Tag: ಪೆನ್‍ಡ್ರೈವ್ ಪ್ರಕರಣ

  • ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

    ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

    – ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ
    – ಪೆನ್‌ಡ್ರೈವ್‌ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದ ವಕೀಲ

    ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ವಕೀಲ ದೇವರಾಜೇಗೌಡ ಭೇಟಿಯಾಗಿ ಪೆನ್‌ಡ್ರೈವ್‌ ಪ್ರಕರಣ (Pen Drive ) ಸಂಬಂಧ ಮಾತುಕತೆ ನಡೆಸಿದ್ದಾರೆ.

    ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ದೇವರಾಜೇಗೌಡ ಮೊದಲ ಬಾರಿಗೆ ಹೆಚ್‌ಡಿಕೆ (H.D.Kumaraswamy) ಭೇಟಿಯಾಗಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ – ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌

    ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ. ರೇವಣ್ಣ ವಿರುದ್ಧ ಅಲ್ಲ, ಬದಲಿಗೆ ಅವರ ಕೆಟ್ಟ ಗುಣಗಳ ವಿರುದ್ಧ ಹೋರಾಟ ಮಾಡಿದ್ದೆ. ಈಗ ರೇವಣ್ಣ ಅವರಿಗೂ ಪಶ್ಚತಾಪ ಆಗಿದೆ. ಸಾರ್ವಜನಿಕವಾಗಿ ಮರ್ಯಾದೆ ಹೋಗಿದೆ ಎಂದಿದ್ದಾರೆ. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ

    ಎಸ್‌ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಯಾರು ಪನ್‌ಡ್ರೈವ್ ಹಂಚಿಕೆ ಮಾಡಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಇದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ಖಾಸಗಿ ತನಿಖೆಯೂ ಆಗಿದೆ, ಅದರಲ್ಲಿ ಪೆನ್‌ಡ್ರೈವ್ ಹಂಚಿಕೆಯಲ್ಲಿ ಯಾರ ಪಾತ್ರ ಇದೆ ಎಂದು ತಿಳಿದಿದೆ ಎಂದು ವಿವರಿಸಿದ್ದಾರೆ.

  • ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ

    ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ

    ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಪ್ರಕರಣಗಳ ಸಂಬಂಧ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಮಧ್ಯೆ ಸದ್ಯ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುವ ಆತಂಕದ ನಡುವೆ ಒಂದು ವಿಚಾರವಾಗಿ ಕೊಂಚ ರಿಲೀಫ್ ಸಿಕ್ಕಿದೆ.

    ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ಬೆನ್ನಲ್ಲೇ ಮಹಿಳಾ ಆಯೋಗ ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (Commission for Protection of Child Rights) ಕೂಡ ಎಂಟ್ರಿ ಕೊಟ್ಟಿತ್ತು. ಒಂದು ಕಡೆ ಪ್ರಕರಣದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ಮಹಿಳೆಯರ ಪರವಾಗಿ ಮಹಿಳಾ ಆಯೋಗ ಫೀಲ್ಡಿಗೆ ಇಳಿದಿದ್ದರೆ, ಮತ್ತೊಂದು ಕಡೆ ಪ್ರಕರಣದಲ್ಲಿ ಅಪ್ರಾಪ್ತೆಯರು ಕೂಡ ಸಿಲುಕಿರಬಹುದು ಅನ್ನೋ ಅನುಮಾನ ಕೂಡ ಮಕ್ಕಳ ರಕ್ಷಣಾ ಆಯೋಗಕ್ಕೆ ಶುರುವಾಗಿತ್ತು. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

    ಈ ಬೆನ್ನಲ್ಲೇ ಅಲರ್ಟ್ ಆದ ಆಯೋಗ, ಕೂಡಲೇ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಈ ಬಗ್ಗೆ ವರದಿ ಕೇಳಿತ್ತು. ಜೊತೆಗೆ ಅಂತಹವರು ಯಾರಾದರೂ ಇದ್ದರೆ ನೇರವಾಗಿ ಆಯೋಗವನ್ನೇ ಸಂಪರ್ಕಿಸುವಂತೆ ಮನವಿ ಕೂಡ ಮಾಡಿತ್ತು. ಆದರೆ ಇಲ್ಲಿಯ ತನಕ ಎಸ್‌ಐಟಿಯಿಂದಲೂ (SIT) ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜೊತೆಗೆ ತೊಂದರೆಗೆ ಒಳಗಾದವರು ಕೂಡ ಮುಂದೆ ಬಂದಿಲ್ಲ. ಹೀಗಾಗಿ ಸದ್ಯ ಪ್ರಕರಣದಲ್ಲಿ ಅಪ್ರಾಪ್ತೆಯರ ಬಳಕೆ ಆಗಿಲ್ಲ ಎಂಬ ನಿರ್ಧಾರಕ್ಕೆ ಆಯೋಗ ಬಂದಿದೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿ ಸರ್ಕಾರ ಆದೇಶ

    ಇನ್ನೂ ಪ್ರಕರಣ ಸಂಬಂಧ ಈಗಲೂ ಕೂಡ ಆಯೋಗ ಮನವಿ ಮಾಡಿದೆ. ಒಂದೊಮ್ಮೆ ಅಂತಹವರು ಯಾರಾದರೂ ಇದ್ದರೆ ಈಗಲೂ ಮುಂದೆ ಬರುವಂತೆ ಮನವಿ ಮಾಡಿದ್ದು, ಸುರಕ್ಷತೆ ಒದಗಿಸುವುದಾಗಿ ತಿಳಿಸಿದ್ದಾರೆ. ಒಟ್ಟಾರೆ ಇಲ್ಲಿ ತನಕ ಪ್ರಕರಣದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ಬಗ್ಗೆ ಅಪ್ರಾಪ್ತೆಯರಾಗಲಿ, ಕುಟುಂಬವಾಗಲಿ ಮುಂದೆ ಬಾರದ ಕಾರಣ ಸದ್ಯ ಅಂತವರು ಯಾರೂ ಇಲ್ಲ ಎಂಬ ಲೆಕ್ಕಾಚಾರಕ್ಕೆ ಆಯೋಗ ಬಂದಿದ್ದು, ಪ್ರಜ್ವಲ್‌ಗೆ ಈ ಪ್ರಕರಣದಲ್ಲಿ ಕೊಂಚ ರಿಲೀಫ್ ನೀಡಲಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಾಸಿವೆ ಕಾಳಿನಷ್ಟೂ ನನ್ನ ಪಾತ್ರ ಇಲ್ಲ: ದದ್ದಲ್

  • ಪೆನ್‍ಡ್ರೈವ್ ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ- ವಿಚಾರಣೆಗೆ ಅಸಹಕಾರ ಮುಂದುವರಿಕೆ

    ಪೆನ್‍ಡ್ರೈವ್ ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ- ವಿಚಾರಣೆಗೆ ಅಸಹಕಾರ ಮುಂದುವರಿಕೆ

    ಬೆಂಗಳೂರು: ಅತ್ಯಾಚಾರ ಕೇಸಲ್ಲಿ ಎಸ್‍ಐಟಿ (SIT) ಅಧಿಕಾರಿಗಳ ಕಸ್ಟಡಿಯಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ತನಿಖೆ ಚುರುಕುಗೊಂಡಿದೆ. ಗುರುವಾರ ಕಸ್ಟಡಿ ಅಂತ್ಯವಾಗಲಿದ್ದು, ಇಂದು ಪ್ರಜ್ವಲ್ ರೇವಣ್ಣಗೆ ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆ ನಡೆಸಲಾಗಿದೆ.

    ಪ್ರಕರಣ ಸಂಬಂಧ ತನಿಖೆ ನಡಸಿರುವ ಅಧಿಕಾರಿಗಳು, ಮೊನ್ನೆಯೇ ಪುರುಷತ್ವ ಪರೀಕ್ಷೆ ಗೆ ಮುಂದಾಗಿದ್ರು. ಆದರೆ ಈ ಪರೀಕ್ಷೆ ನಡೆಸಲು ಕೋರ್ಟ್ ನ ಅನುಮತಿ ಕಡ್ಡಾಯವಾಗಿರೋ ಹಿನ್ನೆಲೆಯಲ್ಲಿ, ನಿನ್ನೆ ಮತ್ತೆ ಕೋರ್ಟ್ ಮೊರೆ ಹೋದ ಅಧಿಕಾರಿಗಳು ಅಗತ್ಯವಿರುವ ಅನುಮತಿ ಪಡೆದಿದ್ರು. ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಶಿವಾಜಿ ವಾಜಪೇಯಿ ವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋದ ಅಧಿಕಾರಿಗಳು ಸಂಜೆ 5 ಗಂಟೆ ತನಕ ಪುರುಷತ್ವ ಪರೀಕ್ಷೆ ಸೇರಿದಂತೆ ತನಿಖೆಗೆ ಅಗತ್ಯ ವಿರುವ ಹಲವು ಪರೀಕ್ಷೆಗಳನ್ನು ನಡೆಸಿದ್ರು.

    ಆರೋಪಿ ಪ್ರಜ್ವಲ್ ರೇವಣ್ಣನನ್ನು 6 ದಿನಗಳಿಂದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಹೈರಾಣಾಗಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಪ್ರಶ್ನೆ ಕೇಳಿದ್ರು ರೆಡಿಮೇಟ್ ಉತ್ತರ ಕೊಡ್ತಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟೆಕ್ನಿಕಲ್ ಆಗಿ ಆರೋಪವನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದು, ಅದರ ಭಾಗವಾಗಿ ಇಂದು ಪುರುಷತ್ವ ಪರೀಕ್ಷೆ ನಡೆಸಿದ್ದಾರೆ. ಸ್ಥಳ ಮಹಜರು ಸೇರಿದಂತೆ ಇನ್ನೂ ಬಹಳಷ್ಟು ಪ್ರಕ್ರಿಯೆಗಳು ಬಾಕಿ ಇದೆ. ಈ ಬೆನ್ನಲ್ಲೇ ನಾಳೆಗೆ ಪ್ರಜ್ವಲ್ ಕಸ್ಟಡಿ ಅಂತ್ಯವಾಗಲಿದ್ದು, ವಿಚಾರಣೆ ವೇಳೆ ಆರೋಪಿಯ ಅಸಹಕಾರ ಬಾಕಿ ಇರುವ ಪ್ರಕ್ರಿಯೆಗಳನ್ನು ಕೋರ್ಟ್ ಗಮನಕ್ಕೆ ತಂದು ಮತ್ತೆ ಕಸ್ಡಡಿಗೆ ಕೇಳಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

    ಒಂದು ವೇಳೆ ಕೋರ್ಟ್ ನಲ್ಲಿ ಮತ್ತೆ ಕಸ್ಟಡಿ ನೀಡದೇ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ರೆ, ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿಯಿದ್ದು ಆ ಪ್ರಕರಣಗಳಲ್ಲಿ ಒಂದರಲ್ಲಿ ಬಂಧನ ಮಾಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.

    ಈ ಮಧ್ಯೆ ಪೆನ್‍ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಕಾರ್ತಿಕ್ ಮತ್ತು ಪುಟ್ಟಿ ಅಲಿಯಾಸ್ ಪುಟ್ಟರಾಜು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ.ಬಂಧನ ಭೀತಿಯಿಂದ ಕಾರ್ತಿಕ್ ಗೌಡ, ಪುಟ್ಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

  • ನಾನು ಹಿಂಗೆಲ್ಲ ಬದುಕಿಲ್ಲ, ಮಲಗಲು ಒಳ್ಳೆ ರೂಮ್ ಕೊಡಿ: ಅಧಿಕಾರಿಗಳೊಂದಿಗೆ ಪ್ರಜ್ವಲ್ ಕಿರಿಕ್!

    ನಾನು ಹಿಂಗೆಲ್ಲ ಬದುಕಿಲ್ಲ, ಮಲಗಲು ಒಳ್ಳೆ ರೂಮ್ ಕೊಡಿ: ಅಧಿಕಾರಿಗಳೊಂದಿಗೆ ಪ್ರಜ್ವಲ್ ಕಿರಿಕ್!

    ಬೆಂಗಳೂರು: ಪೆನ್‌ಡ್ರೈವ್‌ ಕೇಸಲ್ಲಿ ಅರೆಸ್ಟ್ ಆಗಿರೋ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನ (Prajwal Revanna) ವಿಚಾರಣೆಗೆ ಒಳಪಡಿಸಲು ಎಸ್‌ಐಟಿ ನೋಡ್ತಿದೆ. ಆದ್ರೆ, ಅಧಿಕಾರಿಗಳ ಯಾವುದೇ ಪ್ರಶ್ನೆಗೆ ಪ್ರಜ್ವಲ್ ರೇವಣ್ಣ ಉತ್ತರಿಸದೇ ಅಸಹಕಾರ ತೋರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್‌ಐಟಿ (SIT) ಅಧಿಕಾರಿಗಳ ಪ್ರಶ್ನೆಗೆ ಸೂಕ್ತ ಉತ್ತರ ನೀಡದ ಪ್ರಜ್ವಲ್, ಕಿರಿಕ್‌ ತೆಗೆಯುತ್ತಿದ್ದಾರೆ. ವಾಶ್‌ರೂಮ್‌ಗಾಗಿ ಕಿರಿಕ್ ತೆಗೆಯುತ್ತಿದ್ದಾರೆ. ನಾನು ಹಿಂಗೆಲ್ಲ ಬದುಕಿಲ್ಲ ನನಗೆ ಸರಿಯಾದ ಟಾಯ್ಲೆಟ್ ಹಾಗೂ ಮಲಗಲು ರೂಮ್ ಕೊಡಿ ಅಂತಾ ಕಿರಿಕ್ ಮಾಡ್ತಿರೋದಾಗಿ ತಿಳಿದುಬಂದಿದೆ. ಈ ವೇಳೆ ಎಸ್‌ಐಟಿ ಅಧಿಕಾರಿಗಳು ಯಾವುದೇ ಆರೋಪಿಗಳಿಗೂ ರೂಮ್ ಅದೇ ಆಗಿರುತ್ತೆ. ನಿಮ್ಮ ತಂದೆಗೂ ಇದೇ ರೂಮ್ ಕೊಡಲಾಗಿತ್ತು ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

    ಮುಂದುವರಿದು, ಯಾರೋ ಆಗದೇ ಇರೋರು ಮಾಡಿದ್ದಾರೆ. ಇದರಲ್ಲಿ ನನ್ನದು ಏನು ತಪ್ಪಿಲ್ಲ. ನನ್ನ ರಾಜಕೀಯವಾಗಿ ಬೆಳೆಯಬಾರದು ಅಂತ ಸಂಚು ಮಾಡಿದ್ದಾರೆ. ರಾಜಕೀಯವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಎನ್ನುತ್ತಾ ಪ್ರಜ್ವಲ್‌ ಒಂದೇ ಉತ್ತರ ಕೊಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಂ. ಗ್ರಾಮಾಂತರದಲ್ಲಿ ಹೆಚ್ಚಿನ ಭದ್ರತೆ ಒದಗಿಸಿ: ಆಯೋಗಕ್ಕೆ ಡಾ.ಮಂಜುನಾಥ್ ಪತ್ರ

    ಸ್ಥಳ ಮಹಜರಿಗೆ ಸಿದ್ಧತೆ:
    ಕಳೆದ ಎರಡು ದಿನಗಳಿಂದಲೂ ಎಸ್ಪಿ ಸುಮನ ಡಿ. ಪನ್ನೇಕರ್ ನೇತೃತ್ವದಲ್ಲಿ ಎಸ್‌ಐಟಿ ವಿಚಾರಣೆ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ, ಎಸ್‌ಐಟಿಯ ಯಾವುದೇ ಪ್ರಶ್ನೆಗೂ ಸರಿಯಾಗಿ ಉತ್ತರ ನೀಡದೇ ಇರುವ ಕಾರಣ ಸ್ಥಳ ಮಹಜರು ನಡೆಸಲು ಎಸ್‌ಐಟಿ ಅಧಿಕಾರಿಗಳು ಪ್ಲ್ಯಾನ್‌ ಮಾಡಿಕೊಂಡಿದ್ದಾರೆ. ಅಶ್ಲೀಲ ವೀಡಿಯೋ ಚಿತ್ರೀಕರಣ ನಡೆದಿತ್ತು ಎನ್ನಲಾದ ಎಂ.ಪಿ ನಿವಾಸದಲ್ಲಿ ಸ್ಥಳಮಹಜರು ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

    ಈ ಮೊದಲು ಬಳಸ್ತಿದ್ದ ಮೊಬೈಲ್ ಬಗ್ಗೆ ಗುಟ್ಟು ಬಿಟ್ಟುಕೊಡದ ಪ್ರಜ್ವಲ್, ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ. ಈ ಬಗ್ಗೆ ದೂರು ಕೂಡ ಕೊಟ್ಟಿದ್ದೆ, ಈಗ ನನ್ನ ಬಳಿಯಿದ್ದ ಮೊಬೈಲ್‌ನ್ನು ಏರ್‌ಪೊರ್ಟ್‌ನಲ್ಲಿಯೇ ವಶಕ್ಕೆ ತಗೊಂಡ್ರಿ ಅಲ್ವಾ, ನನ್ನ ಬಳಿ ಬೇರೆ ಮೊಬೈಲ್ ಇಲ್ಲ ಅಂತ ವಿಚಾರಣೆಯಲ್ಲಿ ಹೇಳುತ್ತಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ವಿಧಾನ ಪರಿಷತ್ ಚುನಾವಣೆ – ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ಟಿಕೆಟ್‌

  • ಪ್ರಜ್ವಲ್‌ ಪ್ರಕರಣ ಹೇಸಿಗೆ ಹುಟ್ಟಿಸಿದೆ, ಕ್ಷಮೆಗೆ ಅರ್ಹರಲ್ಲ – ಪ್ರಜ್ವಲ್‌ಗೆ ಶಿಕ್ಷೆ ಆಗಲೇಬೇಕು ಎಂದ ಜೋಶಿ

    ಪ್ರಜ್ವಲ್‌ ಪ್ರಕರಣ ಹೇಸಿಗೆ ಹುಟ್ಟಿಸಿದೆ, ಕ್ಷಮೆಗೆ ಅರ್ಹರಲ್ಲ – ಪ್ರಜ್ವಲ್‌ಗೆ ಶಿಕ್ಷೆ ಆಗಲೇಬೇಕು ಎಂದ ಜೋಶಿ

    ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ (Prajwal Revanna) ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ. ಅವರ ಪ್ರಕರಣ ಹೇಸಿಗೆ ಹುಟ್ಟಿಸಿದೆ. ಅವರು ಕ್ಷಮೆಗೆ ಅರ್ಹರಲ್ಲ, ಕ್ಷಮಿಸುವ ಪ್ರಶ್ನೆಯೇ ಇಲ್ಲ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ, ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಇದನ್ನು ಅತ್ಯಂತ ಕಟ್ಟುನಿಟ್ಟಾದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಕೇಸ್‌ – ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

    ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಖುದ್ದು ವಿಚಾರಣೆಗೆ ಹಾಜರಾಗಿ – ರಾಹುಲ್‌ ಗಾಂಧಿಗೆ ಬೆಂಗಳೂರು ಕೋರ್ಟ್‌ ಸಮನ್ಸ್‌

    ಪ್ರಜ್ವಲ್ ರೇವಣ್ಣ ರಾಜ್ಯದ ಕ್ಷಮೆ ಕೇಳಿದ ವಿಚಾರ ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟುಬಿಡೋಕೆ ಆಗುತ್ತದೆಯೇ? ಯಾಕೆ ಕ್ಷಮೆ ಕೇಳಿದರು ಅಂತ ಪ್ರಜ್ವಲ್ ಉತ್ತರ ಕೊಡಲಿ, ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ಥರ ಕ್ಷಮೆ ಕೇಳಲಿ ಪ್ರಜ್ವಲ್‌ಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್‌ಡ್ರೈವ್‌ ಹಂಚಿಕೆ ಇತ್ಯಾದಿಗಳನ್ನ ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಇಂದಿನಿಂದ ಜೂ.6 ವರೆಗೆ ಮೂರು ದಿನ ಮದ್ಯ ಮಾರಾಟಕ್ಕೆ ನಿಷೇಧ

  • ‘ವಿಕೃತ ಕಾಮಿ, ಕೊನೆಯ ಉಸಿರಿರೋವರೆಗೂ ಶಿಕ್ಷೆ ನೀಡೋ ಕೇಸ್’- ಕೋರ್ಟ್‍ನಲ್ಲಿ ವಾದ, ಪ್ರತಿವಾದ ಹೇಗಿತ್ತು?

    ‘ವಿಕೃತ ಕಾಮಿ, ಕೊನೆಯ ಉಸಿರಿರೋವರೆಗೂ ಶಿಕ್ಷೆ ನೀಡೋ ಕೇಸ್’- ಕೋರ್ಟ್‍ನಲ್ಲಿ ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 6 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿದೆ.

    ವಿಚಾರಣೆ ವೇಳೆ ಎಸ್‍ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ 6 ದಿನ ಎಸ್‍ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು. ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಪೆನ್ ಡ್ರೈವ್‌ ಪ್ರಕರಣ ಹೊರಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರು ತಲೆಮರೆಸಿಕೊಂಡು ಬರೋಬ್ಬರಿ 34 ದಿನಗಳ ಬಳಿಕ ಗುರುವಾರ ಬೆಂಗಳೂರಿಗೆ ಆಗಮಿಸಿದ್ದರು. ಜರ್ಮನಿಯ (Germany) ಮ್ಯೂನಿಕ್‍ನಿಂದ ಲುಫ್ತಾನ್ಸಾ ಏರ್ ಲೈನ್ಸ್ ಮೂಲಕ ಶುಕ್ರವಾರ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದರು. ಬಳಿಕ ಎಸ್‍ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ದರು. ಇಂದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನಂತರ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

    ಎಸ್‍ಐಟಿ ಪರ ವಕೀಲರ ವಾದವೇನು?:
    ಈ ಪ್ರಕರಣ ಸಾಕಷ್ಟು ಗಂಭೀರವಾಗಿದೆ. ಕೊನೆಯ ಉಸಿರಿರೋವರೆಗೂ ಶಿಕ್ಷೆ ಕೊಡಬೇಕಾದ ಪ್ರಕರಣ ಇದಾಗಿದ್ದು, ಪ್ರಜ್ವಲ್ ವಿಕೃತ ಕಾಮಿ ಎಂದರೂ ತಪ್ಪಾಗಲ್ಲ. ಮಹಿಳೆಯರ ಮುಖ ಕಾಣುವಂತೆ ವಿಡಿಯೋ ಮಾಡಿದ್ದಾನೆ. ಇಂತಹ ವ್ಯಕ್ತಿಗೆ ಯಾವ ಮುಲಾಜು ತೋರಿಸಬಾರದು. ಸಾಮಾನ್ಯ ಆರೋಪಿಗಳ ರೀತಿ ನಡೆಸಿಕೊಳ್ಳಬೇಕು. ವಿಸ್ತೃತ ವಿಚಾರಣೆಗಾಗಿ ಈತನನ್ನು 15 ದಿನ ಕಸ್ಟಡಿಗೆ ಕೊಡಿ. ಮೊಬೈಲ್ ಸೇರಿ ಕೆಲ ವಸ್ತುಗಳನ್ನು ವಶಕ್ಕೆ ಪಡೆಯಬೇಕು. ಪ್ರಜ್ವಲ್ ಮತ್ತು ಗೆಳೆಯ ಮಧುಗೆ ಮಾತ್ರ ಮೊಬೈಲ್ ನೋಡಲು ಅವಕಾಶವಿತ್ತು. ಇಬ್ಬರಲ್ಲಿ ಯಾರು ವೀಡಿಯೋ ವೈರಲ್ ಮಾಡಿದ್ದಾರೆ ಗೊತ್ತಾಗಬೇಕು. ಇಷ್ಟು ದಿನ ಯಾವ ದೇಶದಲ್ಲಿದ್ದ.. ಏನ್ ಮಾಡ್ತಿದ್ದ ಅನ್ನೋದು ಗೊತ್ತಾಗಬೇಕು ಎಂದು ಎಸ್‍ಐಟಿ ಪರ ವಕೀಲರು ವಾದಿಸಿದರು.

    ಪ್ರಜ್ವಲ್ ಪರ ವಕೀಲರ ವಾದ ಏನು?: 
    ನನ್ನ ಕಕ್ಷಿದಾರನಿಗೆ ಅವಮಾನ ಮಾಡಬಾರದು. ಇದೇ ಕೇಸ್‍ನಲ್ಲಿ ಎ1 ಆರೋಪಿಗೆ ಜಾಮೀನು ಸಿಕ್ಕಿದೆ. ಎಸ್‍ಐಟಿ ಮುಂದೆ ಪ್ರಜ್ವಲ್ ಬಂದು ಶರಣಾಗಿದ್ದಾರೆ. ಪ್ರಜ್ವಲ್ ಓಡಿ ಹೋಗಲ್ಲ. ಜವಾಬ್ದಾರಿ ಇರೋ ವ್ಯಕ್ತಿ. ಪೊಲೀಸರ ತನಿಖೆಗೆ ಪ್ರಜ್ವಲ್ ಸಹಕಾರ ಕೊಡುತ್ತಾರೆ. ಕೇವಲ ಒಂದು ದಿನ ಪೊಲೀಸ್ ಕಸ್ಟಡಿಗೆ ಕೊಡಿ. ಒಂದು ದಿನದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಬಹುದು ಎಂದು ಪ್ರಜ್ವಲ್ ಪರ ವಕೀಲರ ಕೋರ್ಟ್‍ಗೆ ಮನವಿ ಮಾಡಿದರು.

  • ವಿಶ್ರಾಂತಿಗೆ ತೆರಳಿದ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬ

    ವಿಶ್ರಾಂತಿಗೆ ತೆರಳಿದ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬ

    ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ವಿಶ್ರಾಂತಿಗೆ ತೆರಳಿದೆ.

    ಹೌದು, ಆರೆಂಜ್‌ ಕೌಂಟಿ ರೆಸಾರ್ಟ್‌ ಕಬಿನಿ ಹಿನ್ನೀರಿನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ವಿಶ್ರಾಂತಿಗೆ ತೆರಳಿದ್ದಾರೆ. 2 ದಿನಗಳ ಕಾಲ ವಿಶ್ರಾಂತಿಗೆ ಹೋಗಿದ್ದಾರೆ ಎನ್ನಲಾಗಿದೆ.

    ಪತ್ನಿ, ಪುತ್ರ, ಸೊಸೆ, ಮೊಮ್ಮಗನ ಜೊತೆ ರೆಸ್ಟ್‌ಗೆ ಹೋಗಿದ್ದು, ನಾಳೆ ಅಥವಾ ನಾಡಿದ್ದು ವಾಪಸ್ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

    ಒಂದು ಕಡೆ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದರೆ, ಮತ್ತೊಂದು ಕಡೆ ಬಸವನಗುಡಿ ಹೆಚ್‌.ಡಿ.ರೇವಣ್ಣ ನಿವಾಸ ಖಾಲಿ ಖಾಲಿಯಾಗಿದೆ. ಮಾಜಿ ಸಚಿವರ ನಿವಾಸದಲ್ಲಿ ಸದ್ಯ ಯಾರೂ ಇಲ್ಲ. ಇಂದು ಪುತ್ರ ಮತ್ತು ಪತ್ನಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತೋ ಎನ್ನುವ ಚಿಂತೆಯಲ್ಲಿ ರೇವಣ್ಣ ಇದ್ದಾರೆ ಎನ್ನಲಾಗಿದೆ. ಬಸವನಗುಡಿ ನಿವಾಸದಲ್ಲಿ ರೇವಣ್ಣ ಸದ್ಯಕ್ಕೆ ಇಲ್ಲ. ಎಲ್ಲಾ ಬೆಳವಣಿಗೆಗಳನ್ನು ಅಜ್ಞಾತ ಸ್ಥಳದಲ್ಲೇ ಗಮನಿಸುತ್ತಿದ್ದಾರೆ.

    ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ ಭೀತಿಯಲ್ಲಿದ್ದ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಭಾರತಕ್ಕೆ ವಾಪಸ್‌ ಆದ ಅವರನ್ನು ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    ಪ್ರಜ್ವಲ್‌ ತಡರಾತ್ರಿ ವಾಪಸ್‌ ಆಗಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳು ಏಪೋರ್ಟ್‌ನಲ್ಲೇ ಮೊಕ್ಕಂ ಹೂಡಿದ್ದರು. ಆರೋಪಿ ಬಂದ ತಕ್ಷಣ ಬಂಧನಕ್ಕೊಳಪಡಿಸಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

  • ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ – ರೇವಣ್ಣ ಕುಟುಂಬಕ್ಕಿಂದು ಬಿಗ್‌ ಡೇ; ಏಕೆ ಗೊತ್ತೇ?

    ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ – ರೇವಣ್ಣ ಕುಟುಂಬಕ್ಕಿಂದು ಬಿಗ್‌ ಡೇ; ಏಕೆ ಗೊತ್ತೇ?

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ.

    ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ವಕೀಲರಾದ ಅರುಣ್ ಮೂಲಕ ಮೇ 29ರಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

    ಭವಾನಿ ರೇವಣ್ಣ ಬೇಲ್‌ ಭವಿಷ್ಯವೂ ಇಂದೇ:
    ಅಲ್ಲದೇ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್‌ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?

    ಮೆಡಿಕಲ್‌ ಟೆಸ್ಟ್‌ ಬಳಿಕ ಕೋರ್ಟ್‌ ಮುಂದೆ ಹಾಜರ್‌:
    ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಿರುವ ಪ್ರಜ್ವಲ್‌ ರೇವಣ್ಣ ಅವರ ವಿಚಾರಣೆಯನ್ನು ಬೆಳಗ್ಗೆ 8 ಗಂಟೆಯಿಂದ ಎಸ್‌ಐಟಿ ಅಧಿಕಾರಿಗಳು ಆರಂಭಿಸಲಿದ್ದಾರೆ. ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ಗೆ ಒಳಪಡಿಸಲಿದ್ದಾರೆ. ಈಗಾಗಲೇ ಬೌರಿಂಗ್‌ ಆಸ್ಪತ್ರೆ ಬಳಿಯೂ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದು, ಬಿಗಿ ಪೊಲೀಸ್‌ ಬಂದೋ ಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಮೆಡಿಕಲ್‌ ಟೆಸ್ಟ್‌ ಮುಗಿದ ಬಳಿಕ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣರನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸುತ್ತಲೇ ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದರನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ. ಬಳಿಕ ಎಸ್‌ಐಟಿ ಕಚೇರಿಗೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ರಾತ್ರಿ ತಂದೆ ಹೆಚ್.ಡಿ ರೇವಣ್ಣ ಅವರಿಗೆ ನೀಡಿದ್ದ ಕೊಠಡಿಯಲ್ಲೇ ಪ್ರಜ್ವಲ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರಿಗೆ ನೀಡಿದ್ದ ಹಾಸಿಗೆಯನ್ನೇ ವಿತರಣೆ ಮಾಡಿದ್ದರು. ಕಚೇರಿ ಸುತ್ತಲೂ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

  • ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಇದುವರೆಗೆ ಏನಾಯ್ತು? – ಇಲ್ಲಿದೆ ಪಿನ್‌ ಟು ಪಿನ್‌ ಡಿಟೇಲ್ಸ್….

    ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಇದುವರೆಗೆ ಏನಾಯ್ತು? – ಇಲ್ಲಿದೆ ಪಿನ್‌ ಟು ಪಿನ್‌ ಡಿಟೇಲ್ಸ್….

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಕೊನೆಗೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಪ್ರಜ್ವಲ್‌ ಅವರನ್ನ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದ್ದು, ಇಂದು (ಶುಕ್ರವಾರ) ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

    ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಮೇ 31ರ ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

    ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣ (Prajwal Pendrive Case) ಹುಟ್ಟಿಕೊಂಡದ್ದು ಹೇಗೆ? ಕಳೆದ ಏಪ್ರಿಲ್ 23 ರಿಂದ ಮೇ 31ರ ವರೆಗೆ ಏನೇನಾಯ್ತು? ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ… ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    • ಏ.23: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಆರೋಪ ಪ್ರಕರಣ ಬೆಳಕಿಗೆ ಬಂದಿತು.
    • ಏ.27: ದೇಶದ 2ನೇ ಹಂತ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಲೋಕಚಣಾ ಚುನಾವಣೆ (Lok Sabha Elections) ಮುಗಿಯುತ್ತಿದ್ದಂತೆ ಪ್ರಜ್ಬಲ್ ವಿದೇಶಕ್ಕೆ ಎಸ್ಕೇಪ್ ಆಗಿದ್ದರು.
    • ಏ.28: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣವನ್ನು ತನಿಖೆ ನಡೆಸಲು ರಾಜ್ಯ ಸರ್ಕಾರ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತನಿಖಾ ತಂಡವನ್ನು ರಚನೆ ಮಾಡಿತು.
    • ಏ.29: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ಮೊದಲ ನೋಟಿಸ್ ಜಾರಿಗೊಳಿಸಿತು.
    • ಮೇ 1: ಜರ್ಮನಿಗೆ ತೆರಳಿದ್ದ ಪೊಲೀಸ್ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ತಮ್ಮ ವಕೀಲರ ಮೂಲಕ 7 ದಿನಗಳ ಕಾಲವಕಾಶ ಕೋರಿದ್ದರು.
    • ಮೇ 2: ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲು ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿತು.
    • ಮೇ 5: ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರಿಂದ ಎಸ್‌ಐಟಿ ಇಂಟರ್‌ಪೋಲ್ ಮೂಲಕ ಬ್ಲೂಕಾರ್ನರ್‌ ನೋಟಿಸ್ ಜಾರಿಗೊಳಿಸಿತು.
    • ಮೇ 6: ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು.
    • ಮೇ 18: ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ವಾರಂಟ್ ಜಾರಿಗೊಳಿಸಲಾಯಿತು.
    • ಮೇ 20: ಪ್ರಜ್ವಲ್ ಎಲ್ಲಿದ್ದರೂ ಬಂದು ಧೈರ್ಯವಾಗಿ ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಮನವಿ. ಹಾಗೂ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಎಸ್‌ಐಟಿ ಪತ್ರ.
    • ಮೇ 23: ಪ್ರಜ್ವಲ್ ಎಲ್ಲಿದ್ದರೂ ಬಂದು ಶರಣಾಗುವಂತೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಾರ್ನಿಂಗ್.
    • ಮೇ 24: ಪ್ರಜ್ವಲ್ ರೇವಣ್ಣಗೆ ಕೇಂದ್ರದಿಂದ ಶೋಕಾಸ್ ನೋಟಿಸ್.
    • ಮೇ 27: ವಿದೇಶದಲ್ಲಿದ್ದುಕೊಂಡೇ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ, ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿಕೆ.
    • ಮೇ 28: ಮ್ಯೂನಿಕ್‌ನಿಂದ ಬೆಂಗಳೂರಿಗೆ ಬರೋದಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ.
    • ಮೇ 29: ಹಾಸನ ನಗರದ ಆರ್.ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತ್ತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು.
    • ಮೇ 30: ಮ್ಯೂನಿಕ್‌ನಿಂದ ಹೊರಟ ಲುಫ್ತಾನ್ಸಾ ಏರ್‌ಲೈನ್ಸ್ನ ಡಿಎಲ್‌ಎಚ್ 764 ಎ-359 ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.
    • ಮೇ 31: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ. ಇಮಿಗ್ರೇಷನ್‌ ಬಳಿಕ ಎಸ್‌ಐಟಿ ಅರೆಸ್ಟ್‌, ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ.

  • 35 ದಿನಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್!

    35 ದಿನಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್!

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರು 35 ದಿನಗಳ ಬಳಿಕ ಕೊನೆಗೂ ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ.

    ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines)  DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

    ಗುರುವಾರ (ಮೇ 30) ಭಾರತೀಯ ಕಾಲಮಾನ ಸಂಜೆ 4:09ಕ್ಕೆ ಟೇಕಾಪ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನವು 8 ಗಂಟೆ ಪ್ರಯಾಣದ ಬಳಿಕ ಮಧ್ಯರಾತ್ರಿ 12:35ರ ವೇಳೆಗೆ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯಿತು. ವಿಮಾನ ಲ್ಯಾಂಡಿಂಗ್‌ ಆಗುತ್ತಿದ್ದಂತೆ ಸಿಐಎಸ್‌ಎಫ್‌ ಸಿಬ್ಬಂದಿ ವಿಮಾನವನ್ನು ಸುತ್ತುವರಿದಿದ್ದರು. ಬಳಿಕ ಪ್ರಜ್ವಲ್‌ ಇಳಿಯುತ್ತಿದ್ದಂತೆ ವಿಮಾನ ದ್ವಾರದಲ್ಲೇ ಅವರನ್ನು ವಶಕ್ಕೆ ಪಡೆಯಲು ಮುಂದಾದರು. ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೊಟೀಸ್ ಹಾಗೂ ಬ್ಲೂ ಕಾರ್ನರ್ ನೊಟೀಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಮಿಗ್ರೇಷನ್‌ನಲ್ಲೇ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಬಳಿಕ ಎಸ್‌ಐಟಿ ತಂಡಕ್ಕೆ ಹಸ್ತಾಂತರಿಸಲಿದ್ದಾರೆ.

    ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಮೊದಲೇ ಪ್ರಯಾಣಿಕರ ಪಟ್ಟಿ ಕಳುಹಿಸಿತ್ತು. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರೋದನ್ನ ಎಸ್‌ಐಟಿ ಸಹ ಖಚಿತಪಡಿಸಿತ್ತು. ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ ಟಿಕೆಟ್ ಖರೀದಿಸಿ ಪ್ರಜ್ವಲ್ ಮ್ಯೂನಿಕ್‌ನಿಂದ ಹೊರಟಿದ್ದರು. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಪ್ರಜ್ವಲ್ ಅವರಿದ್ದ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದರು.

    ಏರ್ಪೋರ್ಟ್ ರಸ್ತೆಯಲ್ಲಿ ಹೈ ಅಲರ್ಟ್:
    ಪ್ರಜ್ವಲ್ ಆಗಮನದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದ ಕಾರಣ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಭಾರೀ ಭದ್ರತೆ ನಿಯೋಜಿಸಲಾಗಿದೆ. ಟರ್ಮಿನಲ್ 1 ಹಾಗೂ ಅಲ್ಫಾ ಗೇಟ್ ಬಳಿ ವಾಹನ ಸಂಚಾರಗಳ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸದಂತೆ ಹಾಗೂ ಹೆಚ್ಚು ಜನ ಸೇರದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅನುಮತಿ ಪಡೆದ, ಪ್ರಯಾಣಿಕರನ್ನು ಕರೆತರುವ, ಕರೆದೊಯ್ಯುವ ವಾಹನಗಳಿಗೆ ಮಾತ್ರ ಪ್ರವೇಶ ಅವಕಾಶ ಮಾಡಿಕೊಡಲಾಗಿದೆ. ಟರ್ಮಿನಲ್ -2 ಮುಖ್ಯದ್ವಾರದ ಬಳಿಯೂ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದೆ. ಸಿಐಎಸ್‌ಎಫ್ ಅಧಿಕಾರಿಗಳ ತಂಡದಿಂದಲೂ ಭದ್ರತೆ ನಿಯೋಜಿಸಲಾಗಿದೆ. ವಿಐಪಿ ಲೇನ್‌ ಅನ್ನು ಸಹ ಬಂದ್‌ ಮಾಡಲಾಗಿದೆ. ಅಲ್ಲದೇ ಪ್ರಜ್ವಲ್‌ ಅವರ ಫೋಟೋ, ವೀಡಿಯೋಗಳನ್ನು ಮಾಡದಂತೆ ಸೂಚನೆ ನೀಡಲಾಗಿದೆ.

    ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್‌ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.