Tag: ಪೃಥ್ವಿ ಶಾಮನೂರು

  • ವೋಟ್‌ ಮಾಡಿದ ಸ್ಯಾಂಡಲ್‌ವುಡ್ ತಾರೆಯರು

    ವೋಟ್‌ ಮಾಡಿದ ಸ್ಯಾಂಡಲ್‌ವುಡ್ ತಾರೆಯರು

    ರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ಇಂದು (ಮೇ.7) (Lokasabha Election 2024) ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ತಾರೆಯರು (Sandalwood Actors) ಕೂಡ ಮತ (Vote) ಚಲಾಯಿಸುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಇದನ್ನೂ ಓದಿ:ದರ್ಶನ್ ಫ್ಯಾನ್ಸ್ ಗೆ ಭರ್ಜರಿ ನ್ಯೂಸ್: ಮೇ 10ಕ್ಕೆ ‘ಡೆವಿಲ್’ ಮೇಕಿಂಗ್ ವಿಡಿಯೋ ರಿಲೀಸ್

    ‘ಪದವಿ ಪೂರ್ವ’ (Padavi Poorva) ಸಿನಿಮಾದ ನಟ ಪೃಥ್ವಿ ಶಾಮನೂರು (Pruthvi Shamanur)  ಅವರು ತಮ್ಮ ಕುಟುಂಬದ ಜೊತೆ ದಾವಣಗೆರೆಯಲ್ಲಿ ವೋಟ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಟಿ ಶ್ವೇತಾ ಆರ್.‌ ಪ್ರಸಾದ್‌ ವೋಟ್‌ ಮಾಡಿದ್ದು, ಅಭಿಮಾನಿಗಳಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

     

    View this post on Instagram

     

    A post shared by BC Patil (@bcpatilkourava)

    ಸ್ಯಾಂಡಲ್‌ವುಡ್ ನಟ ಬಿ.ಸಿ ಪಾಟೀಲ್ (B.c Patil) ಅವರು ಕೂಡ ತಮ್ಮ ಕುಟುಂಬದ ಜೊತೆ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಮೇ.7) ಕುಟುಂಬ ಸಮೇತವಾಗಿ ಹಿರೇಕೆರೂರಿನ ಬಾಳಂಬೀಡ ಗ್ರಾಮದ ಮತಗಟ್ಟೆಗೆ ತೆರಳಿ ಮತ ಚಲಾಯಿಸಲಾಯಿತು ಎಂದು ನಟ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ನಟಿ ಸೃಷ್ಟಿ ಪಾಟೀಲ್ (Shrusti Patil) ಅವರು ಹಿರೇಕೆರೂರಿನ ಬಾಳಂಬೀಡ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಎಲ್ಲರೂ ಮತದಾನ ಎಂದು ನಟಿ ಮನವಿ ಮಾಡಿದ್ದಾರೆ.

  • ಮೊದಲ ಹಂತದ ಶೂಟಿಂಗ್ ಮುಗಿಸಿದ ‘ಉಡಾಳ’ ಪೃಥ್ವಿ ಶಾಮನೂರು

    ಮೊದಲ ಹಂತದ ಶೂಟಿಂಗ್ ಮುಗಿಸಿದ ‘ಉಡಾಳ’ ಪೃಥ್ವಿ ಶಾಮನೂರು

    ಈ  ಹಿಂದೆ ‘ಪದವಿ ಪೂರ್ವ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು (Pruthvi Shamanur) ಇದೀಗ ಉಡಾಳ (Udala) ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಚಿತ್ರಕ್ಕೆ ಮುಹೂರ್ತವಾಗಿತ್ತು. ನಂತರ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದೆ. ಈ ಕುರಿತಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ಪೃಥ್ವಿ.

    ಯೋಗರಾಜ್ ಭಟ್ (Yogaraj Bhatt) ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್  (Hrithik Srinivas)ಅಭಿನಯಿಸುತ್ತಿದ್ದಾರೆ.

    ಈ ಚಿತ್ರದ ನಿರ್ದೇಶಕ ಅಮೋಲ್ ಪಾಟೀಲ್, ಯೋಗರಾಜ್ ಭಟ್ ಜೊತೆಗೆ ಬಹಳ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಉತ್ತರ ಕರ್ನಾಟಕದ ವಿಜಾಪುರದ ಹುಡುಗ. ಚೆನ್ನಾಗಿ ಓದಿಕೊಂಡಿದ್ದಾರೆ. ಇವರಿಗೆ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನ ಚಿತ್ರ ಮಾಡಬೇಕೆಂಬ ಆಸೆ ಮೊದಲಿಂದಲೂ ಇತ್ತು. ಈಗ ಕಾಲ ಕೂಡಿ ಬಂದಿದೆ.‌

     

    ಉಡಾಳ ಪಕ್ಕ ಉತ್ತರ ಕರ್ನಾಟಕದ ಶೈಲಿಯ ಚಿತ್ರ. ವಿಜಾಪುರದಲ್ಲಿ ಚಿತ್ರೀಕರಣ ಆರಂಭವಾಗಿದೆ. ಹೆಚ್ಚಿನ ಚಿತ್ರೀಕರಣ ಅಲ್ಲೇ ನಡೆಯಲಿದೆ. ಉಡಾಳನಾಗಿ ಪೃಥ್ವಿ  ಶಾಮನೂರು ಅಭಿನಯಿಸುತ್ತಿದ್ದಾರೆ.  ವಿಜಾಪುರದಲ್ಲಿ ಟೂರಿಸ್ಟ್ ಗೈಡ್ ಆಗಿ ಪಕ್ಯ ಎಂಬ ಪಾತ್ರದಲ್ಲಿ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಹೃತಿಕ ಶ್ರೀನಿವಾಸ್ ಉಡಾಳನ ನಾಯಕಿ.

  • ಭಟ್ಟರ ಕನಸಿನಂತೆ ‘ಉಡಾಳ’ನಾದ ನಟ ಪೃಥ್ವಿ ಶಾಮನೂರು

    ಭಟ್ಟರ ಕನಸಿನಂತೆ ‘ಉಡಾಳ’ನಾದ ನಟ ಪೃಥ್ವಿ ಶಾಮನೂರು

    ರಡು ವರ್ಷಗಳ ಹಿಂದೆ ‘ಪದವಿ ಪೂರ್ವ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು (Pruthvi Shamanur) ಅಭಿನಯದ ನೂತನ ಚಿತ್ರದ ಶೀರ್ಷಿಕೆಯನ್ನು ನಟ ರಾಕ್ಷಸ ಡಾಲಿ  ಧನಂಜಯ ಬಿಡುಗಡೆ ಮಾಡಿದರು. ಈ ಚಿತ್ರಕ್ಕೆ ‘ಉಡಾಳ’ (Udala) ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ (Yogaraj Bhatt) ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ.

    ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಮಾತನಾಡಿದ ಡಾಲಿ ಧನಂಜಯ, ಚಿತ್ರರಂಗಕ್ಕೆ ಯೋಗರಾಜ್ ಭಟ್ ಅವರ ಕೊಡುಗೆ ಅಪಾರ. ನಮ್ಮ ಸಂಸ್ಥೆಯ ಮೊದಲ ಚಿತ್ರ “ಬಡವ ರಾಸ್ಕಲ್” ಶೀರ್ಷಿಕೆ ಕೊಟ್ಟವರು ಅವರೆ. ಇನ್ನು ಪೃಥ್ವಿ ಶಾಮನೂರು ಒಳ್ಳೆಯ ಲವಲವಿಕೆ ಹುಡುಗ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

    ಈ ಚಿತ್ರದ ನಿರ್ದೇಶಕ ಅಮೋಲ್ ಪಾಟೀಲ್, ನನ್ನ ಜೊತೆಗೆ ಬಹಳ ಚಿತ್ರಗಳಿಗೆ ಕೆಲಸ ಮಾಡಿದ್ದಾನೆ. ಉತ್ತರ ಕರ್ನಾಟಕದ ವಿಜಾಪುರದ ಹುಡುಗ. ಚೆನ್ನಾಗಿ ಓದಿಕೊಂಡಿದ್ದಾನೆ. ಆತನಿಗೆ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನ ಚಿತ್ರ ಮಾಡಬೇಕೆಂಬ ಆಸೆ ಮೊದಲಿಂದಲೂ ಇತ್ತು. ಈಗ ಕಾಲ ಕೂಡಿ ಬಂದಿದೆ.‌  ಈ ಚಿತ್ರವನ್ನು ನಮ್ಮೊಟ್ಟಿಗೆ ನಿರ್ಮಾಣ ಮಾಡಲು ರವಿ ಶಾಮನೂರು ಮುಂದಾಗಿದ್ದಾರೆ.  ಉಡಾಳ ಶೀರ್ಷಿಕೆ ಪೃಥ್ವಿ ಗೆ ನಿಜಕ್ಕೂ ಸರಿ ಹೊಂದುತ್ತದೆ ಎಂದು ಯೋಗರಾಜ್ ಭಟ್ ತಿಳಿಸಿದರು.

    ನನಗೆ ಈ ಅವಕಾಶ ನೀಡಿರುವ ಗುರುಗಳಾದ ಯೋಗರಾಜ್ ಭಟ್ ಅವರಿಗೆ ಹಾಗೂ ರವಿ ಶಾಮನೂರು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತು ಆರಂಭಿಸಿದ ನಿರ್ದೇಶಕ ಅಮೋಲ್ ಪಾಟೀಲ್, ಉಡಾಳ ಪಕ್ಕ ಉತ್ತರ ಕರ್ನಾಟಕದ ಶೈಲಿಯ ಚಿತ್ರ. ಈ ತಿಂಗಳ ಕೊನೆಗೆ ವಿಜಾಪುರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಅಲ್ಲೇ ನಡೆಯಲಿದೆ. ಉಡಾಳನಾಗಿ ಪೃಥ್ವಿ  ಶಾಮನೂರು ಅಭಿನಯಿಸುತ್ತಿದ್ದಾರೆ.  ವಿಜಾಪುರದಲ್ಲಿ ಟೂರಿಸ್ಟ್ ಗೈಡ್ ಆಗಿ ಪಕ್ಯ ಎಂಬ ಪಾತ್ರದಲ್ಲಿ ಪೃಥ್ವಿ ಕಾಣಿಸಿಕೊಳ್ಳಲಿದ್ದಾರೆ. ಹೃತಿಕ ಶ್ರೀನಿವಾಸ್ ಉಡಾಳನ ನಾಯಕಿ. ಒಳ್ಳೆಯ ತಂಡ ನನ್ನೊಂದಿಗಿದೆ. ಉಡಾಳ ಎಲ್ಲರೂ ಮೆಚ್ಚುವ  ಒಳ್ಳೆಯ ಚಿತ್ರವಾಗಲಿದೆ ಎಂದರು.

    ನನ್ನ ಹಿಂದಿನ ಚಿತ್ರಕ್ಕೆ ನೀವು ನೀಡಿದ ಬೆಂಬಲಕ್ಕೆ ಚಿರಋಣಿ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಧನಂಜಯ ಅವರಿಗೆ, ಅವಕಾಶ ನೀಡಿದ ಯೋಗರಾಜ್ ಸರ್, ನಿರ್ದೇಶಕರಿಗೆ ಹಾಗೂ ನನ್ನ ತಂದೆ ರವಿ ಶಾಮನೂರು ಅವರಿಗೆ ವಿಶೇಷ ಧನ್ಯವಾದ. ಈ ಚಿತ್ರದಲ್ಲಿ ನಂದು ಪಕ್ಕಾ “ಉಡಾಳ” ನ ಪಾತ್ರ ಎಂದು ನಾಯಕ ಪೃಥ್ವಿ ಶಾಮನೂರು ತಿಳಿಸಿದರು.  ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಹೃತಿಕ ಶ್ರೀನಿವಾಸ್.

     

    ನಾನು ಯೋಗರಾಜ್ ಭಟ್ ಅವರ ಜೊತೆ ಸೇರಿ ನಿರ್ಮಿಸುತ್ತಿರುವ ಎರಡನೇಯ ಚಿತ್ರವಿದು.  ಅವಕಾಶ ನೀಡಿದ ಯೋಗರಾಜ್ ಭಟ್ ಅವರಿಗೆ ಧನ್ಯವಾದ. ಮುಂದೆ ವರ್ಷಕ್ಕೆ ಒಂದು ಚಿತ್ರವನ್ನು ನಿರ್ಮಾಣ ಮಾಡುವ ಆಸೆ ಇದೆ ಎಂದರು ನಿರ್ಮಾಪಕ ರವಿ ಶಾಮನೂರು. ಸಂಗೀತ ನಿರ್ದೇಶಕ ಚೇತನ್ ಹಾಗೂ ಛಾಯಾಗ್ರಾಹಕ ಶಿವಶಂಕರ್ ನೂರಂಬಡ ಉಡಾಳ ಚಿತ್ರದ ಕುರಿತು ಮಾತನಾಡಿದರು.

  • ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ‘ಪದವಿಪೂರ್ವ’ ಚಿತ್ರತಂಡ

    ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ‘ಪದವಿಪೂರ್ವ’ ಚಿತ್ರತಂಡ

    ರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಪದವಿಪೂರ್ವ’ ಸಿನಿಮಾ ಇನ್ನೂ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ನಿರ್ಮಾಣ ಸಂಸ್ಥೆ ಇದೇ ನಿರ್ದೇಶಕರೊಡನೆ ಮತ್ತೊಂದು ಚಿತ್ರ ಅನೌನ್ಸ್ ಮಾಡಿದೆ. ಹೌದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದ ನಡುವೆ ಸಿನಿಮಾ ವೀಕ್ಷಣೆ ಮಾಡಿರುವ ನಿರ್ಮಾಪಕರಲ್ಲೊಬ್ಬರಾದ ವಿಕಟಕವಿ ಯೋಗರಾಜ್ ಭಟ್ಟರು, ತಮ್ಮ ತಂಡದ ನೆಚ್ಚಿನ ಸದಸ್ಯ, ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ತಯಾರಾಗಿದ್ದಾರೆ ಎನ್ನಲಾಗಿದೆ. ಸಿನಿಮಾದ ಮತ್ತೊಬ್ಬ ನಿರ್ಮಾಪಕರಾದ ರವಿ ಶಾಮನೂರ್ ಅವರೂ ಸಹ ಭಟ್ಟರ ನಿರ್ಮಾಣ ಸಂಸ್ಥೆಯೊಡನೆ ಮತ್ತೊಮ್ಮೆ ಸಹಭಾಗಿತ್ವ ವಹಿಸಲು ಖುಷಿಯಿಂದ ಒಪ್ಪಿಕೊಂಡಿದ್ದಾರಂತೆ.

    ಅಕ್ಟೋಬರ್ ತಿಂಗಳಿನಲ್ಲಿ ಸೆಟ್ಟೇರಲಿರುವ ಈ ಹೊಸ ಚಿತ್ರಕ್ಕೂ ‘ಪದವಿಪೂರ್ವ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ ಯುವ ನಟ ಪೃಥ್ವಿ ಶಾಮನೂರ್ ಅವರೇ ನಾಯಕನಾಗಿ ಮುಂದುವರೆಯಲಿದ್ದಾರೆ. ಪೃಥ್ವಿ ಈಗಾಗಲೇ ಯೋಗರಾಜ್ ಭಟ್ಟರ ಮುಂಬರಲಿರುವ ‘ಗರಡಿ’ ಸಿನಿಮಾದಲ್ಲೂ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಭಟ್ಟರ ಕ್ಯಾಂಪ್‌ನಲ್ಲಿ ಸತತವಾಗಿ ಅವಕಾಶ ಗಿಟ್ಟಿಸುವುದು ಅಷ್ಟು ಸುಲಭದ ಮಾತಲ್ಲ. ತನ್ನ ಅಸಾಧಾರಣ ಪ್ರತಿಭೆಯಿಂದ ಭಟ್ಟರನ್ನು ಹಾಗೂ ತಂಡವನ್ನು ಮೋಡಿ ಮಾಡಿರುವ ಈ ಯುವ ನಟನ ಅಭಿನಯ ಕೌಶಲ್ಯಕ್ಕೆ ನಮ್ಮದೊಂದು ಸಲಾಂ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

    ಚಿತ್ರತಂಡ ಈ ಬಾರಿಯೂ ಮತ್ತಷ್ಟು ಹೊಸ ಪ್ರತಿಭೆಗಳ ಹುಡುಕಾಟ ನಡೆಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಆಡಿಶನ್ ಮೂಲಕ ಅಪ್ಪಟ ದೇಸಿ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇನ್ನುಳಿದಂತೆ ‘ಪದವಿಪೂರ್ವ’ ಚಿತ್ರಕ್ಕಾಗಿ ದುಡಿದಿದ್ದ ಉತ್ಸಾಹಿ ಯುವ ತಂತ್ರಜ್ಞರ ತಂಡದ ಬಹುತೇಕ ಸದಸ್ಯರೇ ಸೆಟ್ಟೇರಲಿರುವ ಹೊಸ ಸಿನಿಮಾದಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ ಎಂದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ತಿಳಿಸಿದ್ದಾರೆ.

    Live Tv