Tag: ಪುಲ್ವಾಮಾ

  • ಪುಲ್ವಾಮಾ ಸ್ಟೈಲ್‌ ದಾಳಿ – ಪಾಕ್‌ 90 ಸೈನಿಕರ ಹತ್ಯೆ: ಬಲೂಚ್ ಲಿಬರೇಶನ್ ಆರ್ಮಿ ಘೋಷಣೆ

    ಪುಲ್ವಾಮಾ ಸ್ಟೈಲ್‌ ದಾಳಿ – ಪಾಕ್‌ 90 ಸೈನಿಕರ ಹತ್ಯೆ: ಬಲೂಚ್ ಲಿಬರೇಶನ್ ಆರ್ಮಿ ಘೋಷಣೆ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) 90 ಮಂದಿ ಸೈನಿಕರನ್ನು ನಾವು ಹತ್ಯೆ ಮಾಡಿದ್ದೇವೆ ಎಂದು ಬಲೂಚ್ ಲಿಬರೇಶನ್ ಆರ್ಮಿ (BLA) ಹೇಳಿಕೊಂಡಿದೆ.

    ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ (Pulwama) ಭಾರತದ ಸೈನಿಕರನ್ನು ಉಗ್ರರು ಹೇಗೆ ಗುರಿ ಮಾಡಿ ಕೃತ್ಯ ಎಸಗಿದ್ದರೋ ಅದೇ ರೀತಿಯಾಗಿ ಇಂದು (ಮಾ.16) ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಸೈನಿಕರಿದ್ದ ಬಸ್ಸಿಗೆ ಸ್ಪೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 6 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

    ಡಿಕ್ಕಿಯಾದ ಬೆನ್ನಲ್ಲೇ ಕಾರು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಬಸ್ಸಿನ ಕಿಟಕಿ ಗಾಜುಗಳು ಒಡೆದು ಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಛಿದ್ರಗೊಂಡಿರುವ ಬಸ್ಸಿನ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ: Explainer | ಯಾರಿದು ಹೌತಿ ಉಗ್ರರು? ಅಮೆರಿಕ ದಾಳಿ ನಡೆಸಿದ್ದು ಯಾಕೆ? ವಿಶ್ವಕ್ಕೆ ಸಮಸ್ಯೆ ಏನು?

    ಬಲೂಚ್ ಲಿಬರೇಶನ್ ಆರ್ಮಿ ಈ ಘಟನೆಯಲ್ಲಿ 90 ಮಂದಿ ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಹೇಳಿದರೆ ಪಾಕ್‌ ಸೇನೆ 12 ಮಂದಿ ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ. ಶನಿವಾರ ಬಿಎಲ್‌ಎ ಪಾಕಿಸ್ತಾನಿ ಸೇನೆಯ ಬೆಂಗಾವಲು ಪಡೆಯ ಮೇಲೆ ಬಾಂಬ್ ದಾಳಿ ನಡೆಸಿತ್ತು.

    ಪಾಕಿಸ್ತಾನದ ಅತಿದೊಡ್ಡ ಭೂಪ್ರದೇಶವನ್ನು ಹೊಂದಿರುವ ಬಲೂಚಿಸ್ತಾನ ಪ್ರಾಂತ್ಯ ಕಡಿಮೆ ಜನ ಸಂಖ್ಯೆ ಹೊಂದಿದೆ. ಬಲೂಚಿಸ್ತಾನ ಖನಿಜ ಸಂಪದ್ಭರಿತ ಪ್ರದೇಶವಾಗಿದ್ದು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಈ ಕಾರಣಕ್ಕೆ ಪ್ರತ್ಯೇಕತಾವಾದಿ ಹೋರಾಟ ನಡೆಯುತ್ತಿದೆ. ಪಾಕಿಸ್ತಾನದಿಂದ ನಮಗೆ ಸ್ವಾತಂತ್ರ್ಯ ಬೇಕು ಎಂದು ಬಲೂಚ್‌ ಹೋರಾಟಗಾರರು ಈಗ ಯುದ್ಧಕ್ಕೆ ಧುಮುಕಿದ್ದಾರೆ.

     

  • ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು

    ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು

    ಶ್ರೀನಗರ: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ಮೃತನನ್ನು ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ 19 ಮಂದಿಯ ಮೇಲೆ ಆರೋಪ ಹೊರಿಸಲಾಗಿತ್ತು.

    ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್, ಬೆಡ್‍ರೂಮ್‍ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ ಕಾಮುಕ ಅರೆಸ್ಟ್

    ಫೆ.14, 2019 ರಂದು ಪುಲ್ವಾಮಾದ ಲೆಥ್‍ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‍ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಇದರಿಂದ 40 ಸಿಆರ್‌ಪಿಎಫ್‌ ಸಿಬ್ಬಂದಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿದ್ದರು.

    2020ರ ಆ.25 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಕುಚೇ ಮತ್ತು ಪ್ರಕರಣದ ಇತರ 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಬಂಧಿಸಲಾದ 7 ಆರೋಪಿಗಳಲ್ಲಿ ಈತನೂ ಸೇರಿದ್ದ.

    ಆರೋಪಿಗಳಾದ ಶಾಕಿರ್ ಬಶೀರ್, ಇನ್ಶಾ ಜಾನ್ ಮತ್ತು ಪೀರ್ ತಾರಿಕ್ ಅಹ್ಮದ್ ಶಾ ಹಾಗೂ ಮೃತ ಆರೋಪಿ ದಾಳಿ ನಡೆಸಿದ್ದ ಉಗ್ರನಿಗೆ ಮತ್ತು ಜೆಎಂ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು.

    ದಾಳಿಯಲ್ಲಿ ಭಾಗಿಯಾದ ಮೂವರು ಪಾಕಿಸ್ತಾನಿಯರು ಸೇರಿದಂತೆ 6 ಭಯೋತ್ಪಾದಕರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟಿದ್ದರೆ, ಜೆಎಂ ಸಂಸ್ಥಾಪಕ ಮಸೂದ್ ಅಜರ್ ಸೇರಿದಂತೆ ಇನ್ನೂ 6 ಮಂದಿ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಮೋದಿ

  • ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security Forces) ನಡೆದ ಗುಂಡಿನ ಚಕಮಕಿಯಲ್ಲಿ (Gunfight) ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ.

    ಭಾರತೀಯ ಸೇನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಉಪಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಟಾಪ್‌ ಕಮಾಂಡರ್‌ಗಳು (Lashkar Commander), ಮನೆಯೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

    ಪುಲ್ವಾಮಾದ (Pulwama) ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರು ಮನೆಯೊಂದರಲ್ಲಿ ಅಡಗಿದ್ದಾರೆ ಎಂಬುದರ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಗುಂಡಿನ ದಾಳಿ ನಡೆಸಿದ್ದವು. ಈ ವೇಳೆ ಪಾಕ್‌ ಮೂಲದ ಉಗ್ರರರಿಂದಲೂ ಪ್ರತಿದಾಳಿ ನಡೆದಿದ್ದು, ಕೊನೆಗೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಸೇನಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ.

    ಭಯೋತ್ಪಾದಕರಾದ ರಯೀಸ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ದಾರ್ ಇಬ್ಬರೂ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು ಎಂದು ಸೇನೆ ಖಚಿತಪಡಿಸಿದೆ. ಇದನ್ನೂ ಓದಿ:  Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ವಲಯದ ಪೊಲೀಸರು, ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಎನ್‌ಕೌಂಟರ್‌ ಪ್ರಾರಂಭವಾಗಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿವೆ. ಈವರೆಗೆ ಸಾವು ನೋವುಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಳೆದ ಮೇ 7ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರಯಾ ಪಡೆದಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದರು. ಇದನ್ನೂ ಓದಿ: ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ

  • ಪುಲ್ವಾಮಾದಲ್ಲಿ ಭದ್ರತಾ ಪಡೆಯ ಗುಂಡಿನ ದಾಳಿಗೆ ಉಗ್ರ ಮಟಾಷ್‌

    ಪುಲ್ವಾಮಾದಲ್ಲಿ ಭದ್ರತಾ ಪಡೆಯ ಗುಂಡಿನ ದಾಳಿಗೆ ಉಗ್ರ ಮಟಾಷ್‌

    ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಪುಲ್ವಾಮಾದಲ್ಲಿ (Pulwama) ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾಕನನ್ನು ಹೊಡೆದುರುಳಿಸಲಾಗಿದೆ.

    ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದೆ. ಕೂಡಲೇ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

    ಭದ್ರತಾ ಪಡೆಗಳ ಪ್ರತಿ ದಾಳಿಗೆ ಓರ್ವ ಉಗ್ರರ ಮೃತಪಟ್ಟಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಬ್ಬರ ಕೊಲೆ ಮಾಡಿದ ಪಾಪಿ ತಾಯಿ!

  • ಪುಲ್ವಾಮಾ ದಾಳಿ ಬಗೆಗಿನ ಪರಮೇಶ್ವರ್ ಹೇಳಿಕೆ ದೇಶ ವಿರೋಧಿ: ಗೌರವ್ ಭಾಟಿಯಾ

    ಪುಲ್ವಾಮಾ ದಾಳಿ ಬಗೆಗಿನ ಪರಮೇಶ್ವರ್ ಹೇಳಿಕೆ ದೇಶ ವಿರೋಧಿ: ಗೌರವ್ ಭಾಟಿಯಾ

    ನವದೆಹಲಿ: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪುಲ್ವಾಮಾ ದಾಳಿ (Pulwama Attack) ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ‌. ಇದು ಅತ್ಯಂತ ದುಃಖಕರ, ಆತಂಕಕಾರಿ ಹಾಗೂ ದೇಶ ವಿರೋಧಿ ಹೇಳಿಕೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ (Gaurav Bhatia) ಆರೋಪಿಸಿದ್ದಾರೆ.

    ಜಿ. ಪರಮೇಶ್ವರ್ (G.Parameshwar) ಹೇಳಿಕೆ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇಂದಿನ ಕಾಂಗ್ರೆಸ್‌ನ (Congress) ಪಾತ್ರ ಭಾರತ ವಿರೋಧಿ ಎಂಬುದು ನಂಬಿಕೆಗೆ ಮೀರಿದ್ದು. ಅವರ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲೂ ಕಾಂಗ್ರೆಸ್, ಎಸ್‌ಪಿ (SP) ಮತ್ತು ಆಮ್ ಆದ್ಮಿ (AAP) ಪಕ್ಷಗಳು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದವು, ದಾಳಿಗೆ ಇದಕ್ಕೆ ಸಾಕ್ಷಿ ಕೇಳಿದ್ದವು. ಈಗ ಜಿ.ಪರಮೇಶ್ವರ್ ಹೇಳಿಕೆಯಲ್ಲೂ ಅದೇ ಭಾರತ ವಿರೋಧಿ ಪಾತ್ರ ಎದ್ದು ಕಾಣುತ್ತಿದೆ. ಒಂದು ವೇಳೆ ಕಾಂಗ್ರೆಸ್‌ಗೆ ಅಂತಹ ನಿಲುವು ಇದ್ದರೆ, ಕಾಂಗ್ರೆಸ್‌ನ ಈ ಕ್ರಮಗಳಿಗೆ ಭಾರತದಲ್ಲಿ ಸ್ಥಾನವಿಲ್ಲ ಎಂದು ಹೇಳಬಹುದು. ನೀವು ಭಾರತೀಯ ಸೇನೆಯಿಂದ ಪುರಾವೆ ಕೇಳುತ್ತೀರಿ, ನೀವು ಭಾರತೀಯರೇ ಅಥವಾ ಅಲ್ಲವೇ ಎಂದು ದೇಶದ ಜನರು ನಿಮ್ಮನ್ನು ಕೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಟಿಎಂಸಿ ನಾಯಕನ ಮನೆಯಲ್ಲಿ ಸ್ಫೋಟ ಪ್ರಕರಣ – ತನಿಖೆಗೆ ತೆರಳಿದ್ದ ಎನ್‍ಐಎ ಅಧಿಕಾರಿಗಳ ಕಾರಿನ ಮೇಲೆ ದಾಳಿ

  • ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

    ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

    ನವದೆಹಲಿ: ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 5 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.

    ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 5 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.

    https://twitter.com/araynaroy_/status/1757408468946780670

    ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆಯ ಬಗ್ಗೆ ನೆಟ್ಟಿಗರು #BlackDay ಹೆಸರಿನಲ್ಲಿ ಪೋಸ್ಟ್‌ ಮಾಡಿ ವೀರ ಯೋಧರ ಬಲಿದಾನವನ್ನು ಸ್ಮರಿಸುತ್ತಿದ್ದಾರೆ.

    ದಾಳಿಯ ಪ್ರಮುಖ ಅಂಶಗಳು
    14 ಫೆಬ್ರವರಿ 2019:
    ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.

    15 ಫೆಬ್ರವರಿ 2019: 
    ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೈಷ್‌ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ‍್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು.

    ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು. ಉಗ್ರರು ಎಲ್ಲೇ ಅಡಗಿದ್ದರೂ ಅವರ ಮನೆಗೆ ನುಗ್ಗಿ ಹೊಡೆದು ಬರುತ್ತೇವೆ ಎಂದು ಅಂದು ಮೋದಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಯಿತು.

    16 ಫೆಬ್ರವರಿ 2019: 
    ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. – ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.

    ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನವನ್ನು ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತದ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್‌ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಂಡಿತು.

    26 ಫೆಬ್ರವರಿ 2019: 
    ಭಾರತೀಯ ವಾಯುಪಡೆಯ ಜೆಟ್‌ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್‌ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್‌ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿತ್ತು.

    27 ಫೆಬ್ರವರಿ 2019: 
    ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.

    28 ಫೆಬ್ರವರಿ 2019: 
    ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.

     

  • ಪುಲ್ವಾಮಾದಲ್ಲಿ ಜೆಇಎಂ ಭಯೋತ್ಪಾದಕನ ಅಕ್ರಮ ಮನೆ ನೆಲಸಮ

    ಪುಲ್ವಾಮಾದಲ್ಲಿ ಜೆಇಎಂ ಭಯೋತ್ಪಾದಕನ ಅಕ್ರಮ ಮನೆ ನೆಲಸಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾ (Pulwama) ಜಿಲ್ಲೆಯ ನ್ಯೂ ಕಾಲೋನಿಯಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ನಿರ್ಮಿಸಲಾಗಿದ್ದ ಜೈಶ್-ಎ-ಮೊಹಮ್ಮದ್ (JeM) ಭಯೋತ್ಪಾದಕ (Terrorist) ಆಶಿಕ್ ನೆಂಗ್ರೂನ (Ashiq Nengroo) ಮನೆಯನ್ನು ಅಧಿಕಾರಿಗಳು ಶನಿವಾರ ನೆಲಸಮಗೊಳಿಸಿದ್ದಾರೆ (Demolished).

    ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂನ ಕಮಾಂಡರ್ ಮತ್ತು ಪುಲ್ವಾಮಾ ದಾಳಿಯ ಆರೋಪಿಯಾಗಿರುವ ನೆಂಗ್ರೂನ ಅಕ್ರಮವಾದ 2 ಅಂತಸ್ತಿನ ಮನೆಯನ್ನು ಜಿಲ್ಲಾಡಳಿತ ಪೊಲೀಸರ ಸಮ್ಮುಖದಲ್ಲಿ ನೆಲಸಮಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ ಮಾಡಿದ ಕಾಂಗ್ರೆಸ್

    ನೆಂಗ್ರೂ ನಿವಾಸವನ್ನು ಧ್ವಂಸಗೊಳಿಸಿರುವ ನಡೆಯನ್ನು ಉಗ್ರಗಾಮಿ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ವಿರೋಧಿಸಿದೆ. ಧ್ವಂಸಗೊಳಿಸುವ ಕಾರ್ಯವನ್ನು ನಿರ್ವಹಿಸುವ ಅಧಿಕಾರಿಗಳು ಇದರ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.

    ಆಶಿಕ್ ನೆಂಗ್ರೂ ಯಾರು?
    ನೆಂಗ್ರೂ ವಾಂಟೆಡ್ ಜೆಇಎಂ ಕಮಾಂಡರ್ ಮತ್ತು 2019 ರ ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈ ವರ್ಷ ಏಪ್ರಿಲ್‌ನಲ್ಲಿ, ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕಾಯ್ದೆಯಡಿಯಲ್ಲಿ ಜೆಇಎಂ ಕಮಾಂಡರ್ ಅನ್ನು ನಿಯೋಜಿತ ಭಯೋತ್ಪಾದಕ ಎಂದು ಘೋಷಿಸಿದೆ. ಇದನ್ನೂ ಓದಿ: ಮಳೆಬಿಲ್ಲು ಬಣ್ಣದ ಶರ್ಟ್ ಧರಿಸಿ ಬಂಧನವಾಗಿದ್ದ ಅಮೆರಿಕದ ಪತ್ರಕರ್ತ ಕತಾರ್‌ನಲ್ಲಿ ನಿಧನ

    Live Tv
    [brid partner=56869869 player=32851 video=960834 autoplay=true]

  • ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷ ಜೈಲು

    ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷ ಜೈಲು

    ಬೆಂಗಳೂರು: ಪುಲ್ವಾಮಾ ದಾಳಿಯನ್ನು(Pulwama Attack) ಸಂಭ್ರಮಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ ಬೆಂಗಳೂರಿನ(Bengaluru) ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನಿಗೆ ವಿಶೇಷ ಕೋರ್ಟ್‌(A Special Court ) 10 ಸಾವಿರ ರೂ. ದಂಡ ಮತ್ತು 5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಕಚರಕನಹಳ್ಳಿ ನಿವಾಸಿ, ಮೂರನೇ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಫೈಜ್‌ ರಶೀದ್‌ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಫೆಬ್ರವರಿ 14 ರಂದು ಪುಲ್ವಾಮದಲ್ಲಿ ಉಗ್ರನ ಆತ್ಮಹುತಿ ದಾಳಿಗೆ 40 ಮಂದಿ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ರಶೀದ್‌ ಪೋಸ್ಟ್‌ ಮಾಡಿ ಸಂಭ್ರಮಿಸಿದ್ದ. ಇದನ್ನೂ ಓದಿ: ರಾಜ್ಯೋತ್ಸವ ದಿನವೇ ಕೋಪ: ಬಿಗ್ ಬಾಸ್ ಮನೆಯಿಂದ ಹೊರಟ ರೂಪೇಶ್ ರಾಜಣ್ಣ

    ಪೋಸ್ಟ್‌ ಪ್ರಕಟಗೊಂಡ ಬಳಿಕ ಸಿಸಿಬಿ ಪೊಲೀಸರು ಆತನನ್ನು 2019ರಲ್ಲಿ ಬಂಧಿಸಿದ್ದರು. ಆತನ ಜಾಮೀನು ಅರ್ಜಿ ವಜಾಗೊಂಡಿದ್ದು, ಈಗಲೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾನೆ.

    ಪೊಲೀಸರು ಆತನ ಮೊಬೈಲ್ ಫೋನ್‌ ವಶಪಡಿಸಿಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಐಪಿಸಿ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 124 ಎ (ದೇಶದ್ರೋಹ) ಮತ್ತು 201 (ಅಪರಾಧದ ಸಾಕ್ಷ್ಯವನ್ನು ಕಣ್ಮರೆಯಾಗುವಂತೆ ಮಾಡುವುದು) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 13 ರ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

    ಅಂದು ಏನಾಗಿತ್ತು?
    2019ರ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ – ಓರ್ವ ಹುತಾತ್ಮ

    ಕಾಶ್ಮೀರದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ – ಓರ್ವ ಹುತಾತ್ಮ

    ಶ್ರೀನಗರ: ಕಾಶ್ಮೀರದಲ್ಲಿ (Kashmir) ಮತ್ತೆ ಉಗ್ರರು (Terrorist) ಭದ್ರತಾ ಪಡೆಯನ್ನು ಗರಿಯಾಗಿಸಿ ದಾಳಿ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಚೆಕ್‌ಪೋಸ್ಟ್ ಬಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ತಂಡವನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಓರ್ವ ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ.

    ಶೋಪಿಯಾನ್‌ದಲ್ಲಿ (Shopian) ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ (LET) ಭಯೋತ್ಪಾದಕನನ್ನು ಹತ್ಯೆ ಮಾಡಿದ ಕೆಲವೇ ಗಂಟೆಗಳ ಬಳಿಕ ಉಗ್ರರಿಂದ ಪ್ರತಿದಾಳಿ ನಡೆದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ಪಿಂಗ್ಲಾನಾ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ, ತಪ್ಪಿಸಿಕೊಂಡಿದ್ದಾರೆ. ಸದ್ಯ ಉಗ್ರರನ್ನು ಪತ್ತೆಹಚ್ಚಲು ಗ್ರಾಮಕ್ಕೆ ಪೊಲೀಸ್ (Police), ಸೇನೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಕಾರ್ಯಾಚರಣೆಯ ಸಮಯದಲ್ಲಿ ಎಕೆ ರೈಫಲ್ ಸೇರಿದಂತೆ ಮದ್ದು ಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಖಾದಿ ಎಂಪೋರಿಯಂನಲ್ಲಿ ಲೇಡಿಸ್ ಟಾಪ್ ಡ್ರೆಸ್ ಖರೀದಿಸಿದ ಸಿಎಂ

    ದಕ್ಷಿಣ ಕಾಶ್ಮೀರದ ಶೋಪಿಯಾನ್ ಬಾಸ್ಕುಚಾನ್ ಇಮಾಮಸಾಹಿಬ್ ಪ್ರದೇಶದಲ್ಲಿ ಭದ್ರತಾಪಡೆಗಳು ಶನಿವಾರ ನಡೆಸಿದ ಎನ್‌ಕೌಂಟರ್ ದಾಳಿಯಲ್ಲಿ ಲಷ್ಕರ್ ಎ ತೋಯ್ಬಾ (LET) ದೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನನ್ನು ಹತ್ಯೆಗೈದು ಇಬ್ಬರನ್ನು ಬಂಧಿಸಿತ್ತು. ಮೃತ ಭಯೋತ್ಪಾದಕನನ್ನು ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗೆ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ

    ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ

    ಶ್ರೀನಗರ: ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿದೆ.

    ಪುಲ್ವಾಮಾ ಜಿಲ್ಲೆಯ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿ ನಾಕಾ ಪಾರ್ಟಿ(ಚೆಕ್ ಫೋಸ್ಟ್) ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

    ಚೆಕ್‌ಪೋಸ್ಟ್ ಮೇಲೆ ಸಮೀಪದ ಸೇಬಿನ ತೋಟದಿಂದ ಗುಂಡಿನ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ

    ಘಟನಾ ಪ್ರದೇಶದಲ್ಲಿ ಭದ್ರತಾ ಪಡೆ ಸುತ್ತುವರಿದಿದ್ದು, ಉಗ್ರರನ್ನು ಪತ್ತೆ ಹಚ್ಚಲು ಹಾಗೂ ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]