Tag: ಪುಣೆ

  • ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು: ಈರಣ್ಣ ಕಡಾಡಿ

    ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು: ಈರಣ್ಣ ಕಡಾಡಿ

    ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು (Vande Bharat Train) ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ (Eranna Kadadi) ತಿಳಿಸಿದ್ದಾರೆ.

    ನವದೆಹಲಿಯಲ್ಲಿ (New Delhi) ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ (Belagavi-Pune) ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದ ನಂತರ ರೈಲ್ವೆ ಸಚಿವರು ಪುಣೆ- ಬೆಳಗಾವಿ ನಡುವೆ ವಿದ್ಯುದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತವಾಗಿ ಮಾಹಿತಿಯನ್ನು ನೀಡಿದ್ದಾರೆ ಎಂದರು. ಇದನ್ನೂ ಓದಿ: UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

    ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪ್ರಸ್ತಾವನೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಈ ವೇಳೆ ಬೆಳಗಾವಿ ಕೋರ್ ಡೆವಲಪ್‌ಮೆಂಟ್ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ್, ಸಂದೀಪ್ ಪಾಟೀಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

  • ಕೊರಿಯಾದ ವ್ಲಾಗರ್‌ ಜೊತೆ ಅಸಭ್ಯ ವರ್ತನೆ – ಬೀದರ್‌ ವ್ಯಕ್ತಿ ಅರೆಸ್ಟ್‌

    ಕೊರಿಯಾದ ವ್ಲಾಗರ್‌ ಜೊತೆ ಅಸಭ್ಯ ವರ್ತನೆ – ಬೀದರ್‌ ವ್ಯಕ್ತಿ ಅರೆಸ್ಟ್‌

    ಬೀದರ್ : ದಕ್ಷಿಣ ಕೊರಿಯಾದ ಮಹಿಳಾ ವ್ಲಾಗರ್‌ (South Korean Vlogger) ಜೊತೆ ಅಸಭ್ಯ ವರ್ತನೆ ತೋರಿದ ಬೀದರ್‌ (Bidar) ಮೂಲದ ವ್ಯಕ್ತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

    ವ್ಲಾಗರ್‌ ಕೆಲ್ಲಿ ಅವರು ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶಕ್ಕೆ ಬಂದು ಎಳನೀರಿನ ಬಗ್ಗೆ ವಿಡಿಯೋ ಶೂಟ್ ಮಾಡುತ್ತಿದ್ದರು. ಈ ವೇಳೆ ಬೀದರ್ ಮೂಲದ ಭರತ್ ಉಂಚಾಲೆ ಎಂಬಾತ ಅಸಭ್ಯ ವರ್ತನೆ ತೋರಿ ಹೆಗಲ ಮೇಲೆ ಕೈ ಹಾಕಿದ್ದಾನೆ.

    ಕೆಲ್ಲಿ ಆ ಸ್ಥಳದಿಂದ ತೆರಳಿದ ಕೆಲ್ಲಿ ವ್ಯಕ್ತಿಯ ಅಸಭ್ಯ ವರ್ತನೆಯಿಂದ ನಾನು ಇಲ್ಲಿಂದ ಓಡಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಪುಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು‌ ಭರತ್ ಉಂಚಾಲೆಯನ್ನು ಬಂಧಿಸಿದ್ದಾರೆ.

  • ಅಫ್ಘಾನ್‌ನಿಂದ ಲಂಕಾ ಭಸ್ಮ  – ಸೆಮಿಫೈನಲ್‌ ಪ್ರವೇಶಿಸುತ್ತಾ? ಲೆಕ್ಕಾಚಾರ ಹೇಗೆ?

    ಅಫ್ಘಾನ್‌ನಿಂದ ಲಂಕಾ ಭಸ್ಮ – ಸೆಮಿಫೈನಲ್‌ ಪ್ರವೇಶಿಸುತ್ತಾ? ಲೆಕ್ಕಾಚಾರ ಹೇಗೆ?

    ಪುಣೆ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಇಂಗ್ಲೆಂಡ್‌, ಪಾಕಿಸ್ತಾನವನ್ನು ಸೋಲಿಸಿದ್ದ ಅಫ್ಘಾನಿಸ್ತಾನ (Afghanistan) ಈಗ ಶ್ರೀಲಂಕಾಕ್ಕೂ (Sri Lanka) ಶಾಕ್‌ ನೀಡಿದೆ. ಲಂಕಾ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದ ಅಫ್ಘಾನ್‌ ಈಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ.

    ಟಾಸ್‌ ಸೋತು ಬ್ಯಾಟ್‌ ಆರಂಭಿಸಿದ ಶ್ರೀಲಂಕಾ 49.3 ಓವರ್‌ಗಳಲ್ಲಿ 241 ರನ್‌ಗಳಿಗೆ ಸರ್ವಪತನ ಕಂಡಿತು. 242 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ 45.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 242 ರನ್‌ ಹೊಡೆಯುವ ಮೂಲಕ ಟೂರ್ನಿಯಲ್ಲಿ ಮೂರನೇ ಜಯ ಸಾಧಿಸಿತು. ಈ ಮೂಲಕ ಸೆಮಿಫೈನಲ್‌ ಪ್ರವೇಶವನ್ನು ಜೀವಂತವಾಗಿಟ್ಟುಕೊಂಡಿದೆ.

    ಅಫ್ಘಾನ್‌ ತಂಡ ಖಾತೆ ತೆರೆಯವ ಮುನ್ನವೇ ರಹಮಾನುಲ್ಲಾ ಗುರ್ಬಾಜ್ ಔಟಾದರು. ಮೊದಲ ಓವರ್‌ನಲ್ಲಿ ಶಾಕ್‌ ಸಿಕ್ಕಿದರೂ ನಂತರ ಇಬ್ರಾಹಿಂ ಜದ್ರಾನ್ ಮತ್ತು ರಹಮತ್ ಶಾ ಎರಡನೇ ವಿಕೆಟಿಗೆ 73 ರನ್‌ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು.

    ಇಬ್ರಾಹಿಂ ಜದ್ರಾನ್ 39 ರನ್‌ (57 ಎಸೆತ, 4 ಬೌಂಡರಿ, 1 ಸಿಕ್ಸರ್‌), ರಹಮತ್ ಶಾ 62 ರನ್‌ (74 ಎಸೆತ, 7 ಬೌಂಡರಿ) ಹೊಡೆದು ಔಟಾದರು. ಮುರಿಯದ 4ನೇ ವಿಕೆಟಿಗೆ ನಾಯಕ ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ 104 ಎಸೆತಗಳಲ್ಲಿ 111 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಹಶ್ಮತುಲ್ಲಾ ಶಾಹಿದಿ 58 ರನ್‌ (74 ಎಸೆತ, 2 ಬೌಂಡರಿ, 1 ಸಿಕ್ಸರ್‌), ಅಜ್ಮತುಲ್ಲಾ 73 ರನ್‌ (63 ಎಸೆತ, 6 ಬೌಂಡರಿ, 3 ಸಿಕ್ಸರ್)‌ ಹೊಡೆದರು.

    ಲಂಕಾ ಪರ ಪಾತುಂ ನಿಸ್ಸಾಂಕ 46 ರನ್‌ (60 ಎಸೆತ, 5 ಬೌಂಡರಿ), ನಾಯಕ ಕುಸಲ್‌ ಮೆಂಡಿಸ್‌ 39 ರನ್‌ (50 ಎಸೆತ, 3 ಬೌಂಡರಿ), ಸಮರವಿಕ್ರಮ 36 ರನ್‌(40 ಎಸೆತ, 3 ಬೌಂಡರಿ) ಹೊಡೆದರೆ ಕೊನೆಯಲ್ಲಿ ಮಹೇಶ್‌ ತಿಕ್ಷಣ 29 ರನ್‌(31 ಎಸೆತ, 3 ಬೌಂಡರಿ, 1 ಸಿಕ್ಸರ್)‌ ಹೊಡೆಯುವ ಮೂಲಕ ಲಂಕದ ಸ್ಕೋರ್‌ 240 ರನ್‌ಗಳ ಗಡಿಯನ್ನು ದಾಟಿತ್ತು.  ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ಫಜಲ್ಹಕ್ ಫಾರೂಕಿ 4 ವಿಕೆಟ್‌, ಮುಜಿಬ್‌ ಉರ್‌ ರಹಮಾನ್‌ 2 ವಿಕೆಟ್‌ ಕಿತ್ತರೆ, ರಶೀದ್‌ ಖಾನ್‌ ಮತ್ತು ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಸೆಮಿಫೈನಲ್‌ ಪ್ರವೇಶಿಸುತ್ತಾ?
    ಅಫ್ಘಾನಿಸ್ತಾನಕ್ಕೆ ಇನ್ನೂ ಮೂರು ಪಂದ್ಯಗಳು ಬಾಕಿ ಇದ್ದು ಮೂರು ಪಂದ್ಯವನ್ನು ಉತ್ತಮ ನೆಟ್‌ ರನ್‌ ರೇಟ್‌ನೊಂದಿಗೆ ಗೆದ್ದರೆ ಸೆಮಿಫೈನಲ್‌ (Semi Final) ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಒಂದು ಪಂದ್ಯ ಸೋತರೂ ಬೇರೆ ತಂಡಗಳ ಫಲಿತಾಂಶದ ಮೇಲೆ ಸೆಮಿಫೈನಲ್‌ ಭವಿಷ್ಯ ನಿರ್ಧಾರವಾಗಲಿದೆ. ಆಸ್ಟ್ರೇಲಿಯಾ ನ್ಯೂಜಿಲೆಂಡ್‌ಗಳಿಗೂ ಮೂರು ಪಂದ್ಯಗಳಿವೆ. ಈ ಪೈಕಿ ಆಸ್ಟ್ರೇಲಿಯಾ ನೆಟ್‌ ರನ್ ರೇಟ್‌ ಕಡಿಮೆ ಇದೆ.

    ನ.3 ರಂದು ನೆದರ್‌ಲ್ಯಾಂರ್ಡ್ಸ್‌, ನ.7 ರಂದು ಆಸ್ಟ್ರೇಲಿಯಾ, ನ.10 ರಂದು ದಕ್ಷಿಣ ಆಫ್ರಿಕಾದ ವಿರುದ್ಧ ಅಫ್ಘಾನಿಸ್ತಾನ ಪಂದ್ಯ ಆಡಲಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರ

    ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರ

    ಮುಂಬೈ: ತರಬೇತಿ ವೇಳೆ ವಿಮಾನವೊಂದು (Aircraft) ಪತನಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುಣೆಯ (Pune) ಗೊಜುಬಾವಿ ಎಂಬಲ್ಲಿ ನಡೆದಿದೆ.

    ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ತರಬೇತಿಯಲ್ಲಿದ್ದ ಪೈಲಟ್ ಮತ್ತು ತರಬೇತಿ ನೀಡುತ್ತಿದ್ದ ಶಿಕ್ಷಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೋಹಿತ್ ಶರ್ಮಾಗೆ ಶಾಕ್ ಕೊಟ್ಟ ಮುಂಬೈ ಪೊಲೀಸರು

    ರೋಹಿತ್ ಶರ್ಮಾಗೆ ಶಾಕ್ ಕೊಟ್ಟ ಮುಂಬೈ ಪೊಲೀಸರು

    ಪುಣೆ: ಇಲ್ಲಿನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 215 ಕಿ.ಮೀ. ವೇಗದಲ್ಲಿ ಅಜಾಗರೂಕತೆಯಿಂದ ತಮ್ಮ ಲಂಬೋರ್ಗಿನಿ ಕಾರನ್ನು ಚಲಾಯಿಸಿದ್ದಕ್ಕೆ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಮುಂಬೈ ಪೊಲೀಸರು (Mumbai Police) ದಂಡ ವಿಧಿಸಿದ್ದಾರೆ.

    ವಿಶ್ವಕಪ್‍ನಲ್ಲಿ (World Cup) ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಉಳಿದ ಆಟಗಾರರನ್ನು ಸೇರಿಕೊಳ್ಳಲು ಅವರು ಈ ವೇಗದಲ್ಲಿ ಚಾಲನೆ ಮಾಡಿದ್ದಾರೆ ಎನ್ನಲಾಗಿದೆ. ರೋಹಿತ್ ಅವರ ಕಾರು ಮೊದಲು 200 ಕಿಮೀ ವೇಗದಲ್ಲಿತ್ತು. ಬಳಿಕ ಅದು 215ರ ವೇಗವನ್ನು ತಲುಪಿತ್ತು. ಇದರಿಂದಾಗಿ ಅವರಿಗೆ ಮೂರು ನಿಯಮಗಳನ್ನು ಉಲ್ಲಂಘಿಸಿದ ಚಲನ್ ನೀಡಲಾಗಿದೆ. ಇದನ್ನೂ ಓದಿ: ಗೋ ಬ್ಯಾಕ್ ರಿಜ್ವಾನ್ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆಯ ಬಿಸಿ

    ರೋಹಿತ್ ಭಾನುವಾರ ತಂಡದ ಸದಸ್ಯರೊಂದಿಗೆ ಪುಣೆಗೆ ಬಂದಿಳಿದರು. ವಿಶ್ರಾಂತಿಯ ದಿನವಾದ ಸೋಮವಾರ ಅವರು ಮುಂಬೈನ ಮನೆಗೆ ತೆರಳಿದ್ದಾರೆ. ಬಳಿಕ ಇಂದು ನಡೆಯಲಿರುವ ಪಂದ್ಯಕ್ಕಾಗಿ ಮಂಗಳವಾರ ವಾಪಾಸ್ ಆಗಿದ್ದರು. ಈ ವೇಳೆ ಅವರು ಕಾರನ್ನು ವೇಗವಾಗಿ ಚಾಲನೆ ಮಾಡಿದ್ದಾರೆ ಎನ್ನಲಾಗಿದೆ.

    ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ರಿಜ್ವಾನ್ (248 ರನ್) ಮತ್ತು ಡೆವೊನ್ ಕಾನ್ವೇ (229 ರನ್) ಗಳಿಸಿದ್ದರೆ ರೋಹಿತ್ ಶರ್ಮಾ 217 ರನ್ ಗಳಿಸಿದ್ದಾರೆ.

    ಸಿಕ್ಸರ್‍ನಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆದಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ದಾಖಲೆ ಮುರಿದು ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸಿಕ್ಸ್ ಸಿಡಿಸುವ ಮೂಲಕ ಏಕದಿನ ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಏಕದಿನ ಮಾದರಿಯಲ್ಲಿ ಶಾಹಿನ್ ಅಫ್ರಿದಿ 351 ಸಿಕ್ಸರ್ ಸಿಡಿಸಿ ಮೊದಲನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 331 ಸಿಕ್ಸರ್ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 303 ಸಿಕ್ಸರ್ ಸಿಡಿಸಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಏಕದಿನ ಮಾದರಿಯಲ್ಲಿ 300 ಸಿಕ್ಸರ್ ಬಾರಿಸಿದ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

    ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 6 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ 86 ರನ್ ಗಳಿಸಿದ ರೋಹಿತ್ ಶರ್ಮಾ ಭಾರತ ಸುಲಭ ಜಯ ಸಾಧಿಸಲು ನೆರವಾಗಿದ್ದರು. ಇಂದು ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ ಪುಣೆಯಲ್ಲಿ ಸೆಣಸಲಿದೆ. ಇದನ್ನೂ ಓದಿ: ಅಫ್ಘಾನ್ ವಿರುದ್ಧ ನ್ಯೂಜಿಲೆಂಡ್‌ಗೆ 149 ರನ್‌ಗಳ ಜಯ – ನಂಬರ್ 1 ಸ್ಥಾನಕ್ಕೆ ಜಿಗಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    ಇಂಫಾಲ್: ಮಣಿಪುರದಲ್ಲಿ (Manipur) ನಡೆದಿದ್ದ ಇಬ್ಬರು ಮೈತೆಯಿ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪುಣೆಯಲ್ಲಿ (Pune) ಸಿಬಿಐ (CBI) ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯ ಅ.16ರ ವರೆಗೆ ಸಿಬಿಐ (CBI) ಕಸ್ಟಡಿಗೆ ನೀಡಿದೆ.

    ಬಂಧಿತ ಆರೋಪಿಯನ್ನು ಪೌಲುನ್ ಮಾಂಗ್ (22) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆರೋಪಿ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ

    ಹಿಜಾಮ್ ಲಿಂಥೋಯಿಂಗಮಿ (17) ಮತ್ತು ಫಿಜಾಮ್ ಹೆಮ್‍ಜಿತ್ (20) ಇಬ್ಬರೂ ಜು.6 ರಂದು ನಾಪತ್ತೆಯಾಗಿದ್ದರು. ಅವರ ಮೃತ ದೇಹಗಳ ಫೋಟೋ ಸೆ.25ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದು ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿತ್ತು. ಪ್ರಕರಣದಲ್ಲಿ ಇಲ್ಲಿಯವರೆಗೂ ಮಹಿಳೆಯರು ಸೇರಿದಂತೆ ನಾಲ್ವರನ್ನು ಈಗಾಗಲೇ ಸಿಬಿಐ ಬಂಧಿಸಿದೆ. ಬಂಧಿತ ನಾಲ್ವರೂ ಕುಕಿಗಳನ್ನು ಪಾವೊಮಿನ್ಲುನ್ ಹಾಕಿಪ್, ಎಸ್ ಮಲ್ಸಾನ್ ಹಾಕಿಪ್, ಲಿಂಗ್ನೀಚಾಂಗ್ ಬೈಟ್ ಮತ್ತು ಟಿನ್ನೆಲ್ಹಿಂಗ್ ಹೆಂಥಾಂಗ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಣಿಪುರ ಸರ್ಕಾರದ ಕೋರಿಕೆಯ ಮೇರೆಗೆ ಆ.23 ರಂದು ಸಿಬಿಐ ಎರಡು ಪ್ರಕರಣಗಳನ್ನು ದಾಖಲಿಸಿತ್ತು. ಅಪ್ರಾಪ್ತ ಸಂತ್ರಸ್ತೆಯ ಪೋಷಕರ ದೂರಿನ ಮೇರೆಗೆ ರಾಜ್ಯ ಪೊಲೀಸರು ಈ ಹಿಂದೆ ದಾಖಲಿಸಿದ್ದ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ.

    ತನಿಖೆಯ ವೇಳೆ ದುಷ್ಕರ್ಮಿಗಳು ಇಬ್ಬರನ್ನು ಅಪಹರಿಸಿರುವುದು ಬೆಳಕಿಗೆ ಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವಾಹನದಲ್ಲಿ ಆರೋಪಿಗಳು ವಿದ್ಯಾರ್ಥಿಗಳನ್ನು ಅಪಹರಿಸಿದ್ದರು. ಬಳಿಕ ಅವರ ಹತ್ಯೆ ಮಾಡಿ ಹೂಳಿರುವುದು ಪತ್ತೆಯಾಗಿತ್ತು. ಇದನ್ನೂ ಓದಿ: ಅಜ್ಞಾತ ಸ್ಥಳಕ್ಕೆ ಎಳೆದೊಯ್ದು ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    ಪುಣೆ: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಗಣೇಶ ಪೆಂಡಾಲ್‍ನಲ್ಲಿ ಭಾರೀ ಪ್ರಮಾಣದ ಬೆಂಕಿ (Fire) ಕಾಣಿಸಿಕೊಂಡ ಘಟನೆ ಪುಣೆಯಲ್ಲಿ (Pune) ನಡೆದಿದೆ. ಅದೇ ವೇಳೆ ಪವಾಡದಂತೆ ಜೋರಾಗಿ ಸುರಿದ ಮಳೆಯಿಂದಾಗಿ (Rain) ಅಗ್ನಿ ದುರಂತ ತಪ್ಪಿದಂತಾಗಿದೆ.

    ಪಕ್ಷದ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಚಂದ್ರಶೇಖರ್ ಬಾವಂಕುಲೆ ಅವರೊಂದಿಗೆ ನಡ್ಡಾ ಅವರು ಪ್ರಾರ್ಥನೆ ಸಲ್ಲಿಸಲು ಪುಣೆಯ ಗಣೇಶ ಪೆಂಡಾಲ್‍ಗೆ ತೆರಳಿದ್ದರು. ಈ ವೇಳೆ ಪೆಂಡಾಲ್‍ನ ಗೋಪುರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ನಡ್ಡಾ ಅವರನ್ನು ಸುರಕ್ಷಿತವಾಗಿ ಸ್ಥಳದಿಂದ ಹೊರಕ್ಕೆ ಕರೆದುಕೊಂಡು ಬಂದಿದ್ದಾರೆ. ಅದೇ ವೇಳೆ ಮಳೆ ಕೂಡ ಬಂದಿದೆ. ಇದರಿಂದ ಬಹುದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇದನ್ನೂ ಓದಿ: ಜ.22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ: ನೃಪೇಂದ್ರ ಮಿಶ್ರಾ

    ಪಟಾಕಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು – ಮತ್ತೆ ಇಂಟರ್‌ನೆಟ್ ಸ್ಥಗಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರು ಸಜೀವದಹನ

    ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರು ಸಜೀವದಹನ

    ಮುಂಬೈ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ (Electric Hardware Shop) ಬೆಂಕಿ (Fire) ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವದಹನವಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿದೆ.

    ಬೆಂಕಿ ಅವಘಡ ಬುಧವಾರ ಮುಂಜಾನೆ 5 ಗಂಟೆಯ ವೇಳೆಗೆ ಸಂಭವಿಸಿದೆ. ಎಲೆಕ್ಟ್ರಿಕ್ ಅಂಗಡಿಯ ಹಿಂಭಾಗದಲ್ಲಿ ಕುಟುಂಬವೊಂದು ವಾಸವಿದ್ದು, ಬೆಂಕಿ ಹೊತ್ತಿಕೊಂಡ ಸಂದರ್ಭ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಮೃತರನ್ನು ಚಿಮ್ನಾರಾಮ್ ಚೌಧರಿ (45), ನಮ್ರತಾ ಚಿಮ್ನಾರಾಮ್ ಚೌಧರಿ (40), ಭವೇಶ್ ಚೌಧರಿ (15) ಮತ್ತು ಸಚಿನ್ ಚೌಧರಿ (10) ಎಂದು ಗುರುತಿಸಲಾಗಿದೆ. ಕಟ್ಟಡದ ನೆಲಮಹಡಿಯಲ್ಲಿದ್ದ ಹಾರ್ಡ್ವೇರ್ ಅಂಗಡಿಯ ಹಿಂಭಾಗದಲ್ಲಿ ಮಲಗಿದ್ದ ನಾಲ್ವರ ಶವವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೋರೇಷನ್‌ನ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಲವು ವರ್ಷಗಳ ಹೆತ್ತವರ ಕನಸನ್ನು ಸಾಕಾರಗೊಳಿಸಿದ್ದೀರಿ- ಆನಂದ್ ಮಹೀಂದ್ರಾಗೆ ಪ್ರಜ್ಞಾನಂದ ಥ್ಯಾಂಕ್ಸ್

    ಸದ್ಯ ಅಂಡಿಗೆ ಹೊತ್ತಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಅಮೆಜಾನ್ ಸೀನಿಯರ್ ಮ್ಯಾನೇಜರ್‌ಗೆ ಗುಂಡಿಟ್ಟು ಹತ್ಯೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್: ಆರೋಪಿಗಾಗಿ ತೀವ್ರ ಶೋಧ

    ದೇಶದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್: ಆರೋಪಿಗಾಗಿ ತೀವ್ರ ಶೋಧ

    ಮುಂಬೈ: ಪುಣೆಯ (Pune) ವ್ಯಕ್ತಿಯೊಬ್ಬರು ನಡೆಸುತ್ತಿರುವ ಹಿಂದೂ ಧರ್ಮದ ವಿಚಾರಧಾರೆಗಳ ವೆಬ್‍ಸೈಟ್‍ನ ಪೋಸ್ಟ್ ಒಂದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ಹತ್ಯೆ ಮಾಡುವ ಬೆದರಿಕೆ ಹಾಕಿ ಕಾಮೆಂಟ್ ಮಾಡಲಾಗಿದೆ. ಅಲ್ಲದೇ ಭಾರತದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯನ್ನು ಹಾಕಲಾಗಿದೆ.

    ರಾಹುಲ್ ದುಧಾನೆ ಎಂಬವರು ಹಿಂದೂ ಧರ್ಮದ ಬಗ್ಗೆ ವೆಬ್‍ಸೈಟ್ ನಡೆಸುತ್ತಿದ್ದಾರೆ. ಈ ವೆಬ್‍ಸೈಟ್‍ಗೆ ಕಾಮೆಂಟ್ ಪೋಸ್ಟ್ ಮಾಡಿರುವ ಮೊಖೀಮ್ ಎಂಬಾತ ಬೆದರಿಕೆ ಹಾಕಿದ್ದಾನೆ. ವೆಬ್‍ಸೈಟ್‍ನ್ನು ದುಧಾನೆ ಪರಿಶೀಲಿಸುವಾಗ ಮೊಖೀಮ್ ಕಾಮೆಂಟ್‍ನ್ನು ಗಮನಿಸಿದ್ದಾರೆ. ಕಾಮೆಂಟ್‍ನಲ್ಲಿ ಭಾರತದಲ್ಲಿ ಗಂಭೀರವಾದ ಬಾಂಬ್ ಸ್ಫೋಟವನ್ನು ನಡೆಸುತ್ತೇನೆ. ಭಯೋತ್ಪಾದಕ ಸಂಘಟನೆಗಳಿಗೆ ಧನಸಹಾಯ ಮಾಡುತ್ತೇನೆ. ಹಿಂದೂ ಧರ್ಮವನ್ನು ನಾಶಪಡಿಸುತ್ತೇನೆ. ಅಲ್ಲದೇ ನರೇಂದ್ರ ಮೋದಿಯವರನ್ನೂ ಕೊಲ್ಲುತ್ತೇನೆ ಎಂದು ಬರೆದಿದ್ದಾನೆ. ಕಾಮೆಂಟ್ ವಿಚಾರ ತಿಳಿಯುತ್ತಿದ್ದಂತೆ ದುಧಾನೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸುಲಿಗೆ ಮನಸ್ಥಿತಿಗೆ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಈ ಬಗ್ಗೆ ಪ್ರಕರಣವನ್ನು ಪೊಲೀಸರು (Police) ದಾಖಲಿಸಿಕೊಂಡಿದ್ದಾರೆ. ಆರೋಪಿಯ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದೇವೆ. ಐಪಿ ವಿಳಾಸ ವಿದೇಶದ್ದು ಎಂಬ ಶಂಕೆ ಇದೆ. ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ತಿಳಿಸಿದ್ದಾರೆ.

    ಈ ಸಂಬಂಧ ಮೊಖೀಮ್ ಎಂಬಾತನ ಮೇಲೆ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪುಣೆಯ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Tesla India Office: ಭಾರತದ ಈ ನಗರದಲ್ಲಿ ಆರಂಭವಾಗಲಿದೆ ಟೆಸ್ಲಾದ ಮೊದಲ ಕಚೇರಿ

    Tesla India Office: ಭಾರತದ ಈ ನಗರದಲ್ಲಿ ಆರಂಭವಾಗಲಿದೆ ಟೆಸ್ಲಾದ ಮೊದಲ ಕಚೇರಿ

    ಮುಂಬೈ: ಯುಎಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಎಲೋನ್‌ ಮಸ್ಕ್‌ (Elon Musk) ನಡುವಿನ ಭೇಟಿಯ ಒಂದು ತಿಂಗಳ ನಂತರ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಟೆಸ್ಲಾ ಕಂಪನಿ ತನ್ನ ಶಾಖೆಯನ್ನ ತೆರೆಯಲು ಜಾಗ ಪಡೆದುಕೊಂಡಿದೆ.

    ಟೆಸ್ಲಾ ಇಂಡಿಯಾ ಮೋಟಾರ್ (Tesla India Motors) ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ (Energy Private Limited) ಪುಣೆಯ ವಿಮಾನ ನಗರದಲ್ಲಿರುವ ಪಂಚಶೀಲ್ ಬ್ಯುಸಿನೆಸ್‌ ಪಾರ್ಕ್‌ನಲ್ಲಿ ಕಚೇರಿಗೆ ತೆರೆಯಲು ಸ್ಥಳವನ್ನ ಗುತ್ತಿಗೆ ಪಡೆದುಕೊಂಡಿದೆ.

    ಇದು ಭಾರತದ ಮಾರುಕಟ್ಟೆಗೆ ಟೆಸ್ಲಾ (Tesla) ಎಲೆಕ್ಟ್ರಿಕ್‌ ವಾಹನ ಪ್ರವೇಶಕ್ಕೆ ದೊಡ್ಡ ಹೆಜ್ಜೆಯಾಗಿದೆ. ಈ ಹಿಂದೆ ಟೆಸ್ಲಾದ ಹಿರಿಯ ಅಧಿಕಾರಿಗಳು ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆ ರೂಪಿಸಲು ಇನ್ವೆಸ್ಟ್‌ ಇಂಡಿಯಾದ ತಮ್ಮ ಸಹವರ್ತಿಗಳೊಂದಿಗೆ ಚರ್ಚಿಸಿದ್ದರು. ಇದನ್ನೂ ಓದಿ: JioBook: 16,499 ರೂ.ಗೆ ಸಿಗಲಿದೆ ಭಾರತದ ಪ್ರಥಮ ಡಿಜಿಟಲ್ ಕಲಿಕಾ ಬುಕ್..!

    ಮಾಹಿತಿಗಳ ಪ್ರಕಾರ, ಟೆಸ್ಲಾದ ಭಾರತೀಯ ಅಂಗಸಂಸ್ಥೆಯು ಪಂಚಶೀಲ್ ಬ್ಯುಸಿನೆಸ್ ಪಾರ್ಕ್‌ನಲ್ಲಿರುವ ಬಿ ವಿಂಗ್‌ನ ಮೊದಲ ಮಹಡಿಯಲ್ಲಿ 5,580 ಚದರ ಅಡಿ ಕಚೇರಿ ಸ್ಥಳಕ್ಕಾಗಿ ಟೇಬಲ್‌ಸ್ಪೇಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ 5 ವರ್ಷಗಳ ಗುತ್ತಿಗೆ ಪಡೆದುಕೊಂಡಿದೆ. ಒಪ್ಪಂದದ ಪ್ರಕಾರ 34.95 ಲಕ್ಷ ಭದ್ರತಾ ಠೇವಣಿಯೊಂದಿಗೆ ಮಾಸಿಕ 11.65 ಲಕ್ಷ ರೂ.ಗಳನ್ನು ಟೆಸ್ಲಾ ಸಂಸ್ಥೆ ಪಾವತಿಸಲಿದೆ. ಇದನ್ನೂ ಓದಿ: ದೈತ್ಯ ಟ್ವಿಟ್ಟರ್‌, ಇನ್ಸ್ಟಾಗ್ರಾಮ್‌ಗೆ ಸೆಡ್ಡು ಹೊಡೆಯಲು TikTok ಮಾಸ್ಟರ್‌ ಪ್ಲ್ಯಾನ್‌!

    ಇದೇ 2023ರ ಅಕ್ಟೋಬರ್ 1 ರಿಂದ ಕಚೇರಿ ಸ್ಥಳದ ಬಾಡಿಗೆ ಪ್ರಾರಂಭವಾಗುತ್ತದೆ. ಈ ಲೀಸ್ ಒಪ್ಪಂದ 36 ತಿಂಗಳ ಲಾಕ್​ ಇನ್​ ಅವಧಿ ಹೊಂದಿದ್ದು, ಪ್ರತಿ ವರ್ಷ 5% ರಷ್ಟು ಬಾಡಿಗೆ ಹೆಚ್ಚಳ ಮಾಡುವ ಷರತ್ತಿಗೆ ಎರಡು ಕಂಪನಿಗಳು ಒಳಪಟ್ಟಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]