Tag: ಪುತ್ರ

  • ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಪಣಜಿ: ತನ್ನ ಸ್ವಂತ 4 ವರ್ಷದ ಮಗನನ್ನು ಕೊಂದು ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗಳೂರಿನ CEO ಸುಚನಾ ಸೇಠ್‌ (Suchana Seth) ಸಿಕ್ಕಿಬಿದ್ದ ರೋಚಕ ಕಥೆ ಇಲ್ಲಿದೆ.

    ಜನವರಿ 6 ರಂದು ಸುಚನಾ ಸೇಠ್, ಉತ್ತರ ಗೋವಾದ (Goa) ಕ್ಯಾಂಡೋಲಿಮ್‌ನಲ್ಲಿ ತನ್ನ ಮಗನೊಂದಿಗೆ ಸರ್ವಿಸ್‌ ಅಪಾರ್ಟ್‌ಮೆಂಟ್‌ (Service Apartment) ಒಂದರಲ್ಲಿ ಬಾಡಿಗೆಗೆ ಇದ್ದಳು. ಒಂದೆರಡು ದಿನ ಅಲ್ಲಿಯೇ ತಂಗಿದ್ದ ಸೇಠ್, ತಾನು ಯಾವುದೋ ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಹೋಗಬೇಕೆಂದಿರುವೆ ಎಂದು ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ತಿಳಿಸಿ ಟ್ಯಾಕ್ಸಿಗೆ (Taxi) ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾಳೆ.

    ಈ ವೇಳೆ ಅಲ್ಲಿನ ಸಿಬ್ಬಂದಿ, ದುಬಾರಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಳ್ಳುವ ಬದಲು ಬೆಂಗಳೂರಿಗೆ ವಿಮಾನದಲ್ಲಿ (Flight) ಹೋಗುವಂತೆ ಸೂಚಿಸಿದ್ದಾರೆ. ಆಗ ಸೇಠ್‌, ತಾನು ಟ್ಯಾಕ್ಸಿಯಲ್ಲಿಯೇ ಹೋಗಬೇಕು ಎಂದು ಹಠಕ್ಕೆ ಬಿದ್ದಳು. ಹೀಗಾಗಿ ಜನವರಿ 8 ರಂದು ಆಕೆಗೆ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಳು.

    ಇತ್ತ ಸೇಠ್ ಹೊರಗಡೆ ಬರುತ್ತಿದ್ದಂತೆಯೇ ಅಪಾರ್ಟ್‌ಮೆಂಟ್ ಸಿಬ್ಬಂದಿ ಆಕೆ ತಂಗಿದ್ದ ಕೊಠಡಿಯನ್ನು‌ ಕ್ಲೀನ್‌ ಮಾಡಲು ಹೋಗಿದ್ದಾರೆ. ಈ ವೇಳೆ ಟವೆಲ್‌ನಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿ ಅಪಾರ್ಟ್‌ಮೆಂಟ್‌ನ ಆಡಳಿತ ಮಂಡಳಿಗೆ ವಿಷಯ ಮುಟ್ಟಿಸಿದ್ದಾರೆ. ಅವರು ಕಲಾಂಗುಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ಸೇಠ್‌ ಅಪಾರ್ಟ್‌ಮೆಂಟ್‌ನಿಂದ ಹೊರಬಂದಾಗ ಆಕೆಯ ಪುತ್ರ ಕಾಣಲಿಲ್ಲ. ಕೈಯಲ್ಲಿ ಭಾರವಾದ ಸೂಟ್‌ಕೇಸ್‌ ಹಿಡಿದುಕೊಂಡು ಹೋಗಿರುವುದಾಗಿ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಅಪಾರ್ಟ್‌ ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸರು, ಆಕೆಗೆ ಕರೆ ಮಾಡಿ ಕರೆದು ರಕ್ತದ ಕಲೆಗಳು ಮತ್ತು ಕಾಣೆಯಾದ ಮಗನ ಬಗ್ಗೆ ಕೇಳಿದರು. ಈ ವೇಳೆ ಆಕೆ, ಪೀರಿಯೆಡ್ಸ್‌ ಆಗಿದ್ದು, ಅದರ ಕಲೆಗಳು ಉಂಟಾಗಿವೆ ಎಂದು ಸುಳ್ಳು ಹೇಳುವ ಮೂಲಕ ಬಚಾವ್‌ ಆಗಲು ಯತ್ನಿಸಿದ್ದಾಳೆ.

    ಇನ್ನು ಮಗನ ಬಗ್ಗೆ ಕೇಳಿದ್ದಕ್ಕೆ ಆತ ದಕ್ಷಿಣ ಗೋವಾದ ಮಾರ್ಗೋ ಪಟ್ಟಣದಲ್ಲಿ ತನ್ನ ಸ್ನೇಹಿತನೊಂದಿಗೆ ಇದ್ದಾನೆ ಎಂದು ಹೇಳುತ್ತಾ ಅಲ್ಲಿನ ವಿಳಾಸವನ್ನು ನೀಡಿದ್ದಾಳೆ. ಪೊಲೀಸರು ತಕ್ಷಣವೇ ಫಟೋರ್ಡಾ ಪೊಲೀಸರ ಸಹಾಯವನ್ನು ಪಡೆದರು (ಮಾರ್ಗೋವ್ ಬಳಿ) ಮತ್ತು ಆಕೆ ನೀಡಿದ ವಿಳಾಸ ನಕಲಿ ಎಂಬುದನ್ನು ತಿಳಿದುಕೊಂಡರು. ಇತ್ತ ಸೇಠ್‌ ಕರೆದೊಯ್ಯುತ್ತಿದ್ದ ಟ್ಯಾಕ್ಸಿ ಡ್ರೈವರ್‌ಗೆ ಇನ್ಸ್‌ಪೆಕ್ಟರ್ ಕರೆಮಾಡಿ ಬೆಂಗಳೂರಿಗೆ ಹೋಗಬೇಡ, ಬದಲಾಗಿ ಹತ್ತಿರದ ಪೊಲೀಸ್‌ ಠಾಣೆ ಕಡೆ ಹೋಗುವಂತೆ ಸೂಚಿಸಿದ್ದಾರೆ. ಅಂತೆಯೇ ಆತ ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯತ್ತ ತನ್ನ ವಾಹನವನ್ನು ತಿರುಗಿಸಿದ್ದಾನೆ.

    ಚಿತ್ರದುರ್ಗದ ಪೊಲೀಸರು ಮಹಿಳೆಯ ಬ್ಯಾಗ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದೆ. ನಂತರ ಕಲಾಂಗಗುಟ್ ಪೊಲೀಸ್ ತಂಡವು ಚಿತ್ರದುರ್ಗಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಗೋವಾಕ್ಕೆ ಕರೆತರಲಾಯಿತು. ಸದ್ಯ ಜಕಾರ್ತದಲ್ಲಿರುವ ಆರೋಪಿಯ ಪತಿ ವೆಂಕಟ್ ರಾಮನ್ ಅವರಿಗೆ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿರುವುದಾಗಿ ಕ್ಯಾಲಂಗುಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪರೇಶ್ ನಾಯ್ಕ್ ಘಟನೆಯ ಬಗ್ಗೆ ವಿವರಿಸಿದ್ದಾರೆ.

  • ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಸಾಧಕನ ಹೆಸರನ್ನು ಮಗನಿಗಿಟ್ಟ ಮಸ್ಕ್

    ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಸಾಧಕನ ಹೆಸರನ್ನು ಮಗನಿಗಿಟ್ಟ ಮಸ್ಕ್

    ಲಂಡನ್: ವಿಶ್ವದ ಶ್ರೀಮಂತ ಎಲೋನ್ ಮಸ್ಕ್ (Elon Musk) ಅವರು ತಮ್ಮ ಮಗನಿಗೆ (Son) ಹೆಸರಾಂತ ಭಾರತೀಯ ನೊಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರಜ್ಞ ಪ್ರೊಫೆಸರ್ ಎಸ್ ಚಂದ್ರಶೇಖರ್ (S Chandrasekhar) ಅವರ ಹೆಸರನ್ನು ಇಡಲಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

    ಬ್ರಿಟನ್‌ನಲ್ಲಿ ನಡೆದ ಗ್ಲೋಬಲ್ ಎಐ ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ವಿಷಯ ಬಹಿರಂಗವಾಗಿದೆ. ಮಸ್ಕ್ ಚಂದ್ರಶೇಖರ್ ಅವರ ಹೆಸರು ಕೇಳಿದಾಗ ತಮ್ಮ ಪುತ್ರನ ಹೆಸರಲ್ಲೂ ಚಂದ್ರಶೇಖರ್ ಇರುವುದಾಗಿ ತಿಳಿಸಿದ್ದಾರೆ. ಮಸ್ಕ್‌ನೊಂದಿಗಿನ ಭೇಟಿಯ ಫೋಟೋವನ್ನು ಎಕ್ಸ್‌ನಲ್ಲಿ ಚಂದ್ರಶೇಖರ್ ಹಂಚಿಕೊಂಡಿದ್ದು, ತಮ್ಮ ಮಗನಿಗೆ ಭಾರತೀಯ ಟ್ವಿಸ್ಟ್‌ನ ಹೆಸರನ್ನು ಇಟ್ಟಿರುವುದನ್ನು ಬಹಿರಂಗಪಡಿಸಿದ್ದಾಗಿ ಹೇಳಿದ್ದಾರೆ.

    ಈ ಬಗ್ಗೆ ಬರೆದಿರುವ ಅವರು, ಎಲೋನ್ ಮಸ್ಕ್ ಮತ್ತು ಶಿವೋನ್ ಜಿಲಿಸ್ ಅವರ ಪುತ್ರನಿಗೆ ‘ಚಂದ್ರಶೇಖರ್’ ಎಂಬ ಮಧ್ಯದ ಹೆಸರನ್ನು ಇಟ್ಟಿರುವುದನ್ನು ಹಂಚಿಕೊಂಡಿದ್ದಾರೆ. ಈ ವಿಶಿಷ್ಟ ಹೆಸರು 1983 ರಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಸರಾಂತ ನೊಬೆಲ್ ಭೌತಶಾಸ್ತ್ರಜ್ಞ ಪ್ರೊಫೆಸರ್ ಎಸ್ ಚಂದ್ರಶೇಖರ್ ಅವರಿಗೆ ಗೌರವವಾಗಿದೆ. ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ ಪರಿಣತಿ ಹೊಂದಿರುವ ಕೆನಡಾದ ಶಿವನ್ ಆಲಿಸ್ ಜಿಲಿಸ್ ಈ ಮಗುವಿನ ತಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಚಂದ್ರಶೇಖರ್ ಅವರು ಬಹಿರಂಗಪಡಿಸಿದ ಈ ವಿಚಾರವನ್ನು ದೃಢಪಡಿಸಿದ ಜಿಲಿಸ್, ಹೌದು, ಇದು ನಿಜ. ನಾವು ಮಗನನ್ನು ಚಿಕ್ಕದಾಗಿ ಶೇಖರ್ ಎಂದು ಕರೆಯುತ್ತೇವೆ. ಆದರೆ ನಮ್ಮ ಮಗನಿಗೆ ಈ ಹೆಸರನ್ನು ಸುಬ್ರಹ್ಮಣ್ಯನ್ ಚಂದ್ರಶೇಖರ್ ಅವರಿಗೆ ಗೌರವಾರ್ಥವಾಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಗಡಿ ದಾಟಿ ಅಕ್ರಮವಾಗಿ ಅಮೆರಿಕ ಪ್ರವೇಶ – ಒಂದು ವರ್ಷದಲ್ಲಿ 96,917 ಮಂದಿ ಭಾರತೀಯರ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ಯಾನ್ಸ್‌ ಮಾಡುವಾಗ ಕುಸಿದು ಪುತ್ರ ಸಾವು – ಶಾಕ್‌ನಲ್ಲಿ ತಂದೆಯೂ ದುರ್ಮರಣ

    ಡ್ಯಾನ್ಸ್‌ ಮಾಡುವಾಗ ಕುಸಿದು ಪುತ್ರ ಸಾವು – ಶಾಕ್‌ನಲ್ಲಿ ತಂದೆಯೂ ದುರ್ಮರಣ

    ಮುಂಬೈ: (Mumbai) ಗಾರ್ಬಾ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಲ್ಘಾರ್‌ ಜಿಲ್ಲೆಯ ವಿರಾರ್‌ ಪಟ್ಟಣದಲ್ಲಿ ನಡೆದಿದೆ.

    ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ವಿರಾರ್‌ನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್‌ನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮದಲ್ಲಿ ಮನೀಶ್ ನಾರಾಪ್ಜಿ ಸೋನಿಗ್ರಾ ಅವರು ನೃತ್ಯ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವಿರಾರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ

    35 ವಯಸ್ಸಿನ ಮನೀಶ್‌ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ತಂದೆ ನಾರಾಪ್ಜಿ ಸೋನಿಗ್ರಾ (66) ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮನೀಶ್‌ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

    ಮಗನ ಸಾವಿನ ಸುದ್ದಿ ಕೇಳಿ ಆತನ ತಂದೆಯೂ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 30 ವರ್ಷದ ಹಳೆ ದ್ವೇಷ – ವೃದ್ಧದಂಪತಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಮಾಜಿ ಸೈನಿಕ

    Live Tv
    [brid partner=56869869 player=32851 video=960834 autoplay=true]

  • ಕಿರಿಯ ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ಮನೆ ಖರೀದಿಸಿದ ಮುಖೇಶ್ ಅಂಬಾನಿ

    ಕಿರಿಯ ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ಮನೆ ಖರೀದಿಸಿದ ಮುಖೇಶ್ ಅಂಬಾನಿ

    ಅಬುಧಾಬಿ: ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು ತಮ್ಮ ಕಿರಿಯ ಪುತ್ರನಿಗಾಗಿ ದುಬೈನಲ್ಲಿರುವ ಅತ್ಯಂತ ದುಬಾರಿ ಮನೆಯನ್ನು ಖರೀದಿ ಮಾಡಿರುವುದಾಗಿ ವರದಿಯಾಗಿದೆ.

    ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ದುಬೈನಲ್ಲಿ 80 ಮಿಲಿಯನ್ ಡಾಲರ್‌ನ(ಸುಮಾರು 640 ಕೋಟಿ ರೂ.) ಸಮುದ್ರ ಬದಿಯ ವಿಲ್ಲಾವನ್ನು ಗುಪ್ತವಾದಿ ಖರೀದಿಸಿದೆ ಎನ್ನಲಾಗಿದೆ. ಇದು ನಗರದಲ್ಲೇ ಅತಿ ದೊಡ್ಡ ಆಸ್ತಿ ವ್ಯವಹಾರವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

    ಪಾಮ್ ಜುಮೆರಾದಲ್ಲಿರುವ ಮನೆಯನ್ನು ಈ ವರ್ಷದ ಆರಂಭದಲ್ಲಿಯೇ ಮುಖೇಶ್ ಅವರು ತಮ್ಮ ಕಿರಿಯ ಪುತ್ರ ಅನಂತ್‌ಗಾಗಿ ಖಾಸಗಿಯಾಗಿ ಖರೀದಿ ಮಾಡಿದ್ದಾರೆ. ವಿಲ್ಲಾ ಸಮುದ್ರ ತೀರದಲ್ಲಿದ್ದು, ಅದರಲ್ಲಿ 10 ಮಲಗುವ ಕೋಣೆಗಳು, ಖಾಸಗಿ ಸ್ಪಾ, ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಿಮ್ಮಿಂಗ್ ಪೂಲ್‌ಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

    ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಮೂವರು ಮಕ್ಕಳಿರುವ ಅಂಬಾನಿ 93.3 ಬಿಲಿಯನ್ ಡಾಲರ್ ಸಂಪತ್ತಿನ ಒಡೆಯರಾಗಿದ್ದಾರೆ. 65 ವರ್ಷದ ಅಂಬಾನಿ ವಿಶ್ವದ 11 ನೇ ಶ್ರೀಮಂತ ವ್ಯಕ್ತಿ. ಹಸಿರು ಶಕ್ತಿ, ತಂತ್ರಜ್ಞಾನ ಮತ್ತು ಇ-ಕಾಮರ್ಸ್‌ಗಳಲ್ಲಿ ಕಾರ್ಯ ನಿರ್ವಹಿಸಿ, ಸಂಪತ್ತು ವೃದ್ಧಿಸಿರುವ ಇವರು ಇದೀಗ ನಿಧಾನವಾಗಿ ತಮ್ಮ ಮಕ್ಕಳಿಗೆ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು

    ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು

    ಬೀದರ್: ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.

    42 ವರ್ಷದ ತಂದೆ ಸೂರ್ಯಕಾಂತ್ ಚಂದ್ರಾಶಾ ಹಾಗೂ 16 ವರ್ಷದ ಮಗ ಅಭಿಷೇಕ್ ದುರಂತ ಸಾವನ್ನಪ್ಪಿದ್ದಾರೆ. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು ಕಲಿಸಲು ಹೋಗಿದ್ದರು. ಈ ವೇಳೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್‍ನನ್ನು ನೀರಿಗೆ ಇಳಿಸಿದ್ದು, ಆತ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ. ಈ ಹಿನ್ನೆಲೆ ಸೂರ್ಯಕಾಂತ್, ಅಭಿಷೇಕ್‍ನನ್ನು ರಕ್ಷಣೆ ಮಾಡಲು ಮುಂದಾಗಿದ್ದಾನೆ. ಇದನ್ನೂ ಓದಿ: ಪಿಎಂ ಮನೆ ಮುಂದೆ ಎಲ್ಲ ಧರ್ಮದ ಸಾಲುಗಳನ್ನು ಪಠಿಸಲು ಅವಕಾಶ ಕೊಡಿ: NCP ನಾಯಕಿ 

    ಅಭಿಷೇಕ್ ರಕ್ಷಣೆಗೆ ಮುಂದಾದಾಗ ಸೂರ್ಯಕಾಂತ್ ಸಹ ಕೆಸರಿನಲ್ಲಿ ಸಿಲಕು ಮೇಲೆ ಬರಲಾಗದೆ ಇಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುಡಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಗನ ಮೇಲೆ ಅತ್ಯಾಚಾರ ಆರೋಪ- ಸುಳ್ಳು, ಆಧಾರರಹಿತ ಎಂದ ಕೈ ಶಾಸಕ

    ಮಗನ ಮೇಲೆ ಅತ್ಯಾಚಾರ ಆರೋಪ- ಸುಳ್ಳು, ಆಧಾರರಹಿತ ಎಂದ ಕೈ ಶಾಸಕ

    ಜೈಪುರ: ಮಗನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದು ಸುಳ್ಳು ಹಾಗೂ ಆಧಾರರಹಿತ ಎಂದು ರಾಜಸ್ಥಾನದ ಕಾಂಗ್ರೆಸ್ ಶಾಸಕ ಜೊಹರಿ ಲಾಲ್ ಮೀನಾ ವಾಗ್ದಾಳಿ ನಡೆಸಿದ್ದಾರೆ.

    ಮೀನಾ ಮಗ ಸೇರಿ 4 ಮಂದಿ ಸೇರಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪ್ರತಿಕ್ರಿಯಿಸಿರುವ ಮೀನಾ, ನನ್ನ ಮಗನ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗಿದೆ. ನನ್ನ ಮಗನ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದ್ದಾಗಿದೆ. ಅಲ್ಲದೆ ಆಧಾರರಹಿತವಾಗಿದೆ. 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನನ್ನ ಮಾನಹಾನಿ ಮಾಡುವ ರಾಜಕೀಯ ಪಿತೂರಿ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

    ನನ್ನ ರಾಜಕೀಯ ಏಳಿಗೆಯನ್ನು ಸಹಿಸದ ಕೆಲವರು ಈ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದು ನನ್ನ ಘನತೆಗೆ ಧಕ್ಕೆ ತರುವ ಹೊಸ ಷಡ್ಯಂತ್ರವಾಗಿದೆ. ಮುಂಬರುವ ಚುನಾವಣೆಗಳಿಂದಾಗಿ ಇಂತಹ ಆರೋಪಗಳು ಮುನ್ನೆಲೆಗೆ ಬರುತ್ತವೆ ಎಂದು ಮೀನಾ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಇದೇ ವೇಳೆ ಈ ಹಿಂದೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸ್ಮರಿಸಿದ ಶಾಸಕರು, ತನಿಖೆಯ ನಂತರ ಅದು ಸುಳ್ಳೆಂಬುದು ಬಯಲಾಗಿತ್ತು. ಇದೀಗ ಮಗನ ಮೇಲೂ ಪ್ರಕರಣ ದಾಖಲಾಗಲಿದೆ. ಕೆಲವರು ನನಗೆ ಕಿರುಕುಳ ನೀಡಲು ಹೀಗೆ ಮಾಡಿದ್ದಾರೆ. ಇಂತಹ ಕೆಲಸಗಳನ್ನು ಮಾಡಬಾರದು. ಈ ಹಿಂದೆಯೂ ನನ್ನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಆದರೆ ತನಿಖೆಯ ನಂತರ ಇದು ಆಧಾರರಹಿತ ಮತ್ತು ನಕಲಿ ಎಂದು ತಿಳಿದುಬಂದಿದೆ ಅಂತ ಮೀನಾ ತಿಳಿಸಿದರು.

    ಇತ್ತ ದೌಸಾದ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳ ಜೊತೆ ಮಾತನಾಡಿ, ಆರೋಪಿಗಳು ಸಂತ್ರಸ್ತೆಗೆ ಮಾದಕ ವಸ್ತುವನ್ನು ನೀಡಿದ್ದಾರೆ. ಇದರಿಂದ ಆಕೆ ಅರೆಪ್ರಜ್ಞಾವಸ್ಥೆಯಲ್ಲಿರುವಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ಅಶ್ಲೀಲ ಫೋಟೋಗಳನ್ನು ಕ್ಲಿಕ್ಕಿಸಿದ್ದಲ್ಲದೇ, ಆಕೆಗೆ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್ ಅಪಘಾತ- 7 ಸಾವು, 45 ಮಂದಿಗೆ ಗಾಯ

    ಶಾಸಕರ ಪುತ್ರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. 15.40 ಲಕ್ಷ ರೂಪಾಯಿ ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಹಾಗೂ ಸಂತ್ರಸ್ತೆಯ ಅಶ್ಲೀಲ ಫೋಟೋಗಳನ್ನು ಕ್ಲಿಕ್ಕಿಸಿ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಅವರ ಮೇಲಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಬಾಲಕಿಯ ಕುಟುಂಬದವರ ದೂರಿನ ಮೇರೆಗೆ ದೌಸಾದಲ್ಲಿ ಪ್ರಕರಣ ದಾಖಲಾಗಿದೆ.

  • ಕಾಂಗ್ರೆಸ್ ಮುಖಂಡನ ಮಗನ ಮದುವೆಯ ಊಟ ಸೇವಿಸಿ 1,200 ಮಂದಿ ಅಸ್ವಸ್ಥ

    ಕಾಂಗ್ರೆಸ್ ಮುಖಂಡನ ಮಗನ ಮದುವೆಯ ಊಟ ಸೇವಿಸಿ 1,200 ಮಂದಿ ಅಸ್ವಸ್ಥ

    ಗಾಂಧೀನಗರ: ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ವಿವಾಹದಲ್ಲಿ ಆಹಾರ ಸೇವಿಸಿದ ಬಳಿಕ 1,200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.

    ವಿಸ್ನಗರ ತಾಲೂಕಿನ ಸವಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮದುವೆಯಲ್ಲಿ ಆಹಾರ ಸೇವಿಸಿದ ನಂತರ 1,200 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ಪಾರ್ಥರಾಜ್‍ಸಿನ್ಹ್ ಗೋಹಿಲ್ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    POLICE JEEP

    ಊಟದ ಬಳಿಕ ಜನರು ವಾಂತಿ ಮಾಡಲು ಪ್ರಾರಂಭಿಸಿದರು. ನಂತರ ಅವರನ್ನು ವಿಸ್ನಗರ, ಮೆಹ್ಸಾನಾ ಮತ್ತು ವಡ್ನಗರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಇದೀಗ ಮದುವೆಯಲ್ಲಿ ನೀಡಲಾದ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಆಹಾರ ಮತ್ತು ಔಷಧ ಇಲಾಖೆಯಿಂದ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗನಿಗಾಗಿ 1,400 ಕಿ.ಮೀ ಸ್ಕೂಟರ್ ಓಡಿಸಿದ್ದ ತಾಯಿಗೆ ಟೆನ್ಶನ್ – ಮೋದಿಗೆ ಪತ್ರ

    ಸಾವಳ ಗ್ರಾಮದಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಮಗನ ಮದುವೆ ಸಮಾರಂಭದಲ್ಲಿ ಹಲವಾರು ಜನರು ಪಾಲ್ಗೊಂಡಿದ್ದರು. ಕಾರ್ಯಕ್ರದಲ್ಲಿ ಮಾಂಸಾಹಾರ ಮೆನು ಕೂಡ ಇತ್ತು. ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿಸ್ನಗರ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

  • Microsoft ಸಿಇಒ ಸತ್ಯ ನಾಡೆಲ್ಲಾ ಪುತ್ರ ನಿಧನ!

    Microsoft ಸಿಇಒ ಸತ್ಯ ನಾಡೆಲ್ಲಾ ಪುತ್ರ ನಿಧನ!

    ವಾಷಿಂಗ್ಟನ್‌: ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಸತ್ಯ ನಾಡೆಲ್ಲಾ ಅವರ ಪುತ್ರ ಜೈನ್ ನಾಡೆಲ್ಲಾ ಸೋಮವಾರ ನಿಧನರಾಗಿದ್ದಾರೆ.

    ಸತ್ಯ ನಾಡೆಲ್ಲಾ ಪುತ್ರ ಜೈನ್ ನಾಡೆಲ್ಲಾ ಕೇವಲ 26 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಜೈನ್ ನಾಡೆಲ್ಲಾ ಹುಟ್ಟಿನಿಂದ ಝೈನ್ ಸೆರೆಬ್ರಲ್ ಪಾಲ್ಸಿ ಕಾಯಿಲೆ(ಸ್ನಾಯು ಸಂಬಂಧಿ ಅಸ್ವಸ್ಥತೆ) ಹೊಂದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ

     

    ಮೈಕ್ರೋಸಾಫ್ಟ್ ಸಿಇಒ ಸೋಮವಾರ ತನ್ನ ಸಿಬ್ಬಂದಿಗೆ ಇಮೇಲ್ ಮೂಲಕ ದುಃಖಕರ ವಿಚಾರವನ್ನು ತಿಳಿಸಿದ್ದಾರೆ. ಸಾಫ್ಟ್‍ವೇರ್ ಕಂಪನಿಯ ಇಮೇಲ್‍ನಲ್ಲಿ ಝೈನ್ ನಿಧನ ಹೊಂದಿದ್ದಾರೆ. ಕುಟುಂಬಕ್ಕೆ ಖಾಸಗಿಯಾಗಿ ದುಃಖಿಸಲು ಸಮಯ, ಅವಕಾಶ ನೀಡುವಂತೆ ಸಿಬ್ಬಂದಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ

  • ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ

    ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ

    ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರು ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ್ದಾರೆ.

    ರಾಜಕಾರಣಿ ಪುತ್ರನ ಗರ್ಲ್‍ಫ್ರೆಂಡ್‍ಗೆ ಹುಳಿಮಾವು ರೌಡಿಶೀಟರ್ ನಂದೀಶ್‍ನಿಂದ ಧಮ್ಕಿ ಆರೋಪ ವ್ಯಕ್ತವಾಗಿದೆ. ಬೆಂಗಳೂರು ಬಿಟ್ಟು ಹೋಗು, ಇಲ್ಲ ನಿನ್ನ ಖಾಸಗಿ ಫೋಟೋ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಯುವತಿಯ ಖಾಸಗಿ ಫೋಟೋ ವೀಡಿಯೋಗಳನ್ನು ಅವಳ ತಂದೆ ಹಾಗೂ ಆಕೆಯ ಬಾಯ್‍ಫ್ರೆಂಡ್‍ಗೆ ವಾಟ್ಸಾಪ್ ಮಾಡಿದ್ದಾನೆ. ಇದನ್ನೂ ಓದಿ: ಮೊಬೈಲ್‍ಗಾಗಿ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

    ಉತ್ತರ ಭಾರತದ 25 ವರ್ಷದ ಯುವತಿಯು ಆಗ್ನೇಯ ವಿಭಾಗ ಸೈಬರ್ ಕ್ರೈಂ ಪೊಲೀಸರಿಗೆ ರೌಡಿಶೀಟರ್ ನಂದೀಶ್‍ನ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ವೇಳೆ ಯುವತಿಯ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ರೌಡಿಶೀಟರ್ ನಂದೀಶ್ ಪ್ರಬಲ ರಾಜಕಾರಣಿಯ ಬಲಗೈ ಬಂಟನಾಗಿದ್ದಾನೆ.

  • ಕೊರೊನಾದಿಂದ ಮೃತಪಟ್ಟ ತಾಯಿಯ ಪ್ರತಿಮೆ ಪ್ರತಿಷ್ಠಾಪಿಸಿದ ಮಗ

    ಕೊರೊನಾದಿಂದ ಮೃತಪಟ್ಟ ತಾಯಿಯ ಪ್ರತಿಮೆ ಪ್ರತಿಷ್ಠಾಪಿಸಿದ ಮಗ

    ಹೈದರಾಬಾದ್: ಕೊರೊನಾ(CORONA)ದಿಂದ ಮೃತಪಟ್ಟ ತಾಯಿಯ (MOTHER) ನೆನಪಿಗಾಗಿ ಮಗ ಪ್ರತಿಮೆ ಪ್ರತಿಷ್ಠಾಪಿಸಿದ್ದಾನೆ. ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಸಿಂಹಪುರಿ ಕಾಲೋನಿಯಲ್ಲಿ ವಾಸವಾಗಿರುವ ರಾಮ್‍ಕುಮಾರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ರಾಮ್‍ಕುಮಾರ್ ಅವರ ತಾಯಿ ವಿಜಯಲಕ್ಷ್ಮಿ(59) ಕಳೆದ ವರ್ಷ ಮೇ 26 ರಂದು ಕೊರೊನಾದಿಂದ ಮೃತಪಟ್ಟಿದ್ದರು. ತಾಯಿಯ ನಿಧನವನ್ನು ಅರಗಿಸಿಕೊಳ್ಳಲಾಗದ ಪುತ್ರ ಅಮ್ಮನ ಚಿತ್ರವನ್ನು ಬಿಡಿಸಿ ಅದನ್ನು ದೇವರಂತೆ ಪೂಜಿಸಿದರು. ಇದೂ ಕೂಡ ರಾಮ್‍ಕುಮಾರ್‌ಗೆ ತೃಪ್ತಿ ನೀಡಲಿಲ್ಲ. ಆಗ ಒಂದು ಮಹತ್ತರವಾದ ಕಾರ್ಯಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: 26ವರ್ಷ ಸಿನಿ ಜರ್ನಿಗೆ ಜೊತೆಯಾದ ಪತ್ನಿಗೆ ಕಿಚ್ಚನ ಧನ್ಯವಾದ

    ತಾಯಿಯ ಪ್ರತಿಮೆ ಮಾಡುವ ಆಲೋಚನೆ ಬಂದಿದೆ. ನಂತರ ಈ ಪ್ರತಿಮೆ ತಯಾರಿಸಲು ರಾಜಸ್ಥಾನದ ಕಲಾವಿದನಿಗೆ ರಾಮ್‍ಕುಮಾರ್ ಹೇಳಿದ್ದನು. ಎರಡು ದಿನಗಳ ಹಿಂದೆಯಷ್ಟೇ ತಾಯಿಯ ಪ್ರತಿಮೆ ಕೈಸೇರಿದೆ. ಅಮೃತಶಿಲೆಯಿಂದ ಮಾಡಿರುವ ಮೂರೂವರೆ ಅಡಿ ಎತ್ತರದ ಈ ಪ್ರತಿಮೆಗಾಗಿ ಇವರು ಸುಮಾರು ಒಂದು ಲಕ್ಷ ರೂ. ಖರ್ಚು ಮಾಡಿದ್ದಾರೆ. ಈ ಪ್ರತಿಮೆಯನ್ನು ಮನೆಯಲ್ಲೇ ಸ್ಥಾಪಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಕತ್ರಿನಾ ಮದುವೆಗೆ ವಿಶ್ ಮಾಡಿದ ಸಲ್ಮಾನ್ ಖಾನ್

    ಈ ಕೂರಿತಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿ ರಾಮ್‍ಕುಮಾರ್, ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೀನಿ. ಅವರ ನೆನಪನ್ನು ಹಿಡಿದಿಡಬೇಕು. ಕೇವಲ  ಫೋಟೋವನ್ನು ಗೋಡೆಗೆ ನೇತುಹಾಕುವ ಬದಲು ದೇವರಂತೆ ಪೂಜಿಸಲು ಬಯಸುತ್ತೇನೆ. ಈ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಮನಸ್ಸಲ್ಲಿ ಆಲೋಚನೆ ಬಂದ ಕೂಡಲೇ ಕಂಚಿನ ವಿಗ್ರಹ ಮಾಡಿಸೋದಾ, ಸಿಮೆಂಟ್ ವಿಗ್ರಹ ಮಾಡಿಸೋದಾ ಅನ್ನೋ ಗೊಂದಲದಲ್ಲಿದ್ದೆ. ಆದರೆ ಅಮೃತ ಶಿಲೆಯಲ್ಲಿ ಮಾಡಿಸಿದರೆ ನಮ್ಮೊಂದಿಗೆ ಅಮ್ಮ ಶಾಶ್ವತವಾಗಿ ಇರುತ್ತಾಳೆ ಎನ್ನುವ ಭಾವನೆ ನನಗೆ ಇದೆ ಎಂದು ಹೇಳಿದ್ದಾರೆ.