Tag: ಪುಷ್ಕರ್ ಸಿಂಗ್ ಧಾಮಿ

  • ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

    ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

    – ಕೇಂದ್ರದಿಂದ ಅಗತ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಮೋದಿ ಭರವಸೆ
    – ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ; 150 ಮಂದಿ ಸ್ಥಳಾಂತರ

    ಡೆಹ್ರಾಡೂನ್‌: ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ (Uttarkashi Cloudburst) ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ (Indian Army), ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ.

    ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ. ಕೇರಳದ 28 ಪ್ರವಾಸಿಗರೂ ಸೇರಿ 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
    ಇನ್ನೂ ಮೇಘಸ್ಫೋಟದಿಂದ ಪ್ರವಾಹ ಸಂಭವಿಸಿದ ಸ್ಥಳವನ್ನ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ (Pushkar Singh Dhami) ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಕೂಡ ಹಂಚಿಕೊಂಡಿದ್ದು, ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳಲಾಗುತ್ತಿದೆ. ಸಂತ್ರಸ್ತರಿಗೆ ತ್ವರಿತ ಸಹಾಯವನ್ನೂ ನೀಡುತ್ತಿದ್ದೇವೆ ಎಂದು ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.  ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

    ಪ್ರಧಾನಿ ಮೋದಿ ಜೊತೆಗೆ ಮಾತುಕತೆ
    ಈ ನಡುವೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಧರಾಲಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರವು ಸಂಪೂರ್ಣ ಸಿದ್ಧತೆಯೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ, ನಿರಂತರ ಭಾರೀ ಮಳೆಯಿಂದಾಗಿ, ಕೆಲವು ಪ್ರದೇಶಗಳಲ್ಲಿ ತೊಂದರೆಗಳಿವೆ ಎಲ್ಲಾ ಸಂಬಂಧಪಟ್ಟ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಇದರಿಂದ ಸಂತ್ರಸ್ತರಿಗೆ ತ್ವರಿತ ಸಹಾಯ ಸಿಗುತ್ತದೆ ಎಂದು ಮೋದಿ ಅವರಿಗೆ ಧಾಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ.

    ಉತ್ತರಾಖಂಡ ಬಿಜೆಪಿ ಸಂಸದರಿಂದ ಮೋದಿ ಭೇಟಿ
    ಈ ಎಲ್ಲ ಬೆಳವಣಿಗೆಗಳ ನಡುವೆ ಉತ್ತರಾಖಂಡದ ಬಿಜೆಪಿ ಸಂಸದರನ್ನು (Uttarakhand BJP MPs) ಭೇಟಿಯಾದ ಪ್ರಧಾನಿ ಮೋದಿ, ಉತ್ತರಕಾಶಿ ಉಂಟಾದ ಮೇಘಸ್ಫೋಟ ಘಟನೆ ಕುರಿತು ಚರ್ಚಿಸಿದ್ದಾರೆ. ಉತ್ತರಾಖಂಡದ ಸಂಸದರಾದ ಅಜಯ್ ಭಟ್, ಮಾಲಾ ರಾಜ್ಯ ಲಕ್ಷ್ಮಿ ಶಾ, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅನಿಲ್ ಬಲುನಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

    100ಕ್ಕೂ ಅಧಿಕ ಮಂದಿ ಮಿಸ್ಸಿಂಗ್‌
    ಇನ್ನೂ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಭಾರೀ ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದು ಬಂದ ಭಾರೀ ಪ್ರಮಾಣದ ಕಪ್ಪು ಬಣ್ಣದ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು ಹತ್ತು ಮಂದಿ ಮೃತಪಟ್ಟಿದ್ದು, ನೂರಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ.  ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

    ಈ ಪ್ರದೇಶಗಳಲ್ಲಿ ನಾಪತ್ತೆಯಾದವರ ರಕ್ಷಣಾ ಕಾರ್ಯ ಆರಂಭವಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಐಟಿಬಿಪಿ ಮತ್ತು ಸ್ಥಳೀಯ ಆಡಳಿತದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಇದುವರೆಗೆ 150 ಜನರನ್ನ ರಕ್ಷಿಸಲಾಗಿದೆ. ಸುಮಾರು 150 ಜನರನ್ನ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

  • 11 ನಗರಗಳ ಹೆಸರು ಮರುನಾಮಕರಣ – ಉತ್ತರಾಖಂಡ ಸಿಎಂ ಧಾಮಿ ಆದೇಶ

    11 ನಗರಗಳ ಹೆಸರು ಮರುನಾಮಕರಣ – ಉತ್ತರಾಖಂಡ ಸಿಎಂ ಧಾಮಿ ಆದೇಶ

    – ಔರಂಗಜೇಬಪುರವನ್ನು ಶಿವಾಜಿ ನಗರವಾಗಿ ಮರುನಾಮಕರಣ
    – ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಹೆಸರು ಬದಲಾವಣೆ ಎಂದ ಸಿಎಂ

    ಡೆಹ್ರಾಡೂನ್: 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ (Uttarakhand) ಸಿಎಂ ಪುಷ್ಕರ್ ಸಿಂಗ್ ಧಾಮಿ(Pushkar Singh Dhami) ಅವರು ಆದೇಶ ಹೊರಡಿಸಿದ್ದಾರೆ.

    ಹರಿದ್ವಾರ, ಡೆಹ್ರಾಡೂನ್, ನೈನಿತಾಲ್ ಮತ್ತು ಉಧಮ್ ಸಿಂಗ್ ಸೇರಿ 11 ನಗರಗಳ ಹೆಸರು ಬದಲಾಯಿಸಲಾಗುವುದು. ಸಾರ್ವಜನಿಕ ಭಾವನೆ ಮತ್ತು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಈ ಸ್ಥಳಗಳ ಮರುನಾಮಕರಣ ಮಾಡಲಾಗುತ್ತದೆ ಎಂದು ಸೋಮವಾರ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ: ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್‌ ಫಸ್ಟ್‌ ರಿಯಾಕ್ಷನ್‌

    ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದಂತೆ, ಹರಿದ್ವಾರ(Haridwar) ಜಿಲ್ಲೆಯ ಔರಂಗಜೇಬಪುರವನ್ನು ಶಿವಾಜಿ ನಗರ, ಜಂಜಿಯಾಲಿಯನ್ನು ಆರ್ಯ ನಗರ, ಚೌಧಪುರವನ್ನು ಜ್ಯೋತಿಬಾ ಫುಲೆ ನಗರ, ಮೊಹಮ್ಮದ್‌ಪುರ ಜಾಟ್ ಅನ್ನು ಮೋಹನ್‌ಪುರ ಜಾಟ್, ಖಾನ್ಪುರ್ ಖುರೇಷಿಯನ್ನು ಅಂಬೇಡ್ಕರ್ ನಗರ, ಧೀರ್ಪುರವನ್ನು ನಂದಪುರ, ಅಕ್ಬರ್ಪುರ್ ಫಜಲ್ಪುರವನ್ನು ವಿಜಯನಗರ ಮತ್ತು ಖಾನ್ಪುರವನ್ನು ಶ್ರೀ ಕೃಷ್ಣಪುರ ಎಂದು ಮರುನಾಮಕರಣ ಮಾಡಲಾಗುತ್ತದೆ. ಇದನ್ನೂ ಓದಿ: ಮಸ್ಕಿ ಶಾಸಕನ ಪುತ್ರ, ಸಹೋದರನಿಂದ ಮೊಲ ಬೇಟೆ – ಮಾರಕಾಸ್ತ್ರ ಹಿಡಿದು ಮೆರವಣಿಗೆ

    ಡೆಹ್ರಾಡೂನ್(Dehradun) ಜಿಲ್ಲೆಯಲ್ಲಿ, ಪಿರುವಾಲವನ್ನು ರಾಮ್‌ಜಿ ವಾಲಾ, ಪೀರುವಾಳವನ್ನು ಕೇಸರಿ ನಗರ, ಚೌಧಪುರ್ ಖುರ್ದ್ ಅನ್ನು ಪೃಥ್ವಿರಾಜ್ ನಗರ ಮತ್ತು ಅಬ್ದುಲ್ಲಾಪುರವನ್ನು ದಶರಥನಗರ ಎಂದು ಮರುನಾಮಕರಣ ಮಾಡಲಾಗುತ್ತದೆ. ಇದನ್ನೂ ಓದಿ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ – ಮೂವರು ಮಕ್ಕಳು ಸೇರಿ 6 ಮಂದಿ ಸಜೀವ ದಹನ

    ನೈನಿತಾಲ್(Nainital) ಜಿಲ್ಲೆಯಲ್ಲಿ, ನವಾಬಿ ರಸ್ತೆಯನ್ನು ಅಟಲ್ ಮಾರ್ಗ ಎಂದು ಮರುನಾಮಕರಣ ಮಾಡಲಾಗುವುದು ಮತ್ತು ಪಂಚಕ್ಕಿ ಐಟಿಐ ರಸ್ತೆಯನ್ನು ಗುರು ಗೋವಲ್ಕರ್ ಮಾರ್ಗ ಎಂದು ಹೆಸರಿಡಲಾಗುವುದು. ಉಧಮ್ ಸಿಂಗ್ ನಗರ ಜಿಲ್ಲೆಯ ನಗರ ಪಂಚಾಯತ್ ಸುಲ್ತಾನ್‌ಪುರ ಪಟ್ಟಿಯನ್ನು ಕೌಶಲ್ಯ ಪುರಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

  • ಉತ್ತರಾಖಂಡದಲ್ಲಿ ಅಕ್ರಮ ಮದರಸಾಗಳ ಮೇಲೆ ಕ್ರಮ – 15 ದಿನಗಳಲ್ಲಿ 52 ಮದರಸಾಗಳು ಬಂದ್

    ಉತ್ತರಾಖಂಡದಲ್ಲಿ ಅಕ್ರಮ ಮದರಸಾಗಳ ಮೇಲೆ ಕ್ರಮ – 15 ದಿನಗಳಲ್ಲಿ 52 ಮದರಸಾಗಳು ಬಂದ್

    ಡೆಹ್ರಾಡೂನ್: ಧರ್ಮದ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಮದರಸಾಗಳ (Illegal Madrasa) ಮೇಲೆ  ಅಧಿಕಾರಿಗಳು ಆಪರೇಷನ್‌ ಶುರುಮಾಡಿದ್ದಾರೆ. ಕೇವಲ 15 ದಿನಗಳಲ್ಲಿ 52 ಅಕ್ರಮ ಮದರಸಾಗಳನ್ನು ಸೀಲ್‌ ಮಾಡಲಾಗಿದೆ.

    ಅಕ್ರಮ ಮದರಸಾಗಳ ಮೇಲೆ ಕ್ರಮ ಕೈಗೊಳ್ಳುವಂತೆ ಉತ್ತರಾಖಂಡ (Uttarakhand) ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸೂಚನೆ ಬೆನ್ನಲ್ಲೇ  ಅಧಿಕಾರಿಗಳು ರಾಜ್ಯಾದ್ಯಂತ 52ಕ್ಕೂ ಹೆಚ್ಚು ನೋಂದಣಿಯಾಗದ ಮತ್ತು ಕಾನೂನುಬಾಹಿರವಾಗಿ ನಡೆಸುತ್ತಿದ್ದ ಮದರಸಾಗಳನ್ನು ಸೀಲ್ ಮಾಡಿದ್ದಾರೆ.

    ಪಶ್ಚಿಮ ಡೆಹ್ರಾಡೂನ್ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಅನಧಿಕೃತ ಮದರಸಾಗಳ ಸಂಖ್ಯೆ ಬೆಳೆಯುತ್ತಿದೆ. ಧಾರ್ಮಿಕ ಶಿಕ್ಷಣಕ್ಕಾಗಿ ಮಾತ್ರವಲ್ಲದೇ ಜನಸಂಖ್ಯಾ ಸಮತೋಲನವನ್ನು ಭಂಗಗೊಳಿಸುವ ವೇದಿಕೆಗಳಾಗಿಯೂ ಅಕ್ರಮ ಮದರಸಾಗಳನ್ನು ಬಳಸಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಈ ವರದಿಯನ್ನು ಆಧರಿಸಿ ಅಕ್ರಮ ಮದರಸಾಗಳನ್ನು ಬಂದ್ ಮಾಡುವಂತೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ 52 ಮದರಸಾಗಳಿಗೆ ಬೀಗ ಹಾಕಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಶೀಘ್ರವೇ ಸ್ಟಾರ್‌ಲಿಂಕ್‌ ಸ್ಯಾಟಲೈಟ್‌ ಇಂಟರ್ನೆಟ್‌ – ಮಸ್ಕ್‌ ಕಂಪನಿ ಜೊತೆ ಜಿಯೋ, ಏರ್‌ಟೆಲ್‌ ಒಪ್ಪಂದ

    ಸೋಮವಾರವಷ್ಟೇ, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಡೆಹ್ರಾಡೂನ್‌ನ ವಿಕಾಸನಗರದಲ್ಲಿ 12 ಅಕ್ರಮ ಮದರಸಾಗಳು ಮತ್ತು ಖತಿಮಾದಲ್ಲಿ 9 ಮದರಸಾಗಳನ್ನು ಸೀಲ್ ಮಾಡಲಾಗಿತ್ತು. ಇದಕ್ಕೂ ಮೊದಲು, ವಿವಿಧ ಜಿಲ್ಲೆಗಳಲ್ಲಿ ಅಂತಹ 31 ಮದರಸಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು ಸಿಎಂ ಕಚೇರಿ ತಿಳಿಸಿದೆ. ಕಾನೂನು ಉಲ್ಲಂಘಿಸುವ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಪುಷ್ಕರ್‌ ಸಿಂಗ್ ಧಾಮಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

  • ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

    ಮದುವೆ, ವಿಚ್ಛೇದನ, ಆಸ್ತಿ.. ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು: ಇಂದಿನಿಂದ ಉತ್ತರಾಖಂಡದಲ್ಲಿ UCC ಜಾರಿ

    – ಏಕರೂಪದ ನಾಗರಿಕೆ ಸಂಹಿತೆ ಜಾರಿಗೆ ತಂದ ಮೊದಲ ರಾಜ್ಯ
    – ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಬಿಜೆಪಿ ಸರ್ಕಾರದಿಂದ ಜಾರಿ

    ಡೆಹ್ರಾಡೂನ್‌: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ (Uniform Civil Code) ಉತ್ತರಾಖಂಡದಲ್ಲಿ (Uttarakhand) ಇಂದಿನಿಂದ ಜಾರಿಗೆ ಬಂದಿದೆ.

    ಸ್ವಾತಂತ್ರ್ಯಾನಂತರದಲ್ಲಿ ರಾಜ್ಯವೊಂದರಲ್ಲಿ ಯುಸಿಸಿ ಕಾಯ್ದೆ ಜಾರಿಯಾಗುತ್ತಿರುವುದು ಇದೇ ಮೊದಲು. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಘೋಷಣೆಗಳ ಪೈಕಿ ಒಂದಾದ ಈ ಕಾಯ್ದೆಯನ್ನು ಇದೀಗ ಬಿಜೆಪಿ ಆಡಳಿತದ ರಾಜ್ಯವಾದ ಉತ್ತರಾಖಂಡದಲ್ಲಿ ಜಾರಿ ಮಾಡಲಾಗಿದೆ.

    ಸರ್ಕಾರದ ನಿರ್ಧಾರವನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಮರ್ಥಿಸಿದ್ದು ಏಕರೂಪ ನಾಗರಿಕ ಸಂಹಿತೆಯು ಧರ್ಮ, ಲಿಂಗ, ಜಾತಿ ಅಥವಾ ಸಮುದಾಯದ ಭೇದ ಇಲ್ಲದ ಸಾಮರಸ್ಯದ ಸಮಾಜಕ್ಕೆ ಅಡಿಪಾಯ ಹಾಕುತ್ತದೆ ಎಂದು ಹೇಳಿದ್ದಾರೆ.

    ಪರಿಶಿಷ್ಟ ಪಂಗಡಗಳು ಮತ್ತು ಕೆಲವು ಸಂರಕ್ಷಿತ ಸಮುದಾಯಗಳನ್ನು ಹೊರತು ಪಡಿಸಿ ರಾಜ್ಯದ ಎಲ್ಲಾ ನಿವಾಸಿಗಳಿಗೆ ಏಕರೂಪದ ನಾಗರಿಕ ಸಂಹಿತೆ ಅನ್ವಯವಾಗುತ್ತದೆ.  ಹೊಸ ಕಾಯ್ದೆ ಜಾರಿಗೊಳಿಸುವ ಸಂಬಂಧ  ರಾಜ್ಯ ಸರ್ಕಾರ ಅಧಿಕಾರಿಗಳಿಗೆ ತರಬೇತಿ ನೀಡಿದೆ.

    2022ರ ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಿತ್ತು. ರಾಜ್ಯದಲ್ಲಿ ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಇದೀಗ ಜಾರಿಗೆ ತರಲಾಗುತ್ತಿದೆ.

    ಏಕರೂಪದ ನಗರಿಕ ಸಂಹಿತೆಯಲ್ಲಿ ಏನಿದೆ?
    ಮದುವೆ ಮತ್ತು ವಿಚ್ಛೇದನ: ಈ ಕಾಯಿದೆಯು ಪುರುಷರು ಮತ್ತು ಮಹಿಳೆಯರಿಗೆ (ಕ್ರಮವಾಗಿ 21 ಮತ್ತು 18 ವರ್ಷಗಳು) ಮದುವೆಯ ಕಾನೂನುಬದ್ಧ ವಯಸ್ಸನ್ನು ಪ್ರಮಾಣೀಕರಿಸುತ್ತದೆ ಮತ್ತು ಎಲ್ಲಾ ಧರ್ಮಗಳಲ್ಲಿ ವಿಚ್ಛೇದನಕ್ಕೆ ಏಕರೂಪದ ಆಧಾರಗಳು ಮತ್ತು ಕಾರ್ಯವಿಧಾನಗಳನ್ನು ಕಡ್ಡಾಯಗೊಳಿಸುತ್ತದೆ.

    ಬಹುಪತ್ನಿತ್ವ ನಿಷೇಧ: ಯುಸಿಸಿ ಅನ್ವಯವಾಗುವ ಸಮುದಾಯಗಳಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲಾಗಿದೆ.

    ವಿವಾಹ ನೋಂದಣಿ: ಕಾಯ್ದೆ ಜಾರಿಯಾದ ನಂತರ ನಡೆಸುವ ವಿವಾಹಗಳನ್ನು 60 ದಿನಗಳ ಒಳಗೆ ನೋಂದಾಯಿಸಬೇಕು, ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಸೌಲಭ್ಯಗಳು ಲಭ್ಯವಿದೆ.

    ಲಿವ್-ಇನ್ ಸಂಬಂಧಗಳು: ಮದುವೆಯಂತೆ ಲಿವ್‌-ಇನ್‌ ಸಂಬಂಧ ನೋಂದಣಿ ಕಡ್ಡಾಯ. ಇದು ಉತ್ತರಾಖಂಡದಲ್ಲಿ ನೆಲೆಸಿರುವ ಅಥವಾ ಅನ್ಯ ರಾಜ್ಯಗಳಲ್ಲಿ ನೆಲೆಸಿರುವ ಉತ್ತರಾಖಂಡ ಮೂಲದವರಿಗೆ ಅನ್ವಯ. ಇದರಡಿ ಇಬ್ಬರ ಹೆಸರು, ವಯಸ್ಸಿನ ಸಾಕ್ಷಿ, ದೇಶ, ಧರ್ಮ, ಹಿಂದಿನ ಸಂಬಂಧ, ಸಂಪರ್ಕ ಸಂಖ್ಯೆ ಕುರಿತ ಮಾಹಿತಿಯನ್ನು ನೀಡಬೇಕು. ಇಂತಹ ಸಂಬಂಧದಿಂದ ಮಗು ಜನಿಸಿದರೆ ಜನನ ಪ್ರಮಾಣ ಪತ್ರ ದೊರೆತ 7 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗುತ್ತದೆ.

    ಉತ್ತರಾಧಿಕಾರ ಉಯಿಲುಗಳು: ಉಯಿಲು ಬರೆಯುವವರು ತಮ್ಮ ಹಾಗೂ ಉತ್ತರಾಧಿಕಾರಿಯ ಆಧಾರ್‌ ಮಾಹಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. 2 ಸಾಕ್ಷಿಗಳು ಉಯಿಲು ಪತ್ರವನ್ನು ಓದುವ ವಿಡಿಯೋವನ್ನೂ ಅಪ್‌ಲೋಡ್‌ ಮಾಡಬೇಕಾಗುತ್ತದೆ.

    ಯುದ್ಧದಲ್ಲಿ ಭಾಗವಹಿಸಿದ ಸೈನಿಕರು, ವಾಯುಪಡೆಯ ಸಿಬ್ಬಂದಿ ಮತ್ತು ನಾವಿಕರು ವಿಶೇಷ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸವಲತ್ತು ಪಡೆದ ವಿಲ್‌ಗಳನ್ನು ರಚಿಸಲು ಅನುಮತಿ ಇದೆ.

    ಗೋವಾದಲ್ಲಿದೆ ಯುಸಿಸಿ: ಸ್ವಾತಂತ್ರ್ಯಾನಂತರ ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾದರೆ ಸ್ವಾತಂತ್ರ್ಯಪೂರ್ವದಲ್ಲಿ ಪೋರ್ಚುಗೀಸ್ ಕಾಲದಲ್ಲಿಯೇ ಗೋವಾದಲ್ಲಿ ಯುಸಿಸಿ ಜಾರಿಯಾಗಿತ್ತು. ಪೋರ್ಚುಗೀಸ್ ಸಿವಿಲ್ ಕೋಡ್-1867ರ ಪ್ರಕಾರ ಪೋರ್ಚುಗೀಸ್ ಆಳ್ವಿಕೆ ವಿಮೋಚನೆಯ ನಂತರ, ಗೋವಾ, ದಮನ್ ಮತ್ತು ದಿಯು ಆಡಳಿತ ಕಾಯಿದೆ-1962ರ ಸೆಕ್ಷನ್ 5(1) ರ ಮೂಲಕ ಈಗಲೂ ಮುಂದುವರೆದಿದೆ.

     

  • Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

    Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದಾರೆ. ಇದರೊಂದಿಗೆ ಗಾಯಗೊಂಡವರ ಸಂಖ್ಯೆ 19ಕ್ಕೆ ಏರಿದೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

    ಸದ್ಯ ಎನ್‌ಡಿಆರ್‌ಎಫ್ (NDRF), ಎಸ್‌ಡಿಆರ್‌ಎಫ್ (SDRF) ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

    ತಲಾ 4 ಲಕ್ಷ ರೂ. ಪರಿಹಾರ:
    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.

  • ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ

    ಡೆಹ್ರಾಡೂನ್‌: ಬಸ್‌ವೊಂದು ಕಮರಿಗೆ ಬಿದ್ದ (Bus Falls In Gorge) ಪರಿಣಾಮ ಕನಿಷ್ಠ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ (Uttarakhand) ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.

    ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

    ಸದ್ಯ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

    ತಲಾ 4 ಲಕ್ಷ ರೂ. ಪರಿಹಾರ:
    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

  • ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ

    ಅಗ್ನಿವೀರರಿಗೆ ಪೊಲೀಸ್, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ: ಸಿಎಂ ಧಾಮಿ

    – ಶೀಘ್ರದಲ್ಲೇ ಪ್ರಸ್ತಾವನೆ ಮಂಡಿಸುವುದಾಗಿ ಸಿಎಂ ಭರವಸೆ

    ಡೆಹ್ರಾಡೂನ್‌: ಇತ್ತೀಚೆಗೆ ಹರಿಯಾಣ ರಾಜ್ಯ ಸರ್ಕಾರ ವಿವಿಧ ನೇಮಕಾತಿಗಳಲ್ಲಿ ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ ಘೋಷಿಸಿತ್ತು. ಈ ಬೆನ್ನಲ್ಲೇ ಉತ್ತರಾಖಂಡ ರಾಜ್ಯ ಸರ್ಕಾರ (Uttarakhand Government) ಮತ್ತೊಂದು ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಉತ್ತರಾಖಂಡದಲ್ಲೂ ಅಗ್ನಿವೀರರಿಗೆ ಮೀಸಲಾತಿ (Reservation For Agniveers) ಕಲ್ಪಿಸುವ ಯೋಜನೆಯನ್ನು ರಾಜ್ಯ ಸರ್ಕಾರ ತರಲಿದೆ ಎಂದು ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಭಾನುವಾರ ಹೇಳಿದ್ದಾರೆ.

    ಉತ್ತರಾಖಂಡ ರಾಜ್ಯದ ಅಗ್ನಿವೀರರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ನಂತರ ಅವರಿಗೆ ಸರ್ಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡಲಾಗುವುದು. ಅದಕ್ಕಾಗಿ ಮೀಸಲಾತಿಗಾಗಿ ತರಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಮಂಡಿಸಲಿದೆ ಎಂದು ಸಿಎಂ ಧಾಮಿ (Pushkar Singh Dhami) ತಿಳಿಸಿದ್ದಾರೆ. ಇದನ್ನೂ ಓದಿ: ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು!

    ಉತ್ತರಾಖಂಡ ಮಿಲಿಟರಿ ಪ್ರಾಬಲ್ಯ ರಾಜ್ಯವಾಗಿದ್ದು, ಇಲ್ಲಿನ ಯುವಕರು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರಿ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ರಾಜ್ಯದಲ್ಲಿ ಅಗ್ನಿವೀರರಿಗೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಿದೆ. ಅಗ್ನಿಪಥ್‌ ಯೋಜನೆ ಪರಿಚಯಿಸಿದಾಗ, ನಾನು ವಿವಿಧ ಮಿಲಿಟರಿ ಅಧಿಕಾರಿಗಳು ಮತ್ತು ಅನುಭವಿಗಳನ್ನು ಭೇಟಿಯಾಗಿ ಚರ್ಚಿಸಿದ್ದೆ. ಆಗಲೇ ಅಗ್ನಿವೀರರಿಗೆ ಉದ್ಯೋಗ ನೀಡಲು ನಿರ್ಧರಿಸಿದ್ದೆವು. ಈಗ ಅದಕ್ಕೆ ಸೂಕ್ತ ಸಮಯ ಬಂದಿದೆ. ಅಗ್ನಿಪಥ್‌ ಯೋಜನೆಗೆ ಆಯ್ಕೆಯಾಗಿ ಸೇನೆಯಲ್ಲಿ 4 ವರ್ಷ ಸೇನೆ ಸಲ್ಲಿಸಿದ ಅಗ್ನಿವೀರ್‌ ಸೈನಿಕರಿಗೆ ಉತ್ತರಾಖಂಡ ಪೊಲೀಸ್‌ ಮತ್ತು ರಾಜ್ಯ ಇತರೇ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಶೀಘ್ರವೇ ಸಂಪುಟದಲ್ಲಿ ಮಂಡಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

    ಅಲ್ಲದೇ ರಾಜ್ಯದಲ್ಲಿ ಕೌಶಲ ತರಬೇತಿ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಈ ಮೂಲಕ ನಿವೃತ್ತ ಅಗ್ನಿಶಾಮಕ ಸಿಬ್ಬಂದಿಗೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಸಂಬಂಧಿ ತರಬೇತಿ ನೀಡಲಾಗುವುದು. ಈ ಸಂಬಂಧವೂ ಆದಷ್ಟು ಬೇಗ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲೇ ಪ್ರಸ್ತಾವನೆ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ

  • UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

    UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

    – UCC ಮಸೂದೆಯಲ್ಲಿ ಏನಿದೆ?

    ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ನೇತೃತ್ವದ ಸರ್ಕಾರವು ಮಂಡಿಸಿದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಉತ್ತರಾಖಂಡ ವಿಧಾನಸಭೆಯಲ್ಲಿ ಬುಧವಾರ (ಫೆ.7) ಅಂಗೀಕರಿಸಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು (UCC) ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಇನ್ನೂ ಬಿಜೆಪಿ ಆಡಳಿತವಿರುವ ರಾಜಸ್ಥಾನ ಸರ್ಕಾರವೂ ಯುಸಿಸಿ ಅನುಷ್ಠಾನಕ್ಕೆ ಸಿದ್ಧತೆ ನಡೆಸಿದೆ. ಮುಂದಿನ ಅಧಿವೇಶನದಲ್ಲೇ ಕಾಯ್ದೆ ಅನುಷ್ಠಾನಗೊಳಿಸುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್‌ ಹೇಳಿಕೆ ವಿರುದ್ಧ ಮೋದಿ ಕಿಡಿ 

    ಯುಸಿಸಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಬೆನ್ನಲ್ಲೇ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಉತ್ತರಾಖಂಡಕ್ಕೆ ಮಹತ್ವದ ದಿನವಾಗಿದೆ. ದೇಶಾದ್ಯಂತ ಜನರು ಬಹಳ ದಿನಗಳಿಂದ ಕಾಯುತ್ತಿದ್ದ ಮಸೂದೆಯನ್ನು ನಾವು ಅಂಗೀಕರಿಸಿದ್ದೇವೆ. ಯುಸಿಸಿ ಅನುಷ್ಠಾನಗೊಳಿಸಿದ ದೇಶದ ಮೊದಲ ರಾಜ್ಯವೂ ಉತ್ತರಾಖಂಡವೇ (Uttarakhand) ಆಗಿದೆ ಎಂದು ಶ್ಲಾಘಿಸಿದ್ದಾರೆ.

    ಮಸೂದೆಯಲ್ಲಿ ಏನಿದೆ?
    ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

    ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದವಾಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು. ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.

    ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು. ಇದನ್ನೂ ಓದಿ: ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

    ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

  • ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

    ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

    – ಉತ್ತರಾಖಂಡದಲ್ಲಿ ಐತಿಹಾಸಿಕ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಡೆಹ್ರಾಡೂನ್‌: ಉತ್ತರಾಖಂಡ (Uttarakhand) ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆ ಮಂಡನೆ ಆಗಿದೆ. ಲಿವ್ ಇನ್ ಸಂಬಂಧಕ್ಕೆ (Live in Relationship) ನೋಂದಣಿ ಕಡ್ಡಾಯ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ. ಇದು ಉತ್ತರಾಖಂಡ ಸರ್ಕಾರ ಮಂಡಿಸಿದ ಐತಿಹಾಸಿಕ ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು.

    ಮಸೂದೆಯಲ್ಲಿ ಏನಿದೆ?
    ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು ಎರಡನೇ ವಿವಾಹವಾಗುವುದು ಅಪರಾಧ. ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ.  ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಸೆನೆಟರ್‌ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್‌

    ಲಿವ್ ಇನ್ ಸಂಬಂಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25ಸಾವಿರ ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದ ಆಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು.

    ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.  ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ ಮೊಮ್ಮಗನ ವಿವಾಹ ಆರತಕ್ಷತೆ – ಸಿಎಂ, ಡಿಸಿಎಂ ಭಾಗಿ

    ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು.

    ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

     

    ವಿರೋದಿಸಲ್ಲ ಎಂದ ಕಾಂಗ್ರೆಸ್‌:
    ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು ವಂದೇಮಾತರಂ, ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು.

    ವಿಶೇಷ ಏನೆಂದರೆ ನಾವು ಏಕರೂಪ ನಾಗರಿಕಾ ಸಂಹಿತೆ ವಿಧೇಯಕವನ್ನು ನಾವು ವಿರೋಧಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು (Congress Leaders) ಹೇಳಿಕೊಂಡಿದ್ದಾರೆ. ವಿಸ್ತೃತ ಚರ್ಚೆ ನಂತರ ಈ ವಿಧೇಯಕವನ್ನು ಮತಕ್ಕೆ ಹಾಕಲಾಗುತ್ತದೆ. ಇದಕ್ಕೆ ಅನುಮೋದನೆ ಸಿಕ್ಕರೆ ಸ್ವಾತಂತ್ರ್ಯದ ನಂತರ ದೇಶದಲ್ಲೇ ಮೊದಲ ಬಾರಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ಗರಿಮೆಗೆ ಉತ್ತರಾಖಂಡ್ ಪಾತ್ರವಾಗಲಿದೆ.

    ಪೋರ್ಚುಗೀಸರ ಕಾಲದಿಂದಲೂ ಗೋವಾದಲ್ಲಿ ಏಕರೂಪ ನಾಗರಿಕಾ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ರಾಜಸ್ಥಾನದಲ್ಲೂ ಯುಸಿಸಿ ಜಾರಿಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಗಳಿವೆ.

    ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಉತ್ತರಾಖಂಡ ಸರ್ಕಾರ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್‌ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು.

  • ಮುಂದಿನ ಅಧಿವೇಶನದಲ್ಲಿ UCC ಮಸೂದೆ ಮಂಡನೆ: ಪುಷ್ಕರ್ ಸಿಂಗ್ ಧಾಮಿ

    ಮುಂದಿನ ಅಧಿವೇಶನದಲ್ಲಿ UCC ಮಸೂದೆ ಮಂಡನೆ: ಪುಷ್ಕರ್ ಸಿಂಗ್ ಧಾಮಿ

    ನವದೆಹಲಿ: ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ಫೆಬ್ರವರಿ 2 ರಂದು ರಾಜ್ಯ ಸರ್ಕಾರಕ್ಕೆ ತನ್ನ ಕರಡನ್ನು ಸಲ್ಲಿಸಲಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಉತ್ತರಾಖಂಡದ (Uttarakhand) ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami ) ಹೇಳಿದ್ದಾರೆ.

    ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ `ಏಕ್ ಭಾರತ್, ಶ್ರೇಷ್ಠ ಭಾರತ್’ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಯುಸಿಸಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಯಾವಾಗಲೂ ಬದ್ಧವಾಗಿದೆ ಎಂದು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ -‌ ಬಿಜೆಪಿ ಸಚಿವರ ಗ್ಯಾರಂಟಿ

    ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಯುಸಿಸಿ ಸಮಿತಿಯ ಅವಧಿಯು ಜನವರಿ 26 ರಂದು ಕೊನೆಗೊಂಡಿದೆ. ಸಮಿತಿಯ ಅವಧಿಯನ್ನು ಈಗಾಗಲೇ ಮೂರು ಬಾರಿ ವಿಸ್ತರಿಸಲಾಗಿದೆ. ಫೆಬ್ರವರಿ 2 ರಂದು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಲಿದೆ. ಇದನ್ನೂ ಓದಿ: Gyanvapi Mosque Case: ವಜುಖಾನಾ ಡಿ-ಸೀಲಿಂಗ್‌ಗೆ ಹಿಂದೂ ಪರ ಅರ್ಜಿದಾರರಿಂದ ಸುಪ್ರೀಂಕೋರ್ಟಿಗೆ ಅರ್ಜಿ