Tag: ಪುಣ್ಯಾರಾಧನೆ

  • ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ – ಮಧ್ಯಾಹ್ನವರೆಗೆ ಅಭಿಮಾನಿಗಳಿಗೆ ಸಮಾಧಿಗೆ ನಿರ್ಬಂಧ

    ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ – ಮಧ್ಯಾಹ್ನವರೆಗೆ ಅಭಿಮಾನಿಗಳಿಗೆ ಸಮಾಧಿಗೆ ನಿರ್ಬಂಧ

    ಬೆಂಗಳೂರು: ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ ಇರುವುದರಿಂದ ಅಭಿಮಾನಿಗಳಿಗೆ ಮಧ್ಯಾಹ್ನದವರೆಗೂ ಅಪ್ಪು ಸಮಾಧಿ ನಿರ್ಬಂಧ ಹೇರಲಾಗಿದೆ.

    ದೊಡ್ಮನೆ ಹುಡುಗ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಇಂದು ಪುನೀತ್ 11ನೇ ದಿನ ಪುಣ್ಯಸ್ಮರಣೆಯಾಗಿದ್ದು, ಸದಾಶಿವನಗರದ ಅಪ್ಪು ನಿವಾಸದ ಪುನೀತ್ ಫೋಟೋಗೆ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ಅಪ್ಪು ಅಭಿಮಾನಿ ಮನೆಗೆ ರಾಘಣ್ಣ ಭೇಟಿ, ಸಾಂತ್ವನ

    ಪುನೀತ್ 11ನೇ ದಿನದ ಪುಣ್ಯಾರಾಧನೆಯ ವಿಧಿವಿಧಾನವನ್ನು ವಿನಯ್ ರಾಜ್‍ಕುಮಾರ್ ನೆರವೇರಿಸಲಿದ್ದು, 11 ಗಂಟೆ ಬಳಿಕ ಅಪ್ಪು ಸಮಾಧಿಗೆ ಎಡೆ ಅರ್ಪಣೆ ಮಾಡಲಾಗುತ್ತದೆ. ಇನ್ನೂ ಈ ಕಾರ್ಯಕ್ರಮದಲ್ಲಿ ಕೇವಲ ಕುಟುಂಬಸ್ಥರಷ್ಟೇ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಥಿಯೇಟರ್‌‌ಗಳಲ್ಲಿ ಏಕಕಾಲಕ್ಕೆ ಅಪ್ಪುಗೆ ಶ್ರದ್ಧಾಂಜಲಿ

    puneeth

    ಮಧ್ಯಾಹ್ನ 12 ಗಂಟೆವರೆಗೆ ಅಭಿಮಾನಿಗಳಿಗೆ ಸಮಾಧಿ ದರ್ಶನವನ್ನು ನಿಷೇಧಿಸಲಾಗಿದ್ದು, ಕಂಠೀರವ ಸ್ಟುಡಿಯೋ ಸುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಎಲ್ಲರಿಗೂ ಅಶ್ವಿನಿ ಧನ್ಯವಾದ

  • ಪುನೀತ್‌ 11ನೇ ದಿನದ ಪುಣ್ಯಾರಾಧನೆ ಮನೆಯಲ್ಲೇ ನಡೆಯುತ್ತೆ: ಕುಟುಂಬಸ್ಥರ ಸ್ಪಷ್ಟನೆ

    ಪುನೀತ್‌ 11ನೇ ದಿನದ ಪುಣ್ಯಾರಾಧನೆ ಮನೆಯಲ್ಲೇ ನಡೆಯುತ್ತೆ: ಕುಟುಂಬಸ್ಥರ ಸ್ಪಷ್ಟನೆ

    ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ 11ನೇ ದಿನದ ಪುಣ್ಯಾರಾಧನೆ ಅರಮನೆ ಮೈದಾನದಲ್ಲಿ ನಡೆಯುತ್ತದೆ ಎನ್ನುವ ವದಂತಿಗೆ ತೆರೆ ಬಿದ್ದಿದೆ. ಪುನೀತ್‌ ಪುಣ್ಯಾರಾಧನೆ ಕಾರ್ಯ ಮನೆಯಲ್ಲೇ ನಡೆಯುತ್ತದೆ ಎಂದು ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ.

    ಪುಣ್ಯಾರಾಧನೆ ದಿನ ಪುನೀತ್‌ ಅವರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸುತ್ತೇವೆ. ಇಷ್ಟದ ಖಾದ್ಯವನ್ನು ಎಡೆ ಇಡುತ್ತೇವೆ. ಬಳಿಕೆ ಮನೆಗೆ ವಾಪಸ್ಸಾಗಿ ಬಂಧುಗಳು, ಸಂಬಂಧಿಕರಿಗೆ ಅನ್ನ ಸಂತರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿಲ್ಲ: ವಿಜಯ್ ಸೇತುಪತಿ

    ಇದು ಖಾಸಗಿಯಾಗಿ ನಡೆಯುವ ಕಾರ್ಯವಾಗಿದೆ. ಹೀಗಾಗಿ 11 ನೇ ದಿನದ ಪುಣ್ಯ ಆರಾಧನೆ ಮನೆಯಲ್ಲಿ ಜರುಗುತ್ತದೆ. ಬದಲಾವಣೆಗಳಿದ್ದಲ್ಲಿ ನಾವೇ ತಿಳಿಸುತ್ತೇವೆ. ಅಭಿಮಾನಿಗಳಲ್ಲಿ ಸುಳ್ಳು ವದಂತಿಗಳು ಹಬ್ಬಬಾರದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ವಿಕೃತಿ ಮೆರೆದಿದ್ದ ಪುಂಡರು ಅರೆಸ್ಟ್

    ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯ ಸ್ತಂಭನದಿಂದಾಗಿ ಅ.29ರಂದು ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾದರು.

  • ನಾವೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡ್ತೇವೆ: ಸಿಎಂ ಎಚ್‍ಡಿಕೆ

    ನಾವೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡ್ತೇವೆ: ಸಿಎಂ ಎಚ್‍ಡಿಕೆ

    ತುಮಕೂರು: ಕೇಂದ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಸೇರಿದಂತೆ ಮಹಾಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ನಡೆದಾಡುವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳು ಸಲ್ಲಿಸಿರುವ ಸೇವೆಯ ಬಗ್ಗೆ ಹೇಳಲು ಪದಗಳು ಇಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ವೇಳೆ ಅವರು ನನ್ನನ್ನು ಕೇಳಿದ್ದು ಒಂದೇ, “ರೈತರು ಹೇಗಿದ್ದಾರೆ. ರಾಜ್ಯದಲ್ಲಿ ಮಳೆ-ಬೆಳೆ ಚೆನ್ನಾಗಿ ಅಗುತ್ತೀದ್ದೇಯಾ” ಎಂದು ಮಾತ್ರ. ಅದನ್ನು ಬಿಟ್ಟರೆ ಅವರು ಬೇರೆ ಏನು ಕೇಳಲಿಲ್ಲ. ಪ್ರತಿದಿನ ಅವರಿಗೆ ನಮನ ಸಲ್ಲಿಸಿ ಮುಂದಿನ ಕಾರ್ಯಕ್ರಮ ಕ್ಕೆ ಹೋಗುತ್ತೇನೆ ಎಂದರು.

    ಇದೇ ವೇಳೆ ಅವರಿಗೆ ಭಾರತ ರತ್ನ ಲಭಿಸಿದ್ದರೆ, ಒಂದು ತೂಕ ಬರುತ್ತಿತ್ತು. ಮುಂದಿನ ದಿನಗಳಲ್ಲಿ ನಮಗೆ ಆ ಶಕ್ತಿ ಬಂದರೆ ನಾನು ಆ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಈ ರಾಜ್ಯಕ್ಕೆ ಬೇಕಾದ್ದು ಮಾಡುವ ಶಕ್ತಿ ನಮಗೆ ಬರುತ್ತದೆ. ಇದರಲ್ಲಿ ಯಾವುದೇ ಸಂಶಯಬೇಡ. ಪರಮಪೂಜ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡುವ ಅವಕಾಶ ನಮಗೆ ಬರುತ್ತೆ. ಜನ ಇದನ್ನು ಅರ್ಥ ಮಾಡಿಕೊಳ್ಳಕೊಂಡು ನಮಗೆ ಶಕ್ತಿ ತುಂಬಬೇಕು. ನನ್ನ ಪುಣ್ಯ 2006ರಲ್ಲೇ ಶ್ರೀಗಳಿಗೆ ಕರ್ನಾಟಕ ರತ್ನ ನೀಡಿದ್ದೇವು ಎಂದು ಹೇಳಿದರು.

    ಮಾದರಿ ಗ್ರಾಮ: ಸಿದ್ದಗಂಗಾ ಶ್ರೀಗಳ ಹುಟ್ಟೂರನ್ನು ಸರ್ಕಾರ ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಮಾಡುತ್ತದೆ. ಅಲ್ಲದೇ ಅವರ ಹೆಸರಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡುತ್ತೇವೆ ಎಂದು ಸಿಎಂ ಘೋಷಣೆ ಮಾಡಿದರು. ಡಿಸಿಎಂ ಪರಮೇಶ್ವರ್ ಅವರು ಮಾತನಾಡಿ, ಶ್ರೀಗಳು ಇಡೀ ಜೀವನವನ್ನು ಧರ್ಮಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದಾರೆ. ಸಾವಿರಾರು ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಶ್ರೀಗಳ ಹೆಸರಿನಲ್ಲಿ ಕಾರ್ಯಕ್ರಮ ಜಾರಿಗೆ ತರಲು ಸಿಎಂ ಅವರ ಬಳಿ ಮನವಿ ಮಾಡುತ್ತೇನೆ ಎಂದು ಎಂದರು.

    ವಿರೋಧಿ ಪಕ್ಷದ ನಾಯಕರಾದ ಯಡಿಯೂರಪ್ಪ ಅವರು ಮಾತನಾಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳು ಈ ಜಗತ್ತಿನ ಅಚ್ಚರಿ ಅಂದರೆ ತಪ್ಪಾಗಲಾರದು. ಜಾತಿ, ಮತಗಳ ಭೇದವಿಲ್ಲದೆ ಜೀವನ ನಡೆಸಿದ ಸ್ವಾಮೀಜಿಗಳು ಎಲ್ಲಾ ಧರ್ಮದವರಿಗೂ ಶಿಕ್ಷಣ ನೀಡಿದ್ದಾರೆ. ರಾಷ್ಟ್ರೀಯ ಭಾವೈಕ್ಯತೆಯನ್ನ ನಾವು ಎಲ್ಲಿಯೂ ಹುಡುಕಿಕೊಂಡು ಹೋಗುವ ಅಗತ್ಯವೇ ಇಲ್ಲದಂತೆ, ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರೆ ಸಾಕು ಆದರ ಅರಿವು ನಮಗಾಗುತ್ತದೆ ಎಂದು ತಿಳಿಸಿದರು.

    ಗೃಹ ಸಚಿವ ಎಂ.ಬಿ. ಪಾಟೀಲರು ಮಾತನಾಡಿ, ನೊಬೆಲ್ ಪುರಸ್ಕಾರಕ್ಕೆ ಶಿಫಾರಸು ಮಾಡುವ ಅವಕಾಶ ಇದೆಯಾ, ಅದರ ಮಾನದಂಡಗಳೇನಿದೆ ಎಂಬುವುದನ್ನು ಸಂಗ್ರಹಿಸುತ್ತಿರುವುದಾಗಿ ಹೇಳಿದರು. ಇದೇ ವೇಳೆ ಸಿದ್ದಗಂಗಾ ಶ್ರೀಗಳಿಗೆ ಚಿಕೆತ್ಸೆ ನೀಡಿದ ವೈದ್ಯರಾದ ಡಾ.ವೆಂಕಟರಮಣ ಮತ್ತು ಡಾ.ರವೀಂದ್ರ ಅವರಿಗೆ ಸಿದ್ದಗಂಗಾ ಮಠದಿಂದ ಸನ್ಮಾನ ಮಾಡಲಾಯಿತು.

    ಉಳಿದಂತೆ ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಬೆಳಗ್ಗೆಯಿಂದಲೇ ಅರ್ಚಕರು, ಸಿದ್ದಲಿಂಗ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿದರು. ಗಣ್ಯಾತಿಗಣ್ಯರು ಸೇರಿದಂತೆ ಲಕ್ಷಾಂತರ ಭಕ್ತರು 2 ಕಿ.ಮೀ. ಸರತಿ ಸಾಲಿನಲ್ಲಿ ನಿಂತು ಶ್ರೀಗಳಿಗೆ ನಮನ ಸಲ್ಲಿಸಿದರು. ಶ್ರೀಗಳ ಭಾವಚಿತ್ರ ಇರುವ ಟೀ ಶರ್ಟ್ ಧರಿಸಿದ 13 ಸಾವಿರಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವ್ಯವಸ್ಥೆಗಳನ್ನ ನೋಡಿಕೊಂಡರು.

    ದಾಸೋಹ ಕಾರ್ಯಕ್ರಮ: ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರ ಆಗಮಿಸಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಪುಣ್ಯಾರಾಧನೆ ಕಾರ್ಯಕ್ರಮದ ಭಾಗವಾಗಿ ಆಗಮಿಸಿದ್ದ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅನ್ನ, ಸಾಂಬಾರ್, ಪಾಯಸ, ಬೂಂದಿ, ಜಿಲೇಬಿ ಸೇರಿದಂತೆ ಇನ್ನಿತರ ತಿನಿಸುಗಳನ್ನು ಮಠದ 11 ಕಡೆ ದಾಸೋಹ ವ್ಯವಸ್ಥೆಯನ್ನ ಮಾಡಲಾಗಿತ್ತು. ಸಂಜೆ ವೇಳೆಗೆ ಭಕ್ತರ ಸಂಖ್ಯೆ ಹೆಚ್ಚಳವಾದ ಕಾರಣ ಶ್ರೀಗಳ ಗದ್ದುಗೆ ಒಳ ಪ್ರವೇಶಕ್ಕೆ ಅವಕಾಶ ನೀಡದೇ ಮುಖ್ಯದ್ವಾರದಿಂದಲೇ ದರ್ಶನ ಮಾಡಲು ಅವಕಾಶ ನೀಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

    ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ 25 ಟನ್ ಹಣ್ಣು ಮತ್ತು ತರಕಾರಿಗಳನ್ನು ಕಳುಹಿಸಿಕೊಡಲಾಯಿತು.

    ನಾಳೆ ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರುವುದರಿಂದ ಮಠದಲ್ಲಿ ಅನ್ನ ದಾಸೋಹ ಮಾಡುವುದಕ್ಕೆ ಉಪಯುಕ್ತವಾಗಲೆಂದು ಹಣ್ಣು ತರಕಾರಿಗಳನ್ನ ಕಳುಹಿಸಿಕೊಡಲಾಯಿತು. ಕೋಲಾರದ ಎಪಿಎಂಸಿ ಮಾರುಕಟ್ಟೆಯ ತರಕಾರಿ ದಲ್ಲಾಳಿಗಳು, ವರ್ತಕರು, ರೈತರು ಸೇರಿ 10 ಟನ್ ಟೊಮ್ಯಾಟೊ, 15 ಟನ್ ವಿವಿಧ ಬಗೆಬಗೆಯ ತರಕಾರಿಗಳಾದ ಮೂಲಂಗಿ, ಬೀನ್ಸ್, ಹೂಕೋಸು, ಕ್ಯಾರೆಟ್ ಹಾಗೂ ಅಕ್ಕಿ ಮುಂತಾದವುಗಳನ್ನು 2 ಗೂಡ್ಸ್ ಲಾರಿಗಳ ಮೂಲಕ ಸಿದ್ಧಗಂಗಾ ಮಠಕ್ಕೆ ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀ ಶಿವಕುಮಾರ ಶ್ರೀಗಳು ಮಠಕ್ಕೆ ಬರುವ ಭಕ್ತರು ಹಸಿದು ವಾಪಸ್ ಹೋಗಬಾರದೆಂದು ಅನ್ನ ದಾಸೋಹವನ್ನು ಮಾಡಿಸುತ್ತಿದ್ದರು. ಅಲ್ಲದೆ ಮಠಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಅನ್ನ, ವಿದ್ಯೆ, ಆಶ್ರಯ ನೀಡಿ ತ್ರಿವಿಧ ದಾಸೋಹಿ ಎಂದು ಖ್ಯಾತಿ ಪಡೆದಿದ್ದಾರೆ. ಹಾಗಾಗಿ ಸ್ವಾಮೀಜಿಗಳ ಸೇವೆ ಹೀಗೆಯೇ ಮುಂದುವರಿಯಬೇಕೆಂದು, ಅವರು ಅಗಲಿದ ನಂತರವೂ ಮಠದಲ್ಲಿ ದಾಸೋಹಕ್ಕೆ ಯಾವುದೇ ತೊಂದರೆಯಾಗಬಾರದೆಂದು ಕೋಲಾರದ ಮಾರುಕಟ್ಟೆ ವತಿಯಿಂದ ಈ ಸಹಾಯವನ್ನು ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

    ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

    ತುಮಕೂರು: ಸಿದ್ದಗಂಗಾ ಶ್ರೀಗಳು ದೇಹತ್ಯಾಗ ಮಾಡಿ ಇಂದಿಗೆ 9 ದಿನಗಳು ಆಗಿದೆ. 11ನೇ ದಿನವಾದ ಗುರುವಾರ ಶ್ರೀಗಳ ಪುಣ್ಯಾರಾಧನೆ ನಡೆಯಲಿದೆ. ಈ ಹಿನ್ನೆಲೆ ಮಠದಲ್ಲಿ ಸಕಲ ತಯಾರಿ ನಡೆಯುತ್ತಿದೆ. ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿದ್ದಾರೆ.

    ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆಗೆ ಶ್ರೀಮಠ ಸಜ್ಜಾಗುತ್ತಿದೆ. ಗುರುವಾರ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಭಕ್ತರಿಗೆ ಭಕ್ಷ್ಯ ಭೋಜನಕ್ಕೆ ಸಿದ್ಧತೆ ನಡೆಯುತ್ತಿದೆ. ಮಠದ 4 ಅಡುಗೆ ಕೊಪ್ಪಲಿನಲ್ಲಿ 100ಕ್ಕೂ ಹೆಚ್ಚು ಅಡುಗೆ ಭಟ್ಟರು ವಿವಿಧ ಸಿಹಿ ತಿನಿಸುಗಳ ತಯಾರಿ ನಡೆಯುತ್ತಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ಸಾಧ್ಯತೆ ಇದೆ. ಮಠದ ಆವರಣದಲ್ಲಿ ಸುಮಾರು ಹತ್ತು ಕಡೆ ಅನ್ನ ದಾಸೋಹಕ್ಕೂ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀಗಳ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದಿನಸಿ ಸಾಮಾಗ್ರಿಗಳು ಹರಿದು ಬರುತ್ತಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ಸ್ವಯಂ ಪ್ರೇರಿತರಾಗಿ ಸಾವಿರಾರು ಕ್ವಿಂಟಾಲ್ ಅಕ್ಕಿ, ಬೇಳೆ, ಬೆಲ್ಲ, ತರಕಾರಿ ತಂದು ಕೊಡುತ್ತಿದ್ದಾರೆ. ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಠದ ವಿದ್ಯಾರ್ಥಿಗಳು, ಸಂಸ್ಥೆಯ ಶಿಕ್ಷಕರು, ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಿದ್ಧತೆಯಲ್ಲಿ ತಲ್ಲೀನರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭಕ್ತಾಧಿಗಳು ದಾಸೋಹಕ್ಕಾಗಿ ಸಾಮಾಗ್ರಿಗಳನ್ನು ಕಾಣಿಕೆ ನೀಡುತ್ತಿರುವುದನ್ನು ಕಂಡು ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

    ಇದೇ ತಿಂಗಳ 31ರಂದು ಡಾ. ಶ್ರೀ ಶಿವಕುಮಾರ ಸ್ವಾಮಿಜಿ ಅವರ ಪುಣ್ಯಾರಾಧನೆಯನ್ನು ಮಾಡಲಾಗುತ್ತಿದೆ. ಆದರಿಂದ ಶ್ರೀಗಳ ಭಕ್ತಾಧಿಗಳು ವಿವಿಧೆಡೆಯಿಂದ ತಮ್ಮ ಕೈಲಾದ ಸಾಮಾಗ್ರಿಗಳನ್ನು ಕಾಣಿಕೆ ರೂಪದಲ್ಲಿ ನೀಡಿ ದಾಸೋಹಕ್ಕೆ ಸಹಾಯ ಮಾಡುತ್ತಿದ್ದಾರೆ. ನಡೆದಾಡುವ ದೇವರಿಗೆ ನಮನ ಸಲ್ಲಿಸಲು ರಾಜ್ಯದ ಹಲವೆಡೆಯಿಂದ ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ, ಬೇಳೆ, ದವಸ ಧಾನ್ಯಗಳನ್ನು ತಂದು ಸಿದ್ದಗಂಗಾ ಮಠಕ್ಕೆ ನೀಡುತ್ತಿದ್ದಾರೆ.ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಭಕ್ತರು ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಮೇಲೆ ಇಟ್ಟಿರುವ ಪ್ರೀತಿಯನ್ನು ಕಂಡು ಸಿದ್ದಲಿಂಗ ಶ್ರೀಗಳ ಕಣ್ತುಂಬಿ ಬಂತು. ಭಕ್ತರಿಂದ ಕಣ್ಣೀರು ಮರೆ ಮಾಚಲು ಸಿದ್ದಲಿಂಗ ಶ್ರೀಗಳು ತಿರುಗಿನಿಂತು ಕಣ್ಣೀರು ಒರೆಸಿಕೊಂಡರು. ಶ್ರೀಗಳ ಪುಣ್ಯಾರಾಧನೆಗೆ ಸಿದ್ದತೆಗಳು ನಡೆಯುತ್ತಿದ್ದು, ಸಾಲು ಸಾಲಾಗಿ ಲಾರಿಗಳ ಮೂಲಕ ಭಕ್ತಾಧಿಗಳು ದವಸ ಧಾನ್ಯಗಳು ತಂದು ಕಾಣಿಕೆಯಾಗಿ ಮಠಕ್ಕೆ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ದಾವಣಗೆರೆ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠಕ್ಕೆ ಬರೋಬ್ಬರಿ 11 ಟನ್‍ಕ್ಕಿಂತ ಹೆಚ್ಚು ಅಕ್ಕಿಯನ್ನು ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥೆ ಕಾಣಿಕೆಯಾಗಿ ನೀಡಿದೆ.

    ಇದೇ ತಿಂಗಳ 31ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯವ ಶ್ರೀಗಳ ಪುಣ್ಯಾರಾಧನೆಗೆ ಲಕ್ಷಾಂತರ ಮಂದಿ ಭಕ್ತರು ಬರುತ್ತಾರೆ. ಈ ಕುರಿತು ಮಾಹಿತಿ ತಿಳಿದ ಬಳಿಕ ಸಿದ್ದಗಂಗಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪೋಷಕರು ಸ್ವಯಂ ಪ್ರೇರಿತರಾಗಿ ಬಂದು ಮಠಕ್ಕೆ ತಮ್ಮ ಕೈಲಾದ ಕಾಣಿಕೆ ನೀಡುತ್ತಿದ್ದಾರೆ. ನಮ್ಮೊಂದಿಗೆ ಕೈ ಜೋಡಿಸಿದ್ದಾರೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

    ಈಗಾಗಲೇ ಸಿದ್ದಗಂಗಾ ವಿದ್ಯಾಸಂಸ್ಥೆಗೆ ಮಾರುಕಟ್ಟೆಯಿಂದ ಸಾಕಷ್ಟು ಪ್ರಮಾಣದಲ್ಲಿ ತರಕಾರಿ ಹಾಗೂ ಅಡುಗೆ ಸಾಮಾಗ್ರಿಗಳು ಕಾಣಿಕೆ ರೂಪದಲ್ಲಿ ಬಂದಿದ್ದು, ಎಲ್ಲವನ್ನು ಲಾರಿ ಮುಖಾಂತರ ಸಿದ್ದಗಂಗಾ ಮಠಕ್ಕೆ ರವಾನೆ ಮಾಡಲಾಗುತ್ತದೆ.

    ಸಿದ್ದಗಂಗಾ ವಿದ್ಯಾಸಂಸ್ಥೆಯಿಂದ ಮೊದಲು 111 ಚೀಲ ಅಕ್ಕಿಯನ್ನು ಸಿದ್ದಗಂಗಾ ಮಠಕ್ಕೆ ನೀಡಲು ನಿರ್ಧರಿಸಿದ್ದರು. ಆದ್ರೆ ವಿದ್ಯಾರ್ಥಿಗಳ ಪೋಷಕರು ಸ್ವಯಂ ಪ್ರೇರಿತರಾಗಿ ಆಗಮಿಸಿ ಕೈ ಜೋಡಿಸಿದಕ್ಕೆ ಈಗ 11,111 ಕೆಜಿ ಅಕ್ಕಿ ಸಂಗ್ರಹವಾಗಿದ್ದು, ಇದನ್ನು ಕಾಣಿಕೆಯಾಗಿ ಸಿದ್ದಗಂಗಾ ಮಠಕ್ಕೆ ಕಳುಹಿಸುತ್ತೇವೆ. ಇದು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ಶ್ರೀಗಳ ಪುಣ್ಯಾರಾಧನೆಗೆ ಒಂದು ಅಳಿಲು ಸೇವೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಪುಣ್ಯಾರಾಧನೆ – ನಾಟಿ ಕೋಳಿ ಸಾಂಬಾರ್, ರಾಗಿ ಮುದ್ದೆ, ಮಟನ್, ಚಿಕನ್ ಚಾಪ್ಸ್

    ಅಂಬಿ ಪುಣ್ಯಾರಾಧನೆ – ನಾಟಿ ಕೋಳಿ ಸಾಂಬಾರ್, ರಾಗಿ ಮುದ್ದೆ, ಮಟನ್, ಚಿಕನ್ ಚಾಪ್ಸ್

    ರಾಮನಗರ: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ ವಾರವೇ ಕಳೆದಿದ್ದು ಅಭಿಮಾನಿಗಳು ಅಂಬಿಯ ನೆನಪಿನಲ್ಲಿ ಪುಣ್ಯಾರಾಧನೆ (ತಿಥಿ) ಕಾರ್ಯವನ್ನ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮಳೂರಿನಲ್ಲಿ ನಡೆಸಿದ್ದಾರೆ.

    ಅಂಬರೀಶ್ ಅಭಿಮಾನಿಗಳು ಹಾಗೂ ಮಳೂರು ಪಟ್ಟಣ ಗ್ರಾಮದ ನಿವಾಸಿಗಳು ಸೇರಿ ಅಂಬರೀಶ್ ಪುಣ್ಯಾರಾಧನೆ ಕಾರ್ಯ ನೆರವೇರಿಸಿದ್ದಾರೆ. ಈ ವೇಳೆ ಅಂಬರೀಶ್ ಫೋಟೋವನ್ನಟ್ಟು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.

    ಪುಣ್ಯಾರಾಧನೆ ವೇಳೆ ನಾಟಿ ಕೋಳಿ ಸಾಂಬಾರ್, ರಾಗಿ ಮುದ್ದೆ, ಮಟನ್, ಚಿಕನ್ ಚಾಪ್ಸ್ ಅಡಿಗೆಯನ್ನು ಮಾಡಿ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಊಟ ಬಡಿಸಿದರು.

    ತಿಥಿ ಕಾರ್ಯದಂತೆ ಅಂಬಿ ಫೋಟೋ ಮುಂದೆ ಊಟವನ್ನ ಬಡಿಸಿದ್ದಾರೆ. ಅಂಬರೀಶ್ ನಮ್ಮ ಜೊತೆಯಿಲ್ಲ ಆದರೆ ಅವರನ್ನ ಎಂದಿಗೂ ಮರೆಯಲಾಗಲ್ಲ ಹಾಗಾಗಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕೆಂದು ಗ್ರಾಮಸ್ಥರು ಪ್ರಾರ್ಥಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv