Tag: ಪುತ್ರಿ

  • ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!

    ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!

    ಬೆಳಗಾವಿ: ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಇಬ್ಬರು ಹೆಂಡ್ತೀರ ಮುದ್ದಿನ ಗಂಡ – ಪತ್ನಿಯರಿಂದ್ಲೇ ಬರ್ಬರವಾಗಿ ಕೊಲೆಯಾಗಿದ್ದೇಕೆ..?

    ಮಹಾದೇವಿ ಇಂಚಲ ಅವರು ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಯೋಧನನ್ನು ವರಿಸಿದ್ದರು. ಏಳು ವರ್ಷಗಳ ಹಿಂದೆ ಪತಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮಹಾದೇವಿಯವರು ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜೊತೆಗೆ ವಾಸವಿದ್ದರು. ಇದೀಗ ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತು ಪುತ್ರಿಯ ಜೊತೆಗೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಈ ಘಟನೆ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿಯ ಪುತ್ರಿ ಏಕಾಏಕಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿದೆ. ಈ ಹಿನ್ನೆಲೆ ಆಕೆಯ ತಂದೆ, ಮಿಜೋರಾಂನ ಸಿಎಂ ಝೋರಂತಂಗ ಅವರು ಖುದ್ದಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

    ಸಿಎಂ ಪುತ್ರಿ ಮಿಲಾರಿ ಚಾಂಗ್ಟೆ ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ಚರ್ಮರೋಗ ತಜ್ಞನನ್ನು ಭೇಟಿಯಾಗಲು ಬಯಸಿದ್ದರು. ಆದರೆ ಭೇಟಿಗೂ ಮೊದಲು ಅಪಾಯಿಂಟ್‌ಮೆಂಟ್ ತೆಗೆದುಕೊಂಡು ಬರುವಂತೆ ಸೂಚಿಸಲಾಗಿತ್ತು. ಇದರಿಂದ ಕೋಪಗೊಂಡ ಚಾಂಗ್ಟೆ ವೈದ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

    ಘಟನೆ ಬುಧವಾರ ನಡೆದಿರುವುದಾಗಿ ತಿಳಿದುಬಂದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ಮುಖ್ಯಮಂತ್ರಿಗಳ ಮಗಳು ವೈದ್ಯರ ಬಳಿ ಹೋಗುವುದು ಹಾಗೂ ವೈದ್ಯನಿಗೆ ಹೊಡೆದಿರುವುದು ಕಂಡುಬಂದಿದೆ. ಈ ವೀಡಿಯೋ ಕಳೆದ 2 ದಿನಗಳಿಂದ ವೈರಲ್ ಆಗುತ್ತಿದ್ದು, ಬಳಿಕ ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ಸದಸ್ಯರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವ ಬೆದರಿಕೆ- ತನಿಖೆ ಮಾಡಿಸ್ತೀವಿ ಎಂದ ಸಿಎಂ

    ಈ ಘಟನೆಯ ವಿರುದ್ಧ ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಿಜೋರಾಂ ಘಟಕ ಪ್ರತಿಭಟನೆ ಆರಂಭಿಸಿದ್ದು, ವೈದ್ಯರು ಕಪ್ಪು ಬ್ಯಾಡ್ಜ್ ಧರಿಸಿ ಕೆಲಸ ಮಾಡಿರುವುದಾಗಿ ವರದಿಯಾಗಿದೆ.

    ಅಂತಿಮವಾಗಿ ಮಿಜೋರಾಂ ಸಿಎಂ ಇನ್‌ಸ್ಟಾಗ್ರಾಮ್‌ನ ಅಧಿಕೃತ ಖಾತೆ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಐಜ್ವಾಲ್ ಮೂಲದ ಚರ್ಮರೋಗ ವೈದ್ಯರೊಂದಿಗೆ ತಮ್ಮ ಮಗಳು ತೋರಿದ ದುರ್ವರ್ತನೆಗೆ ನಾನು ಕ್ಷಮೆ ಯಾಚಿಸುತ್ತೇನೆ. ನಾನು ಯಾವುದೇ ರೀತಿಯಲ್ಲೂ ಆಕೆಯ ನಡವಳಿಕೆಯನ್ನು ಸಮರ್ಥಿಸುವುದಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಮೇಲೆ ಮೂತ್ರವಿಸರ್ಜನೆ ಮಾಡಿ ವಿಕೃತಿ ಮೆರೆದ ಪತಿ ವಿರುದ್ಧ ದೂರು

    ಪತ್ನಿ ಮೇಲೆ ಮೂತ್ರವಿಸರ್ಜನೆ ಮಾಡಿ ವಿಕೃತಿ ಮೆರೆದ ಪತಿ ವಿರುದ್ಧ ದೂರು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಉದ್ಯಮಿ ಪುತ್ರಿಗೆ ವರದಕ್ಷಿಣೆ ಕಿರುಕುಳ ಆರೋಪವೊಂದು ಕೇಳಿಬಂದಿದೆ.

    ಈ ಸಂಬಂಧ ಉದ್ಯಮಿ ಪುತ್ರಿ ಸಂದೀಪ್ ಎಂಬಾತನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಂದೀಪ್ ಆಗಾಗ ಮನೆಯಲ್ಲಿ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡಿತ್ತಿರುತ್ತಾನೆ. ಬಳಿಕ ಗೆಳೆಯರ ಮುಂದೇಯೇ ಹಲ್ಲೆ ನಡೆಸಿ ಅಶ್ಲೀಲವಾಗಿ ಬೈಯುತ್ತಾನೆ. ಅಲ್ಲದೆ ತನ್ನ ಮೇಲೆ ಮೂತ್ರವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಪತ್ನಿ ತಿಳಿಸಿದ್ದಾರೆ.

    ದೂರು ನೀಡಿರುವಾಕೆಯ ತಂದೆ ತೆಲಂಗಾಣದಲ್ಲಿ ಪ್ರತಿಷ್ಠಿತ ಬಟ್ಟೆ ಕಂಪನಿ ಹೊಂದಿದ್ದಾರೆ. 2021ರ ಜನವರಿಯಲ್ಲಿ ರಾಮೋಜಿ ಫಿಲಂ ಸಿಟಿಯಲ್ಲಿ ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದಾರೆ. ಈ ವೇಳೆ 4 ಕೆಜಿ ಚಿನ್ನ, 200 ಕೆಜಿ ಬೆಳ್ಳಿ, 50 ಲಕ್ಷ ಹಣ, 55 ಲಕ್ಷದ ಮಿನಿಕೂಪರ್ ಕಾರು ವರದಕ್ಷಿಣೆ ನೀಡಿದ್ದರು. ಇದನ್ನೂ ಓದಿ: ದೇವನಹಳ್ಳಿಯಲ್ಲಿ ಒಂಟಿ ಮಹಿಳೆ ಕೊಲೆ – ಕತ್ತು ಕೊಯ್ದು ನಗದು ದೋಚಿದ್ದ ಕೆಲಸಗಾರನ ಬಂಧನ

    ಇಷ್ಟು ವರದಕ್ಷಿಣೆ ಕೊಟ್ಟಿದ್ರೂ ಸಂದೀಪ್‍ಗೆ ಹಣದಾಹ ನೀಗಿರಲಿಲ್ಲ. ಸಂದೀಪ್ ಹೆಸರಿಗೆ ತೆಲಂಗಾಣದಲ್ಲಿ 2 ಬಟ್ಟೆ ಶಾಪ್ ಮಾಡಿಕೊಡಲಾಗಿತ್ತು. ಇಷ್ಟೆಲ್ಲಾ ವರದಕ್ಷಿಣೆ ಕೊಟ್ಟರೂ ಪತಿ ಡ್ರಗ್ ಸೇವಿಸಿ ಪತ್ನಿಗೆ ಹಿಂಸೆ ನೀಡುತ್ತಿದ್ದನು. ಇದೀಗ ಪತಿಯ ಹಿಂಸೆ ತಾಳಲಾರದೆ ನೊಂದ ಪತ್ನಿ ಪೊಲೀಸ್ ಮೆಟ್ಟಿಲು ಹತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಕಾಂಗ್ರೆಸ್ ನಾಯಕರು ಟ್ವೀಟ್, ವೀಡಿಯೋ ಹಾಗೂ ರೀಟ್ವೀಟ್‌ಗಳನ್ನು ಮಾಡಿದ್ದು, ಅವೆಲ್ಲವನ್ನೂ 24 ಗಂಟೆಗಳ ಒಳಗೆ ಅಳಿಸಲು ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

    ಸ್ಮೃತಿ ಇರಾನಿ ಅವರ ಮಗಳು ಅಕ್ರಮ ಬಾರ್ ನಡೆಸುತ್ತಿರುವುದಾಗಿ ಆರೋಪಿಸಿರುವ ಜೈರಾಮ್ ರಮೇಶ್, ಪವನ್ ಖೇರಾ ಹಾಗೂ ನೆಟ್ಟಾ ಡಿಸೋಜಾ ವಿರುದ್ಧ ಸ್ಮೃತಿ ಇರಾನಿ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದು, ಅವರು ಆಗಸ್ಟ್ 18ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿಗೆ ಬೆಂಬಲಿಸಿದ್ದೆ, ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣ: ಡಿಕೆಶಿ

    ಸ್ಮೃತಿ ಇರಾನಿ ಅವರ 18 ವರ್ಷದ ಪುತ್ರಿ ಕಿರಾತ್ ನಾಗ್ರಾ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಹಿನ್ನೆಲೆ ಕಳೆದ ವಾರ ಸ್ಮೃತಿ ಇರಾನಿ ಮೂವರು ಕಾಂಗ್ರೆಸ್ ನಾಯಕರು ಹಾಗೂ ಅವರ ಪಕ್ಷಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು. ತಮ್ಮ ಮಗಳ ಮೇಲಿನ ಆರೋಪವನ್ನು ತಕ್ಷಣವೇ ಹಿಂಪಡೆಯಲು ಹಾಗೂ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಹುಲಿಗಳ ಸಂಖ್ಯೆ ಹೆಚ್ಚಳ – ಚೆಲುವ ಚಾಮರಾಜನಗರ ಈಗ ಹುಲಿಗಳ ನಾಡು

    Live Tv
    [brid partner=56869869 player=32851 video=960834 autoplay=true]

  • ಗೋವಾದಲ್ಲಿ ಪುತ್ರಿಯ ಅಕ್ರಮ ಬಾರ್- ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಮೋದಿಗೆ ಒತ್ತಾಯ

    ಗೋವಾದಲ್ಲಿ ಪುತ್ರಿಯ ಅಕ್ರಮ ಬಾರ್- ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಮೋದಿಗೆ ಒತ್ತಾಯ

    ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಸ್ಮೃತಿ ಇರಾನಿ ಅವರನ್ನು ತಮ್ಮ ಸ್ಥಾನದಿಂದ ವಜಾ ಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಕಾಂಗ್ರೆಸ್ ಒತ್ತಾಯಿಸಿದೆ.

    ಕಾಂಗ್ರೆಸ್ ವಕ್ತಾರ ಪವನ್ ಖೇರಾ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇರಾನಿ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಅವರ ಮಗಳು ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ನಕಲಿ ಪರವಾನಗಿ ಮೇಲೆ ಬಾರ್ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಸ್ಮೃತಿ ಇರಾನಿ ಅವರ ಮಗಳ ಪರವಾನಗಿಯು ಮೇ 2021 ರಲ್ಲಿ ನಿಧನರಾದ ವ್ಯಕ್ತಿಯ ಹೆಸರಿನಲ್ಲಿದೆ. ಆ ಪರವಾನಗಿಯನ್ನು 2022 ರ ಜೂನ್‌ನಲ್ಲಿ ಗೋವಾದಲ್ಲಿ ತೆಗೆದುಕೊಳ್ಳಲಾಗಿದೆ. ಆದರೆ ಪರವಾನಗಿಯಲ್ಲಿರುವ ಹೆಸರಿನ ವ್ಯಕ್ತಿ 13 ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ. ಇದು ಕಾನೂನುಬಾಹಿರ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಸ ಹಾಕಿದ್ದಕ್ಕೆ ಸಿಎಂ ನಿವಾಸಕ್ಕೆ 10,000 ರೂ. ದಂಡ ವಿಧಿಸಿದ ಕಾರ್ಪೊರೇಷನ್

    ಸ್ಮೃತಿ ಇರಾನಿ ಅವರ ಪುತ್ರಿ ಕಿರಾತ್ ನಾಗ್ರಾ ಗೋವಾದಲ್ಲಿ ಅಕ್ರಮ ಬಾರ್ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದರೂ ಅವರ ಪರ ವಕೀಲರು ಇದು ಸುಳ್ಳು ಆರೋಪ ಎಂದು ಹೇಳಿಕೆ ನೀಡಿದ್ದಾರೆ.

    ಕಿರಾತ್ ನಾಗ್ರಾ ಅವರ ಪರ ವಕೀಲರ ಪ್ರಕಾರ, ಈ ಆರೋಪ ಆಧಾರರಹಿತವಾದುದು. ನಿಜ ವಿಷಯವನ್ನು ತಿಳಿಯದೇ ನಾಗ್ರಾ ಅವರು ಒಬ್ಬ ಪ್ರಭಾವಿ ವ್ಯಕ್ತಿಯ ಮಗಳು ಎಂಬ ಕಾರಣಕ್ಕೆ ಇಂತಹ ಸುಳ್ಳು ಸುದ್ದಿ ಪ್ರಚಾರಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿದ್ದ ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲ

    ಕಿರಾತ್ ನಾಗ್ರಾ ಗೊವಾದಲ್ಲಿರುವ ಸಿಲ್ಲಿ ಸೌಲ್ಸ್ ರೆಸ್ಟೋರೆಂಟ್‌ನ ಮಾಲಕಿ ಅಥವಾ ನಿರ್ವಾಹಕಿ ಆಗಿಲ್ಲ. ಅವರು ಈ ಬಗೆಗಿನ ವಿಚಾರದಲ್ಲಿ ಯಾವುದೇ ಪ್ರಾಧಿಕಾರದಿಂದಲೂ ಶೋಕಾಸ್ ನೋಟಿಸ್ ಅನ್ನು ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಡುರಸ್ತೆಯಲ್ಲಿ ಅಮ್ಮ, ಮಗಳಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್

    ನಡುರಸ್ತೆಯಲ್ಲಿ ಅಮ್ಮ, ಮಗಳಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್

    ನವದೆಹಲಿ: 38 ವರ್ಷದ ಮಹಿಳೆ ಹಾಗೂ ಅವರ ಪುತ್ರಿ ಮೇಲೆ ನಡುರಸ್ತೆಯಲ್ಲಿ ಗ್ಯಾಂಗ್‍ವೊಂದು ದಾಳಿ ಮಾಡಿರುವ ಘಟನೆ ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ನವೆಂಬರ್ 19ರಂದು ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ಮಹಿಳೆ ಕಾರನ್ನು ಪಾರ್ಕ್ ಮಾಡಿದಾಗ ಅವರ ಮಗಳು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಮಹಿಳೆಯ ಪುತ್ರಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಲು ಆರಂಭಿಸುತ್ತಾರೆ. ಈ ವೇಳೆ ಮಗಳನ್ನು ರಕ್ಷಿಸಲು ಮುಂದಾದ ತಾಯಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾರ್ಕಿಂಗ್ ಪ್ರದೇಶದಲ್ಲಿ ಈ ಗ್ಯಾಂಗ್ ದೊಣ್ಣೆಯಿಂದ ಹೊಡೆಯುವುದು, ಕಾಲಿನಿಂದ ತೀವ್ರವಾಗಿ ಒದೆಯುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ಎಸ್.ಆರ್ ವಿಶ್ವನಾಥ್

    ಘಟನೆ ಬಳಿಕ ಮಹಿಳೆ ಹಾಗೂ ಆಕೆಯ ಪುತ್ರಿ ಆಸ್ಪತ್ರೆಗೆ ದಾಖಲಿಸಲಾಗಿ ಇದೀಗ ಚೇತರಿಸಿಕೊಂಡು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡು ಬಂದ ಇಬ್ಬರು ಆರೋಪಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಸೇವೆಯನ್ನು ಸಹಿಸಲಾಗದೆ ಕೊಲೆಗೆ ಸಂಚು: ಎಸ್.ಆರ್ ವಿಶ್ವನಾಥ್

    ಹಲ್ಲೆ ನಡೆಸಿರುವ ಆರೋಪಿಗಳು ಎಎಪಿ ಶಾಸಕಿ ಬಂದಾನ ಕುಮಾರಿ ಅವರ ಬೆಂಬಲಿಗಾರಾಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆದರೆ ಈ ಆರೋಪ ಕುರಿತಂತೆ ಪ್ರತಿಕ್ರಿಯಿಸಿರು ಬಂದಾನ ಕುಮಾರಿ ಅವರು, ಮಹಿಳೆ ನನ್ನ ನೆರೆ ಮನೆಯಲ್ಲಿ ವಾಸಿಸುತ್ತಾಳೆ. ಆಕೆ ಯಾವಾಗಲೂ ನನ್ನ ಮೇಲೆ ಆರೋಪ ಮಾಡುತ್ತಲೇ ಇರುತ್ತಾಳೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು

    ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು

    ಮುಂಬೈ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪುತ್ರಿಯನ್ನು ಅತ್ಯಾಚಾರ ಮಾಡುವುದಾಗಿ ಆನ್‍ಲೈನ್‍ನಲ್ಲಿ ಬೆದರಿಕೆ ಹಾಕಿದ ಐಐಟಿ ಪದವೀಧರನಿಗೆ ಮುಂಬೈ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ರಾಮ್‍ನಾಗೇಶ್ ಶ್ರೀನಿವಾಸ ಅಕುಬಾಥಿನಿ (23) ಮುಂಬೈ ಪೊಲೀಸ್ ವಿಶೇಷ ತಂಡ ಈತನನ್ನು ಬಂಧಿಸಿತ್ತು. ತಿಂಗಳಿಗೆ 2 ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಮುಂಬೈನಲ್ಲಿ ಉಳಿದುಕೊಂಡಿರುವ ವಿಳಾಸವನ್ನು ಪೊಲೀಸರಿಗೆ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಇದನ್ನೂ ಓದಿ:  ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ಪ್ರಕರಣ- ಇಂಜಿನಿಯರ್‌ ಅರೆಸ್ಟ್‌

    ಆರೋಪಿಯು ತನ್ನ ಟ್ವಿಟರ್ ಖಾತೆ ಹೆಸರನ್ನು ಬದಲಾಯಿಸಿಕೊಂಡಿದ್ದ. ಅಲ್ಲದೇ ತಾನು ಪಾಕಿಸ್ತಾನಿ ಎನ್ನುವಂತೆ  ಪೋಸ್ಟ್‌ಗಳನ್ನು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಿವಾಹಗಳಲ್ಲಿ ಕೇಕ್ ಕತ್ತರಿಸುವಂತಿಲ್ಲ, ಶಾಂಪೇನ್‌ ಹಾರಿಸುವಂತಿಲ್ಲ: ಕೊಡವ ಸಮಾಜದಿಂದ ನಿಷೇಧ

    ಹೈದರಾಬಾದ್ ಕಂಪನಿಯೊಂದರಲ್ಲಿ ಸಾಫ್ಟ್‍ವೇರ್ ಎಂಜಿನಿಯರ್ ಆಗಿದ್ದ ಶ್ರೀನಿವಾಸ್ ಒಂದು ತಿಂಗಳ ಹಿಂದೆ ಬೆಂಗಳೂರಿನ ಪ್ರಮುಖ ಕಂಪನಿಯೊಂದರಲ್ಲಿ ಕೆಲಸ ಮಡುತ್ತಿದ್ದನು. ಅಮೆರಿಕದಲ್ಲಿ ಸ್ನಾತಕೋತ್ತರ ಪದವಿಗಾಗಿ ತಯಾರಿ ಮಾಡಿಕೊಳ್ಳಲು ಕೆಲಸ ಬಿಟ್ಟಿದ್ದನು.

    ಕುಟುಂಬ ಸದಸ್ಯರು ಹೇಳುವಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ. ಐಐಟಿ-ಜೆಇಇ( Indian Institute Of Technology) ಪರೀಕ್ಷೆಯಲ್ಲಿ 2367 ರ‍್ಯಾಂಕ್ ಕೂಡ ಪಡೆದಿದ್ದ ರಾಮ್ ನಾಗೇಶ್, ಕೆಲವೇ ದಿನಗಳಲ್ಲಿ ಉನ್ನತ ಅಧ್ಯಯನಕ್ಕೆ ಅಮೆರಿಕಕ್ಕೆ ತೆರಳಬೇಕಿತ್ತು.

    ಪಾಕ್ ವಿರುದ್ಧ ಭಾರತ ಸೋಲಿನಿಂದಾಗಿ ತೀತ್ರ ಬೇಸರಕ್ಕೆ ಒಳಗಾಗಿ ಅತ್ಯಾಚಾರ ಬೆದರಿಕೆ ಪೋಸ್ಟ್ ಹಾಕಿದ್ದಾಗಿ ಹೇಳಿಕೆ ನೀಡಿದ್ದ. ಆಕಸ್ಮಿಕವಾಗಿ ತಮ್ಮ ಮಗ ಅತ್ಯಚಾರ ಬೆದರಿಕೆ ಪೋಸ್ಟ್ ಮಾಡಿದ್ದಾನೆ ಎಂದು ಅವರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. ಕನ್ನಡಕ ಹಾಕಿದ್ದ ಆತ ಅದನ್ನು ತೆಗೆದ ಬಳಿಕ ತಪ್ಪಾಗಿ ಟೈಪ್ ಮಾಡಿರಬೇಕು. ತಕ್ಷಣ ಪೋಸ್ಟ್ ಅನ್ನು ಅಳಿಸಿದ್ದಾನೆ ಎಂದು ಆರೋಪಿ ತಂದೆ ಹೇಳಿದ್ದರು.

  • ಬಾಗಿನ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡ ಪತ್ನಿ, ಪುತ್ರಿ ಕಣ್ಣೀರು

    ಬಾಗಿನ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡ ಪತ್ನಿ, ಪುತ್ರಿ ಕಣ್ಣೀರು

    ಮಂಡ್ಯ: ಜಿಲ್ಲೆಯಲ್ಲಿ ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡರವರ ಪತ್ನಿ ಹಾಗೂ ಪುತ್ರಿ ಕಣ್ಣೀರು ಹಾಕಿದ್ದಾರೆ.

    Narayana Gowda

    ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ನನ್ನ ಸಾಧನೆಗೆ ಪತ್ನಿ, ಪುತ್ರಿಯರ ಶಕ್ತಿಯೇ ಕಾರಣ. ಅವರ ಆಸೆಯಂತೆ ಇಂದು ಸಹೋದರಿಯರಿಗೆ ಬಾಗಿನ ಸಮರ್ಪಣೆ ಮಾಡುತ್ತಿದ್ದೇನೆ. ಪತ್ನಿ, ಪುತ್ರಿಯರ ತ್ಯಾಗ, ಶಕ್ತಿಯೇ ನನ್ನ ಈ ಸಾಧನೆಗೆ ಕಾರಣವಾಗಿದೆ. ನನ್ನ ಅಮ್ಮನ ಬಳಿಕ ಪತ್ನಿ, ಪುತ್ರಿಯರ ಕಾಳಜಿಯನ್ನು ನಾನು ಯಾವತ್ತು ಮರೆಯುವುದಿಲ್ಲ ಎಂದು ಭಾವುಕರಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿದ್ದ ನಾರಾಯಣಗೌಡ ಅವರ ಪತ್ನಿ ದೇವಕಿ, ಪುತ್ರಿ ಲೀನಾ ನಾರಾಯಣಗೌಡ ಅವರ ಮಾತುಗಳನ್ನು ಕೇಳಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ

    Narayana Gowda

    ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ನೆಲೆಯೂರುವ ಸಲುವಾಗಿ ನಾರಾಯಣಗೌಡ ಪ್ರತಿ ಬಾರಿಯೂ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಜೊತೆಗೆ ಸಂಪ್ರದಾಯ ಪಾಲನೆಗಾಗಿ, ಇಂದು 500ಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡಿದ್ದಾರೆ. ಸೀರೆ ಜೊತೆಗೆ ಅರಿಶಿನ ಕುಂಕುಮ, ಹೂ ಮತ್ತು ಬಾಗಿನ ನೀಡಿ ಮಹಿಳೆಯರಿಗೆ ಗೌರಿ-ಗಣೇಶ ಹಬ್ಬದ ಶುಭಾಷಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ, ವೈರಲ್ ಫಿವರ್‌ನಿಂದ ಮಕ್ಕಳನ್ನು ರಕ್ಷಿಸಿ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಕಿಡಿ

  • ಲಾಕ್‍ಡೌನ್‍ನಿಂದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿ ಮದುವೆ ಮುಂದೂಡಿಕೆ

    ಲಾಕ್‍ಡೌನ್‍ನಿಂದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿ ಮದುವೆ ಮುಂದೂಡಿಕೆ

    ಶಿವಮೊಗ್ಗ: ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿ ವಿವಾಹವನ್ನು ಮುಂದೂಡಲಾಗಿದೆ.

    ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಅವರ ವಿವಾಹ ಹೈದರಾಬಾದ್ ಮೂಲದ ಡಾ. ವಿಕ್ರಮಾಧಿತ್ಯ ಅಥೆಲಿ ಅವರೊಂದಿಗೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿತ್ತು. ಅಲ್ಲದೇ ಜೂನ್ 4 ರಂದು ಸೊರಬದ ಎಸ್.ಬಂಗಾರಪ್ಪ ಕ್ರೀಡಾಂಗಣದಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ಸಹ ನಿಯೋಜಿಸಲಾಗಿತ್ತು.

    ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾಗೂ ಸೋಂಕು ಹೆಚ್ಚುತ್ತಿರುವ ಕಾರಣ ಜೊತೆಗೆ ಮದುವೆ ಸಮಾರಂಭಗಳಲ್ಲಿ ಭಾಗವಹಿಸಿರುವ ಜನರಿಗೆ ಮಿತಿ ಹೇರಿರುವುದರಿಂದ ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಪುತ್ರಿಯ ವಿವಾಹವನ್ನು ಮುಂದೂಡಿದ್ದಾರೆ. ಅಲ್ಲದೇ ಲಾಕ್ ಡೌನ್ ಮುಗಿದ ನಂತರ ಹಾಗೂ ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ಮದುವೆ ದಿನಾಂಕ ನಿಗದಿಪಡಿಸುವ ಬಗ್ಗೆ ನಿರ್ಧರಿಸಿದ್ದಾರೆ.

    ರಾಜ್ಯ ಸರಕಾರ ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಗೊಳಿಸಿದೆ. ಮದುವೆ ಸಮಾರಂಭಗಳಲ್ಲಿ ಕೇವಲ 40 ಮಂದಿ ಮಾತ್ರ ಭಾಗವಹಿಸುವಂತೆ ಮಿತಿ ಹೇರಿದೆ.

  • ಪ್ರೇಮಿಗಳ ದಿನದಂದೇ ಹಸೆಮಣೆ ಏರಿದ ಡಿಕೆಶಿ ಪುತ್ರಿ

    ಪ್ರೇಮಿಗಳ ದಿನದಂದೇ ಹಸೆಮಣೆ ಏರಿದ ಡಿಕೆಶಿ ಪುತ್ರಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಪ್ರೇಮಿಗಳ ದಿನದಂದು ಸಪ್ತಪದಿ ತುಳಿದಿದ್ದಾರೆ.

     

     

    ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಮೊಮ್ಮಗ ಹಾಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ  ಅಮರ್ತ್ಯ ಹೆಗ್ಡೆ ಇವತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ಖಾಸಗಿ ಹೋಟೆಲಿನಲ್ಲಿ ಐಶ್ವರ್ಯ ಮತ್ತು ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ವಿವಾಹ ನೆರವೇರಿದೆ. ಬೆಳಗ್ಗೆ 9 ರಿಂದ 9-45ರ ನಡುವಿನ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಗಿದೆ.

     

    ಡಿ.ಕೆ ಶಿವಕುಮಾರ್ ಪುತ್ರಿಯ ಮದುವೆ ಸಮಾರಂಭದಲ್ಲಿ ಆಯ್ದ ಗಣ್ಯರು ಹಾಗೂ ಸಂಬಂಧಿಕರಿಗಷ್ಟೇ ಆಹ್ವಾನಿಸಲಾಗಿದೆ. ಅದ್ದೂರಿಯಾಗಿ ಮದುವೆ ನೇರವೇರಿದೆ. ಕನ್ಯಾದಾನದ ವೇಳೆ ಡಿಕೆ ಶಿವಕುಮಾರ್ ಕಣ್ಣೀರು ಇಟ್ಟಿದ್ದಾರೆ. ಡಿ.ಕೆಶಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.

     

    ನಿನ್ನ ನಡೆದಿರುವ ಕಾರ್ಯಕ್ರಮದಲ್ಲಿ ‘ಅಪ್ಪಾ ಐ ಲವ್ ಯು’ ಹಾಡಿಗೆ ಮಗಳು ನೃತ್ಯ ಮಾಡುತ್ತಿದ್ದರೆ, ಇತ್ತ ತಂದೆ ಶಿವಕುಮಾರ್ ಮಗಳ ನೃತ್ಯ ನೋಡಿ ಆನಂದಭಾಷ್ಪ ಸುರಿಸುತ್ತಿದ್ದರು. ಮಗಳ ಮದುವೆ ಕಾರ್ಯಕ್ರಮದ ಎಲ್ಲಾ ಸಿದ್ಧತೆಯನ್ನು ಸ್ವತಃ ಡಿಕೆ ಶಿವಕುಮಾರ್ ಮುಂದೆ ನಿಂತು ಮಾಡಿದ್ದಾರೆ ಮದುವೆಗೆ ಸಂಬಂಧಿಕರು ಮತ್ತು ಆತ್ಮೀಯ ಸ್ನೇಹಿತರು ಭಾಗಿಯಗಿದ್ದರು. ಫೇ 17 ರಂದು ನಡೆಯುವ ಆರತಕ್ಷತೆಯಲ್ಲಿ ಹಲವು ಗಣ್ಯಾತೀಗಣ್ಯರು ಮತ್ತು ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಐಶ್ವರ್ಯ ಪ್ರೇಮಿಗಳ ದಿನದಂದು ಅಮರ್ತ್ಯ ಹೆಗ್ಡೆ ಅವರನ್ನು ವರೆಸಿರುವುದು ವಿಶೇಷವಾಗಿದೆ.