Tag: ಪೂರಿ ಜಗನ್ನಾಥ್

  • ಲೈಗರ್ ಚಿತ್ರಕ್ಕೆ ಅಕ್ರಮ ಹಣ: ಇಡಿ ವಿಚಾರಣೆ ಎದುರಿಸಿದ ವಿಜಯ್ ದೇವರಕೊಂಡ

    ಲೈಗರ್ ಚಿತ್ರಕ್ಕೆ ಅಕ್ರಮ ಹಣ: ಇಡಿ ವಿಚಾರಣೆ ಎದುರಿಸಿದ ವಿಜಯ್ ದೇವರಕೊಂಡ

    ಪುರಿ ಜಗನ್ನಾಥ್ ನಿರ್ದೇಶನದ ಲೈಗರ್ ಸಿನಿಮಾ ಹೀನಾಯವಾಗಿ ಸೋಲು ಕಂಡು, ಇಡೀ ಸಿನಿಮಾ ತಂಡದ ಮನಸ್ಸಿನಲ್ಲಿ ಕಹಿ ಸೌಧವನ್ನೇ ಕಟ್ಟಿದೆ. ಅದರಿಂದ ದೂರ ಬಂದು ಮತ್ತೊಂದು ಮಗ್ಗುಲಗೆ ಹೊರಳೋಣವೆಂದರೆ, ಇದೀಗ ಜಾರಿ ನಿರ್ದೇಶನಾಲಯವು (ಇಡಿ) ನಿದ್ದೆ ಮಾಡದಂತೆ ಮಾಡಿದೆ. ಲೈಗರ್ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಚಾರ ಗೊತ್ತಿದ್ದದ್ದೆ. ಈ ಸಿನಿಮಾ ನೂರಾರು ಕೋಟಿ ಕಲೆಕ್ಷನ್ ಮಾಡಲಿದೆ ಎಂದು ಹೇಳಲಾಗಿತ್ತು. ಚಿತ್ರತಂಡಕ್ಕೆ ಆ ನಂಬಿಕೆಯೂ ಇತ್ತು. ಆದರೆ, ಅದು ಸುಳ್ಳಾಯಿತು.

    ಲೈಗರ್ ಸಿನಿಮಾ ಸೋತರೂ, ಅದು ಕೊಡುತ್ತಿರುವ ನೋವು ಅಷ್ಟಿಷ್ಟಲ್ಲ. ಸೋಲಿನ ನಂತರ ಈ ಸಿನಿಮಾಗೆ ಹಣ ಹೂಡಿದ್ದು ಹೇಗೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ. ಅಕ್ರಮ ಹಣದಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುವುದು ಜಾರಿ ನಿರ್ದೇಶನಾಲಯದ ಆರೋಪ. ಹಾಗಾಗಿಯೇ ಈ ಸಿನಿಮಾದ ನಟ ವಿಜಯ್ ದೇವರಕೊಂಡ ಅವರಿಗೆ ಇಡಿ ನೋಟಿಸ್ ನೋಡಿತ್ತು. ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ನಿನ್ನೆ ವಿಜಯ್ ದೇವರಕೊಂಡ ಹೈದರಾಬಾದ್‍ ನಲ್ಲಿರುವ ಇಡಿ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದಾರೆ. ಇದನ್ನೂ ಓದಿ: ಬ್ಯಾನ್ ಆಕ್ರೋಶದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ

    ಲೈಗರ್ ಸಿನಿಮಾಗೆ ಬಳಸಿರುವ ಹಣವು ವಿದೇಶದಿಂದ ಹರಿದು ಬಂದಿದೆ ಎನ್ನುವುದು ಹಾಗೂ ಹಣ ವರ್ಗಾವಣೆಯಲ್ಲಿ ನಿಯಮ ಉಲ್ಲಂಘನೆ ಆಗಿದೆ ಎನ್ನುವುದು ಇಡಿ ಆರೋಪ. ಹಾಗಾಗಿಯೇ ಸಿನಿಮಾ ನಿರ್ದೇಶಕ ಪೂರಿ ಜಗನ್ನಾಥ್, ನಿರ್ಮಾಪಕಿ ಚಾರ್ಮಿ ಕೌರ್ ಹಾಗೂ ವಿಜಯ್ ದೇವರಕೊಂಡ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿಂದೆಯೇ ಪೂರಿ ಮತ್ತು ಚಾರ್ಮಿ ಕೌರ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಇದೀಗ ವಿಜಯ್ ದೇವರಕೊಂಡ ಕೂಡ ಅಧಿಕಾರಿಗಳ ಪ್ರಶ್ನೆಯನ್ನು ಎದುರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ‘ಜನ ಗಣ ಮನ’ ಅನ್ನುವುದು ಅನುಮಾನ : 8 ಕೋಟಿ ನೀರಿನಲ್ಲಿ ಹೋಮ

    ವಿಜಯ್ ದೇವರಕೊಂಡ ‘ಜನ ಗಣ ಮನ’ ಅನ್ನುವುದು ಅನುಮಾನ : 8 ಕೋಟಿ ನೀರಿನಲ್ಲಿ ಹೋಮ

    ಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ‘ಲೈಗರ್’ (Ligar) ಸಿನಿಮಾ ಬಾಕ್ಸ್ ಆಫೀಸಿನಲ್ಲಿ (Box Office) ಮಕಾಡೆ ಮಲಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಈ ಸಿನಿಮಾ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಘಟಾನುಘಟಿಗಳೇ ಈ ಸಿನಿಮಾದ ಬೆನ್ನಿಗೆ ನಿಂತಿದ್ದರು. ಆದರೆ, ಸಿನಿಮಾ ಅಂದುಕೊಂಡಷ್ಟು ಸದ್ದು ಮಾಡಲಿಲ್ಲ. ನಿರ್ಮಾಪಕರಿಗೂ ಕಾಸು ತಂದುಕೊಡಲಿಲ್ಲ. ಹೀಗಾಗಿ ಈ ಕಾಂಬಿನೇಷನ್ ನ ಮತ್ತೊಂದು ಸಿನಿಮಾ ಬರುವುದು ಅನುಮಾನ ಎನ್ನಲಾಗುತ್ತಿದೆ.

    ಲೈಗರ್ ಸಿನಿಮಾದ ಬೆನ್ನಲ್ಲೇ ವಿಜಯ್ ದೇವರಕೊಂಡು ಹಾಗೂ ಪೂರಿ ಜಗನ್ನಾಥ್ (Puri Jagannath) ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದರು. ಈ ಚಿತ್ರಕ್ಕೆ ‘ಜನ ಗಣ ಮನ’ ಎಂದು ಹೆಸರು ಇಡಲಾಗಿತ್ತು. ಅದ್ದೂರಿಯಾಗಿ ಮುಹೂರ್ತವನ್ನು ಮಾಡಿದ್ದರು. ಬರೋಬ್ಬರಿ ಎಂಟು ಕೋಟಿ ಖರ್ಚು ಮಾಡಿ ಕೆಲವು ದೃಶ್ಯಗಳನ್ನೂ ಶೂಟ್ ಮಾಡಿತ್ತು. ಆದರೆ, ಇದೀಗ ಆ ಸಿನಿಮಾ ಮುಂದುವರೆಯುವುದು ಡೌಟು ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

     

    ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಬೆಂಗಳೂರಿಗೆ (Bangalore) ಆಗಮಿಸಿದ್ದರು. ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದ ವಿಜಯ್ ಅವರನ್ನು ಮಾಧ್ಯಮದವರು ‘ಜನ ಗಣ ಮನ’ (Jana Gana Mana) ಸಿನಿಮಾದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಆ ಸಿನಿಮಾದ ಬಗ್ಗೆ ಮಾತನಾಡದ ವಿಜಯ್, ‘ಆ ವಿಷ್ಯ ಬಿಟ್ಟಾಕಿ, ಇದೀಗ ಬಂದಿರುವುದು ಪ್ರಶಸ್ತಿ ಸಮಾರಂಭಕ್ಕೆ. ಈ ಗಳಿಗೆಯನ್ನು ಎಂಜಾಯ್ ಮಾಡೋಣ’ ಎಂದು ಹೇಳಿ ತಪ್ಪಿಸಿಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಏನೂ ಮಾತನಾಡದೇ ಅಲ್ಲಿಂದ ತೆರಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

    ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

    ವಾರವಷ್ಟೇ ವಿಜಯ್ ದೇವರಕೊಂಡ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಿನಿಮಾ ಬಿಡುಗಡೆಗೂ ಮುನ್ನ ಈ ಚಿತ್ರವನ್ನು ಯಾರೂ ನೋಡದಂತೆ ಬಾಯ್ಕಾಟ್ ಅಭಿಯಾನ ಶುರುವಾಗಿದೆ. ಈಗಾಗಲೇ ಟ್ವಿಟರ್ ನಲ್ಲಿ ಬಾಯ್ಕಾಟ್ ಲೈಗರ್ ಟ್ರೆಂಡ್ ಕೂಡ ಆಗಿದೆ.

    ಆಮೀರ್ ಖಾನ್, ಅಕ್ಷಯ್ ಕುಮಾರ್, ಅನುರಾಗ್ ಕಶ್ಯಪ್ ಅವರ ಸಿನಿಮಾಗಳನ್ನು ಕ್ರಮವಾಗಿ ಬಾಯ್ಕಾಟ್ ಮಾಡಿಕೊಂಡೇ ಬಂದಿರುವ ನೆಟ್ಟಿಗರು ಈ ಬಾರಿ ಲೈಗರ್ ಸಿನಿಮಾದ ಹಿಂದೆ ಬಿದ್ದಿದ್ದಾರೆ. ಕಾರಣ ವಿಜಯ್ ದೇವರಕೊಂಡ ಮತ್ತು ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಕರಣ್ ಜೋಹಾರ್ ಎಂದು ಹೇಳಲಾಗುತ್ತಿದೆ. ದಕ್ಷಿಣದ ಸಿನಿಮಾಗಳನ್ನು ಕರಣ್ ಜೋಹಾರ್ ಬೆಳೆಯಲು ಬಿಡುತ್ತಿರಲಿಲ್ಲ. ಹಾಗಾಗಿ ಅವರ ಪ್ರೊಡಕ್ಷನ್ ಹೌಸ್ ನಿಂದ ಬಂದಿರುವ ಲೈಗರ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಿದೆ ಎನ್ನುತ್ತಾರೆ ಹಲವರ. ಇದನ್ನೂ ಓದಿ:ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಅಲ್ಲದೇ ವಿಜಯ್ ದೇವರಕೊಂಡ ಅವರು ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಗ್ಗೆ ಮಾತನಾಡುತ್ತಾ, ಅದು ಕೇವಲ ಆಮೀರ್ ಖಾನ್ ಅವರ ಸಿನಿಮಾವಲ್ಲ. ಆ ಸಿನಿಮಾ ನಿರ್ಮಾಣದ ಹಿಂದೆ 250ಕ್ಕೂ ಹೆಚ್ಚು ಜನರ ಶ್ರಮವಿರುತ್ತದೆ. ಹಾಗಾಗಿ ಬಾಯ್ಕಾಟ್ ಮಾಡಬೇಡಿ ಎಂದು ಆಮೀರ್ ಪರವಾಗಿ ಮಾತನಾಡಿದ್ದರಂತೆ. ಈ ವಿಷಯವಾಗಿಯೂ ಲೈಗರ್ ಸಿನಿಮಾ ಬಾಯ್ಕಾಟ್ ಸಂಕಟವನ್ನು ಅನುಭವಿಸಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪೂಜಾ ಹೆಗ್ಡೆ ಜತೆ ವಿಜಯ್ ದೇವರಕೊಂಡ ಡ್ಯುಯೆಟ್

    ಪೂಜಾ ಹೆಗ್ಡೆ ಜತೆ ವಿಜಯ್ ದೇವರಕೊಂಡ ಡ್ಯುಯೆಟ್

    ಟಿ ಪೂಜಾ ಹೆಗ್ಡೆ ಟಾಲಿವುಡ್‌ನ ಪ್ರತಿಭಾವಂತ ಕಲಾವಿದೆ, ಇತ್ತೀಚೆಗೆ ಈ ನಟಿಯ ಸಾಲು ಸಾಲು ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಸೋತಿತ್ತು. ಆದರೆ ಈಗ ಬಂಪರ್ ಆಫರ್‌ಗಳು ಪೂಜಾಗೆ ಅರಸಿ ಬರುತ್ತಿವೆ. ಇದೀಗ ನಟ ವಿಜಯ್ ದೇವರಕೊಂಡ ಚಿತ್ರಕ್ಕೆ ನಾಯಕಿಯಾಗಿ ಪೂಜಾ ಹೆಗ್ಡೆ ಆಯ್ಕೆಯಾಗಿದ್ದಾರೆ.

    ಬ್ಯೂಟಿ ಜತೆ ಟ್ಯಾಲೆಂಟ್‌ಯಿರೋ ಪ್ರತಿಭಾವಂತ ಪೂಜಾ, ಬೊಟ್ಟಬೊಮ್ಮ ಆಗಿ ಸೂಪರ್ ಸಕ್ಸಸ್ ಕಂಡಿದ್ರು. ಅದ್ಯಾಕೋ ಅವರಿಗೆ ಲಕ್ಕು ಕೈ ಕೊಟ್ಟಂತಿದೆ. ಇತ್ತೀಚಿಗೆ ನಟಿಸಿದ `ರಾಧೆ ಶ್ಯಾಮ್’,`ಬೀಸ್ಟ್’ ಮತ್ತು `ಆಚಾರ್ಯ’ ಚಿತ್ರಗಳು ಗಲ್ಲಾಪೆಟ್ಟಿಗೆ ಕಲೆಕ್ಷನ್ ಮಾಡೋದ್ರರಲ್ಲಿ ಸೋತಿದೆ. ಆದರೂ ಪೂಜಾಗೆ ಭರ್ಜರಿ ಆಫರ್‌ಗಳು ಅರಸಿ ಬರುತ್ತಿದೆ. ಇದೀಗ ನಟ ವಿಜಯ್ ದೇವರಕೊಂಡ ಜತೆ ರೊಮ್ಯಾನ್ಸ್ ಮಾಡಲು ಪೂಜಾ ರೆಡಿಯಾಗಿದ್ದಾರೆ.

    ಪೂಜಾ ಹೆಗ್ಡೆ ನಟಿಸಿರೋ ಚಿತ್ರಗಳು ಸೋಲು ಕಂಡಿವೆ ಆದರೂ ಅವರ ಡಿಮ್ಯಾಂಡ್ ಎನು ಕಮ್ಮಿಲ್ಲ ಆಗಿಲ್ಲ. ಸಿನಿಮಂದಿ ಈ ನಟಿಯನ್ನ ಐರೆನ್ ಲೆಗ್ ಅಂತಾ ಕರೀತಾ ಇದ್ರು. ನಿರ್ಮಾಪಕರು ಕ್ಯಾರೆ ಎನ್ನದೇ ಪೂಜಾನೇ ಬೇಕು ಅಂತಾ ಅಫರ್ ಮಾಡಿದ್ದಾರೆ. ವಿಜಯ್ ದೇವರಕೊಂಡ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್ ಚಿತ್ರ `ಜನಗಣಮನ’ ಸಿನಿಮಾಗೆ ನಾಯಕಿಯಾಗಿ ಪೂಜಾ ಅವರನ್ನೇ ಫೈನಲ್ ಮಾಡಲಾಗಿದೆ. ಇದನ್ನೂ ಓದಿ: ಡಾಲಿ-ಅದಿತಿ ನಟನೆಯ `ಜಮಾಲಿಗುಡ್ಡ’ ಚಿತ್ರದ ಡಬ್ಬಿಂಗ್ ಸ್ಟಾರ್ಟ್

    `ಜನಗಣಮನ’ ಚಿತ್ರ ಇತ್ತೀಚೆಗಷ್ಟೇ ಲಾಂಚ್ ಆಗಿದ್ದು, ಚಿತ್ರಕ್ಕೆ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಚಾರ್ಮಿ ಕೌರ್ ಪ್ರೋಡಕ್ಷನ್‌ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ವಿಜಯ್ ಆರ್ಮಿ ಆಫೀಸರ್ ಪಾತ್ರದಲ್ಲಿ ನಟಿಸಲಿದ್ದಾರೆ. ಸಾಲು ಸಾಲು ಸೋಲುಗಳನ್ನೇ ಕಂಡಿರೋ ಪೂಜಾಗೆ ಈ ಪ್ರಾಜೆಕ್ಟ್ನಿಂದ ಲಕ್ ಬದಲಾಗುತ್ತಾ ಅಂತಾ ಕಾದು ನೋಡಬೇಕಿದೆ.

  • ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    ಕಿರುತೆರೆಯಲ್ಲಿ ರವಿಚಂದ್ರನ್ ಎಂದೇ ಖ್ಯಾತರಾಗಿರುವ ರವಿಕಿರಣ್ ಅವರ ಪುತ್ರ ಪ್ರೇಮ್ ಕಿರಣ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಹೆಸರಾಂತ ನಿರ್ದೇಶಕರಾ ಆರ್.ಜಿವಿ ಮತ್ತು ಪೂರಿ ಜಗನ್ನಾಥ್ ಗರಡಿಯಲ್ಲಿ ಪಳಗಿರುವ ರವಿವರ್ಮಾ ನಿರ್ದೇಶನದ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದ್ದು, ಈ ಚಿತ್ರಕ್ಕೆ ಸ್ವತಃ ರವಿಕಿರಣ್ ಅವರೇ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಚಿತ್ರಕ್ಕೆ ಟಾರ್ಗೆಟ್ ಎಂದು ಹೆಸರಿಡಲಾಗಿದ್ದು, ಇವತ್ತಿನ ಯುವ ಸಮುದಾಯದ ಸುತ್ತ ಹೆಣೆದಿರುವ ಕಥೆ ಚಿತ್ರದಲ್ಲಿದೆ. ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣವಾಗಲಿದೆ. ಇದನ್ನೂ ಓದಿ : ಚಕ್ಡಾ ಎಕ್ಸ್ ಪ್ರೆಸ್ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್

    ಪ್ರೇಮ್ ಕಿರಣ್ ಜತೆ ವಿಜಯ್ ಕಾರ್ತಿಕ್ ಹಾಗೂ ಸಚಿನ್ ಪುರೋಹಿತ್ ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಮೇಘಶ್ರೀ ಹಾಗೂ ಸಹರ್ ಕೃಷ್ಣನ್ ನಾಯಕಿಯರು. ನಿರ್ದೇಶಕರ ಚೊಚ್ಚಲು ಸಿನಿಮಾ ಇದಾಗಿದ್ದರೂ, ಈಗಾಗಲೇ ಅವರು ಹಲವು ವೆಬ್ ಸೀರಿಸ್ ಗಳಿಗೂ ನಿರ್ದೇಶನ ಮಾಡಿದ ಅನುಭವವಿದೆ. ಈ ಕುರಿತು ಮಾತನಾಡಿದ ನಿರ್ದೇಶಕರು, “ಈಗ ಕೈಗೆತ್ತಿಕೊಂಡಿರುವ ಕಾನ್ಸೆಪ್ಟ್ ಇದುವರೆಗೆ ಬಂದಿಲ್ಲವೆಂದೇ ಹೇಳಬಹುದು, ಈಗಿನ ಜನರೇಷನ್ ಯಾವ ರೀತಿ ಸಾಗುತ್ತಿದೆ, ಹೆಣ್ಣುಮಕ್ಕಳ ಮೇಲೆ ಹೇಗೆ ನಿತ್ಯವೂ ದೌರ್ಜನ್ಯ ನಡೆಯುತ್ತಿದೆ, ಹೆಣ್ಣಿನ ಮೇಲೆ ಚಿಕ್ಕ ವಯಸಿನಲ್ಲಿ ನಡೆದ ಶೋಷಣೆ ಮುಂದೆ ಯಾವರೀತಿ ಪ್ರಭಾವ ಬೀರುತ್ತದೆ ಎಂದು ಈ ಚಿತ್ರದ ಮೂಲಕ ಹೇಳಹೊರಟಿದ್ದೇನೆ. ಲವ್‌ಸ್ಟೋರಿ, ಮರ್ಡರ್ ಮಿಸ್ಟರಿ ಕೂಡ ಟಾರ್ಗೆಟ್ ಚಿತ್ರದಲ್ಲಿದೆ” ಎಂದರು.

  • ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್

    ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್

    ಚೆನ್ನೈ: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಸಿನಿಮಾಗೆ ಅಮೆರಿಕನ್ ಮಾಜಿ ಬಾಕ್ಸರ್ ಮೈಕ್ ಟೈಸನ್ ಅಭಿನಯಿಸುವುದರ ಮೂಲಕ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

    ಐರನ್ ಮೈಕ್ ಅಥವಾ ಕಿಡ್ ಡೈನಮೈಟ್ ಎಂದೇ ಪ್ರಸಿದ್ಧಿ ಹೊಂದಿರುವ ಮೈಕ್ ಟೈಸನ್ ಟಾಲಿವುಡ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರಲ್ಲಿಯೂ ವಿಜಯ್ ದೇವರಕೊಂಡ ಅವರ ‘ಲೈಗರ್’ ಸಿನಿಮಾದಲ್ಲಿ ಎಂಬುದು ವಿಶೇಷವಾಗಿದೆ.

    ಈ ಕುರಿತು ವಿಜಯ್ ತಮ್ಮ ಟ್ವಿಟ್ಟರ್ ನಲ್ಲಿ, ನಿಮಗೆ ಭರವಸೆಯನ್ನು ನೀಡಿದ್ದೆವು. ಅದರಂತೆ ಇಂದು ನಾವು ಪ್ರಾರಂಭಿಸಿದ್ದೇವೆ. ಭಾರತೀಯ ಪರದೆಯಲ್ಲಿ ಮೊದಲ ‘ಲೈಗರ್’ ಸಿನಿಮಾದಲ್ಲಿ ಗಾಡ್ ಆಫ್ ಬಾಕ್ಸಿಂಗ್, ದಿ ಲೆಜೆಂಡ್, ದಿ ಬೀಸ್ಟ್, ದಿ ಗ್ರೇಟೆಸ್ಟ್ ಆಲ್ ಟೈಮ್ ಐರನ್ ಮೈಕ್ ಟೈಸನ್’ ಎಂದು ಬರೆದು ಟ್ವೀಟ್ ಮಾಡುವ ಮೂಲಕ ಗಾಡ್ ಆಫ್ ಬಾಕ್ಸಿಂಗ್ ನನ್ನು ಭಾರತೀಯ ಪರದೆಯ ಮೇಲೆ ತರುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಅದು ಅಲ್ಲದೇ ವಿಜಯ್ ಈ ಸಿನಿಮಾದಲ್ಲಿ ಎಂಎಂಎ ಫೈಟರ್ ಆಗಿ ಕಾಣಿಸಿಕೊಳ್ಳುತ್ತಿದ್ದು., ಇದರಲ್ಲಿ ಮೈಕ್ ಯಾವ ರೀತಿಯ ಪಾತ್ರದಲ್ಲಿ ನಟಿಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

    ಪ್ರಸ್ತುತ ‘ಲೈಗರ್’ ಚಿತ್ರೀಕರಣ ಗೋವಾದಲ್ಲಿ ನಡೆಯುತ್ತಿದೆ. ಈ ಸಿನಿಮಾದ 65% ಚಿತ್ರೀಕರಣ ಮುಗಿದಿದೆ ಎಂದು ತಂಡ ತಿಳಿಸಿದೆ. ಈ ಚಿತ್ರವನ್ನು ಓಟಿಟಿಯಲ್ಲಿ ಬಿಡುತ್ತಾರೆ ಎಂದು ಕೆಲವರು ಊಹೆಗಳನ್ನು ಮಾಡಿದ್ದರು. ಅದಕ್ಕೆ ಚಿತ್ರತಂಡ ನಮ್ಮ ಸಿನಿಮಾ ಚಿತ್ರಮಂದಿರದಲ್ಲೇ ಬಿಡುಗಡೆಯಾಗುತ್ತೆ ಎಂದು ಹೇಳುವ ಮೂಲಕ ಎಲ್ಲದಕ್ಕೂ ತೆರೆ ಎಳೆದಿದ್ದರು. ಇದನ್ನೂ ಓದಿ:   ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

    ಈ ಚಿತ್ರ ಹಿಂದಿ ಮತ್ತು ತೆಲುಗು ಸೇರಿದಂತೆ 5 ಭಾಷೆಗಳಲ್ಲಿ ತೆರೆ ಕಾಣಲಿದೆ. ರಮ್ಯಾ ಕೃಷ್ಣನ್, ಮಕರಂದ್ ದೇಶಪಾಂಡೆ ಮತ್ತು ರೋನಿತ್ ರಾಯ್ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳುತ್ತಿದ್ದು, ತೆಲುಗಿನ ನಟಿ ಚಾರ್ಮಿ, ಕರಣ್ ಜೋಹರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  • ಬಿಟೌನ್ ಸುಂದರಿ ಜೊತೆ ವಿಜಯ್ ದೇವರಕೊಂಡ ರೊಮ್ಯಾನ್ಸ್

    ಬಿಟೌನ್ ಸುಂದರಿ ಜೊತೆ ವಿಜಯ್ ದೇವರಕೊಂಡ ರೊಮ್ಯಾನ್ಸ್

    ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಬಾಲಿವುಡ್ ನಟಿಯೊಂದಿಗೆ ರೊಮ್ಯಾನ್ಸ್ ಮಾಡಲಿದ್ದು, ನಟಿಯೊಂದಿಗೆ ವಿಜಯ್ ಇರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಸದ್ಯ ವಿಜಯ್ ಹಾಗೂ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್‍ನಲ್ಲಿ ಸಿನಿಮಾವೊಂದು ಸೆಟ್ಟೇರಿರುವುದು ಗೊತ್ತಿರುವ ವಿಷಯ. ಆದರೆ ಈಗ ಈ ಸಿನಿಮಾಗೆ ನಾಯಕಿ ಫಿಕ್ಸ್ ಆಗಿದ್ದಾರೆ. ‘ಸ್ಟುಡೆಂಟ್ ಆಫ್ ದಿ ಇಯರ್ 2’ ಸಿನಿಮಾದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟ ಅನನ್ಯಾ ಪಾಂಡೆ ವಿಜಯ್ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಜಯ್, ಅನನ್ಯಾ ಸಿನಿಮಾ ತಂಡದ ಜೊತೆಗಿರುವ ಫೋಟೋಗಳು ಸದ್ಯ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.

    ವಿಜಯ್ ಹಾಗೂ ಪೂರಿ ಕಾಂಬಿನೇಷನ್‍ನಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ‘ಫೈಟರ್’ ಎಂದು ಹೆಸರಿಡಲಾಗಿದ್ದು, ಈ ಚಿತ್ರ ಹಿಂದಿ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಗೊಳ್ಳಲಿದೆ. ‘ಫೈಟರ್’ ಚಿತ್ರವನ್ನು ಬಾಲಿವುಡ್‍ನಲ್ಲಿ ಕರಣ್ ಜೋಹರ್ ನಿರ್ಮಿಸುತ್ತಿದ್ದು, ತೆಲುಗಿನಲ್ಲಿ ಪೂರಿ ಜಗನ್ನಾಥ್ ಹಾಗೂ ನಟಿ ಚಾರ್ಮಿ ಹಣ ಹೂಡಿದ್ದಾರೆ.

    https://www.instagram.com/p/B8xwjk7hmFd/

    ಈ ಹಿಂದೆ ‘ಫೈಟರ್’ ಚಿತ್ರದಲ್ಲಿ ವಿಜಯ್‍ಗೆ ಜಾಹ್ನವಿ ಕಪೂರ್ ಜೋಡಿಯಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಕೊನೆಗೆ ಅನನ್ಯಾರನ್ನು ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿದ್ದು, ಚಿತ್ರದಲ್ಲಿ ವಿಜಯ್‍ಗೆ ಅನನ್ಯಾ ಸಾಥ್ ಕೊಡಲಿದ್ದಾರೆ.

    ಈ ಚಿತ್ರದಲ್ಲಿ ಬಾಕ್ಸ್‌ರ್‌ ಆಗಿ ವಿಜಯ್ ಅಭಿನಯಿಸಲಿದ್ದು, ಇದಕ್ಕಾಗಿ ಸದ್ಯ ನಟ ಟ್ರೈನಿಂಗ್ ತೆಗೆದುಕೊಳ್ಳುತ್ತಿದ್ದಾರೆ. ಸದ್ಯ ವಿಜಯ್ ನಟನೆಯ ‘ಡಿಯರ್ ಕಾಮ್ರೇಡ್’ ಹಾಗೂ ‘ವರ್ಲ್ಡ್ ಫೇಮಸ್ ಲವ್ವರ್’ ಸಿನಿಮಾ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಆದರೆ ಫೈಟರ್ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ಚಿತ್ರವಾದರೂ ವಿಜಯ್‍ಗೆ ಯಶಸ್ಸು ತಂದುಕೊಡುತ್ತಾ ಎಂದು ಕಾದು ನೋಡಬೇಕಿದೆ.