ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿದೆ. ಗಿರೀಶ್ ಮಟ್ಟಣ್ಣವರ್ (Girish Mattannavar) ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂಓದಿ: ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ –ಓರ್ವ ಆರೋಪಿ ಬಂಧನ
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರು ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಚರಣ್ ಶೆಟ್ಟಿ ಉಲ್ಲೇಖಿಸಿದ್ದಾರೆ. ಇದನ್ನೂಓದಿ: ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿತಿಮರೋಡಿ, ಸಮೀರ್ ವಿರುದ್ಧಎಫ್ಐಆರ್ ದಾಖಲು
ಪುನೀತ್ ಕೆರೆಹಳ್ಳಿ (Puneeth Kerehalli) ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರ ದೂರಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್ ಅಹ್ಮದ್ (Zameer Ahmed) ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್‌ಬುಕ್ ಲೈವ್‌ನಲ್ಲಿ ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದ.
‘ಕುಮಾರಸ್ವಾಮಿ (H.D.Kumaraswamy) ಅವರಿಗೆ ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ’ ಎಂದು ಸಚಿವ ಜಮೀರ್ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯ ಬಿ.ಎಸ್.ಅಶೋಕ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುನೀತ್ ಕೆರೆಹಳ್ಳಿ ಎ1, ಪ್ರತಾಪ್ ಸಿಂಹ ಎ2 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ದಾವಣಗೆರೆ: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ (G Parmeshwar) ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್‌ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಮೇಕೆ ಮಾಂಸ?
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ
ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಸಂಪತ್ತು ಲೂಟಿ ಆಗುತ್ತಿದೆ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆ ಮಾಡಿದ್ರೆ ಬಿಎಸ್‌ವೈ ಇದ್ದಾನೋ, ಬಿವೈವಿ ಇದ್ದಾನೋ ಎಂದು ಗೊತ್ತಾಗುತ್ತೆ: ಯತ್ನಾಳ್
ನಾವು ರಾಜ್ಯದ ಜನತೆಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿಗಳು ಒಂದು ಆಯೋಗ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸ ಆಗಿಲ್ಲ. ವಾಲ್ಮೀಕಿ ಹಗರಣವನ್ನು ನಾವು ಜಸ್ಟಿಫೈ ಮಾಡುತ್ತಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ. ಅದರ ವರದಿ ಬರಲಿ. ಒಂದು ವೇಳೆ ವಾಲ್ಮೀಕಿ ಹಗರಣದಲ್ಲಿ ಮಂತ್ರಿಗಳ ಅಕೌಂಟ್ ಹಣ ಹೋಗಿದೆ ಎಂದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: 2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್ ಶಂಕರ್
ಬೆಂಗಳೂರು: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ (Puneeth Kerehalli) ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಯಿತು.
ಹಿಂದೂ ಸಂಘಟನೆಗಳ ಒಕ್ಕೂಟದ (Federation of Hindu Organizations) ಮೋಹನ್ ಗೌಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಶುಕ್ರವಾರ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ (Mejestic Railway Station) ಟನ್‌ಗಟ್ಟಲೆ ಅಕ್ರಮವಾಗಿ ಮಾಂಸ ಬಂದಿದೆ. ಅವರ ಬಳಿ ಲೈಸೆನ್ಸ್ ಇಲ್ಲ ಎಂದು ಫುಡ್ ಕಮಿಷನರ್ ಹೇಳಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪುನೀತ್ ಕೆರೆಹಳ್ಳಿ ಮೇಲೆ 3 ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಕರ್ತವ್ಯ ಮೆರೆದವರ ಮೇಲೆ ದೂರು ದಾಖಲಾಗಿದೆ. ಹಿಂದೂಗಳ ವಾಕ್ ಸ್ವಾತಂತ್ರ್ಯವನ್ನು ಸರ್ಕಾರ ಹರಣ ಮಾಡುತ್ತಿದೆ. ದೂರುದಾರರಿಂದ ರಕ್ಷಣೆ ಇಲ್ಲದಂತಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!
ಪ್ರಕರಣ ಏನು?
ರಾಜಸ್ಥಾನದಿಂದ ಬೆಂಗಳೂರಿಗೆ ಮೇಕೆ, ಕುರಿ ಮಾಂಸದ ಹೆಸರಿನಲ್ಲಿ ಅಕ್ರಮವಾಗಿ ನಾಯಿ ಮಾಂಸ ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶುಕ್ರವಾರ ರೈಲಿನಲ್ಲಿ ಬಂದ 90 ಬಾಕ್ಸ್ ಮಾಂಸವನ್ನು ತಡೆಯಲಾಗಿತ್ತು. ಇದರ ಉಸ್ತುವಾರಿ ಪುನೀತ್ ಕೆರೆಹಳ್ಳಿ ವಹಿಸಿಕೊಂಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನಡುವೆ ವಾಗ್ವಾದ ಕೂಡ ನಡೆದಿತ್ತು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸರ ವಶದಲ್ಲಿದ್ದ ಪುನೀತ್ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್ ರಜಾಕ್
ಬೆಂಗಳೂರು: ಜಾತಿ ನಿಂದನೆ (Atrocity Case) ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದೂರು ಏನಿತ್ತು?
ಬೇರೆ ಬೇರೆ ಆರೋಪಗಳ ಅಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಬಂಧನ ಮಾಡಲಾಗಿತ್ತು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ನಾನು ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದೆ. ಈ ಪೋಸ್ಟ್ ನಂತರ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಬೈರಪ್ಪ ಹರೀಶ್‌ಕುಮಾರ್ ಉಲ್ಲೇಖಿಸಿದ್ದರು.
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಸಿಸಿಬಿ ಪೊಲೀಸರು (CCB) ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ಬಂಧಿಸಿದ್ದಾರೆ.
ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್ ಕೆರೆಹಳ್ಳಿ(32) ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯ (Gunda Act) ಅಡಿ ಕೇಸ್ ದಾಖಲಿಸಿದ್ದಾರೆ.
ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ನೇರವಾಗಿ ಜೈಲಿಗೆ ಕಳುಹಿಸಿದ್ದಾರೆ. ಗೂಂಡಾ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ ಮತ್ತು ಒಂದು ವರ್ಷ ಜಾಮೀನು (Bail) ಸಿಗುವುದಿಲ್ಲ.
ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್ ಜಾರಿ ಮಾಡಿದ್ದರು.
ಪುನೀತ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಚಾಮರಾಜಪೇಟೆ ಪೊಲೀಸರು ಈ ಹಿಂದೆ ಮಾಹಿತಿ ನೀಡಿದ್ದರು.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಆರೋಪ ಪುನೀತ್ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯ ಜಾಮೀನು ನೀಡಿತ್ತು.
ಜುಲೈ ತಿಂಗಳಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಬಳಿ ಇರುವ ನಾಗರಕಟ್ಟೆಯಲ್ಲಿ ಪೂಜೆ ನಡೆಸಿದ್ದಕ್ಕೆ ಪುನೀತ್ ಕೆರೆಹಳ್ಳಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಬಿಬಿಎಂಬಿ ಮೈದಾನದ ಪಕ್ಕದಲ್ಲಿ ಇರುವ ನಾಗರಕಟ್ಟೆಯ ಬಳಿ ಪೂಜೆಯನ್ನು ಮಾಡಲು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿಯನ್ನು ಪಡೆದಿದ್ದಲ್ಲಿ ಅನುಮತಿ ಪತ್ರದ ಪ್ರತಿಯನ್ನು ನೀಡುವಂತೆ ನೋಟಿಸ್ ಕೊಟ್ಟಿದ್ದರು. ಅನುಮತಿ ಪಡೆಯಬೇಕು ಎಂದು ಪುನಿತ್ ಕೆರೆಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ವಿಪಕ್ಷ ಬಿಜೆಪಿ (BJP) ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು.
ರಾಮನಗರ: ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರು ಆರೋಪಿಗಳಿಗೆ ಹೈಕೋರ್ಟ್ (High Court) ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ.
ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬವರಿಗೆ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ
ವಿಚಾರಣೆ ವೇಳೆ ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಮ್, ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದ್ದು, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಪ್ರಕರಣವು ಸಾತನೂರು (Sathanur) ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಿದ್ದಾಗ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗಲೇಬೇಕಿತ್ತು. ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ತನಿಖೆಯಲ್ಲಿ ಏನೇನು ವಶಪಡಿಸಿಕೊಳ್ಳಬೇಕು ಎಲ್ಲವೂ ಪೂರ್ಣಗೊಂಡಿದೆ. ಇನ್ನು ಆರೋಪ ಪಟ್ಟಿ ಸಲ್ಲಿಕೆಯಾಗಿ ವಿಚಾರಣೆ ನಡೆಯಬೇಕಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್ ಮುಂದೆ ಸಿದ್ದು, ಡಿಕೆಶಿ ವಾದ ಏನು?
ಮಾರ್ಚ್ 31ರಂದು ಮಂಡ್ಯದಿಂದ (Mandya) ಬೆಂಗಳೂರಿನತ್ತ (Bengaluru) ಆಗಮಿಸುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್ ಠಾಣೆ ಸಮೀಪ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಅಡ್ಡಗಟ್ಟಿದ್ದರು. ಬಳಿಕ ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ 100 ಮೀಟರ್ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 324, 341, 504, 506 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 5ರಂದು ರಾಮನಗರ (Ramanagara) ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ
ರಾಮನಗರ: ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ (Puneet Kerehalli) ಸೇರಿದಂತೆ ಒಟ್ಟು 5 ಮಂದಿಯನ್ನು ಕನಕಪುರ ಜೆಎಂಎಫ್‌ಸಿ ನ್ಯಾಯಾಲಯ ಏಳು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ರಾಷ್ಟ್ರೀಯ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್, ಸುರೇಶ್ ಅವರನ್ನು ನಾಲ್ಕು ದಿನಗಳ ಹಿಂದೆ ರಾಜಸ್ಥಾನದಲ್ಲಿ ಬಂಧಿಸಿದ್ದ ಸಾತನೂರು ಪೊಲೀಸರು ಭಾನುವಾರ ಕನಕಪುರ ಜೆಎಂಎಫ್‌ಸಿ ನ್ಯಾಯಾಧೀಶ ಅಪ್ಪಣ್ಣ ಸವದಿ ಅವರ ಮನೆಯಲ್ಲಿ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಐವರು ಆರೋಪಿಗಳನ್ನು ಸಾತನೂರು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಮಾರ್ಚ್ 31ರಂದು ರಾಮನಗರ ಜಿಲ್ಲೆ ಕನಕಪುರದ ಸಾತನೂರು ಸಮೀಪ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಒಂದನ್ನು ತಡೆದಿದ್ದ ಪುನೀತ್ ಕೆರೆಹಳ್ಳಿ ಮತ್ತವರ ಗುಂಪು, ಜಾನುವಾರುಗಳನ್ನು ರಕ್ಷಣೆ ಮಾಡಿದ್ದರು. ಆ ಕ್ಯಾಂಟರಿನೊಳಗಿದ್ದ ಇದ್ರೀಷ್ ಪಾಷಾ ಎಂಬವರು ಏಪ್ರಿಲ್ 1ರಂದು ಘಟನೆ ನಡೆದ ಗ್ರಾಮದ ಬಳಿ ಶವವಾಗಿ ಪತ್ತೆಯಾಗಿದ್ದರು. ಈ ಸಾವು ಅನೇಕ ಅನುಮಾನಗಳಿಗೆ ಕಾರಣವಾಗಿದ್ದು, ವಿಪಕ್ಷಗಳೂ ಸೇರಿದಂತೆ ಸಾರ್ವಜನಿಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ. ತನಿಖೆ ಕೈಗೊಂಡಿದ್ದ ಪೊಲೀಸರು ಪುನೀತ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾತನೂರು ಪೊಲೀಸರು (Sathanoor Police) ಕಾರ್ಯಾಚರಣೆ ನಡೆಸಿ ಪ್ರಕರಣದ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರು ಆರೋಪಿಗಳನ್ನ ರಾಜಸ್ಥಾನದಲ್ಲಿ ಬಂಧಿಸಿ ರಾಮನಗರಕ್ಕೆ ಕರೆತರಲು ಸಿದ್ಧತೆ ನಡೆಸಿದ್ದಾರೆ.
ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹವವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದು, ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್‍ನಲ್ಲಿನ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಶ್ ಪಾಷ (Idrish Pasha) ಘಟನೆ ನಡೆದ 200 ಮೀಟರ್ ದೂರದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ಹಿಂದೂ ಕಾರ್ಯಕರ್ತ (Hindu Activist) ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ (Moral Policing) ಮಾಡಿದ್ದು ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮೃತ ವ್ಯಕ್ತಿ ಇದ್ರಿಷ್ ಪಾಷಾ ಕುಟುಂಬಸ್ಥರು ಸೇರಿ ರಾಜ್ಯದ ಹಲವೆಡೆ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿ ಪುನೀತ್ ಬಂಧನಕ್ಕೆ ಒತ್ತಾಯಿಸಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3ಎಫ್‍ಐಆರ್ ದಾಖಲಾಗಿದ್ದ ಹಿನ್ನೆಲೆ ಇಂದು ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಸೇರಿ ಐವರನ್ನ ಬಂಧಿಸಿದ್ದಾರೆ.
ಏ.1 ರಂದು ಪುನಿತ್ ಕೆರೆಹಳ್ಳಿ ಮೇಲೆ ದೂರು ದಾಖಲಾದ ಬಳಿಕ ಆತ ನಾಪತ್ತೆಯಾಗಿದ್ದ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಅಪ್ಲೋಡ್ ಮಾಡಿ ನಾನು ದೇವಾಲಯಕ್ಕೆ ಬಂದಿದ್ದೇನೆ. ಓಡಿಹೋಗಿಲ್ಲ ಎಂದು ಹೇಳಿಕೆಯನ್ನು ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಿದ್ದ. ಆತನನ್ನು ಬಂಧಿಲು ಒಟ್ಟು 4 ತಂಡಗಳನ್ನು ರಚನೆ ಮಾಡಿದ್ದ ಜಿಲ್ಲಾ ಪೊಲೀಸರು ಮೊದಲು ಹುಬ್ಬಳ್ಳಿ, ಮಹಾರಾಷ್ಟ್ರ, ಗುಜರಾತ್, ಸೂರತ್‍ಗಳಲ್ಲಿ ಸುತ್ತಾಡಿ, ರಾಜಸ್ಥಾನದಲ್ಲಿ ಓಡಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಬಳಿಕ ರಾಜಸ್ಥಾನ ಪೊಲೀಸರ ಸಹಾಯದಿಂದ ರಾಜಸ್ಥಾನದ ಗಡಿ ಜಿಲ್ಲೆ ಬನಸ್ವಾರ ಎಂಬಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪುನೀತ್ ಕೆರೆಹಳ್ಳಿ ಸೇರಿ ರಾಮನಗರದ ಗೋಪಿ, ತೀರ್ಥಹಳ್ಳಿಯ ಪವನ್ ಕುಮಾರ್, ಬಸವನಗುಡಿಯ ಪಿಲ್ಲಿಂಗ್ ಅಂಬಿಗಾರ್, ರಾಯಚೂರಿನ ಸುರೇಶ್ ರನ್ನ ಬಂಧಿಸಲಾಗಿದೆ. ಅಲ್ಲಿನ ನ್ಯಾಯಾಲಯದ ಅನುಮತಿ ಬಳಿಕ ಆರೋಪಿಗಳನ್ನು ರಾಜ್ಯಕ್ಕೆ ಕರೆತರಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ
ಮಂಡ್ಯದಿಂದ ತಮಿಳುನಾಡಿನ ಕಡೆಗೆ ಕ್ಯಾಂಟರ್ ನಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಚೆಕ್‍ಪೋಸ್ಟ್‍ಗಳ ಕಣ್ತಪ್ಪಿಸಿಕೊಳ್ಳಲು ಕಳ್ಳದಾರಿಯನ್ನು ಬಳಸಲಾಗಿತ್ತು. ಈ ಬಗ್ಗೆ ಕೂಡಾ ತನಿಖೆ ಮುಂದುವರಿದಿದೆ. ಅಲ್ಲದೇ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ನೈತಿಕ ಪೊಲೀಸ್ ಗಿರಿ ಪ್ರದರ್ಶನಕ್ಕೆ ಪುನಿತ್ ಕೆರೆಹಳ್ಳಿ ಮೇಲೆ ಪ್ರಕರಣವನ್ನೂ ಸಹ ದಾಖಲಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಇನ್ನೂ ಆರೋಪಿಗಳನ್ನು ಬಂಧಿಸುವಲ್ಲಿ ಶ್ರಮಿಸಿದ್ದ ಪೊಲೀಸರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಎಸ್ಪಿ ಕಾರ್ತಿಕ್ ರೆಡ್ಡಿ ಘೋಷಿಸಿದ್ದಾರೆ.
ಆರೋಪಿ ಬಂಧನ ಕುರಿತು ಮಾತನಾಡಿದ ಮುಸ್ಲಿಂ ಮುಖಂಡ ಮುಸಾರ್ವಿ ಖಾನ್, ಗೋವುಗಳನ್ನು ಸಾಗಿಸುವುದಕ್ಕೆ ಎಲ್ಲ ದಾಖಲೆಗಳಿದ್ದವು. ಪುನೀತ್ ಕೆರೆಹಳ್ಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಈತ ಕರೆಂಟ್ ನೀಡಿ ಇದ್ರೀಶ್ ಪಾಷನನ್ನು ಹತ್ಯೆ ಮಾಡಿದ್ದಾನೆ. ಈತನ ಹಿಂದೆ ಕಾಣದ ಶಕ್ತಿಗಳು ಕೆಲಸ ಮಾಡುತ್ತಿವೆ. ಹಿಂದೂ -ಮುಸ್ಲಿಮರುಗಳು ಅಣ್ಣತಮ್ಮರಂತೆ ಬಾಳುತ್ತಿದ್ದೇವೆ. ಕೆಲವರು ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇಂತಹವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದಿದ್ದಾರೆ.