Tag: ಪುಣ್ಯಸ್ನಾನ

  • ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಬೆಳಗಾವಿಯ 7 ಮಂದಿ ದುರ್ಮರಣ

    ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಬೆಳಗಾವಿಯ 7 ಮಂದಿ ದುರ್ಮರಣ

    ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ (Maha Kumbh 2025) ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ಪುಣ್ಯಸ್ನಾನಕ್ಕೆ (Holy Bath) ತೆರಳುತ್ತಿದ್ದ ಬೆಳಗಾವಿ ಗೋಕಾಕ್‌ ನಗರದ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮಧ್ಯ ಪ್ರದೇಶದ (Madhya Pradesh) ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್‌ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸುಳ್ಳಾಯ್ತು ಐಐಟಿ ಬಾಬಾ ಭವಿಷ್ಯ – ಪಾಕ್‌ ವಿರುದ್ಧ ಗೆದ್ದು ಬೀಗಿದ ಭಾರತ

    ಕಳೆದ ಎರಡು ದಿನಗಳ ಹಿಂದೆ ಗೋಕಾಕ್‌ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾ ಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ ಮಧ್ಯಪ್ರದೇಶ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ವ್ಯಕ್ತಿಯೊಬ್ಬನಿಂದ ಕಿರುಕುಳ ಆರೋಪ – ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಆತ್ಮಹತ್ಯೆ

    https://youtu.be/9aRZwimkiN0?si=1pIJY_bEtIdzMSF8

  • ಡಿಕೆಶಿ ಪುಣ್ಯಸ್ನಾನ – ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೆಯಬೇಕು: ಯತ್ನಾಳ್ ಲೇವಡಿ

    ಡಿಕೆಶಿ ಪುಣ್ಯಸ್ನಾನ – ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೆಯಬೇಕು: ಯತ್ನಾಳ್ ಲೇವಡಿ

    – ಹಿಂದೂಗಳೇ ವೋಟ್ ಹಾಕಿದ್ರೂ ಮುಸ್ಲಿಮರಿಂದ ಗೆದ್ದೆವು ಅಂತಾರೆಂದು ವ್ಯಂಗ್ಯ

    ನವದೆಹಲಿ: ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ (DK Shivakumar Holy Bath) ಮಾಡಿದ್ದಾರೆ. ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೀಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda patil Yatnal) ಲೇವಡಿ ಮಾಡಿದರು.

    ನಿನ್ನೆಯಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್ ಮಹಾ ಕುಂಭಮೇಳಕ್ಕೆ (Maha Kumbh Mela 2025) ತೆರಳಿ ಪುಣ್ಯಸ್ನಾನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿ, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಅವರು ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು. ಹಿಂದೂಗಳೇ ವೋಟ್ ಹಾಕೋದು, ಕಡೆಗೆ ಮುಸ್ಲಿಮರಿಂದ ಗೆದ್ದೆವು ಅಂತ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

    ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಲ್ಲಿಕಾರ್ಜುನ ಖರ್ಗೆ ಅವರು, ಗಂಗೆಯಲ್ಲಿ ಮುಳುಗೋದ್ರಿಂದ ಬಡತನ ಹೋಗಲ್ಲ, ಹೊಟ್ಟೆ ತುಂಬಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ತಸ್ತಿಕ್ ಹಣ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಮುಂದೆ ಬೇಡಿಕೆ ಇಟ್ಟ ರಾಮಲಿಂಗಾ ರೆಡ್ಡಿ

    ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿ, ನಾವು ದೆಹಲಿಗೆ ಸೋಮಣ್ಣ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು ಹಾಗಾಗಿ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಿದ್ದಾರೆ. ರೈಲ್ವೇ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್

    ಪಕ್ಷದ ಬಗ್ಗೆ ಚಿಂತನೆ ಮಾಡುವುದು ಕಾರ್ಯಕರ್ತರ ಕರ್ತವ್ಯವಾಗಿದೆ. ಇಂದು ಏನಾದರೂ ಚರ್ಚೆ ನಡೆದರು ನಡೆಯಬಹುದು. ಬರೀ ಲಿಂಗಾಯತರು ಅಂತಲ್ಲ, ಪಕ್ಷದಲ್ಲಿರು ಎಲ್ಲಾ ಸದಸ್ಯರು ಚರ್ಚೆಯಲ್ಲಿದ್ದಾರೆ. ಅಧ್ಯಕ್ಷರು ಟೆನ್ಷನ್ ಆಗಿದ್ದಾರೋ ಇಲ್ವೋ ಗೊತ್ತಿಲ್ಲ. ಆದರೆ ನಾವು ಮೆನ್ಷನ್ ಮಾಡೋಕೆ ದೆಹಲಿಗೆ ಬಂದಿದ್ದೇವೆ. ನಾವು ಮೊನ್ನೆ ಫೌಂಡೇಶನ್ ಹಾಕಲು ಬಂದಿದ್ದೆವು. ನಮ್ಮ ಸಂಸತ್ ಸದಸ್ಯರ ಭಾವನೆಗಳನ್ನು ಕೇಂದ್ರ ಬಿಜೆಪಿ ಗಣನೆಗೆ ತೆಗೆದುಕೊಳ್ಳುತ್ತದೆ. ವಿಜಯೇಂದ್ರ ಅವರು ಬದಲಾಗ್ತಾರೆ ಎನ್ನುವ ವಿಶ್ವಾಸ ನಮಗೆ ಇದೆ. ಪ್ರಧಾನಿ ಮೋದಿ, ಅಮಿತ್ ಶಾ, ಸಂತೋಷ್ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.

  • ಮಹಾ ಕುಂಭಮೇಳ – ತ್ರಿವೇಣಿ ಸಂಗಮದಲ್ಲಿಂದು ಮೋದಿ ಪುಣ್ಯ ಸ್ನಾನ

    ಮಹಾ ಕುಂಭಮೇಳ – ತ್ರಿವೇಣಿ ಸಂಗಮದಲ್ಲಿಂದು ಮೋದಿ ಪುಣ್ಯ ಸ್ನಾನ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ (Maha Kumbh Mela) ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

    ಪ್ರಧಾನಿ ಮೋದಿ ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ (Prayag Raj Airport) ಆಗಮಿಸಲಿದ್ದು, ಅಲ್ಲಿಂದ ಬೆಳಗ್ಗೆ 10:10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50ಕ್ಕೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಬೆಳಗ್ಗೆ 11:00 ರಿಂದ 11:30ರ ವರೆಗೆ ಸಂಗಮ್ ಘಾಟ್‌ನಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

    ಬೆಳಗ್ಗೆ 11:45ಕ್ಕೆ ಅವರು ದೋಣಿಯಲ್ಲಿ ಏರಿಯಲ್ ಘಾಟ್‌ಗೆ ಹಿಂತಿರುಗಿ ನಂತರ ಡಿಪಿಎಸ್ ಹೆಲಿಪ್ಯಾಡ್‌ಗೆ ವಾಪಸ್ ಆಗ್ತಾರೆ. ಅಲ್ಲಿಂದ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ತೆರಳುತ್ತಾರೆ. ಮಧ್ಯಾಹ್ನ 12:30ಕ್ಕೆ ವಾಯುಪಡೆಯ ವಿಮಾನದಲ್ಲಿ ಪ್ರಯಾಗ್‌ರಾಜ್‌ನಿಂದ ಹೊರಡಲಿದ್ದಾರೆ. ಇದನ್ನೂ ಓದಿ: ಮಾತಿನ ಭರದಲ್ಲಿ ಪೂಜಾ ಹೆಗ್ಡೆ ಯಡವಟ್ಟು- ಹಿಗ್ಗಾಮುಗ್ಗಾ ಟ್ರೋಲ್ ಆದ ನಟಿ

    ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ.

  • ಮಹಾ ಕುಂಭಮೇಳ – ಬೆಂಗಳೂರು To ಪ್ರಯಾಗ್‌ರಾಜ್‌ ವಿಮಾನ ಟಿಕೆಟ್‌ ದರ ದುಬಾರಿಯೋ ದುಬಾರಿ

    ಮಹಾ ಕುಂಭಮೇಳ – ಬೆಂಗಳೂರು To ಪ್ರಯಾಗ್‌ರಾಜ್‌ ವಿಮಾನ ಟಿಕೆಟ್‌ ದರ ದುಬಾರಿಯೋ ದುಬಾರಿ

    – ಬುಧವಾರ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಮೌನಿ ಅಮವಾಸ್ಯೆ ಸ್ನಾನ
    – 10 ರಿಂದ 15 ಕೋಟಿಗೂ ಹೆಚ್ಚು ಜನ ಸೇರುವ ನಿರೀಕ್ಷೆ

    ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ (Maha Kumbh 2025) ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಕುಂಭಮೇಳವನ್ನ ಕಣ್ತುಂಬಿಕೊಳ್ಳಲು ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಪ್ರಯಾಗ್‌ರಾಜ್‌ಗೆ (Prayagraj) ಭೇಟಿ ಕೊಡ್ತಿದ್ದಾರೆ.

    ಬುಧವಾರ (ನಾಳೆ) ವಿಶೇಷವಾದ ಮೌನಿ ಅಮವಾಸ್ಯೆ ದಿನವಾಗಿರೋದ್ರಿಂದ ಪ್ರಯಾಗ್‌ರಾಜ್‌ನಲ್ಲಿರೋ ತ್ರಿವೇಣಿ ಸಂಗಮದಲ್ಲಿ ಸ್ನಾನ (Holy Bath) ಮಾಡಿದ್ರೇ ಎಲ್ಲವೂ ಒಳ್ಳೆಯದಾಗುತ್ತೆ, ಆರೋಗ್ಯ ವೃದ್ಧಿಸುತ್ತೆ, ಕಷ್ಟಕಾರ್ಪಣ್ಯಗಳು ನಶಿಸುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಬುಧವಾರ ಕುಂಭಮೇಳದಲ್ಲಿ 10 ರಿಂದ 15 ಕೋಟಿ ಜನ ಸೇರುವ ನಿರೀಕ್ಷೆ ಇದೆ.

    ಬುಧವಾರ ಪ್ರಯಾಗ್‌ರಾಜ್‌ಗೆ ಹೋಗಲು ವಿಮಾನದ ಟಿಕೆಟ್‌ ಬುಕ್ (Flight Ticket Book) ಮಾಡಲು ಹೊರಟವರಿಗೆ ಡಬಲ್ ಶಾಕ್ ಆಗಿದೆ. ಹೌದು.. ಬುಧವಾರ ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗಿರುವ ಫ್ಲೈಟ್‌ ಟಿಕೆಟ್‌ ದರ 30 ರಿಂದ 39,000 ವರೆಗೆ ಏರಿಕೆಯಾಗಿದ್ದು, ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ಹೋಗುವ ಅಷ್ಟು ವಿಮಾನಗಳ ಟಿಕೆಟ್ ಸೋಲ್ಡ್ ಔಟ್ ಆಗಿದೆ.

    ಇದರಿಂದ ಟಿಕೆಟ್ ದರ ಹೆಚ್ಚಾಗಿದರೂ ಪರವಾಗಿಲ್ಲ, ಇತಂಹ ಮಹಾಪುಣ್ಯದ ದಿನ ಹೇಗಾದರೂ ಮಾಡಿ ಕುಂಭಮೇಳದ ಮಹಾ ಸ್ನಾನ ಮಾಡಬೇಕು ಅಂತಿದ್ದವರಿಗೆ ಫೈಟ್‌ಗಳು ಹೌಸ್ ಪುಲ್ ಆಗಿರೋದು ಬೇಸರ ತಂದಿದೆ.

    ವಿಮಾನ ಟಿಕೆಟ್‌ ದರ ಹೇಗಿದೆ?
    * ಬೆಂಗಳೂರು ಟು ಪ್ರಯಾಗ್ ರಾಜ್

    • ಸಾಮಾನ್ಯ ದಿನಗಳ ದರ 4 ರಿಂದ 8 ಸಾವಿರ ರೂ.
    • ಇಂದಿನ ದರ- 30 ರಿಂದ 45 ಸಾವಿರ ರೂ.
    • ಫೆಬ್ರವರಿ 26ರ ವರಗೆ ಕನಿಷ್ಠ ದರ 24 ಸಾವಿರ ರೂ.

    ದೆಹಲಿಯಿಂದ ಪ್ರಯಾಗ್‌ರಾಜ್‌ಗೆ

    • ಸಾಮಾನ್ಯ ದಿನಗಳ ದರ – 3 ರಿಂದ 6 ಸಾವಿರ ರೂ.
    • ಇಂದಿನ ದರ-20 ರಿಂದ 30 ಸಾವಿರ ರೂ.
    • ಫೆಬ್ರವರಿ 26ರ ವರೆಗೆ 18 ರಿಂದ 24 ಸಾವಿರದ ವರೆಗೆ ರೂ.

  • ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Mahakumbh 2025) 11ನೇ ದಿನವೂ ಭಕ್ತಸಾಗರ ತುಂಬಿ ತುಳುಕಿದೆ.

    ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ (Holy Pilgrims) ಮಾಡಿದವರ ಸಂಖ್ಯೆ ಇದೀಗ 10 ಕೋಟಿ ಮೈಲುಗಲ್ಲು ದಾಟಿದೆ. ಜನವರಿ 13ರಂದು ಪ್ರಾರಂಭವಾದ ಮಹಾ ಕುಂಭಮೇಳವು ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಮೈಲುಗಲ್ಲು ತಲುಪಿದೆ ಎಂದು ಉತ್ತರ ಪ್ರದೇಶದ ಸರ್ಕಾರ ಇಂದು (ಜ.23) ತಿಳಿಸಿದೆ. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

    ಜನವರಿ 13ರಂದು ಶಾಹಿ ಸ್ನಾನದ ಮೂಲಕ ಉದ್ಘಾಟನೆಯಾದ ಕುಂಭಮೇಳದಲ್ಲಿ ವಿವಿಧ ಬಗೆಯ ಪುಣ್ಯಸ್ನಾನದಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ಹಾಗೆಯೇ ಜ.15ರಂದು ಮಕರ ಸಂಕ್ರಾಂತಿ ಸ್ನಾನ ನಡೆಯಿತು. ಮುಂದೆ ಜನವರಿ 29 ರಂದು ಮೌನಿ ಅಮಾವಾಸ್ಯೆ ಸ್ನಾನ, ಫೆಬ್ರವರಿ 3ರಂದು ವಸಂತ ಪಂಚಮಿ ಸ್ನಾನ, ಫೆಬ್ರವರಿ 12 ರಂದು ಮಾಘಿ ಪೂರ್ಣಿಮಾ ಸ್ನಾನ, ಫೆಬ್ರವರಿ 26ರಂದು ಮಹಾ ಶಿವರಾತ್ರಿ ಸ್ನಾನ ನೆರವೇರಲಿದೆ. ಸದ್ಯ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

    45 ಕೋಟಿ ಜನ ಭಾಗಿಯಾಗುವ ನಿರೀಕ್ಷೆ:
    45 ದಿನಗಳ ಕಾಲ ನಡೆಯಲಿರುವ ಕುಂಭಮೇಳದಲ್ಲಿ ಬರೋಬ್ಬರಿ 45 ಕೋಟಿ ಜನ ಬಂದು ಹೋಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಗಂಗಾ, ಯಮುನ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ʻಸಂಗಮನಗರಿʼ ಎಂಬ ನಗರವನ್ನೇ ಸೃಷ್ಟಿಸಿದೆ. ಇದನ್ನೂ ಓದಿ: ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

    12 ಗಂಟೆ ವೇಳೆಗೆ 30 ಲಕ್ಷ ಜನರಿಂದ ಪುಣ್ಯಸ್ನಾನ:
    ಗುರುವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಲ್ಪವಾಸಿಗಳು ಹಾಗೂ ಇತರ ಭಕ್ತರು ಸೇರಿದಂತೆ ಸುಮಾರು 30 ಲಕ್ಷ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ದಿನದ ಅಂತ್ಯಕ್ಕೆ ಇದರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದೂ ಉತ್ತರ ಪ್ರದೇಶ ಸರ್ಕಾರ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಇಂದಿನಿಂದ ಮಹಾ ಕುಂಭಮೇಳ – ನಾಗಸಾಧುಗಳು, ಅಘೋರಿಗಳ ಸಮಾಗಮ, ಏನೆಲ್ಲಾ ವಿಶೇಷತೆಗಳಿವೆ?