Tag: ಪುಟ್ಟೇನಹಳ್ಳಿ

  • ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ – ಆಟೋ ಚಾಲಕ ಅರೆಸ್ಟ್

    ಬೆಂಗಳೂರು: ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಚಾಲಕ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದಲ್ಲಿ (JP Nagar) ನಡೆದಿದೆ.

    ಆಟೋ ಚಾಲಕನನ್ನು ಹನುಮಂತಪ್ಪ ಹೆಚ್ ತಳವಾರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

    ಓರ್ವ ಯುವತಿ ಜೆಪಿ ನಗರದ ಏಳನೇ ಹಂತದಿಂದ ಆಟೋ ಬುಕ್ ಮಾಡಿದ್ದರು. ಆಟೋ ಲೋಕೇಶನ್‌ಗೆ ಬಂದ ತಕ್ಷಣ ಚಾಲಕ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದಿದ್ದನಂತೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಇದೀಯಾ ಎಂದು ಹಣೆ ಮುಟ್ಟಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಕೂಡಲೇ ಯುವತಿ ಆಟೋದಿಂದ ಜಿಗಿದು ಓಡಿಹೋಗಿದ್ದಾರೆ.

    ಈ ಕುರಿತು ಯುವತಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

  • ಕೆಲಸಕ್ಕೆ ಹೋಗುವಂತೆ ಬುದ್ಧಿ ಮಾತು – ಚಾಕುವಿನಿಂದ ಇರಿದು ತಾಯಿಯ ಹತ್ಯೆಗೈದ ಪಾಪಿ ಮಗ

    ಕೆಲಸಕ್ಕೆ ಹೋಗುವಂತೆ ಬುದ್ಧಿ ಮಾತು – ಚಾಕುವಿನಿಂದ ಇರಿದು ತಾಯಿಯ ಹತ್ಯೆಗೈದ ಪಾಪಿ ಮಗ

    ಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ಧಿ ಮಾತು ಹೇಳಿದ್ದಕ್ಕೆ ಚಾಕುವಿನಿಂದ ಇರಿದು ತಾಯಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿಯ (Puttenahalli) ಶ್ರೀಕಂಠೇಶ್ವರ ಲೇಔಟ್‌ನಲ್ಲಿ ನಡೆದಿದೆ.

    ಮೃತ ತಾಯಿಯನ್ನು ಆಯೇಷಾ (50) ಎಂದು ಹಾಗೂ ಆರೋಪಿಯನ್ನು ಶುಫಿಯಾನ್ (32) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆ ಹರಟೆ-ನಾಗಭೂಷಣ್ ಸಿನಿಮಾ ಹಾಡಿಗೆ‌ ಧ್ವನಿಯಾದ ಜಗ್ಗೇಶ್‌

    ಇಂದು (ನ.8) ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದೆ. ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದ ಮಗನಿಗೆ ಕೆಲಸಕ್ಕೆ ಹೋಗುವಂತೆ ತಾಯಿ ಬುದ್ಧಿ ಮಾತು ಹೇಳಿದ್ದಾರೆ. ಈ ವೇಳೆ ತಾಯಿ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಗಲಾಟೆಯಾಗುವಾಗ ಮನೆಯಲ್ಲಿದ್ದ ಚಾಕುವಿನಿಂದ ಇರಿದು ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

    ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Kodagu | ದೇವಾಲಯಕ್ಕೂ ಹಬ್ಬಿದ ವಕ್ಫ್‌ ಭೂತ – ವನದುರ್ಗ, ಗುಳಿಗ ದೈವಾರಾಧನೆ ನಡೆಯುವ 11 ಎಕ್ರೆ ಜಾಗ ವಕ್ಫ್‌ ಆಸ್ತಿ!

  • ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ ಬರೆದದ್ದು ಚಿತ್ರರಂಗದವರೆ : ಸುದೀಪ್

    ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ ಬರೆದದ್ದು ಚಿತ್ರರಂಗದವರೆ : ಸುದೀಪ್

    ಮ್ಮ ಮನೆಯ ವಿಳಾಸಕ್ಕೆ ಖಾಸಗಿ ವಿಡಿಯೋ ಲೀಕ್ (Video Leak) ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಬೇರೆ ಯಾರೂ ಅಲ್ಲ, ಅವರು ಸಿನಿಮಾ ರಂಗದವರೇ ಆಗಿದ್ದಾರೆ ಎಂದು ಕಿಚ್ಚ ಸುದೀಪ್  (Sudeep) ತಿಳಿಸಿದ್ದಾರೆ.  ಅಲ್ಲದೇ, ಅವರು ಯಾರು ಅಂತಾನೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸಲಾಗುವುದು ಎಂದು ಸುದೀಪ್ ತಿಳಿಸಿದ್ದಾರೆ. ಯಾವುದರ ಮೂಲಕ ಅವರಿಗೆ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಹಾಗೆಯೇ ಕೊಡುತ್ತೇನೆ ಎಂದು ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದರು.

    ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಮಾರ್ಚ್ 29 ರಂದೇ ಆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದರು. ಇದನ್ನೂ ಓದಿ: ‘ಕಿರಿಕ್ ಪಾರ್ಟಿ’ ರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ

    ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ  ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ  ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

    ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.  ಅಲ್ಲದೇ ಕೇಸ್ ಅನ್ನು ಸಿಸಿಬಿ ವರ್ಗಾಯಿಸಿ ತನಿಖೆ ನಡೆಸುತ್ತಿದ್ದಾರೆ.

  • ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ : ದೂರು ದಾಖಲು

    ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ : ದೂರು ದಾಖಲು

    ಸ್ಯಾಂಡಲ್ ವುಡ್ ಹೆಸರಾಂತ ನಟ ಕಿಚ್ಚ ಸುದೀಪ್ (Sudeep) ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ (Video Leak)  ಮಾಡುವುದಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ.

    ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ  ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ  ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಹೊಸ ಸಂಬಂಧದ ಬಗ್ಗೆ ನಾನೇನು ಮಾತನಾಡಲೇ ಇಲ್ಲ: ಸಮಂತಾ ಸ್ಪಷ್ಟನೆ

    ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸುದೀಪ್ ಅವರು ಬಿಜೆಪಿಗೆ ಸೇರುತ್ತಿದ್ದಾರೆ ಎನ್ನುವ ಸುದ್ದಿಯ ಜೊತೆಗೆ ಈ ಪತ್ರ ಕೂಡ ಸಾಕಷ್ಟು ಸಂಚಲನವುಂಟು ಮಾಡಿದೆ. ಈ ಪತ್ರ ಬಂದಿರುವುದು ಎಲ್ಲಿಂದ? ಬರೆದವರು ಯಾರು ಎನ್ನುವುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯನ್ನೂ ನಡೆಸುತ್ತಿದ್ದಾರೆ.

  • ಚೀಲ, ಬೆಡ್‍ಶೀಟ್‍ನಲ್ಲಿ ಸುತ್ತಿದ ರೀತಿಯಲ್ಲಿ ವೃದ್ಧನ ಮೃತದೇಹ ಪತ್ತೆ

    ಚೀಲ, ಬೆಡ್‍ಶೀಟ್‍ನಲ್ಲಿ ಸುತ್ತಿದ ರೀತಿಯಲ್ಲಿ ವೃದ್ಧನ ಮೃತದೇಹ ಪತ್ತೆ

    ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹ ಪತ್ತೆ ಆಗಿದೆ.

    ಜೆಪಿ ನಗರದ 6ನೇ ಹಂತದ ಸಮೀಪ ಮೃತದೇಹ ಪತ್ತೆ ಆಗಿದ್ದು, 67 ವರ್ಷದ ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿದೆ. ಮಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

    ಇದೇ ನವೆಂಬರ್ 16ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ (Badminton) ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣಿಯನ್ ಸಂಜೆ 4.55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ರು. ಬಳಿಕ ಕರೆ ಮಾಡಿದ್ರೆ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ರು. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕನನ್ನು ಹೊರಗೆ ತಳ್ಳಿದ ಟಿಟಿಇ – ಕಾಲು ಕಳೆದುಕೊಂಡ ವ್ಯಕ್ತಿ ಸ್ಥಿತಿ ಗಂಭೀರ

    ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಮೃತ ವೃದ್ಧನ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜೊತೆಗೆ ಸಂಪರ್ಕ ಇರುವುದು ಬಯಲಾಗಿದೆ. ಸಾರಕ್ಕಿ ಸಿಗ್ನಲ್ ಬಳಿ ಲಾಸ್ಟ್ ಲೊಕೇಶನ್ ಇದೆ. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಬಿದ್ದಿದೆ.

    ಈ ಸಂಬಂಧ ಪುಟ್ಟೇನಹಳ್ಳಿ ಠಾಣೆ (Puttenahalli Station) ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಳ್ಳತನಕ್ಕೆ ಬಂದವ ಕಿಟಕಿಯಲ್ಲಿಯೇ ಲಾಕ್!

    ಕಳ್ಳತನಕ್ಕೆ ಬಂದವ ಕಿಟಕಿಯಲ್ಲಿಯೇ ಲಾಕ್!

    ಬೆಂಗಳೂರು: ಕಳ್ಳತನಕ್ಕೆ ಬಂದವ ಕಿಟಕಿಯಲ್ಲಿ ಲಾಕ್ ಆಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 24ನೇ ಮುಖ್ಯ ರಸ್ತೆಯ ನಾರಾಯಣ ಶಾಲೆ ಬಳಿ ನಡೆದಿದೆ.

    ಇಂದು ಬೆಳಗ್ಗೆ ವ್ಯಕ್ತಿಯೋರ್ವ ಮನೆಯೊಂದರ ಬಳಿ ಕಿಟಕಿಯಲ್ಲಿ ಅನುಮಾನಾಸ್ಪದವಾಗಿ ಇಣುಕಿ ನೋಡುತ್ತಿದ್ದನು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ವ್ಯಕ್ತಿಯ ಕೈಗಳನ್ನು ಮನೆಯೊಳಗೆ ಎಳೆದುಕೊಂಡು ಕಟ್ಟಿ ಹಾಕಿದ್ದಾರೆ. ಕೂಡಲೇ ಮನೆಯವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಕಟ್ಟಿ ಹಾಕುತ್ತಿದ್ದಂತೆ ನನ್ನನ್ನು ಯಾರೋ ಹಿಂಬಾಲಿಸಿಕೊಂಡು ಬಂದರು. ಹಾಗಾಗಿ ಕಿಟಕಿ ಹತ್ತುತ್ತಿದ್ದೇನೆ ಎಂದು ಹೇಳಿದ್ದಾನೆ. ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದಾನೆ. ಕಿಟಕಿಯಲ್ಲಿ ಕಟ್ಟಿ ಹಾಕಿದ್ದರಿಂದ ಸ್ಥಳಕ್ಕೆ ಆಗ್ನಿಶಾಮಕದಳದ ಸಿಬ್ಬಂದಿ ಆತನನ್ನು ಕೆಳಗಿಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.