Tag: ಪುರಸಭೆ ಸದಸ್ಯ

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ನಾದಿನಿ ಜೊತೆ ಪುರಸಭೆ ಸದಸ್ಯ ಸರಸ ಸಲ್ಲಾಸ- ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ

    ನಾದಿನಿ ಜೊತೆ ಪುರಸಭೆ ಸದಸ್ಯ ಸರಸ ಸಲ್ಲಾಸ- ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ

    ಬಳ್ಳಾರಿ: ಶಾಸಕ ಪರಮೇಶ್ವರ್ ನಾಯ್ಕ ಬಲಗೈ ಬಂಟ, ಹಾಲಿ ಹಡಗಲಿ ಪುರಸಭೆಯ ಸದಸ್ಯನೊಬ್ಬ ಪತ್ನಿಯ ಸಹೋದರಿಗೆ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ ಫೋಟೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

    ಹಡಗಲಿ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ 15ನೇ ವಾರ್ಡ್ ಸದಸ್ಯನಾಗಿರುವ ಕೆ.ಎಸ್ ರೆಹಮಾನ್ ತನ್ನ ಪತ್ನಿಯ ಸಹೋದರಿಯ ಜೊತೆ ಸರಸ ಸಲ್ಲಾಪ ಮಾಡಿದ ಫೋಟೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ರೆಹಮಾನ್ ವಿವಾಹಿತೆಯಾಗಿರುವ ಪತ್ನಿಯ ಸಹೋದರಿಗೆ ಮೌತ್ ಕಿಸ್ ಕೊಟ್ಟು ಸೆಲ್ಫಿ ಕ್ಲಿಕ್ಕಿಸಿದ್ದಾರೆ.

    ಈ ಫೋಟೋ ಎಲ್ಲೆಡೆ ಹರಿದಾಡುತ್ತಿದ್ದಂತೆ ರೆಹಮಾನ್ ಪತ್ನಿಯ ಸಹೋದರಿಯ ಮನೆಯವರು ಥಳಿಸಲು ಮುಂದಾಗುತ್ತಿದ್ದಂತೆ ರೆಹಮಾನ್ ನನ್ನು ಪೊಲೀಸರು ಕರೆದೊಕೊಂಡು ಹೋಗಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ರಾಜಿ ಪಂಚಾಯತಿ ಮಾಡಿಸಲು ಮುಂದಾಗಿದ್ದು, ಸದ್ಯ ಈ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews