Tag: ಪುಷ್ಪಕ್ ಎಕ್ಸ್‌ಪ್ರೆಸ್‌

  • ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    – ಮಹಾರಾಷ್ಟ್ರ ರೈಲು ದುರಂತಕ್ಕೆ ಕಾರಣ ಬಹಿರಂಗ

    ಮುಂಬೈ: ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿ – ಗೃಹ ಸಚಿವರಿಗೆ ಮಾಂಗಲ್ಯಸರ ಪೋಸ್ಟ್ ಮಾಡಿದ ಮೃತನ ಪತ್ನಿ

    ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ (Pushpak Express) ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

    ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ (Karnataka Express) ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು, ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

    ಘಟನೆ ಐನು?
    ಬೆಂಗಳೂರಿನಿಂದ ದೆಹಲಿಗೆ ಸಾಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 13 ಮಂದಿ ಸಾವನ್ನಪ್ಪಿದ್ದರು. ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಇದರಿಂದ ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಟ್ರ‍್ಯಾಕ್‌ನಲ್ಲಿ ವೇಗವಾಗಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರ ಮೇಲೆ ಹರಿದಿತ್ತು. ಪರಿಣಾಮವಾಗಿ 13 ಮಂದಿ ಮೃತಪಟ್ಟಿದ್ದರು.ಇದನ್ನೂ ಓದಿ: ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ

  • ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು 11 ಮಂದಿ ಸಾವು

    ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು 11 ಮಂದಿ ಸಾವು

    ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ (Jalgaon) ಬುಧವಾರ ಭೀಕರ ರೈಲು ದುರಂತ ಸಂಭವಿಸಿದ್ದು, ಕರ್ನಾಟಕ ಎಕ್ಸ್‌ಪ್ರೆಸ್ (Karnataka Express)  ರೈಲು ಹರಿದು  ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.

    ಘಟನೆಯ ಮಾಹಿತಿ ಪಡೆದ ರೈಲ್ವೇ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಹೇಗಾಯ್ತು?
    ಮೊದಲು ಪುಷ್ಪಕ್‌ ಎಕ್ಸ್‌ಪ್ರೆಸ್‌ (Pushpak Express)  ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಚೈನ್‌ ಎಳೆದು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಪಾಯದಿಂದ ಪಾರಾಗಲು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಬಂದಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದಾಗಿ ಸಾವು ನೋವು ಜಾಸ್ತಿಯಾಗಿದೆ.

    ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ಎಕ್ಸ್‌ಪ್ರೆಸ್‌ ಬರುತ್ತಿದ್ದರೆ,  ಪುಷ್ಪಕ್‌ ಎಕ್ಸ್‌ಪ್ರೆಸ್‌ ಉತ್ತರ ಪ್ರದೇಶ ರಾಜಧಾನಿ ಲಕ್ನೋದಿಂದ ಮುಂಬೈಗೆ ಬರುತ್ತಿತ್ತು.

  • ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

    ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಹಳಿ ಮೇಲೆ ವಸ್ತುಗಳನ್ನು ಇರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ರೈಲ್ವೆ ಹಳಿಯಲ್ಲಿ (Train Driver Brakes) ಅನುಮಾನಾಸ್ಪದ ವಸ್ತು ಪತ್ತೆಯಾಗಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಪುಷ್ಪಕ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ಟ್ರ್ಯಾಕ್‌ನಲ್ಲಿ ಕೆಂಪು ಸಿಲಿಂಡರ್ ಬಿದ್ದಿರುವುದನ್ನು ಗಮನಿಸಿ ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಿ ಸಾವಿರಾರು ಜನರ ಪ್ರಾಣ ಉಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ

    ಇದೇ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ರೈಲ್ವೇ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್‌ ಮತ್ತು ಸಿಮೆಂಟ್ ಬ್ರಿಕ್ಸ್‌ಗಳನ್ನಿರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಘಟನೆ ಬೆಳಿಕಿಗೆ ಬಂದಿತ್ತು. ಇದಾದ 20 ದಿನಗಳ ಬಳಿಕ ಅಂತಹದ್ದೇ ಮತ್ತೊಂಧು ಘಟನೆ ನಡೆದಿದೆ. ಇದನ್ನೂ ಓದಿ: ತೆಲಂಗಾಣ| 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸಂತ್ರಸ್ತೆ ಕುಟುಂಬಸ್ಥರಿಂದ ಆರೋಪಿ ಮನೆ, ಕಾರಿಗೆ ಬೆಂಕಿ

    ಮುಂಬೈನಿಂದ ಲಕ್ನೋಗೆ ಹೋಗುತ್ತಿದ್ದ ರೈಲು ಗೋವಿಂದಪುರಿ ನಿಲ್ದಾಣದ ಬಳಿ ಹೋಲ್ಡಿಂಗ್ ಲೈನ್‌ಗೆ ತಲುಪಿತ್ತು. ಈ ವೇಳೆ ಸಂಜೆ 4.15ರ ಸುಮಾರಿಗೆ ಹಳಿಗಳ ಮೇಲೆ ಅಗ್ನಿ ಸುರಕ್ಷತಾ ಸಿಲಿಂಡರ್ ಬಿದ್ದಿರುವುದನ್ನು ಕಂಡ ಚಾಲಕ ಆಘಾತಕ್ಕೊಳಗಾಗಿದ್ದಾನೆ. ರೈಲಿನ ವೇಗವು ನಿಧಾನವಾಗಿದ್ದ ಕಾರಣ ತಕ್ಷಣವೇ ಬ್ರೇಕ್‌ ಹಾಕಿ, ಚಾಲಕ ಸಮಯಪ್ರಜ್ಞೆ ಮೆರೆದಿದ್ದಾರೆ. ಬಳಿಕ ನಿಯಂತ್ರಣ ಕೊಠಡಿಗೆ ತಿಳಿಸಿದ ನಂತರ ಚಾಲಕ ಸಿಲಿಂಡರ್ ಅನ್ನು ಕಾನ್ಪುರ ಸೆಂಟ್ರಲ್‌ಗೆ ತಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ