Tag: ಪುರಿ ಜಗನ್ನಾಥ

  • ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    – ಜಗನ್ನಾಥ ಭಕ್ತರಲ್ಲಿ ಕ್ಷಮೆಯಾಚಿಸಿದ ಒಡಿಶಾ ಸಿಎಂ, ಇಬ್ಬರು ಅಧಿಕಾರಿಗಳ ಅಮಾನತು

    ಭುವನೇಶ್ವರ: ಒಡಿಶಾದ (Odisha) ಪುರಿ ಜಗನ್ನಾಥ ರಥಯಾತ್ರೆ (Puri Jagannath Rath Yatra) ವೇಳೆ ಕಾಲ್ತುಳಿತ (Stampede) ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನೆಗೆ ಕ್ಷಮೆಯಾಚಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಘೋಷಣೆ ಮಾಡಿದ್ದಾರೆ.

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾನು ಮತ್ತು ನನ್ನ ಸರ್ಕಾರ ಎಲ್ಲಾ ಜಗನ್ನಾಥ ಭಕ್ತರರಲ್ಲಿ ಕ್ಷಮೆಯಾಚಿಸುತ್ತದೆ. ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಈ ಆಳವಾದ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ನೀಡಬೇಕೆಂದು ಮಹಾಪ್ರಭು ಜಗನ್ನಾಥನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Uttar Pradesh | ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಬೆಂಗಳೂರು ಯುವಕನ ಕೊಲೆ

    Puri Jagannath

    ತಲಾ 25 ಲಕ್ಷ ಪರಿಹಾರ ಘೋಷಣೆ
    ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದವು ನಿಮ್ಮೊಂದಿಗಿರಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ಆಡಳಿತಾತ್ಮಕ ತನಿಖೆಗೆ ಆದೇಶ
    ಇನ್ನೂ ಘಟನೆಗೆ ನಿಖರ ಕಾರಣ ತಿಳಿಯಲು ಪೂರ್ಣ ಪ್ರಮಾಣದ ಆಡಳಿತಾತ್ಮಕ ತನಿಖೆಗೆ ಮಾಝಿ ಆದೇಶಿಸಿದ್ದಾರೆ. ಈ ಬೆನ್ನಲ್ಲೇ ಭದ್ರತಾ ಲೋಪಕ್ಕೆ ಕಾರಳವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    Puri Jagannath 2

    ಏನಿದು ಘಟನೆ?
    ಇದೇ ಜೂ.27ರಂದು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

    ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

    Puri Jagannath 3

    ಜಗನ್ನಾಥ ರಥಯಾತ್ರೆ ವಿಶೇಷ ಏನು?
    ಅಹಮದಾಬಾದ್‌ನಲ್ಲಿ ನಡೆಯುವ ರಥಯಾತ್ರೆ ಅದೊಂದು ಐತಿಹಾಸಿಕ ಹಿಂದೂ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆಯನ್ನು ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಇದು 148ನೇ ಜಗನ್ನಾಥ ರಥಯಾತ್ರೆ ಆಗಿದೆ.

  • ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    ಭುವನೇಶ್ವರ: ಒಡಿಶಾದ (Odisha) ಪುರಿ ಜಗನ್ನಾಥ ರಥಯಾತ್ರೆ (Puri Jagannath Rath Yatra) ವೇಳೆ ಕಾಲ್ತುಳಿತ (Stampede) ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

    ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶತಕ ಹೊಡೆದು ಹಲವು ದಾಖಲೆ ನಿರ್ಮಿಸಿದ ಸ್ಮೃತಿ ಮಂಧನಾ

    ಇಂದು ಮುಂಜಾನೆ 4:30ರ ವೇಳೆಗೆ ಘಟನೆ ನಡೆದಿದೆ. ಗುಂಡಿಚಾ ದೇವಾಲಯದ ಬಳಿ ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲು ಭಕ್ತ ಸಮೂಹವೇ ಸೇರಿತ್ತು. ರಥಗಳು ಭಕ್ತರನ್ನು ಸಮೀಪಿಸುತ್ತಿದ್ದಂತೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

  • 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ‘ರತ್ನ ಭಂಡಾರ’ದ ಬಾಗಿಲು

    46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ‘ರತ್ನ ಭಂಡಾರ’ದ ಬಾಗಿಲು

    ಭುವನೇಶ್ವರ: 46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ (Puri Jagannath Temple) ರತ್ನ ಭಂಡಾರದ ಬಾಗಿಲು ತೆರೆದಿದೆ. ಇಂದು ಮಧ್ಯಾಹ್ನ 1:28 ರತ್ನ ಭಂಡಾರ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

    12ನೇ ಶತಮಾನದ ಪುರಿ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರವು (Ratna Bhandar) ಆಭರಣಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಒಳಗೊಂಡಿದೆ. ಮೊದಲು ಹೊರ ಖಜಾನೆ ತೆರೆಯಲಾಗಿದೆ. ನಂತರ ಒಳ ಖಜಾನೆ ತೆರೆಯಲಾಗುತ್ತದೆ. ಇದನ್ನೂ ಓದಿ: 46 ವರ್ಷದ ನಂತರ ತೆರೆಯಲಿದೆ ಪುರಿ ಜಗನ್ನಾಥ ದೇಗುಲ ರತ್ನ ಭಂಡಾರದ ಬಾಗಿಲು!

    ಎಲ್ಲವನ್ನೂ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನದ ಪ್ರಕಾರ ನಡೆಸಲಾಗುತ್ತಿದೆ. ಉನ್ನತ ಮಟ್ಟದ ಸಮಿತಿ ಮತ್ತು ಅದರ ಸದಸ್ಯರು ಹೊರಬಂದ ನಂತರ ವಿವರಗಳನ್ನು ನೀಡುತ್ತಾರೆ ಎಂದು ಪುರಿ ಎಸ್‌ಪಿ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಸ್ಟ್ರಾಂಗ್ ರೂಮ್‌ಗೆ ಸ್ಥಳಾಂತರಿಸಲು ವಿಶೇಷ ಪೆಟ್ಟಿಗೆಗಳನ್ನು ದೇವಸ್ಥಾನಕ್ಕೆ ತರಲಾಯಿತು.

    ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿತು. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಸ್ಥಾಪಿಸಲಾಯಿತು. ಜಗನ್ನಾಥ ದೇವಸ್ಥಾನದ ಆಡಳಿತವು ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!

    ಪುರಿ ಜಿಲ್ಲಾಡಳಿತದ ಬಳಿಯಿದ್ದ ನಕಲಿ ಕೀ ಬಳಸಿ ಖಜಾನೆ ತೆರೆಯಲಾಗಿದೆ. ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ವೈದ್ಯಕೀಯ ತಂಡ ಮತ್ತು ಉರಗ ತಜ್ಞರ ತಂಡದ ಸದಸ್ಯರು ಸಹ ಸ್ಟ್ಯಾಂಡ್‌ಬೈನಲ್ಲಿ ಇದ್ದರು.

  • ಪುರಿಯಲ್ಲಿ ಪ್ರತಿಧ್ವನಿಸಿದ ಮೋದಿ ಘೋಷಣೆ- ಪ್ರಧಾನಿ ಕಾಣಲು ಹರಿದು ಬಂತು ಜನಸಾಗರ

    ಪುರಿಯಲ್ಲಿ ಪ್ರತಿಧ್ವನಿಸಿದ ಮೋದಿ ಘೋಷಣೆ- ಪ್ರಧಾನಿ ಕಾಣಲು ಹರಿದು ಬಂತು ಜನಸಾಗರ

    ಭುವನೇಶ್ವರ: ಲೋಕಸಭಾ ಚುನಾವಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾದಲ್ಲಿ ರೋಡ್‌ ಶೋ ನಡೆಸಿದರು. ಇದಕ್ಕೂ ಮುನ್ನ ಪ್ರಧಾನಿ ಜಗನ್ನಾಥನ ದರ್ಶನ ಮತ್ತು ಪೂಜೆಯೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸಿದರು.

    ಬೆಳಗ್ಗೆ 8 ಗಂಟೆಯ ನಂತರ ಪ್ರಧಾನಿಯವರ ರೋಡ್ ಶೋ ಆರಂಭವಾಯಿತು. ಈ ವೇಳೆ ತಮ್ಮ ಪ್ರೀತಿಯ ಪ್ರಧಾನಿಯನ್ನು ನೋಡಲು ಬೆಳಗ್ಗೆಯಿಂದಲೇ ಬಡ್ಡಂಡ್‌ನ ಎರಡೂ ಬದಿಗಳಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ಜಗನ್ನಾಥ ಧಾಮದುದ್ದಕ್ಕೂ ʼಮೋದಿ-ಮೋದಿʼ ಘೋಷಣೆ ಪ್ರತಿಧ್ವನಿಸಿತು. ಈ ಮೂಲಕ ದೇಶದ ಇತರೆ ರಾಜ್ಯಗಳಂತೆ ಪುರಿಯಲ್ಲಿಯೂ ಮೋದಿ ಮ್ಯಾಜಿಕ್ ಕಾಣಿಸಿಕೊಂಡಿದೆ.

    ಮಾಹಿತಿಯ ಪ್ರಕಾರ, ಭಾನುವಾರ ರಾತ್ರಿ ಭುವನೇಶ್ವರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು (narendra Modi) ಇಂದು ಬೆಳಗ್ಗೆ 7 ಗಂಟೆಗೆ ಪುರಿಯ ತಲ್ಬಾನಿಯಾ ಹೆಲಿಪ್ಯಾಡ್‌ಗೆ ಬಂದರು. ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ತೆರಳಿ ಜಗನ್ನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದಾದ ಬಳಿಕ ಬೆಳಗ್ಗೆ 8 ಗಂಟೆಯ ನಂತರ ರೋಡ್ ಶೋ (Modi Road Show in Puri) ಆರಂಭವಾಯಿತು. ರೋಡ್‌ ಶೋ ವೇಳೆ ಪ್ರಧಾನಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಾಲ್ ಮತ್ತು ಪುರಿ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಾ. ಸಂಬಿತ್ ಪಾತ್ರ ಸಾಥ್‌ ನೀಡಿದರು.

    ಒಂದು ಗಂಟೆ ರೋಡ್ ಶೋ: ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರ ರೋಡ್ ಶೋ ನಡೆಯಿತು. ಒಡಿಶಾದ ಸಂಸ್ಕೃತಿಯ ಝಲಕ್ ಕೂಡ ಬಡ್ಡಂಡ್‌ನ ಎರಡೂ ಬದಿಗಳಲ್ಲಿ ಕಂಡುಬಂದಿದೆ. ಒಂದೆಡೆ ಕಲಾವಿದರು ಪ್ರಧಾನಿಯವರನ್ನು ಸ್ವಾಗತಿಸಲು ಗೋಟಿ ಪುವಾ ನೃತ್ಯ ಮಾಡಿದ್ದು, ಇನೊಂದೆಡೆ ಒಡಿಸ್ಸಿ ನೃತ್ಯದ ಮೂಲಕ ಮೋದಿ ಗಮನಸೆಳೆದರು. ಇದಾದ ಬಳಿಕ ಮೋದಿ ಚುನಾವಣಾ ಪ್ರಚಾರಕ್ಕಾಗಿ ಅಂಗುಲ್‌ಗೆ ತೆರಳಿದ್ದರು. ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ವಿಶೇಷ ಭದ್ರತೆ: ಪ್ರಧಾನಿಯವರ ಭದ್ರತೆಗಾಗಿ 63 ತುಕಡಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರಲ್ಲಿ ಮೂವರು ಎಸ್ಪಿ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಇದರೊಂದಿಗೆ 8 ಹೆಚ್ಚುವರಿ ಎಸ್ಪಿಗಳು, 22 ಡಿಎಸ್ಪಿಗಳು, 42 ಇನ್ಸ್‌ಪೆಕ್ಟರ್‌ಗಳು, 109 ಸಬ್ ಇನ್‌ಸ್ಪೆಕ್ಟರ್‌ಗಳು, 34 ಕಾನ್‌ಸ್ಟೆಬಲ್‌ಗಳು, 202 ಕಾನ್‌ಸ್ಟೆಬಲ್‌ಗಳು, 250 ಗೃಹ ರಕ್ಷಕರು ಇತ್ಯಾದಿಗಳನ್ನು ನಿಯೋಜಿಸಲಾಗಿತ್ತು.

    ಪ್ರಧಾನಿಯವರು ಪುರಿ ತಲುಪುವ ಮುನ್ನವೇ ಪುರಿ ಜಗನ್ನಾಥ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನವನ್ನು ಸ್ಥಗಿತಗೊಳಿಸಲಾಗಿತ್ತು. ಇದರೊಂದಿಗೆ ಸಂಚಾರ ನಿರ್ಬಂಧವನ್ನೂ ಹೊರಡಿಸಲಾಗಿತ್ತು ಎಂದು ಪುರಿ ಎಸ್ಪಿ ಪಿನಾಕ್ ಮಿಶ್ರಾ ಹೇಳಿದ್ದಾರೆ.

  • ಕೊಹಿನೂರ್‌ ವಜ್ರ ಜಗನ್ನಾಥ ದೇವರಿಗೆ ಸೇರಿದ್ದು; ಬ್ರಿಟನ್‌ನಿಂದ ವಾಪಸ್‌ ತರಿಸಿ – ರಾಷ್ಟ್ರಪತಿಗೆ ಮನವಿ

    ಭುವನೇಶ್ವರ: ಕೊಹಿನೂರ್‌ ವಜ್ರವು (Kohinoor Diamond) ಜಗನ್ನಾಥ ದೇವರಿಗೆ ಸೇರಿದ್ದು, ಬ್ರಿಟನ್‌ನಿಂದ ಅದನ್ನು ಐತಿಹಾಸಿಕ ಪುರಿ ಜಗನ್ನಾಥ ದೇವಾಲಯಕ್ಕೆ (Jagannath) ವಾಪಸ್‌ ತರಲು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮಧ್ಯಸ್ಥಿಕೆಯಲ್ಲಿ ಕ್ರಮವಹಿಸಬೇಕು ಎಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮನವಿ ಮಾಡಿದೆ.

    ರಾಣಿ ಎಲಿಜಬೆತ್-2 (Queen Elizabeth II) ನಿಧನ ನಂತರ, ಆಕೆಯ ಹಿರಿಯ ಪುತ್ರ ಪ್ರಿನ್ಸ್ ಚಾರ್ಲ್ಸ್ (Prince Charles) ಬ್ರಿಟನ್‌ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿಯಮಗಳ ಪ್ರಕಾರ, 105 ಕ್ಯಾರೆಟ್ ವಜ್ರವಿರುವ ಕಿರೀಟವನ್ನು ಚಾರ್ಲ್ಸ್‌ ಪತ್ನಿ ಕಾರ್ನ್‌ವಾಲ್ ಕ್ಯಾಮಿಲ್ಲಾ ಅವರು ಧರಿಸಲಿದ್ದಾರೆ. ಇದನ್ನೂ ಓದಿ: ಆಹಾರ ಪದಾರ್ಥಗಳು ದುಬಾರಿ – ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ

    12ನೇ ಶತಮಾನದ ದೇಗುಲಕ್ಕೆ ಕೊಹಿನೂರ್ ವಜ್ರವನ್ನು ಮರಳಿ ತರುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪುರಿ ಮೂಲದ ಶ್ರೀ ಜಗನ್ನಾಥ ಸೇನೆಯು ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿತು.

    ಕೊಹಿನೂರ್ ವಜ್ರವು ಶ್ರೀ ಜಗನ್ನಾಥ ಭಾಗ್ಬನ್ ಅವರದ್ದು. ಅದು ಈಗ ಇಂಗ್ಲೆಂಡ್ ರಾಣಿ ಬಳಿ ಇದೆ. ಮಹಾರಾಜ ರಂಜಿತ್ ಸಿಂಗ್ ಅವರು ತಮ್ಮ ಇಚ್ಛೆಯ ಮೇರೆಗೆ ಅದನ್ನು ಜಗನ್ನಾಥ ದೇವರಿಗೆ ದಾನ ಮಾಡಿದಂತೆ, ಅದನ್ನು ಭಾರತಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿಯವರಲ್ಲೂ ವಿನಂತಿಸುತ್ತೇವೆ ಎಂದು ಕೋರಿದೆ. ಇದನ್ನೂ ಓದಿ: ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿದ ಕೇಜ್ರಿವಾಲ್ – ರಿಕ್ಷಾದಲ್ಲೇ ಪ್ರಯಾಣಿಸಿ ಸರಳತೆ ಮೆರೆದ್ರು

    ಪಂಜಾಬ್‌ನ ಮಹಾರಾಜ ರಂಜಿತ್ ಸಿಂಗ್ ಅವರು ಅಫ್ಘಾನಿಸ್ತಾನದ ನಾದಿರ್ ಶಾ ವಿರುದ್ಧದ ಯುದ್ಧದಲ್ಲಿ ಗೆದ್ದ ನಂತರ ಪುರಿ ಭಗವಂತನಿಗೆ ವಜ್ರವನ್ನು ದಾನ ಮಾಡಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

    ರಣಜಿತ್ ಸಿಂಗ್ 1839 ರಲ್ಲಿ ನಿಧನರಾದರು. 10 ವರ್ಷಗಳ ನಂತರ ಬ್ರಿಟಿಷರು ಕೊಹಿನೂರ್ ವಜ್ರವನ್ನು ರಣಜಿತ್‌ ಅವರ ಮಗ ದುಲೀಪ್ ಸಿಂಗ್‌ನಿಂದ ಕಿತ್ತುಕೊಂಡರು ಎಂದು ಇತಿಹಾಸಕಾರ ಮತ್ತು ಸಂಶೋಧಕ ಅನಿಲ್ ಧೀರ್ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್

    ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್

    ಪುರಿ ಜಗನ್ನಾಥ್ ಮತ್ತು ವಿಜಯ್ ದೇವರಕೊಂಡ ಕಾಂಬಿನೇಷನ್‌ನ ಹೊಸ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ಡ್ಯುಯೇಟ್ ಹಾಡಲು ಮಂಗಳೂರು ಬೆಡಗಿ ಪೂಜಾ ಹೆಗ್ಡೆ ರೆಡಿಯಾಗಿದ್ದಾರೆ.

    vijaydevarakonda

    ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ `ಅರ್ಜುನ್ ರೆಡ್ಡಿ’ ಸಿನಿಮಾ ಖ್ಯಾತಿಯ ವಿಜಯ್ ದೇವರಕೊಂಡ ಕಾಂಬಿನೇಶನ್‌ನ ಮತ್ತೊಂದು ಮೆಗಾ ಪ್ರಾಜೆಕ್ಟ್‌ಗೆ ನಾಯಕಿಯ ಆಯ್ಕೆ ಆಗಿದೆ. ತುಳುನಾಡಿನ ಕುವರಿ ಪೂಜಾ ಹೆಗ್ಡೆ ಈ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ.ಇದನ್ನೂ ಓದಿ:ಕಿಚ್ಚ ಸುದೀಪ್ ಅವರನ್ನ ಕಾಪಿ ಹೊಡೆದ ಸ್ಟಾರ್ ನಟ ಕಮಲ್ ಹಾಸನ್

    ಇದೊಂದು ಆಕ್ಷನ್ ಕಥೆಯಾಗಿದ್ದು, ಜೂನ್ ಮೊದಲ ವಾರದಲ್ಲಿಯೇ ಈ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯಲಿದೆ. ಪೂಜಾ ಹೆಗ್ಡೆ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಈ ಸಿನಿಮಾವನ್ನು ಐದು ಭಾಷೆಯಲ್ಲಿ ರಿಲೀಸ್ ಮಾಡಲು ತಯಾರಿ ನಡೆಸಲಾಗುತ್ತಿದೆ.

    ಪೂಜಾ ಹೆಗ್ಡೆ ಅವರಿಗೆ ಸಾಲು ಸಾಲು ಸಿನಿಮಾ ಸೋತಿದೆ. ಗೆಲುವಿಗಾಗಿ ಕಾಯುತ್ತಿರುವ ಪೂಜಾ ಈ ಚಿತ್ರದಲ್ಲಿಯಾದರೂ ಅವರು ಗೆಲುವು ಸಿಗಲಿದೆಯೇ ಎಂಬ ನಿರೀಕ್ಷೆಯಲ್ಲಿದ್ದಾರೆ. ಪದೇ ಪದೇ ಸೋಲು ಸಿಕ್ಕಿದ್ದಕ್ಕೆ ಪೂಜಾ ಹೆಗ್ಡೆ ಅವರಿಗೆ ಐರನ್ ಲೆಗ್ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಮುಂಬರುವ ಚಿತ್ರದ ಮೂಲಕ ಪೂಜಾ ಹೆಗ್ಡೆ ಅದೃಷ್ಟ ಖುಲಾಯಿಸುತ್ತಾ ಅಂತಾ ಕಾದು ನೋಡಬೇಕಿದೆ.

  • ವಾರಾಂತ್ಯದಲ್ಲಿ ಪುರಿ ಜಗನ್ನಾಥ ಸನ್ನಿಧಿ ಬಂದ್ – ಹೊರಗಿನ ಭಕ್ತರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ

    ವಾರಾಂತ್ಯದಲ್ಲಿ ಪುರಿ ಜಗನ್ನಾಥ ಸನ್ನಿಧಿ ಬಂದ್ – ಹೊರಗಿನ ಭಕ್ತರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ

    ಭುವನೇಶ್ವರ: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ವಾರಾಂತ್ಯದಲ್ಲಿ ಮುಚ್ಚಲಾಗುತ್ತದೆ.

    ಏಪ್ರಿಲ್ 19ರಿಂದ ಹೊಸ ಮಾರ್ಗಸೂಚಿಗಳು ಜಾರಿಗೆ ಬರಲಿದೆ. ಈ ಬೆನ್ನೆಲ್ಲೇ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಹಾಗೂ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸುವ ಸಲುವಾಗಿ ಶನಿವಾರ ಹಾಗೂ ಭಾನುವಾರ ಭಕ್ತರಿಗೆ ದೇವರ ದರ್ಶನವನ್ನು ನಿಷೇಧಿಸಲಾಗುತ್ತಿದೆ ಎಂದು ಶ್ರೀ ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ಶುಕ್ರವಾರ ತಿಳಿಸಿದೆ.

    ಒಡಿಶಾದ ಹೊರಗಿನಿಂದ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರು 96 ಗಂಟೆಗಳ ಒಳಗೆ ನಡೆಸಿದ ಕೋವಿಡ್-19 ಪರೀಕ್ಷೆಯ ನೆಗಟಿವ್ ವರದಿಯನ್ನು ತರಬೇಕಾಗುತ್ತದೆ ಅಥವಾ ಎರಡನೇ ಡೋಸ್ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವ ವರದಿಯನ್ನು ತರಬೇಕೆಂದು ದೇವಾಲಯದ ಸಂಸ್ಥೆ ಆದೇಶ ಹೊರಡಿಸಿದೆ. ಜೊತೆಗೆ ಇತರ ರಾಜ್ಯಗಳಿಂದ ಬರುವ ವ್ಯಕ್ತಿಗಳು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕೂಡ ತಿಳಿಸಲಾಗಿದೆ.