Tag: ಪುತ್ಥಳಿ

  • ನಟ ವಿಷ್ಣುವರ್ಧನ್ ಪುತ್ಥಳಿ ತಯಾರಿಸಿದ್ದು ಅರುಣ್ ಯೋಗಿರಾಜ್

    ನಟ ವಿಷ್ಣುವರ್ಧನ್ ಪುತ್ಥಳಿ ತಯಾರಿಸಿದ್ದು ಅರುಣ್ ಯೋಗಿರಾಜ್

    ರಾಮ್ ಲಲ್ಲಾ ಮೂರ್ತಿ (Ram Lalla)ಮಾಡುವ ಮೂಲಕ ಜಗತ್ ಪ್ರಸಿದ್ಧಿ ಪಡೆದಿರುವ ಮೈಸೂರಿನ ಅರುಣ್ ಯೋಗಿರಾಜ್ (Arun Yogiraj)ಗೂ ಸಿನಿಮಾ ರಂಗಕ್ಕೂ ನಂಟಿದೆ. ಮೈಸೂರಿನ ವಿಷ್ಣುವರ್ಧನ್ (Vishnuvardhan) ಸ್ಮಾರಕದಲ್ಲಿ ತಲೆಯೆತ್ತಿ ನಿಂತಿರುವ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು (Putthali) ತಯಾರು ಮಾಡಿದ್ದು ಇದೇ ಅರುಣ್ ಯೋಗಿರಾಜ್.

     

    ಅರುಣ್ ಯೋಗಿರಾಜ್ ಸ್ಥಳೀಯ ಮಟ್ಟದಲ್ಲಿ ಶಿಲ್ಪಿಕಾರರಾಗಿ ಗುರುತಿಸಿಕೊಂಡಿದ್ದರೂ, ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡುವ ಮೂಲಕ ಸಿನಿಮಾ ರಂಗಕ್ಕೂ ಪರಿಚಿತ ಆದರು. ಅದರಲ್ಲೂ ಸ್ಮಾರಕದ ಉದ್ಘಾಟನೆ ದಿನದಂದು ವಿಷ್ಣುವರ್ಧನ್ ಪುತ್ಥಳಿ ಹಾಗೂ ಭಾರತಿ ವಿಷ್ಣುವರ್ಧನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದರು.

     

    ಇದೀಗ ಅರುಣ್ ಯೋಗಿರಾಜ್ ನ್ಯಾಷಿನಲ್ ಸ್ಟಾರ್ ಆಗಿ ಬದಲಾಗಿದ್ದಾರೆ. ಇವರದ್ದೇ ಕಲ್ಪನೆಯಲ್ಲಿ ತಯಾರಾದ ರಾಮ್ ಲಲ್ಲಾ ಮೂರ್ತಿಯು ಆಯ್ಕೆಯಾದ ನಂತರ ಅರುಣ್ ಸಖತ್ ಫೇಮಸ್ ಆಗಿದ್ದಾರೆ. ಇವರ ಕಲ್ಪನೆಯಲ್ಲಿ ಅರಳಿದ ಪ್ರತಿಮೆಗಳು ಇದೀ ಒಂದೊಂದೇ ಬೆಳಕಿಗೆ ಬರುತ್ತಿವೆ.

     

    ನಿನ್ನೆಯಷ್ಟೇ ಅರುಣ್ ಯೋಗಿರಾಜ್ ಬೆಂಗಳೂರಿಗೆ ಬಂದಿಳಿದ್ದಾರೆ. ಜೊತೆಗೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ ಅವರ ಜೊತೆ ಎಕ್ಸ್ ಕ್ಲ್ಯೂಸಿವ್ ಆಗಿ ಸಂದರ್ಶನಕ್ಕೆ ಕೂತಿದ್ದಾರೆ. ಸಾಕಷ್ಟು ವಿಚಾರಗಳನ್ನೂ ಅವರು ಹಂಚಿಕೊಂಡಿದ್ದಾರೆ.

  • ಮೇರುನಟ ಡಾ.ವಿಷ್ಣು ಅವರ 52ನೇ ಪುತ್ಥಳಿ ಅನಾವರಣ

    ಮೇರುನಟ ಡಾ.ವಿಷ್ಣು ಅವರ 52ನೇ ಪುತ್ಥಳಿ ಅನಾವರಣ

    ನ್ನಡದ ಮೇರುನಟ ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗಳು ರಾಜ್ಯಾದ್ಯಂತ ತಲೆಯೆತ್ತಿವೆ. ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಕಡೆ ಅವರ ಪುತ್ಥಳಿಯನ್ನು (Putthali) ಪ್ರತಿಷ್ಠಾಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ (Bangalore) ಕರುನಾಡ  ತಿಲಕ ಡಾ.ವಿಷ್ಣು ಕನ್ನಡ ಅಭಿಮಾನಿಗಳ‌ ಸಂಘದ ವತಿಯಿಂದ ಗಿರಿನಗರ ಹಿರಣ್ಣನ ಗುಟ್ಟೆ ಸರ್ಕಲ್ ನಲ್ಲಿ  ಡಾ‌.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ  ಉಪಸ್ಥಿತಿಯಲ್ಲಿ ಶಾಸಕ ಎಂ ಕೃಷ್ಣಪ್ಪ (M. Krishnappa) ಅಮೃತ ಹಸ್ತದಿಂದ ಪುತ್ಥಳಿ ಅನಾವರಣವಾಯಿತು

    ವಿಶೇಷ ಏನಂದ್ರೆ ಇದು ವೀರಕಪುತ್ರ ಶ್ರೀನಿವಾಸ್ ಅವರು ವೈಯಕ್ತಿಕವಾಗಿ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಕೊಡುಗೆಯಾಗಿ ನೀಡುತ್ತಿರುವ 52 ನೇ ಪುತ್ಥಳಿ ಆಗಿರುವುದು ವಿಶೇಷ. ವಿಷ್ಣು ಅವರ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿರುವ ವೀರಕಪುತ್ರ ಶ್ರೀನಿವಾಸ್ ಸಾಕಷ್ಟು ಕಡೆ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂಲಕ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಮೊನ್ನೆಯಷ್ಟೇ ವಿಷ್ಣುವರ್ಧನ್ (Dr. Vishnuvardhan) ಹೆಸರಿನಲ್ಲಿ ದಾಖಲೆ (Record) ಯೊಂದು  ಸೃಷ್ಟಿಯಾಗಿತ್ತು. ವೀರಕಪುತ್ರ ಶ್ರೀನಿವಾಸ್ ಮತ್ತು ವಿಷ್ಣು ಸೇನಾನಿಗಳು ವಿಷ್ಣುವರ್ಧನ್ ಹುಟ್ಟು ಹಬ್ಬದಂದು ಕಟೌಟ್ ಜಾತ್ರೆ ಮಾಡಿದ್ದರು. ನೆಚ್ಚಿನ ನಟನ 52 ಕಟೌಟ್‌ಗಳನ್ನು ಅಂದು ಬೆಂಗಳೂರಿನ ಬಾಲಣ್ಣ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಮುಂದೆ ನಿಲ್ಲಿಸಿದ್ದರು. ಇದನ್ನು ಪರಿಗಣಿಸಿ ಏಷ್ಯಾ ಬುಕ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅದು ದಾಖಲಾಗಿತ್ತು.

    ಡಾ. ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ. ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ ‘ಕಟೌಟ್‌ ಜಾತ್ರೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

     

    ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಯು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ನಂತರ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ‌ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ.

  • ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ (Statue) ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯ ಶುಕ್ರವಾರ ನೆರವೇರಿದೆ. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ (Basavaraj Bommai),  ಜಗಜ್ಯೋತಿ ಬಸವಣ್ಣ (Basavanna) ಹಾಗೂ ನಾಡಪ್ರಭು ಕೆಂಪೇಗೌಡರ (Kempegowda) ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ನುಡಿದಿದ್ದಾರೆ.

    ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು. ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಬೇಕು ಎಂಬ ಕಾರಣಕ್ಕೆ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ:
    ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

    ನಾಡು ಕಟ್ಟಿರುವ ಅಪ್ರತಿಮ ನಾಯಕರು:
    ಇವರು ಕನ್ನಡನಾಡಿನಲ್ಲಿ ಹುಟ್ಟಿ, ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಂದು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ. ಮತ್ತೊಂದು ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕೆರೆಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಎಂದು ಹೇಳಿದರು. ಇದನ್ನೂ ಓದಿ: ಜ.31 ರಿಂದ 66 ದಿನ ಸಂಸತ್ ಬಜೆಟ್ ಅಧಿವೇಶನ – ಪ್ರಹ್ಲಾದ್ ಜೋಶಿ

    ಇವುಗಳನ್ನು ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಎಲ್ಲಾ ನಾಯಕರ ಅನುಮತಿ ಪಡೆದಿದ್ದರು. ಸಚಿವ ಆರ್. ಅಶೋಕ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಇದರ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ 2 ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದು ನುಡಿದರು. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ತಲೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀ ಕನ್ನಡ ವಾಹಿನಿಯಿಂದ ಅಭಿಮಾನದ ‘ಅಪ್ಪು’ ಪುತ್ಥಳಿ

    ಜೀ ಕನ್ನಡ ವಾಹಿನಿಯಿಂದ ಅಭಿಮಾನದ ‘ಅಪ್ಪು’ ಪುತ್ಥಳಿ

    ಪುನೀತ್ ರಾಜ್ ಕುಮಾರ್  (Puneeth), ಇದು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುವ ಹೆಸರು. ನಟನೆ , ವ್ಯಕ್ತಿತ್ವ ಮತ್ತು ನಿಸ್ವಾರ್ಥ ಸಮಾಜಮುಖಿ ಸೇವೆಗಳಿಂದ ಜನಮಾನಸದಲ್ಲಿ ಅಚ್ಚಳಿಯದೆ ನೆಲೆಸಿರುವ ಈ ಹಸನ್ಮುಖಿ ನಮ್ಮಲ್ಲೆರನ್ನು ಅಗಲಿ ಇಂದಿಗೆ ಒಂದು ವರ್ಷವೇ ಆಗಿದೆ. ಇಡೀ ಭಾರತೀಯ ಚಿತ್ರರಂಗಕ್ಕೆ ಮರೆಯಲಾಗದಂತ ದುಃಖವಾಗಿ ಪರಿಣಮಿಸಿ ಕಣ್ಣೀರಾಗಿಸಿರುವ ಈ ದೊಡ್ಮನೆ ಕಂದ ಇಂದಿಗೂ ಎಲ್ಲರ ಮನಸಿನಲ್ಲಿ ಮುದ್ದಿನ ಮಗುವಾಗಿದ್ದಾರೆ.

    ಜೀ ಕನ್ನಡ ವಾಹಿನಿಯೊಟ್ಟಿಗೆ ವಿಶೇಷ ನಂಟು ಹೊಂದಿದ್ದ ಅಪ್ಪು ಅವರು ಎಲ್ಲಾ ಕಾರ್ಯಕ್ರಮಗಳಿಗೂ ಪ್ರೀತಿಯಿಂದ ಆಗಮಿಸಿ ಬೆಂಬಲ ಸೂಚಿಸುತ್ತಿದ್ದರು ಮತ್ತು ಮನಸಾರೆ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ , ಸರಿಗಮಪ  ಕಾರ್ಯಕ್ರಮದ ವಿಶೇಷ ಸ್ಪರ್ಧಿಗಳ ಕೋರಿಕೆಯನ್ನು ಈಡೇರಿಸಲು ಖುದ್ದು ಅವರೇ ವೇದಿಕೆಗೆ ಆಗಮಿಸಿ ಅವರ ಬೆನ್ನು ತಟ್ಟಿ ಪ್ರೀತಿಯಿಂದ ಪ್ರೋತ್ಸಾಹ ನೀಡಿದ್ದು ಇತರರಿಗೆ ಮಾದರಿಯಾಗಿತ್ತು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

    ಪುನೀತ್ (Puneeth Rajkumar) ಅವರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಜೀ ಕನ್ನಡ ವಾಹಿನಿ ಅವರ ಪುಣ್ಯ ಸ್ಮರಣೆಯಂದು ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಗಳಿಗೆಂದೇ ಹೆಸರುವಾಸಿಯಾಗಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋ ನಲ್ಲಿ ಪುತ್ಥಳಿಯೊಂದನ್ನು (statue) ಅನಾವರಣಗೊಳಿಸುತ್ತಿದೆ. ಈ ಮೂಲಕ ಹೆಜ್ಜೆ ಹಾಕಿದ ಸ್ಥಳವನ್ನು ನೆನಪುಗಳಿಂದ ಪುಣ್ಯ ಭೂಮಿಯಾಗಿಸುವ ಆಶಯ ಇದಾಗಿದೆ. ಈ ಮೂಲಕ ಮುಂದಿನ ಪೀಳಿಗೆಯ ಪ್ರತಿಭೆಗಳಿಗೆ ಅಪ್ಪು ಅವರ ಆಶೀರ್ವಾದ ಸಿಗಲಿದೆ ಎನ್ನುತ್ತದೆ ಜೀ ವಾಹಿನಿ.

    ತನ್ನ ಇಡೀ ಬದುಕನ್ನು ಸಿನಿಮಾಗೆಂದೇ ಮೀಸಲಿಟ್ಟಿದ್ದ ಅಪ್ಪು ಅವರ ವಿಶೇಷ ಪುತ್ಥಳಿ ಹಿರಿತೆರೆ ಮತ್ತು ಕಿರುತೆರೆಗೆ ಜೊತೆಗೆ ಅಪರೂಪದ ಸಂಬಂಧ ಹೊಂದಿರುವಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಅನಾವರಣಗೊಳಿಸುತ್ತಿರುವ ಜೀ ಕನ್ನಡ ವಾಹಿನಿಯ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮತ್ತೊಂದು ವಿಶೇಷವೆಂದರೆ , ಅಬ್ಬಯ್ಯ ನಾಯ್ಡು ಸ್ಟುಡಿಯೋ ಜೀ ಕನ್ನಡ ವಾಹಿನಿ ಕಾರ್ಯಕ್ರಮಗಳ ಭಾಗವಾಗಿದೆ.  ಈ ಒಂದು ಅಭಿಮಾನದ ಅಪರೂಪದ ಕಾರ್ಯಕ್ಕೆ ಅಪ್ಪು ಅವರ ಅಭಿಮಾನಿಗಳೆಲ್ಲರೂ ಭಾಗಿಯಾಗಬೇಕೆಂದು ವಾಹಿನಿ ಈ ಮೂಲಕ ವಿನಯಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತಿದೆ.ಅಷ್ಟೇ ಅಲ್ಲದೆ ವಾಹಿನಿ ಇಡೀ ದಿನವನ್ನು ಅಪ್ಪು ಅವರಿಗೆ ಅರ್ಪಿಸಿ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ಹೊಸಪೇಟೆಯಲ್ಲಿ ಪುನೀತ್ ಬೃಹತ್ ಪುತ್ಥಳಿ ಉದ್ಘಾಟನೆ

    ನಾಳೆ ಹೊಸಪೇಟೆಯಲ್ಲಿ ಪುನೀತ್ ಬೃಹತ್ ಪುತ್ಥಳಿ ಉದ್ಘಾಟನೆ

    ಪುನೀತ್ ರಾಜ್ ಕುಮಾರ್ ಅಗಲಿ ಏಳು ತಿಂಗಳು ಕಳೆದರೂ, ಅವರ ಆರಾಧನೆ ಮಾತ್ರ ಇನ್ನೂ ನಿಂತಿಲ್ಲ. ಅಪ್ಪು ಅಭಿಮಾನಿಗಳು ಒಂದಿಲ್ಲೊಂದು ರೀತಿಯಲ್ಲಿ ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಜೊತೆಗೆ ನೂರಾರು ಅಭಿಮಾನಿಗಳು ನಿತ್ಯವೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಬಂದು ನಮನ ಸಲ್ಲಿಸುತ್ತಲೇ ಇದ್ದಾರೆ. ಅಷ್ಟೊಂದು ಅಭಿಮಾನ ಮತ್ತು ಪ್ರೀತಿಯನ್ನು ಅಪ್ಪು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ.

    ಈಗಾಗಲೇ ಪುನೀತ್ ಅವರ ಪುತ್ಥಳಿಗಳು ರಾಜ್ಯದ ನಾನಾ ಕಡೆ ಸ್ಥಾಪಿಸಲಾಗಿದ್ದು, ನಾಳೆ ಹೊಸಪೇಟೆಯಲ್ಲಿ ಬೃಹತ್ ಪುತ್ಥಳಿಯ ಉದ್ಘಾಟನೆ ಆಗಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಪ್ಪು ಹುಡುಗರು ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದಿಂದ ಈ ಪ್ರತಿಮೆ ಸ್ಥಾಪಿಸಲಾಗುತ್ತಿದ್ದು, ನಾಳೆ ಅದನ್ನು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಈ ಕಾರ್ಯಕ್ರಮಕ್ಕೆ ಪುನೀತ್ ಅವರ ಸಹೋದರ, ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಈ ಪುತ್ಥಳಿ ಉದ್ಘಾಟನೆಯ ಕಾರ್ಯಕ್ರಮವನ್ನು ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬದವರು ನೆರವೇರಿಸಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಪುನೀತ್ ರಾಜ್ ಕುಮಾರ್ ಸರ್ಕಲ್ ನಲ್ಲಿ ಈ ಪುತ್ಥಳಿ ಉದ್ಘಾಟನೆ ಆಗಲಿದೆ.

  • Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಗಲಿ ಜೂನ್ 14ಕ್ಕೆ ಒಂದು ವರ್ಷ ತುಂಬುತ್ತದೆ. ಅಗಲಿದ ನಟನ ನೆನಪಿಗೆ ಒಂದು ವಾರ ಮುಂಚೆಯೇ ಅವರ ಕುಟುಂಬದವರು ಮತ್ತು ಆಪ್ತರು, ಸ್ನೇಹಿತರು ಹಾಗೂ ಅಭಿಮಾನಿಗಳು ಇಂದು ಮೊದಲ ವರ್ಷದ ಪುಣ್ಯತಿಥಿಯನ್ನು ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ನೆರವೇರಿಸಿದರು. ಇದನ್ನೂ ಓದಿ:`ಜವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಶಾರುಖ್ ಖಾನ್ ಎಂಟ್ರಿ

    ಮೊದಲ ವರ್ಷದ ಪುಣ್ಯಸ್ಮರಣೆಯ ದಿನದಂದು ವಿಜಯ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗಿದೆ. ವಿಜಯ್ ಸಹೋದರರಾದ ಬಿ.ವೀರೂಪಾಕ್ಷ ಮತ್ತು ಸಿದ್ದೇಶಕುಮಾರ್ ಸಹೋದರನ ಸುಂದರ ಮೂರ್ತಿಯನ್ನು ಅರ್ಥಗರ್ಭಿತವಾಗಿ ತಯಾರಿಸಿದ್ದು, ಇಂದು ಆ ಪುತ್ಥಳಿ ಪಂಚನಹಳ್ಳಿಯ ವಿಜಯ್ ಸಮಾಧಿ ಸ್ಥಳದಲ್ಲಿ ಅನಾವರಣಗೊಂಡಿದೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ವಿಜಯ್ ಅವರ ಪ್ರಥಮ ಪುಣ್ಯಸ್ಮರಣೆಯಲ್ಲಿ ವಿಜಯ್ ಅವರ ಪರಮಾಪ್ತ ಸ್ನೇಹಿತರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, ನಿರ್ದೇಶಕ ವೀರೂ ಮಲ್ಲಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಳೆದ ವರ್ಷ ವಿಜಯ್ ರಸ್ತೆ ಅಪಘಾತದಲ್ಲಿ ನಿಧನಹೊಂದಿದ್ದರು. ಅತೀ ಚಿಕ್ಕ ವಯಸ್ಸಿನ ಪ್ರತಿಭಾವಂತ ನಟನನ್ನು ಕಳೆದುಕೊಂಡ ಸಿನಿಮಾ ರಂಗ ಬಡವಾಗಿತ್ತು.

  • ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ – ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

    ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ – ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

    ಬೆಂಗಳೂರು: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೀ ವ್ಯಕ್ತಿಯಲ್ಲ, ಒಂದು ಶಕ್ತಿ. ಅನೇಕ ರಾಷ್ಟ್ರಗಳ ಕಾನೂನು ಅಧ್ಯಯನ ನಡೆಸಿ ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ್ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಏಪ್ರೀಲ್ 14ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ಯುನೈಟೆಡ್ ನೇಷನ್ ಘೋಷಿಸಿದ್ದು ಈ ವೇಳೆ ಸ್ಮರಣೀಯ.

    ಇಂತಹ ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯು ಈಗ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲೂ ನಿರ್ಮಾಣಗೊಂಡಿದೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸೋಮವಾರ ಸಾಮಾಜಿಕ ನ್ಯಾಯದ ಹರಿಕಾರ ಡಾ.ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ ಸಮರ್ಪಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿ ವರ್ಷಾಚರಣೆಯ ಸಂದರ್ಭದಿಂದಲೇ ದೇಶದೆಲ್ಲೆಡೆ ಡಾ.ಅಂಬೇಡ್ಕರ ಅವರ ಬದುಕು-ಸಾಧನೆ ಸ್ಮರಣೆಯ ಕಾರ್ಯಕ್ರಮಗಳು ವಿಭಿನ್ನವಾಗಿ ನಡೆಯುತ್ತಲೇ ಇವೆ.

    ಅಂತೆಯೇ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲಿಯೂ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸುವ ಮೂಲಕ ರಾಜಭವನವು ಈ ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶವನ್ನು ರವಾನಿಸಿ, ಭಾರತ ರತ್ನಕ್ಕೆ ತನ್ನ ಗೌರವವನ್ನು ಸಮರ್ಪಿಸಿದೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ,ವಿಧಾನಪರಿಷತ್ ಸಭಾಪತಿ ರಘುನಾಥ್‍ರಾವ್ ಮಲ್ಕಾಪೂರೆ, ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

  • ಸಂಗೀತ ದಿಗ್ಗಜೆಯ ಪುತ್ಥಳಿ ಮನೆಯೊಳಗೆ ಅನಾವರಣ

    ಸಂಗೀತ ದಿಗ್ಗಜೆಯ ಪುತ್ಥಳಿ ಮನೆಯೊಳಗೆ ಅನಾವರಣ

    – ಅಭಿಮಾನಕ್ಕೆ ತೇವಗೊಂಡ್ತು ಪೋಷಕರ ಕಣ್ಣಾಲಿಗಳು

    ಉಡುಪಿ: ಎಂದೋ ಕೇಳಿದ ಒಂದು ಹಾಡು, ಯಾರೋ ಆಡಿದ ಒಂದು ಮಾತು. ಇನ್ನೆಂದೋ ನಿಮಗೆ ಸ್ಫೂರ್ತಿ ನೀಡಬಹುದು. ಉಡುಪಿಯಲ್ಲೂಂದು ಸ್ಮರಣೀಯ ಪ್ರತಿಮೆ ನಿರ್ಮಾಣವಾಗಿದೆ. ಬದುಕಿದ್ದಾಗ ನಾಡಿನಾದ್ಯಂತ ಹೆಸರು ಮಾಡಿದ್ದ ಗಾಯಕಿಯೊಬ್ಬರು, ತಮ್ಮ ಕಾಲಾನಂತರ ಶಿಲ್ಪಿಯೊಬ್ಬರಿಗೆ ಸ್ಫೂರ್ತಿಯಾಗಿದ್ದಾರೆ.

    ಹೆಸರು ವಿಳಾಸ ಹೇಳಲು ಬಯಸದೆ ಅನಾಮಿಕರಾಗಿಯೇ ಇರಲು ಬಯಸಿರುವ ಈ ಶಿಲ್ಪಿ ತನ್ನ ನೆಚ್ಚಿನ ಗಾಯಕಿ ಉಡುಪಿಯ ರಂಜನಿ ಹೆಬ್ಬಾರ್ ಅವರ ಗೌರವಾರ್ಥ ಸುಂದರ ಪ್ರತಿಮೆ ನಿರ್ಮಿಸಿಕೊಟ್ಟಿದ್ದಾರೆ. ರಂಜನಿ ಹೆಬ್ಬಾರ್, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಉತ್ತಮ ಸಾಧನೆ ಮಾಡಿದ್ದ ಅಪರೂಪದ ಗಾಯಕಿ. ಏಳು ವರ್ಷಗಳ ಹಿಂದೆ ಈಕೆ ಇಹ ಲೋಕದಿಂದ ದೂರವಾದರು. ಆಕೆಯ ಸ್ಮರಣೆಯಲ್ಲಿ ಪ್ರತೀ ವರ್ಷ ಉಡುಪಿಯಲ್ಲಿ ಸಂಗೀತೋತ್ಸವ ನಡೆಸಲಾಗುತ್ತದೆ.

    ಈ ಬಾರಿ ಫೇಸ್‍ಬುಕ್ ಮೂಲಕವೇ ದೇಶ- ವಿದೇಶಗಳ ಕಲಾವಿದರು ಸಂಗೀತೋತ್ಸವದಲ್ಲಿ ಭಾಗಿಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ರಂಜನಿ ಹೆಬ್ವಾರ್ ಜನ್ಮದಿನದಂದು ಆಕೆಯ ಮನೆ ಲತಾಂಗಿಯಲ್ಲಿ ಅಪರೂಪದ ಪ್ರತಿಮೆ ಅನಾವರಣಗೊಂಡಿದೆ. ಬದುಕಿದ್ದಾಗ ಈ ಗಾಯಕಿಯನ್ನು ಒಮ್ಮೆಯೂ ನೋಡಿರದ ಅಜ್ಞಾತ ಶಿಲ್ಪಿಯೊಬ್ಬರು ಈ ಆಳೆತ್ತರದ ವಿಗ್ರಹ ತಯಾರಿಸಿದ್ದಾರೆ. ನೆಚ್ಚಿನ ಗಾಯಕಿಯ ನೆನಪಲ್ಲಿ ರಂಜನಿ ಮೆಮೋರಿಯಲ್ ಟ್ರಸ್ಟ್‍ಗೆ ಈ ವಿಗ್ರಹ ಹಸ್ತಾಂತರಿಸಿದ್ದಾರೆ. ಇಂದ್ರಾಳಿಯ ಲತಾಂಗಿಯಲ್ಲಿ ಸ್ವಾಮಿ ಸೂರ್ಯಪಾದರು ಪ್ರತಿಮೆ ಅನಾವರಣಗೊಳಿಸಿದರು.

    ಟ್ರಸ್ಟ್ ನ ಪ್ರಮುಖರಾದ ವಿ.ಅರವಿಂದ ಹೆಬ್ಬಾರ್ ಮಾತನಾಡಿ ರಂಜನಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಆಕೆ ಕೇವಲ ನನ್ನ ಮಗಳಲ್ಲ ಶುದ್ಧ ಸಂಗೀತದ ಅಭಿಮಾನಿಗಳು ಮತ್ತು ಆಕೆಯ ಕಲೆಯನ್ನು ಇಷ್ಟಪಡುವ ಪ್ರತಿಯೊಬ್ಬರ ಮಗಳು, ಈ ಪ್ರತಿಮೆ ಆಕೆಯ ಕಲಾಸೇವೆಯನ್ನು ನಿತ್ಯವೂ ಸ್ಮರಿಸುವುದಕ್ಕೊಂದು ಮಾಧ್ಯಮ ಎಂದು ಹೇಳಿದರು. ಈ ವೇಳೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ವಸಂತಲಕ್ಷ್ಮೀ ಹೆಬ್ಬಾರ್, ಸಾರಂಗ ಹೆಬ್ಬಾರ್ ಉಪಸ್ಥಿತರಿದ್ದರು. ಪ್ರತಿಮೆ ಅನಾವರಣದ ಬಳಿಕ ಸ್ವಾಮಿ ಸೂರ್ಯಪಾದರಿಂದ ಸತ್ಸಂಗ ನಡೆಯಿತು.

    ಸೆ.1 ರಿಂದ ನಿರಂತರ 13 ದಿನಗಳ ಈ ಸಂಗೀತೋತ್ಸವದಲ್ಲಿ ದೇಶ-ವಿದೇಶಗಳ ಪ್ರಖ್ಯಾತ ಸಂಗೀತ ಕಲಾವಿದರು. ಫೇಸ್ ಬುಕ್ ಲೈವ್ ಮೂಲಕವೇ ಪ್ರತಿದಿನ ಸಂಗೀತ ಕಚೇರಿ ನೀಡುತ್ತಿದ್ದಾರೆ. ಈಗಾಗಲೇ ತಿರುಮೆಗ್ನನಂ ಟಿಪಿಎನ್ ರಮಾನಾಥನ್ ಮತ್ತು ಪಂಡಮಂಗಲಂ ಪಿ.ಜಿ.ಯುವರಾಜ್, ಚೆನ್ನೈನ ಪ್ರಾರ್ಥನಾ ಸಾಯಿ ನರಸಿಂಹನ್, ಬೆಂಗಳೂರಿನ ಸಿದ್ದಾರ್ಥ ಬೆಳ್ಮಣ್ಣು, ಯು.ಎಸ್. ಎ, ಹ್ಯೂಸ್ಟನ್ ನಿಂದ ಕೃತಿ ಭಟ್, ರಮಣಾ ಬಾಲಚಂದ್ರನ್, ಚೆನ್ನೈನ ಸತ್ಯನಾರಾಯಣ, ಬೆಂಗಳೂರಿನ ಸ್ಪೂರ್ತಿ ರಾವ್ , ಐಶ್ವರ್ಯ ವಿದ್ಯಾ ರಘುನಾಥ್, ಚೆನ್ನೈನ ಜೆ.ಬಿ.ಶೃತಿ ಸಾಗರ್, ಮೈಸೂರಿನ ದೇವಿ, ಅನುಪಮಾ ಭಾಗವತ್, ಕು. ಸಮನ್ವಿ ಅವರು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

  • ನೀರು, ಪುತ್ಥಳಿ, ಮಂದಿರ ವಿಚಾರದಲ್ಲಿ ರಾಜಕಾರಣ ಮಾಡಬಾರದು: ಲಕ್ಷ್ಮಿ ಹೆಬ್ಬಾಳ್ಕರ್

    ನೀರು, ಪುತ್ಥಳಿ, ಮಂದಿರ ವಿಚಾರದಲ್ಲಿ ರಾಜಕಾರಣ ಮಾಡಬಾರದು: ಲಕ್ಷ್ಮಿ ಹೆಬ್ಬಾಳ್ಕರ್

    ಧಾರವಾಡ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಗಲಾಟೆ ವಿಚಾರವಾಗಿ ಸರ್ಕಾರದ ಮಧ್ಯ ಪ್ರವೇಶಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ ಪಡಿಸಿದರು.

    ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಇದು ಬಹಳ ದುರದೃಷ್ಟಕರ ವಿಚಾರ. ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ದೊಡ್ಡದು. ಅಂತಹ ವೀರ ಒಂದು ಕಡೆ, ಈ ದೇಶ ಒಗ್ಗಟ್ಟಾಗಿ ಕಟ್ಟಿದ ಶಿವಾಜಿ ಮಹಾರಾಜರು ಇನ್ನೊಂದು ಕಡೆ. ಇವರಿಬ್ಬರು ದೇಶದ ಹೆಮ್ಮೆ, ವಿಶ್ವಮಾನವರು, ಇಂಥವರ ವಿಷಯದಲ್ಲಿ ಪುತ್ಥಳಿ ರಾಜಕಾರಣ ಆಗಬಾರದು ಎಂದು ಹೇಳಿದರು.

    ನೀರು, ಪುತ್ಥಳಿ ಹಾಗೂ ಮಂದಿರ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಮಾಡಿದರೆ ನಮ್ಮಂತ ಶಾಸಕರು ಅನರ್ಹ ಆಗಬೇಕು ಎಂದು ಶಾಸಕಿ ಲಕ್ಷ್ಮಿ ಹೇಳಿದರು.

    ನಮ್ಮ ದೇಶಕ್ಕೆ ಇಬ್ಬರೂ ವೀರಪುತ್ರರು. ಇವರಿಗೆ ಸಂಬಂಧಿಸಿದವರು ಶಾಂತ ರೀತಿಯಿಂದ ಕುಳಿತು ಬಗೆಹರಿಸಬೇಕು. ನಾನು ಎಂಇಎಸ್ ಬಗ್ಗೆ ಯಾವಾಗಲೂ ವಿರೋಧಿಸುತ್ತ ಬಂದಿದ್ದೇನೆ. ಎಂಇಎಸ್‍ನ ಈ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು.

  • ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಕೊಪ್ಪಳದ ಉದ್ಯಮಿ

    ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಕೊಪ್ಪಳದ ಉದ್ಯಮಿ

    ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ.

    ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. ಇವೆಲ್ಲ ಕಂಡುಬಂದದ್ದು ಕೊಪ್ಪಳದಲ್ಲಿ. ಹೌದು. ಕೊಪ್ಪಳದ ಸಮೀಪದ ಭಾಗ್ಯನಗರದಲ್ಲಿನ ಉದ್ಯಮಿ ಶ್ರೀನಿವಾಸ್ ಗುಪ್ತಾರ ನೂತನ ಮನೆಯಲ್ಲಿ ವಿಶೇಷವಾದ ಪ್ರತಿಮೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಈ ಪ್ರತಿಮೆ ಬೇರೆಯಾರದ್ದೂ ಅಲ್ಲ. ಸ್ವತಃ ಶ್ರೀನಿವಾಸ ಗುಪ್ತಾ ಅವರ ಪತ್ನಿ ಕೆವಿಎನ್ ಮಾಧವಿ ಅವರದ್ದು.

    ಕೆವಿಎನ್ ಮಾಧವಿ ಅವರಿಗೆ ತಮ್ಮ ಕನಸಿನ ಮನೆಯೊಂದನ್ನು ಕಟ್ಟಬೇಕೆಂದು ಆಸೆ ಇತ್ತು. ಅದರಂತೆ ಅವರು ಮನೆಯ ಭೂಮಿ ಪೂಜೆ ನೆರವೇರಿಸಿ, ಮನೆ ನಿರ್ಮಾಣ ಸಹ ಆರಂಭ ಮಾಡಿದ್ದರು. ಆದರೆ 2017ರ ಜುಲೈ 5 ರಂದು ತಿರುಪತಿಗೆ ಹೋಗುವ ವೇಳೆಯಲ್ಲಿ ಕೋಲಾರದ ಬಳಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಆ ಬಳಿಕ ಮನೆ ನಿರ್ಮಾಣದ ಕೆಲಸವನ್ನು ಶ್ರೀನಿವಾಸ್ ಗುಪ್ತಾ ಅರ್ಧಕ್ಕೆ ನಿಲ್ಲಿಸಿದ್ದರು. ನಂತರ ಮಕ್ಕಳ ಒತ್ತಾಯದ ಮೆರೆಗೆ ಮನೆ ನಿರ್ಮಾಣದ ಕೆಲಸವನ್ನು ಪುನಃ ಆರಂಭ ಮಾಡಿದರು.

    ಈ ವೇಳೆಯಲ್ಲಿ ಮನೆಯ ನಿರ್ಮಾಣದ ಬಳಿಕ ಪತ್ನಿಯ ನೆನಪಿಗೆ ಏನಾದರೂ ಇರಲೇಬೇಕೆಂದು ನಿರ್ಧರಿಸಿದರು. ಮನೆಯ ಆರ್ಕಿಟೆಕ್ಟ್ ರಂಘಣ್ಣನವರ್ ಮೇಣದ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಬೆಂಗಳೂರಿನ ಶ್ರೀಧರಮೂರ್ತಿ ಅವರ ಗೊಂಬೆ ಮನೆಗೆ ಹೋದರು. ಅಲ್ಲಿ ಅವರು ಮೇಣದ ಪ್ರತಿಮೆ ಬದಲಾಗಿ ಸಿಲಿಕಾನ್ ಪ್ರತಿಮೆ ಮಾಡಿಸಲು ಸಲಹೆ ನೀಡಿದರು. ಅದರಂತೆ ಶ್ರೀಧರಮೂರ್ತಿ ಸಿಲಿಕಾನ್ ಮೆಟಿರಿಯಲ್ ನಲ್ಲಿ ಮಾಧವಿ ಅವರ ಪ್ರತಿಮೆ ಮಾಡಿದರು. ಈ ಹಿನ್ನಲೆಯಲ್ಲಿ ಇದೇ ಅಗಸ್ಟ್ ತಿಂಗಳ 8 ರಂದು ಶ್ರೀನಿವಾಸ್ ಅವರ ನೂತನ ಮನೆಯ ಗೃಹಪ್ರವೇಶವಾಗಿದ್ದ ಆ ಮನೆಯಲ್ಲಿ ತಮ್ಮ ಪತ್ನಿ ಕೆವಿಎನ್ ಮಾಧವಿಯ ಸಿಲಿಕಾನ್ ಪ್ರತಿಮೆಯನ್ನು ಇಟ್ಟಿದ್ದಾರೆ.

     

    ಪತ್ನಿಯ ಸಿಲಿಕಾನ್ ಪ್ರತಿಮೆ ಹೇಗಿದೆ?
    ಈ ಸಿಲಿಕಾನ್ ಪ್ರತಿಮೆಯನ್ನು ಮಾಡಲು ಶ್ರೀಧರ ಮೂರ್ತಿ ಒಂದು ವರ್ಷಕ್ಕೂ ಹೆಚ್ಚು ಕಾಲ ಸಮಯ ತೆಗೆದುಕೊಂಡಿದ್ದಾರೆ. ಈ ಸಿಲಿಕಾನ್ ಪ್ರತಿಮೆಗೆ ಜೀವ ಇಲ್ಲ ಎನ್ನುವುದನ್ನು ಒಂದು ಬಿಟ್ಟರೆ ಥೇಟ್ ಮಾಧವಿ ಅವರ ತರಹನೇ ಇದೆ. ಮಾಧವಿ ಅವರ ಸಿಲಿಕಾನ್ ಪ್ರತಿಮೆಯನ್ನು ಮನೆಯ ಹಾಲ್ ನಲ್ಲಿಟ್ಟಿದ್ದು, ಯಾರಾದರೂ ಮನೆಗೆ ಬಂದರೆ ಇವರನ್ನು ಮಾತನಾಡಿಸದೆ ಇರಲಾರರು. ಈ ಪ್ರತಿಮೆಯಲ್ಲಿ ಮಾಧವಿ ಅವರ ಉಡುತ್ತಿದ್ದ ಸೀರೆಯನ್ನೇ ಉಡಿಸಲಾಗಿದ್ದು, ಅವರು ತೊಡುತ್ತಿದ್ದ ಬಂಗಾರದ ಆಭರಣಗಳನ್ನು ಅವರ ಮೈಮೇಲೆ ಹಾಕಲಾಗಿದೆ. ಜೊತೆಗೆ ಅವರಂತೆಯೇ ಹೇರ್ ಸ್ಟೈಲ್ ಸಹ ಮಾಡಲಾಗಿದೆ. ಈ ಪ್ರತಿಮೆಯ ದೇಹದ ಭಾಗಗಳು ಫ್ಲೆಕ್ಸಿಬಲ್ ಆಗಿದ್ದು, ಮೇಕಪ್, ಸೀರೆ ಬದಲಾವಣೆ, ಹೆರ್ ಸ್ಟೈಲ್ ಸಹ ಚೇಂಜ್ ಮಾಡಬಹುದಾಗಿದ್ದು, ಎಲ್ಲಿಗೆ ಬೇಕಾದರೂ ಸಹ ಕ್ಯಾರಿ ಮಾಡಬಹುದಾಗಿದೆ.

    ಮಾಧವಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರು ಈ ಪ್ರತಿಮೆ ಬಂದಾಗಿನಿಂದ ತಮ್ಮ ತಾಯಿ ಎಲ್ಲಿಗೂ ಹೋಗಿಲ್ಲ. ನಮ್ಮ ಜೊತೆಗೇನೆ ಇದ್ದಾರೆ ಎನ್ನುವ ಭಾವದಲ್ಲಿ ಇದ್ದಾರೆ. ಅಷ್ಟೇ ಅಲ್ಲ ತಮ್ಮ ತಾಯಿಯ ಪ್ರತಿಮೆಯ ಪಕ್ಕಕ್ಕೆ ಕುಳಿತು ಖುಷಿ ಪಡುತ್ತಾರೆ.

    ಇಷ್ಟು ದಿನ ಸಾಕಷ್ಟು ಸೆಲೆಬ್ರೆಟಿ, ರಾಜಕಾರಣಿಗಳ ಕಂಚಿನ ಪ್ರತಿಮೆ, ಮೇಣದ ಪ್ರತಿಮೆಗಳನ್ನು ನಾವು ನೋಡಿದ್ದೇವೆ. ಅವು ಪ್ರತಿಮೆಗಳ ತರಹ ಕಾಣುತ್ತಿದ್ದವು. ಆದರೆ ಶ್ರೀನಿವಾಸ್ ಗುಪ್ತಾ ಅವರ ಪತ್ನಿ ಮಾಧವಿ ಅವರ ಪ್ರತಿಮೆ ಮಾತ್ರ ಯಾರಿಗೂ ಪ್ರತಿಮೆ ತರಹ ಕಾಣಲು ಸಾಧ್ಯವೇ ಇಲ್ಲ. ಒಟ್ಟಿನಲ್ಲಿ ಪತ್ನಿಯ ಕನಸಿನ ಮನೆಯಲ್ಲಿ ತಮ್ಮ ಕನಸಿನ ರಾಣಿಯ ಪ್ರತಿಮೆ ಇಡುವ ಮೂಲಕ ಶ್ರೀನಿವಾಸ್ ಗುಪ್ತಾ ತಮ್ಮ ಪತ್ನಿ ಮೇಲಿನ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾರೆ. ಇವರ ಪ್ರೀತಿಗೆ ನಮ್ಮದೊಂದು ಹ್ಯಾಟ್ಸ್ ಆಫ್.