Tag: ಪೇದೆ

  • ಅಮಾನತ್ತಾಗಿದ್ದ ಪೇದೆಗೆ ಮುಖ್ಯಮಂತ್ರಿ ಪದಕ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಅಮಾನತ್ತಾಗಿದ್ದ ಪೇದೆಗೆ ಮುಖ್ಯಮಂತ್ರಿ ಪದಕ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಬೆಂಗಳೂರು: ಅಮಾನತ್ತಾಗಿದ್ದ ಪೊಲೀಸ್ ಪೇದೆ (Police Constable) ಹೆಸರು ಸಿಎಂ ಪದಕ ಪಟ್ಟಿಯಲ್ಲಿಯಲ್ಲಿ ಪ್ರಕಟವಾಗಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (By Vijayendra) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ (Mysuru) ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ. ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತನಾಗಿದ್ದು, ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಿಗೊಳಗಾಗಿದ್ದುದ್ದೇ ಈತನ ಅರ್ಹತೆಯಾಗಿರುವಂತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: Tungabhadra Dam | ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ : ಜಮೀರ್‌ ಘೋಷಣೆ

    ಪೋಸ್ಟ್‌ನಲ್ಲಿ ಏನಿದೆ?
    ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ “ಮುಖ್ಯಮಂತ್ರಿಗಳ ಪದಕ” ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ.

    ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತನಾಗಿದ್ದು, ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಿಗೊಳಗಾಗಿದ್ದುದ್ದೇ ಈತನ ಅರ್ಹತೆಯಾಗಿರುವಂತಿದೆ.

    ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೀಡಾಗಿರುವುದಕ್ಕೆ ನಿದರ್ಶನವಾಗಿದೆ.

    ಪೊಲೀಸ್ ಇಲಾಖೆಯು ಶಿಸ್ತು ಹಾಗೂ ಪಾರದರ್ಶಕತೆಯ ವ್ಯಾಪ್ತಿಯ ಪರಿಧಿಯ ಸಮತೋಲನವನ್ನು ಕಾಯ್ದುಕೊಳ್ಳದೇ ಇರುವುದನ್ನು ಬಿಜೆಪಿ ಎಚ್ಚರಿಸುತ್ತಲೇ ಇತ್ತು. ಅದು ನಿಜ ಎನ್ನುವುದನ್ನು ದುಷ್ಕೃತ್ಯಗಳ ಆರೋಪದ ಮೇಲೆ ಅಮಾನತಿಗೊಳಗಾಗಿದ್ದ ಪೊಲೀಸ್ ಪೇದೆ ಸಲೀಂ ಪಾಷಾ ಗೆ ಪದಕ ಪ್ರಕಟವಾಗಿರುವುದು ಸಾಕ್ಷೀಕರಿಸಿದೆ.

    ಮುಖ್ಯಮಂತ್ರಿಗಳ ಪದಕ ಲಭಿಸಲು ಪೊಲೀಸ್ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷತೆ ಹಾಗೂ ತ್ಯಾಗ ಮನೋಭಾವ ಪ್ರದರ್ಶಿಸುವ ಸಮರ್ಥರನ್ನು ಆಯ್ಕೆ ಮಾಡುವ ಮಾನದಂಡವನ್ನು ಹೊಂದಿರುತ್ತದೆ. ಆದರೆ ಇದೀಗ ಪೊಲೀಸ್ ಇಲಾಖೆಯಲ್ಲಿ ವಿದ್ರೋಹ ಎಸಗುವವರಿಗೂ ಮುಖ್ಯಮಂತ್ರಿಗಳ ಪದಕ ಪಡೆಯಲು ಅರ್ಹತೆಯಾಗಿ ಪರಿಗಣಿಸಿರುವುದು ಕರ್ನಾಟಕ ಎತ್ತ ಸಾಗುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಪೊಲೀಸ್ ಇಲಾಖೆಯನ್ನು ದೇವರೇ ಕಾಪಾಡಬೇಕಿದೆ.

  • ಲವ್ ಫೈಲ್ಯೂರ್‌ನಿಂದ ಆತ್ಮಹತ್ಯೆಗೆ ಶರಣಾದ್ರಾ ಪೊಲೀಸ್ ಪೇದೆ?

    ಲವ್ ಫೈಲ್ಯೂರ್‌ನಿಂದ ಆತ್ಮಹತ್ಯೆಗೆ ಶರಣಾದ್ರಾ ಪೊಲೀಸ್ ಪೇದೆ?

    ಬೀದರ್: ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಟೂರಿಸ್ಟ್ ಲಾಡ್ಜ್ ನಲ್ಲಿ ನಡೆದಿದೆ.

    ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ.

    2021 ರಲ್ಲಿ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದ ನಾಯ್ಕ್, ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರ ಠಾಣೆಯಲ್ಲಿ ಹಲವು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ವಿಜಯನಗರ ಜಿಲ್ಲೆಯ ಪೊಲೀಸ್ ಪೇದೆಯಾಗಿರುವ ನಾಯ್ಕ್ ಸದ್ಯ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್

    ವಿಷಯ ತಿಳಿದು ಪೋಷಕರು ಬೀದರ್‌ಗೆ ಪೋಷಕರು ಬಂದಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು ಬಿಡುಗಡೆ ಮಾಡಲು 50 ಸಾವಿರ ರೂ.ಗೆ ಒತ್ತಾಯಿಸಿದ್ದ ಪೇದೆ ಅಮಾನತು

    ಕಾರು ಬಿಡುಗಡೆ ಮಾಡಲು 50 ಸಾವಿರ ರೂ.ಗೆ ಒತ್ತಾಯಿಸಿದ್ದ ಪೇದೆ ಅಮಾನತು

    ತುಮಕೂರು: (Tumakuru) ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಕಾರು ಬಿಡುಗಡೆ ಮಾಡಲು 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಪೇದೆಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

    ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಪಡಿಸಿಕೊಂಡಿದ್ದ ಕಾರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಕಾರು ಬಿಡಲು ಹಣ ಕೇಳಿದ ವಿಭಾಗದ ಪೇದೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್ ಶಹಪುರ್ ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ. ಕುಣಿಗಲ್ ಠಾಣೆಯ ಅಪರಾಧ ವಿಭಾಗದ ನವೀನ್ ಅಮಾನತುಗೊಂಡ ಪೇದೆ. ಇದನ್ನೂ ಓದಿ: ಎಸ್ಸಿ, ಎಸ್ಟಿ ಮೀಸಲಾತಿ ಕಾಂಗ್ರೆಸ್‌ ಪಕ್ಷದ ಕೂಸು – ಡಿಕೆಶಿ

    POLICE JEEP

    ಏನಿದು ಪ್ರಕರಣ: ವಕೀಲರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ, ನಗದು ಸೇರಿದಂತೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ ತೃತೀಯ ಲಿಂಗಿಗಳು ಸೇರಿದಂತೆ ಐವರನ್ನು ಕುಣಿಗಲ್ ಪೊಲೀಸರು ಬಂಧಿಸಿ ಅವರಿಂದ ಕಾರು ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದರು. ಕಾರಿನ ಮಾಲೀಕರು ವಕೀಲರ ಮೂಲಕ ಕಾರು ಬಿಡುಗಡೆಗೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದರು.

    ಈ ನಿಟ್ಟಿನಲ್ಲಿ ನ್ಯಾಯಾಲಯವು ಕಾರು ಬಿಡುಗಡೆಗೆ ಆದೇಶ ನೀಡಿತ್ತು. ಆದರೆ ಕಾರು ಬಿಡುಗಡೆಗೆ ಪೇದೆ ನವೀನ್ 50 ಸಾವಿರ ರೂ. ಕೊಡುವಂತೆ ಕಾರು ಮಾಲೀಕರಿಗೆ ಒತ್ತಾಯಿಸಿದ್ದರು. ಈ ಸಂಬಂಧ ಕಾರು ಮಾಲೀಕರು ವಕೀಲರ ಮೂಲಕ ನ್ಯಾಯಾಧೀಶರ ಗಮನಕ್ಕೆ ತಂದಿದ್ದರು. ಈ ದಿಸೆಯಲ್ಲಿ ನ್ಯಾಯಾಧೀಶರು ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಿದ ಹಿನ್ನೆಲೆಯಲ್ಲಿ ನವೀನ್ ಅವರನ್ನು ಸೇವೆಯಿಂದ ಜಿಲ್ಲಾ ಎಸ್ಪಿ ಅಮಾನತು ಪಡಿಸಿದ್ದಾರೆ. ಇದನ್ನೂ ಓದಿ: ದೊಣ್ಣೆಯಿಂದ ಹೊಡೆದು ಆಟೋ ಚಾಲಕನ ಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಹೊಸ ಮನೆ ಕಟ್ಟಿದ್ದ ಅವಿವಾಹಿತ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

    ಹೊಸ ಮನೆ ಕಟ್ಟಿದ್ದ ಅವಿವಾಹಿತ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

    – ರೈಲಿಗೆ ತಲೆಕೊಟ್ಟು ಸೂಸೈಡ್

    ತುಮಕೂರು: ಪೊಲೀಸ್ ಪೇದೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

    ಕುಣಿಗಲ್ ಠಾಣೆಯ ಯಲ್ಲಾಲಿಂಗ ಮೇಟಿ (29) ಆತ್ಮಹತ್ಯೆ ಮಾಡಿಕೊಂಡ ಪೇದೆ. ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಶನಿವಾರ ಘಟನೆ ನಡೆದಿದೆ. ಮೃತ ಪೇದೆ ಮೂಲತಃ ವಿಜಯಪುರ ಜಿಲ್ಲೆಯವರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೃತ ಪೇದೆ ಯಲ್ಲಾಲಿಂಗ ಮೇಟಿ ವಿಜಯಪುರದಲ್ಲಿ ಹೊಸದಾಗಿ ಮನೆಕಟ್ಟಿದ್ದರು ಎನ್ನಲಾಗಿದೆ. ಅವಿವಾಹಿತನನಾಗಿದ್ದ ಯಲ್ಲಾಲಿಂಗ ಸದಾ ಒತ್ತಡದಲ್ಲಿ ಇರುತ್ತಿದ್ದರು ಎನ್ನಲಾಗಿದೆ. ಕೌಟುಂಬಿಕ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

  • 7 ತಿಂಗ್ಳ ಹಿಂದೆ ಮದ್ವೆಯಾಗಿದ್ದ ಯುವತಿ ಸಾವು – ಪೊಲೀಸ್ ಮಗ ಅರೆಸ್ಟ್

    7 ತಿಂಗ್ಳ ಹಿಂದೆ ಮದ್ವೆಯಾಗಿದ್ದ ಯುವತಿ ಸಾವು – ಪೊಲೀಸ್ ಮಗ ಅರೆಸ್ಟ್

    – ಭರವಸೆಯೊಂದಿಗೆ ಗಂಡನ ಮನೆಗೆ ಕಳುಹಿಸಿದ್ದ ಪೋಷಕರು
    – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    ಭುವನೇಶ್ವರ: ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಪೇದೆಯ ಮಗನನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

    ವಂದನಾ ಮೃತ ಮಹಿಳೆ. ಒಡಿಶಾದ ತಮಂಡೋ ಪೊಲೀಸ್ ಠಾಣೆಯ ಪೇದೆಯ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಮಿನಿಕಾಂತ್ ಗೋಚಾಯತ್ ಎಂದು ಗುರುತಿಸಲಾಗಿದೆ. ಮೃತ ವಂದನಾಳ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ವರದಕ್ಷಿಣೆಗಾಗಿ ಜಮಿನಿಕಾಂತ್ ಮತ್ತು ಆತನ ತಂದೆ ಬಿಜಯ್ ಕುಮಾರ್ ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಇದೇ ವರ್ಷ ಫೆಬ್ರವರಿ 16 ರಂದು ಮೃತ ವಂದನಾ ಮತ್ತು ಜಮಿನಿಕಾಂತ್ ಮದುವೆಯಾಗಿತ್ತು. ಆದರೆ ಮದುವೆಯಾದ ದಿನದಿಂದಲೂ ಜಮಿನಿಕಾಂತ್, ಆತನ ತಂದೆ-ತಾಯಿ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದರು ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

    ಸೆಪ್ಟೆಂಬರ್ 19 ಶನಿವಾರ ವಂದನಾ ಪೇದೆಯ ಮನೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ವಂದನಾಳ ಆರೋಗ್ಯ ಸರಿಯಿಲ್ಲ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ಜಮಿನಿಕಾಂತ್ ನಮಗೆ ಫೋನ್ ಮಾಡಿ ಹೇಳಿದ್ದನು. ಆದರೆ ಆಸ್ಪತ್ರೆಗೆ ಹೋದ ನಂತರ ನಮ್ಮ ಮಗಳು ಸಾವನ್ನಪ್ಪಿದ್ದಾಳೆ ಅಂತ ಹೇಳಿರುವುದಾಗಿ ಮೃತಳ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಅಷ್ಟೇ ಅಲ್ಲದೇ, “ನಮ್ಮ ಮಗಳ ಕುತ್ತಿಗೆಯಲ್ಲಿ ಹಗ್ಗದ ಗುರುತು ನೋಡಿದ್ದೇವೆ ಮತ್ತು ಅವಳ ದೇಹವು ನೀಲಿ ಬಣ್ಣಕ್ಕೆ ತಿರುಗಿತ್ತು. ಅವರು ನಮ್ಮ ಮಗಳನ್ನು ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ. ನಂತರ ಅನುಮಾನಬರದಂತೆ ನೇಣು ಬಿಗಿದಿದ್ದಾರೆ. ನಮ್ಮ ಮಗಳು ಈ ಹಿಂದೆಯೂ ಕಿರುಕುಳ ನೀಡುತ್ತಿರುವ ಬಗ್ಗೆ ಹೇಳಿದ್ದಳು. ಆದರೆ ನಾವು ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯೊಂದಿಗೆ ಅವಳನ್ನು ಮತ್ತೆ ಪತಿಯ ಮನೆಗೆ ಕಳುಹಿಸಿದ್ದೆವು. ಆದರೆ ಈ ರೀತಿ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ ಎಂದು ತಾಯಿ ಕಣ್ಣೀರು ಹಾಕಿದ್ದಾರೆ.

    ಸದ್ಯಕ್ಕೆ ಪೋಷಕರು ನೀಡಿದ ದೂರಿನ ಆಧಾರದ ಮೇರೆಗೆ ಈ ಕುರಿತು ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪದ ಮೇರೆಗೆ ಪೊಲೀಸರು ಜಮಿನಿಕಾಂತ್‍ನನ್ನು ಬಂಧಿಸಿದ್ದಾರೆ.

  • ಮಂಡ್ಯ ಜಿಲ್ಲೆಯಲ್ಲಿ ಮತ್ತೋರ್ವ ಪೇದೆಗೆ ಕೊರೊನಾ

    ಮಂಡ್ಯ ಜಿಲ್ಲೆಯಲ್ಲಿ ಮತ್ತೋರ್ವ ಪೇದೆಗೆ ಕೊರೊನಾ

    ಮಂಡ್ಯ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಸದ್ಯ ಜಿಲ್ಲೆಯ ಮತ್ತೋರ್ವ ಪೇದೆ ಕೋವಿಡ್-19 ವೈರಸ್ ತಗುಲಿರುವುದು ದೃಢಪಟ್ಟಿದೆ.

    ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆಯ ಪೇದೆಯೊಬ್ಬರ ಕೋವಿಟ್-19 ಪರೀಕ್ಷೆಯ ರಿಪೋರ್ಟ್ ಪಾಸಿಟಿವ್ ಬಂದಿದೆ. ಪೇದೆ ಕೆಸ್ತೂರು ಠಾಣೆಯಲ್ಲಿ ಮದ್ದೂರು ಕೋರ್ಟಿಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುತ್ತಿದ್ದರು. ಸದ್ಯ ಅವರಿಗೆ ಸೋಂಕು ದೃಢಪಟ್ಟಿರುವುದು ಜಿಲ್ಲೆಯ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

    ಪೇದೆ ಮದ್ದೂರಿನ ಮದ್ದೂರಮ್ಮನ ಬಡಾವಣೆಯಲ್ಲಿ ವಾಸವಾಗಿದ್ದು, ನಿತ್ಯವೂ ಮದ್ದೂರಮ್ಮನ ದೇವಾಲಯಕ್ಕೂ ಭೇಟಿ ನೀಡುತ್ತಿದ್ದರು. ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಪೇದೆ ವಾಸಿಸುತ್ತಿದ್ದ ಮನೆ, ದೇವಾಲಯದ ಬಳಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ್ದಾರೆ. ಇತ್ತ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

    ಜಿಲ್ಲೆಯಲ್ಲಿ ಈವರೆಗೂ ಮೂರು ಮಂದಿ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐದು ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ.

  • ಕಾಫಿನಾಡಿಗೆ ಆತಂಕ ಸೃಷ್ಠಿಸಿದ ಕೈದಿ, ಪೊಲೀಸ್, ಎಂಜಿನಿಯರ್, ತರಕಾರಿ ವ್ಯಾಪಾರಿ

    ಕಾಫಿನಾಡಿಗೆ ಆತಂಕ ಸೃಷ್ಠಿಸಿದ ಕೈದಿ, ಪೊಲೀಸ್, ಎಂಜಿನಿಯರ್, ತರಕಾರಿ ವ್ಯಾಪಾರಿ

    ಚಿಕ್ಕಮಗಳೂರು: ಏಳೆಂಟು ದಿನಗಳ ಹಿಂದೆ ಜೈಲಿನಲ್ಲಿದ್ದ ಕೈದಿಗೂ ಸೋಂಕು ದೃಢವಾಗಿದ್ದರಿಂದ ಜಿಲ್ಲೆಯ ಜನ ಕಂಗಾಲಾಗಿದ್ದರು. ಏಕಂದರೆ ಆರು ತಿಂಗಳಿಂದ ಜೈಲಿನಲ್ಲಿರುವ ಖ್ಯೆದಿಗೆ ಹೇಗೆ ಕೊರೊನಾ ಬಂತು ಎನ್ನುವುದು ಎಲ್ಲರಲ್ಲೂ ಪ್ರಶ್ನೆ ಹುಟ್ಟಿಸಿತ್ತು.

    ಕಳೆದೊಂದು ವಾರದ ಹಿಂದೆ ನಾಲ್ವರು ಪೊಲೀಸರು ತೀವ್ರ ಆತಂಕ ಸೃಷ್ಠಿಸಿದ್ದರು. ಮೂರು ದಿನದ ಹಿಂದೆ ರಸ್ತೆ ಮೇಲೆ ತಳ್ಳುವ ಗಾಡಿಯಲ್ಲಿ ತರಕಾರಿ ಮಾರುವ ವ್ಯಾಪಾರಿ ಕೂಡ ಭಯ ಹುಟ್ಟಿಸಿದ್ದ. ಬುಧವಾರ ಎಂಜಿನಿಯರ್ ಸರದಿ. ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆ ನಿವಾಸಿಯಾದ ಕೊರೊನಾ ಸೋಂಕಿತ ಎಂಜಿನಿಯರ್ ಕೂಡ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ದಾದಿಯರಲ್ಲೂ ಭೀತಿ ಹುಟ್ಟಿಸಿದ್ದಾರೆ.

    ಜಿಲ್ಲೆಯಲ್ಲಿ ಬುಧವಾರ ಒಂದು ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಬೆಂಗಳೂರಿಗೆ ಹೋಗಿ ಬಂದ 28 ವರ್ಷದ ಎಂಜಿನಿಯರ್ ಯುವಕನಲ್ಲಿ ಸೋಂಕು ದೃಢವಾಗಿದ್ದು, ಆತ ಕೂಡ ಚಿಕ್ಕಮಗಳೂರು ನಗರ ನಿವಾಸಿಗಳ ನಿದ್ದೆಗೆಡಿಸಿದ್ದಾನೆ. ಕೊರೊನಾ ಆರಂಭವಾದ ಮೂರು ತಿಂಗಳ ಬಳಿಕ ಚಿಕ್ಕಮಗಳೂರು ನಗರದಲ್ಲಿ ಅಧಿಕೃತ ದಾಖಲಾದ ಮೊದಲ ಪ್ರಕರಣವಿದು. ಇಲ್ಲಿವರೆಗೂ ನಗರದಲ್ಲಿ ಒಂದೇ ಒಂದು ಕೇಸ್ ಇರಲಿಲ್ಲ.

    ಬೆಂಗಳೂರಿಗೆ ಹೋಗಿ ಹಿಂದುರಿಗಿದ ಎಂಜಿನಿಯರ್ ಆರೋಗ್ಯ ಸಮಸ್ಯೆಯಿಂದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೂ ಭೇಟಿ ನೀಡಿದ್ದ. ಬುಧವಾರ ಆತನಿಗೆ ಕೊರೊನಾ ದೃಢವಾದ ಹಿನ್ನೆಲೆ ಸರ್ಕಾರಿ, ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರಿಗೂ ಆತಂಕ ಸೃಷ್ಟಿಯಾಗಿದೆ. ಸೋಂಕಿತನ ಮನೆಯವರು ಸೇರಿದಂತೆ ವೈದ್ಯರು, ದಾದಿಯರು ಎಲ್ಲರಿಗೂ ಕ್ವಾರಂಟೈನ್‍ಗೆ ಸೂಚಿಸಲಾಗಿದೆ.

    ಈ ಮಧ್ಯೆ ಮೂರು ದಿನಗಳ ಹಿಂದೆ ಬಂದ ಪ್ರಕರಣ ಕೂಡ ನಗರಕ್ಕೆ ಕಂಟಕವಾಗಿದೆ. ಹಾಸನ ಮಾರುಕಟ್ಟೆಗೆ ಹೋಗಿ ತರಕಾರಿ ತಂದು ಚಿಕ್ಕಮಗಳೂರು ನಗರದಲ್ಲಿ ಮಾರುತ್ತಿದ್ದ ವ್ಯಕ್ತಿಗೂ ಸೋಂಕು ದೃಢವಾಗಿದ್ದು, ನಗರದ ಹಲವು ಏರಿಯಾಗಳ ಜನ ಕೂಡ ಕಂಗಾಲಾಗಿದ್ದಾರೆ. ಬುಧವಾರದ ಪ್ರಕರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 43ಕ್ಕೆ ಏರಿದೆ. 23 ಜನ ಬಿಡುಗಡೆಯಾಗಿ, 19 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹೆಮ್ಮಾರಿಗೆ 72 ವರ್ಷದ ವೃದ್ಧೆ ಪ್ರಾಣ ತೆತ್ತಿದ್ದಾರೆ.

  • ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆಗೆ ಸಿಎಂ ಬಿಎಸ್‍ವೈ ಸಂತಾಪ

    ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆಗೆ ಸಿಎಂ ಬಿಎಸ್‍ವೈ ಸಂತಾಪ

    – ವಾರಿಯರ್‌ಗಳಿಗೆ ಸಿಎಂ ಧೈರ್ಯ

    ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಮುಖ್ಯಮಂತ್ರಿಯ ಬಿ.ಎಸ್.ಯಡಿಯೂರಪ್ಪ ಅವರು ಪೇದೆ ಸಾವಿಗೆ ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ” ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‍ನಲ್ಲಿ ಸಶಸ್ತ್ರ ಪೇದೆಯಾಗಿದ್ದ ಮಂಜೇಶ್ ಅವರು, ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ” ಎಂದು ಟ್ವೀಟ್ ಮಾಡುವ ಮೂಲಕ ಪೇದೆ ಆತ್ಮಹತ್ಯೆ ಪ್ರಕರಣಕ್ಕೆ ಸಂತಾಪ ಸೂಚಿಸಿದ್ದಾರೆ.

    ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲ ಪರಿಹಾರ ಮತ್ತು ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

    ಪೊಲೀಸ್ ಸಿಬ್ಬಂದಿ ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ವಾರಿಯರ್‌ಗಳಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

    “ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜೊತೆಗಿರುತ್ತದೆ” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ

  • ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ

    ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ

    – ತಂದೆಯ ಕೃತ್ಯಕ್ಕೆ ಅನಾಥವಾದ ಕಂದಮ್ಮ

    ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ.

    ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು 4 ವರ್ಷದ ಮಗಳ ಜೊತೆಗೆ ಪೊಲೀಸ್ ಠಾಣೆ ಆವರಣದ ಸರ್ಕಾರಿ ಕಟ್ಟಡದಲ್ಲಿ ವಾಸಿಸುತ್ತಿದ್ದರು.

    ಮುಖೇಶ್ ಅವರ ಮನೆಯಿಂದ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಂಡಿನ ಶಬ್ದ ಕೇಳಿ ಬಂದಿತ್ತು. ತಕ್ಷಣವೇ ಸ್ಥಳೀಯರು ಹೋಗಿ ನೋಡಿದಾಗ, ಪೇದೆ ಮುಖೇಶ್ ಮೊದಲು ಗುಂಡಿಕ್ಕಿ ಪತ್ನಿಯನ್ನ ಕೊಂದಿದ್ದಾರೆ. ಬಳಿಕ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಜಗಳದಿಂದ ಮುಖೇಶ್ ಈ ಕೃತ್ಯ ಎಸೆಗಿದ್ದಾರೆ ಎನ್ನಲಾಗಿದೆ. ಆದರೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

    ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮುಖೇಶ್ ಹಾಗೂ ಬಬಿತಾ ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ತಂದೆಯ ಕೃತ್ಯದಿಂದಾಗಿ 4 ವರ್ಷದ ಹೆಣ್ಣು ಮಗು ಅನಾಥವಾಗಿದೆ.

  • ಬೆಂಗ್ಳೂರಿನ ಮುಖ್ಯ ಪೇದೆ ಆತ್ಮಹತ್ಯೆ

    ಬೆಂಗ್ಳೂರಿನ ಮುಖ್ಯ ಪೇದೆ ಆತ್ಮಹತ್ಯೆ

    ಬೆಂಗಳೂರು: ಮುಖ್ಯ ಪೇದೆಯೊಬ್ಬರು ರೈಲ್ವೆ ಟ್ರ್ಯಾಕ್ ಬಳಿ ನೇಣಿಗೆ ಶರಣಾದ ಘಟನೆ ಹೆಗ್ಡೆ ನಗರದಲ್ಲಿ ನಡೆದಿದೆ.

    ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ರವೀಂದ್ರ ಆತ್ಮಹತ್ಯೆಗೆ ಶರಣಾದ ಮುಖ್ಯ ಪೇದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರವೀಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ರವೀಂದ್ರ ಅವರು ಇಂದು ಹೆಗ್ಡೆನಗರದ ರೈಲ್ವೆ ಟ್ರ್ಯಾಕ್ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದೇಹವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದರು. ಬಳಿಕ ಮೃತ ದೇಹದ ಗುರುತು ಪತ್ತೆಹಚ್ಚಿದ್ದರು.

    ಈ ಸಂಬಂಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.