Tag: ಪೇಜಾವರ ಶ್ರೀಗಳು

  • ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

    ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

    ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಇವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ.

    ಪ್ರೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು ಕೃಷ್ಣಮಠಕ್ಕೆ ಶಿಫ್ಟ್ ಮಾಡಲಾಗುತ್ತದೆ. ಸುಮಾರು 20 ನಿಮಿಷ ಕಾಲ ಮಠದಲ್ಲೇ ಇರಲಿದ್ದು, ಅಲ್ಲಿ ಅಷ್ಟಮಠಾಧೀಶರು ಮಧ್ವ ಸರೋವರದಲ್ಲಿ ಸ್ನಾನ, ಅಭಿಷೇಕ ಮಾಡಿಸಲಿದ್ದಾರೆ. ನಂತರ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

    ಅಲ್ಲಿ ಮಧ್ಯಾಹ್ನ 12 ಗಂಟೆಯವರೆಗೂ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಸರ್ಕಾರದ ಸಕಲ ಗೌರವದೊಂದಿಗೆ ಪೇಜಾವರ ಶ್ರೀಗಳ ಬೃಂದಾವನ ಮಾಡಲಾಗುತ್ತದೆ.

    ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಗುರುವಾರದಿಂದ ಹೆಚ್ಚೇನೂ ಸುಧಾರಣೆಯಾಗಿರಲಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದರು.

    ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.

  • ಪೇಜಾವರ ಶ್ರೀಗಳು ಡಿ.23ರ ನಂತ್ರ ವಿದೇಶಕ್ಕೆ ಹೋಗ್ಬೇಡಿ ಅಂದಿದ್ರು: ಪುತ್ತಿಗೆ ಶ್ರೀಗಳು

    ಪೇಜಾವರ ಶ್ರೀಗಳು ಡಿ.23ರ ನಂತ್ರ ವಿದೇಶಕ್ಕೆ ಹೋಗ್ಬೇಡಿ ಅಂದಿದ್ರು: ಪುತ್ತಿಗೆ ಶ್ರೀಗಳು

    ಉಡುಪಿ: ಪೇಜಾವರ ಶ್ರೀ ಮಂತ್ರಾಲಯದಲ್ಲಿ ನನಗೆ ಸಿಕ್ಕಿದ್ದರು. ಆಗ ಸದ್ಯಕ್ಕೆ 23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದಿದ್ದರು. ಯಾಕೆ ಎಂದು ಕೇಳಿದ್ದಕ್ಕೆ, ನಸು ನಕ್ಕಿದ್ದರು ಎಂದು ಪುತ್ತಿಗೆ ಮಠದ ಸುಗಣೇಂದ್ರ ತೀರ್ಥ ಸ್ವಾಮೀಜಿ ಶ್ರೀಗಳ ಕುರಿತು ಹೇಳಿದ್ದಾರೆ.

    ಉಡುಪಿ ಅಷ್ಟಮಠಗಳಲ್ಲಿ ಪುತ್ತಿಗೆ ಮಠ ಕೂಡ ಒಂದು. ಪುತ್ತಿಗೆ ಮಠದ ಸುಗಣೇಂದ್ರ ತೀರ್ಥ ಸ್ವಾಮೀಜಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಪೇಜಾವರ ಶ್ರೀಗಳ ಬಗ್ಗೆ ಹೇಳಿದರು. ಪೇಜಾವರ ಶ್ರೀ ಮಂತ್ರಾಲಯದಲ್ಲಿ ನನಗೆ ಸಿಕ್ಕಿದ್ದರು. ಆಗ ಸದ್ಯಕ್ಕೆ 23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದಿದ್ದರು. ಯಾಕೆ ಎಂದು ಕೇಳಿದಕ್ಕೆ, ನಸು ನಕ್ಕಿದ್ದರು. ಹೀಗೆ ಆಗುತ್ತದೆ ಎಂದು ಶ್ರೀಗಳಿಗೆ ಮೊದಲೇ ಮುನ್ಸೂಚನೆ ಇತ್ತಾ ಎಂದು ತಿಳಿದಿಲ್ಲ. ಶ್ರೀಗಳು ಹೇಳಿದ್ದಕ್ಕೆ ನಾನು ವಿದೇಶಕ್ಕೆ ಹೋಗಿಲ್ಲ ಎಂದರು. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

    ಮಂತ್ರಾಲಯದಲ್ಲಿ ಸಿಕ್ಕಾಗ ಶ್ರೀಗಳು 23ರ ನಂತರ ಎಲ್ಲಿಗೂ ಹೋಗೋದಿಲ್ಲ ಅಲ್ವಾ? ಸದ್ಯ ಎಲ್ಲೂ ವಿದೇಶಕ್ಕೆ ಹೋಗಲ್ಲ ಅಲ್ವಾ ಎಂದು ಎರಡೆರಡು ಬಾರಿ ಕೇಳಿದ್ದರು. ಅವರು ಎಂದಿಗೂ ಈ ರೀತಿ ನನ್ನ ಬಳಿ ಹೇಳಿರಲಿಲ್ಲ. ಆಗ ನನಗೆ ಅಚ್ಚರಿಯಾಗಿತ್ತು. ಆದರೆ ಈಗ ಹೀಗೆ ಆಗುತ್ತೆ ಎಂದು ಅವರಿಗೆ ಮೊದಲೇ ಸೂಚನೆ ಇತ್ತು ಎಂದು ನನಗೆ ಅನಿಸುತ್ತಿದೆ. ಬಹುಶಃ ಅವರ ಕೊನೆ ಕ್ಷಣಗಳಲ್ಲಿ ಅಷ್ಟಮಠದ ಸ್ವಾಮೀಜಿಗಳು ಇಲ್ಲಿಯೇ ಇರಬೇಕು ಎಂದು ಅವರ ಆಸೆ ಆಗಿತ್ತು ಅನಿಸುತ್ತೆ ಎಂದು ಬೆಳಗ್ಗೆ ಪೇಜಾವರ ಶ್ರೀಗಳನ್ನು ನೋಡಲು ಬಂದಾಗ ಅವರ ಮಾತನ್ನು ಪುತ್ತಿಗೆ ಶ್ರೀಗಳು ಹಂಚಿಕೊಂಡಿದ್ದರು.

    ಆದರೆ ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ವಿಧಿವಶರಾಗಿದ್ದಾರೆ. ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.

    ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಬೆಳಗ್ಗಿನ ಜಾವ 5 ಗಂಟೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತಿತ್ತು. ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಗುರುವಾರದಿಂದಂದ ಹೆಚ್ಚೇನೂ ಸುಧಾರಣೆಯಾಗಿರಲಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದರು.

  • ಪೇಜಾವರ ಶ್ರೀಗಳು ಗುಣಮುಖರಾಗಲಿ ಎಂದು ಹಾರೈಸಿದ ಮೋಟಗಿ ಮಠದ ಶ್ರೀಗಳು

    ಪೇಜಾವರ ಶ್ರೀಗಳು ಗುಣಮುಖರಾಗಲಿ ಎಂದು ಹಾರೈಸಿದ ಮೋಟಗಿ ಮಠದ ಶ್ರೀಗಳು

    ಬೆಳಗಾವಿ(ಚಿಕ್ಕೋಡಿ): ಪೇಜಾವರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಅವರು ಬೇಗನೆ ಗುಣಮುಖವಾಗಲಿ ಎಂದು ಅಥಣಿ ಮೋಟಗಿ ಮಠ ಪ್ರಭು ಚನ್ನಬಸವ ಸ್ವಾಮೀಜಿ ಹಾರೈಸಿದ್ದಾರೆ.

    ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಪೇಜಾವರ ಶ್ರೀಗಳ ಅನಾರೋಗ್ಯದ ಬಗ್ಗೆ ತಿಳಿದು ನೋವಾಗಿದೆ. ಪೂಜ್ಯ ಮಹಾಸ್ವಾಮಿಗಳ ಸಮಾಜ ಸೇವೆ ದೊಡ್ಡದು. ಅವರು ಕನ್ನಡ ನಾಡಿನ ಸಂತ ದೇಶದ ತುಂಬೆಲ್ಲಾ ಪ್ರತಿನಿಧಿಸುವ ಸ್ವಾಮೀಜಿ. ಬೇಗ ಗುಣಮುಖವಾಗುವಾಗಲಿ ಎಂದು ದೇವರಲ್ಲಿ ಭಕ್ತರು ಪ್ರಾರ್ಥಿಸುತ್ತಿದ್ದಾರೆ. ಶ್ರೀಗಳ ಕೊಡುಗೆ ಅಪಾರ, ಅವರು ಶೀಘ್ರ ಗುಣಮುಖರಾಗಿ ಸಮಾಜಕ್ಕೆ ಸೇವೆ ಸಲ್ಲಿಸುವಂತಾಗಲಿ ಎಂದು ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ನ್ಯುಮೋನಿಯಾಕ್ಕೆ ಹಲವು ದಿನದ ಚಿಕಿತ್ಸೆ ಅವಶ್ಯಕ: ನೀರಾ ರಾಡಿಯಾ

    ಇತ್ತ ಶ್ರೀ ಪೇಜಾವರ ತೀರ್ಥರ ಆರೋಗ್ಯ ಪರಿಸ್ಥಿತಿಯಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚುತ್ತಲೇ ಇದೆ. ಸ್ವಾಮೀಜಿಯ ಚೇತರಿಕೆ ಕೋರಿ ರಾಜ್ಯದ ಹಲವೆಡೆ ಪೂಜೆ, ಪುನಸ್ಕಾರ, ಹೋಮ-ಹವನಗಳು ನಡೆಯುತ್ತಿವೆ.

    ಉಸಿರಾಟದ ತೊಂದರೆಯಿಂದ ಶುಕ್ರವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಕೊಂಚಮಟ್ಟಿಗೆ ಸುಧಾರಿಸಿದೆ. ತಜ್ಞ ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೆಂಟಿಲೇಟರ್ ನಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಶ್ರೀಗಳ ಆರೋಗ್ಯ ಸ್ಥಿತಿ ಸ್ವಲ್ಪ ಗಂಭಿರವಾಗಿಯೇ ಇದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿದ್ದು, ಯಾವುದೇ ಆತಂಕ ಬೇಡ. ದೂರದಿಂದಲೇ ಪ್ರಾರ್ಥನೆ ಮಾಡಿ ಎಂದು ಪೇಜಾವರ ಮಠದ ಕಿರಿಯ ಶ್ರೀಗಳು ಭಕ್ತರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ಶ್ರೀಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಗಣ್ಯರ ದಂಡೇ ಹರಿದುಬರುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ಕರೆ ಮಾಡಿದ್ದರು. ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಿಳಿಸುವಂತೆ ಸೂಚನೆ ನೀಡಿದ್ದರು. ಸಿಎಂ ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ ಈಶ್ವರಪ್ಪ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಉತ್ತರಾಧಿ ಮಠದ ಸತ್ಯಾರ್ಥ ಸ್ವಾಮೀಜೀ, ಉದ್ಯಮಿ ನೀರಾ ರಾಡಿಯಾ ಸೇರಿ ಹಲವರು ಭೇಟಿ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಯಡಿಯೂರಪ್ಪ, ಪೇಜಾವರ ಶ್ರೀಗಳು ಕಣ್ಣು ಬಿಡುತ್ತಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಸೋಂಕು ತಗುಲದಂತೆ ವೈದ್ಯರು ಕಟ್ಟೆಚ್ಚರ ವಹಿಸಿದ್ದಾರೆ ಎಂದರು. ವೀರೇಂದ್ರ ಹೆಗ್ಗಡೆ ಮಾತನಾಡಿ, ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಅಂತ ಹೇಳಿದ್ದಾರೆ.

  • ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ಎದೆಯಲ್ಲಿದ್ದ ಕಫ ನೀರಾಗುತ್ತಿದೆ- ಚಿಕಿತ್ಸೆಗೆ ಪೇಜಾವರ ಶ್ರೀಗಳು ಸ್ಪಂದನೆ

    ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ. ಕಳೆದ 48 ಗಂಟೆಯಲ್ಲಿ ಹೆಚ್ಚು ಚೇತರಿಸಿಕೊಂಡಿದ್ದು, ಮಣಿಪಾಲ ಕೆಎಂಸಿ ಬಾಳಿಗಾ ಬ್ಲಾಕ್ ಐಸಿಯುನಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶ್ರೀಗಳ ಎದೆಯಲ್ಲಿ ಕಟ್ಟಿದ ಕಫ ನಿಧಾನವಾಗಿ ಕರಗುತ್ತಿದೆ. ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಭಕ್ತರು ಯಾವುದೇ ಆತಂಕ ಪಡಬೇಕಿಲ್ಲ. ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬೇಡಿ, ಎರಡು ದಿನದಿಂದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದು ಸ್ವಾಮೀಜಿ ಆಪ್ತ ಸಹಾಯಕ ವಿಷ್ಣುಮೂರ್ತಿ ಆಚಾರ್ಯ ಹೇಳಿದ್ದಾರೆ.

    ವಿಶ್ವಪ್ರಸನ್ನ ತೀರ್ಥರಿಂದ ವಿಶೇಷ ಪೂಜೆ:
    ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಪೇಜಾವರ ಮಠದಲ್ಲಿ ಪೂಜೆ, ಪುನಸ್ಕಾರ ಮುಂದುವರಿದಿದೆ. ಪೇಜಾವರ ಕಿರಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೇವರಿಗೆ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿ, ಹಿರಿಯ ಶ್ರೀಗಳು ಆರೋಗ್ಯವಂತರಾಗಿ ಮಠಕ್ಕೆ ವಾಪಸ್ ಆಗಬೇಕು ಎಂದು ದೇವರಲ್ಲಿ ಕೇಳಿಕೊಂಡಿದ್ದಾರೆ. ಪೂಜೆಯಲ್ಲಿ ಮಠದ ಶಿಷ್ಯರು, ಸಿಬ್ಬಂದಿ ಭಾಗಿಯಾಗಿದ್ದಾರೆ.

    ಹೆಲ್ತ್ ಬುಲೆಟಿನ್ ರಿಲೀಸ್:
    ಕೆಎಂಸಿ ಆಸ್ಪತ್ರೆ ಐದನೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ. ವೈದ್ಯರು 48 ಗಂಟೆಗಳ ಅವಲೋಕನಾ ಅವಧಿ ಮುಗಿಸಿದ್ದು, ಈ ಹೆಲ್ತ್ ಬುಲೆಟಿನ್ ಬಹಳ ಮಹತ್ವ ಪಡೆದಿದೆ.

  • ಕೈಗಾ ಯೋಜನೆ ವಿಸ್ತರಣೆಗೆ ಪೇಜಾವರ ಶ್ರೀಗಳ ವಿರೋಧ

    ಕೈಗಾ ಯೋಜನೆ ವಿಸ್ತರಣೆಗೆ ಪೇಜಾವರ ಶ್ರೀಗಳ ವಿರೋಧ

    ಕಾರವಾರ: ಕೈಗಾ ಅಣುವಿದ್ಯುತ್ ಸ್ಥಾವರ ಯೋಜನೆ ವಿಸ್ತರಣೆಯನ್ನು ಪೇಜಾವರ ಶ್ರೀಗಳು ವಿರೋಧಿಸಿದ್ದು, ಯೋಜನೆ ವಿಸ್ತರಣೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆಕೊಟ್ಟಿದ್ದಾರೆ.

    ಉತ್ತರಕನ್ನಡ ಜಿಲ್ಲೆಯ ಕಾರವಾರದ ಮಲ್ಲಾಪುರದಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಶ್ರೀಗಳು ಈ ಹೇಳಿಕೆ ಕೊಟ್ಟಿದ್ದಾರೆ. ದೇಶದ ನೆಲ, ಜಲ, ವಾಯು, ಆಕಾಶ ಪ್ರಕೃತಿ ಸಂಪತ್ತನ್ನ ನಾವು ಉಳಿಸಬೇಕು. ಪ್ರಕೃತಿ ಸಂಪತ್ತು ವ್ಯಯವಾಗಬಾರದು, ನಷ್ಟವಾಗಬಾರದು. ಕೃಷ್ಣ ಎಲ್ಲವನ್ನ ರಕ್ಷಣೆ ಮಾಡಲಿಕ್ಕೆ ಹಿಂದೆ ಮಾರ್ಗದರ್ಶನ ನೀಡಿದ್ದನು. ಆದರೆ ಕೈಗಾ ಅಣುವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಹೀಗಾಗಿ ಈ ಯೋಜನೆಯ ವಿಸ್ತರಣೆ ಆಗಬಾರದು ಎಂದು ಹೇಳಿದರು. ಇದನ್ನೂ ಓದಿ:ವಿರೋಧ ನಡುವೆಯೇ ಹೊಸ ಕೈಗಾ ಅಣುಸ್ಥಾವರ ನಿರ್ಮಾಣಕ್ಕೆ ಚಾಲನೆ!

    ಕೈಗಾ ಅಣುವಿದ್ಯುತ್ ಸ್ಥಾವರದ ಆರಂಭದಲ್ಲಿಯೇ ನಾವು ವಿರೋಧ ಮಾಡಿದ್ದೇವು. ಕೈಗಾದ ಪರಿಣಾಮಗಳನ್ನು ನಾವು ನೋಡುತ್ತಿದ್ದೇವೆ. ಅದರ ಸುತ್ತಮುತ್ತಲ ಜನರ ಮೇಲೆ ಕೈಗಾದ ರೆಡಿಯೇಷನ್‍ಗಳು ಎಷ್ಟರ ಮಟ್ಟಿಗೆ ದುಷ್ಪರಿಣಾಮಗಳನ್ನು ಬೀರಿದೆ ಎನ್ನುವುದನ್ನು ನಾವು ನೋಡಿದ್ದೇವೆ. ಹೀಗಾಗಿ ಕೈಗಾ ಯೋಜನೆ ವಿಸ್ತರಣೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕು. ಎಲ್ಲಾ ಸಂಘ ಸಂಸ್ಥೆ ಜೊತೆ ಸೇರಿ ಈ ಸಂಬಂಧ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ, ಮಾತನಾಡುವ ಬಗ್ಗೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

  • ರಾಮಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ರಾಷ್ಟ್ರ ಮಂದಿರಗಳು: ಪೇಜಾವರ ಶ್ರೀಗಳು

    ರಾಮಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ರಾಷ್ಟ್ರ ಮಂದಿರಗಳು: ಪೇಜಾವರ ಶ್ರೀಗಳು

    ರಾಯಚೂರು: ಮಂದಿರಗಳು ಒಂದೇ ಧರ್ಮ ಹಾಗೂ ಸಮಾಜಕ್ಕೆ ಸೀಮಿತವಾಗಿರುವುದಿಲ್ಲ. ಹೀಗಾಗಿ ರಾಮ ಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳು ಕೂಡ ರಾಷ್ಟ್ರ ಮಂದಿರಗಳು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಮಂದಿರಗಳಿಗೆ ಎಲ್ಲಾ ಧರ್ಮಿಯರು ಪ್ರವೇಶಿಸಬೇಕು. ಮಂದಿರಗಳು ಒಂದೇ ಧರ್ಮ ಹಾಗೂ ಸಮಾಜಕ್ಕೆ ಸೀಮಿತವಾಗಿರುವುದಿಲ್ಲ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಷ್ಟ್ರದಲ್ಲಿ ಸಾಮರಸ್ಯಕ್ಕೆ ನಾಂದಿಯಾಗಿದೆ. ಮಸೀದಿ ಕಟ್ಟಲು ನೀಡಿರುವ ಜಾಗದ ಬಗ್ಗೆ ಒಂದಿಬ್ಬರು ವಿರೋಧಿಸಿರಬಹುದು. ಆದರೆ ಬಹುತೇಕ ಮಂದಿ ಅಯೋಧ್ಯೆ ತೀರ್ಪನ್ನು ಒಪ್ಪಿದ್ದಾರೆ. ಹೀಗಾಗಿ ಕೇವಲ ರಾಮ ಮಂದಿರವಷ್ಟೇ ಅಲ್ಲ ಎಲ್ಲಾ ಮಂದಿರಗಳೂ ರಾಷ್ಟ್ರ ಮಂದಿರಗಳೆಂದು ಹೇಳಿದರು.

    ಕೇಂದ್ರ ಸರ್ಕಾರ ಮೂರು ತಿಂಗಳಳೊಗಾಗಿ ಟ್ರಸ್ಟ್ ಸ್ಥಾಪಿಸಲು ಸೂಚಿಸಿದೆ. ರಾಮಮಂದಿರ ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕು. ಸುಪ್ರೀಂ ಕೋರ್ಟ್ ತೀರ್ಪು ಹಿಂದೂ ಮುಸ್ಲಿಂ ಸಾಮರಸ್ಯಕ್ಕೆ ನಾಂದಿ ಎಂದು ಹೇಳಿದರು.

    ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ವಿಚಾರವಾಗಿ ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಮೇಲ್ಮನವಿ ಅರ್ಜಿ ವರ್ಗಾವಣೆ ಬಗ್ಗೆ ಶ್ರೀಗಳು ಪ್ರತಿಕ್ರಿಯಿಸಿ, ಇದು ಬಹಳ ಸೂಕ್ಷ್ಮವಾದ ವಿಚಾರ, ಒಂದು ಕಡೆ ಸಂಪ್ರದಾಯ ಹಾಗೂ ಮಹಿಳೆಯರ ಹಕ್ಕಿನ ವಿಚಾರ ಇದಾಗಿದೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ, ಏನೇ ಹೇಳಿದರೂ ಅಸಮಾಧಾನಕ್ಕೆ ಕಾರಣವಾಗುತ್ತದೆ. ತೀರ್ಪಿನ ಬಗ್ಗೆ ಕಾದು ನೋಡೋಣ ಎಂದರು.

  • ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲ್ಲ: ಸೂಲಿಬೆಲೆ ಪರ ನಿಂತ ಪೇಜಾವರ ಶ್ರೀಗಳು

    ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲ್ಲ: ಸೂಲಿಬೆಲೆ ಪರ ನಿಂತ ಪೇಜಾವರ ಶ್ರೀಗಳು

    ಬಾಗಲಕೋಟೆ: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಗೆ ದೇಶದ್ರೋಹಿ ಎಂಬ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಸೂಲಿಬೆಲೆ ಪರವಾಗಿ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೂಲಿಬೆಲೆ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಯುವಕರನ್ನು ಸೇರಿಸಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಸದಾನಂದಗೌಡರು ಕೂಡ ಕೇಂದ್ರ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಸೂಲಿಬೆಲೆಯವರ ಪರ ನಿಂತರು. ಇದನ್ನೂ ಓದಿ:ಟ್ವಿಟ್ಟರ್‌ನಲ್ಲಿ ಸೂಲಿಬೆಲೆಗೆ ಬ್ಲಾಕ್ ಭಾಗ್ಯ ಕಲ್ಪಿಸಿದ ಸದಾನಂದಗೌಡ

    ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಇನ್ನೂ ಪರಿಹಾರದ ಹಣ ಬಾರದಿರುವುದಕ್ಕೆ ಶ್ರೀಗಳು ಆತಂಕ ವ್ಯಕ್ತಪಡಿಸಿದ್ದು, ದೇಶದಲ್ಲಿನ ಆರ್ಥಿಕ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಗ್ಗೆ ಪತ್ರ ಬರೆಯುವುದಾಗಿ ಶ್ರೀಗಳು ಹೇಳಿದ್ದಾರೆ. ಹಣ ಬಿಡುಗಡೆ ಆಗದಿರುವುದು ನಮಗೂ ಕೂಡ ಆತಂಕವಾಗಿದೆ. ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ತಿಳಿದಿಲ್ಲ. ಕರ್ನಾಟಕದಲ್ಲಿ ಮಾತ್ರ ಅಲ್ಲ ಮಹಾರಾಷ್ಟ್ರ, ಗುಜರಾತ್, ಬಿಹಾರ ರಾಜ್ಯಗಳಿಗೂ ಪರಿಹಾರ ಕೊಟ್ಟಿಲ್ಲ. ಬಿಹಾರದಲ್ಲಿ ಕೇವಲ ವೀಕ್ಷಣೆ ಮಾಡಿದ್ದಾರೆ. ಎಲ್ಲಿಯೂ ಹಣ ಬಿಡುಗಡೆಯ ಘೋಷಣೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಸೂಲಿಬೆಲೆ ದೇಶದ್ರೋಹಿನಾ? – ಡಿವಿಎಸ್ ಪರೋಕ್ಷ ಕಿಡಿ

    ದೇಶದಲ್ಲಿ ಆರ್ಥಿಕ ಕೊರತೆ ಇರಬಹುದು ಆದ್ದರಿಂದ ಬಿಡುಗಡೆ ಮಾಡಿಲ್ಲ ಎಂದನಿಸುತ್ತೆ. ಪ್ರಧಾನಿ ಮೋದಿಯವರಿಗೆ ನಾನು ಒಂದು ಪತ್ರ ಸಿದ್ಧ ಮಾಡಿ ಬರೆದಿದ್ದೇನೆ. ಜನತೆ ನಿಮ್ಮ ಸಹಾಯವನ್ನು ನಿರೀಕ್ಷಿಸುತ್ತಿದ್ದಾರೆ, ದೇಶದ ಬಗ್ಗೆ ಉತ್ತಮ ಕಾರ್ಯ ಮಾಡುತ್ತಿದ್ದೀರಿ, ಒಳ್ಳೆಯ ಆಡಳಿತ ನಡೆಸುತ್ತಿದ್ದೀರಿ, ಹಾಗೆಯೇ ಪರಿಹಾರ ಕೂಡ ನೀಡಬೇಕೆಂದು ಪತ್ರ ಬರೆಯಲಿದ್ದೇನೆ ಎಂದರು. ಇದನ್ನೂ ಓದಿ:ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ

    ಹಾಗೆಯೇ ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮುಂದೆ ನೆರೆ ಪರಿಹಾರದ ಕುರಿತು ಮಾತನಾಡದೇ ಇರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸಂಸದರು ಬಹಿರಂಗವಾಗಿ ಕೇಳಿಲ್ಲ ಆದರೆ ಅವರು ಪ್ರಧಾನಿ ಬಳಿ ಈ ಬಗ್ಗೆ ಪ್ರಸ್ತಾಪಿಸಿರಬಹುದು. ಅದು ಮಾಧ್ಯಮದಲ್ಲಿ ಪ್ರಸಾರವಾಗಿಲ್ಲವಷ್ಟೆ. ಕೇಳದೇ ಇರೋದಕ್ಕೆ ಸಾಧ್ಯವಿಲ್ಲ. ಕೇಳಳಿಲ್ಲ ಎಂದು ಸಂಸದರ ಮೇಲೆ ಆರೋಪ ಮಾಡಲ್ಲ. ದೇಶದಲ್ಲಿ ಅರ್ಥಿಕ ಸಂಕಷ್ಟ ಇದೆ, ಅದಕ್ಕೆ ಪರಿಹಾರ ಕೊಟ್ಟಿಲ್ಲ ಅನಿಸುತ್ತಿದೆ. ಆದರೆ ಯಾಕೆ ಕೊಟ್ಟಿಲ್ಲ ಅನ್ನೋವುದರ ಬಗ್ಗೆ ಸ್ಪಷ್ಟವಾಗಿ ಗೊತ್ತಿಲ್ಲ. ನಾನು ಬರೆದ ಪತ್ರದಲ್ಲಿ ನನ್ನ ಭಾವನೆಯನ್ನು ತಿಳಿಸಿದ್ದೇನೆ. ಆದಷ್ಟು ಬೇಗ ರಾಜ್ಯಕ್ಕೆ ಮೋದಿ ಅವರು ಪರಿಹಾರ ನೀಡುತ್ತಾರೆಂಬ ಭರವಸೆ ಇದೆ ಎಂದು ಶ್ರೀಗಳು ವಿಶ್ವಾಸ ವ್ಯಕ್ತಪಡಿಸಿದರು.

  • ಜಾತಿ ಆಧಾರದ ಮೇಲೆ ಸಚಿವ ಸ್ಥಾನ ಕೇಳುವುದು ತಪ್ಪು- ಪೇಜಾವರ ಶ್ರೀ

    ಜಾತಿ ಆಧಾರದ ಮೇಲೆ ಸಚಿವ ಸ್ಥಾನ ಕೇಳುವುದು ತಪ್ಪು- ಪೇಜಾವರ ಶ್ರೀ

    ಮೈಸೂರು: ಜಾತಿ ಆಧಾರದ ಮೇಲೆ ಸಚಿವ ಸ್ಥಾನ ಕೇಳುವುದು ತಪ್ಪು. ಇದರ ಬಗ್ಗೆ ನಾನು ಸರ್ಕಾರಕ್ಕೆ ಯಾವುದೇ ಒತ್ತಡ ಹೇರುವುದಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

    ಇಂದು ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ಸಂಘ ಪೇಜಾವರ ಶ್ರೀಗಳಲ್ಲಿ ರಾಮದಾಸ್ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಿದ್ದು, ಸಂಘದ ಮನವಿಯನ್ನು ಪೇಜಾವರ ಶ್ರೀಗಳು ತಿರಸ್ಕರಿಸಿದ್ದಾರೆ. ಜಾತಿ ಆಧಾರದ ಮೇಲೆ ಸಚಿವ ಸ್ಥಾನ ಕೇಳುವುದು ತಪ್ಪು. ಇದರ ಬಗ್ಗೆ ನಾನು ಸರ್ಕಾರಕ್ಕೆ ಯಾವುದೇ ಒತ್ತಡ ಹೇರುವುದಿಲ್ಲ. ನಾನು ಮಠಾಧೀಶ, ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಎಂದು ತಿಳಿಸಿದ್ದಾರೆ.

    ಅನರ್ಹ ಶಾಸಕರನ್ನು ಸಹ ಸರ್ಕಾರ ತೃಪ್ತಿಪಡಿಸಬೇಕಿದೆ. ಮೈಸೂರು ಭಾಗದಲ್ಲಿ ವಿಶ್ವನಾಥ್‍ಗೆ ಸ್ಥಾನ ಕಲ್ಪಿಸುವ ಸಲುವಾಗಿ ರಾಮದಾಸ್‍ಗೆ ಸ್ಥಾನ ಕೊಟ್ಟಿಲ್ಲ. ಅನರ್ಹ ಶಾಸಕರನ್ನು ತೃಪ್ತಿ ಪಡಿಸುವ ಜವಾಬ್ದಾರಿ ಸಿಎಂ ಮೇಲಿದೆ. ಅನರ್ಹ ಶಾಸಕರ ವಿಚಾರ ಸುಪ್ರೀಂ ಕೋರ್ಟಿನಲ್ಲಿದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಸರ್ಕಾರ ಸೂಕ್ತ ತೀರ್ಮಾನ ಮಾಡುತ್ತದೆ. ರಾಮದಾಸ್ ದಸರಾದಲ್ಲಿ ಪಾಲ್ಗೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಶ್ರೀಗಳು ಹೇಳಿದರು.

    ಶಾಸಕ ಎಸ್.ಎ.ರಾಮದಾಸ್ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬ್ರಾಹ್ಮಣ ಸಂಘದಿಂದ ರಾಮದಾಸ್ ಪರ ಬ್ಯಾಟಿಂಗ್ ಮಾಡಿದ್ದು, ಎಸ್.ಎ.ರಾಮದಾಸ್‍ಗೆ ಸಚಿವ ಸ್ಥಾನ ನೀಡುವಂತೆ ಪೇಜಾವರ ಶ್ರೀಗಳ ಮೂಲಕ ಒತ್ತಡ ಹೇರಲು ಪ್ರಯತ್ನಿಸಲಾಗಿತ್ತು. ಮೈಸೂರು ನಗರ ಹಾಗೂ ಗ್ರಾಮಾಂತರ ಬ್ರಾಹ್ಮಣ ಸಂಘದಿಂದ ಪೇಜಾವರ ಶ್ರೀಗಳಿಗೆ ಮನವಿ ಸಲ್ಲಿಸಲಾಗಿತ್ತು.

    ಶಾಸಕ ರಾಮದಾಸ್‍ಗೆ ಸಚಿವ ಸ್ಥಾನ ನೀಡಬೇಕು. ಅಲ್ಲದೆ, ಡಿಸಿಎಂ ಹುದ್ದೆಯನ್ನು ಬ್ರಾಹ್ಮಣ ಸಮುದಾಯಕ್ಕೆ ಮೀಸಲಿಡಬೇಕು. ಈ ಎರಡು ವಿಚಾರವನ್ನು ಸರ್ಕಾರದ ಮೆಲ್ಮಟ್ಟದಲ್ಲಿ ಒತ್ತಡ ಹೇರುವಂತೆ ಮನವಿ ಪತ್ರ ಸಲ್ಲಿಸಲಾಗಿತ್ತು. ಶ್ರೀಗಳ ಮೂಲಕ ಸರ್ಕಾರಕ್ಕೆ ಒತ್ತಡ ಹೇರಲು ಬ್ರಾಹ್ಮಣ ಸಮುದಾಯದ ಮುಖಂಡರು ಮುಂದಾಗಿದ್ದರು. ಆದರೆ, ಶ್ರೀಗಳು ಇದೆಲ್ಲವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದು, ಸರ್ಕಾರ ಈಗಲೇ ಒತ್ತಡದಲ್ಲಿದೆ. ಇಂತಹ ಸಮಯದಲ್ಲಿ ಈ ರೀತಿ ಒತ್ತಡ ಹೇರುವುದು ಸರಿಯಲ್ಲ. ನಾನು ಮಠಾಧೀಶ ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ನವವೃಂದಾವನಕ್ಕೆ ಪೇಜಾವರ ಶ್ರೀ ಭೇಟಿ- ಪುನರ್ ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ

    ನವವೃಂದಾವನಕ್ಕೆ ಪೇಜಾವರ ಶ್ರೀ ಭೇಟಿ- ಪುನರ್ ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ

    ಕೊಪ್ಪಳ: ಆನೆಗೊಂದಿಯಲ್ಲಿ ವ್ಯಾಸರಾಯರ ವೃಂದಾವನ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ನವವೃಂದಾವನಕ್ಕೆ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಭೇಟಿ ನೀಡಿ, ವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಿದ್ದಾರೆ.

    ನವವೃಂದಾವನ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಗುರುವಾರ ರಾಯರು ಹಾಗೂ ಸೋಸಲೆ ವ್ಯಾಸರಾಯ ಮಠದ ಶ್ರೀಗಳು ಭೇಟಿ ನೀಡಿದ್ದರು. ಇಂದು ನವವೃಂದಾವನಕ್ಕೆ ಪೇಜಾವರ ಶ್ರೀಗಳು ಭೇಟಿ ನೀಡಿದ್ದಾರೆ. ಈ ವೇಳೆ ನವವೃಂದಾವನ ಧ್ವಂಸದ ಬಗ್ಗೆ ಬೇಸರ ವ್ಯಕ್ತಪಡಿಸಿ, ನವವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಭಕ್ತರೊಂದಿಗೆ ಶ್ರೀಗಳು ಚರ್ಚೆ ನಡೆಸಿದ್ದಾರೆ.

    ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದರು. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ನವಬೃಂದಾವನದಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ. ನವಬೃಂದಾವನ ಮಾಲೀಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿರಲಿಲ್ಲ.

  • ಸಿಎಂ ಆದವರಿಗೆ ಸಿಟ್ಟು, ಕೋಪ ಇರಬಾರದು – ಮಮತಾ ವಿರುದ್ಧ ಪೇಜಾವರ ಶ್ರೀ ಅಸಮಾಧಾನ

    ಸಿಎಂ ಆದವರಿಗೆ ಸಿಟ್ಟು, ಕೋಪ ಇರಬಾರದು – ಮಮತಾ ವಿರುದ್ಧ ಪೇಜಾವರ ಶ್ರೀ ಅಸಮಾಧಾನ

    ಬಳ್ಳಾರಿ: ಮಮತಾ ಬ್ಯಾನರ್ಜಿಯ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿತ್ತು. ಆದರೆ ಅವರ ವರ್ತನೆಯಿಂದ ಈಗ ನನಗೆ ತುಂಬ ಅಸಮಾಧಾನವಾಗಿದೆ ಎಂದು ಉಡುಪಿಯ ಪೇಜಾವರ ಶ್ರೀಗಳು ತಿಳಿಸಿದ್ದಾರೆ.

    ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಡುಪಿಯ ಪೇಜಾವರ ಶ್ರೀಗಳು, ಮಮತಾ ಬ್ಯಾನರ್ಜಿಯ ಬಗ್ಗೆ ನನಗೆ ತುಂಬ ಅಸಮಾಧಾನವಿದೆ. ಮುಖ್ಯಮಂತ್ರಿಯಾಗಿ ಅವರಿಗೆ ಇಷ್ಟೊಂದು ಕೋಪ, ಸಿಟ್ಟು ಇರಬಾರದು. ಸಿಎಂ ಆದವರು ಇಷ್ಟೊಂದು ಬಿರುಸಿನಿಂದ ಮಾತನಾಡಬಾರದು. ತಾಳ್ಮೆ ಇದ್ದರೆ ಒಳ್ಳೆಯದು. ಅವರ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿತ್ತು. ಆದರೆ ಈಗ ಅವರ ವರ್ತನೆಯಿಂದ ಬೇಸರವಾಗಿದೆ ಎಂದು ಹೇಳಿದ್ದಾರೆ.

    ರಾಜಕೀಯಕ್ಕಾಗಿ ನುಸುಳುಕೋರರಿಗೆ ಅವಕಾಶ ನೀಡುತ್ತಿದ್ದಾರೆ. ಶ್ರೀರಾಮ ಹೆಸರನ್ನು ವಿವಾದ ಮಾಡುತ್ತಿದ್ದಾರೆ. ಬಾಂಗ್ಲಾದೇಶದಿಂದ ಬಂದವರಿಗೆ ವಿಚಾರಣೆ ಮಾಡದೆ ನಾಗರೀಕ ಹಕ್ಕು ಕೊಡುತ್ತಿದ್ದಾರೆ. ಅದರ ಪರಿಣಾಮ ದೇಶದ ಮೇಲೆ ಆಗುತ್ತದೆ. ಅವರ ನಿಲುವು ರಾಷ್ಟ್ರ ವಿರೋಧಿತನ ತೋರಿಸುತ್ತಿದೆ. ಸಿಎಂ ಆದವರು ಇಷ್ಟೊಂದು ಬಿರುಸಿನಿಂದ ಮಾತನಾಡಬಾರದು ಎಂದು ಮಮತಾ ಬ್ಯಾನರ್ಜಿ ಅವರ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

    ಬಿಜೆಪಿಯ ಎರಡನೇ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಖಚಿತವಾಗಿದೆ. ರಾಜ್ಯಸಭೆಯಲ್ಲಿ ಬಹುಮತ ಕೊರತೆ ಇದೆ. ಮುಂದಿನ ವರ್ಷ ರಾಜ್ಯಸಭೆಯಲ್ಲಿಯೂ ಬಹುಮತ ಬರಲಿದೆ. ಎಲ್ಲ ಸಂತರೂ ಸೇರಿ ಬಹುತವಿದೆ ಎಂದು ಒತ್ತಡ ಹಾಕುತ್ತೇವೆ. ನನಗೆ ಸುಪ್ರೀಂ ಕೋರ್ಟ್ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

    ರಾಜ್ಯ ಸರ್ಕಾರ ಗೊಂದಲದಲ್ಲಿದೆ. ಎರಡೂ ಪಕ್ಷಗಳು ಸೇರಿ ಸರ್ಕಾರ ನಡೆಸಲು ತೊಂದರೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಬಿಜೆಪಿಯನ್ನೂ ಹೊರಗಿಡಬೇಡಿ. ಸಂವಿಧಾನದ ಪ್ರಕಾರ ಅದು ಕೂಡ ಜಾತ್ಯಾತೀತ ಪಕ್ಷವಾಗಿದ್ದು, ಬಿಜೆಪಿಯೂ ಕೂಡ ಸಂವಿಧಾನವನ್ನು ಒಪ್ಪಿಕೊಂಡಿದೆ. ಹೀಗಾಗಿ ಬಿಜೆಪಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ವರ್ವ ಪಕ್ಷ ಸರ್ಕಾರ ಮಾಡಿದರೆ ಈ ಭಯವೇ ಇರುವುದಿಲ್ಲ ಎಂದರು.