Tag: ಪುಣೆ

  • ಜೀಪ್ ಡಿಕ್ಕಿಯಾಗಿ 20 ಮಂದಿ ಪಾದಯಾತ್ರಿಗಳು ಗಂಭೀರ

    ಜೀಪ್ ಡಿಕ್ಕಿಯಾಗಿ 20 ಮಂದಿ ಪಾದಯಾತ್ರಿಗಳು ಗಂಭೀರ

    ಮುಂಬೈ: ಪಾದಯಾತ್ರೆ ವೇಳೆ ಯಾತ್ರಾರ್ಥಿಗಳಿಗೆ ಜೀಪ್ ಡಿಕ್ಕಿಯಾಗಿ ಗಂಭೀರವಾಗಿರುವ ಘಟನೆ ಪುಣೆಯ ವಡಗಾವ್ ಮಾವೆಲ್ ಪ್ರದೇಶದಲ್ಲಿ ಮುಂಜಾನೆ ಸಂಭವಿಸಿದೆ.

    ಆಳಂದಿಯಲ್ಲಿರುವ ವಿಠ್ಠಲನ ದರ್ಶನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಗುಂಪಿಗೆ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತು ಮಂದಿ ಯಾತ್ರಾರ್ಥಿಗಳು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ. ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    POLICE JEEP

    ಪುಣೆಯಿಂದ ಇಪ್ಪತೈದು ಕಿಲೋಮೀಟರ್ ದೂರದಲ್ಲಿರುವ ಆಳಂದಿ ವಿಠ್ಠಲ ದೇವಸ್ಥಾನಕ್ಕೆ ಭಕ್ತರ ತಂಡವೊಂದು ಪಾದಯಾತ್ರೆಯ ಮೂಲಕ ತೆರಳುತ್ತಿತ್ತು. ಈ ವೇಳೆ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ಯಾತ್ರಾರ್ಥಿಗಳ ಗುಂಪಿಗೆ ಹಿಂದಿನಿಂದ ಬಂದ ಜೀಪೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವಡ್ಗಾಂವ್ ಮಾವಲ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ

  • ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಮುಂಬೈ: ಪುಣೆಯ ಬೀದಿಗಳಲ್ಲಿ ವೃದ್ಧೆಯೊಬ್ಬರು ಜೀವನ ನಡೆಸಲು ಪೆನ್ನುಗಳನ್ನು ಮಾರಾಟ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನ ಗೆಲ್ಲುತ್ತಿದೆ.

    ಈ ಫೋಟೋವನ್ನು ಶಿಖಾ ರಾಠಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ರತನ್ ಜೀವನ ನಡೆಸುವುದಕ್ಕಾಗಿ ಪುಣೆಯ ಎಂಜಿ ರಸ್ತೆಯಲ್ಲಿ ಪೆನ್ನುಗಳನ್ನು ಮಾರಾಟ ಮಾಡುತ್ತಾರೆ. ಭಿಕ್ಷೆ ಬೇಡುವುದನ್ನು ನಿರಾಕರಿಸಿ ತನ್ನ ಜೀವನವನ್ನು ಗೌರವ ಹಾಗೂ ಸ್ವಾವಲಂಬಿಯಾಗಿ ನಡೆಸಲು ವಿವಿಧ ರೀತಿಯ ಬಣ್ಣ, ಬಣ್ಣದ ಪೆನ್ನುಗಳನ್ನು ಬಾಕ್ಸ್‌ನಲ್ಲಿ ಹಿಡಿದುಕೊಂಡು ನಗುಮುಖದಿ ಮಾರಾಟ ಮಾಡುತ್ತಿರುವ ಫೋಟೋವನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಕತ್ರಿನಾ ಜೊತೆಗಿನ ಎಂಗೇಜ್‍ಮೆಂಟ್ ಬಗ್ಗೆ ಸುಳಿವು ಕೊಟ್ರಾ ವಿಕ್ಕಿ ಕೌಶಲ್ ?

    ಜೊತೆಗೆ, ಬಾಕ್ಸ್ ಮೇಲೆ ನಾನು ಭಿಕ್ಷೆ ಬೇಡುವುದಿಲ್ಲ. ದಯವಿಟ್ಟು 10ರೂ.ಗೆ ನೀಲಿ ಬಣ್ಣದ ಪೆನ್ನನ್ನು ಖರೀದಿಸಿ, ಆಶೀರ್ವಾದಿಸಿ, ಧನ್ಯವಾದ ಎಂದು ಬರೆದಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ:  ಮಹಾಮಳೆಯ ಭೂಕುಸಿತಕ್ಕೆ ತತ್ತರಿಸಿದ ದೇವರ ನಾಡು – ಅವಶೇಷಗಳಡಿ 26 ಶವ ಪತ್ತೆ

     

    View this post on Instagram

     

    A post shared by Shikha Rathi (@sr1708)

    ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಇಂದು ನಾನು ಜೀವನದ ನಿಜವಾದ ನಾಯಕಿ ಹಾಗೂ ಚಾಂಪಿಯನ್ ರತನ್ ಅವರನ್ನು ನೋಡಿದೆ. ಇವರನ್ನು ನನ್ನ ಸ್ನೇಹಿರೊಂದಿಗೆ ಹೊರ ಹೋಗಿದ್ದಾಗ ಭೇಟಿಯಾದೆ. ಈ ವೇಳೆ ಬಾಕ್ಸ್ ಮೇಲೆ ಬರೆದಿರುವುದನ್ನು ಓದಿ ನನ್ನ ಸ್ನೇಹಿತರು ಪೆನ್ನನ್ನು ಖರೀದಿ ಮಾಡಿದರು. ಆಗ ರತನ್ ಬಹಳ ಸಂತೋಷಗೊಂಡು ನಗುಮುಖದಿ ಧನ್ಯವಾದ ತಿಳಿಸಿದರು. ಈ ವೇಳೆ ಅವರ ಮುಖದಲ್ಲಿ ಮಂದಹಾಸ, ಕೃತಜ್ಞತೆ ಹಾಗೂ ದಯೆ ಎದ್ದು ಕಾಣುತ್ತಿತ್ತು. ನಮಗೆ ಮತ್ತಷ್ಟು ಪೆನ್ನು ಖರೀದಿಸಬೇಕು ಎನಿಸಿತು. ಅವರ ವರ್ತನೆ ಮತ್ತು ಅವರ ಸಿಹಿಯಾದ ನಗು, ಸ್ವಾಭಿಮಾನ ನನಗೆ ಮತ್ತಷ್ಟು ಪೆನ್ನು ಖರೀದಿಸುವಂತೆ ಮಾಡಿತು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಎಂ.ಜಿ ರಸ್ತೆಗೆ ಯಾರಾದರೂ ಹೋದಾಗ ಈ ವೃದ್ಧೆಯಿಂದ ಮತ್ತಷ್ಟು ಪೆನ್ನುಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.

  • 16 ಕೆ.ಜಿ ಚಿನ್ನದ ಸೀರೆ ಉಡಿಸಿ ಮಹಾಲಕ್ಷ್ಮಿ ದೇವಿಗೆ ಅಲಂಕಾರ

    16 ಕೆ.ಜಿ ಚಿನ್ನದ ಸೀರೆ ಉಡಿಸಿ ಮಹಾಲಕ್ಷ್ಮಿ ದೇವಿಗೆ ಅಲಂಕಾರ

    ಮುಂಬೈ: ನವರಾತ್ರಿ ಹಬ್ಬದಲ್ಲಿ ದುರ್ಗಾ ಪೂಜೆಯ ಕೊನೆಯ ದಿನವನ್ನು ವಿಜಯದಶಮಿ ಎಂದು ಕರೆಯಲಾಗುತ್ತದೆ.

    ಈ ದಿನ ಕೆಟ್ಟದ್ದರ ವಿರುದ್ಧ ಒಳ್ಳೆಯದು ವಿಜಯ ಸಾಧಿಸುವುದನ್ನು ಸೂಚಿಸುತ್ತದೆ. ದೇಶಾದ್ಯಂತ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ ಮತ್ತು ರಾವಣ, ಮೇಘನಾಥ ಮತ್ತು ಕುಂಭಕರ್ಣನ ಪ್ರತಿಕೃತಿಗಳನ್ನು ಸುಡಲಾಗುತ್ತದೆ.  ಇದನ್ನೂ ಓದಿ: ಜನಸಂಖ್ಯಾ ಅಸಮತೋಲನ ತಡೆಗೆ ಹೊಸ ನೀತಿ ಜಾರಿಗೊಳಿಸಬೇಕು: ಮೋಹನ್ ಭಾಗವತ್

    Gold Saree

    ದಸರಾದ ಈ ಶುಭ ಸಂದರ್ಭದಲ್ಲಿ, ಪುಣೆಯ ಸರಸ್‍ಬಾಗ್‍ನ ಮುಂಭಾಗದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನವು ಭಾರೀ ಸದ್ದು ಮಾಡುತ್ತಿದೆ. ಏಕೆಂದರೆ ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ದೇವಸ್ಥಾನದಲ್ಲಿರುವ ಮಹಾಲಕ್ಷ್ಮಿ ದೇವಿ ವಿಗ್ರಹಕ್ಕೆ 16 ಕೆಜಿ ಚಿನ್ನದ ಸೀರೆಯನ್ನು ಉಡಿಸಲಾಗುತ್ತದೆ. ಹೌದು, 2011 ರಲ್ಲಿ ಭಕ್ತರೊಬ್ಬರು ದೇವಸ್ಥಾನದ ಟ್ರಸ್ಟಿಗೆ ಈ ಚಿನ್ನದ ಸೀರೆಯನ್ನು ದಾನ ಮಾಡಿದ್ದು, ಅದನ್ನು ದಕ್ಷಿಣ ಭಾರತದಲ್ಲಿ ಚಿನ್ನದ ಕೆಲಸಗಾರರಿಂದ ತಯಾರಿಸಲಾಗಿದೆ ಎಂದು ತಿಳಿಸಿದ್ದಾರೆ. ಭಕ್ತ ಈ ಸೀರೆಯನ್ನು ದೇವಿಗೆ ಕಾಣಿಕೆಯಾಗಿ ಕೊಟ್ಟಿದ್ದಾರೆ.

    Gold Saree

    ಪ್ರತಿವರ್ಷ ನವರಾತ್ರಿ ಮತ್ತು ದೀಪಾವಳಿಯ ಶುಭ ದಿನಗಳಲ್ಲಿ ಮಹಾಲಕ್ಷ್ಮಿ ದೇವಿಯನ್ನು ಚಿನ್ನದ ಆಭರಣ ಮತ್ತು ಸೀರೆಯಿಂದ ಅಲಂಕರಿಸಲಾಗುತ್ತದೆ. ದೇವಿಯು ಧರಿಸಿದ ಸೀರೆಯ ತೂಕವು 16 ಕೆಜಿಯಷ್ಟು ಭಾರವಿದೆ. ದೇವಸ್ಥಾನವು ಕಟ್ಟುನಿಟ್ಟಾದ ನಿಯಮಗಳನ್ನು ಅನುಸರಿಸುತ್ತಿದ್ದು, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಜನದಟ್ಟಣೆಯ ಸಮಸ್ಯೆಯ ಬಗ್ಗೆ ಸರಿಯಾದ ಕಾಳಜಿ ವಹಿಸಲಾಗಿದೆ.  ಇದನ್ನೂ ಓದಿ:  ಭಯ ಹುಟ್ಟಿಸಲು ಉಗ್ರರು ಹತ್ಯೆಯನ್ನು ಗುರಿಯಾಗಿಸಿಕೊಂಡಿದ್ದಾರೆ: ಮೋಹನ್ ಭಾಗವತ್

    ಭವ್ಯವಾದ ಮೂರ್ತಿಯ ದರ್ಶನಕ್ಕಾಗಿ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇದಲ್ಲದೆ, ಮಹಾಲಕ್ಷ್ಮಿ ದೇವಾಲಯದ ದೀಪಾಲಂಕಾರ ಕೂಡ ಅದ್ಭುತವಾಗಿದೆ.

  • ನಡು ರಸ್ತೆಯಲ್ಲೇ ಪ್ರಿಯತಮೆ ಕೊಂದ ಪ್ರೇಮಿ

    ನಡು ರಸ್ತೆಯಲ್ಲೇ ಪ್ರಿಯತಮೆ ಕೊಂದ ಪ್ರೇಮಿ

    ಪುಣೆ: ನಡು ರಸ್ತೆಯಲ್ಲಿಯೇ ತನ್ನ ಪ್ರೇಯಸಿಯನ್ನು ಪ್ರಿಯಕರ ಕೊಲೆ ಮಾಡಿ ಹೋಗಿರುವ ಘಟನೆ ಪುಣೆಯಲ್ಲಿ ನಡೆದಿದೆ.

    14 ವರ್ಷದ ಅಪ್ರಾಪ್ತ ಬಾಲಕಿ ಮೃತಳಾಗಿದ್ದಾಳೆ. ಪುಣೆಯ ಬಿಬ್ವೆವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಸಂಭಂಧ 22 ವರ್ಷದ ರಿಷಿಕೇಶ್ ಭಾಗ್ವತ್‍ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

     

    ಸಂತ್ರಸ್ಥ ಬಾಲಕಿ ತನ್ನ ಸ್ನೇಹಿತರೊಂದಿಗೆ ಬರುತ್ತಿದ್ದ ವೇಳೆ ರಿಷಿಕೇಶ್ ಭಾಗ್ವತ್ ಆಕೆಯನ್ನು ರಸ್ತೆ ಮಧ್ಯೆ ತಡೆದು ಮಾತನಾಡಿದ್ದಾನೆ. ಈ ವೇಳೆ ಆಕೆಯೊಂದಿಗೆ ಇದ್ದ ಸ್ನೇಹಿತೆಯರನ್ನು ಬೆದರಿಸಿ ಓಡಿಸಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಆಕೆಯ ಮೇಲೆ ರಿಷಿಕೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಬಾಲಕಿ ರಸ್ತೆಯಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ:  ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ರಿಷಿಕೇಶ್ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆದರೆ ಬಾಲಕಿ ಆತನನ್ನು ಪ್ರೀತಿಸುತ್ತಿರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಆಕೆಯನ್ನು ಒತ್ತಾಯಿಸುತ್ತಿದ್ದ. ಆಕೆ ಮಾತ್ರ ಒಪ್ಪಿರಲಿಲ್ಲ. ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಬಾಲಕಿ ಕುಟುಂಬಸ್ಥರು ಹೇಳಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನೊಂದಿಗೆ ಇದ್ದ ಸ್ನೇಹಿತರನ್ನು ವಶಕ್ಕೆ ಪಡೆಯುತ್ತೇವೆ ಎಂದು ಪುಣೆಯ ಡಿಸಿಪಿ ನಮ್ರತಾ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

  • ಮಹಾರಾಷ್ಟ್ರಕ್ಕೆ ಎಂಟ್ರಿ ಕೊಟ್ಟ ಜಿಕಾ ವೈರಸ್ – ಪುಣೆಯ ಮಹಿಳೆಯಲ್ಲಿ ಸೋಂಕು ಪತ್ತೆ

    ಮಹಾರಾಷ್ಟ್ರಕ್ಕೆ ಎಂಟ್ರಿ ಕೊಟ್ಟ ಜಿಕಾ ವೈರಸ್ – ಪುಣೆಯ ಮಹಿಳೆಯಲ್ಲಿ ಸೋಂಕು ಪತ್ತೆ

    ಮುಂಬೈ: ಮಹಾರಾಷ್ಟ್ರದ ಪುಣೆಯ 50 ವರ್ಷದ ಮಹಿಳೆ ಜಿಕಾ ವೈರಸ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಹಿಳೆ ಪುಣೆ ಜಿಲ್ಲೆಯ ಪುರಂದರ ತೆಹ್‍ಸಿಲ್ ನ ಬೆಲಸರ್ ನಿವಾಸಿಯಾಗಿದ್ದಾರೆ. ಇದು ಮಹಾರಾಷ್ಟ್ರದಲ್ಲಿ ಕಂಡು ಬಂದ ಮೊದಲ ಜಿಕಾ ವೈರಸ್ ಪ್ರಕರಣ ಎಂದು ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.

    ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಕುಟುಂಬಸ್ಥರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಅನಾರೋಗ್ಯ ಹಿನ್ನೆಲೆ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿನ ಜಿಕಾ ವೈರಸ್ ಸೋಂಕು ತಗುಲಿರೋದು ತಿಳಿದು ಬಂದಿದೆ.

    ಇನ್ನೂ ಮಹಿಳೆ ಸೋಂಕಿಗೆ ತುತ್ತಾಗಿರುವ ವಿಷಯ ತಿಳಿಯುತ್ತಲೇ ಆರೋಗ್ಯಾಧಿಕಾರಿಗಳು ಬೆಲಸರ್ ಗ್ರಾಮಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ, ಗ್ರಾಮಸ್ಥರು ಆರೋಗ್ಯದ ಮಾಹಿತಿ ಕಲೆಹಾಕುತ್ತಿದ್ದಾರೆ. ಗ್ರಾಮದ ಮುಖಂಡರ ಜೊತೆ ಮಾತುಕತೆ ನಡೆಸಿ, ಎಲ್ಲರೂ ಎಚ್ಚರಿಕೆಯಿಂದಿರಬೇಕು. ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಆರೋಗ್ಯಾಧಿಕಾರಿಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಜಿಕಾ ವೈರಸ್ ಲಸಿಕೆಗೆ ಪೇಟೆಂಟ್ ಸಿಕ್ಕಿದ ವಿಶ್ವದ ಮೊದಲ ಕಂಪನಿ ನಮ್ಮದು – ಭಾರತ್ ಬಯೋಟೆಕ್

  • ವರುಣಾರ್ಭಟಕ್ಕೆ ಮೃತಪಟ್ಟ 138 ಮಂದಿಯ ಕುಟುಂಬಕ್ಕೆ 2 ಲಕ್ಷ ಪರಿಹಾರ

    ವರುಣಾರ್ಭಟಕ್ಕೆ ಮೃತಪಟ್ಟ 138 ಮಂದಿಯ ಕುಟುಂಬಕ್ಕೆ 2 ಲಕ್ಷ ಪರಿಹಾರ

    – ಗಾಯಗೊಂಡವರಿಗೆ 50 ಸಾವಿರ ರೂ.

    ಮುಂಬೈ: ಭಾರೀ ಮಳೆಯಿಂದಾಗಿ 138 ಮಂದಿ ಸಾವನ್ನಪ್ಪಿದ್ದು, 90 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಥಾಣೆ, ಪುಣೆ, ರಾಯಘಡ ಮುಂತಾದ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಮತ್ತು ಭೂಕುಸಿತದಿಂದ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಸತಾರ ಜಿಲ್ಲೆಯಲ್ಲಿ ಮಳೆಯಿಂದ 27 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

     

    ಮಳೆಗೆ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಫೋನ್ ಮಾಡಿರುವ ರಾಷ್ಟ್ರಪತಿ ಕೋವಿಂದ್ ಮಹಾರಾಷ್ಟ್ರದ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ:  ರಣ ಮಳೆಗೆ ಮಹಾರಾಷ್ಟ್ರದಲ್ಲಿ 100 ಮಂದಿ ಬಲಿ- 1,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ

    ಮಹಾರಾಷ್ಟ್ರದ ರಾಯಘಡದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಗಳ ಕಚೇರಿ ಘೋಷಿಸಿದೆ. ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

  • ಕೊರೊನಾದಿಂದ ತಂದೆ ಸಾವನ್ನಪ್ಪಿದ್ರೂ ಕರ್ತವ್ಯಕ್ಕೆ ಹಾಜರಾದ ವೈದ್ಯ

    ಕೊರೊನಾದಿಂದ ತಂದೆ ಸಾವನ್ನಪ್ಪಿದ್ರೂ ಕರ್ತವ್ಯಕ್ಕೆ ಹಾಜರಾದ ವೈದ್ಯ

    ಪುಣೆ: ವೈದ್ಯರೊಬ್ಬರು ತಮ್ಮ ಕುಟುಂಬಸ್ಥರೇ ಸಂಕಷ್ಟದಲ್ಲಿರೂವಾಗಲೂ ಕೆಲಸ ಮಾಡುತ್ತಾ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯನಿಷ್ಠೆ ಮೆರೆದಿದ್ದಾರೆ.

    ಮಹಾರಾಷ್ಟ್ರದ ಪುಣೆಯಲ್ಲಿನ ಸಂಜೀವನ್ ಆಸ್ಪತ್ರೆಯ ನಿರ್ದೇಶಕರಾದ ಡಾ.ಮುಕುಂದ್ ಅವರ ತಂದೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇವರ ತಾಯಿ ಮತ್ತು ಅಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಂತ ಮುಕುಂದ್ ಅವರು ತಮ್ಮ ಕೆಲಸಕ್ಕೆ ಗೈರಾಗಿಲ್ಲ. ತಮ್ಮವರು ಹಾಸಿಗೆ ಹಿಡಿದಿದ್ದರು ಬೇರೆ ರೋಗಿಗಳಿಗೆ ತೊಂದರೆಯಾಗಬಾರದು ಎಂದು ತಮ್ಮ ಕೆಲಸದಲ್ಲಿ ಮುಕುಂದ ತೊಡಗಿಕೊಂಡಿದ್ದಾರೆ.

    ಪರಿಸ್ಥಿತಿ ತುಂಬಾ ಕಠಿಣವಾಗಿದೆ. ನಾವು ರೆಸ್ಟ್ ಮಾಡುತ್ತಾ ಕುಳಿತರೆ ರೋಗಿಗಳ ಸಂಕಷ್ಟ ನೋಡಲು ಆಗಲ್ಲ ಎಂದು ವೈದ್ಯ ಮುಕುಂದ್ ಅವರು ಹೇಳಿದ್ದಾರೆ. ವೈದ್ಯ ಮುಕುಂದ್ ಅವರ ಕರ್ತವ್ಯ ನಿಷ್ಠೆಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನೀವೇ ನಿಜವಾದ ಹೀರೋ ನಿಮಗೊಂದು ಸೆಲ್ಯೂಟ್ ಎಂದು ಕಮೇಂಟ್ ಮಾಡಿ ಧನ್ಯವಾದ ತಿಳಿಸುತ್ತಿದ್ದಾರೆ.

  • ಕೋವಿಶೀಲ್ಡ್ ದರ ಇಳಿಕೆ ಮಾಡಿದ ಸೀರಂ ಇನ್‍ಸ್ಟಿಟ್ಯೂಟ್

    ಕೋವಿಶೀಲ್ಡ್ ದರ ಇಳಿಕೆ ಮಾಡಿದ ಸೀರಂ ಇನ್‍ಸ್ಟಿಟ್ಯೂಟ್

    ಪುಣೆ: ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿದ ಸೀರಂ ಇನ್‍ಸ್ಟಿಟ್ಯೂಟ್ ಕೋವಿಶೀಲ್ಡ್ ದರವನ್ನು ಇಳಿಕೆ ಮಾಡಿದೆ. ರಾಜ್ಯಗಳಿಗೆ ಈ ಹಿಂದೆ ನಿಗದಿ ಮಾಡಿದ್ದ 400 ರೂಪಾಯಿ ದರವನ್ನು 300 ರೂ.ಗಳಿಗೆ ಇಳಿಕೆ ಮಾಡಲಾಗಿದೆ.

    ಕೋವಿಶೀಲ್ಡ್ ಲಸಿಕೆಗೆ ಈ ಹಿಂದೆ 400 ರೂಪಾಯಿ ನಿಗದಿಯಾಗಿತ್ತು. ಇದೀಗ 100 ರೂಪಾಯಿ ಕಡಿತ ಮಾಡಿ 300 ರೂಪಾಯಿ ದರ ನಿಗದಿ ಪಡಿಸಿದೆ. ಇದರೊಂದಿಗೆ ಕೋವ್ಯಾಕ್ಸಿನ್ ದರವೂ ಇಳಿಕೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ, ರಾಜ್ಯದಲ್ಲಿ ಸೋಂಕು ಹೆಚ್ಚಾದಂತೆ ವ್ಯಾಕ್ಸಿನ್‍ಗೆ ಬೇಡಿಕೆ ಹೆಚ್ಚಾಗಿದೆ. ಜನತೆ ವ್ಯಾಕ್ಸಿನ್ ಪಡೆಯಲು ಮುಗಿಬೀಳುತ್ತಿದ್ದಾರೆ.

    ಈ ಕುರಿತು ಟ್ವಿಟ್ಟರ್ ಮೂಲಕ ತಿಳಿಸಿರುವ ಸೀರಂ ಇನ್‍ಸ್ಟಿಟ್ಯೂಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ, ಲೋಕೋಪಾಕಾರಿಯಾಗಿ ಗುರುತಿಸಿ ಕೊಂಡಿರುವ ಸೀರಂ ಇನ್‍ಸ್ಟಿಟ್ಯೂಟ್ ಲಸಿಕೆಯ ದರವನ್ನು ರಾಜ್ಯಗಳಿಗೆ ಈ ಹಿಂದೆ ನಿಗದಿ ಮಾಡಿದ್ದ 400 ರೂಪಾಯಿ ದರವನ್ನು 300 ರೂ.ಗಳಿಗೆ ಇಳಿಕೆ ಮಾಡಿದೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ರಾಜ್ಯಗಳ ಹಣ ಉಳಿಕೆಯಾಲಿದೆ. ಹಾಗೆ ಹೆಚ್ಚು ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೋತ್ಸಾಹ ಸಿಗಲಿದೆ ಮತ್ತು ಹಲವು ಜನರ ಪ್ರಾಣ ಉಳಿಯಲಿದೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

    ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಫಾರ್ಮಾ ಪ್ರಮುಖ ಅಸ್ಟ್ರಾಜೆನಿಕಾ ಸಹಭಾಗಿತ್ವದಲ್ಲಿ ಸೀರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೋಲ್ಡ್ ಲಸಿಕೆಯನ್ನು ಅಭಿವೃದ್ದಿ ಪಡಿಸಿದ್ದು, ಈಗಾಗಲೇ ಸಾವಿರಾರು ಜನ ಲಸಿಕೆಯನ್ನು ಪಡೆದಿದ್ದಾರೆ. ಹಾಗೆ ಬೇರೆ ಬೇರೆ ದೇಶಗಳಿಗೆ ವ್ಯಾಕ್ಸಿನ್‍ನ್ನು ಕಳುಹಿಸಿ ಕೊಡಲಾಗಿದೆ.

    ಇದೀಗ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ವ್ಯಾಕ್ಸಿನ್ ಪಡೆಯಲು ಕೋವಿನ್ ಆ್ಯಪ್ ಮೂಲಕ ನೋಂದಣಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

  • ಹುಟ್ಟುಹಬ್ಬದಂದು ಫೋಟೋ ತೆಗೆಯಲು ಹೋದ 6 ಮಂದಿ ದುರ್ಮರಣ

    ಹುಟ್ಟುಹಬ್ಬದಂದು ಫೋಟೋ ತೆಗೆಯಲು ಹೋದ 6 ಮಂದಿ ದುರ್ಮರಣ

    ಪುಣೆ: ಹುಟ್ಟುಬ್ಬದಂದು ಡ್ಯಾಂ ಎದುರು ಗ್ರೂಪ್ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ 6 ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ವಲ್ದೇವಿ ಡ್ಯಾಮ್‍ನಲ್ಲಿ ನಡೆದಿದೆ.

    ಸೋನಿ ಗೇಮ್(12) ಖುಷಿ ಮಣಿಯಾರ್ (10), ಜ್ಯೋತಿ ಗೇಮ್ (16), ಹಿಮ್ಮತ್ ಚೌಧರಿ (16), ನಾಜಿಯಾ ಮಣಿಯಾರ್ (19) ಮತ್ತು ಆರತಿ ಭಲೇರಾವ್ (22) ಮೃತರಾಗಿದ್ದಾರೆ. ಸೋನಿ ಗೇಮ್ ಹುಟ್ಟುಹಬ್ಬದ ಆಚರಣೆಗೆಂದು ಹೋಗಿದ್ದರು. ಗ್ರೂಪ್ ಫೋಟೋ ಕ್ಲಿಕ್ಕಿಸುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

    ಗ್ರೂಪ್ ಫೋಟೋ ಕ್ಲಿಕ್ಕಿಸುವ ವೇಳೆ ಆಯತಪ್ಪಿ ಕೆಲವರು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ಇತರರು ಕೂಡಾ ನೀರು ಪಾಲಾಗಿದ್ದಾರೆ. ಈ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂಡದಲ್ಲಿದ್ದ ಮೂವರು ಸಾವಿನಿಂದ ಪಾರಾಗಿದ್ದಾರೆ. ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಪುಣೆಯಲ್ಲಿ 7 ದಿನಗಳ ಕಾಲ ನೈಟ್ ಕರ್ಫ್ಯೂ – ಬಾರ್, ಹೋಟೆಲ್, ಧಾರ್ಮಿಕ ಸ್ಥಳಗಳು ಬಂದ್

    ಪುಣೆಯಲ್ಲಿ 7 ದಿನಗಳ ಕಾಲ ನೈಟ್ ಕರ್ಫ್ಯೂ – ಬಾರ್, ಹೋಟೆಲ್, ಧಾರ್ಮಿಕ ಸ್ಥಳಗಳು ಬಂದ್

    ಮುಂಬೈ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಪುಣೆಯ ಬಾರ್‌ಗಳು, ಹೋಟೆಲ್‍ಗಳು ಹಾಗೂ ರೆಸ್ಟೋರೆಂಟ್‍ಗಳನ್ನು 7 ದಿನಗಳವರೆಗೂ ಮುಚ್ಚುವುದರ ಜೊತೆಗೆ ಕೆಲವು ನಿರ್ಬಂಧಗಳನ್ನು ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

    ಇದಲ್ಲದೆ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಏಪ್ರಿಲ್ 3 ರಿಂದ ಪುಣೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಜಿಲ್ಲೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಬಾರ್‍ಗಳು, ಹೋಟೆಲ್‍ಗಳನ್ನು 7 ದಿನಗಳ ಕಾಲ ಮುಚ್ಚಲಾಗಿದ್ದು, ಕೇವಲ ಹೋಂ ಡೆಲಿವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

    ಅಂತ್ಯಕ್ರಿಯೆ ಮತ್ತು ವಿವಾಹ ಸಮಾರಂಭಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಅಲ್ಲದೆ ಒಂದು ವಾರ ಧಾರ್ಮಿಕ ಸ್ಥಳಗಳನ್ನು ಕೂಡ ಸಂಪೂರ್ಣವಾಗಿ ಮುಚ್ಚಬೇಕು ಪುಣೆಯ ವಿಭಾಗೀಯ ಆಯುಕ್ತರು ತಿಳಿಸಿದ್ದಾರೆ.