ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಮುಂದಿನ ವಿಚಾರಣೆಯವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಏನಿದು ಪ್ರಕರಣ?
ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 2023ರ 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಅ.30ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಮಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಹೌದು. ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ.
ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಸದ್ಯ ಈ ಪ್ರಕರಣ ಸಂಬಂಧಿಸಿದಂತೆ ಯುವಕನ ಮರಣೋತ್ತರ ಪರೀಕ್ಷೆಯಲ್ಲಿ ಹಲವು ವಿಚಾರಗಳು ಬಯಲಾಗಿವೆ. ಇದು ಅನುಮಾನಾಸ್ಪದ ಸಾವು ದೇಹದ ಮೇಲೆ ಯಾವುದೇ ಗಾಯಗಳಿಲ್ಲ ಎಂದು ರಿಪೋರ್ಟ್ ಪೆಂಡಿಂಗ್ ಇಟ್ಟಿದ್ದಾರೆ. ಹೀಗಾಗಿ ಪೊಲೀಸರು ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ದೇಹದ ಹಲವು ಸ್ಯಾಂಪಲ್‌ಗಳನ್ನ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ.
ಲಿವರ್ ಪೀಸ್, ಜಠರ ಪೀಸ್, ಹೊಟ್ಟೆಯ ದ್ರವಣಾಂಶಗಳು, ಕಾಲರಾ ಪತ್ತೆ ಹಚ್ಚುವುದಕ್ಕೆ ವಿಸರ್ಜನಾ ತ್ಯಾಜ್ಯ, ಮಾತ್ರೆ ಸೇವನೆ ಪತ್ತೆಗೆ ರಕ್ತದ ಸ್ಯಾಂಪಲ್ ಸೇರಿ ಹಲವು ಪರೀಕ್ಷೆಗಾಗಿ ಎಫ್‌ಎಸ್‌ಲ್‌ಗೆ ರವಾನಿಸಿದ್ದಾರೆ. ಈ ಎಲ್ಲ ಪರೀಕ್ಷೆಗಳ ವರದಿ ಒಂದು ತಿಂಗಳ ಒಳಗಡೆ ಬರಲಿದೆ.
ಏನಿದು ಪ್ರಕರಣ?
ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ ಬೆಂಗಳೂರಿಗೆ ಬಂದಿದ್ದ ತಕ್ಷಿತ್ ಆನ್‌ಲೈನ್‌ನಲ್ಲಿ ಮಡಿವಾಳದಲ್ಲಿರುವ ಲಾಡ್ಜ್ವೊಂದರಲ್ಲಿ ರೂಂ ಬುಕ್ ಮಾಡಿದ್ದ. 7 ದಿನ ಲಾಡ್ಜ್‌ನಲ್ಲಿ ಪ್ರೇಯಸಿಯೊಂದಿಗೆ ಇದ್ದ. ಗುರುವಾರ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಕೆ ವಿರಾಜಪೇಟೆಗೆ ಹೋಗಿದ್ದಳು. ಹುಡುಗಿ ಹೋದ ಮರುದಿನವೇ ಯುವಕ ಮೃತಪಟ್ಟಿದ್ದಾನೆ.ಇದನ್ನೂ ಓದಿ: ಮಂಗಳೂರು| ಯುವತಿಯರು ಬಟ್ಟೆ ಬದಲಿಸುವ ವೀಡಿಯೋ ಮಾಡಿ ವೈರಲ್ ಮಾಡಿದ್ದ ರೂಮ್‌ಮೇಟ್ ಬಂಧನ
ಬೆಂಗಳೂರು: 8 ದಿನ ಪ್ರೇಯಸಿ ಜೊತೆಗಿದ್ದು ಬಳಿಕ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಲಾಡ್ಜ್‌ವೊಂದರಲ್ಲಿ ನಡೆದಿದೆ.
ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು ಗುರುತಿಸಲಾಗಿದೆ.
ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ ಬೆಂಗಳೂರಿಗೆ ಬಂದಿದ್ದ. ತಕ್ಷಿತ್ ಆನ್‌ಲೈನ್ ಮೂಲಕ ಮಡಿವಾಳದಲ್ಲಿರುವ ಲಾಡ್ಜ್ವೊಂದರಲ್ಲಿ ರೂಂ ಬುಕ್ ಮಾಡಿದ್ದ. ಎಂಟು ದಿನ ಲಾಡ್ಜ್‌ನಲ್ಲಿ ಪ್ರೇಯಸಿಯೊಂದಿಗೆ ಇದ್ದ. ಗುರುವಾರ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಕೆ ವಿರಾಜಪೇಟೆಗೆ ಹೋಗಿದ್ದಳು. ಹುಡುಗಿ ಹೋದ ಮರುದಿನವೇ ಯುವಕ ಮೃತಪಟ್ಟಿದ್ದಾನೆ.
ಸದ್ಯ ತಕ್ಷಿತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಯುವಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಮಂಗಳೂರು: ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ (VTU Engineering Exam) ಸುಚಿತಾ ಮಡಿವಾಳ (Suchita Madiwala) ಅವರು ಡಾಟಾ ಸೈನ್ಸ್‌ನ ಪ್ರಥಮ ಬ್ಯಾಚ್‌ಗೆ ರಾಜ್ಯಕ್ಕೆ ಮೊದಲ ರ‍್ಯಾಂಕ್ ಜೊತೆಗೆ ಚಿನ್ನದ ಪದಕ ಪಡೆದಿದ್ದಾರೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024-25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು (Putturu) ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ (Vivekananda Engineering College) ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.60 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್ ಜೊತೆಗೆ ಚಿನ್ನದ ಪದಕ ಪಡೆದಿರುತ್ತಾರೆ. ಇದನ್ನೂಓದಿ: 46 ರೂ. ಆಗಿದ್ರೂ 50 ರೂ. ಟಿಕೆಟ್ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು
ದಿ.ರಮೇಶ ಮಡಿವಾಳ ಹಾಗೂ ಮೋಹಿನಿಯವರ ಮಗಳಾದ ಇವರು ಗ್ರಾಮೀಣ ಪ್ರದೇಶದಿಂದ ಬಂದವರಾದರೂ ಶಿಕ್ಷಣದ ಜೊತೆಗೆ ಇತರ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಅಣ್ಣನ ಸಹಾಯ, ತಾಯಿಯ ಪ್ರೋತ್ಸಾಹದಿಂದ ಇಂತಹ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು ನಿರ್ದೇಶಕರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಶ್ ಪ್ರಸನ್ನ ಕೆ ಅವರ ಮುಂದಾಳತ್ವದಲ್ಲಿ ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥೆ ಪ್ರೊ ರೂಪ ಜಿಕೆ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಇವರನ್ನು ಅಭಿನಂದಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ (Arun Kumar Puthila) ಗಡಿಪಾರು ನೋಟಿಸ್ ನೀಡಲಾಗಿದೆ.
ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ (Deportation Notice) ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: 4,000 ಸಕ್ರಿಯ ಕೊರೊನಾ ಕೇಸ್‌ಗಳ ಸನಿಹದಲ್ಲಿ ಭಾರತ – ಕೇರಳದಲ್ಲಿಯೇ 1,400 ಪ್ರಕರಣ
ಮಂಗಳೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ, ಮಗಳು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ (Puttur) ಮುರದಲ್ಲಿ ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಮುರ ಎಂಬಲ್ಲಿ ಕಾರು ಚಾಲಕ ಬಲಕ್ಕೆ ತೆಗೆದುಕೊಳ್ಳುವಾಗ ಕಾರಿನ ಹಿಂಬದಿಗೆ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಡಿವೈಡರ್‌ಗೆ ಲಾರಿ ಡಿಕ್ಕಿ – ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು
ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರಿದ್ದರು. ತಂದೆ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿದ್ದು, ಪವಾಡ ಸದೃಶ್ಯವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.
ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು
ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್
ಶಿಕ್ಷಣ ಕ್ಷೇತ್ರ:
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ
ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರು/ಮಂಗಳೂರು: ನವವಿವಾಹಿತ ಮಹಿಳೆ (Newly Married Woman) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಜಾಲಹಳ್ಳಿಯಲ್ಲಿ ನಡೆದಿದೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಪೂಜಾಶ್ರೀ ಪುತ್ತೂರಿನ (Puttur) ಕಾಣಿಯೂರು (Kaniyur) ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ವಿವಾಹವಾಗಿದ್ದರು. ಕೆಲಸ ಅರಸುವ ಸಲುವಾಗಿ ಕಳೆದ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರೋ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ, ಆರ್ಥಿಕ ಶಿಸ್ತು ಉತ್ತಮ – ಸರ್ಕಾರಕ್ಕೆ ರಾಜ್ಯಪಾಲರಿಂದ ಬಹುಪರಾಕ್
ಸಂಬಂಧಿಕರ ಮನೆಯಲ್ಲೇ ಇದ್ದ ಪೂಜಾಶ್ರೀ ಅಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಜಾಶ್ರೀ ಆತ್ಮಹತ್ಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುಟಿನ್‌ಗಿಂತ ಅಕ್ರಮ ವಲಸೆಯೇ ಬಹುದೊಡ್ಡ ಸಮಸ್ಯೆ: ಡೊನಾಲ್ಡ್ ಟ್ರಂಪ್