Tag: ಪುಣ್ಯಸ್ಮರಣೆ

  • ಶಿವಕುಮಾರ ಶ್ರೀಗಳ 6ನೇ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿಂದು ಸಂಸ್ಮರಣೋತ್ಸವ

    ಶಿವಕುಮಾರ ಶ್ರೀಗಳ 6ನೇ ಪುಣ್ಯಸ್ಮರಣೆ – ಸಿದ್ಧಗಂಗಾ ಮಠದಲ್ಲಿಂದು ಸಂಸ್ಮರಣೋತ್ಸವ

    – ಕರ್ನಾಟಕ, ಮೇಘಾಲಯದ ರಾಜ್ಯಪಾಲರು ಭಾಗಿ

    ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಇಂದಿಗೆ ನಮ್ಮೆನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿವೆ. ಇದರ ಸ್ಮರಣಾರ್ಥವಾಗಿ ಇಂದು (ಜ.21) ತುಮಕೂರಿನ ಸಿದ್ಧಗಂಗಾ ಮಠದಲ್ಲಿ (Tumakuru Siddaganga Mutt) ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ಶ್ರೀಗಳು ನಮ್ಮನ್ನಗಲಿ 6 ವರ್ಷಗಳೇ ಉರುಳಿದರೂ ಅವರ ಆದರ್ಶಗಳು, ಬದುಕಿನ ಚಿಂತನೆಗಳು, ನಡೆದುಕೊಂಡ ರೀತಿ ನೀತಿ, ಆಚಾರ-ವಿಚಾರಗಳು ಇಂದಿಗೂ ಜೀವಂತ. ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆ ಮಠದ ಆವಣರಣದಲ್ಲಿ ಬೃಹತ್ ವೇದಿಕೆ ತಲೆ ಎತ್ತಿದೆ.ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ

    ಏನೇನು ಕಾರ್ಯಕ್ರಮ?
    ಇಂದು ಬೆಳಗ್ಗೆಯಿಂದಲೇ ಸಿದ್ಧಮಠದ ಆವರಣದಲ್ಲಿರುವ ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಮಂತ್ರಘೋಷ್ಯಗಳೊಂದಿಗೆ ವಿಶೇಷ ಪೂಜೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಮಠದ ಆವರಣದಲ್ಲಿ ಶ್ರೀಗಳ ಪುತ್ಥಳಿಯನ್ನ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀಮಠದ ಆವರಣದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

    ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೇಘಾಲಯ ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ವೇದಿಕೆಯಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮೀಜಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

    ಜಾನಪದ ವಿದ್ವಾಂಸ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಮೈಸೂರಿನ ಸಾಹಿತಿ ಡಾ ಹೆಚ್.ಟಿ.ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್.ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರ ಶ್ರೀ ಪ್ರಶಸ್ತಿಯನ್ನ ಪ್ರದಾನ ಮಾಡಲಾಗುವುದು. ಅಲ್ಲದೇ ಸಂಜೆ 6 ಗಂಟೆಗೆ ಇದೇ ವೇದಿಕೆಯಲ್ಲಿ ವಿವಿಧ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

    ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನೀರಿಕ್ಷೆಯನ್ನು ಮಠದ ಆಡಳಿತ ಮಂಡಳಿ ಇಟ್ಟುಕೊಂಡಿದೆ. ಬರುವಂತಹ ಭಕ್ತರಿಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಈಗಾಗಲೇ ಮಠದ ಆವರಣದಲ್ಲಿ ಉಪಾಹಾರ ಸಿದ್ಧಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಇಡೀ ಮಠ ಸುತ್ತಲೂ ಹಾಗೂ ಒಳಗೆ ಪೊಲೀಸ್ ವ್ಯವಸ್ಥೆ ನಿಯೋಜಿಸಲಾಗಿದೆ.ಇದನ್ನೂ ಓದಿ: ದಿನ ಭವಿಷ್ಯ 21-01-2025

     

  • ಅಣ್ಣಾವ್ರ 18ನೇ ಪುಣ್ಯ ಸ್ಮರಣೆ: ಕುಟುಂಬದಿಂದ ಪೂಜೆ

    ಅಣ್ಣಾವ್ರ 18ನೇ ಪುಣ್ಯ ಸ್ಮರಣೆ: ಕುಟುಂಬದಿಂದ ಪೂಜೆ

    ರನಟ ಡಾ.ರಾಜ್ ಕುಮಾರ್ (Dr. Raj Kumar) ಅವರ 18ನೇ ಪುಣ್ಯ ಸ್ಮರಣೆಯನ್ನು (Punyasmarane) ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ (Kantheerava Studio) ಅವರ ಸಮಾಧಿಯಲ್ಲಿ ಆಚರಿಸಲಾಯಿತು. ಅಣ್ಣಾವ್ರ ಮಕ್ಕಳಾದ ರಾಘವೇಂದ್ರ ರಾಜಕುಮಾರ್, ಪೂರ್ಣಿಮಾ, ಲಕ್ಷ್ಮಿ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿ ಪೂಜೆ ಸಲ್ಲಿಸಿದರು.

    ಪ್ರತಿ ವರ್ಷದಂತೆ ಈ ವರ್ಷವೂ ಡಾ.ರಾಜ್ ಕುಮಾರ್ ಅಭಿಮಾನಿಗಳು ಸಮಾಧಿ ಬಳಿ ರಕ್ತದಾನ ಶಿಬಿರ, ಅನ್ನ ಸಂತರ್ಪಣೆ, ಕಣ್ಣುದಾನ ಸೇರಿದಂತೆ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿದರು. ಅಣ್ಣಾವ್ರ ಸಮಾಧಿ ದರ್ಶನಕ್ಕಾಗಿ ಸಾಲುಗಟ್ಟಿ ಅಭಿಮಾನಿಗಳು ನಿಂತು ಪೂಜೆ ಸಲ್ಲಿಸಿದ್ದಾರೆ.

     

    ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಸಮಾಧಿ ಹತ್ತಿರ ಬಂದಾಗಷ್ಟೇ ಅಪ್ಪಾಜಿ ನಮ್ಮೊಂದಿಗೆ ಇಲ್ಲ ಅಂತ ಅನಿಸತ್ತೆ. ಅದರಾಚೆ ಅವರು ನಮ್ಮೊಂದಿಗೆ ಸದಾ ಇದ್ದಾರೆ, ಇರುತ್ತಾರೆ ಎಂದರು. ಅಭಿಮಾನಿಗಳ ಜೊತೆ ಒಂದಷ್ಟು ಹೊತ್ತು ರಾಘಣ್ಣ ಇದ್ದರು.

  • ವಿಷ್ಣುವರ್ಧನ್ ಅವರ 14ನೇ ಪುಣ್ಯಸ್ಮರಣೆ: ಹಲವು ಕಾರ್ಯಕ್ರಮ

    ವಿಷ್ಣುವರ್ಧನ್ ಅವರ 14ನೇ ಪುಣ್ಯಸ್ಮರಣೆ: ಹಲವು ಕಾರ್ಯಕ್ರಮ

    ಮೇರುನಟ ವಿಷ್ಣುವರ್ಧನ್ (Vishnuvardhan) ಅವರ 14ನೇ ಪುಣ್ಯಸ್ಮರಣೆಯನ್ನು (Punyasmarane) ಅವರ ಅಭಿಮಾನಿಗಳು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಇಂದು ಬೆಳಗ್ಗೆಯಿಂದ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ರಕ್ತದಾನ, ಅನ್ನದಾನದಂತಹ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ.

    ನಿನ್ನೆ ರಾತ್ರಿ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ (Abhimana Studio) ವಿಷ್ಣು ಸಮಾಧಿ ಬಳಿ ಮಹಿಳಾ ಅಭಿಮಾನಿಗಳು ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಾವಿರಾರು ದೀಪಗಳನ್ನು ಹಚ್ಚುವ ಮೂಲಕ ಅಗಲಿದ ನಟನ ಸ್ಮರಣೆಯನ್ನು ಮಾಡಿದರು. ಇಂದು ಬೆಳಗ್ಗೆಯಿಂದ ಸಾವಿರಾರು ಅಭಿಮಾನಿಗಳು ಅಭಿಮಾನ ಸ್ಟುಡಿಯೋಗೆ ಹರಿದು ಬಂದಿದ್ದಾರೆ.

    ಬೆಳಗ್ಗೆ ಹತ್ತು ಗಂಟೆಗೆ ಡಾ.ವಿಷ್ಣುಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಮತ್ತು ಅಭಿಮಾನಿಗಳು ಪೂಜೆ ಸಲ್ಲಿಸಿದರು. ಜೊತೆಗೆ ವಿಷ್ಣುವರ್ಧನ್ ನೆನಪಿನಲ್ಲಿ ಕ್ಯಾಲೆಂಡರ್ ಮತ್ತು ಮೇರುನಟ ಪುಸ್ತಕ ಬಿಡುಗಡೆ ಆದವು. ವಿಷ್ಣುವರ್ಧನ್ ಅವರ ನೆಚ್ಚಿನ ಗೀತೆಗಳನ್ನು ಹಾಡುವ ಮೂಲಕ ಗೀತ ನಮನ ಸಲ್ಲಿಸಲಾಗಿದೆ.

    ಮೈಸೂರಿನಲ್ಲಿರುವ ವಿಷ್ಣು ಸ್ಮಾರಕದ ಬಳಿಯೂ ವಿಷ್ಣು ಕುಟುಂಬ ಪೂಜೆ ಸಲ್ಲಿಸಿದೆ. ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಸೇರಿದಂತೆ ಕುಟುಂಬದ ಹಲವು ಸದಸ್ಯರು ಭಾಗಿಯಾಗಿದ್ದಾರೆ.

  • ಅಂಬಿ ಅಗಲಿ ಐದು ವರ್ಷ: ಸುಮಲತಾ ಅಂಬರೀಶ್ ಭಾವುಕ ಪೋಸ್ಟ್

    ಅಂಬಿ ಅಗಲಿ ಐದು ವರ್ಷ: ಸುಮಲತಾ ಅಂಬರೀಶ್ ಭಾವುಕ ಪೋಸ್ಟ್

    ಮಂಡ್ಯದ ಗಂಡು ಅಂಬರೀಶ್ ಅವರು ಅಗಲಿ ಇಂದಿಗೆ ಐದು ವರ್ಷಗಳಾಗಿವೆ. ಅವರ ಪುಣ್ಯ ಸ್ಮರಣೆಯ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಅಂಬರೀಶ್ ಅವರ ಕುಟುಂಬ ಮತ್ತು ಅಭಿಮಾನಿಗಳು ಆಯೋಜಿಸಿದ್ದಾರೆ. ಬೆಳಗ್ಗೆ ಸುಮಲತಾ ಅಂಬರೀಶ್ (Sumalatha), ಅಭಿಷೇಕ್ ಅಂಬರೀಶ್ (Abhishek), ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವಾರು ಚಿತ್ರೋದ್ಯಮದ ಗಣ್ಯರು ಮತ್ತು ಅಂಬಿ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಬಂದು ಪೂಜೆ ಸಲ್ಲಿಸಿದ್ದಾರೆ.

    ಅಂಬಿ ಸ್ಮರಣೆ (Punyasmarane) ಕುರಿತಂತೆ ಸುಮಲತಾ ಅಂಬರೀಶ್ (Ambarish) ಅವರು ಭಾವುಕ ಪೋಸ್ಟ್ ಮಾಡಿದ್ದಾರೆ. ‘ಇರುವುದೊಂದೇ ಜೀವನ ಅದೆಷ್ಟು ವ್ಯತ್ಯಾಸವಿದೆ. ಎಂದೆಂದಿಗೂ ನಮ್ಮ ನೆನಪುಗಳಲ್ಲಿ, ಸುಖ, ದುಃಖ, ನಗು, ಕಣ್ಣೀರು. ಪ್ರತಿಯೊಂದು ಕ್ಷಣವೂ ನೀವು ಬಿಟ್ಟ ನಿರ್ವಾತವನ್ನು ಅಳೆಯಲಾಗದು.ನಾನು ಆ ಪ್ರೀತಿಯನ್ನು ಕಾಪಿಟ್ಟುಕೊಳ್ಳುತ್ತೇನೆ, ನಷ್ಟವನ್ನಲ್ಲ. ಅನೇಕರನ್ನು ಒಳಗೊಂಡ ಜೀವನವನ್ನು ಎಂದಿಗೂ ಕಳೆದುಕೊಳ್ಳಲು ಆಗುವುದಿಲ್ಲ. ನೀವು ಶಾಶ್ವತವಾಗಿರುತ್ತೀರಿ.ನೀವೊಂದು ಜೀವ ಮೀರಿದ, ಒಂದು ಪ್ರಪಂಚ. ಇಂದು ನನಗೆ ಖಾತ್ರಿಯಿದೆ, ನೀವು ಅತ್ಯಂತ ಹೆಮ್ಮೆಯಿಂದ ಸಂಭ್ರಮದಲ್ಲಿರುವಿರಿ ಮತ್ತು ನಿಮ್ಮ ಆ ಪ್ರಪಂಚದಿಂದ ಅಭಿಷೇಕ್ ಅವರ ಚಲನಚಿತ್ರವನ್ನು ಆಶೀರ್ವದಿಸುತ್ತೀರಿ’ ಎಂದು ಬರೆದುಕೊಂಡಿದ್ದಾರೆ.

    ಐದನೇ ವರ್ಷದ ಪುಣ್ಯಸ್ಮರಣೆಗೆ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತ್ತು ಈ ವರ್ಷ ಅಂಬರೀಶ್ ಅವರ ಹೆಸರಿನಲ್ಲಿ ಡಾ.ಅಂಬರೀಶ್ ಫೌಂಡೇಶನ್ ಕೂಡ ಶುರು ಮಾಡಲಾಗುತ್ತಿದ್ದು, ಹಲವಾರು ಜನಪರ ಕೆಲಸಗಳನ್ನು ಈ ಫೌಂಡೇಶನ್ ಮಾಡಲಿದೆ.

  • ನಾಳೆ ಅಪ್ಪು 2ನೇ ಪುಣ್ಯಸ್ಮರಣೆ : ಕುಟುಂಬದಿಂದ ಸಮಾಧಿ ನಿರ್ಮಾಣ

    ನಾಳೆ ಅಪ್ಪು 2ನೇ ಪುಣ್ಯಸ್ಮರಣೆ : ಕುಟುಂಬದಿಂದ ಸಮಾಧಿ ನಿರ್ಮಾಣ

    ವರ್ ಸ್ಟಾರ್ ಪುನೀತ್ ರಾಜ ಕುಮಾರ್ (Puneeth Rajkumar) ಅಗಲಿ ನಾಳೆಗೆ ಎರಡು ವರ್ಷ. ಪುಣ್ಯ ಸ್ಮರಣೆಯನ್ನು (Punyasmarane) ಆಚರಿಸಲು ಅಭಿಮಾನಿಗಳು ಮತ್ತು ಕುಟುಂಬ ಸರ್ವಸಿದ್ಧತೆ ಮಾಡಿಕೊಂಡಿದೆ. ನಾಳೆ ಬೆಳಗ್ಗೆಯಿಂದಲೇ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಹಂಚಿಕೊಂಡಿದ್ದಾರೆ. ಮೈಸೂರು ಮಾದರಿಯಲ್ಲೇ ಲೈಟಿಂಗ್ ಸೇರಿದಂತೆ ನೇತ್ರದಾನ, ಅನ್ನದಾನ ಶಿಬಿರಗಳನ್ನೂ ಏರ್ಪಡಿಸಿದ್ದಾರೆ.

    ಕುಟುಂಬವು ಡಾ.ರಾಜಕುಮಾರ್ ಸಮಾಧಿ ಮಾದರಿಯಲ್ಲೇ ಅಪ್ಪು (Appu) ಸಮಾಧಿಯನ್ನು ನಿರ್ಮಾಣ ಮಾಡಿದೆ. ಬಿಳಿ ಮಾರ್ಬಲ್ಸ್ ಬಳಸಿಕೊಂಡು ಅಪ್ಪು ಸಮಾಧಿಯನ್ನು ನಿರ್ಮಾಣ ಮಾಡಲಾಗಿದೆ. ಸ್ಮಾರಕದ ಸುತ್ತಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಸಮಾಧಿ ಮೇಲೆ ಅಪ್ಪುವಿನ ನಗುಮೊಗದ ಫೋಟೋ ಇಡಲಾಗಿದೆ.

    ಮಾಹಿತಿಯಂತೆ ನಾಳೆ ಬೆಳಗ್ಗೆ 9 ಗಂಟೆಗೆ ಡಾ.ರಾಜ್ ಕುಟುಂಬ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದೆ. ಅಶ್ವಿನಿ (Ashwini) ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಡಾ.ರಾಜಕುಮಾರ್ ಅವರ ಇಡೀ ಕುಟುಂಬ ಪೂಜೆಯಲ್ಲಿ ಭಾಗಿಯಾಗಲಿದೆ.

     

    ಅಕ್ಟೋಬರ್ 29ರಂದು ಪುನೀತ್ ಅವರನ್ನು ಈ ನಾಡು ಕಳೆದುಕೊಂಡಿತು. ಅಲ್ಲಿಂದ ಈವರೆಗೂ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ. ರಾಜ್ಯಾದ್ಯಂತ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಕೂಡ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ 2ನೇ ವರ್ಷದ ಪುಣ್ಯಸ್ಮರಣೆ

    ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ 2ನೇ ವರ್ಷದ ಪುಣ್ಯಸ್ಮರಣೆ

    ಬಿ.ಎಸ್. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ  ‘ನಾನು ಅವನಲ್ಲ ಅವಳು’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ಸಂಚಾರಿ ವಿಜಯ್ (Sanchari Vijay) ಅವರು ಅಗಲಿ ಎರಡು ವರ್ಷಗಳು. ಅವರ 2ನೇ ವರ್ಷದ ಪುಣ್ಯ ಸ್ಮರಣೆಯನ್ನು (Punyasmarane) ನಾಳೆ ವಿಜಯ್ ಅವರ ಹುಟ್ಟೂರಾದ ಪಂಚನಹಳ್ಳಿಯಲ್ಲಿ (Panchanahalli) ಆಯೋಜನೆ ಮಾಡಲಾಗಿದೆ.

    ಸಂಚಾರಿ ವಿಜಯ್ ನಿಧನರಾದಾಗ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾದರಿಯ ನಡೆಯನ್ನು ಹಾಕಿಕೊಟ್ಟು ಹೋದರು. ವಿಜಯ್ ಅವರ ಸಮಾಜಮುಖಿ ಕೆಲಸಗಳನ್ನು ಅವರ ಗೆಳೆಯರ ಬಳಗ ಮುಂದುವರೆಸಿಕೊಂಡು ಹೋಗುತ್ತಿದೆ. ಎರಡನೇ ವರ್ಷದ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ:ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ಸಂಚಾರಿ ವಿಜಯ್ ಅವರ ಕುಟುಂಬ, ಸಂಚಾರಿ ವಿಜಯ್ ಗೆಳೆಯರ ಬಳಗ, ಸಂಚಾರಿ ವಿಜಯ್ ಕಲಾ ಸಂಘ, ಸಂಚಾರಿ ವಿಜಯ್ ಸ್ಪೋರ್ಟ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್, ತಾಲೂಕ ಘಟಕ ಕಡೂರು ಇವರ ಸಂಯುಕ್ತ ಆಶ್ರಯದಡಿ ರಕ್ತದಾನ ಶಿಬಿರವನ್ನು (blood donation camp) ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕಡೂರು ತಾಲೂಕು, ಪಂಚನಹಳ್ಳಿಯಲ್ಲಿರುವ ವಿಜಯ್ ಅವರ ಸಮಾಧಿ ವಿಜಯನಿಧಿ ಬಳಿ ಕಾರ್ಯಕ್ರಮ ಆಯೋಜನೆಯಾಗಿದೆ.

    ರಕ್ತದಾನ ಶಿಬಿರವನ್ನು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರೆ, ಪಂಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಗಂಗನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ದೇಶಕ ಬಿ.ಎಸ್.ಲಿಂಗದೇವರು, ಮಾಜಿ ಶಾಸಕರಾದ ಜಿ.ಹೆಚ್. ಶ್ರೀನಿವಾಸ್, ಶೃಂಗೇರಿ ಶಾಸಕರಾದ ಟಿ.ಡಿ ರಾಜೇಗೌಡ, ಮಾಜಿ ಶಾಸಕರಾದ ವೈ ಎಸ್ ವಿ ದತ್ತ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

    ಸಂಚಾರಿ ತಂಡದ ಎನ್. ಮಂಗಳಾ, ನಟ ರಂಗಾಯಣ ರಘು, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್, ಅರವಿಂದ್ ಕುಪ್ಳಿಕರ್, ನಟ ಕೃಷ್ಣ ಹೆಬ್ಬಾಳೆ, ನಟಿಯರಾದ ಸೋನು ಗೌಡ, ಸುರಭಿ ಲಕ್ಷ್ಮೀ ಸೇರಿದಂತೆ ವಿಜಯ್ ಅವರ ಕುಟುಂಬ ಅಂದು ಉಪಸ್ಥಿತಿ ಇರಲಿದೆ.

  • ಇಂದಿರಾ ಗಾಂಧಿ ಪುಣ್ಯಸ್ಮರಣೆ – ಅನ್ನಸಂತರ್ಪಣೆ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ

    ಇಂದಿರಾ ಗಾಂಧಿ ಪುಣ್ಯಸ್ಮರಣೆ – ಅನ್ನಸಂತರ್ಪಣೆ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ

    ಅಗರ್ತಲಾ: ಇಲ್ಲಿನ ಜಿಬಿ ಬಜಾರ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದ ವೇಳೆ ಬಿಜೆಪಿ ಕಾರ್ಯಕರ್ತರು (BJP) ನಡೆಸಿದ ದಾಳಿಯಲ್ಲಿ ಕನಿಷ್ಠ 8 ಕಾಂಗ್ರೆಸ್ (Congress) ಬೆಂಬಲಿಗರು ಗಾಯಗೊಂಡಿದ್ದಾರೆ.

    ಸ್ಥಳೀಯ ಜನರಿಗೆ ವಿತರಿಸಲು ಸಿದ್ಧಪಡಿಸಲಾಗಿದ್ದ ಆಹಾರವನ್ನು ಚರಂಡಿಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಂಕಷ್ಟ- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

    ಅನ್ನ ಸಂತರ್ಪಣೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಪೋಲೀಸರ ಸಮ್ಮುಖದಲ್ಲಿ ಮಾಸ್ಕ್ ಧರಿಸಿ ಮೋಟಾರು ಬೈಕ್‌ನಲ್ಲಿ ಬಂದ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ಯಾಮಲ್ ಪಾಲ್ ಆರೋಪಿಸಿದ್ದಾರೆ.

    ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ದೊಣ್ಣೆ ಹಾಗೂ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಬರಿಗೊಂಡ ಜನರು ಸ್ಥಳದಿಂದ ಓಡಿಹೋಗಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಇದೇ ವೇಳೆ ದಾಳಿಕೋರರು ಇಂದ್ರಾನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಹಿರಿಯ ನಾಗರಿಕರೊಬ್ಬರ ಮೇಲೂ ರಸ್ತೆಯಲ್ಲಿ ಹಲ್ಲೆ ನಡೆಸಲಾಗಿದೆ. ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಜೆಯವರೆಗೂ ರಸ್ತೆ ತಡೆ ನಡೆಸಿದಾಗ, ಮುಸುಕುಧಾರಿಗಳು ಅಲ್ಲಿಂದ ತೆರಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭೀಕರ ಮಳೆಗೆ ಇಬ್ಬರು ಬಲಿ- 7 ಜಿಲ್ಲೆಯ ಶಾಲಾ, ಕಾಲೇಜಿಗೆ ರಜೆ

    ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ನಡೆಸುತ್ತಿರುವ ಗ್ಯಾಂಗ್ ಈ ಪ್ರದೇಶದಲ್ಲಿ ತಮ್ಮ ನೆಲೆಯನ್ನು ಕಳೆದುಕೊಂಡ ನಂತರ ಈ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಆಶಿಸ್ ಸಹಾ ಆರೋಪಿಸಿದ್ದಾರೆ. ಅದೇ ರೀತಿ ಬದರ್‌ಘಾಟ್‌ನ ಬಿಜೆಪಿ ಶಾಸಕ ಮಿಮಿ ಮಜುಂದಾರ್ ಅವರು ಸೋಮವಾರ ಕಾಂಗ್ರೆಸ್ ಕಾರ್ಯಕರ್ತನ ಮನೆಯಿಂದ ಆಹಾರ ಪದಾರ್ಥಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು `ಗಂಧದಗುಡಿ’ ತೊರೆದು 1 ವರ್ಷ- ನೋವು, ಕಣ್ಣೀರಿನ ಮಧ್ಯೆ ಪುಣ್ಯಸ್ಮರಣೆ

    ಅಪ್ಪು `ಗಂಧದಗುಡಿ’ ತೊರೆದು 1 ವರ್ಷ- ನೋವು, ಕಣ್ಣೀರಿನ ಮಧ್ಯೆ ಪುಣ್ಯಸ್ಮರಣೆ

    ಬೆಂಗಳೂರು: ಅಪ್ಪು ‘ಗಂಧದಗುಡಿ’ ತೊರೆದು ಇಂದಿಗೆ 1 ವರ್ಷ. ನೋವು, ಕಣ್ಣೀರು, ಆಕ್ರಂದನದ ಮಧ್ಯೆ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತದೆ.

    ಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋ ಸಂಪೂರ್ಣ ಸಿದ್ಧವಾಗಿದೆ. ಅಪ್ಪು (Appu) ಸಮಾಧಿಗೆ ಬಗೆ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ರಾತ್ರಿಯಿಡೀ ಜಾಗರಣೆ, ಪ್ರೀತಿಯ ಅಪ್ಪುಗೆ ಗೀತನಮನ ಅರ್ಪಿಸಲಾಗಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಪುಣ್ಯಭೂಮಿಗೆ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಇತ್ತ ಅನ್ನಸಂತರ್ಪಣೆ, ರಕ್ತದಾನ ಶಿಬಿರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಇದನ್ನೂ ಓದಿ: ವರ್ಷದ ಬಳಿಕ ಪುನೀತ್ ಟ್ವಿಟ್ಟರ್ ಖಾತೆ ಆಕ್ವೀವ್ : ಗಂಧದಗುಡಿಗೆ ಬನ್ನಿ ಸಂದೇಶ

    ನಟ ಪುನೀತ್ ರಾಜ್‍ಕುಮಾರ್ (Puneethraj Kumar) ಅವರು ಹೃದಯ ಸ್ತಂಭನದಿಂದಾಗಿ 2021 ರ ಅಕ್ಟೋಬರ್ 29ರಂದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಆ ದಿನದಿಂದ ಈ ದಿನದವರೆಗೂ ಅಭಿಮಾನಿಗಳ ಹೃದಯದಲ್ಲಿ ಅಪ್ಪು ಸದಾ ಜೀವಂತವಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುಣ್ಯಸ್ಮರಣೆ – ತಂದೆಯ ಸಮಾಧಿಗೆ ಹೆಲಿಕಾಪ್ಟರ್‌ನಲ್ಲಿ ಪುಷ್ಪಾರ್ಚನೆ ಮಾಡಿಸಿದ ಮಗ

    ಪುಣ್ಯಸ್ಮರಣೆ – ತಂದೆಯ ಸಮಾಧಿಗೆ ಹೆಲಿಕಾಪ್ಟರ್‌ನಲ್ಲಿ ಪುಷ್ಪಾರ್ಚನೆ ಮಾಡಿಸಿದ ಮಗ

    ಕೋಲಾರ: ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ತನ್ನ ತಂದೆ ಸಮಾಧಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪ‌ನಮನ ಸಲ್ಲಿಸಿರುವ ಅಪರೂಪದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.

    ಮುಳಬಾಗಿಲು ತಾಲೂಕಿನ ಕೊತ್ತೂರು ರಾಮಾಪುರ ಗ್ರಾಮದ ಲೋಕೇಶ್ ಎಂಬವರು ಒಂದು ವರ್ಷದ ಹಿಂದೆಯಷ್ಟೇ ಮೃತಪಟ್ಟಿದ್ದ ತಮ್ಮ ತಂದೆ ಗೋವಿಂದ ರಾಜ್ ಅವರ ಸಮಾಧಿಗೆ ಹೆಲಿಕಾಪ್ಟರ್ ಮೂಲಕ‌ ಪುಷ್ಪನಮನ ಸಲ್ಲಿಸಿದ್ದಾರೆ.

    ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಸಂಬಂಧಿಯಾಗಿರುವ ಲೋಕೇಶ್ ತಮ್ಮ ತಂದೆ ಮೃತಪಟ್ಟು ಒಂದು ವರ್ಷವಾಗಿದ್ದು, ಮೊದಲನೇ ವರ್ಷದ ಪುಣ್ಯ ತಿಥಿಯ ಅಂಗವಾಗಿ ಇಂದು ಹೆಲಿಕಾಪ್ಟರ್ ಮೂಲಕ ಪುಷ್ಪರ್ಚಾನೆ ಹಾಗೂ ನೂರಾರು ಜನರಿಗೆ ಅನ್ನದಾನ ಮಾಡಿದರು. ಲೋಕೇಶ್ ಮೂಲತಃ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

    ತಮ್ಮ ಹುಟ್ಟೂರಿನಲ್ಲಿ ಸುಮಾರು 25 ಲಕ್ಷ ರೂ. ಖರ್ಚು ಮಾಡಿ ಬೃಹತ್ ಸಮಾಧಿ ಕಟ್ಟಿಸಿದ್ದಾರೆ. ಈ ನಡುವೆ ಇಂದು ಒಂದು ವರ್ಷದ ಅಂಗವಾಗಿ ವಿಶೇಷವಾಗಿ ಆಚರಣೆ ಮಾಡುವ ಸಲುವಾಗಿ ಹೆಲಿಕಾಪ್ಟರ್ ಮೂಲಕ ಪುಷ್ಪ ನಮನ ಸಲ್ಲಿಸಲಾಗಿದೆ ಎಂದರು. ನಮ್ಮ ತಂದೆ ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಯಾವುದಕ್ಕೂ ಏನೂ ಕಡಿಮೆಯಾಗದಂತೆ ನೋಡಿಕೊಂಡಿದ್ದಾರೆ. ಅದಕ್ಕಾಗಿ ಅವರಿಗೆ ವಿಶೇಷ ರೀತಿಯಲ್ಲಿ ಗೌರವ ನಮನ ಸಲ್ಲಿಸಿದ್ದೇವೆ ಎಂದರು ಲೋಕೇಶ್.

    Live Tv
    [brid partner=56869869 player=32851 video=960834 autoplay=true]

  • ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ರನಟ ಡಾ.ರಾಜ್ ಕುಮಾರ್ ಅವರು ಇನ್ನಿಲ್ಲವಾಗಿ ಇಂದಿಗೆ 16 ವರ್ಷ. ಇಂದು ಡಾ.ರಾಜ್ ಕುಟುಂಬ ಮತ್ತು ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ನೆಚ್ಚಿನ ಕಲಾವಿದನಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

    ಪ್ರತಿ ವರ್ಷದಂತೆ ಈ ವರ್ಷವೂ ಡಾ.ರಾಜ್ ಅವರ ಪುಣ್ಯಸ್ಮರಣೆಯೆಂದು ಅಭಿಮಾನಿಗಳು ನೇತ್ರದಾನ, ಅಂಗಾಂಗ ದಾನ, ಅನ್ನದಾನ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದರು. ರಾಜ್ಯದ ನಾನಾ ಭಾಗಗಳಿಂದ ಬಂದ ಸಾವಿರಾರು ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಪಕ್ಕದಲ್ಲಿಯೇ ಇರುವ ಪಾರ್ವತಮ್ಮ ಮತ್ತು ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿಗೂ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

    ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ, ಅಶ್ವಿನಿ ಪುನೀತ್ ರಾಜ್ ಕುಮಾರ್, ಯುವರಾಜ್ ಕುಮಾರ್, ಡಾ.ರಾಜ್ ಹೆಣ್ಣು ಮಕ್ಕಳಾದ ಪೂರ್ಣಿಮಾ ಮತ್ತು ಕುಟುಂಬ ಸೇರಿದಂತೆ ಡಾ.ರಾಜ್ ಕುಟುಂಬದ ಎಲ್ಲ ಸದಸ್ಯರು ಬೆಳಗ್ಗೆ ಕಂಠೀರವ ಸ್ಟುಡಿಯೋ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು. ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಓದಿ:ʼ2 ಸ್ಟೇಟ್ಸ್’ ಖ್ಯಾತಿಯ ಶಿವಕುಮಾರ್ ಸುಬ್ರಮಣಿಯಂ ನಿಧನ

    ಅಣ್ಣಾವ್ರ ಪುಣ್ಯಸ್ಮರಣೆ ದಿನದಂದು ಸ್ಯಾಂಡಲ್ ವುಡ್ ನ ಬಹುತೇಕ ತಾರೆಯರು ಡಾ.ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಡಾ.ರಾಜ್ ಕುಮಾರ್ ಅವರು ನಾಡಿಗೆ ಕೊಟ್ಟ ಕೊಡುಗೆಯನ್ನು ಸ್ಮರಿಸಿದ್ದಾರೆ. ಅಣ್ಣಾವ್ರ ಜತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. 16 ವರ್ಷವಲ್ಲ, 160 ವರ್ಷವಾದರೂ ಅಣ್ಣಾವ್ರ ಅಜರಾಮರ ಎಂದು ಸ್ಮರಿಸಿದ್ದಾರೆ.