ಒಂದು ಬಾರಿಯಷ್ಟೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆದರೆ ಕಳೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದೊಡ್ಡ ಅಂತರದ ಗೆಲುವು ಸಿಕ್ಕಿಲ್ಲ. ಇದನ್ನೇ ಸ್ಟ್ರಾಟಜಿ ಮಾಡಿಕೊಂಡಿರುವ ಬಿಜೆಪಿ ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯ ಪುಟ್ಟರಂಗಶೆಟ್ಟಿ ವಿರುದ್ಧ ಲಿಂಗಾಯತ ಸಮುದಾಯದ ಪ್ರಬಲ ನಾಯಕನನ್ನು ಅಖಾಡಕ್ಕಿಳಿಸಿದ್ದು, ಯಾರೂ ವಿಜಯಭೇರಿ ಬಾರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಚಾಮರಾಜನಗರ: ಗುಜರಾತ್ (Gujarat) ಮೂಲದ ಗಣಿ ಉದ್ಯಮಿಯಿಂದ ಗಣಿ ಜಮೀನನ್ನು ಖರೀದಿಸಿ ನೀಡಬೇಕಾಗಿದ್ದ ಹಣದಲ್ಲಿ 9 ಕೋಟಿ ರೂ. ವಂಚಿಸಿರುವ (Fraud) ಆರೋಪ ಚಾಮರಾಜನಗರದ (Chamarajanagar) ಶಾಸಕ ಪುಟ್ಟರಂಗಶೆಟ್ಟಿ (Puttarangashetty) ವಿರುದ್ಧ ಮಾಡಲಾಗಿದೆ. ಶಾಸಕರ ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಗುಜರಾತ್‌ನ ಗಣಿ ಉದ್ಯಮಿ ಕಮಲೇಶ್, ನನ್ನ ಜಮೀನನ್ನು ವಾಪಸ್ ಕೊಡಿ, ಅವರು ಕೊಟ್ಟಿರುವ ಹಣವನ್ನು ವಾಪಸ್ ಕೊಡುತ್ತೇನೆ ಎಂದು ಹೇಳಿದ್ದಾರೆ.
ಗುಜರಾತ್‌ನ ರಾಜ್ ಕೋಟ್ ನಿವಾಸಿ ಕಮಲೇಶ್ ಅವರು ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಜಮೀನು ಖರೀದಿ ಮಾಡಿ ಸುಮಾರು 8 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದರು. ಕಾರಣಾಂತರದಿAದ ಶಾಸಕ ಪುಟ್ಟರಂಗಶೆಟ್ಟಿಗೆ ಮಾರಾಟ ಮಾಡಲು ಅಗ್ರಿಮೆಂಟ್ ಮಾಡಿದ್ದರು. ಶಾಸಕ ಹಾಗೂ ಶಾಸಕರ ಅಳಿಯ ರಾಮಚಂದ್ರ ಅವರು ಕಮಲೇಶ್ ಜೊತೆ 14 ಕೋಟಿ ರೂ.ಗೆ ಮಾತುಕತೆ ನಡೆಸಿದ್ದಾರೆ.
ಒಂದು ಕೋಟಿ ರೂ. ಹಣವನ್ನು ಮುಂಗಡವಾಗಿ ಶಾಸಕರ ಖಾತೆಯಿಂದ ಕಮಲೇಶ್ ಖಾತೆಗೆ ವರ್ಗಾವಣೆ ಮಾಡಲಾಗಿದ್ದು, ಬಳಿಕ 2.5 ಕೋಟಿಯನ್ನು ಕೆಲ ತಿಂಗಳ ಬಳಿಕ ಶಾಸಕರು ನೀಡಿದ್ದಾರೆ. ಈ ನಡುವೆ ಗಲಾಟೆಯಿಂದ ಜಮೀನಿನ ಯಾವುದೇ ರಿಜಿಸ್ಟರ್ ಆಗಿಲ್ಲ. ಆದರೆ ಶಾಸಕ ಪುಟ್ಟರಂಗಶೆಟ್ಟಿ ಅಳಿಯ ರಾಮಚಂದ್ರ ಹಾಗೂ ಬೆಂಬಲಿಗ ಶಾಂತ ಕುಮಾರ್ ಕೊಲೆ ಬೆದರಿಕೆ ಹಾಕಿ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆ ಎಂದು ಕಮಲೇಶ್ ಆರೋಪಿಸಿದ್ದಾರೆ. ಇದನ್ನೂ ಓದಿ: ವೋಟರ್ ಡೇಟಾ ಹಗರಣ ಆರೋಪ- ಸರ್ಕಾರಕ್ಕೆ ಸಿದ್ದರಾಮಯ್ಯ ವಾರ್ನಿಂಗ್
ಸದ್ಯ 1,200 ಕ್ಯುಬಿಕ್ ಮೀಟರ್ ಕರಿ ಕಲ್ಲನ್ನು ತೆಗೆದಿದ್ದಾರೆ ಎಂದು ಆರೋಪ ಮಾಡಿರುವ ಕಮಲೇಶ್, ಜಮೀನು ವಿಚಾರದಲ್ಲಿ ನಡೆದ ಡೀಲ್‌ನಲ್ಲಿ ಕೊಟ್ಟ ಹಣವನ್ನು ವಾಪಸ್ ಶಾಸಕರಿಗೆ ಕೊಡುತ್ತೇನೆ. ನನ್ನ ಕರಿಕಲ್ಲನ್ನು ವಾಪಸ್ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಶಾಸಕರ ವಿರುದ್ಧ ದೂರು ನೀಡಿದರೂ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ. ಸ್ಪೀಕರ್ ಅನುಮತಿ ಬೇಕು ಎಂದು ಪೊಲೀಸರು ಹೇಳುತ್ತಿದ್ದಾರೆ. ಸದ್ಯ ಶಾಸಕರ ಅಳಿಯ ರಾಮಚಂದ್ರ ಹಾಗೂ ಶಾಂತ ಕುಮಾರ್ ವಿರುದ್ಧ ಅಷ್ಟೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ
Live Tv
[brid partner=56869869 player=32851 video=960834 autoplay=true]
ಚಾಮರಾಜನಗರ: ಬಿಜೆಪಿ (BJP) ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ (Congress) ಈಗ ಆ ಪಕ್ಷದ ಶಾಸಕರ ವಿರುದ್ಧವೇ ಗಂಭೀರ ಆರೋಪ ಬಂದಿದೆ. ಗುತ್ತಿಗೆ ನೀಡುವಾಗ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ಹಸ್ತಕ್ಷೇಪ ಮಾಡಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಎಸ್ಸಿ- ಎಸ್ಟಿ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಮಂಜುನಾಥ್ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಶೇ.25ರಷ್ಟು ಮೀಸಲಾತಿ ನೀಡಬೇಕು. ಆದರೆ ಸ್ಥಳೀಯ ಶಾಸಕರಾದ ಪುಟ್ಟರಂಗ ಶೆಟ್ಟಿ ಅವರು ಗುತ್ತಿಗೆ ನೀಡುವಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಲೈಸೆನ್ಸ್ ಇಲ್ಲದವರಿಗೆ ಕಾಮಗಾರಿ ನೀಡುತ್ತಿದ್ದಾರೆ. ಇದರಿಂದಾಗಿ ನಮಗೆ ಅನ್ಯಾಯವಾಗುತ್ತಿದೆ ಎಂದು ದೂರಿದ್ದಾರೆ.
ಎಲ್ಲ ಜನಪ್ರತಿನಿಧಿಗಳು ಕಮಿಷನ್ ಆಸೆಗಾಗಿ ಗುತ್ತಿಗೆ ಕಾಮಗಾರಿಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ತಮಗೆ ಬೇಕಾದ ಒಬ್ಬರಿಗೆ ಕೆಲಸ ಕೊಡುತ್ತಿದ್ದಾರೆ. ಅದೇ ರೀತಿ ಶಾಸಕ ಪುಟ್ಟರಂಗ ಶೆಟ್ಟಿ ಅವರು, ಎಸ್ಸಿ- ಎಸ್ಟಿ ಅವರಿಗೆ ಕೆಲಸ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಒಬ್ಬ ಗುತ್ತಿಗೆದಾರನಿಗೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಪಿ ಹೊಡೆದು ಸಿಕ್ಕಿಬಿದ್ದ ವಿದ್ಯಾರ್ಥಿ- 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಯಾವ ಜಿಲ್ಲೆಯಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಅವರು ನನ್ನ ಕ್ಷೇತ್ರಕ್ಕೆ ಬಂದರೂ ಬಿಟ್ಟುಕೊಡಲು ಸಿದ್ಧ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ಇಂದು ಚಾಮರಾಜನಗರದ ನಗರಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ನಾಯಕರೊಬ್ಬರು ನನ್ನ ಕ್ಷೇತ್ರಕ್ಕೆ ಬಂದರೆ ಅದು ಸೌಭಾಗ್ಯವೇ ಸರಿ. ಹೀಗಾಗಿ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದರು. ಇದನ್ನೂ ಓದಿ: ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್
ಬಾದಾಮಿಯಲ್ಲಿ ಮತ್ತೆ ಸ್ಪರ್ಧಿಸಲು ಚಿಮ್ಮನಕಟ್ಟಿ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ನೀಲ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ ನಮ್ಮ ಕ್ಷೇತ್ರಕ್ಕೆ ಬಂದರೆ ಬಿಟ್ಟುಕೊಡಲು ಸಿದ್ಧವಿದ್ದು, ಚಾಮರಾಜನಗರ ಕ್ಷೇತ್ರ ಮತ್ತಷ್ಟು ಅಭಿವೃದ್ದಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಯುವ ಮುಖಂಡನನ್ನು ಚಾಕುವಿನಿಂದ ಇರಿದು ಕೊಂದ್ರು!
ಚಾಮರಾಜನಗರ: ಮಾಜಿ ಸಚಿವ ಮುರುಗೇಶ್ ನಿರಾಣಿಯಂತವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದ ಮುಂದಿನ ಸಿಎಂ ಯಾರಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದರು. ಯಡಿಯೂರಪ್ಪ ಚಾಮರಾಜನಗರಕ್ಕೆ ಬಾರದೆ ಅಧಿಕಾರ ಕಳೆದುಕೊಂಡಿದ್ದಾರೆ. ಬಂದಿದ್ದರೆ ಅಧಿಕಾರದಲ್ಲಿಯೇ ಉಳಿಯುತ್ತಿದ್ದರು. ಕೆಲ ದಿನಗಳ ಹಿಂದೆ ನಿರಾಣಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಹೀಗಾಗಿ ಅವರಿಗೆ ಚಾಮರಾಜೇಶ್ವರನ ಕೃಪೆ ಇದೆ ಎಂದರು. ಇದನ್ನೂ ಓದಿ: ಬಿಜೆಪಿಯ ಅದೃಷ್ಟದ ಹೋಟೆಲ್‍ನಲ್ಲಿ ನೂತನ ಸಿಎಂ ಆಯ್ಕೆ
ಶೆಟ್ರೆ..ನಿಮ್ಮ ಜಿಲ್ಲಾ ಉಸ್ತುವಾರಿ ಸಪ್ಪೆ, ಅವರಿಂದ ಏನೂ ಆಗುವುದಿಲ್ಲ. ನನ್ನನ್ನು ಕೇಳಿ ನಿಮಗೆ ಏನು ಬೇಕು ಮಾಡಿಕೊಡುತ್ತೇನೆ ಎಂದಿದ್ದರು. ನಿಜವಾಗಿಯೂ ನಿರಾಣಿಯಂತಹವರು ಸಿಎಂ ಆಗಬೇಕು. ಅವರು ಸಿಎಂ ಆದರೆ ಖಂಡಿತವಾಗಿಯೂ ಚಾಮರಾಜನಗರಕ್ಕೆ ಬರುತ್ತಾರೆ. ಬಂದರೆ ಹೆಚ್ಚು ಕಾಲ ಅಧಿಕಾರದಲ್ಲಿರುತ್ತಾರೆ. ಅವರನ್ನು ಚಾಮರಾಜನಗರಕ್ಕೆ ಕರೆಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ : ಯಡಿಯೂರಪ್ಪನವರ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದೆ: ಅರುಣ್ ಸಿಂಗ್