Tag: ಪುತ್ತಿಗೆ ಮಠ

  • 10 ವರ್ಷಗಳ ಹಿಂದೆ ಉಡುಪಿಗೆ ಆಗಮಿಸಿದ್ದ ರತನ್‌ ಟಾಟಾ

    10 ವರ್ಷಗಳ ಹಿಂದೆ ಉಡುಪಿಗೆ ಆಗಮಿಸಿದ್ದ ರತನ್‌ ಟಾಟಾ

    ಉಡುಪಿ: ಹತ್ತು ವರ್ಷಗಳ ಹಿಂದೆ ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ರತನ್‌ ಟಾಟಾ (Ratan Tata) ಉಡುಪಿಗೆ (Udupi) ಆಗಮಿಸಿದ್ದರು.

    ಹಿರಿಯಡ್ಕದಲ್ಲಿರುವ ಪುತ್ತಿಗೆ ಮೂಲ ಮಠಕ್ಕೆ (Puttige Matha) ಆಗಮಿಸಿದ ರತನ್‌ ಟಾಟಾ ಸ್ವಾಗತ ಗೋಪುರವನ್ನು ಲೋಕಾರ್ಪಣೆ ಮಾಡಿದ್ದರು. ಗ್ರಾಮೀಣ ಪರಿಸರದ ಮಠದಲ್ಲಿ ಅಮೂಲ್ಯ ಸಮಯವನ್ನು ಕಳೆದ ಅವರು ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಅವಕಾಶಕ್ಕಾಗಿ ಕಾಯಬೇಡಿ. ನೀವೇ ಸ್ವಂತ ಅವಕಾಶಗಳನ್ನು ಸೃಷ್ಟಿಸಿ: ರತನ್‌ ಟಾಟಾ ಪ್ರಸಿದ್ದ ಅಣಿಮುತ್ತುಗಳನ್ನು ಓದಿ

    ಪುತ್ತಿಗೆ ಮಠಕ್ಕೆ ಬಂದಿದ್ದ ರತನ್ ಟಾಟಾ ಕರಾವಳಿಯ ಕಲೆ ಸಂಸ್ಕೃತಿ ಆಚರಣೆಗಳ ಬಗ್ಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯಿಂದ ಮಾಹಿತಿಗಳನ್ನು ಪಡೆದಿದ್ದರು. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅಷ್ಟಮಠಾಧೀಶರು ಎರಡು ವರ್ಷಗಳ ಕಾಲ ಸರತಿಯಲ್ಲಿ ಪೂಜೆಗೈವ ಪರ್ಯಾಯ ಮಹೋತ್ಸವದ ಬಗ್ಗೆ ಮಾಹಿತಿಯನ್ನು ಬಹಳ ಆಸಕ್ತಿಯಿಂದ ತಿಳಿದುಕೊಂಡಿದ್ದರು. ಪುತ್ತಿಗೆ ಮೂಲ ಮಠದಲ್ಲಿ ರತನ್ ಟಾಟಾವರಿಗೆ ಈ ಸಂದರ್ಭ ಪುರ ಗೌರವವನ್ನು ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

    ತಮ್ಮ ಭಾಷಣದಲ್ಲಿ ರತನ್‌ ಟಾಟಾ ಈ ಪವಿತ್ರ ವಾತಾವರಣ ನನಗೆ ಇಷ್ಟವಾಯಿತು,  ನಾನು ಧನ್ಯನಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಭ್ರಷ್ಟಾಚಾರ ನಿರ್ಮೂಲನೆ ಮಾಡೋದು ಹೇಗೆ? – ರತನ್ ಟಾಟಾ ನೀಡಿದ ಖಡಕ್‌ ಉತ್ತರ ಇದು

    ಭೇಟಿ ಸಂದರ್ಭದಲ್ಲಿ ಭಗವದ್ಗೀತೆ (Bhagavad Gita) ಬಗ್ಗೆ ತಮಗಿರುವ ಆಸಕ್ತಿ ವ್ಯಕ್ತಪಡಿಸಿದ್ದರು. ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು ರತನ್ ಟಾಟಾ ಅವರ ಆತ್ಮಕ್ಕೆ ಸದ್ಗತಿ ಕೊಡಲಿ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.

     

  • ಉಡುಪಿಯಲ್ಲಿ ಅದ್ಧೂರಿ ಪುತ್ತಿಗೆ ಪರ್ಯಾಯ ಮೆರವಣಿಗೆ – ಏಳು ಮಠಾಧೀಶರು ಗೈರು

    ಉಡುಪಿಯಲ್ಲಿ ಅದ್ಧೂರಿ ಪುತ್ತಿಗೆ ಪರ್ಯಾಯ ಮೆರವಣಿಗೆ – ಏಳು ಮಠಾಧೀಶರು ಗೈರು

    ಉಡುಪಿ: ಶ್ರೀಕೃಷ್ಣ ಮಠದ (Krishna Mutt) ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ (Puttige Mutt) ಹಸ್ತಾಂತರ ಆಗಿದೆ. ಪರ್ಯಾಯ ಮೆರವಣಿಗೆ ಅದ್ದೂರಿಯಾಗಿ ಉಡುಪಿಯ ಪ್ರಮುಖ ರಸ್ತೆಗಳಲ್ಲಿ ನಡೆಯಿತು.

    ನೂರಕ್ಕೂ ಹೆಚ್ಚು ಭಜನಾ ತಂಡ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾದವು. ಜೋಡುಕಟ್ಟೆಯಿಂದ ನಡೆದ ಪರ್ಯಾಯ ಮೆರವಣಿಗೆ ಸುಮಾರು 3 ಗಂಟೆಗಳ ಕಾಲ ನಡೆಯಿತು. ಉಡುಪಿಯ ಅಷ್ಟಮಠಾಧೀಶರ ಪೈಕಿ ಏಳು ಮಠಗಳು ಪರ್ಯಾಯ ಮೆರವಣಿಗೆಗೆ ಗೈರಾಗಿದ್ದರು. ವಿದೇಶ ಪ್ರಯಾಣ ಮಾಡಿರುವ ಕಾರಣ ನಿಯಮ ಮೀರಿದ್ದಕ್ಕೆ ಉಳಿದ ಮಠಗಳು ಈ ನಿರ್ಧಾರ ಮಾಡಿದವು. ಇದನ್ನೂ ಓದಿ: ಜ.19ರಂದು ಬೆಂಗಳೂರಿಗೆ ಮೋದಿ – ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

    ಪುತ್ತಿಗೆ ಸುಗುಣೇಂದ್ರ ತೀರ್ಥಶ್ರೀಪಾದರು, ಸುಶ್ರೀಂದ್ರ ತೀರ್ಥ ಸ್ವಾಮೀಜಿ ವಾಹನದ ಮೇಲಿರಿಸಿದ ಪಲ್ಲಕ್ಕಿಯಲ್ಲಿ ಏರಿ ಮಠಕ್ಕೆ ಸಾಂಪ್ರದಾಯಿಕವಾಗಿ ಬಂದು ಅಧಿಕಾರ ಸ್ವೀಕರಿಸಿದರು.

    ಪರ್ಯಾಯ ಅಧಿಕಾರ ಹಸ್ತಾಂತರ ಮಾಡಿದ ಅದಮಾರು ಸ್ವಾಮೀಜಿ
    ಪುತ್ತಿಗೆ ಶ್ರೀಗಳ ಚತುರ್ಥ ಪರ್ಯಾಯ ಉಡುಪಿಯಲ್ಲಿ ಆರಂಭವಾಗಿದೆ. ಕೃಷ್ಣಪೂಜೆಯ ಅಧಿಕಾರ ಹಸ್ತಾಂತರ ಕೃಷ್ಣ ಪೂಜೆ ಮುಗಿಸಿದ ಕೃಷ್ಣಾಪುರ ಸ್ವಾಮೀಜಿ ಮಾಡಬೇಕಿತ್ತು. ಪುತ್ತಿಗೆ ಸ್ವಾಮೀಜಿ ಸಾಗರೋಲ್ಲಂಘನ ಮಾಡಿರುವುದರಿಂದ ಕೃಷ್ಣಾಪುರ ಶ್ರೀಗಳ ಅನುಪಸ್ಥಿತಿಯ ನಡುವೆಯೂ ಅದಮಾರು ಶ್ರೀ ಗಳಿಂದ ಅಧಿಕಾರ ಹಸ್ತಾಂತರ ನಡೆಯಿತು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ನೀಡಿದ್ದ SC ಒಳಮೀಸಲಾತಿಯನ್ನ ಪುನರ್ ಪರಿಶೀಲನೆ ಮಾಡ್ತೀವಿ: ಪರಮೇಶ್ವರ್

    ಅದಮಾರು ಸ್ವಾಮೀಜಿ ಸರ್ವಜ್ಞ ಪೀಠಾರೋಹಣ ಮಾಡಿಸಿದರು. ಅದಮಾರು ಮಠದ ವಿಶ್ವಪ್ರಿಯ ತೀರ್ಥರು ಧಾರ್ಮಿಕ ವಿಧಿ ನಿರ್ವಹಣೆ ಮಾಡಿದರು. ಅಕ್ಷಯ ಪಾತ್ರೆ ಹಾಗೂ ಅನ್ನದ ಸೆಟ್ಟುಗ ಹಸ್ತಾಂತರ ಮಾಡಿದರು. ಪೂಜಾಧಿಕಾರ ಹಸ್ತಾಂತರದ ನಂತರ ಅರಳು ಗದ್ದುಗೆಯಲ್ಲಿ ಖಾಸಗಿ ದರ್ಬಾರ್ ನಡೆಯಿತು.

  • ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ: ಯು.ಟಿ ಖಾದರ್

    ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ: ಯು.ಟಿ ಖಾದರ್

    ಉಡುಪಿ: ಕೃಷ್ಣ ಮಠ (Krishna Mutt) ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ (UT Khader) ಹೇಳಿದರು.

    ಉಡುಪಿ (Udupi) ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ನೀಡಿದ್ದ SC ಒಳಮೀಸಲಾತಿಯನ್ನ ಪುನರ್ ಪರಿಶೀಲನೆ ಮಾಡ್ತೀವಿ: ಪರಮೇಶ್ವರ್

    ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ

  • ಉಡುಪಿ ಜಿಲ್ಲಾಡಳಿತಕ್ಕೆ 10 ಲಕ್ಷ ರೂ. ಮೌಲ್ಯದ ದಿನಸಿ ಹಸ್ತಾಂತರಿಸಿದ ಪುತ್ತಿಗೆ ಶ್ರೀ

    ಉಡುಪಿ ಜಿಲ್ಲಾಡಳಿತಕ್ಕೆ 10 ಲಕ್ಷ ರೂ. ಮೌಲ್ಯದ ದಿನಸಿ ಹಸ್ತಾಂತರಿಸಿದ ಪುತ್ತಿಗೆ ಶ್ರೀ

    ಉಡುಪಿ: ಕೊರೊನಾ ವೈರಸ್ ದೇಶವನ್ನು ಸ್ತಬ್ಧ ಮಾಡಿದ್ದು, ಜನ ಸಂಕಷ್ಟದಲ್ಲಿದ್ದಾರೆ. ಜನೋಪಯೋಗಕ್ಕಾಗಿ ನಮ್ಮ ಮಠದ ವತಿಯಿಂದ ಹತ್ತು ಲಕ್ಷ ದೇಣಿಗೆ ಕೊಡುತ್ತಿದ್ದೇವೆ ಎಂದು ಉಡುಪಿ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಕೊರೊನಾ ವೈರಸ್ ಅನ್ನು ಉದ್ದೇಶಪೂರ್ವಕವಾಗಿ ಪಸರಿಸಲಾಗುತ್ತಿದೆ. ಈ ಬಗ್ಗೆ ನಮಗೆ ಅನುಮಾನ ಇದೆ. ಕೊರೊನಾ ನರಕಾಸುರನಂತೆ ಭಾಸವಾಗುತ್ತಿದೆ. ಕೊರೊನಾವನ್ನು ಉಲ್ಟಾ ಹೇಳಿದರೆ ನರಕ ಎಂದಾಗುತ್ತದೆ. ನರಕಾಸುರನ ಸಂಹಾರ ಮಾಡಲು ಕೃಷ್ಣನ ಅವತಾರ ಎತ್ತಿ ಬರಬೇಕಾಗಿದೆ. ಮಾನವ ಸಮುದಾಯ ಮಾಡಿದ ತಪ್ಪುಗಳಿಂದ ಈ ಪರಿಸ್ಥಿತಿ ಬಂದಿದೆ ಎಂದರು. ಇದೇ ವೇಳೆ ಐದು ಲಕ್ಷ ರೂ. ಮೌಲ್ಯದ ದಿನಸಿಯನ್ನು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ಅವರ ಮೂಲಕ ಸ್ವಾಮೀಜಿ ಹಸ್ತಾಂತರ ಮಾಡಿದರು.

    ನಾವು ಪ್ರಾಚೀನ ಮೌಲ್ಯಗಳನ್ನು ಬದಿಗೆ ಇಟ್ಟಿದ್ದೇವೆ. ಅನಗತ್ಯ ಪ್ರಾಣಿ ಸಂಹಾರದಿಂದ ಕೊರೊನಾ ಬಂದಿದೆ. ಮನುಷ್ಯನ ದೇಹಕ್ಕೆ ಸಸ್ಯಾಹಾರವೇ ಸೂಕ್ತ. ಮನುಷ್ಯ ಬದುಕಲು ಮಾಂಸಾಹಾರದ ಅಗತ್ಯ ಇಲ್ಲ. ಜೀವಂತ ಪ್ರಾಣಿಗಳನ್ನು ಹಿಡಿದು ತಿನ್ನುವುದರಿಂದ ಕೊರೊನಾ ಬಂದಿದೆ. ಮಾನವ ಸಮುದಾಯ ವಿಧ್ವಂಸಕ ಚಿಂತನೆಯಲ್ಲಿ ಸಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.

    ಭಗವಂತ ಭೂಮಿಯನ್ನು ಸೃಷ್ಟಿ ಮಾಡಿದ್ದು ಬದುಕುವುದಕ್ಕಾಗಿ. ಮನುಷ್ಯರು ಶಸ್ತ್ರಾಸ್ತ್ರ ಒಗ್ಗೂಡಿಸುವಲ್ಲಿ ನಿರತರಾಗಿದ್ದಾರೆ. ಕೊರೊನಾದಿಂದ ಜಗತ್ತನ್ನು ನಾಶ ಮಾಡಬಹುದೆಂದು ದುಷ್ಟರಿಗೆ ಗೊತ್ತಾಗಿದೆ. ಉದ್ದೇಶಪೂರ್ವಕವಾಗಿ ಕೊರೊನಾ ಹರಡುವ ಪ್ರಯತ್ನವೂ ಆಗಬಹುದು. ಒಬ್ಬ ದುಷ್ಟ ನಿಂದ ಸಮಾಜಕ್ಕೆ ದೇಶಕ್ಕೆ ತೊಂದರೆಯಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಕೊರೊನಾ ಬಗ್ಗೆ ಚರ್ಚೆಯಾಗಲಿ. ಈಗಾಗಲೇ ವಿಶ್ವದ ಧಾರ್ಮಿಕ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

    ಕೊರೊನಾದ ವಿರುದ್ಧ ದೂರಗಾಮಿ ಆಲೋಚನೆಯ ಅಗತ್ಯತೆ ಇದೆ. ಇತರ ದೇಶಗಳನ್ನು ಕಂಡು ಸಮಸ್ಯೆಯ ತೀವ್ರತೆಯನ್ನು ಅರಿಯಬೇಕು. ಕೊರೊನಾದಿಂದ ಪುತ್ತಿಗೆ ಮಠದ ವಿದೇಶಿ ಬ್ರಾಂಚ್ ಗಳಿಗೆ ತೊಂದರೆಯಾಗಿದೆ. ಅಮೆರಿಕ, ಲಂಡನ್‍ನ 11 ಶಾಖೆಗಳನ್ನು ಮುಚ್ಚಿದ್ದೇವೆ. ಮಠದ ಸಿಬ್ಬಂದಿ, ಅರ್ಚಕರು ಗೊಂದಲದಲ್ಲಿದ್ದಾರೆ. ಅಲ್ಲಿನ ಸರ್ಕಾರಗಳು ನಮಗೆ ಸಾಕಷ್ಟು ಸಹಾಯ ಮಾಡಿದೆ ಎಂದು ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.