Tag: ಪುಷ್ಪ ಅರುಣ್‌ ಕುಮಾರ್‌

  • ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?

    ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?

    ರಾಕಿಂಗ್ ಸ್ಟಾರ್ ಯಶ್ (Yash) ತಾಯಿ ಪುಷ್ಪ ಅರುಣ್ ಕುಮಾರ್ ಅವರು ‘ಕೊತ್ತಲವಾಡಿ’ ಚಿತ್ರದ ಮೂಲಕ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ರಾಧಿಕಾ ಪಂಡಿತ್ (Radhika Pandit) ಕಮ್ ಬ್ಯಾಕ್ ಚಿತ್ರಕ್ಕೆ ನಿರ್ಮಾಣ ಮಾಡ್ತಾರಾ ಎಂಬುದರ ಬಗ್ಗೆ ಪುಷ್ಪ (Pushpa Arun Kumar) ಮಾತನಾಡಿದ್ದಾರೆ. ಇದನ್ನೂ ಓದಿ:ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

    ನಿರ್ಮಾಪಕಿಯಾಗಿರುವ ಯಶ್ ತಾಯಿ ಮುಂದೆ ಸೊಸೆ ರಾಧಿಕಾಗೂ ನಿರ್ಮಾಣ ಮಾಡ್ತಾರಾ ಎಂದು ಕೇಳಲಾದ ಪ್ರಶ್ನೆಗೆ, ಅವರ ಯಜಮಾನ್ರು ಯಶ್ ನನಗಿಂತ ದೊಡ್ಡ ಬ್ಯಾನರ್ ಮಾಡಿದ್ದಾರೆ. ಅದರಲ್ಲೇ ಬೇಕಾದಷ್ಟು ಕೆಲಸ ಮಾಡಬಹುದು. ದೇಶ ವಿದೇಶದಲ್ಲಿ ಸಂಪಾದನೆ ಮಾಡೋವಷ್ಟು ಗಂಡ ದುಡಿಯುತ್ತಿದ್ದಾರೆ. ರಾಧಿಕಾ ನನ್ನತ್ರ ಯಾಕೆ ಬರುತ್ತಾರೆ ಎಂದಿದ್ದಾರೆ.

    ರಾಧಿಕಾ ಸಿನಿಮಾಗೆ ನಿರ್ಮಾಣ ಮಾಡಬಹುದು. ಯಶ್‌ಗಿಂತ ನಾನು ಬೆಳೆಯೋಕೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. ರಾಧಿಕಾರ ಡೇಟ್ ಕೊಡಿಸಿ, ನಾಳೆನೇ ಅವರಿಗೆ ಸಿನಿಮಾ ಮಾಡ್ತೀನಿ ಎಂದು ಖುಷಿಯಿಂದ ಸೊಸೆ ಬಗ್ಗೆ ಹೇಳಿದ್ದಾರೆ. ಇದನ್ನೂ ಓದಿ:ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

    ಮದುವೆ ಬಳಿಕ ‘ಆದಿಲಕ್ಷ್ಮಿ ಪುರಾಣ’ ಎಂಬ ಚಿತ್ರ ನಿರೂಪ್ ಭಂಡಾರಿ ಜೊತೆ ಮಾಡಿದ್ದರು. ಇದು 2019ರಲ್ಲಿ ರಿಲೀಸ್ ಆಗಿತ್ತು. ಆದಾದ ನಂತರ ಯಶ್ ಜೊತೆ ಆ್ಯಡ್ ಶೂಟ್‌ಗಳಲ್ಲಿ ರಾಧಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ. ಈ ಗುಡ್ ನ್ಯೂಸ್‌ಗಾಗಿ ಅಪಾರ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅತ್ತೆ ಪುಷ್ಪ ಬ್ಯಾನರ್ ಅಲ್ಲಿ ಆದ್ರೂ ನಟಿಸಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

  • ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

    ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

    ರಾಕಿಂಗ್ ಸ್ಟಾರ್ ಯಶ್ ತಾಯಿ ‘ಕೊತ್ತಲವಾಡಿ’ (Kothalavadi) ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಚಿತ್ರದ ಬಗ್ಗೆ ಯಶ್ (Yash) ತಾಯಿ ಪುಷ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಪುಷ್ಪ ಅರುಣ್ ಕುಮಾರ್ (Pushpa Arun Kumar) ನಿರ್ಮಿಸಿದ ಮೊದಲ ಸಿನಿಮಾ ‘ಕೊತ್ತಲವಾಡಿ’ ಟೀಸರ್ ಅನ್ನು ರ‍್ಯಾಂಬೋ ನಟ ಶರಣ್ ಬಿಡುಗಡೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಪುಷ್ಪ ಅವರು ಸಿಹಿ ಸುದ್ದಿ ನೀಡಿದ್ದಾರೆ. ನಾವು ಶರಣ್ ಅವರ ಅಭಿಮಾನಿ. ನಮ್ಮ ಸಂಸ್ಥೆಯಿಂದ 2ನೇ ಸಿನಿಮಾವನ್ನು ಶರಣ್ ಜೊತೆ ಮಾಡುತ್ತೇವೆ. ಮೊದಲ ಚಿತ್ರವನ್ನೇ ಅವರ ಜೊತೆ ಮಾಡಬೇಕಿತ್ತು. ಆದರೆ ನನಗೆ ಧೈರ್ಯ ಇರಲಿಲ್ಲ. ಈಗ ಒಂದು ಸಿನಿಮಾವನ್ನು ಬೇರೆಯವರ ಜೊತೆ ಮಾಡಿದ್ದೇನೆ. 2ನೇ ಸಿನಿಮಾವನ್ನು ಶರಣ್ (Sharan) ಜೊತೆ ಮಾಡುತ್ತೇನೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಇದನ್ನೂ ಓದಿ:‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್

    ಈಗಾಗಲೇ ಶರಣ್ ಅವರೊಂದಿಗೆ ಸಿನಿಮಾ ಮಾಡುವ ಬಗ್ಗೆ ಮಾತುಕತೆ ಆಗಿದೆ. ಶರಣ್ ಕೂಡ ಸ್ಕ್ರಿಪ್ಟ್‌ ಕೇಳಿ ಓಕೆ ಎಂದಿದ್ದಾರೆ. ಪುಷ್ಪ ಅವರು ನಿರ್ಮಿಸಿರುತ್ತಿರುವ ಚೊಚ್ಚಲ ಚಿತ್ರ ‘ಕೊತ್ತಲವಾಡಿ’ ರಿಲೀಸ್ ಬಳಿಕ 2ನೇ ಚಿತ್ರ ಸೆಟ್ಟೇರಲಿದೆ. ಇದನ್ನೂ ಓದಿ: ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್

    ‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ‘ಕೊತ್ತಲವಾಡಿ’ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ.

    ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ‘ಕೊತ್ತಲವಾಡಿ’ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

  • ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

    ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

    – ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ರಾಧಿಕಾಗೆ ನಾನು ಅಭಿಮಾನಿ ಎಂದ ಅತ್ತೆ

    ಸ್ಟಾರ್ ನಟ ಯಶ್ (Yash) ತಾಯಿ ‘ಕೊತ್ತಲವಾಡಿ’ ಸಿನಿಮಾ ನಿರ್ಮಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್‌ನಲ್ಲಿ ಮಗ ಯಶ್ ಮತ್ತು ಸೊಸೆ ರಾಧಿಕಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಕಥೆ ಆಯ್ಕೆ ಮಾಡೋದ್ರಲ್ಲಿ ಯಶ್‌ಗಿಂತ (Yash) ರಾಧಿಕಾ ಕಿಲಾಡಿ ಎಂದು ಪುಷ್ಪ ಅರುಣ್ ಕುಮಾರ್ (Pushpa Arun Kumar) ಹೇಳಿದ್ದಾರೆ. ಇದನ್ನೂ ಓದಿ:ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

    ‘ಕೊತ್ತಲವಾಡಿ’ ಸಿನಿಮಾದ ಟೀಸರ್ ಲಾಂಚ್‌ನಲ್ಲಿ ಯಶ್ ತಾಯಿ ರಾಧಿಕಾ ಪಂಡಿತ್ (Radhika Pandit) ಕಥೆ ಆಯ್ಕೆ ಮಾಡೋದ್ರಲ್ಲಿ ಎಷ್ಟು ಸೆಲೆಕ್ಟಿವ್ ಎಂದು ರಿವೀಲ್ ಮಾಡಿದ್ದಾರೆ. ನನ್ನ ಮಗಳಾಗಲಿ ಅಥವಾ ಮಗನಿಗೂ ಈ ಬಗ್ಗೆ ಗೊತ್ತಿರಲಿಲ್ಲ. ನಾನು ಹೊಸದಾಗಿ ಚಿಕ್ಕ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ರಾಧಿಕಾ ತುಂಬಾ ಚೆನ್ನಾಗಿ ಕಥೆ ಸೆಲೆಕ್ಟ್ ಮಾಡುತ್ತಾಳೆ. ಕಥೆ ಆಯ್ಕೆ ಮಾಡೋದರಲ್ಲಿ ರಾಧಿಕಾ ಯಶ್‌ಗಿಂತಲೂ ಕಿಲಾಡಿ. ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ನಾನು ರಾಧಿಕಾಗೆ ಫ್ಯಾನ್. ಕಥೆ ವಿಚಾರದಲ್ಲಿ ತುಂಬಾ ಚೆನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾಳೆ. ಆ ವಿಚಾರದಲ್ಲಿ ನಾನು ಅವಳಿಂದ ಕಲಿಯಬೇಕಾಗಿರೋದು ತುಂಬಾ ಇದೆ ಎಂದು ಸೊಸೆ ರಾಧಿಕಾ ಬಗ್ಗೆ ಪುಷ್ಪ ಅವರು ಹೊಗಳಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್

    ಯಶ್ ಅವರು ಈಗಾಗಲೇ ಒಂದು ಮಾನ್‌ಸ್ಟರ್ ಕ್ರಿಯೇಷನ್ಸ್ ಬ್ಯಾನರ್ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದಾರೆ. ಈ ಕಡೆ ಅವರ ತಾಯಿ ಪುಷ್ಪ ಅವರು ಕೂಡ ಪಿಎ ಪ್ರೊಡಕ್ಷನ್ಸ್ ಶುರು ಮಾಡಿದ್ದಾರೆ. ಎರೆಡೆರೆಡು ಪ್ರೊಡಕ್ಷನ್ ಹೌಸ್ ಯಾಕೆ ಎಂಬುದರ ಬಗ್ಗೆ ಪುಷ್ಪ ಮಾತನಾಡಿ, ಎಲ್‌ಐಸಿಯಲ್ಲಿ ನಿಮ್ಮ ಹಣವನ್ನು ನೀವೆ ಪಾವತಿಸಬೇಕು. ಗಂಡನ ಅಕೌಂಟ್‌ನಿಂದ ಹಣ ಕೊಡುತ್ತೇವೆ ಅಂತಂದರೆ ಎಲ್‌ಐಸಿ ಒಪ್ಪಿಕೊಳ್ಳುವುದಿಲ್ಲ. ಅದನ್ನು ರಿಜೆಕ್ಟ್ ಮಾಡುತ್ತದೆ. ಆಗ ಮಗ ಬೇರೆ, ಗಂಡ ಬೇರೆ, ಮಗಳು ಬೇರೆ, ಸಂಪಾದನೆ ಎಲ್ಲರದ್ದೂ ಬೇರೆ ಬೇರೆ ಅನ್ನೋ ಪಾಠವನ್ನು ಆಗಲೇ ನಾನು ಕಲಿತದ್ದು. ಯಶ್ ದುಡಿಯುತ್ತಿರುವುದು ಅವನ ಸಾಮರ್ಥ್ಯದಿಂದ, ಹಾಗಂತ ಯಶ್ ಅವರ ಅಮ್ಮ ಎಂದು ನನಗೆ ಎಷ್ಟು ದಿನ ಗೌರವ ಕೊಡುತ್ತೀರಾ? ನಿರ್ಮಾಪಕಿಯಾದ ಮೇಲೆ ನನ್ನದೇ ಒಂದು ಸ್ಥಾನವಿರುತ್ತದೆ ಎಂದಿದ್ದಾರೆ ಯಶ್ ತಾಯಿ.

    ‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್ ವಸಿಷ್ಠ ಅವರು ಸಂಗೀತ, ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಟೀಸರ್ ಹೈಲೆಟ್.

    ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಎ ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.


    ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.

  • ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

    ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

    ರಾಕಿಂಗ್ ಸ್ಟಾರ್ ಯಶ್ (Yash) ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್‌ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು (ಏ.30) ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.

     

    View this post on Instagram

     

    A post shared by PA Productions (@paproductionsin)

    PA Productions ಮೊದಲ ಪ್ರಯತ್ನಕ್ಕೆ ‘ಕೊತ್ತಲವಾಡಿ’ ಎಂಬ (Kothalavadi) ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಶ್ರೀರಾಜ್ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ನ್ಯೂಸ್

    ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ (Kavya Shaiva) ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಪೋಸ್ಟರ್‌ನಲ್ಲಿಯೂ ಪೃಥ್ವಿ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

    PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಅದರಂತೆ ‘ಕೊತ್ತಲವಾಡಿ’ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

    ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆ್ಯಕ್ಷನ್ ಹೀರೋ ಆಗಿ ಅಬ್ಬರಿಸಲಿದ್ದಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ವಿಕಾಸ್ ವಸಿಷ್ಠ ಅವರ ಸಂಗೀತ, ರಘು ನಿಡುವಳ್ಳಿ ಅವರ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.

  • ಯಶ್ ತಾಯಿ ನಿರ್ಮಾಣದ ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ನ್ಯೂಸ್

    ಯಶ್ ತಾಯಿ ನಿರ್ಮಾಣದ ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ನ್ಯೂಸ್

    ರಾಕಿಂಗ್ ಸ್ಟಾರ್ ಯಶ್ (Yash) ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗೋದು ಯಾವಾಗ ಎಂಬುದರ ಬಗ್ಗೆ ಚಿತ್ರತಂಡ ಫ್ಯಾನ್ಸ್‌ಗೆ ಅಪ್‌ಡೇಟ್‌ ಕೊಟ್ಟಿದೆ. ಇದನ್ನೂ ಓದಿ:ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

    ಯಶ್ ತಾಯಿ ಸ್ಯಾಂಡಲ್‌ವುಡ್‌ ನಿರ್ಮಾಪಕಿಯಾಗಿ ಎಂಟ್ರಿ ಕೊಡ್ತಿದ್ದಾರೆ. ಅವರ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದಾರೆ. ಅಕ್ಷಯ ತೃತೀಯ ದಿನದಂದು (ಏ.30) ಬೆಳಗ್ಗೆ 11 ಗಂಟೆಗೆ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರದ ಬಗೆಗಿನ ಮಾಹಿತಿ ತಿಳಿದುಕೊಳ್ಳಲು ಫ್ಯಾನ್ಸ್‌ ಕ್ಯೂರಿಯಸ್‌ ಆಗಿದ್ದಾರೆ. ಇದನ್ನೂ ಓದಿ:ನಿರ್ಮಾಪಕಿಯಾದ ರಾಕಿಂಗ್ ಸ್ಟಾರ್ ಯಶ್ ತಾಯಿ


    ನಟ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಅವರು ‘ಪಿಎ ಪ್ರೊಡಕ್ಷನ್ಸ್’ ಎಂಬ ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಯಶ್ ತಾಯಿ ಹೆಸರು ಪುಷ್ಪ, ತಂದೆ ಅರುಣ್ ಕುಮಾರ್ ಹೀಗಾಗಿ ನಿರ್ಮಾಣ ಸಂಸ್ಥೆಗೆ ‘ಪಿಎ ಪ್ರೊಡಕ್ಷನ್ಸ್’ ಎಂದು ಇಡಲಾಗಿದೆ. ಇದರ ಮೂಲಕ ಹೊಸ ಪ್ರತಿಭೆಗಳ ಕನಸಿಗೆ ಸಾಥ್ ನೀಡ್ತಿದ್ದಾರೆ. ಈ ಸಂಸ್ಥೆಯ ಮೂಲಕ ಈಗಾಗಲೇ ಸಿನಿಮಾ ಕೆಲಸ ಶುರುವಾಗಿದೆ.

    ಈ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬರ್ (Pruthvi Ambaar) ಅವರೊಂದಿಗೆ ‘ಕೆಂಡಸಂಪಿಗೆ’ ಖ್ಯಾತಿಯ ಕಾವ್ಯ ಶೈವ, ಗೋಪಾಲ ಕೃಷ್ಣ ದೇಶಪಾಂಡೆ ಸೇರಿದಂತೆ ಅನೇಕರು ಕಾಣಿಸಿಕೊಳ್ತಿದ್ದಾರೆ. ಈ ಚಿತ್ರಕ್ಕೆ ಶ್ರೀರಾಜ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

    ಅಂದಹಾಗೆ, ‘ಟಾಕ್ಸಿಕ್’ ಚಿತ್ರಕ್ಕೆ ನಾಯಕ ಕಮ್ ಸಹ ನಿರ್ಮಾಪಕನಾಗಿ ಯಶ್ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ರಾವಣನಾಗಿ ರಾಕಿ ಭಾಯ್ ನಟಿಸಲಿದ್ದಾರೆ. ಈ ಚಿತ್ರಕ್ಕೂ ಅವರು ಸಹ ನಿರ್ಮಾಪಕರಾಗಿದ್ದಾರೆ.