Tag: ಪುಷ್ಪಾ

  • ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ – ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾ ಯಾರು? ಹಿನ್ನೆಲೆ ಏನು?

    ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ – ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾ ಯಾರು? ಹಿನ್ನೆಲೆ ಏನು?

    ತುಮಕೂರು: ಎಂಎಲ್‌ಸಿ ರಾಜೇಂದ್ರ (MLC Rajendra) ಹತ್ಯೆಗೆ ಸುಪಾರಿ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಅಲ್ಲದೇ, ಈ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಕೂಡ ಪಡೆಯುತ್ತಿದೆ. 17 ನಿಮಿಷದ ಆಡಿಯೋದಲ್ಲಿ ಸುಪಾರಿ ಬಗ್ಗೆ ಮಾತನಾಡಿರುವ ಆರೋಪಿ ಸೋಮನ ಆಪ್ತೆ ಪುಷ್ಪಾ ಯಾರು? ಹಿನ್ನೆಲೆ ಏನು ಎಂಬುದರ ಚರ್ಚೆ ಕೂಡ ಆಗುತ್ತಿದೆ.

    ಪುಷ್ಪಾ ಯಾರು?
    ಪುಷ್ಪಾ ಟೀ ಅಂಗಡಿಯನ್ನ ನಡೆಸುತ್ತಿದ್ದು, ರಾಜಕೀಯ ವ್ಯಕ್ತಿಯ ನಗ್ನ ವಿಡಿಯೋಗಳನ್ನು ಇಟ್ಟಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಳು. ಅಲ್ಲದೇ, ಜೈಲುವಾಸ ಅನುಭವಿಸಿ ಹೊರ ಬಂದಿರುವ ಪುಷ್ಪಾ, ರೌಡಿಗಳೊಂದಿಗೆ ನಿಕಟ ಸಂಪರ್ಕದಲ್ಲಿ ಇದ್ದಾಳೆ ಎಂದು ಹೇಳಲಾಗುತ್ತಿದೆ. ಸುಪಾರಿ ಕೇಸ್‌ಗೆ ಸಂಬಂಧಿಸಿದಂತೆ ಪುಷ್ಪಾಳನ್ನು ಕ್ಯಾತಸಂದ್ರ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: Kolar | ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಸಚಿವ ಕೆ.ಎನ್ ರಾಜಣ್ಣ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳಾದ ಸೋಮ ಹಾಗೂ ಗುಂಡಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆಯೇ ಸುಪಾರಿಗೆ ಸಂಚು ರೂಪಿಸಿದ್ದ ಸ್ಫೋಟಕ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಜೈಪುರದ ಸೋಮ ಎಂಬಾತನ ಆಪ್ತೆ ಪುಷ್ಪಾ, ರಾಜೇಂದ್ರ ಆಪ್ತ ರಾಕಿ ಜೊತೆ ನಡೆಸಿದ ಸಂಭಾಷಣೆ ಇದಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಯಾರೆಲ್ಲ ಹೊಸ ಪಕ್ಷ ಕಟ್ಟಿದ್ದರು? ರಚನೆ ಮಾಡಿದ್ದು ಯಾಕೆ? ಕೊನೆಗೆ ಏನಾಯ್ತು?

    ಆರೋಪಿ ಸೋಮ ರಾಜೇಂದ್ರರನ್ನ ಹತ್ಯೆ ಮಾಡಲು ಸುಪಾರಿ ಪಡೆದಿರುವುದಾಗಿ ಪುಷ್ಪಾಳ ಬಳಿ ಹೇಳಿಕೊಂಡಿದ್ದಾನೆ. ಆ ಬಳಿಕವೇ ಪುಷ್ಪಾ ಸುಪಾರಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದಳು. ಸೋಮನ ಜೊತೆಗಿದ್ದುಕೊಂಡೇ ಕೊಲೆ ಸಂಚಿನ ಮಾಹಿತಿ ಕಲೆಹಾಕಿದ್ದಳು. ಬಳಿಕ ಈ ವಿಚಾರವನ್ನ ರಾಜೇಂದ್ರ ಅವರಿಗೆ ತಿಳಿಸಲು ಪುಷ್ಪಾ ಮುಂದಾಗಿದ್ದಾಳೆ. ರಾಜೇಂದ್ರ ಅವರಿಗೆ ವಿಷಯ ತಿಳಿಸಲು ರಾಕಿ ಎನ್ನುವ ಹುಡುಗನ್ನ ಬಳಸಿಕೊಂಡಿದ್ದಾಳೆ. ಕೊಲೆ ಸಂಚಿನ ಬಗ್ಗೆ ಪುಷ್ಪ ಹೇಳಿದ್ದನ್ನ ರಾಕಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ರಾಜೇಂದ್ರ ಅವರಿಗೆ ಈ ಆಡಿಯೋವನ್ನ ತಲುಪಸಿಲಾಗಿತ್ತು. ಆಡಿಯೋ ಕೇಳಿದ ಎಂಎಲ್‌ಸಿ ರಾಜೇಂದ್ರ ಕೂಡಲೇ ಅಲರ್ಟ್ ಆಗಿ, ತುಮಕೂರು ಎಸ್ಪಿ ಬಳಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್

    ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಬರ್ತ್ಡೇ ಡೆಕೋರೇಷನ್‌ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ. ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಅಲ್ಲದೇ ಸೋಮನಿಗೆ 5 ಲಕ್ಷ ಹಣ ಬಂದಿರೋದು ಸತ್ಯ ಸತ್ಯ ಸತ್ಯ. ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದರೆ ಎಲ್ಲಾ ಗೊತ್ತಾಗುತ್ತೆ. ರಾಜೇಂದ್ರ ಅವರ ಮುಂದೆ ನಾನೇ ಹೇಳ್ತೀನಿ, ನನ್ನ ಕರೆದುಕೊಂಡು ಹೋಗು ಅಂತ ರಾಕಿ ಎನ್ನುವವನೊಂದಿಗೆ ಪುಷ್ಪಾ ಹೇಳಿಕೊಂಡಿದ್ದಾಳೆ. ಜೊತೆಗೆ ಜೈಪುರದ ಮತ್ತೋರ್ವ ರೌಡಿಶೀಟರ್‌ನನ್ನು ಮರ್ಡರ್ ಮಾಡೋದಾಗಿ ಸೋಮ ಹೇಳಿದ್ದಾನೆ. ಅದಕ್ಕಾಗಿ ಬೆಂಗಳೂರಿನ ಕಲಾಸಿಪಾಳ್ಯದಿಂದ ಇಬ್ಬರು, ತಮಿಳು ಹುಡುಗರನ್ನ ಸೋಮ ಕರೆಸಿಕೊಳ್ತಿದ್ದಾನೆ. ಈ ಬಗ್ಗೆಯೂ ಆಡಿಯೋದಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: ಹೊಸ ಹಿಂದೂ ಪಕ್ಷ ಸ್ಥಾಪನೆಯಾಗುತ್ತಾ? ಏನಿದು ಯತ್ನಾಳ್‌ ಲೆಕ್ಕಾಚಾರ?

  • ರಶ್ಮಿಕಾ ಮಂದಣ್ಣ ನಟನೆ ಬಗ್ಗೆ ನಾನು ಮಾತೇ ಆಡಿಲ್ಲ : ಸ್ಪಷ್ಟನೆ ಕೊಟ್ಟ ಐಶ್ವರ್ಯಾ

    ರಶ್ಮಿಕಾ ಮಂದಣ್ಣ ನಟನೆ ಬಗ್ಗೆ ನಾನು ಮಾತೇ ಆಡಿಲ್ಲ : ಸ್ಪಷ್ಟನೆ ಕೊಟ್ಟ ಐಶ್ವರ್ಯಾ

    ಟಾಲಿವುಡ್ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಆಡಿದ್ದಾರೆ ಎನ್ನಲಾದ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ತಾವು ಆ ರೀತಿ ಮಾತೇ ಆಡಿಲ್ಲ. ಎಲ್ಲವೂ ಕಪೋಕಲ್ಪಿತ ಎಂದು ಅವರು ವಿವರಣೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ‘ಪುಷ್ಪ ಸಿನಿಮಾದ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣಕ್ಕಿಂತಲೂ (Rashmika Mandanna) ಚೆನ್ನಾಗಿ ಮಾಡುತ್ತಿದ್ದೆ’ ಎಂದು ಹೇಳಿದ್ದಾರೆ ಎನ್ನಲಾಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದರು.

    ಈ ಕುರಿತು ಐಶ್ವರ್ಯಾ ರಾಜೇಶ್ ಅವರ ಪಿ.ಆರ್ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ, ‘ಇದೊಂದು ತಪ್ಪು ಕಲ್ಪನೆಯಿಂದ ಆದ ಪ್ರಮಾದ. ಯಾವುದೇ ಕಾರಣಕ್ಕೂ ಐಶ್ವರ್ಯಾ ಅವರು ಆ ರೀತಿ ಮಾತುಗಳನ್ನು ಆಡಿಲ್ಲ. ‘ನಿಮ್ಮ ನೆಚ್ಚಿನ ಪಾತ್ರ ಯಾವುದು? ಯಾವ ರೀತಿಯ ಪಾತ್ರದಲ್ಲಿ ಕಾಣಲು ಬಯಸುತ್ತೀರಿ’ ಎಂದು ಕೇಳಲಾದ ಪ್ರಶ್ನೆಗೆ ‘ಪುಷ್ಪ (Pushpa) ಸಿನಿಮಾದ ಶ್ರೀವಲ್ಲಿ (Srivalli) ರೀತಿಯ ಪಾತ್ರಗಳು ಎಂದರೆ ನನಗೆ ಇಷ್ಟ. ಆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆ’ ಎಂದಿದ್ದಾರೆ. ಇದನ್ನೂ ಓದಿ:ಸಹೋದರ ವರುಣ್ ತೇಜ್- ಲಾವಣ್ಯ ಮದುವೆ ಬಗ್ಗೆ ನಿಹಾರಿಕಾ ಪ್ರತಿಕ್ರಿಯೆ

    ಐಶ್ವರ್ಯಾ ರಾಜೇಶ್ ಆಡಿದ್ದಾರೆ ಎನ್ನಲಾದ ಮಾತುಗಳು ಸಖತ್ ಟ್ರೋಲ್ ಆಗಿದ್ದವು. ರಶ್ಮಿಕಾ ಮಂದಣ್ಣ ಫ್ಯಾನ್ಸ್ ಕೂಡ ಐಶ್ವರ್ಯಾ ಮೇಲೆ ಮುಗಿ ಬಿದ್ದಿದ್ದರು. ಕೆಟ್ಟ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದರು. ಇದೆಲ್ಲವನ್ನೂ ಗಮನಿಸಿದ ಐಶ್ವರ್ಯಾ ಅದನ್ನು ತಿಳಿ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಾವು ಆ ರೀತಿಯಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಐಟಂ ಸಾಂಗ್ ಒಪ್ಪಿಕೊಂಡಿದ್ದಕ್ಕೆ ಕಾರಣವಿದೆ : ಸಮಂತಾ ಸಿಡಿಸಿಸ ಹೊಸ ಬಾಂಬ್

    ಐಟಂ ಸಾಂಗ್ ಒಪ್ಪಿಕೊಂಡಿದ್ದಕ್ಕೆ ಕಾರಣವಿದೆ : ಸಮಂತಾ ಸಿಡಿಸಿಸ ಹೊಸ ಬಾಂಬ್

    ಕ್ಷಿಣದ ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha) ಇದೇ ಮೊದಲ ಬಾರಿಗೆ ಹಲವು ಖಾಸಗಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.  ನಾಗ ಚೈತನ್ಯ (Nagachaitanya) ಜೊತೆಗಿನ ಬಾಂಧವ್ಯವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಸಪರೇಷನ್ ನಂತರ ತಮ್ಮ ಬದುಕಿನಲ್ಲಿ ಆದ ಘಟನೆಗಳನ್ನೂ ಅವರು ಯೂಟ್ಯೂಬ್ ವಾಹಿನಿಯೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ತಪ್ಪು ಮಾಡದೇ ಇರುವ ನಾನು ಯಾಕೆ ಹೆದರಿಕೊಳ್ಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

    ಮುಂದುವರೆದ ಮಾತನಾಡಿದ ಅವರು ‘ನಾಗ ಚೈತನ್ಯ ಜೊತೆ ಬಾಂಧವ್ಯವನ್ನು (Divorce) ಕಡಿದುಕೊಳ್ಳುವಾಗ ಸಾಕಷ್ಟು ಯೋಚನೆ ಮಾಡಿದ್ದೇನೆ. ಅವರಿಂದ ಆಚೆ ಬಂದ ನಂತರ ಸಿನಿಮಾ ಉದ್ಯಮದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂದು ಕಲಿತಿದ್ದೇನೆ. ಕೆಲವರು ಏನೇ ಸಲಹೆ ನೀಡಿದರೂ, ನನಗೆ ಸರಿ ಅನಿಸಿದ್ದನ್ನು ಮಾಡಿದ್ದೇನೆ. ಸರಿ ದಾರಿಯಲ್ಲೇ ನಡೆದಿದ್ದರಿಂದ ನನಗೆ ಯಾವುದೇ ಪಾಪಪ್ರಜ್ಞೆ ಕಾಡುತ್ತಿಲ್ಲ’ ಎಂದಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ಪುಷ್ಪಾ (Pushpa) ಸಿನಿಮಾದಲ್ಲಿ ಐಟಂ ಡಾನ್ಸ್ (Item Dance) ಮಾಡಲು ಅವಕಾಶ ಬಂದಿದ್ದು ಡಿವೋರ್ಸ್ ನಂತರವಂತೆ. ಕುಟುಂಬಸ್ಥರು ಮತ್ತು ಕೆಲವು ಸ್ನೇಹಿತರು ಈ ಹಾಡನ್ನು ಒಪ್ಪಿಕೊಳ್ಳಬೇಡ ಎಂದು ಹೇಳಿದ್ದರಂತೆ. ಟ್ರೋಲ್ ಮಾಡುವವರು ಕೂಡ ಇದೇ ಸಲಹೆಯನ್ನೇ ನೀಡಿದ್ದರಂತೆ. ಆದರೆ, ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ಮನೆಯಲ್ಲಿ ಏಕೆ ಕೂರಬೇಕು. ಅಷ್ಟಕ್ಕೂ ನನಗೆ ಅದು ಐಟಂ ಡಾನ್ಸ್ ಅಂತ ಅನಿಸಲಿಲ್ಲ. ಅದೊಂದು ಕ್ಯಾರೆಕ್ಟರ್ ಅಂತ ಅನಿಸಿತ್ತು. ಹಾಗಾಗಿ ಹಾಡು ಒಪ್ಪಿಕೊಂಡೆ ಎಂದಿದ್ದಾರೆ ಸಮಂತಾ.

    ಸದ್ಯ ಸಮಂತಾ, ಶಾಕುಂತಲಂ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಮಯದಲ್ಲಿ ಹಲವಾರು ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಖಾಸಗಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ತಮಗಾದ ನೋವು, ಅವಮಾನಗಳನ್ನು ಎದುರಿಸಿದ ಬಗೆಯನ್ನು ಹೇಳಿಕೊಳ್ಳುತ್ತಿದ್ದಾರೆ.

  • ಪುಷ್ಪಾ ಸಿನಿಮಾ ಸಂಸ್ಥೆಯ ಮೇಲೆ ಐಟಿ ರೈಡ್: ಆತಂಕದಲ್ಲಿ ತೆಲುಗು ಚಿತ್ರೋದ್ಯಮ

    ಪುಷ್ಪಾ ಸಿನಿಮಾ ಸಂಸ್ಥೆಯ ಮೇಲೆ ಐಟಿ ರೈಡ್: ಆತಂಕದಲ್ಲಿ ತೆಲುಗು ಚಿತ್ರೋದ್ಯಮ

    ಪುಷ್ಪಾ ಸಿನಿಮಾದ ಮೂಲಕ ಸಾಕಷ್ಟು ಸದ್ದು ಮಾಡಿದ್ದ ತೆಲುಗಿನ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್ ಮೇಲೆ 15ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಹಲವು ಗಂಟೆಗಳ ಕಾಲ ಶೋಧ ಕಾರ್ಯ ಕೂಡ ನಡೆಸಿದೆ. ನವೀನ್ ಅರ್ನೇನಿ, ಚೆರುಕುರಿ, ಯಲಮಂಚಿಲಿ ರವಿಶಂಕರ್ ಹಾಗೂ ಅವರುಗಳ ಕಚೇರಿಗಳ ಮೇಲೆ ಸತತ ಹಲವು ಗಂಟೆಗಳ ಕಾಲ ಅಧಿಕಾರಿಗಳು ಶೋಧ ಕಾರ್ಯ ಮಾಡಿದ್ದಾರೆ. ಅಧಿಕಾರಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ರಂಗಸ್ಥಳಂ, ಶ್ರೀಮಂತುಡು ಸೇರಿದಂತೆ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಂಸ್ಥೆ ಇದಾಗಿದ್ದು, ಪುಷ್ಪಾ ಸಿನಿಮಾದ ಮೂಲಕ ಮತ್ತೊಂದು ಸಾಕಷ್ಟು ಸದ್ದು ಮಾಡಿದ್ದರು. ಅವರು ಪುಷ್ಪಾ 2 ಸಿನಿಮಾ ಕೂಡ ಚಿತ್ರೀಕರಣದಲ್ಲಿ ತೊಡಗಿದ್ದು, ಭಾರೀ ಮೊತ್ತದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೇ ಇನ್ನೂ ಹಲವು ಸಿನಿಮಾಗಳನ್ನೂ ಅದು ಘೋಷಣೆ ಮಾಡಿದೆ. ಇದನ್ನೂ ಓದಿ: ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ರಾಮ್ ಚರಣ್ ದಂಪತಿ

    ಇತ್ತೀಚಿನ ದಿನಗಳಲ್ಲಿ ವಿಜಯ್ ದೇವರಕೊಂಡ, ಚಿರಂಜೀವಿ, ಬಾಲಕೃಷ್ಣ, ಪವನ್ ಕಲ್ಯಾಣ್ ಸೇರಿದಂತೆ ಹಲವು ಸೂಪರ್ ಸ್ಟಾರ್ ಸಿನಿಮಾಗಳ ಘೋಷಣೆ ಮಾಡಿತ್ತು ಮೈತ್ರಿ ಮೂವೀಸ್. ಜೊತೆಗೆ ಸಂಭಾವನೆ ರೂಪದಲ್ಲಿ ಭಾರೀ ಮೊತ್ತದ ಹಣವನ್ನೇ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಘೋಷಿಸಿರುವ ಚಿತ್ರಗಳ ಬಜೆಟ್ ಕೂಡ ಅಚ್ಚರಿ ಮೂಡಿಸುವಂತಿವೆ. ಈ ಕಾರಣದಿಂದಾಗಿಯೇ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನಿರ್ಮಾಣ ಸಂಸ್ಥೆಯ ಪಾಲುದಾರರ ಕಚೇರಿ ಮತ್ತು ಮನೆ ಮೇಲೆ ದಾಳಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಸಮಂತಾ ಆರೋಗ್ಯ ಹೇಗಿದೆ? ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದ ಮ್ಯಾನೇಜರ್

    ನಟಿ ಸಮಂತಾ ಆರೋಗ್ಯ ಹೇಗಿದೆ? ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದ ಮ್ಯಾನೇಜರ್

    ಮಿಳಿನ ಖ್ಯಾತ ನಟಿ ಸಮಂತಾ (Samantha) ಅವರ ಆರೋಗ್ಯದ ಕುರಿತು ವಾರದಿಂದ ನಾನಾ ರೀತಿಯ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅವರು ಅನಾರೋಗ್ಯದಿಂದ ಇರುವ ಕಾರಣಕ್ಕಾಗಿಯೇ ಸಾರ್ವಜನಿಕವಾಗಿ ಸಮಂತಾ ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗಿತ್ತು. ಆರೋಗ್ಯ ಏರುಪೇರಿನ ಹಿನ್ನೆಲೆಯಲ್ಲಿ ಅವರು ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಸುದ್ದಿಯೂ ಹರಿದಾಡಿತ್ತು. ಈ ನಡುವೆ ಅಮೆರಿಕಾಗೆ ಅವರು ಹಾರಲಿದ್ದಾರೆ ಎನ್ನುವ ಮಾಹಿತಿಯೂ ಇತ್ತು.

    ಅಂದಹಾಗೆ ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಸಮಂತಾ ಚರ್ಮ ರೋಗದಿಂದ ನರಳುತ್ತಿದ್ದಾರೆ ಎಂದಾಗಿತ್ತು. ಅಮೆರಿಕಾಗೆ (America) ತೆರಳಿ, ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿತ್ತು. ಇದೆಲ್ಲವಕ್ಕೂ ಸಮಂತಾ ಮ್ಯಾನೇಜರ್ ಉತ್ತರಿಸಿದ್ದಾರೆ. ಹರಿದಾಡುತ್ತಿರುವುದು ಗಾಸಿಪ್ ಎಂದು ಹೇಳಿದ್ದಾರೆ. ಸಮಂತಾ ಆರೋಗ್ಯವಾಗಿದ್ದು (Health), ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಜೈಲಿನಿಂದ ಬಿಡುಗಡೆಯಾಗಿ ಒಂದು ವರ್ಷ: ಕೊನೆಗೂ ಮೌನ ಮುರಿದ ಶಿಲ್ಪಾ ಶೆಟ್ಟಿ ಪತಿ

    ಸಮಂತಾ ಆರೋಗ್ಯವಾಗಿದ್ದಾರೆ, ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದು ಹೇಳಿರುವ ಮ್ಯಾನೇಜರ್ (Manager), ಸಮಂತಾ ಅಮೆರಿಕಾಗೆ ಚಿಕಿತ್ಸೆಗಾಗಿ ತೆರಳುತ್ತಿರುವ ವಿಚಾರವನ್ನು ಮಾತ್ರ ಹೇಳಿಲ್ಲ. ಆ ಕುರಿತು ಅವರು ಪ್ರತಿಕ್ರಿಯೆ ಕೂಡ ನೀಡಿಲ್ಲ. ಆದರೆ, ಸಮಂತಾಗೆ ಏನೂ ಆಗಿಲ್ಲ. ಈ ರೀತಿಯಲ್ಲಿ ಸುಳ್ಳು ಸುದ್ದಿ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲು ಸಮಂತಾ ತಿಳಿಸಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    ಪುಷ್ಪಾ (Pushpa) ಸಿನಿಮಾದ ನಂತರ ಸಮಂತ್ ಸಖತ್ ಬ್ಯುಸಿ ಆಗಿ ಹೋದರು. ಸದ್ಯ ಅವರು ಪ್ರಮುಖವಾಗಿ ನಟಿಸಿರುವ ಎರಡು ಚಿತ್ರಗಳು ಶೂಟಿಂಗ್ ಮುಗಿಸಿವೆ. ಯಶೋಧಾ (Yashodha) ಮತ್ತು ಶಾಕುಂತಲೆ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಈ ಎರಡೂ ಸಿನಿಮಾಗಳ ಕುತೂಹಲ ಮೂಡಿಸಿದ್ದು, ಸದ್ಯದಲ್ಲೇ ಬಿಡುಗಡೆ ಆಗುವ ಕುರಿತು ಸುದ್ದಿಯಿದೆ.

    Live Tv
    [brid partner=56869869 player=32851 video=960834 autoplay=true]

  • ತಾರಾ ತಾಯಿ ನಿಧನ : ಆನೆಕಲ್ ನಲ್ಲಿ ಪುಷ್ಪಾ ಅವರ ಅಂತ್ಯಕ್ರಿಯೆ

    ತಾರಾ ತಾಯಿ ನಿಧನ : ಆನೆಕಲ್ ನಲ್ಲಿ ಪುಷ್ಪಾ ಅವರ ಅಂತ್ಯಕ್ರಿಯೆ

    ದಿಢೀರ್ ಅನಾರೋಗ್ಯದ ಕಾರಣದಿಂದಾಗಿ ನಿನ್ನೆ ಮೈಸೂರಿನಲ್ಲಿ ನಿಧನ ಹೊಂದಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅವರ ತಾಯಿ ಪುಷ್ಪಾ ಅಂತ್ಯಕ್ರಿಯೆಯನ್ನು ಆನೆಕಲ್ ನಲ್ಲಿ ಮಾಡುವುದಾಗಿ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಂತ್ಯಕ್ರಿಯೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.  ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ತಾರಾ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಸಿನಿಮಾ ರಂಗದ ಅನೇಕ ಗಣ್ಯರು ಮತ್ತು ರಾಜಕೀಯ ಮುಖಂಡರು ಆಗಮಿಸಿ ಅಂತಿಮ ದರ್ಶನ ಪಡೆದರು. ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. 76 ವರ್ಷದ ಪುಷ್ಪಾ ಅವರು ತಾರಾ ಅವರ ಜೊತೆ ಮೈಸೂರಿನಲ್ಲಿ ನಿನ್ನೆ ನಡೆದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣದ ವೇಳೆ ತೀವ್ರವಾಗಿ ವಾಂತಿಯಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ತಾರಾ ಅವರ ಜೊತೆಯೇ  ಯಾವಾಗಲೂ ಅವರ ತಾಯಿ ಇರುತ್ತಿದ್ದರು. ಶೂಟಿಂಗ್ ನಡೆಯುವ ಸ್ಥಳಕ್ಕೂ ಮಗಳೊಂದಿಗೆ ಪುಷ್ಪಾ ಅವರು ಹೋಗುತ್ತಿದ್ದರು. ಈ ಬಾರಿ ಹೋದಾಗ ಇಂಥದ್ದೊಂದು ದುರಂತ ಸಂಭವಿಸಿದೆ.

  • ಹಿರಿಯ ನಟಿ ತಾರಾ ತಾಯಿ ಪುಷ್ಪಾ ವಿಧಿವಶ

    ಹಿರಿಯ ನಟಿ ತಾರಾ ತಾಯಿ ಪುಷ್ಪಾ ವಿಧಿವಶ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅವರ ತಾಯಿ ಪುಷ್ಪಾ ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. 76 ವರ್ಷದ ಪುಷ್ಪಾ ಅವರು ತಾರಾ ಅವರ ಜೊತೆ ಮೈಸೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣದ ವೇಳೆ ತೀವ್ರವಾಗಿ ವಾಂತಿಯಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

    ತಾರಾ ಅವರ ಜೊತೆಯೇ  ಯಾವಾಗಲೂ ಅವರ ತಾಯಿ ಇರುತ್ತಿದ್ದರು. ಶೂಟಿಂಗ್ ನಡೆಯುವ ಸ್ಥಳಕ್ಕೂ ಮಗಳೊಂದಿಗೆ ಪುಷ್ಪಾ ಅವರು ಹೋಗುತ್ತಿದ್ದರು. ಈ ಬಾರಿ ಹೋದಾಗ ಇಂಥದ್ದೊಂದು ದುರಂತ ಸಂಭವಿಸಿದೆ. ಮೈಸೂರುನಿಂದ ಮೃತದೇಹವನ್ನು ಬೆಂಗಳೂರಿಗೆ ರವಾನಿಸಲಾಗುತ್ತಿದೆ.

  • ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಕ್ಷಿಣದ ಸಿನಿಮಾ ರಂಗದಲ್ಲಿ ಸಮಂತಾ ಅವರದ್ದೇ ಹವಾ. ಕುಂತರೂ, ನಿಂತರೂ ಸುದ್ದಿ ಆಗುತ್ತಾರೆ. ಅದರಲ್ಲೂ ಡಿವೋರ್ಸ್ ಪಡೆದ ನಂತರ ಪದೇ ಪದೇ ಅಕ್ಕಿನೇನ ಕುಟುಂಬದ ಅಭಿಮಾನಿಗಳ ಕಂಗೆಣ್ಣಿಗೆ ಗುರಿಯಾಗುತ್ತಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ಇತ್ತೀಚೆಗಷ್ಟೇ ಅವರು ಸಮಾರಂಭವೊಂದರಲ್ಲಿ ಹಸಿರು ಬಣ್ಣದ ಡಿಸೈನರ್ ಗೌನ್ ಧರಿಸಿ ಭಾಗಿಯಾಗಿದ್ದರು. ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದ ಸಮಂತಾ ಅವರು ಅಲ್ಲಿರುವ ಕ್ಯಾಮೆರಾಗಳಿಗೆ ಆಹಾರವಾದರು. ಅವು ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆದವು. ಆ ಫೋಟೋಗಳನ್ನು ಕಂಡ ಅಭಿಮಾನಿಗಳು ‘ಏನಾಗಿದೆ ನಿಮಗೆ? ಹಣಕ್ಕಾಗಿ ಏನೇನಲ್ಲ ಮಾಡ್ತಿದ್ದೀರಿ?’ ಎಂದು ಖಾರವಾಗಿಯೇ ಪ್ರಶ್ನಿಸಿದ್ದಾರೆ. ಇಷ್ಟೊಂದು ಗ್ಲಾಮರೆ ಆಗಿ ಕಾಣುವ ಅಗತ್ಯ ಏನಿತ್ತು ಎಂದು ಅವರು ನೇರ ಸವಾಲು ಹಾಕಿದ್ದಾರೆ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್

    ಸಮಂತಾ ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಿದ್ದರೆ ಈ ಅಭಿಮಾನಿಗಳು ಮಾತ್ರ ಅವರನ್ನು ಸುಮ್ಮನೆ ಬಿಡುತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಮಂತಾ ಕುರಿತಾದ ಯಾವುದೇ ವಿಡಿಯೋ ಅಥವಾ ಫೋಟೋ ಬಂದರೆ ಸಾಕು, ಸಾವಿರ ಸಾವಿರ ಸರದಿಯಲ್ಲಿ ಸಂದೇಶ ರವಾನಿಸುತ್ತಾರೆ. ಹಸಿರು ಬಣ್ಣದ ಡಿಸೈನರ್ ಗೌನ್ ನಲ್ಲಿ ಸಮಂತಾ ಬೋಲ್ಡ್ ಅಂಡ್  ಸೆಕ್ಸಿ ಲುಕ್ ನಲ್ಲಿ ಪೋಸ್ ಕೊಟ್ಟಿದ್ದು ಮತ್ತು ಸಖತ್ ಹಾಟ್ ಹಾಟ್ ಆಗಿಯೂ ಕಾಣಿಸಿಕೊಂಡಿದ್ದು ಸದ್ಯದ ಪಡ್ಡೆಗಳ ಟಾಪಿಕ್ ಆಗಿದೆ. ಇದನ್ನೂ ಓದಿ : ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    ಈ ಹಿಂದೆ ಪುಷ್ಪಾ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದಾಗಲೂ ಅಭಿಮಾನಿಗಳು ಹೀಗೆಯೇ ಅಟ್ಯಾಕ್ಟ್ ಮಾಡಿದ್ದರು. ಹೆಸರಾಂತ ನಟಿಯಾಗಿ ಇಂತಹ ಹಾಡುಗಳಲ್ಲಿ ಕಾಣಿಸಿಕೊಳ್ಳುವುದರ ಅಗತ್ಯ ಏನಿದೆ ಎಂದೂ ಮಾತನಾಡಿದ್ದರು. ವಿಚ್ಚೇದನದ ನಂತರ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನುವಲ್ಲಿಗೂ ಜರಿದರು. ಅವರು ಏನೇ ಹೇಳಿದರೂ, ಹಾಡು ಹಿಟ್ ಆಯಿತು. ಸಮಂತಾ ಮತ್ತಷ್ಟು ಫೇಮಸ್ ಆದರು. ಇದನ್ನೂ ಓದಿ : ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    ಕೆಲ ತಿಂಗಳ ಹಿಂದೆಯಷ್ಟೇ ಗೆಳೆತಿಯರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಸಮಂತಾ ಸ್ವಿಮ್ ಸೂಟ್‍ ನಲ್ಲಿ ಕಾಣಿಸಿಕೊಂಡಿದ್ದರು. ಆಗಲೂ ಅಭಿಮಾನಿಗಳು ಸುಮ್ಮನೆ ಇರಲಿಲ್ಲ. ಅದಕ್ಕೂ ಕೆಟ್ಟದ್ದಾಗಿ ಕಾಮೆಂಟ್ ಮಾಡಿದರು. ಆ ವೇಳೆಯಲ್ಲಿ ಸಮಂತಾ ದುಃಖದಿಂದಲೇ ಅದಕ್ಕೆ ಪ್ರತಿಕ್ರಿಯಿಸಿದ್ದರು.

  • ಕಿಕ್ ಏರಿಸಲು ಹೊರಟಿದ್ದ ಸಮಂತಾಗೆ ‘ನೋ ನೋ’ ಅಂದ ಟ್ರೋಲಿಗರು

    ಕಿಕ್ ಏರಿಸಲು ಹೊರಟಿದ್ದ ಸಮಂತಾಗೆ ‘ನೋ ನೋ’ ಅಂದ ಟ್ರೋಲಿಗರು

    ಕೌಟುಂಬಿಕ ಕಾರಣಗಳಿಂದಾಗಿಯೇ ಹೆಚ್ಚು ಸುದ್ದಿ ಆಗುತ್ತಿರುವ ಸಮಂತಾ, ಇದೀಗ ಜಾಹೀರಾತು ಒಂದರಲ್ಲಿ ಕಾಣಿಸಿಕೊಂಡಿದ್ದಕ್ಕೆ ಸಖತ್ ಟ್ರೋಲ್ ಆಗಿದ್ದಾರೆ. ಕಿಕ್ ಏರಿಸಲು ಹೊರಟಿದ್ದ ಈ ಮಿಲ್ಕಿ ಬ್ಯೂಟಿಗೆ ‘ಹಾಗೆಲ್ಲ ಮಾಡ್ಬೇಡಿ’ ಎಂದು ಅಭಿಮಾನಿಗಳು ಬುದ್ದಿ ಹೇಳಿದ್ದಾರೆ. ‘ನೀವು ಅಂತಹ ಕಾಸ್ಟ್ಯೂಮ್ ಹಾಕಿಕೊಳ್ಳುವುದು ನಮಗೆ ಇಷ್ಟವಿಲ್ಲ’ ಎಂದು ಕಾಮೆಂಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ : ಮೆಗಾಸ್ಟಾರ್ ಚಿರಂಜೀವಿ ಹೊಸ ಚಿತ್ರದಲ್ಲಿ ಕಮಲ್ ಹಾಸನ್ ಪುತ್ರಿ ಶ್ರುತಿ

    ಸಮಂತಾ ಇತ್ತೀಚೆಗೆ ಆಲ್ಕೋಹಾಲ್ ಕಂಪೆನಿಯೊಂದರ ಜಾಹೀರಾತಿನಲ್ಲಿ ನಟಿಸಿದ್ದಾರೆ. ಆ ವಿಡಿಯೋದಲ್ಲಿ ಅವರು ಎರಡು ಬಗೆಯ ಕಾಸ್ಟ್ಯೂಮ್ ಧರಿಸಿದ್ದಾರೆ. ಅವೆರಡೂ ಸಮಂತಾಗೆ ಒಪ್ಪಿಲ್ಲವಂತೆ. ಹಾಗಾಗಿ ‘ಇಂತಹ ಅರೆಬರೆ ಕಾಸ್ಟ್ಯೂಮ್ ಗಳಲ್ಲಿ ಕಾಣಿಸಿಕೊಳ್ಳಬೇಡಿ. ಆ ರೀತಿಯಲ್ಲಿ ನಿಮ್ಮನ್ನು ನಾವು ನೋಡಲು ಸಾಧ್ಯವಿಲ್ಲ’ ಎಂದು ಅಭಿಮಾನಿಗಳು ಕೂಡ ಗರಂ ಆಗಿದ್ದಾರೆ. ಇದನ್ನೂ ಓದಿ : ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವರ್ಣರಂಜಿತ ತೆರೆ

    ಪುಷ್ಟಾ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲೂ ಸಮಂತಾ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದರು. ಈ ಸಮಯದಲ್ಲೂ ಕೆಲವರಿಂದ ಟೀಕೆ ವ್ಯಕ್ತವಾಗಿತ್ತು. ಇಂತಹ ಹಾಡಿನಲ್ಲಿ ನೀವು ಬೋಲ್ಡ್ ಆಗಿ ಕಾಣಿಸಿಕೊಳ್ಳುವುದು ನಮಗಿಷ್ಟವಿಲ್ಲ ಎಂದು ಅಭಿಮಾನಿಗಳು ನೇರವಾಗಿಯೇ ಹೇಳಿದ್ದರು. ಅಲ್ಲದೇ, ಆ ಹಾಡಿನ ಸಾಲಿನ ಕುರಿತೂ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ : ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಇದೀಗ ಜಾಹೀರಾತಿನ ಬಗ್ಗೆ ಟ್ರೋಲಿಗರು ನಾನಾ ರೀತಿಯಲ್ಲಿ ಟ್ರೋಲ್ ಮಾಡಿದ್ದಾರೆ. ತಣ್ಣಗೆ ನಕ್ಕು ಸಮಂತಾ ತಮ್ಮ ಪಾಡಿಗೆ ತಾವು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

  • ಪುಷ್ಪ ಸಿನಿಮಾಗೆ ದಾದಾಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ – ರಣವೀರ್‌ ಸಿಂಗ್‌ ಅತ್ಯುತ್ತಮ ನಟ

    ಪುಷ್ಪ ಸಿನಿಮಾಗೆ ದಾದಾಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ – ರಣವೀರ್‌ ಸಿಂಗ್‌ ಅತ್ಯುತ್ತಮ ನಟ

    ನವದೆಹಲಿ: ದಾದಾಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ 2022 ಪ್ರಕಟವಾಗಿದ್ದು, ಅಲ್ಲು ಅರ್ಜುನ್‌ ನಟನೆಯ ಪುಷ್ಪ, ಸಿದ್ಧಾರ್ಥ ಮಲ್ಹೋತ್ರ ನಟನೆಯ ಶೇರ್‌ಶಹಾ, ವಿಕ್ಕಿ ಕೌಶಲ್‌ ಅಭಿನಯದ ಸರ್ದಾರ್‌ ಉದ್ಧಮ್‌ ಸಿನಿಮಾಗಳು ಪ್ರಶಸ್ತಿಗೆ ಭಾಜನವಾಗಿವೆ.

    1983ರಲ್ಲಿ ಕಪಿಲ್‌ ದೇವ್‌ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ವಿಶ್ವಕಪ್‌ ಜಯಿಸಿದ ಸಂದರ್ಭ ಆಧಾರಿತ ಚಿತ್ರ ʼ83′ ನಟನೆಗಾಗಿ ರಣವೀರ್‌ ಸಿಂಗ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಕೃತಿ ಸನೂನ್‌ಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಈ ವರ್ಷದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ʼಪುಷ್ಪʼ ತೆಲುಗು ಸಿನಿಮಾಗೆ ದಕ್ಕಿದೆ. ಇದನ್ನೂ ಓದಿ: ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

    ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ?                                                                                                                                   ಅತ್ಯುತ್ತಮ ನಟ- ರಣವೀರ್‌ ಸಿಂಗ್‌
    ಅತ್ಯುತ್ತಮ ನಟಿ – ಕೃತಿ ಸನೂನ್‌
    ಅತ್ಯುತ್ತಮ ನಿರ್ದೇಶಕ – ಕೆನ್‌ ಘೋಷ್‌
    ಚಿತ್ರೋದ್ಯಮಕ್ಕೆ ಅತ್ಯುತ್ತಮ ಕೊಡುಗೆ – ಆಶಾ ಪ್ರಕಾಶ್‌
    ಅತ್ಯುತ್ತಮ ಪೋಷಕ ನಟ – ಸತಿಶ್‌ ಕೌಶಿಕ್‌
    ಅತ್ಯುತ್ತಮ ಪೋಷಕ ನಟಿ – ಲಾರಾ ದತ್‌
    ಅತ್ಯುತ್ತಮ ಖಳನಾಯಕ – ಆಯುಷ್‌ ಶರ್ಮಾ
    ವಿಮರ್ಶಕರ ಅತ್ಯುತ್ತಮ ಚಿತ್ರ – ಸರ್ದಾರ್‌ ಉದ್ಧಮ್‌
    ವಿಮರ್ಶಕರ ಅತ್ಯುತ್ತಮ ನಟ – ಸಿದ್ಧಾರ್ಥ್‌ ಮಲ್ಹೋತ್ರಾ
    ವಿಮರ್ಶಕರ ಅತ್ಯುತ್ತಮ ನಟಿ – ಕೈರಾ ಅಡ್ವಾಣಿ
    ಜನರ ಆಯ್ಕೆಯ ಅತ್ಯುತ್ತಮ ನಟ – ಅಭಿಮನ್ಯು ದಸ್ಸಾನಿ
    ಜನರ ಆಯ್ಕೆಯ ಅತ್ಯುತ್ತಮ ನಟಿ – ರಾಧಿಕಾ ಮಂದನ್‌
    ಅತ್ಯುತ್ತಮ ಅಂತಾರಾಷ್ಟ್ರೀಯ ಚಿತ್ರ – ಅನದರ್‌ ರೌಂಡ್‌
    ಅತ್ಯುತ್ತಮ ವೆಬ್‌ ಸೀರಿಸ್ -‌ ಕ್ಯಾಂಡಿ
    ವೆಬ್‌ ಸೀರಿಸ್‌ ಅತ್ಯುತ್ತಮ ನಟ – ಮನೋಜ್‌ ಬಾಜ್‌ಪೇಯಿ
    ವೆಬ್‌ ಸೀರಿಸ್‌ ಅತ್ಯುತ್ತಮ ನಟಿ – ರವೀನಾ ಟಂಡೊನ್‌
    ವರ್ಷದ ಟೆಲಿವಿಷನ್‌ ಸೀರಿಸ್‌ – ಅನುಪಮಾ
    ಟೆಲಿವಿಷನ್‌ ಸೀರಿಸ್‌ ಅತ್ಯುತ್ತಮ ನಟ – ಶಹೀರ್‌ ಶೇಕ್‌
    ಟಿಲಿವಿಷನ್‌ ಸೀರಿಸ್‌ ಅತ್ಯುತ್ತಮ ನಟಿ – ಶ್ರದ್ಧಾ ಆರ್ಯ
    ಅತ್ಯುತ್ತಮ ಕಿರು ಚಿತ್ರ – ಪೌಲಿ
    ಅತ್ಯುತ್ತಮ ಹಿನ್ನೆಲೆ ಗಾಯಕ – ವಿಶಾಲ್‌ ಮಿಶ್ರಾ
    ಅತ್ಯುತ್ತಮ ಹಿನ್ನೆಲೆ ಗಾಯಕಿ – ಕನಿಕಾ ಕಪೂರ್‌
    ಅತ್ಯುತ್ತಮ ಸಿನಿಮಾಟೋಗ್ರಾಫರ್ -‌ ಜಯಕ್ರಿಷ್ಣ ಗುಮ್ಮಾಡಿ
    ಇದನ್ನೂ ಓದಿ: ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?